ಅಪರಾಧ
ಅಡಿಕೆ ಆರೋಗ್ಯಕ್ಕೆ ಹಾನಿಕರ ಎಂಬ ಜಾರ್ಖಂಡ್ ಬಿಜೆಪಿ ಸಂಸದನ ಹೇಳಿಕೆಗೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಖಂಡನೆ – ಮತ್ತೊಮ್ಮೆ ‘ವೈಜ್ಞಾನಿಕ ಸಂಶೋಧನೆಗೆ ಒತ್ತಾಯ
ಪುತ್ತೂರು : ನ : 12 : ಜಾರ್ಖಂಡ್ ಸಂಸದ ನಿಶಿಕಾಂತ್ ಅವರು ಅಡಿಕೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಹಾಗೂ ಹಾನಿಕಾರಕ’ ಎಂದು ಹೇಳಿರುವುದು ಖಂಡನೀಯ ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ತಿಳಿಸಿದೆ.
ಕಳೆದ ಹಲವು ವರ್ಷಗಳಿಂದ ಇಂತಹ ಹೇಳಿಕೆಗಳು ಆಗಾಗ ಕೇಳಿಬರುತ್ತಿದೆ. ಭಾರತೀಯ ಪರಂಪರೆಯಲ್ಲಿ ಅಡಿಕೆಯು ಪರಂಪರಾಗತವಾಗಿ ಬಳಕೆಯಾಗುತ್ತಿದೆ. ಅನ್ಯಾನ್ಯ ವೈಜ್ಞಾನಿಕ ವರದಿಗಳು ‘ಅಡಿಕೆ ಮಾತ್ರವೇ ಹಾನಿಕಾಕರವಲ್ಲ’ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಈ ವರದಿಯ ಹಿನ್ನೆಲೆಯಲ್ಲಿ ಮತ್ತೊಮ್ಮೆ ‘ವೈಜ್ಞಾನಿಕವಾದ ಸಂಶೋಧನೆ’ ನಡೆಯಬೇಕು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಒತ್ತಾಯಿಸುತ್ತಿದೆ.
ಭಾರತದಲ್ಲಿ ಸುಮಾರು ಐದರಿಂದ ರಿಂದ ಆರು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆಯನ್ನು ಬೆಳೆಯಲಾಗುತ್ತಿದೆ. ಏಳರಿಂದ ಎಂಟು ಲಕ್ಷ ಮೆಟ್ರಿಕ್ ಟನ್ ಅಡಿಕೆ ಉತ್ಪಾದನೆಯಾಗುತ್ತಿದೆ. ದೇಶದಲ್ಲಿ ಸುಮಾರು ಐದು ಲಕ್ಷ ಕೃಷಿಕರು ಅಡಿಕೆಯನ್ನೇ ನಂಬಿ ಬದುಕುತ್ತಿದ್ದಾರೆ. ಇಷ್ಟು ಮಾತ್ರವಲ್ಲ, ಅಡಿಕೆ ಮಾರುಕಟ್ಟೆಯ ಮೂಲಕವೂ ಲಕ್ಷಾಂತರ ಮಂದಿ ಬದುಕು ಸಾಗಿಸುತ್ತಿದ್ದಾರೆ. ದೇಶದಲ್ಲಿ ಕರ್ನಾಟಕ ಹಾಗೂ ಕೇರಳದಲ್ಲಿ ಅಡಿಕೆಯನ್ನು ಹೆಚ್ಚಾಗಿ ಬೆಳೆಯುತ್ತಿದ್ದಾರೆ. ಕರ್ನಾಟಕದ ಶೇ 60 ಭಾಗದಲ್ಲಿ ಅಡಿಕೆ ಬೆಳೆಯು ವಿಸ್ತಾರಗೊಂಡಿದೆ. ಅಡಿಕೆಯಿಂದಾಗಿ ಸರಕಾರಕ್ಕೂ ತೆರಿಗೆ ಹಾಗೂ ಇತರ ಮೂಲಗಳಿಂದ ಆದಾಯವೂ ಸಂದಾಯವಾಗುತ್ತಿದೆ.
ಇದೀಗ ‘ಅಡಿಕೆ ಹಾನಿಕಾರಕ’ ಎನ್ನುವ ವರದಿಗಳಿಂದ ಅಡಿಕೆ ಬೆಳೆಗಾರರು ಗೊಂದಲಕ್ಕೀಡಾಗಿದ್ದಾರೆ. ಕೃಷಿ ಬದುಕಿನ ವಿಷ್ಯದ ಬಗ್ಗೆ ಆತಂಕಿತರಾಗಿದ್ದಾರೆ. ಹೀಗಾಗಿ ಸರಕಾರವು ಮಧ್ಯಪ್ರವೇಶ ಮಾಡಿ ಅಡಿಕೆಯ ಬಗ್ಗೆ ಸರಿಯಾದ ವೈಜ್ಞಾನಿಕ ಸಂಶೋಧನೆ ನಡೆಸಿ ರೈತರಿಗೆ ಧೈರ್ಯ ತುಂಬಬೇಕು ಎಂದು ಅಡಿಕೆ ಬೆಳೆಗಾರರ ಸಂಘವು ಒತ್ತಾಯಿಸುತ್ತದೆ ಎಂದು ಅದು ಪ್ರಕಟನೆಯಲ್ಲಿ ತಿಳಿಸಿದೆ.

ಹಿನ್ನಲೆ :

ಇತ್ತಿಚೆಗೆ ಜಾರ್ಖಂಡ್ ಬಿಜೆಪಿ ಸಂಸದ ನಿಶಿಕಾಂತ್ ರವರು ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಅದನ್ನು ನಿಷೇಧಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದರು. ಈ ಪತ್ರ ಅಡಿಕೆ ಬೆಳೆಗಾರರಲ್ಲಿ ಆತಂಕಕ್ಕೆ ಕಾರಣವಾಗಿತ್ತು.
ಅಪರಾಧ
Digital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.25ರಂದು ಅಪರಿಚಿತ ವ್ಯಕ್ತಿಯೊಬ್ಬರು ಮಹಿಳೆಗೆ ಕರೆ ಮಾಡಿ ತಾನು ಮುಂಬೈನ ಕೊಲಾಬಾ ಪೊಲೀಸ್ ಅಧಿಕಾರಿ ಸಂದೀಪ್ ರಾವ್ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ನರೇಶ್ ಗೋಯಲ್ ಜತೆ ಹಣ ವರ್ಗಾವಣೆ, ಮಾದಕವಸ್ತು ವ್ಯವಹಾರ ಹಾಗೂ ಮಕ್ಕಳ ಕಳ್ಳಸಾಗಣೆ ಸೇರಿದಂತೆ ಹಲವು ಅಪರಾಧಗಳಲ್ಲಿ ನೀವು ಭಾಗಿಯಾಗಿದ್ದೀರಿ. ಈ ಸಂಬಂಧ ಮುಂಬೈ ಕೊಲಾಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿ ಭಯ ಹುಟ್ಟಿಸಿದ್ದಾನೆ.
ಬಳಿಕ ಮತ್ತೊಂದು ಮೊಬೈಲ್ ಸಂಖ್ಯೆಯಿಂದ ವಾಟ್ಸ್‌ಆ್ಯಪ್ ವಿಡಿಯೊ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ತಾನು ಸಿಬಿಐ ಅಧಿಕಾರಿ ಸಮಾಧಾನ್ ಪವಾರ್ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಮಟ್ಟದ ಅಪರಾಧದಲ್ಲಿ ನೀವು ಭಾಗಿಯಾಗಿದ್ದೀರಿ. ‘ನ್ಯಾಷನಲ್ ಸೀಕ್ರೆಸಿ ಆ್ಯಕ್ಟ್’ ಪಾಲಿಸಬೇಕು ಎಂದು ಹೇಳಿ ಮಹಿಳೆಯನ್ನು ಮತ್ತಷ್ಟು ಹೆದರಿಸಿದ್ದಾನೆ. ಅಲ್ಲದೆ, ತಾವು ಸರ್ವೇಲೈನ್ಸ್‌ನಲ್ಲಿರುವುದರಿಂದ ಈ ವಿಚಾರವನ್ನು ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾನೆ.
ನಂತರ ಮಹಿಳೆಯ ಆಸ್ತಿ ಹಾಗೂ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿ ಎರಡು ದಿನಗಳಲ್ಲಿ ಕ್ಲಿಯರೆನ್ಸ್ ನೀಡುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಈ ನೆಪದಲ್ಲಿ ಬ್ಯಾಂಕ್ ಖಾತೆ ಹಾಗೂ ಆಸ್ತಿ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ತಮ್ಮ ಸೂಚನೆಯಂತೆ ನಿರ್ದಿಷ್ಟ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.
ಆರೋಪಿಗಳ ಮಾತು ನಂಬಿದ ಮಹಿಳೆ, ಅವರ ಸೂಚನೆಯಂತೆ ₹60 ಲಕ್ಷವನ್ನು ಹಾಗೂ ಅ.3ರಂದು ₹1.40 ಕೋಟಿ ಹಣವನ್ನು ಆರ್‌ಟಿಜಿಎಸ್ ಮೂಲಕ ವರ್ಗಾಯಿಸಿದ್ದಾರೆ. ಸೆ.25ರಿಂದ ಅ.5ರವರೆಗೆ ಹಂತ ಹಂತವಾಗಿ ಒಟ್ಟು ₹2 ಕೋಟಿ ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ‘ಡಿಜಿಟಲ್ ಅರೆಸ್ಟ್’ ಸೇರಿದಂತೆ ವಿವಿಧ ರೀತಿಯ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸ್ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ಬೆದರಿಸಿ, ಹಣ ವರ್ಗಾಯಿಸುವಂತೆ ಒತ್ತಡ ಹೇರುವುದು ವಂಚಕರ ಸಾಮಾನ್ಯ ತಂತ್ರವಾಗಿದೆ.
ಸೈಬರ್ ವಂಚನೆಗೆ ಒಳಗಾದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಂತ ಮುಖ್ಯ. ವಂಚನೆಯಾದ ಕೂಡಲೇ ‘ಗೋಲ್ಡನ್ ಅವರ್’ನಲ್ಲಿ ದೂರು ನೀಡಿದರೆ ಹಣದ ವರ್ಗಾವಣೆಯನ್ನು ತಡೆಯಲು ಅಥವಾ ವಂಚಿತ ಹಣವನ್ನು ಫ್ರೀಜ್ ಮಾಡಲು ಪೊಲೀಸರು ಪ್ರಯತ್ನಿಸಬಹುದು. ದೂರು ನೀಡಲು ವಿಳಂಬವಾದಷ್ಟೂ ಹಣವನ್ನು ಮರಳಿ ಪಡೆಯುವುದು ಕಷ್ಟವಾಗುವ ಸಾಧ್ಯತೆ ಇದೆ.
ಅಪರಾಧ
Mangalore-ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.
ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
2010ರ ಜೂನ್ 22ರಂದು ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜಪೆ ಪೊಲೀಸರಿಗೆ ಒಪ್ಪಿಸಿದ್ದರು.
ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 419, 420, 468 ಹಾಗೂ 34 ಮತ್ತು ಪಾಸ್‌ಪೋರ್ಟ್ ಕಾಯ್ದೆ-1967ರ ಕಲಂ 12(1)(b), (d), (e) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ಆರೋಪಿಗೆ ಒಂದು ವರ್ಷ ಆರು ತಿಂಗಳ ಶಿಕ್ಷೆ ವಿಧಿಸಿತ್ತು.
ಇದನ್ನು ಪ್ರಶ್ನಿಸಿ ವೇಲಾಯುಧನ್ ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಂಖ್ಯೆ 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಆತನ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗದೆ ವೇಲಾಯುಧನ್ ತಲೆಮರೆಸಿಕೊಂಡಿದ್ದ.
ಸುಮಾರು ಆರು ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆತನನ್ನು ಅಕ್ಟೋಬರ್ 8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಬಳಿಕ ಮುಂದಿನ ಕಾನೂನು ಕ್ರಮಕ್ಕಾಗಿ ಆತನನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಅಪರಾಧ
Uppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ ನಾಪತ್ತೆಯಾಗಿರುವ ಘಟನೆ ಕೋಡಿಂಬಾಡಿ ಪರಿಸರದಲ್ಲಿ ನಡೆದಿದೆ.
ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ ನಾಪತ್ತೆಯಾಗಿರುವ ಘಟನೆ ಕೋಡಿಂಬಾಡಿ ಪರಿಸರದಲ್ಲಿ ನಡೆದಿದೆ.
ಕೋಡಿಂಬಾಡಿ ಪರಿಸರದ ಪ್ರಗತಿಪರ ಕೃಷಿಕರೊಬ್ಬರ ಮನೆಗೆ ನಾಲ್ಕು ದಿನಗಳ ಹಿಂದೆ ತೆರಳಿದ ಅಪರಿಚಿತ ವ್ಯಕ್ತಿ, ತಾನು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯವನು ಎಂದು ಪರಿಚಯಿಸಿಕೊಂಡಿದ್ದಾನೆ. ತೋಟದ ಕೆಲಸಕ್ಕೆ ಶಾಶ್ವತವಾಗಿ ಕಾರ್ಮಿಕರು ಬೇಕೇ ಎಂದು ವಿಚಾರಿಸಿದ್ದಾನೆ. ಕೆಲಸಗಾರರ ಅಗತ್ಯವಿದ್ದ ಹಿನ್ನೆಲೆಯಲ್ಲಿ ಕೃಷಿಕರು ಬೇಕು ಎಂದು ತಿಳಿಸಿದಾಗ, ತಾನು ಸದ್ಯ ಗೇರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಂದ ತನ್ನ ಬಟ್ಟೆ-ಬರೆ ಹಾಗೂ ಇತರ ಸಾಮಗ್ರಿಗಳನ್ನು ತೆಗೆದುಕೊಂಡು, ಹೆಂಡತಿ-ಮಕ್ಕಳೊಂದಿಗೆ ಬರುವುದಾಗಿ ಹೇಳಿದ್ದಾನೆ.
ಆದರೆ ರಿಕ್ಷಾ ಮಾಡಿಕೊಂಡು ಬರಲು ತನ್ನ ಬಳಿ ಹಣವಿಲ್ಲ ಎಂದು ಹೇಳಿ ಮೊದಲಿಗೆ ₹1 ಸಾವಿರ ಕೇಳಿದ್ದಾನೆ. ಆತನ ಮಾತನ್ನು ನಂಬಿದ ತೋಟದ ಮಾಲಕರು ಹಣ ನೀಡಿದ್ದಾರೆ. ಬಳಿಕ ಅಂಗಡಿಯಲ್ಲಿ ಸ್ವಲ್ಪ ಸಾಲವಿದ್ದು, ಅದನ್ನು ತೀರಿಸಲು ಮತ್ತೊಂದು ₹1 ಸಾವಿರ ನೀಡುವಂತೆ ಕೇಳಿಕೊಂಡಿದ್ದಾನೆ. ಇದಕ್ಕೂ ಒಪ್ಪಿದ ಕೃಷಿಕರು ಒಟ್ಟು ₹2 ಸಾವಿರ ನೀಡಿದ್ದಾರೆ.
ಹಣ ಪಡೆದುಕೊಂಡು ತೆರಳಿದ ವ್ಯಕ್ತಿ ನಾಲ್ಕು ದಿನ ಕಳೆದರೂ ಮತ್ತೆ ಕೃಷಿಕರ ಮನೆಗೆ ಬಂದಿಲ್ಲ. ಆತನ ಮೊಬೈಲ್ ನಂಬರ್ ಕೇಳಿದಾಗ ತನ್ನ ಬಳಿ ಮೊಬೈಲ್ ಇಲ್ಲ ಎಂದು ಹೇಳಿದ್ದ ಎನ್ನಲಾಗಿದೆ.
-
ಬಿಗ್ ನ್ಯೂಸ್20 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು23 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
Uncategorized24 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ನಿಧನ ವಾರ್ತೆ23 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ನಿಧನ ವಾರ್ತೆ23 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್19 hours agoSDPI-ಮಕ್ಕಳ ಆಟದ ಉಪಕರಣಗಳೇ ಹಾಳು: ಕಾರಂತರ ಬಾಲವನದ ದುಸ್ಥಿತಿಗೆ ಎಸ್ಡಿಪಿಐ ಅಸಮಾಧಾನ
-
ಬಿಗ್ ನ್ಯೂಸ್18 hours agoReservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು
-
ಅಪರಾಧ18 hours agoDigital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ


















