Connect with us

ಅಪರಾಧ

Missing Case ವಿಟ್ಲ : ನಾಪತ್ತೆಯಾಗಿದ್ದ ವಿವಾಹಿತ ಯುವತಿಯನ್ನು ಪತ್ತೆ ಹಚ್ಚಿದ ಪೊಲೀಸರು

Published

on



Ad Widget

Ad Widget

Ad Widget

Ad Widget

ವಿಟ್ಲ: ನ 1 :   ಅ. 29ರಂದು ಕಾಣೆಯಾಗಿದ್ದ ವಿಟ್ಲ ಪೇಟೆಯ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ವಿವಾಹಿತ ಯುವತಿ  ಅ 31 ರಂದು ಮುಡಿಪು ಎಂಬಲ್ಲಿ ಪತ್ತೆಯಾಗಿದ್ದಾರೆ.  ಬಂಟ್ವಾಳ ತಾಲೂಕಿನ ವಿಟ್ಲಪಡ್ನೂರು ಗ್ರಾಮದ ಕಡಂಬು ನಿವಾಸಿ ನಾಗೇಶ್‌ ಎಂಬವರ ಪತ್ನಿ ಕವಿತಾ (29) ನಾಪತ್ತೆಯಾಗಿ, ಇದೀಗ ಪತ್ತೆಯಾದವರು.

Ad Widget

Ad Widget

Ad Widget

Ad Widget

ಕವಿತಾರವರು  ವಿಟ್ಲದ  ಬೇಕರಿಯಲ್ಲಿ ಉದ್ಯೋಗಿಯಾಗಿದ್ದರು. ಅ .29 ರಂದು ಅವರು ಎಂದಿನಂತೆ ಅಂಗಡಿಗೆ ಕೆಲಸಕ್ಕೆ ತೆರಳಿದ್ದಾರೆ. ಸಂಜೆ ತಾಯಿ ಮನೆಗೆ ಹೋಗುತ್ತೇನೆಂದು ಬೆಳಗ್ಗೆ ಪತಿಯ  ಮನೆಯಲ್ಲಿ ತಿಳಿಸಿದ್ದರು. . ಆದರೆ ಸಂಜೆ  ಆಕೆ ತಾಯಿ ಮನೆಗೆ ಹೋಗಿಲ್ಲ. ಆದರೆ ಸಂಜೆ ಅಂಗಡಿಯಿಂದ ತೆರಳುವಾಗ ಕೂಡ ತಾಯಿ ಮನೆಗೆ ಹೋಗುವುದಾಗಿ ಸಹ ಕೆಲಸಗಾರರಲ್ಲಿ ತಿಳಿಸಿದ್ದರು ಎಂದು ಹೇಳಲಾಗುತ್ತಿದೆ.ʼ

Ad Widget

Ad Widget

Ad Widget alt="Ad Widget"/>

Ad Widget

ಅ.29 ರಂದು ಸಂಜೆ 6 ಗಂಟೆಯಾದರೂ ಕವಿತಾ ಮನೆಗೆ ಬಾರದೇ ಇದ್ದಾಗ ಸಹೋದರ  ಆಕೆಯ ಮೊಬೈಲ್‌ ಗೆ ಕರೆ ಮಾಡಿದ್ದಾರೆ. ಈ ವೇಳೆ ಆಕೆಯ ಮೊಬೈಲ್‌ ಸ್ವಿಚ್‌ ಆಪ್‌ ಬರುತಿತ್ತು. ಹೀಗಾಗಿ ಕವಿತಾಳ ತವರು ಮನೆಯವರು ಪತಿಗೆ ಮಾಹಿತಿ ನೀಡಿ ಆಕೆಗಾಗಿ ಎಲ್ಲ ಕಡೆ ಹುಡುಕಾಟ ನಡೆಸಿದ್ದಾರೆ. ಆದರೇ ಆಕೆ ಎಲ್ಲಿಯೂ ಪತ್ತೆಯಾಗಿರಲಿಲ್ಲ.

Ad Widget

Ad Widget <> Ad Widget

ಹೀಗಾಗಿ ಆಕೆಯ ಪತಿ ವಿಟ್ಲ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಡಿಪು ಬಳಿ ಆಕೆಯನ್ನು ಪತ್ತೆ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ. ಆದರೇ ಆಕೆ ತವರು ಮನೆಗೂ ಹೋಗದೆ, ಪತಿಯ ಮನೆಗೂ ಹೋಗದೆ , ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡು ಮುಡಿಪುವಿಗೆ ತೆರಳಲು ಕಾರಣವೇನು? ಅಲ್ಲಿ ಆಕೇ ಯಾರ ಮನೆಯಲ್ಲಿದ್ದರು ಎನ್ನುವ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ



Ad Widget
Ad Widget
Click to comment

Leave a Reply

ಸ್ಥಳೀಯ

Navoor clinic-ನಾವೂರು ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ಘಟನಾ ಸ್ಥಳಕ್ಕೆ ಎಎಸ್ಪಿ ಭೇಟಿ, ಪರಿಶೀಲನೆ

Published

on



Ad Widget

Ad Widget

Ad Widget

Ad Widget

ಡೀಸೆಲ್ ಸುರಿದು ಬೆಂಕಿ ಹಚ್ಚಲಾಗಿದ್ದ ನಾವೂರು ಆರೋಗ್ಯ ಕ್ಲಿನಿಕ್‌ಗೆ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ ಅವರು ಅ. 8ರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Ad Widget

Ad Widget

Ad Widget

Ad Widget

ನಾವೂರು: ಡೀಸೆಲ್ ಸುರಿದು ಬೆಂಕಿ ಹಚ್ಚಲಾಗಿದ್ದ ನಾವೂರು ಆರೋಗ್ಯ ಕ್ಲಿನಿಕ್‌ಗೆ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ ಅವರು ಅ. 8ರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Ad Widget

Ad Widget

Ad Widget alt="Ad Widget"/>

Ad Widget

ಈ ವೇಳೆ ಘಟನಾ ಸ್ಥಳವನ್ನು ಪರಿಶೀಲಿಸಿದ ಅವರು, ಕ್ಲಿನಿಕ್‌ನ ವೈದ್ಯ ಡಾ. ಪ್ರದೀಪ್ ಅವರಿಂದ ಘಟನೆಯ ಕುರಿತು ಮಾಹಿತಿ ಪಡೆದುಕೊಂಡರು.

Ad Widget

Ad Widget <> Ad Widget

ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ, ಕೃತ್ಯದಲ್ಲಿ ಭಾಗಿಯಾದ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಿ ನ್ಯಾಯ ಒದಗಿಸುವ ಭರವಸೆಯನ್ನು ಅವರು ನೀಡಿದರು.



Ad Widget

ಈ ಸಂದರ್ಭದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.

Continue Reading

ಅಪರಾಧ

Mangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್‌- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!

Published

on



Ad Widget

Ad Widget

Ad Widget

Ad Widget

ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಅ.8ರಂದು ರಾತ್ರಿ ಸುಮಾರು 10 ಗಂಟೆಗೆ ಉಳ್ಳಾಲ ತಾಲೂಕಿನ ಕುಂಪಲದ ಡಿಮಾರ್ಟ್ ಸಮೀಪ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಎಂಡಿಎಂಎ, ಮೂರು ಮೊಬೈಲ್ ಫೋನ್‌ಗಳು, ಮಾದಕವಸ್ತು ಸಾಗಾಟಕ್ಕೆ ಬಳಸಿದ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಮತ್ತು ಆಟೋ ರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್ ಹಾಗೂ ವಾಟರ್ ಪ್ಯೂರಿಫೈಯರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹1,63,84,000 ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget <> Ad Widget

ಬಂಧಿತ ಆರೋಪಿಗಳು:
ಅಬ್ದುಲ್ ಹಾಪೀಲ್ (25) ಮಂಗಳಪಾಡಿ, ಕಾಸರಗೋಡು
ಜಿಯಾವುಲ್ ಹಕ್ (30) ಕಸಬಾ ಬೆಂಗ್ರೆ, ಕೂಳೂರು, ಮಂಗಳೂರು
ಅಲ್ತಾಫ್ (28) ಪಾಂಡೇಶ್ವರ, ಮಂಗಳೂರು



Ad Widget

ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಬಚ್ಚಿಟ್ಟು ಸಾಗಾಟಕ್ಕೆ ಸಂಚು
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಪಂಜಾಬ್‌ನ ಅಮೃತಸರದಿಂದ ಎಂಡಿಎಂಎ ಖರೀದಿಸಿ, ಅದನ್ನು ವಾಟರ್ ಪ್ಯೂರಿಫೈಯರ್‌ನ ನೀರು ಸಂಗ್ರಹಿಸುವ ಭಾಗದಲ್ಲಿ ಭದ್ರವಾಗಿ ಬಚ್ಚಿಡುತ್ತಿದ್ದರು. ಬಳಿಕ ಕೋರಿಯರ್ ಮೂಲಕ ಮಂಗಳೂರಿಗೆ ಕಳುಹಿಸಿ, ಇಲ್ಲಿಂದ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಿಗೆ ಪೂರೈಕೆ ಮಾಡಿ ಮಾರಾಟ ಮಾಡಲು ಸಂಚು ರೂಪಿಸಿದ್ದರು ಎನ್ನಲಾಗಿದೆ.

Ad Widget

Ad Widget

ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಕಾರ್ಯಾಚರಣೆ ನಡೆಸಿ ಜಾಲವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳ ವಿರುದ್ಧ ಈ ಹಿಂದೆಯೂ ಪ್ರಕರಣ
ಬಂಧಿತ ಅಬ್ದುಲ್ ಹಾಪೀಲ್ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಜಿಯಾವುಲ್ ಹಕ್ ದುಬೈನ ರಾಸ್ ಅಲ್ ಖೈಮಾದಲ್ಲಿ ಮಾದಕವಸ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ಮೂರು ವರ್ಷಗಳ ಜೈಲು ಶಿಕ್ಷೆ ಅನುಭವಿಸಿ ಭಾರತಕ್ಕೆ ಮರಳಿದ್ದಾನೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಅಲ್ತಾಫ್ ವಿರುದ್ಧವೂ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು.

ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಬಂಧಿತ ಮೂವರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Ad Widget
Continue Reading

ಅಪರಾಧ

Raid-ರಾಜ್ಯದ 45 ಐಸ್‌ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!

Published

on



Ad Widget

Ad Widget

Ad Widget

Ad Widget

ರಾಜ್ಯಾದ್ಯಂತ ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು, ಬೆಂಗಳೂರು, ಮೈಸೂರು ಮತ್ತು ರಾಯಚೂರಿನ ನಾಲ್ಕು ಘಟಕಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಉಲ್ಲಂಘನೆಗಳು ಪತ್ತೆಯಾಗಿವೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು, ಅ. 9: ರಾಜ್ಯಾದ್ಯಂತ ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು, ಬೆಂಗಳೂರು, ಮೈಸೂರು ಮತ್ತು ರಾಯಚೂರಿನ ನಾಲ್ಕು ಘಟಕಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಉಲ್ಲಂಘನೆಗಳು ಪತ್ತೆಯಾಗಿವೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ನಾಲ್ಕು ಘಟಕಗಳಲ್ಲಿ ನಿಯಮ ಉಲ್ಲಂಘನೆ
ಪರಿಶೀಲನೆ ವೇಳೆ ಬೆಂಗಳೂರಿನ ಜಯನಗರ 3ನೇ ಬ್ಲಾಕ್‌ನ ಸಾವರ ಐಸ್‌ಕ್ರೀಂ ಕೆಫೆ, ಬನ್ನೇರುಘಟ್ಟ ರಸ್ತೆಯ ಬಿಳೇಕಹಳ್ಳಿಯ ಎಂ.ಎನ್. ಎಂಟರ್‌ಪ್ರೈಸಸ್, ಮೈಸೂರಿನ ಜಾನ್ ಕ್ಯಾಂಡಿ ಐಸ್‌ಕ್ರೀಂ ತಯಾರಿಕಾ ಘಟಕ ಹಾಗೂ ರಾಯಚೂರಿನ ಜೆಮಿನಿ ಐಸ್‌ಕ್ರೀಂ ತಯಾರಿಕಾ ಘಟಕಗಳಲ್ಲಿ ನಿಯಮ ಉಲ್ಲಂಘನೆ ಕಂಡುಬಂದಿದೆ.

Ad Widget

Ad Widget <> Ad Widget

ಈ ಘಟಕಗಳ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಹಾಗೂ ಸಂಬಂಧಿತ ನಿಯಮಗಳ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.



Ad Widget

70 ಆಹಾರ ಮಾದರಿಗಳ ಸಂಗ್ರಹ
ವಿಶೇಷ ತಪಾಸಣೆಯ ಸಂದರ್ಭದಲ್ಲಿ ವಿವಿಧ ಘಟಕಗಳಿಂದ ಐಸ್‌ಕ್ರೀಂ, ಹಾಲು, ಹಾಲಿನ ಪುಡಿ, ಫ್ಲೇವರಿಂಗ್ ಪದಾರ್ಥಗಳು, ಸಕ್ಕರೆ, ಆಹಾರ ಸೇರ್ಪಡೆ ಪದಾರ್ಥಗಳು ಸೇರಿದಂತೆ ವಿವಿಧ ಕಚ್ಚಾವಸ್ತುಗಳ ಒಟ್ಟು 70 ಮಾದರಿಗಳನ್ನು ಸಂಗ್ರಹಿಸಲಾಗಿದೆ.

Ad Widget

Ad Widget

ಈ ಮಾದರಿಗಳನ್ನು ಗುಣಮಟ್ಟ ಮತ್ತು ಆಹಾರ ಸುರಕ್ಷತಾ ಮಾನದಂಡಗಳ ಪರಿಶೀಲನೆಗಾಗಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. ಪ್ರಯೋಗಾಲಯದ ವರದಿಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ
ಪರಿಶೀಲನೆಯ ವೇಳೆ ಅವಧಿ ಮೀರಿದ ಐಸ್‌ಕ್ರೀಂ, ಹಾಲು, ಬಿಸ್ಕತ್ ಹಾಗೂ ಕೊಬ್ಬರಿ ಪುಡಿ ಪತ್ತೆಯಾಗಿವೆ. ಅಲ್ಲದೆ, ಕೆಲವು ಆಹಾರ ಉತ್ಪನ್ನಗಳ ಮೇಲೆ ಲೇಬಲಿಂಗ್ ನಿಯಮಗಳನ್ನು ಸರಿಯಾಗಿ ಪಾಲಿಸದಿರುವುದೂ ಅಧಿಕಾರಿಗಳ ಗಮನಕ್ಕೆ ಬಂದಿದೆ ಎಂದು ಪ್ರಕಟಣೆ ತಿಳಿಸಿದೆ.

ಆಹಾರ ಪದಾರ್ಥಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಇಂತಹ ತಪಾಸಣೆಗಳನ್ನು ಮುಂದುವರಿಸಲಾಗುವುದು. ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading