Connect with us

ಸ್ಥಳೀಯ

Big Shocking : Mother killed Baby: ನವಜಾತ ಶಿಶುವನ್ನು ಬಾವಿಗೆಸೆದು ಕೊಂದ ತಾಯಿ – ಸುಳ್ಯದಲ್ಲೊಂದು ಬೆಚ್ಚಿ ಬೀಳಿಸುವ ಘಟನೆ

Published

on

Ad Widget

Ad Widget

Ad Widget

Ad Widget

Mother killed Baby : ಸುಬ್ರಹ್ಮಣ್ಯ ಅ 30: ಜಗತ್ತಿನಲ್ಲಿ ಕ್ರೂರಿ ತಂದೆ (Cruel father) ಇರಬಹುದು ಕೆಟ್ಟ ಮಕ್ಕಳಿರಬಹುದು , ಆದರೆ ಕೆಟ್ಟ ತಾಯಿ (bad Mother) ಇರಲು ಸಾಧ್ಯವಿಲ್ಲ ಎಂಬ ಮಾತಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ (Dakshina kannada) ಸುಳ್ಯ (sullia) ತಾಲೂಕಿನಲ್ಲಿ ನಡೆದ ಮನಕಲಕುವ ಘಟನೆಯೊಂದು ಇದಕ್ಕೆ ಅಪವಾದ ಎಂಬಂತಿದೆ. ಇಲ್ಲಿನ  ಕೂತ್ಕುಂಜ ಗ್ರಾಮದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು. ನವಜಾತ ಶಿಶುವನ್ನು ಸ್ವತ:  ತಾಯಿಯೇ ತನ್ನ ಕೈಯಾರೆ ಬಾವಿಗೆಸೆದು ಹತ್ಯೆಗೈದಿದ್ದಾಳೆ.

Ad Widget

Ad Widget

Ad Widget

Ad Widget

ಪಂಜ ಸಮೀಪದ ಕೂತ್ಕುಂಜ ಗ್ರಾಮದ ಬಸ್ತಿಕಾಡು ಪವಿತ್ರಾ ಬಾವಿಗೆಸೆದು ಕೊಂದ ಕ್ರೂರಿ ತಾಯಿ. ಹತ್ಯೆಯಾದ  . ಮಗು ಜನಿಸಿ ಕೇವಲ 20 ದಿನಗಳಷ್ಟೇ ಆಗಿತ್ತು. ಮಗುವನ್ನು ಕೊಂದ ಮಹಿಳೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗುತ್ತಿದ್ದು, ಮನೆಯಲ್ಲಿ ಯಾರು ಇಲ್ಲದಿದ್ದಾಗ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ.

Ad Widget

Ad Widget alt="Ad Widget"/>

Ad Widget

ಪವಿತ್ರಾಳು ಸುಮಾರು 4 ವರ್ಷದ ಹಿಂದೆ ಬೆಂಗಳೂರು ಮೂಲದ ಹರೀಶ್ ಎಂಬವರನ್ನು ವಿವಾಹವಾಗಿ ನಂತರ ಅವರೊಳಗೆ ಅನ್ಯೋನತೆ ಇಲ್ಲದೇ ಇದ್ದುದರಿಂದ ಆತನಿಗೆ ವಿಚ್ಚೇದನ ನೀಡಿ ಬಳಿಕ ತುಮಕೂರು ಜಿಲ್ಲೆ ಶಿರ ತಾಲೂಕಿನ ಮಣಿಕಂಠ ಎಂಬಾತನನ್ನು ಸುಮಾರು ಒಂದು ವರ್ಷದ ಹಿಂದೆ ವಿವಾಹ ಆಗಿದ್ದರು. ಸುಮಾರು 2 ತಿಂಗಳು ಗಂಡನೊಂದಿಗೆ ಇದ್ದು, ನಂತರ ಆಕೆಗೆ ಆಸೌಖ್ಯದಿಂದ ಇದ್ದುದರಿಂದ ತಾಯಿ ಮನೆಗೆ ಬಂದಿದ್ದರು. ಗರ್ಭವತಿಯಾಗಿದ್ದ ಪವಿತ್ರಾ ಅ. 10ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ಇದೆ ವೇಳೆ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು

Ad Widget

Ad Widget <> Ad Widget

 ಗಂಡು ಮಗು ನನಗೆ ಇಷ್ಟವಿಲ್ಲದಿದ್ದರೂ ಹುಟ್ಟಿರುತ್ತದೆ. ಈ ಗಂಡು ಮಗು ನನಗೆ ಬೇಡ ಎಂದು ಹೇಳಿ ಮಗುವನ್ನು ಎತ್ತಿಕೊಂಡು ಮನೆಯ ಎದುರಿನ ಬಾವಿಗೆ ಎಸೆದಿದ್ದಾಳೆ. ಅನಂತರ ಆಕೆಯು ರೂಮಿನ ಒಳಗಡೆ ಓಡಿ ಹೋಗಿದ್ದು, ಕೂಡಲೇ ಇತರರಿಗೆ ಮಾಹಿತಿ ತಿಳಿದು ಬಾವಿಗೆ ಇಳಿದು ಮಗುವನ್ನು ತೆಗೆದು ಮೇಲಕ್ಕೆತ್ತಿ ಪಂಜ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿ ಪರೀಕ್ಷಿಸಿದ ವೈದ್ಯರು ಮಗು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಪವಿತ್ರಾ ಗರ್ಭಿಣಿಯಾದಾಗ ಆಕೆಗೆ ಹೆಣ್ಣು ಮಗು ಆಗಬೇಕೆಂಬ ಆಸೆ ಇದ್ದು, ಅವಳ ಇಷ್ಟ ನೇರವೇರದೆ ಇದ್ದುದರಿಂದ ಹುಟ್ಟಿದ ಗಂಡು ಮಗುವನ್ನು ಆಕೆ ಬಾವಿಗೆ ಎಸೆದು ಕೊಲೆ ಮಾಡಿದ್ದಾಳೆ ಎಂದು ಸುಬ್ರಹ್ಮಣ್ಯ ಠಾಣೆಗೆ ನೀಡಲಾದ ದೂರಿನಲ್ಲಿ ತಿಳಿಸಲಾಗಿದೆ. ಘಟನ ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

ಶಿಕ್ಷಣ

Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ‘ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಕಾನೂನು ತಿದ್ದುಪಡಿಗಳು’ ಕುರಿತು ಕಾರ್ಯಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ‘ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಕಾನೂನು ತಿದ್ದುಪಡಿಗಳು’ ಕುರಿತು ಕಾರ್ಯಗಾರವು ನ 24 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ  ಕಾಲೇಜಿನ ವಿದ್ಯಾರ್ಥಿನಿಯರಿಗೆ ‘ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಕಾನೂನು ತಿದ್ದುಪಡಿಗಳು’ ಕುರಿತು ಕಾರ್ಯಗಾರವು ನ 24 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಪುತ್ತೂರು ಅನಿಕೇತನ ಲಾ ಚೇಂಬರ್ಸ್ ನ ವಕೀಲರಾದ ಕೃಷ್ಣಪ್ರಸಾದ್ ಎನ್ ಆರ್ ಮಾತನಾಡಿ, ಪತ್ರಿಕೆಗಳಲ್ಲಿ ಆಗಾಗ ವರದಿಯಾಗುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯದ ಘಟನೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿ, ಬಾಲಕಿಯರ ಅಪಹರಣ, ಆ್ಯಸಿಡ್ ದಾಳಿ ಮುಂತಾದ ಘಟನೆಗಳು ಸಮಾಜದಲ್ಲಿ ಆತಂಕವನ್ನು ಉಂಟುಮಾಡುತ್ತಿವೆ. ಇಂತಹ ಅನ್ಯಾಯಗಳು ನಡೆಯುವಾಗ ಅನೇಕರು ಧ್ವನಿ ಎತ್ತದೆ ಮೌನವಾಗಿರುವುದು ವಿಷಾದನೀಯ. ಅನ್ಯಾಯದ ವಿರುದ್ಧ ಪ್ರತಿಯೊಬ್ಬರೂ ಧೈರ್ಯದಿಂದ ಧ್ವನಿ ಎತ್ತಬೇಕು. ಮಹಿಳೆಯರ ಮೇಲಿನ ದೌರ್ಜನ್ಯವೆಂದರೆ ಕೇವಲ ದೈಹಿಕ ಹಿಂಸೆ ಮಾತ್ರವಲ್ಲ; ಮಾನಸಿಕ, ಆರ್ಥಿಕ, ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿನ ಶೋಷಣೆ ಮತ್ತು ತಾರತಮ್ಯವೂ ದೌರ್ಜನ್ಯದ ವ್ಯಾಪ್ತಿಗೆ ಬರುತ್ತವೆ ಎಂದು ವಿವರಿಸಿದರು. ಮಹಿಳೆಯರ ಮೇಲಿನ ಯಾವುದೇ ರೀತಿಯ ದೌರ್ಜನ್ಯವನ್ನು ಸಹಿಸದೆ, ಅದರ ವಿರುದ್ಧ ಧ್ವನಿ ಎತ್ತಬೇಕು ಹಾಗೂ ಇತರರಲ್ಲಿಯೂ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

Ad Widget

Ad Widget <> Ad Widget

ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ.ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ನಮ್ಮ ಸಮಾಜವು ಸಾಂಪ್ರದಾಯಿಕವಾಗಿ ಪುರುಷ ಪ್ರಧಾನ ಸಮಾಜವಾಗಿದ್ದು, ಪುರುಷರ ಪ್ರಾಬಲ್ಯದಿಂದಾಗಿ ಮಹಿಳೆಯರಿಗೆ ಸಮಾನ ಸ್ವಾತಂತ್ರ್ಯ ಮತ್ತು ಅವಕಾಶಗಳು ದೊರೆಯದೆ ಇದ್ದ ಸಂದರ್ಭಗಳಿವೆ. ಈ ಅಸಮಾನತೆಯು ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಾರಣವಾಗಿದೆ. ಆದರೆ ಶಿಕ್ಷಣದಿಂದಾಗಿ ಸಮಾಜದಲ್ಲಿ ಸಾಕಷ್ಟು ಬದಲಾವಣೆಗಳು ಉಂಟಾಗಿವೆ. ಹಿಂದೆ ಮಹಿಳೆಯರಿಗೆ ಸ್ವಾತಂತ್ರ್ಯ ಬಹಳ ಕಡಿಮೆಯಿತ್ತು. ಆದರೆ ಇಂದು ಮಹಿಳೆಯರು ಉತ್ತಮ ಶಿಕ್ಷಣ ಪಡೆದು, ಸ್ವಾವಲಂಬಿಗಳಾಗಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಹೆಚ್ಚಿನ ಸ್ವಾತಂತ್ರ್ಯ ಮತ್ತು ಸಮಾನ ಅವಕಾಶಗಳನ್ನು ಪಡೆಯುತ್ತಿದ್ದಾರೆ. ಆದಾಗ್ಯೂ, ಮಹಿಳೆಯರ ಮೇಲಿನ ದೌರ್ಜನ್ಯಗಳು ಇನ್ನೂ ಮುಂದುವರಿದಿರುವುದು ಕಳವಳಕಾರಿ ಸಂಗತಿಯಾಗಿದೆ. ಮಹಿಳೆಯರ ಸುರಕ್ಷತೆ, ಘನತೆ ಮತ್ತು ಸಮಾನತೆಯನ್ನು ಖಚಿತಪಡಿಸಲು ಇನ್ನೂ ಹೆಚ್ಚಿನ ಪ್ರಯತ್ನಗಳ ಅಗತ್ಯವಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಮಹಿಳಾ ಸಬಲೀಕರಣ ಘಟಕದ ನಿರ್ದೇಶಕರಾದ ಸತ್ಯಾಲತಾ ರೈ ಹಾಗೂ ಅವಿನಾ ಮಾಡ್ತಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ಗ್ಲೆನಿಶಾ ಸ್ವಾಗತಿಸಿ, ವಿಯೋಲಾ ಕ್ರಾಸ್ತಾ ಅತಿಥಿಗಳನ್ನು ಪರಿಚಯಿಸಿ, ಪ್ರತೀಕ್ಷಾ ವಂದಿಸಿ, ಜೀವಿತಾ ಕೆ ಜೆ ಕಾರ್ಯಕ್ರಮ ನಿರೂಪಿಸಿದರು.

Ad Widget
Continue Reading

ಶಿಕ್ಷಣ

Philomena-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಚಿನ್ನದ ಪದಕ

Published

on

Ad Widget

Ad Widget

Ad Widget

Ad Widget

ಮಾಝ್ ಟೇಕ್ವಾಂಡೋ ಅಕಾಡೆಮಿ ಆಶ್ರಯದಲ್ಲಿ ನ 15 ರಂದು ನಡೆದ ರಾಜ್ಯಮಟ್ಟದ ಓಪನ್ ಸ್ಟೇಟ್ ಲೆವೆಲ್ ಟೇಕ್ವಾಂಡೋ ಚಾಂಪಿಯನ್ ಶಿಪ್ 2026 – 27′ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಚಿನ್ನದ ಪದಕವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಮಾಝ್ ಟೇಕ್ವಾಂಡೋ ಅಕಾಡೆಮಿ ಆಶ್ರಯದಲ್ಲಿ ನ 15 ರಂದು ನಡೆದ ರಾಜ್ಯಮಟ್ಟದ ಓಪನ್ ಸ್ಟೇಟ್ ಲೆವೆಲ್ ಟೇಕ್ವಾಂಡೋ ಚಾಂಪಿಯನ್ ಶಿಪ್ 2026 – 27′ ಟೇಕ್ವಾಂಡೋ
ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಚಿನ್ನದ ಪದಕವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget alt="Ad Widget"/>

Ad Widget

ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ. ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

Continue Reading

ಸ್ಥಳೀಯ

Valaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್‌ನಿಂದ ‘ಡಬಲ್ ಟೋಲ್’ ಆತಂಕ..!

Published

on

Ad Widget

Ad Widget

Ad Widget

Ad Widget

ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್‌ನಿಂದ ಅಡ್ಡಹೊಳೆವರೆಗಿನ ಚತುಷ್ಪಥ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ಬಳಿ ನಿರ್ಮಿಸಿರುವ ಟೋಲ್ ಪ್ಲಾಜಾ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಪ್ರಾಯೋಗಿಕವಾಗಿ ಸೇವೆ ಆರಂಭಗೊಂಡಿದ್ದು, ಮುಂದಿನ ಒಂದು ವಾರದೊಳಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ. ಬಳಿಕ ಟೋಲ್ ಶುಲ್ಕ ಸಂಗ್ರಹ ಅಧಿಕೃತವಾಗಿ ಆರಂಭವಾಗುವ ನಿರೀಕ್ಷೆಯಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್‌ನಿಂದ ಅಡ್ಡಹೊಳೆವರೆಗಿನ ಚತುಷ್ಪಥ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ಬಳಿ ನಿರ್ಮಿಸಿರುವ ಟೋಲ್ ಪ್ಲಾಜಾ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಪ್ರಾಯೋಗಿಕವಾಗಿ ಸೇವೆ ಆರಂಭಗೊಂಡಿದ್ದು, ಮುಂದಿನ ಒಂದು ವಾರದೊಳಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ. ಬಳಿಕ ಟೋಲ್ ಶುಲ್ಕ ಸಂಗ್ರಹ ಅಧಿಕೃತವಾಗಿ ಆರಂಭವಾಗುವ ನಿರೀಕ್ಷೆಯಿದೆ.

Ad Widget

Ad Widget alt="Ad Widget"/>

Ad Widget

ಬಿ.ಸಿ.ರೋಡ್‌ನಿಂದ ಪೆರಿಯಶಾಂತಿವರೆಗಿನ ಸುಮಾರು 46 ಕಿ.ಮೀ. ಹೆದ್ದಾರಿ ಕಾಮಗಾರಿಯಲ್ಲಿ ಈಗಾಗಲೇ ಶೇ.95ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಉಪ್ಪಿನಂಗಡಿಯಿಂದ ಸುಮಾರು 8 ಕಿ.ಮೀ. ದೂರದಲ್ಲಿರುವ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ನಡುವೆ ಇದೀಗ ಟೋಲ್ ಪ್ಲಾಜಾ ನಿರ್ಮಾಣಗೊಂಡಿದೆ.

Ad Widget

Ad Widget <> Ad Widget

ಟೋಲ್ ಪ್ಲಾಜಾ ನಿರ್ಮಾಣದ ಗುತ್ತಿಗೆ ಪಡೆದಿದ್ದ ಕೆಎನ್‌ಆರ್ ಕನ್ಸ್ಟ್ರಕ್ಷನ್ ಸಂಸ್ಥೆಯು ಕಾಮಗಾರಿ ಪೂರ್ಣಗೊಳಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಿದೆ. ಇತ್ತ ಶುಲ್ಕ ಸಂಗ್ರಹ ನಿರ್ವಹಣೆಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಯೂ ಮುಗಿದಿದ್ದು, ಮಂಗಳೂರಿನ ‘ಕೋರಲ್’ ಸಂಸ್ಥೆಯು ಗುತ್ತಿಗೆಯನ್ನು ಪಡೆದುಕೊಂಡಿದೆ.

8 ಲೇನ್‌ಗಳಲ್ಲಿ ಸಂಚಾರ ವ್ಯವಸ್ಥೆ
ಚತುಷ್ಪಥ ಹೆದ್ದಾರಿಯಲ್ಲಿ ಒಟ್ಟು 8 ಲೇನ್‌ಗಳಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಎರಡೂ ಬದಿಗಳಲ್ಲಿ ತಲಾ ನಾಲ್ಕು ಲೇನ್‌ಗಳಿದ್ದು, ಅವುಗಳಲ್ಲಿ 6 ಲೇನ್‌ಗಳು ಡೆಡಿಕೇಟೆಡ್ ಲೇನ್‌ಗಳಾಗಿರಲಿವೆ. ಈ ಲೇನ್‌ಗಳಲ್ಲಿ ಫಾಸ್ಟ್‌ಟ್ಯಾಗ್ ಹೊಂದಿರುವ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶವಿರಲಿದೆ.

Ad Widget

Ad Widget

ಉಳಿದ ಎರಡು ಲೇನ್‌ಗಳಲ್ಲಿ ಫಾಸ್ಟ್‌ಟ್ಯಾಗ್ ಮೂಲಕ ಪಾವತಿಗೆ ಅವಕಾಶವಿದ್ದರೂ, ನಗದು ಪಾವತಿಗೆ ಅವಕಾಶ ಇರುವುದಿಲ್ಲ. ಬದಲಾಗಿ ಯುಪಿಐ ಅಥವಾ ಸ್ಕ್ಯಾನ್ ಮೂಲಕ ಡಿಜಿಟಲ್ ಪಾವತಿ ಮಾಡಬೇಕಾಗುತ್ತದೆ. ದ್ವಿಚಕ್ರ ವಾಹನಗಳು ಹಾಗೂ ರಿಕ್ಷಾಗಳ ಸುಗಮ ಸಂಚಾರಕ್ಕಾಗಿ ಎರಡೂ ಬದಿಗಳಲ್ಲಿ ಪ್ರತ್ಯೇಕ ಲೇನ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ.

ಟೋಲ್ ಶುಲ್ಕ ವಸೂಲಾತಿ ಕೇಂದ್ರದಿಂದ 20 ಕಿ.ಮೀ. ವ್ಯಾಪ್ತಿಯಲ್ಲಿ ವಾಸಿಸುವ ಸ್ಥಳೀಯ ನಿವಾಸಿಗಳಿಗೆ 360 ರೂ. ಮಾಸಿಕ ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಂದಣಿಯಾಗಿರುವ ವಾಹನಗಳಿಗೆ ಶೇ.50ರಷ್ಟು ಶುಲ್ಕ ವಿನಾಯಿತಿ ನಿಗದಿಪಡಿಸಲಾಗಿದೆ ಎಂದು ಮಂಗಳೂರಿನ ಕೋರಲ್ ಸಂಸ್ಥೆಯ ಆಡಳಿತ ಪಾಲುದಾರ ಯಜೇಶ್ ತಿಳಿಸಿದ್ದಾರೆ.

ಬ್ರಹ್ಮರಕೂಟ್ಲು ಟೋಲ್‌ನಿಂದ 38 ಕಿ.ಮೀ. ಅಂತರ..!
ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಒಟ್ಟು 7 ಟೋಲ್ ಪ್ಲಾಜಾಗಳಲ್ಲಿ ವಾಹನ ಸವಾರರು ಶುಲ್ಕ ಪಾವತಿಸಬೇಕಾಗುತ್ತದೆ. ಬೆಂಗಳೂರಿನ ನೆಲಮಂಗಲದಿಂದ ಸಕಲೇಶಪುರದವರೆಗೆ 5 ಟೋಲ್ ಪ್ಲಾಜಾಗಳಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಗುಂಡ್ಯದಿಂದ ಮಂಗಳೂರಿನ ಪಂಪ್‌ವೆಲ್ ನಡುವಿನ ಮಾರ್ಗದಲ್ಲಿ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಟೋಲ್ ಈಗಾಗಲೇ ಕಾರ್ಯನಿರ್ವಹಿಸುತ್ತಿದೆ. ಇದೀಗ ವಳಾಲು ಟೋಲ್ ಸೇರ್ಪಡೆಯಾದರೆ ಈ ಭಾಗದಲ್ಲಿ ಶುಲ್ಕ ಸಂಗ್ರಹಿಸುವ ಟೋಲ್ ಪ್ಲಾಜಾಗಳ ಸಂಖ್ಯೆ ಎರಡಕ್ಕೇರಲಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮಾವಳಿಗಳ ಪ್ರಕಾರ ಒಂದು ಟೋಲ್ ಪ್ಲಾಜಾದಿಂದ ಮತ್ತೊಂದು ಟೋಲ್ ಪ್ಲಾಜಾಕ್ಕೆ ಕನಿಷ್ಠ 60 ಕಿ.ಮೀ. ಅಂತರ ಇರಬೇಕಿದೆ. ಆದರೆ, ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಿಂದ ಬಜತ್ತೂರು ವಳಾಲು ಟೋಲ್ ಪ್ಲಾಜಾಕ್ಕೆ ಇರುವ ಅಂತರ ಕೇವಲ 38 ಕಿ.ಮೀ. ಮಾತ್ರ. ಹೀಗಾಗಿ, ವಳಾಲು ಟೋಲ್‌ನಲ್ಲಿ ಶುಲ್ಕ ಸಂಗ್ರಹ ಆರಂಭವಾದರೆ ಸ್ಥಳೀಯರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಆರ್ಥಿಕ ಹೊರೆ ಬೀಳಲಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಶಬೀರ್ ಅಹ್ಮದ್ ನೆಕ್ಕಿಲಾಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬ್ರಹ್ಮರಕೂಟ್ಲು ಟೋಲ್ ತೆರವಿಗೆ ಹೋರಾಟ ತೀವ್ರಗೊಳ್ಳುವ ಸಾಧ್ಯತೆ
ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಟೋಲ್ ಪ್ಲಾಜಾ ಅನಧಿಕೃತವಾಗಿದ್ದು, ನಿಗದಿತ ಅವಧಿ ಮುಗಿದಿದ್ದರೂ ಶುಲ್ಕ ಸಂಗ್ರಹ ಮುಂದುವರಿಸಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಈ ಟೋಲ್ ಪ್ಲಾಜಾವನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಈಗಾಗಲೇ ನಿರಂತರ ಹೋರಾಟ ನಡೆಸುತ್ತಿದ್ದಾರೆ.

ಬ್ರಹ್ಮರಕೂಟ್ಲು ಟೋಲ್ ಪ್ಲಾಜಾವನ್ನು ತೆರವುಗೊಳಿಸದೆ ವಳಾಲು ಟೋಲ್ ಪ್ಲಾಜಾದಲ್ಲಿ ಶುಲ್ಕ ಸಂಗ್ರಹ ಆರಂಭಿಸಿದರೆ ವಾಹನ ಸವಾರರಿಗೆ ಒಂದೇ ಮಾರ್ಗದಲ್ಲಿ ಎರಡು ಬಾರಿ ಟೋಲ್ ಪಾವತಿಸುವ ಪರಿಸ್ಥಿತಿ ಎದುರಾಗುವ ಆತಂಕ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಬ್ರಹ್ಮರಕೂಟ್ಲು ಟೋಲ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಹಾಗೂ ಹೋರಾಟಗಳು ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!