ಉದ್ಯೋಗ
Intelligence Bureau Recruitment 2022:10th ಪಾಸಾದವರಿಗೆ ಇಂಟೆಲಿಜೆನ್ಸ್ ಬ್ಯುರೊದಲ್ಲಿ 1671 ಹುದ್ದೆಗಳು – ಇಲ್ಲಿದೆ ಅರ್ಜಿ ಸಲ್ಲಿಸುವ ವಿವರ
Intelligence Bureau Recruitment 2022: ಇಂಟೆಲಿಜೆನ್ಸ್ ಬ್ಯುರೊ (ಐಬಿ) ಸೆಕ್ಯೂರಿಟಿ ಅಸಿಸ್ಟಂಟ್ / ಎಕ್ಸಿಕ್ಯೂಟಿವ್ (ಎಸ್‌ಎ/ಮಾಜಿ ಸೈನಿಕ) ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ / ಜೆನೆರಲ್ (ಎಂಟಿಎಸ್ / ಜೆನೆರಲ್) ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ
ಹುದ್ದೆಗಳ ವಿವರ
ಸೆಕ್ಯೂರಿಟಿ ಅಸಿಸ್ಟಂಟ್ / ಎಕ್ಸಿಕ್ಯೂಟಿವ್ : 1521
ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್): 150
ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ ಪಾಸ್ ಮಾಡಿರಬೇಕು.
ವಯಸ್ಸಿನ ಅರ್ಹತೆಗಳು
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯಸ್ಸಿನ ಅರ್ಹತೆ ಹುದ್ದೆವಾರು ಕೆಳಗಿನಂತಿದೆ.
ಸೆಕ್ಯೂರಿಟಿ ಅಸಿಸ್ಟಂಟ್ / ಎಕ್ಸಿಕ್ಯೂಟಿವ್ ಹುದ್ದೆಗೆ 25 ವರ್ಷ.
ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗೆ 27 ವರ್ಷ.
ವಯೋಮಿತಿ ಸಡಿಲಿಕೆ :
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ ವಯೋಸಡಿಲಕೆ
ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ ವಯೋಸಡಿಲಕೆ
ವೇತನಶ್ರೇಣಿ:
ಗುಪ್ತಚರ ಇಲಾಖೆಯಿಂದ ಹೊರಡಿಸಲಾದ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.18000-69100/- ವೇತನ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಎಲ್ಲಾ ವರ್ಗದ ಅಭ್ಯರ್ಥಿಗಳು ರೂ. 450 ಅರ್ಜಿ ಶುಲ್ಕ ಪಾವತಿಸಬೇಕು. ಅದರಲ್ಲಿ
ಸಾಮಾನ್ಯ ವರ್ಗ,ಈ ಡಬ್ಲ್ಯೂ ಎಸ್ , ಒಬಿಸಿ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕದ ಜೊತೆಗೆ ರೂ. 50 ಪರೀಕ್ಷಾ ಶುಲ್ಕ ಪಾವತಿಸಬೇಕು.
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು)
ಪ್ರಮುಖ ದಿನಾಂಕಗಳು
ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 05-11-2022
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 25-11-2022
ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ : ಎಸ್‌ಬಿಐ ಚಲನ್ ಮೂಲಕ ನವೆಂಬರ್ 29 ರೊಳಗೆ, ಆನ್‌ಲೈನ್ ಮೂಲಕ ನವೆಂಬರ್ 25 ರೊಳಗೆ ಅರ್ಜಿ ಶುಲ್ಕ ಪಾವತಿ ಮಾಡಬೇಕು.
ಆಯ್ಕೆ ವಿಧಾನ:
ಆನ್‌ಲೈನ್ ಪರೀಕ್ಷೆ, ಆಫ್‌ಲೈನ್ ಪರೀಕ್ಷೆ, ಪರ್ಸನಾಲಿಟಿ ಟೆಸ್ಟ್ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಆನ್‌ಲೈನ್ ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಅನ್ನು ನವೆಂಬರ್ 05 ರಂದು ಮಾನವ ಸಂಪನ್ಮೂಲ ಸಚಿವಾಲಯದ ಅಧಿಕೃತ ವೆಬ್‌ಸೈಟ್ ನಲ್ಲಿ ಬಿಡುಗಡೆ ಮಾಡಲಾಗುತ್ತದೆ.
ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಮಾನವ ಸಂಪನ್ಮೂಲ ಸಚಿವಾಲಯದ ಅಧಿಕೃತ ವೆಬ್‌ಸೈಟ್ ವಿಳಾಸ : https://www.mha.gov.in/
ಉದ್ಯೋಗ
Puttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
ಪುತ್ತೂರು: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
TVS ಸಂಸ್ಥೆಯ ಪ್ರೀಮಿಯಂ, EV ಹಾಗೂ IC ವಿಭಾಗಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗಿದ್ದು, ‘ಪುತ್ತೂರಿನ ಅತಿದೊಡ್ಡ 2-ವೀಲರ್ ಜಾಬ್ ಓಪನಿಂಗ್’ ಎಂಬ ಘೋಷಣೆಯೊಂದಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.
ಸೇಲ್ಸ್ ವಿಭಾಗದಲ್ಲಿ ಹಲವು ಅವಕಾಶ
ಪುತ್ತೂರು ಸೇಲ್ಸ್ ವಿಭಾಗದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್, ಸೇಲ್ಸ್ ಮ್ಯಾನೇಜರ್, ಎಕ್ಸ್‌ಚೇಂಜ್ ಕೋಆರ್ಡಿನೇಟರ್, ಸೇಲ್ಸ್ ಟೆಲಿಕಾಲಿಂಗ್ (CRE), ಅಕೌಂಟ್ಸ್ ಮ್ಯಾನೇಜರ್, ಫೈನಾನ್ಸ್ ಮ್ಯಾನೇಜರ್, ರಿಸೆಪ್ಷನಿಸ್ಟ್, RTO ಎಕ್ಸಿಕ್ಯೂಟಿವ್, ಇನ್‌ವಾಯ್ಸ್ ಎಕ್ಸಿಕ್ಯೂಟಿವ್, ಅಕೌಂಟ್ಸ್ ಎಕ್ಸಿಕ್ಯೂಟಿವ್, ಫೈನಾನ್ಸ್ ಕೋಆರ್ಡಿನೇಟರ್ ಹಾಗೂ ಇನ್ಶೂರೆನ್ಸ್ ಎಕ್ಸಿಕ್ಯೂಟಿವ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸರ್ವೀಸ್ ವಿಭಾಗದಲ್ಲೂ ಭರ್ಜರಿ ನೇಮಕಾತಿ
ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಫ್ಲೋರ್ ಸೂಪರ್‌ವೈಸರ್, ಟೆಕ್ನಿಷಿಯನ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಪಾರ್ಟ್ಸ್ ಮ್ಯಾನೇಜರ್, ವಾಷಿಂಗ್ ಸಿಬ್ಬಂದಿ, PDI ಟೆಕ್ನಿಷಿಯನ್, ಸರ್ವೀಸ್ ಮ್ಯಾನೇಜರ್, ನೆಟ್‌ವರ್ಕ್ ಕೋಆರ್ಡಿನೇಟರ್, ವಾರಂಟಿ ಇನ್‌ಚಾರ್ಜ್, ಅಕ್ಸಿಡೆಂಟ್ ಸೂಪರ್‌ವೈಸರ್, CRE ಟೆಲಿಕಾಲಿಂಗ್, CRM, PDI ಸೂಪರ್‌ವೈಸರ್ ಹಾಗೂ ಪೇಂಟರ್ ಮತ್ತು ಡೆಂಟಿಂಗ್ ಹುದ್ದೆಗಳಿಗೆ ಅವಕಾಶವಿದೆ.

ಬೆಳ್ಳಾರೆಯಲ್ಲೂ ಉದ್ಯೋಗದ ಬಾಗಿಲು ತೆರೆದಿದೆ
ಬೆಳ್ಳಾರೆ ಭಾಗದಲ್ಲಿಯೂ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಫ್ಲೋರ್ ಸೂಪರ್‌ವೈಸರ್, ಟೆಕ್ನಿಷಿಯನ್ ಹಾಗೂ ವಾಷಿಂಗ್ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸೇಲ್ಸ್ ವಿಭಾಗದಲ್ಲಿ 6 ಸೇಲ್ಸ್ ಎಕ್ಸಿಕ್ಯೂಟಿವ್ ಹಾಗೂ 2 ರಿಸೆಪ್ಷನಿಸ್ಟ್ ಹುದ್ದೆಗಳಿಗೂ ಅವಕಾಶವಿದೆ.
PF, ESI ಜೊತೆಗೆ ₹25 ಸಾವಿರದವರೆಗೆ ಗಳಿಕೆ!
ಆಯ್ಕೆಯಾಗುವ ಅಭ್ಯರ್ಥಿಗಳಿಗೆ PF, ESI, ಸ್ಪಾಟ್ ಇನ್ಸೆಂಟಿವ್, ಮಾಸಿಕ ಹಾಗೂ ತ್ರೈಮಾಸಿಕ ಇನ್ಸೆಂಟಿವ್ ಸೌಲಭ್ಯಗಳು ದೊರೆಯಲಿವೆ. 25 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕೆ ಪೆಟ್ರೋಲ್ ವೋಚರ್ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,000 ವರೆಗೆ ಗಳಿಸುವ ಅವಕಾಶ ಇದೆ ಎಂದು ಸಂಸ್ಥೆ ತಿಳಿಸಿದೆ.
ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರು ಮಾತ್ರವಲ್ಲದೆ, ಸೇಲ್ಸ್, ಅಕೌಂಟ್ಸ್, ಫೈನಾನ್ಸ್, ಟೆಲಿಕಾಲಿಂಗ್, ಗ್ರಾಹಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಹುಡುಕುತ್ತಿರುವವರೂ ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.
ಉದ್ಯೋಗಾವಕಾಶ ಸೀಮಿತವಾಗಿರುವುದರಿಂದ ಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಬಹುದು.
📞 ಸಂಪರ್ಕ: +91 82965 79206
📍 ವಿಳಾಸ: ಶ್ರೀ ತಿರುಮಲಾ TVS, ಬೈಪಾಸ್ ಜಂಕ್ಷನ್, ಮಂಜಲ್ಪಡ್ಡು, ಮೇನ್ ರೋಡ್, ಬೋಳ್ವಾರ್ ವೆಸ್ಟ್, ಪುತ್ತೂರು–574201.
ಉದ್ಯೋಗ
Constable recruitment: ಕಾನ್‌ಸ್ಟೆಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ; 3,991 ಹುದ್ದೆಗಳಿಗೆ 19,396 ಅಭ್ಯರ್ಥಿಗಳು
ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಬೆಂಗಳೂರು, ಸೆ.25: ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 3,991 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಜ್ಯಾದ್ಯಂತ 19,396 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಉಳಿಕೆ ಮೂಲ ವೃಂದದ (ಆರ್‌ಪಿಸಿ) 3,395 ಹುದ್ದೆಗಳಿಗೆ 16,454 ಅಭ್ಯರ್ಥಿಗಳು ಹಾಗೂ ಕಲ್ಯಾಣ ಕರ್ನಾಟಕ (ಕೆಕೆ) ವೃಂದದ 596 ಹುದ್ದೆಗಳಿಗೆ 2,942 ಅಭ್ಯರ್ಥಿಗಳು ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.
ಮಂಗಳೂರಿನಲ್ಲಿ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕಾರವಾರ), ಚಿಕ್ಕಮಗಳೂರು ಹಾಗೂ ಮಂಗಳೂರು ನಗರ ಘಟಕಗಳ ವ್ಯಾಪ್ತಿಯ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಈ ಅಭ್ಯರ್ಥಿಗಳಿಗೆ ಸೆ.28ರಿಂದ ಅ.3ರವರೆಗೆ ಮಂಗಳೂರಿನ ಲಾಲ್‌ಬಾಗ್‌ನ ಮಂಗಳ ಕ್ರೀಡಾಂಗಣದಲ್ಲಿ ದೈಹಿಕ ಪರೀಕ್ಷೆ ನಡೆಯಲಿದೆ.
ಕರೆಪತ್ರ ಡೌನ್‌ಲೋಡ್‌ಗೆ ಸೂಚನೆ
ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ವೆಬ್‌ಸೈಟ್‌ನಿಂದ ತಮ್ಮ ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಕರೆಪತ್ರದಲ್ಲಿ ನಮೂದಿಸಿರುವ ದಿನಾಂಕದಂದು ನಿಗದಿತ ಪರೀಕ್ಷಾ ಕೇಂದ್ರಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಪೊಲೀಸ್ ನೇಮಕಾತಿ ವಿಭಾಗ ಸೂಚಿಸಿದೆ.
ಕಾನ್‌ಸ್ಟೆಬಲ್ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ
ಇದೇ ವೇಳೆ, ಕೆಎಸ್‌ಆರ್‌ಪಿ, ಕೆಎಸ್‌ಐಎಸ್‌ಎಫ್ ಹಾಗೂ ಐಆರ್‌ಬಿ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿಗಾಗಿ ಸೆ.20ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕೇವಲ ಐದು ದಿನಗಳಲ್ಲಿ ಕೆಇಎ ಪ್ರಕಟಿಸಿದೆ.
ಪರೀಕ್ಷೆಯ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಸೆ.27ರೊಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬಹುದು ಎಂದು ಕೆಇಎ ತಿಳಿಸಿದೆ.
ಉಳಿಕೆ ಮೂಲ ವೃಂದದ 1,13,390 ಹಾಗೂ ಕಲ್ಯಾಣ ಕರ್ನಾಟಕ ವೃಂದದ 33,061 ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಬರೆದಿದ್ದರು. ಪರೀಕ್ಷೆ ನಡೆದ ದಿನವೇ ಎಲ್ಲ ಅಭ್ಯರ್ಥಿಗಳ ಒಎಂಆರ್ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಅಂತರ ರಾಜ್ಯ
Oracle-‘ಇಂದು ನಿಮ್ಮ ಕೊನೆಯ ಕೆಲಸದ ದಿನ’; Oracle ಉದ್ಯೋಗಿಗಳಿಗೆ ಮುಂಜಾನೆ ʻಇ-ಮೇಲ್ ʼಶಾಕ್
ಜಾಗತಿಕ ಸಾಫ್ಟ್‌ವೇರ್ ದೈತ್ಯ ಒರಾಕಲ್ (Oracle) ಸಂಸ್ಥೆಯ ಉದ್ಯೋಗಿಗಳಿಗೆ ಮಂಗಳವಾರ ಮುಂಜಾನೆ ಕಳುಹಿಸಲಾದ ಇ-ಮೇಲ್‌ವೊಂದು ಆತಂಕ ಮೂಡಿಸಿದೆ. “ನಿಮ್ಮ ಹುದ್ದೆಗೆ ಸಂಬಂಧಿಸಿದಂತೆ ಕೆಲವು ಕಠಿಣ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇವೆ. ಇಂದು ನಿಮ್ಮ ಕೊನೆಯ ಕೆಲಸದ ದಿನ” ಎಂದು ಇ-ಮೇಲ್‌ನಲ್ಲಿ ತಿಳಿಸಲಾಗಿದೆ ಎಂದು ಬಿಸಿನೆಸ್ ಇನ್‌ಸೈಡರ್ ವರದಿ ಮಾಡಿದೆ.
ನವದೆಹಲಿ, ಸೆ.16: ಜಾಗತಿಕ ಸಾಫ್ಟ್‌ವೇರ್ ದೈತ್ಯ ಒರಾಕಲ್ (Oracle) ಸಂಸ್ಥೆಯ ಉದ್ಯೋಗಿಗಳಿಗೆ ಮಂಗಳವಾರ ಮುಂಜಾನೆ ಕಳುಹಿಸಲಾದ ಇ-ಮೇಲ್‌ವೊಂದು ಆತಂಕ ಮೂಡಿಸಿದೆ. “ನಿಮ್ಮ ಹುದ್ದೆಗೆ ಸಂಬಂಧಿಸಿದಂತೆ ಕೆಲವು ಕಠಿಣ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇವೆ. ಇಂದು ನಿಮ್ಮ ಕೊನೆಯ ಕೆಲಸದ ದಿನ” ಎಂದು ಇ-ಮೇಲ್‌ನಲ್ಲಿ ತಿಳಿಸಲಾಗಿದೆ ಎಂದು ಬಿಸಿನೆಸ್ ಇನ್‌ಸೈಡರ್ ವರದಿ ಮಾಡಿದೆ.
ಮಂಗಳವಾರ ಬೆಳಗ್ಗೆ ಸುಮಾರು 6 ಗಂಟೆಗೆ ಉದ್ಯೋಗಿಗಳಿಗೆ ಈ ಇ-ಮೇಲ್ ಕಳುಹಿಸಲಾಗಿದೆ ಎನ್ನಲಾಗಿದ್ದು, ಸಂಸ್ಥೆಯ ವ್ಯಾಪಕ ಸಾಂಸ್ಥಿಕ ಪುನರ್‌ರಚನೆಯ ಭಾಗವಾಗಿ ಕೆಲವು ಹುದ್ದೆಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಲಾಗಿದೆ. ಆದರೆ, ನಿರ್ದಿಷ್ಟ ಉದ್ಯೋಗಿಯನ್ನು ವೈಯಕ್ತಿಕವಾಗಿ ಕೆಲಸದಿಂದ ತೆಗೆದುಹಾಕಲು ಕಾರಣವೇನು ಎಂಬುದನ್ನು ಇ-ಮೇಲ್‌ನಲ್ಲಿ ವಿವರಿಸಲಾಗಿಲ್ಲ.
ಉದ್ಯೋಗಿಗಳ ಕಂಪ್ಯೂಟರ್, ಇ-ಮೇಲ್, ವಾಯ್ಸ್‌ಮೇಲ್ ಹಾಗೂ ಫೈಲ್‌ಗಳಿಗೆ ಇರುವ ಲಾಗಿನ್ ಪ್ರವೇಶವನ್ನು ಶೀಘ್ರದಲ್ಲೇ ಸ್ಥಗಿತಗೊಳಿಸಲಾಗುವುದು ಎಂದು ಕಂಪನಿ ತಿಳಿಸಿದೆ. ಅಲ್ಲದೆ, ಪರಿಹಾರಧನ ಹಾಗೂ ಇತರ ಅಗತ್ಯ ದಾಖಲೆಗಳನ್ನು ಪಡೆಯಲು ವೈಯಕ್ತಿಕ ಇ-ಮೇಲ್ ವಿಳಾಸವನ್ನು ನೀಡುವಂತೆ ಉದ್ಯೋಗಿಗಳಿಗೆ ಸೂಚಿಸಲಾಗಿದೆ.
AI, ಕ್ಲೌಡ್ ಮೂಲಸೌಕರ್ಯ ವೆಚ್ಚದ ನಡುವೆ ಲೇಆಫ್
ಕೃತಕ ಬುದ್ಧಿಮತ್ತೆ (AI) ಹಾಗೂ ಕ್ಲೌಡ್ ಮೂಲಸೌಕರ್ಯ ಕ್ಷೇತ್ರದಲ್ಲಿ ಒರಾಕಲ್ ಭಾರಿ ಪ್ರಮಾಣದಲ್ಲಿ ಹೂಡಿಕೆ ಮಾಡುತ್ತಿರುವ ಸಂದರ್ಭದಲ್ಲೇ ಈ ಹೊಸ ಸುತ್ತಿನ ಉದ್ಯೋಗ ಕಡಿತ ನಡೆದಿದೆ ಎಂದು ವರದಿ ತಿಳಿಸಿದೆ. ಆದರೆ, ಪ್ರಸ್ತುತ ಸುತ್ತಿನಲ್ಲಿ ಎಷ್ಟು ಉದ್ಯೋಗಿಗಳು ಕೆಲಸ ಕಳೆದುಕೊಂಡಿದ್ದಾರೆ ಎಂಬುದನ್ನು ಒರಾಕಲ್ ಅಧಿಕೃತವಾಗಿ ಬಹಿರಂಗಪಡಿಸಿಲ್ಲ.
ಈಗಾಗಲೇ 21 ಸಾವಿರ ಉದ್ಯೋಗಿಗಳ ಕಡಿತ
2026ರ ಆರ್ಥಿಕ ವರ್ಷದಲ್ಲಿ ಒರಾಕಲ್ ತನ್ನ ಜಾಗತಿಕ ಸಿಬ್ಬಂದಿ ಬಳಗದ ಸುಮಾರು ಶೇ.13ರಷ್ಟು, ಅಂದರೆ ಸುಮಾರು 21,000 ಉದ್ಯೋಗಿಗಳನ್ನು ವಜಾಗೊಳಿಸಿತ್ತು ಎಂದು ವರದಿಯಾಗಿದೆ.
ಈ ಪುನರ್‌ರಚನಾ ಪ್ರಕ್ರಿಯೆಗಾಗಿ ಕಂಪನಿಯ ವೆಚ್ಚವು 2.8 ಬಿಲಿಯನ್ ಡಾಲರ್‌ವರೆಗೆ ಹೆಚ್ಚಾಗಿದೆ ಎನ್ನಲಾಗಿದೆ. ಉದ್ಯೋಗ ಕಡಿತಗಳ ಬಳಿಕ ಒರಾಕಲ್‌ನ ಜಾಗತಿಕ ಸಿಬ್ಬಂದಿ ಸಂಖ್ಯೆ ಸುಮಾರು 1.41 ಲಕ್ಷಕ್ಕೆ ಇಳಿದಿದೆ ಎಂದು ವರದಿ ತಿಳಿಸಿದೆ.
-
ನಿಧನ ವಾರ್ತೆ7 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು5 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ7 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ6 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ರಾಜ್ಯ7 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
Uncategorized8 hours agoCJP protest-ಇಂದು CJP ಪ್ರತಿಭಟನೆ : ದೆಹಲಿಗೆ ಬರಬೇಕಾಗಿದ್ದ 250 ರೈಲು ರದ್ದು, ಹಲವು ರೈಲಿನ ವೇಳಾಪಟ್ಟಿ ಬದಲಾವಣೆ : ಮೆಟ್ರೋ ಸಂಚಾರ ಸ್ಥಗಿತ – ಇಂಟರ್ ನೆಟ್ ಬಂದ್..! ‘ಹೆದರಿದ್ರಾ ಮೋದಿಜೀ..?’ ಎಂದ CJP
-
ಅಂತರ ರಾಜ್ಯ8 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?
-
ಅಂತರ ರಾಜ್ಯ6 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ


















