Connect with us

ಅಪರಾಧ

Pratibha kulai :ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ನಾಯಕಿ ಪ್ರತಿಭಾ ಕುಳಾಯಿ ಮಾನಹಾನಿ ಪ್ರಕರಣ ; ಶ್ಯಾಮ್ ಸುದರ್ಶನ್ ಭಟ್ ಗೆ ನ್ಯಾಯಾಲಯದಿಂದ ಕೊಂಚ ರಿಲೀಫ್

Published

on

Ad Widget

Ad Widget

Ad Widget

Ad Widget

ಮಂಗಳೂರು Mangalore ಅ 30 : ಕಾಂಗ್ರೆಸ್‌ ಮುಖಂಡೆ, ಬಿಲ್ಲವ ನಾಯಕಿ, ಮಂಗಳೂರಿನ  ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ  ( Pratibha Kulayi) ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ  ( Social Media) ಮಾನಹಾನಿಕಾರಕ ಪೋಸ್ಟ್ ಹಾಕಿದ ಪ್ರಕರಣದಲ್ಲಿ ಶ್ಯಾಮ್‌ ಸುದರ್ಶನ್‌ ಭಟ್‌ ( Shyama Sudharshan Bhat)  ಎಂಬವರಿಗೆ ನ್ಯಾಯಾಲಯದಿಂದ ತುಸು ರಿಲೀಫ್‌ ಸಿಕ್ಕಿದೆ. ನ್ಯಾಯಾಲಯಕ್ಕೆ ಸಲ್ಲಿಸಿದ ಜಾಮೀನು ಅರ್ಜಿ  ವಿಚಾರಣೆ ಆಗುವವರೆಗೆ ಅವರನ್ನು ಬಂಧಿಸದಂತೆ ನ್ಯಾಯಾಲಯವು ಪ್ರಕರಣ ತನಿಖಾಧಿಕಾರಿಗೆ ಅ 29 ರಂದು ನಿರ್ದೇಶಿಸಿದೆ.

Ad Widget

Ad Widget

Ad Widget

Ad Widget

 ಪ್ರತಿಭಾ ಕುಳಾಯಿ ಅವರು  ಪುತ್ತೂರಿನಲ್ಲಿ ಮಾಧ್ಯಮ ಸಂಸ್ಥೆ ಹೊಂದಿರುವ  ಶ್ಯಾಮ್‌ ಸುದರ್ಶನ್‌ ಭಟ್‌ ಹಾಗೂ ಅಡ್ಯಾರ್ ಪದವು ನಿವಾಸಿ ಕೆ.ಆರ್. ಶೆಟ್ಟಿ ಅವರ ವಿರುದ್ದ ವಾರದ ಹಿಂದೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆ ಬಳಿಕ ಅವರಿಬ್ಬರು ತಲೆ ಮರೆಸಿಕೊಂಡಿದ್ದಾರೆಂದು ಮಾಧ್ಯಮ ಗೋಷ್ಟಿ ಹಾಗೂ ಸಂದರ್ಶನಗಳಲ್ಲಿ ಆರೋಪಿಸಿದ್ದರು,

Ad Widget

Ad Widget alt="Ad Widget"/>

Ad Widget

ಏತನ್ಮಧ್ಯೆ ಎರಡನೇ ಆರೋಪಿಯಾಗಿರುವ ಕೆ.ಆರ್. ಶೆಟ್ಟಿ ನ್ಯಾಯಾಲಯಕ್ಕೆ ಶರಣಾಗಿದ್ದರು. ಅವರಿಗೆ ನ್ಯಾಯಾಲಯವು ಒಂದು ದಿನಗಳ ಪೊಲೀಸ್‌ ಕಸ್ಟಡಿ ವಿಧಿಸಿತ್ತು. ಆದರೇ ಶ್ಯಾಮ್‌ ಸುದರ್ಶನ್‌ ಭಟ್‌ ಅವರು ಪೊಲೀಸರಿಗೆ ಸಿಕ್ಕಿರಲಿಲ್ಲ. ಅವರ ಪತ್ತೆಗೆ ಪೊಲೀಸ್‌ ಇಲಾಖೆ 4 ತಂಡ ರಚಿಸಿರುವುದಾಗಿ ಮಂಗಳೂರು ಪೊಲೀಸ್‌ ಕಮೀಷನರ್‌ ಮಾಧ್ಯಮಗಳಿಗೆ ತಿಳಿಸಿದ್ದರು.

Ad Widget

Ad Widget <> Ad Widget

ಈ ನಡುವೆ ಶ್ಯಾಮ್‌ ಸುದರ್ಶನ್‌ ಭಟ್‌ ಅವರು ತಮ್ಮ ವಕೀಲರ ಮೂಲಕ ಮಂಗಳೂರಿನ 2 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ  ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆಯನ್ನು ಅ 29 ರಂದು ನಡೆಸಿದ ನ್ಯಾಯಾಲಯವು ಅರ್ಜಿದಾರ ಶ್ಯಾಮ್‌ ಸುದರ್ಶನ್‌ ಭಟ್‌ ಅವರನ್ನು ಬಂಧಿಸದಂತೆ ತಾತ್ಕಲಿಕ ತಡೆಯಾಜ್ಞೆ ನೀಡಿದೆ.

 ನಿರೀಕ್ಷಣಾ ಜಾಮೀನು ಅರ್ಜಿಗೆ ಸರಕಾರಿ ಪ್ರಾಸಿಕ್ಯೂಟರ್‌ ಗೆ ಆಕ್ಷೇಪಣೆ ಸಲ್ಲಿಸಲು ಅ 31 ರವರೆಗೆ ಕಾಲಾವಕಾಶ ನೀಡಿದ ನ್ಯಾಯಾಲಯವು ಅಲ್ಲಿಯವರಗೆ ಅರ್ಜಿದಾರರನ್ನು ಬಂಧಿಸದಂತೆ ತನಿಖಾದಿಕಾರಿಗೆ ಸೂಚಿಸಿತ್ತು. ಪ್ರಕರಣದ ಮುಂದಿನ ವಿಚಾರಣೆಯೂ ಅ 31 ರಂದು ನಡೆಯಲಿದೆ.

Ad Widget

Ad Widget

Mens beauty Tips : ಗಡ್ಡ, ಮೀಸೆ ಬೆಳ್ಳಗಾಗುತ್ತಿದೆ ಎಂಬ ಚಿಂತೆನಾ? ಈ ಮನೆಮದ್ದುಗಳನ್ನು ಫಾಲೋ ಮಾಡಿ

ಏನಿದು ಪ್ರಕರಣ ?

  ಟೋಲ್ ವಿರೋಧಿ ಹೋರಾಟದಲ್ಲಿ ಭಾಗವಹಿಸಿದ್ದ ಪ್ರತಿಭಾ ಕುಳಾಯಿ ಅವರ ಫೋಟೋ ಒಂದನ್ನು ಕೆ.ಆರ್. ಶೆಟ್ಟಿ ಸಾಮಾಜಿಕ ಜಾಲ ತಾಣದಲ್ಲಿ ಹಾಕಿದ್ದರು. ಅಲ್ಲದೇ ಇದಕ್ಕೊಂದು ಒಳ್ಳೆಯ  ಕ್ಯಾಪ್ಷನ್  ಕೊಡಿ ಎಂದು  ಕೂಡ ಫೇಸ್‌ ಬುಕ್  ನಲ್ಲಿ ಬರೆದುಕೊಂಡಿದ್ದರು. ಇದಕ್ಕೆ ಶ್ಯಾಮ ಸುದರ್ಶನ ಭಟ್ ಹೊಸಮೂಲೆ ಅವರು ಹಾಕಿದ ಕಾಮೇಂಟ್‌  ಮಾನಹಾನಿಕರವಾಗಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು .   ಈ ಪೋಸ್ಟ್‌ ಹಾಗೂ ಕಾಮೇಂಟ್‌ ನ ವಿರುದ್ದ ಪ್ರತಿಭಾ ಕುಳಾಯಿಯವರು ದೂರು ನೀಡಿದ್ದು   ಮಂಗಳೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು

 ಪ್ರತಿಭಾ ಕುಳಾಯಿಯವರ ವಿರುದ್ದ ಆಕ್ಷೇಪಾರ್ಹ ಕಾಮೇಂಟ್‌ ಗಳನ್ನು ಹಾಕಿದ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ   ಬಿಲ್ಲವ ಸಂಘಟನೆಗಳು, ವಿವಿಧ ಸಂಘ ಸಂಸ್ಥೆ, ಕಾಂಗ್ರೆಸ್ ಸಹಿತ ವಿವಿಧ ರಾಜಕೀಯ ಪಕ್ಷಗಳು ಅಗ್ರಹಿಸಿದ್ದವು

Ad Widget
Click to comment

Leave a Reply

ಅಂತರ ರಾಜ್ಯ

Sreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು

Published

on

Ad Widget

Ad Widget

Ad Widget

Ad Widget

ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ.

Ad Widget

Ad Widget

Ad Widget

Ad Widget

ತ್ರಿಶೂರ್: ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ.

Ad Widget

Ad Widget alt="Ad Widget"/>

Ad Widget

2022ರಲ್ಲಿ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಶೂರ್‌ನ ಫಾಸ್ಟ್‌ಟ್ರ್ಯಾಕ್ ವಿಶೇಷ ನ್ಯಾಯಾಲಯ-11ರ ನ್ಯಾಯಾಧೀಶೆ ರಮ್ಯಾ ಮೆನನ್ ಅವರು, ಪೋಕ್ಸೋ ಕಾಯ್ದೆಯ ಸೆಕ್ಷನ್ 12 ಹಾಗೂ ಭಾರತೀಯ ದಂಡ ಸಂಹಿತೆ (IPC) 1860ರ ಸೆಕ್ಷನ್ 509ರ ಅಡಿಯಲ್ಲಿ ಶ್ರೀಜಿತ್ ರವಿ ಅವರನ್ನು ದೋಷಿ ಎಂದು ಘೋಷಿಸಿದ್ದಾರೆ.

Ad Widget

Ad Widget <> Ad Widget

2022ರ ಜುಲೈ 4ರಂದು ಇಬ್ಬರು ಅಪ್ರಾಪ್ತ ಬಾಲಕಿಯರು ಶಾಲೆಯಿಂದ ತ್ರಿಶೂರ್‌ನ ಅರನಟ್ಟುಕರದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ಗೆ ಮರಳುತ್ತಿದ್ದ ವೇಳೆ ಘಟನೆ ನಡೆದಿತ್ತು. ಪ್ರಾಸಿಕ್ಯೂಷನ್ ಪ್ರಕಾರ, ಶ್ರೀಜಿತ್ ರವಿ ಕಾರಿನಲ್ಲಿ ಬಾಲಕಿಯರನ್ನು ಹಿಂಬಾಲಿಸಿ, ಅಪಾರ್ಟ್‌ಮೆಂಟ್‌ನ ಕಾರು ನಿಲುಗಡೆ ಪ್ರದೇಶದಲ್ಲಿ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದರು.

ವಿಚಾರಣೆ ವೇಳೆ ಬಾಲಕಿಯರು ನ್ಯಾಯಾಲಯದಲ್ಲಿ ಶ್ರೀಜಿತ್ ರವಿಯನ್ನು ಗುರುತಿಸಿದ್ದರು. ಆದರೆ, ಚಲನಚಿತ್ರ ನಟನಾಗಿದ್ದರೂ ಬಾಲಕಿಯರು ಆತನ ಹೆಸರನ್ನು ಗುರುತಿಸಲು ವಿಫಲರಾಗಿದ್ದಾರೆ ಎಂಬ ಅಂಶವನ್ನು ಮುಂದಿಟ್ಟುಕೊಂಡು ನಟನ ಪರ ವಕೀಲರು ಗುರುತಿಸುವಿಕೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದರು.

Ad Widget

Ad Widget

ಈ ವಾದವನ್ನು ತಳ್ಳಿಹಾಕಿದ ನ್ಯಾಯಾಲಯ, ಬಾಲಕಿಯರು ಆರೋಪಿಯನ್ನು ಗುರುತಿಸಿದ್ದು, ಅವರ ದೈಹಿಕ ಚಹರೆಯ ಬಗ್ಗೆಯೂ ಸ್ಪಷ್ಟವಾಗಿ ವಿವರಿಸಿದ್ದಾರೆ ಎಂದು ತಿಳಿಸಿದೆ.

ಪೊಲೀಸ್ ತನಿಖೆಯಲ್ಲಿನ ಕೆಲವು ಲೋಪಗಳ ಬಗ್ಗೆಯೂ ನ್ಯಾಯಾಲಯ ಗಮನ ಸೆಳೆದಿದೆ. ವಿಶೇಷವಾಗಿ, ಘಟನೆ ನಡೆದ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸದಿರುವುದನ್ನು ಉಲ್ಲೇಖಿಸಿದೆ. ಆದರೆ, ತನಿಖೆಯಲ್ಲಿನ ಇಂತಹ ಲೋಪಗಳು ಬಾಲಕಿಯರು ನೀಡಿದ ಸಾಕ್ಷ್ಯಗಳ ವಿಶ್ವಾಸಾರ್ಹತೆಯನ್ನು ಕುಗ್ಗಿಸುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

Ad Widget
Continue Reading

ಅಂತರ ರಾಜ್ಯ

FIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್‌ಫ್ಲುಯೆನ್ಸರ್ ವಹಿದಾ ದೂರು – ಎಫ್‌ಐಆರ್ ದಾಖಲು..!

Published

on

Ad Widget

Ad Widget

Ad Widget

Ad Widget

ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ‘ಬಿಗ್ ಬಾಸ್ ತಮಿಳು ಸೀಸನ್-8’ರ ವಿಜೇತ ಮುತ್ತುಕುಮಾರನ್ ಜಗದೀಶನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಚೆನ್ನೈ: ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ‘ಬಿಗ್ ಬಾಸ್ ತಮಿಳು ಸೀಸನ್-8’ರ ವಿಜೇತ ಮುತ್ತುಕುಮಾರನ್ ಜಗದೀಶನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಇನ್‌ಫ್ಲುಯೆನ್ಸರ್ ವಹಿದಾ ಅಖ್ದರ್ (Wahidha Akdhar) ನೀಡಿದ ದೂರಿನ ಆಧಾರದಲ್ಲಿ ಚೆನ್ನೈನ ವಿರುಗಂಬಾಕ್ಕಂ ಮಹಿಳಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 69ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪ್ರಕರಣದ ತನಿಖೆ ಆರಂಭಿಸಿರುವ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಮುತ್ತುಕುಮಾರನ್ ಅವರಿಗೆ ಶೀಘ್ರದಲ್ಲೇ ಸಮನ್ಸ್ ಜಾರಿ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

Ad Widget

Ad Widget <> Ad Widget

ಇದೇ ವೇಳೆ, ತಮ್ಮ ವಿರುದ್ಧ ದೂರು ನೀಡಿರುವ ವಹಿದಾ ವಿರುದ್ಧವೇ ಮುತ್ತುಕುಮಾರನ್ ಪ್ರತಿದೂರು ದಾಖಲಿಸಿದ್ದಾರೆ. ವಹಿದಾ ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಏನಿದು ಪ್ರಕರಣ?
‘ದಿ ಟೈಮ್ಸ್ ಆಫ್ ಇಂಡಿಯಾ’ ವರದಿಯ ಪ್ರಕಾರ, ಇನ್‌ಸ್ಟಾಗ್ರಾಮ್ ಮೂಲಕ ಮುತ್ತುಕುಮಾರನ್ ಪರಿಚಯವಾಗಿದ್ದು, ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆದು ಅದು ಪ್ರೀತಿಗೆ ತಿರುಗಿತ್ತು ಎಂದು ವಹಿದಾ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

Ad Widget

Ad Widget

ದೈಹಿಕ ಸಂಪರ್ಕ ಬೆಳೆಸುವ ಮೊದಲು ಮುತ್ತುಕುಮಾರನ್ ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ಆದರೆ, ನಂತರ ಮದುವೆಯಾಗಲು ನಿರಾಕರಿಸಿದ್ದಾರೆ ಎಂಬುದು ವಹಿದಾ ಅವರ ಆರೋಪವಾಗಿದೆ.

ಈ ಸಂಬಂಧ ವಹಿದಾ ಮೊದಲು ಚೆನ್ನೈ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ಬಳಿಕ ದೂರನ್ನು ವಿರುಗಂಬಾಕ್ಕಂ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದ್ದು, ಅಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಬಿಎನ್‌ಎಸ್ ಸೆಕ್ಷನ್ 69ರ ಅಡಿಯಲ್ಲಿ, ಅತ್ಯಾಚಾರದ ವ್ಯಾಪ್ತಿಗೆ ಬಾರದಿದ್ದರೂ ಮದುವೆಯಾಗುವ ಸುಳ್ಳು ಭರವಸೆ ಸೇರಿದಂತೆ ವಂಚನೆಯ ಮಾರ್ಗಗಳ ಮೂಲಕ ದೈಹಿಕ ಸಂಪರ್ಕ ಬೆಳೆಸುವುದಕ್ಕೆ ಸಂಬಂಧಿಸಿದ ಅಪರಾಧವನ್ನು ಪರಿಗಣಿಸಲಾಗುತ್ತದೆ.

ನವೆಂಬರ್ 9ರಂದು ವಹಿದಾ ಅವರು ಮುತ್ತುಕುಮಾರನ್ ಜೊತೆಗಿನ ಸಂಬಂಧದ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡ ಬಳಿಕ ಈ ವಿಚಾರ ಬಹಿರಂಗವಾಗಿತ್ತು. ಇಬ್ಬರೂ ಜೊತೆಯಾಗಿರುವ ವಿಡಿಯೊವನ್ನು ಪ್ರಕಟಿಸಿದ್ದ ಅವರು, ಮುತ್ತುಕುಮಾರನ್ ನೀಡಿದ್ದ ಭರವಸೆಗಳ ಬಗ್ಗೆ ಪ್ರಶ್ನಿಸಿದ್ದರು. ತಮ್ಮ ಪೋಸ್ಟ್‌ನಲ್ಲಿ, “ನೀನು ಹೇಳಿದ್ದೆಲ್ಲವೂ ನಿನಗೆ ಕೇವಲ ತಮಾಷೆಯಾಗಿತ್ತು” ಎಂದು ಬರೆದುಕೊಂಡಿದ್ದರು.

ಇದರ ಬೆನ್ನಲ್ಲೇ ವಹಿದಾ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವರದಿಗಳೂ ಪ್ರಕಟವಾಗಿದ್ದವು. ಈ ಪ್ರಕರಣದ ಕುರಿತು ಹಿರಿಯ ಗೀತರಚನೆಕಾರ ತಾಮರೈ ಕೂಡ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿದ್ದು, ಮುತ್ತುಕುಮಾರನ್ ಅವರನ್ನು ಟೀಕಿಸಿ, ಆರೋಪಗಳ ಬಗ್ಗೆ ತಮ್ಮ ಕಡೆಯ ಸ್ಪಷ್ಟನೆ ನೀಡುವಂತೆ ಒತ್ತಾಯಿಸಿದ್ದಾರೆ.

ನಟ ವಿಜಯ್ ಸೇತುಪತಿ ನಿರೂಪಣೆಯ ‘ಬಿಗ್ ಬಾಸ್ ತಮಿಳು ಸೀಸನ್-8’ರಲ್ಲಿ ಸ್ಪರ್ಧಿಸುವ ಮೂಲಕ ಮುತ್ತುಕುಮಾರನ್ ಜನಪ್ರಿಯತೆ ಗಳಿಸಿದ್ದರು. 2025ರ ಜನವರಿ 19ರಂದು ನಡೆದ ಫಿನಾಲೆಯಲ್ಲಿ ಅವರು ಕಾರ್ಯಕ್ರಮದ ವಿಜೇತರಾಗಿ ಹೊರಹೊಮ್ಮಿದ್ದರು.

ನಟ ವಿಜಯ್ ಸೇತುಪತಿ ನಿರೂಪಣೆಯ ‘ಬಿಗ್ ಬಾಸ್ ತಮಿಳು ಸೀಸನ್ 8’ರಲ್ಲಿ ಭಾಗವಹಿಸುವ ಮೂಲಕ ಮುತ್ತುಕುಮಾರನ್ ಅಪಾರ ಜನಪ್ರಿಯತೆ ಗಳಿಸಿದ್ದರು. ಜನವರಿ 19, 2025ರಂದು ನಡೆದ ಫಿನಾಲೆಯಲ್ಲಿ ಅವರು ಶೋನ ವಿಜೇತರಾಗಿ ಹೊರಹೊಮ್ಮಿದ್ದರು.

Ad Widget
Continue Reading

ಅಪರಾಧ

Mangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ

Published

on

Ad Widget

Ad Widget

Ad Widget

Ad Widget

ಮಂಗಳೂರು ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮಂಗಳೂರು ಸರ್ಕೀಟ್ ಹೌಸ್ ಮುಂಭಾಗದ ಕದ್ರಿ ಯುದ್ಧ ಸ್ಮಾರಕದ ಬಳಿ 1971ರಲ್ಲಿ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಭಾಗವಹಿಸಿದ್ದ ಟಿ-55 ಯುದ್ಧ ಟ್ಯಾಂಕ್‌ನ್ನು ಸಾರ್ವಜನಿಕರ ವೀಕ್ಷಣೆಗಾಗಿ ಎತ್ತರದ ವೇದಿಕೆಯಲ್ಲಿ ಇರಿಸಲಾಗಿದೆ.

Ad Widget

Ad Widget <> Ad Widget

ರಾತ್ರಿ ವೇಳೆ ಇಬ್ಬರು ಯುವಕರು ಟ್ಯಾಂಕ್ ಮೇಲೆ ಹತ್ತಿ, ಅದರ ಹ್ಯಾಚ್ ತೆರೆದು ಒಳಗೆ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ತಮ್ಮ ಕಿಡಿಗೇಡಿತನದ ವರ್ತನೆಯನ್ನು ವಿಡಿಯೋ ಮಾಡಿಕೊಂಡಿರುವ ಯುವಕರು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ವಿಡಿಯೋ ಇದೀಗ ವೈರಲ್ ಆಗಿದೆ.

ದೇಶದ ಯುದ್ಧ ಇತಿಹಾಸ ಹಾಗೂ ಸೈನಿಕರ ಶೌರ್ಯ, ತ್ಯಾಗದ ಸಂಕೇತವಾಗಿ ಇರಿಸಲಾಗಿರುವ ಟ್ಯಾಂಕ್ ಬಳಿ ಯುವಕರು ಇಂತಹ ವರ್ತನೆ ತೋರಿರುವುದಕ್ಕೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Ad Widget

Ad Widget

ಕದ್ರಿ ಪೊಲೀಸ್ ಠಾಣೆಯ ಎದುರಿನಲ್ಲೇ ನಡೆದಿರುವ ಈ ಘಟನೆಗೆ ಸಂಬಂಧಿಸಿದಂತೆ, ವಿಡಿಯೋದಲ್ಲಿರುವ ಯುವಕರನ್ನು ಪತ್ತೆಹಚ್ಚಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕ ವಲಯದಿಂದ ಆಗ್ರಹ ವ್ಯಕ್ತವಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!