Connect with us

ಸ್ಥಳೀಯ

Road Accident : ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಜೀಪು – ಕಾರು ಮುಖಾಮುಖಿ ಢಿಕ್ಕಿ : ಇಬ್ಬರಿಗೆ ಗಾಯ

Published

on



Ad Widget

Ad Widget

Ad Widget

Ad Widget

Road Accident ಕಡಬ : ಅ 30 ಜಿಲ್ಲೆಯ ಎರಡು ಪವಿತ್ರ ತೀರ್ಥ ಕ್ಷೇತ್ರಗಳನ್ನು ಸಂಪರ್ಕಿಸುವ  ಸುಬ್ರಹ್ಮಣ್ಯ (subrahmanya) – ಧರ್ಮಸ್ಥಳ (dharmasthala) ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಭಾನುವಾರ ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ (Road Accident) ನಡೆದಿದ್ದೂ ಇಬ್ಬರು ಗಾಯಗೊಂಡಿದ್ದಾರೆ. ಕಾರು ಮತ್ತು ಜೀಪು ನಡುವೆ ಈ ಅಪಘಾತ ಅ.30 ರಂದು ಸಂಭವಿಸಿದೆ.  

Ad Widget

Ad Widget

Ad Widget

Ad Widget

ಅಪಘಾತದಲ್ಲಿ ಹ್ಯುಂಡೈ ಕಾರು ಹಾಗೂ ಜೀಪು ಪರಸ್ಪರ ಢಿಕ್ಕಿಯಾಗಿದೆ. ಸುಬ್ರಹ್ಮಣ್ಯದಿಂದ ಕಡಬ ಕಡೆಗೆ  ಜೀಪು ಚಲಿಸುತಿತ್ತು. ಕಾರು ಸುಬ್ರಹಣ್ಯ ಕಡೆಗೆ ತೆರಳುತಿತ್ತು,ಬಿಳಿನೆಲೆ ಬಳಿ ಇವೆರಡು ಪರಸ್ಪರ ಮುಖಾಮುಖಿಯಾಗಿದೆ. ಅಪಘಾತದಲ್ಲಿ ಇಬ್ಬರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ಕರೆದೊಯಗಯಲಾಗಿದೆ .

Ad Widget

Ad Widget

Ad Widget alt="Ad Widget"/>

Ad Widget

ಕಾರಿನ ಮುಂಭಾಗ ಹಾಗು ಚಾಲಕನ ಸೀಟಿನ ಪಾರ್ಶ್ವದಲ್ಲಿ ನುಜುಗುಜ್ಜಾಗಿದೆ. ಜೀಪಿನ ಚಾಲಕನ ಸೀಟಿನ ಪಾರ್ಶ್ವದಲ್ಲಿ ಹಾನಿಯಾಗಿದೆ.   ಜೀಪು ಹಾಗೂ ಕಾರಿನ ಚಾಲಕರಿಬ್ಬರು ಗಾಯಗೊಂಡಿದ್ದಾರೆಂದು ಹೇಳಲಾಗುತ್ತಿದ್ದು. ನಿಖರ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

Ad Widget

Ad Widget <> Ad Widget

Ad Widget
Click to comment

Leave a Reply

ಶಿಕ್ಷಣ

Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕನ್ನಡ ಭಾಷಾ ಕಾರ್ಯಾಗಾರ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಸುಳ್ಯದ ಸಾಹಿತಿ ಹಾಗೂ ಡಿಜಿಟಲ್ ಆರ್ಟ್ ನ ಉದಯ ಭಾಸ್ಕರ್ ಮಾತನಾಡಿ, ಸಾಹಿತ್ಯವು ನಮ್ಮೊಳಗಿನಿಂದ ಅಭಿವ್ಯಕ್ತಿಗೊಳ್ಳುವ ಮಾಧ್ಯಮ. ಸಾಹಿತ್ಯ ಲೋಕದ ಬರಹಗಳು ಮನುಷ್ಯನ ಕಲ್ಪನೆ ಮತ್ತು ಚಿಂತನೆಗಳ ಫಲಶ್ರುತಿ. ಸಾಹಿತಿಗೆ ಮುಖ್ಯವಾಗಿ ಶಬ್ದ ಸಂಪತ್ತು ಇರಬೇಕು. ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಪ್ರತಿಯೊಂದು ಭಾಷೆಗೂ ಸಮಾನ ಗೌರವವನ್ನು ನೀಡುವುದು ಅತ್ಯಂತ ಅಗತ್ಯವಿದ್ದು, ವಿವಿಧ ಭಾಷೆಗಳನ್ನು ಕಲಿಯುವುದರಿಂದ ನಮ್ಮ ಯೋಚನಾ ಶಕ್ತಿ ವೃದ್ಧಿಸುತ್ತದೆ. ಕನ್ನಡ ಒಂದು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡವನ್ನು ಕಲಿಯುವುದರ ಜೊತೆಗೆ, ಕನ್ನಡ ಭಾಷೆಯ ಅಭಿವೃದ್ಧಿಗೆ ನಿಮ್ಮ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು.



Ad Widget

ವೇದಿಕೆಯಲ್ಲಿ ಕನ್ನಡ ಸಂಘದ ನಿರ್ದೇಶಕರಾದ ಉಷಾ ಎ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ವರ್ಗ  ಉಪಸ್ಥಿತರಿದ್ದರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ಸಿಂಚನ ಸ್ವಾಗತಿಸಿ, ಗೌತಮ್ ವಂದಿಸಿ, ಗ್ರೀಷ್ಮ ಕಾರ್ಯಕ್ರಮ ನಿರೂಪಿಸಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಶಾಲಾ ರಕ್ಷಕ-ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಸಭೆಯಲ್ಲಿ 2026-27 ನೇ ಶೈಕ್ಷಣಿಕ ಸಾಲಿನ ರಕ್ಷಕ- ಶಿಕ್ಷಕ ಸಂಘದ ಪದಾಧಿಕಾರಿಗಳಾಗಿ ಆಯ್ಕೆ ಪ್ರಕ್ರಿಯೆ ನಡೆಯಿತು.

Ad Widget

Ad Widget <> Ad Widget

ಅಧ್ಯಕ್ಷರಾಗಿ ಹತ್ತನೆಯ ತರಗತಿಯ ವಿದ್ಯಾರ್ಥಿಯ ಪೋಷಕರದ ಪ್ರತಿಭಾರವರು ಆಯ್ಕೆಯಾದರು.



Ad Widget

ಉಪಾಧ್ಯಕ್ಷರುಗಳಾಗಿ ಚೇತನ, ರವೀಂದ್ರ, ವಿದ್ಯಾ ಅವರುಗಳು ಆಯ್ಕೆಯಾದರು.

Ad Widget

Ad Widget

2025-2026 ನೇ ಸಾಲಿನ ಅಧ್ಯಕ್ಷರಾದ ಭಾಸ್ಕರ ಬಲ್ಯಾಯ ಅವರು ನಿಯೋಜಿತ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿ, ನೂತನ ತಂಡಕ್ಕೆ ಶುಭಾಶಯಗಳನ್ನು ಕೋರಿದರು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಸಮರ್ಪಿಸಿ ಸಂಸ್ಥೆಯ ಶ್ರೇಯಾಭಿವೃದ್ಧಿಗೆ ಭರವಸೆಯ ಮಾತುಗಳನ್ನಾಡಿದರು.

ಸಭೆಯಲ್ಲಿ ಕಾರ್ಯಕಾರಿಣಿ ಸಮಿತಿಯ ಪ್ರತಿನಿಧಿಗಳು ಹಾಗೂ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

Ad Widget
Continue Reading

ಅಪರಾಧ

Digital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ

Published

on



Ad Widget

Ad Widget

Ad Widget

Ad Widget

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್‌ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್‌ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್‌ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್‌ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಸೆ.25ರಂದು ಅಪರಿಚಿತ ವ್ಯಕ್ತಿಯೊಬ್ಬರು ಮಹಿಳೆಗೆ ಕರೆ ಮಾಡಿ ತಾನು ಮುಂಬೈನ ಕೊಲಾಬಾ ಪೊಲೀಸ್‌ ಅಧಿಕಾರಿ ಸಂದೀಪ್‌ ರಾವ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ನರೇಶ್‌ ಗೋಯಲ್‌ ಜತೆ ಹಣ ವರ್ಗಾವಣೆ, ಮಾದಕವಸ್ತು ವ್ಯವಹಾರ ಹಾಗೂ ಮಕ್ಕಳ ಕಳ್ಳಸಾಗಣೆ ಸೇರಿದಂತೆ ಹಲವು ಅಪರಾಧಗಳಲ್ಲಿ ನೀವು ಭಾಗಿಯಾಗಿದ್ದೀರಿ. ಈ ಸಂಬಂಧ ಮುಂಬೈ ಕೊಲಾಬಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿ ಭಯ ಹುಟ್ಟಿಸಿದ್ದಾನೆ.

Ad Widget

Ad Widget <> Ad Widget

ಬಳಿಕ ಮತ್ತೊಂದು ಮೊಬೈಲ್‌ ಸಂಖ್ಯೆಯಿಂದ ವಾಟ್ಸ್‌ಆ್ಯಪ್‌ ವಿಡಿಯೊ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ತಾನು ಸಿಬಿಐ ಅಧಿಕಾರಿ ಸಮಾಧಾನ್‌ ಪವಾರ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಮಟ್ಟದ ಅಪರಾಧದಲ್ಲಿ ನೀವು ಭಾಗಿಯಾಗಿದ್ದೀರಿ. ‘ನ್ಯಾಷನಲ್‌ ಸೀಕ್ರೆಸಿ ಆ್ಯಕ್ಟ್‌’ ಪಾಲಿಸಬೇಕು ಎಂದು ಹೇಳಿ ಮಹಿಳೆಯನ್ನು ಮತ್ತಷ್ಟು ಹೆದರಿಸಿದ್ದಾನೆ. ಅಲ್ಲದೆ, ತಾವು ಸರ್ವೇಲೈನ್ಸ್‌ನಲ್ಲಿರುವುದರಿಂದ ಈ ವಿಚಾರವನ್ನು ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾನೆ.



Ad Widget

ನಂತರ ಮಹಿಳೆಯ ಆಸ್ತಿ ಹಾಗೂ ಬ್ಯಾಂಕ್‌ ಖಾತೆಗಳನ್ನು ಪರಿಶೀಲಿಸಿ ಎರಡು ದಿನಗಳಲ್ಲಿ ಕ್ಲಿಯರೆನ್ಸ್ ನೀಡುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಈ ನೆಪದಲ್ಲಿ ಬ್ಯಾಂಕ್‌ ಖಾತೆ ಹಾಗೂ ಆಸ್ತಿ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ತಮ್ಮ ಸೂಚನೆಯಂತೆ ನಿರ್ದಿಷ್ಟ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.

Ad Widget

Ad Widget

ಆರೋಪಿಗಳ ಮಾತು ನಂಬಿದ ಮಹಿಳೆ, ಅವರ ಸೂಚನೆಯಂತೆ ₹60 ಲಕ್ಷವನ್ನು ಹಾಗೂ ಅ.3ರಂದು ₹1.40 ಕೋಟಿ ಹಣವನ್ನು ಆರ್‌ಟಿಜಿಎಸ್‌ ಮೂಲಕ ವರ್ಗಾಯಿಸಿದ್ದಾರೆ. ಸೆ.25ರಿಂದ ಅ.5ರವರೆಗೆ ಹಂತ ಹಂತವಾಗಿ ಒಟ್ಟು ₹2 ಕೋಟಿ ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ‘ಡಿಜಿಟಲ್ ಅರೆಸ್ಟ್’ ಸೇರಿದಂತೆ ವಿವಿಧ ರೀತಿಯ ಸೈಬರ್‌ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸ್‌ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ಬೆದರಿಸಿ, ಹಣ ವರ್ಗಾಯಿಸುವಂತೆ ಒತ್ತಡ ಹೇರುವುದು ವಂಚಕರ ಸಾಮಾನ್ಯ ತಂತ್ರವಾಗಿದೆ.

ಸೈಬರ್‌ ವಂಚನೆಗೆ ಒಳಗಾದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಂತ ಮುಖ್ಯ. ವಂಚನೆಯಾದ ಕೂಡಲೇ ‘ಗೋಲ್ಡನ್ ಅವರ್’ನಲ್ಲಿ ದೂರು ನೀಡಿದರೆ ಹಣದ ವರ್ಗಾವಣೆಯನ್ನು ತಡೆಯಲು ಅಥವಾ ವಂಚಿತ ಹಣವನ್ನು ಫ್ರೀಜ್‌ ಮಾಡಲು ಪೊಲೀಸರು ಪ್ರಯತ್ನಿಸಬಹುದು. ದೂರು ನೀಡಲು ವಿಳಂಬವಾದಷ್ಟೂ ಹಣವನ್ನು ಮರಳಿ ಪಡೆಯುವುದು ಕಷ್ಟವಾಗುವ ಸಾಧ್ಯತೆ ಇದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading