Connect with us

ರಾಷ್ಟ್ರೀಯ

ನೋಟಿನಲ್ಲಿ ಲಕ್ಷ್ಮೀ, ಚಿತ್ರ ಮುದ್ರಿಸಿ : ಪ್ರಧಾನಿಗೆ ಅರವಿಂದ ಕೇಜ್ರಿವಾಲ್‌ ಸಲಹೆ – ಬಿಜೆಪಿಯಿಂದ ಟೀಕಾ ಪ್ರಹಾರ | ಅಂಬೇಡ್ಕರ್ ಪೋಟೋ ಯಾಕೇ ಬೇಡ : ಕಾಂಗ್ರೆಸ್

Published

on



Ad Widget

Ad Widget

Ad Widget

Ad Widget

ನವದೆಹಲಿ ಅ 28: ಕರೆನ್ಸಿ ನೋಟುಗಳ (currency Note) ಮೇಲೆ ಲಕ್ಷ್ಮೀ ಮತ್ತು ಗಣೇಶನ (godess Lakshmi and ganesha) ಚಿತ್ರ ಮುದ್ರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ( Aravinda Kejriwal) ನೀಡಿರುವ ಹೇಳಿಕೆ ದೇಶದ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ.‌ ಆಮ್‌ ಆದ್ಮಿ ಪಕ್ಷದ ವಿರುದ್ಧ ಬಿಜೆಪಿ, ಕಾಂಗ್ರೆಸ್‌ ಮುಗಿಬಿದ್ದಿದ್ದು, ವಾಕ್ಸಮರ ತೀವ್ರಗೊಂಡಿದೆ.

Ad Widget

Ad Widget

Ad Widget

Ad Widget

ಕೇಜ್ರಿವಾಲ್‌ ಹೇಳಿದ್ದೇನು?

ದೆಹಲಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅರವಿಂದ ಕೇಜ್ರಿವಾಲ್‌, ‘ದೇಶದ ಆರ್ಥಿಕತೆಯು ಉತ್ತಮ ಸ್ಥಿತಿಯಲ್ಲಿಲ್ಲ. ಕರೆನ್ಸಿ ನೋಟುಗಳ ಮೇಲೆ ಮಹಾತ್ಮ ಗಾಂಧೀಜಿ ಭಾವಚಿತ್ರದ ಜತೆಗೆ ಲಕ್ಷ್ಮೀದೇವಿ, ಗಣೇಶನ ಚಿತ್ರಗಳನ್ನು ಹಾಕಬೇಕೆಂಬುದು ನನ್ನ ಬಯಕೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ’ ಎಂದು ತಿಳಿಸಿದ್ದರು.

Ad Widget

Ad Widget

Ad Widget alt="Ad Widget"/>

Ad Widget

‘ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಸಾಕಷ್ಟು ಪ್ರಯತ್ನಿಸಬೇಕಿದೆ. ಕೆಲವೊಮ್ಮೆ ನಾವು ಎಷ್ಟೇ ಪ್ರಯತ್ನಿಸಿದರೂ ಉತ್ತಮ ಫಲಿತಾಂಶ ದೊರೆಯಲ್ಲ. ಇದಕ್ಕೆ ದೇವರ ಆಶೀರ್ವಾದ ಬೇಕಿರುತ್ತದೆ. ಅದಕ್ಕಾಗಿ ನೋಟುಗಳಲ್ಲಿ ಲಕ್ಷ್ಮಿ ಮತ್ತು ಗಣೇಶ ದೇವರ ಭಾವಚಿತ್ರಗಳಿದ್ದರೆ ಇಡೀ ದೇಶಕ್ಕೆ ಆಶೀರ್ವಾದ ಸಿಗುತ್ತದೆ. ದೇಶವೂ ಅಭಿವೃದ್ಧಿ ಹೊಂದುತ್ತದೆ’ ಎಂದು ಕೇಜ್ರಿವಾಲ್ ಸಲಹೆ ನೀಡಿದ್ದರು. ಇಂಡೋನೇಷ್ಯಾದಲ್ಲಿ ಕರೆನ್ಸಿ ನೋಟಿನ ಮೇಲೆ ಗಣೇಶ ಚಿತ್ರ ಮುದ್ರಿಸಲಾಗಿದೆ ಎಂದೂ ಹೇಳಿದ್ದರು.

Ad Widget

Ad Widget <> Ad Widget

ಆದರೇ ಕೇಜ್ರಿವಾಲ್ ಹೇಳಿಕೆಗೆ ಬಿಜೆಪಿ ನಾಯಕರಿಂದ ತೀವ್ರ ವಿರೋಧ ಬಂದಿದೆ. ಹಿಂದುತ್ವದ ಅಧಾರದಲ್ಲಿ ಚುನಾವಣೆ ಎದುರಿಸುತ್ತಿದ್ದ ಬಿಜೆಪಿಗೆ ಕೇಜ್ರಿವಾಲ್ ಹೇಳಿಕೆ ಕಬ್ಬಿಣದ ಕಡಲೆಯಾಗಿ ಪರಿಣಮಿಸಿದೆ ಎನ್ನುವುದು ರಾಜಕೀಯ ಪಂಡಿತರ ಅಭಿಪ್ರಾಯ.



Ad Widget

Unilever : ಶಾಂಪೂವಿನಲ್ಲಿ ಕ್ಯಾನ್ಸರ್‌ಕಾರಕ ಅಂಶ ಪತ್ತೆ: Dove, Tresemme ಸೇರಿದಂತೆ ಡ್ರೈ ಶಾಂಪೂಗಳನ್ನು ಹಿಂಪಡೆದ ಯುನಿಲಿವರ್‌

Ad Widget

Ad Widget

ಬಿಜೆಪಿ ನಾಯಕರ ವಾಗ್ದಾಳಿ

‘ಹಿಂದೂ ದೇವತೆಗಳ ವಿರುದ್ಧ ಎಎಪಿ ನಾಯಕರು ನೀಡಿದ ಹೇಳಿಕೆಗಳಿಂದ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿರುವುದನ್ನು ಮುಚ್ಚಿಕೊಳ್ಳುವ ಪ್ರಯತ್ನವಿದು’ ಎಂದು ಕೆಜ್ರಿವಾಲ್ ಮೇಲೆ ಬಿಜೆಪಿ ನಾಯಕರು ವಾಗ್ದಾಳಿ ಮಾಡಿದ್ದಾರೆ.

ಹಿಂದೂ ದೇವತೆಗಳನ್ನು ಬಹಿರಂಗವಾಗಿ ನಿಂದಿಸುವ ಮೂಲಕ ಎಎಪಿಯ ನಾಯಕರ ಹಿಂದೂ ವಿರೋಧಿ ಮುಖ ಹೊರಬಂದಿತ್ತು. ಗುಜರಾತ್‌ ಮತ್ತು ದೆಹಲಿ ಎಂಸಿಡಿ ಚುನಾವಣೆಗಳ ದೃಷ್ಟಿಯಿಂದ, ಅದನ್ನು ಮುಚ್ಚಿಕೊಳ್ಳಲು ಕೇಜ್ರಿವಾಲ್‌ ನಡೆಸುತ್ತಿರುವ ವಿಫಲ ಯತ್ನವಲ್ಲದೇ ಇದು ಬೇರೇನೂ ಅಲ್ಲ ಎಂದು ಬಿಜೆಪಿಯ ದೆಹಲಿ ಸಂಸದ ಮನೋಜ್‌ ತಿವಾರಿ ಹರಿಹಾಯ್ದಿದ್ದಾರೆ.

ಕೆಜ್ರಿವಾಲ್ ಹೇಳಿಕೆಯಲ್ಲಿ ನಿಜವಾಗಿಯೂ ಅರ್ಥವಿದ್ದರೆ, ಹಿಂದೂ ದೇವತೆಗಳ ವಿರುದ್ಧ ಮಾತನಾಡಿರುವ ದೆಹಲಿಯ ಮಾಜಿ ಸಚಿವ ರಾಜೇಂದ್ರ ಪಾಲ್ ಗೌತಮ್ ಮತ್ತು ಎಎಪಿಯ ಗುಜರಾತ್ ಘಟಕದ ಅಧ್ಯಕ್ಷ ಗೋಪಾಲ್ ಇಟಾಲಿಯಾ ಅವರನ್ನು ಮೊದಲು ಪಕ್ಷದಿಂದ ಹೊರಗಟ್ಟಲಿ ಎಂದು ಅವರು ಸವಾಲು ಹಾಕಿದರು.

ಮಸೀದಿ ಕೆಡವಿ ಕಟ್ಟಿದ ದೇವಸ್ಥಾನದಲ್ಲಿ ಭಗವಾನ್‌ ರಾಮ ನೆಲೆಸುವುದಿಲ್ಲವೆಂದು ತನ್ನ ಅಜ್ಜಿ ಹೇಳಿರುವುದಾಗಿ ಕೇಜ್ರಿವಾಲ್‌ ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿ, ‘ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ವಿರೋಧಿಸಿದವರು ಈಗ ಚುನಾವಣೆಗಾಗಿ ಹೊಸ ಮುಖವಾಡ ಧರಿಸಿ ಬಂದಿದ್ದಾರೆ’ ಎಂದು ತಿವಾರಿ ಟೀಕಿಸಿದರು.

ದೆಹಲಿಯಲ್ಲಿ ದೀಪಾವಳಿಯನ್ನು ಪಟಾಕಿಯೊಂದಿಗೆ ಆಚರಿಸಿದರೆ ಕಾನೂನು ಕ್ರಮ ಜರುಗಿಸುವುದಾಗಿ ಎಎಪಿ ಸರ್ಕಾರ ಎಚ್ಚರಿಕೆ ಕೊಟ್ಟಿತ್ತು. ಕೇಜ್ರಿವಾಲ್‌ ಅವರ ಈ ಹೊಸ ಹೇಳಿಕೆ ಬೂಟಾಟಿಕೆಯ ಪ್ರದರ್ಶನ ಎಂದು ಬಿಜೆಪಿ ವಕ್ತಾರ ಸಂಬಿತ್‌ ಪಾತ್ರ ಕಿಡಿಕಾರಿದರು.

Treatment for Files : ಮೂಲವ್ಯಾದಿ ಸಮಸ್ಯೆಗೆ ಇಲ್ಲಿದೆ ಪವರ್ ಪುಲ್ ಮನೆ ಮದ್ದು

ಬಿಜೆಪಿ ನಾಯಕರ ತೀವ್ರ ವಾಗ್ದಾಳಿಗೆ ತಿರುಗೇಟು ನೀಡಿರುವ ಎಎಪಿಯ ದೆಹಲಿ ಘಟಕದ ಮುಖ್ಯಸ್ಥ, ಸಂಸದ ಸಂಜಯ್‌ ಸಿಂಗ್‌ ‘ಕೇಜ್ರಿವಾಲ್‌ ಅವರು ಮಾಡಿರುವುದು ಬರೀ ಮನವಿ ಅಷ್ಟೇ. ಆದರೆ, ಈ ಪ್ರಸ್ತಾವನೆ ಬಿಜೆಪಿಗೆ ಇರುಸುಮುರುಸು ತಂದಿದೆ’ ಎಂದು ವ್ಯಂಗ್ಯವಾಡಿದ್ದಾರೆ. ಇವರ ಹೇಳಿಕೆಗೆ ಎಎಪಿ ಶಾಸಕರಾದ ಅತಿಶಿ, ದಿಲೀಪ್‌ ಪಾಂಡೆ ದನಿಗೂಡಿಸಿದ್ದಾರೆ.

ಕಾಂಗ್ರೆಸ್‌ ಕೂಡ ಕೇಜ್ರಿವಾಲ್ ಹೇಳಿಕೆಯನ್ನು ಟೀಕಿಸಿದೆ. ಅದರ ದೆಹಲಿ ಘಟಕದ ಅಧ್ಯಕ್ಷ ಅನಿಲ್‌ ಕುಮಾರ್‌, ‘ಕೇಜ್ರಿವಾಲ್‌ ತಮ್ಮ ರಾಜಕೀಯ ಚದುರಂಗದಾಟಕ್ಕೆ ಹಿಂದೂ ದೇವತೆಗಳನ್ನು ದಾಳವಾಗಿಸಿಕೊಳ್ಳುತ್ತಿದ್ದಾರೆ. ಸಂವಿಧಾನದ ಜಾತ್ಯತೀತ ತತ್ವಗಳನ್ನು ಉಲ್ಲಂಘಿಸಿರುವ ಕೇಜ್ರಿವಾಲ್‌ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.

ಅಂಬೇಡ್ಕರ್‌ ಚಿತ್ರವೇಕೆ ಬೇಡ: ಮನೀಶ್‌ ತಿವಾರಿ ಪ್ರಶ್ನೆ

ಕರೆನ್ಸಿ ನೋಟುಗಳಲ್ಲಿ ಬಾಬಾ ಸಾಹೇಬ್‌ ಡಾ.ಬಿ.ಆರ್‌. ಅಂಬೇಡ್ಕರ್‌ ಭಾವಚಿತ್ರ ಮುದ್ರಿಸಬಾರದೇಕೆ? ಎಂದು ಪಂಜಾಬ್ ಕಾಂಗ್ರೆಸ್ ಮುಖಂಡ, ಸಂಸದ ಮನೀಷ್‌ ತಿವಾರಿ ಪ್ರಶ್ನಿಸಿದ್ದಾರೆ.

ಕೇಜ್ರಿವಾಲ್‌ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಅವರು, ‘ಒಂದು ಬದಿ ಮಹಾತ್ಮ ಗಾಂಧಿ ಚಿತ್ರ ಹಾಗೂ ಮತ್ತೊಂದು ಬದಿಯಲ್ಲಿ ಅಂಬೇಡ್ಕರ್‌ ಚಿತ್ರವಿದ್ದರೆ ಹೇಗೆ? ಅಹಿಂಸೆ, ಸಂವಿಧಾನ ಮತ್ತು ಸಮತಾವಾದಗಳು ಒಟ್ಟಾಗಿ ಆಧುನಿಕ ಭಾರತವನ್ನು ಬಹಳ ಉತ್ತಮವಾಗಿ ಪ್ರತಿನಿಧಿಸುತ್ತವೆ’ ಎಂದು ತಿವಾರಿ ಟ್ವೀಟ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲೂ ತೀವ್ರ ಟೀಕೆ

ಕೇಜ್ರಿವಾಲ್‌ ಸಲಹೆ ಸಾಮಾಜಿಕ ಜಾಲತಾಣದಲ್ಲೂ ವ್ಯಾಪಕ ಟೀಕೆಗೆ ಗುರಿಯಾಗಿದ್ದು, ಕೆಲವು ಜಾಲತಾಣಿಗರು ತೀವ್ರ ಅಪಹಾಸ್ಯ ಮಾಡಿದ್ದಾರೆ. ಕೇಜ್ರಿವಾಲ್‌ ಸಲಹೆಯನ್ನು ಕೆಲವು ನೆಟ್ಟಿಗರು ಗುಜರಾತ್‌ ಚುನಾವಣೆಗೆ ತಳುಕು ಹಾಕಿ, ಪ್ರಶ್ನೆ ಮಾಡಿದ್ದಾರೆ.

Arecanut | ಅಡಿಕೆ ಆಮದಿಗೆ ನಿರ್ಮಲ ಸೀತರಾಮನ್ ಹೆಚ್ಚಿನ ತೆರಿಗೆ ವಿಧಿಸಿದ ಕಾರಣ ಆಮದು ನಿಂತಿದೆ : ಆದರೆ ಅಡಿಕೆ ಮೇಲೆ ತೂಗುಗತ್ತಿ ಇದ್ದೇ ಇದೆ..! ತಾಳೆ ಕೃಷಿ ಬಗ್ಗೆ ಕರಾವಳಿಯ ರೈತರು ಯೋಚಿಸಬೇಕು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ – ಅಡಿಕೆ ಕೃಷಿ ಭವಿಷ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ ಕೇಂದ್ರ ಹಾಗೂ ರಾಜ್ಯ ಸಚಿವರು : ಕಾಣಿಯೂರು ಪಂಚಾಯತ್ ಸಭಾಭವನ ಹಾಗೂ ರಸ್ತೆ ಉದ್ಘಾಟನೆ

Ad Widget
Click to comment

Leave a Reply

ಕ್ರೀಡೆ

India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ

Published

on



Ad Widget

Ad Widget

Ad Widget

Ad Widget

ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.

Ad Widget

Ad Widget

Ad Widget

Ad Widget

ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.

Ad Widget

Ad Widget

Ad Widget alt="Ad Widget"/>

Ad Widget

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.

Ad Widget

Ad Widget <> Ad Widget

ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.



Ad Widget

ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.

Ad Widget

Ad Widget

ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.

ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.

ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.

ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.

ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.

ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.

Ad Widget
Continue Reading

ರಾಷ್ಟ್ರೀಯ

ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ಆಹ್ವಾನಿಸಿದ್ದರು..! ನಿವೃತ್ತ ಐಎಎಸ್ ಅಧಿಕಾರಿ ಬಹಿರಂಗ

Published

on



Ad Widget

Ad Widget

Ad Widget

Ad Widget

ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಜಿಜಿ ಥಾಮ್ರನ್‌ ಬಹಿರಂಗಪಡಿಸಿದ್ದಾರೆ.

Ad Widget

Ad Widget

Ad Widget

Ad Widget

ಬಿಜೆಪಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾ‌ರ್ ನಡುವಿನ ಮೈತ್ರಿಯ ಕುರಿತು ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಥಾಮ್ಸ್‌ನ್ ಅವರ ಹೇಳಿಕೆ ಹೊರಬಿದ್ದಿದೆ.

Ad Widget

Ad Widget

Ad Widget alt="Ad Widget"/>

Ad Widget

‘ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯು ಆರಂಭದಲ್ಲಿ ಪಕ್ಷದ ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಂಡಿತ್ತು. ನಂತರ ಅವರನ್ನು ‘ಅಂಪೈರ್’ ರೀತಿ ಮಾಡಿ, ಭಾರತದ ಚುನಾವಣೆಗಳನ್ನು `ಫಿಕ್ಸಿಂಗ್’ ಮಾಡುವ ಉಸ್ತುವಾರಿ ವಹಿಸಲಾಯಿತು’ ಎಂದು ಲೋಕಸಭೆಯ ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

Ad Widget

Ad Widget <> Ad Widget

2016ರಲ್ಲಿ ವಿಮಾನ ಪ್ರಯಾಣವೊಂದರ ಸಂದರ್ಭದಲ್ಲಿ ಜ್ಞಾನೇಶ್ ಕುಮಾ‌ರ್ ಅವರನ್ನು ಭೇಟಿಯಾದೆ. ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಅವರು ನನಗೆ ಸೂಚಿಸಿದರು. ನಾನು ಅದೇ ವರ್ಷ ನಿವೃತ್ತಿಯಾಗಲಿದ್ದೆ. ಕೇಂದ್ರ ಸಚಿವ ಕೂಡ ಆಗಲು ಅವಕಾಶವಿದೆ ಎಂದು ಅವರು ಹೇಳಿದರು. ಆದರೆ, ನನಗೆ ಆಸಕ್ತಿ ಇಲ್ಲದ ಕಾರಣ, ಆ ಆಹ್ವಾನವನ್ನು ನಿರಾಕರಿಸಿದೆ.



Ad Widget

ಬಿಜೆಪಿ ಮುಖಂಡರ ಬದಲು ಮುಖ್ಯ ಚುನಾವಣಾ ಆಯುಕ್ತರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು ಆಶ್ಚರ್ಯ ತಂದಿತ್ತು’ ಎಂದು ಥಾಮ್ರನ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

Ad Widget

Ad Widget

ಥಾಮ್ಪನ್ ಹಾಗೂ ಜ್ಞಾನೇಶ್ ಕುಮಾರ್ ಇಬ್ಬರೂ ಕೇರಳಂ ಕೇಡರ್‌ನ ಐಎಎಸ್‌ ಅಧಿಕಾರಿಗಳು. ಥಾಮ್ರನ್ 1980ರ ಹಾಗೂ ಕುಮಾರ್ 1988ರ ಬ್ಯಾಚ್‌ನ ಅಧಿಕಾರಿ. ಕೇರಳಂನ ಲೋಕೋಪಯೋಗಿ ಕಾರ್ಯದರ್ಶಿಯಾಗಿಯೂ ಜ್ಞಾನೇಶ್ ಕುಮಾರ್ ಕಾರ್ಯನಿರ್ವಹಿಸಿದ್ದಾರೆ.

Ad Widget
Continue Reading

ರಾಷ್ಟ್ರೀಯ

Crude oil-100 ಡಾಲರ್ ಗಡಿ ದಾಟಿದ ಕಚ್ಚಾ ತೈಲ ಬೆಲೆ : ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ..!

Published

on



Ad Widget

Ad Widget

Ad Widget

Ad Widget

ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.

Ad Widget

Ad Widget

Ad Widget

Ad Widget

ನ್ಯೂಯಾರ್ಕ್‌: ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.

Ad Widget

Ad Widget

Ad Widget alt="Ad Widget"/>

Ad Widget

ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯ ಪ್ರಮುಖ ಮಾನದಂಡವಾಗಿರುವ ಬ್ರೆಂಟ್ ಕ್ರೂಡ್ ಬೆಲೆ ಶೇ.2ಕ್ಕೂ ಹೆಚ್ಚು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ಗೆ 100 ಡಾಲರ್ ಮಟ್ಟ ತಲುಪಿದೆ.

Ad Widget

Ad Widget <> Ad Widget

ಕಚ್ಚಾ ತೈಲದ ಬೆಲೆ ಏರಿಕೆಯಿಂದ ಪೆಟ್ರೋಲ್, ಡೀಸೆಲ್ ಹಾಗೂ ಜೆಟ್ ಇಂಧನದ ಬೆಲೆಗಳ ಮೇಲೂ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಇದರ ಪರಿಣಾಮ ಪ್ರಯಾಣ ವೆಚ್ಚ ಹೆಚ್ಚುವುದರ ಜೊತೆಗೆ, ತಾಜಾ ಆಹಾರ ಪದಾರ್ಥಗಳು ಸೇರಿದಂತೆ ತ್ವರಿತವಾಗಿ ಸಾಗಿಸಬೇಕಾದ ಸರಕುಗಳ ಬೆಲೆಯೂ ಏರಿಕೆಯಾಗಬಹುದು. ದೂರದ ಪ್ರದೇಶಗಳಿಗೆ ಸಾಗಿಸುವ ಪೀಠೋಪಕರಣ, ವಿದ್ಯುತ್ ಉಪಕರಣ ಸೇರಿದಂತೆ ವಿವಿಧ ವಸ್ತುಗಳ ಬೆಲೆಯ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.



Ad Widget

ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ!
ಕಚ್ಚಾ ತೈಲದ ಬೆಲೆ 100 ಡಾಲರ್ ದಾಟಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಪ್ರತಿ ಲೀಟರ್ ಪೆಟ್ರೋಲ್ ಮಾರಾಟದಲ್ಲಿ ಸುಮಾರು ₹5 ಹಾಗೂ ಡೀಸೆಲ್ ಮಾರಾಟದಲ್ಲಿ ₹23ರಷ್ಟು ನಷ್ಟ ಉಂಟಾಗುತ್ತಿದೆ ಎಂದು ವರದಿಯಾಗಿದೆ.

Ad Widget

Ad Widget

ಭಾರತ ತನ್ನ ಅಗತ್ಯದ ಸುಮಾರು ಶೇ.88ರಷ್ಟು ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತದೆ. ಹೀಗಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾದರೆ ಅದರ ನೇರ ಪರಿಣಾಮ ಭಾರತದ ಇಂಧನ ಆರ್ಥಿಕತೆ ಹಾಗೂ ಸಾರಿಗೆ ವೆಚ್ಚದ ಮೇಲೂ ಬೀಳುವ ಸಾಧ್ಯತೆ ಇದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading