ದಕ್ಷಿಣ ಕನ್ನಡ
Dakshina Kannada | ದಕ್ಷಿಣ ಕನ್ನಡ ನೂತನ ಜಿಲ್ಲಾಧಿಕಾರಿಯಾಗಿ ಎಂ.ಆರ್ ರವಿಕುಮಾರ್ ನೇಮಕ
ಮಂಗಳೂರು: ದ.ಕ.ಜಿಲ್ಲೆಯ (Dakshina Kannada) ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್. ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.
ರವಿಕುಮಾರ್ ಅವರು ಪ್ರಸ್ತುತ ರಾಜೀವ್ ಗಾಂಧಿ ಆರೋಗ್ಯ ವಿವಿಯ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸುತ್ತಿದ್ದರು.
2012ರ ಕರ್ನಾಟಕ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ರವಿ ಕುಮಾರ್ ಈ ಹಿಂದೆ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದರು.
ಸಿಲ್ಕ್ ಮಾರ್ಕೇಟಿಂಗ್ ಬೋರ್ಡ್ ನ ಎಂಡಿ ಯಾಗಿಯೂ ಕಾರ್ಯನಿರ್ವಹಿಸಿದ್ದರು.
ದ.ಕ ಜಿಲ್ಲಾಧಿಕಾರಿಯಾಗಿದ್ದ ಕೆವಿ ರಾಜೇಂದ್ರ ಅವರು ಇತ್ತೀಚೆಗೆ ಮೈಸೂರಿನ ಜಿಲ್ಲಾಧಿಕಾರಿಯಾಗಿ ನಿಯೋಜಿಸಿ ಸರ್ಕಾರ ವರ್ಗಾಯಿಸಿತ್ತು, ನಂತರ ದ. ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಡಾ. ಕುಮಾರ್ ಅವರನ್ನು ಪ್ರಭಾರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿತ್ತು, ಕುಮಾರ್ ಅವರು ದಾಖಲಾ ಜಿಲ್ಲಾಧಿಕಾರಿಯಾಗಿ ಅಧಿಕಾರವಹಿಸಿದ ಮೂರು ದಿನದ ಒಳಗೆ ದ. ಕ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ ಆರ್ ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಿಸಿ ಬೆಂಗಳೂರಿನಿಂದ ವರ್ಗಾಯಿಸಲಾಗಿದೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
-
ಸ್ಥಳೀಯ7 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್7 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಅಂತರ ರಾಜ್ಯ24 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಅಪರಾಧ6 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಸಿನೆಮಾ5 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಅಪರಾಧ5 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಬಿಗ್ ನ್ಯೂಸ್5 hours agoGreen card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ
-
ಮಂಗಳೂರು23 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ


















