ಪುತ್ತೂರು
Praveen Nettaru New House | ಬಿಜೆಪಿಯಿಂದ 60 ಲಕ್ಷ ವೆಚ್ಚದಲ್ಲಿ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಮನೆ – ಮೇ ಅಂತ್ಯದೊಳಗೆ ಮುಗೆರೋಡಿ ಕನ್ಸ್ಟ್ರಕ್ಷನ್ ನಿರ್ಮಾಣ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಂಕುಸ್ಥಾಪನೆ
ಪುತ್ತೂರು: ಹತ್ಯೆಯಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ, ಬಿಜೆಪಿ ಮನೆ ನಿರ್ಮಾಣ ಮಾಡಿಕೊಡಲಿದ್ದು, 60 ಲಕ್ಷ ವೆಚ್ಚದಲ್ಲಿ 2700 ಚ.ಅಡಿಯ ಮನೆ ನಿರ್ಮಾಣ ಆಗಲಿದೆ (Praveen Nettaru New House) . ಬಿಜೆಪಿ ಪಕ್ಷ ಕಾರ್ಯಕರ್ತನ ಕುಟುಂಬದ ಪರ ಯಾವತ್ತೂ ನಿಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar kateel ) ಹೇಳಿಕೆ ನೀಡಿದ್ದಾರೆ.
ಬೆಳ್ಳಾರೆ ಸಮೀಪದ ನೆಟ್ಟಾರು ನಲ್ಲಿ ಪ್ರವೀಣ್ ಮನೆಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.
ಪ್ರವೀಣ್ ಕನಸು ನನಸು ಮಾಡಲು ಪಕ್ಷ ಹೆಜ್ಜೆ ಇಟ್ಟಿದೆ. ಅವರ ಹಳೆಯ ಮನೆ ಕೆಡವಿ ಇಂದು ಹೊಸ ಮನೆಗೆ ಗುದ್ದಲಿ ಪೂಜೆ ಮಾಡಿದ್ದೇವೆ. 60 ಲಕ್ಷ ವೆಚ್ಚದಲ್ಲಿ 2700 ಚ.ಅಡಿಯ ಮನೆ ನಿರ್ಮಾಣ ಆಗಲಿದೆ. ಮುಗ್ರೋಡಿ ಕನ್ಸ್ಟ್ ಕ್ಷನ್ ಕಂಪೆನಿ ಮೇ ಅಂತ್ಯದ ಒಳಗೆ ಮನೆ ನಿರ್ಮಾಣ ಮಾಡಿ ಕೊಡಲಿದೆ ಎಂದರು.

ಈಗಾಗಲೇ ಪ್ರವೀಣ್ ಪತ್ನಿಗೆ ಡಿಸಿ ಕಚೇರಿಯಲ್ಲಿ ಕೆಲಸ ಸಿಕ್ಕಿದೆ. ಬಿಜೆಪಿಯಿಂದ 25 ಲಕ್ಷ, ಸರ್ಕಾರ 25 ಲಕ್ಷ ಹಾಗೂ ಯುವಮೋರ್ಚಾ 15 ಲಕ್ಷ ಕೊಟ್ಟಿದೆ. ಪ್ರವೀಣ್ ನಮ್ಮ ಒಂದೊಳ್ಳೆ ಕಾರ್ಯಕರ್ತ, ಅವನ ಕುಟುಂಬದ ಜೊತೆ ನಾವು ನಿಂತಿದ್ದೇವೆ. ಅವನ ಕೆಲಸಕ್ಕೆ ಮೌಲ್ಯ ಕಟ್ಟಲು ಸಾಧ್ಯವೇ ಇಲ್ಲ, ಹಾಗಾಗಿ ಇಲ್ಲಿ ಹಣ ಮುಖ್ಯವಲ್ಲ ಎಂದರು.
ಬಿಜೆಪಿ ಪಕ್ಷ ಕಾರ್ಯಕರ್ತನ ಕುಟುಂಬದ ಪರ ಯಾವತ್ತೂ ನಿಲ್ಲಲಿದೆ. ಹತ್ಯೆಯಾದ ವೇಳೆಯೇ ಕುಟುಂಬದ ಜೊತೆ ನಿಲ್ಲುವ ಭರವಸೆ ಕೊಟ್ಟಿದ್ದೆವು. ಅವನು ಪಕ್ಷಕ್ಕೆ ಸಾಕಷ್ಟು ಸಮಯ ಕೊಟ್ಟಿದ್ದ, ಹಾಗಾಗಿ ಪಕ್ಷ ಅವನ ಕುಟುಂಬದ ಪರ ನಿಂತಿದೆ. ಮನೆಯವರೇ ಕೊಟ್ಟ ನಕ್ಷೆಯ ಪ್ರಕಾರ ಈ ಮನೆ ನಿರ್ಮಾಣ ಆಗ್ತಿದೆ. ಹಲವಾರು ಮಂದಿ ಮನೆ ಕಟ್ಟಿ ಕೊಡಲು ಮುಂದೆ ಬಂದಿದ್ದರು. ಆದರೆ ಅವರ ಮನೆಯವರ ಅಭಿಪ್ರಾಯದಂತೆ ಪಕ್ಷವೇ ಮನೆ ಕಟ್ಟಿ ಕೊಡ್ತಾ ಇದೆ. ಇಡೀ ಮನೆಯ ವೆಚ್ಚವನ್ನು ಬಿಜೆಪಿ ಪಕ್ಷ ಕೊಡ್ತದೆ ಅಂದ್ರು.



ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಅಂಗಾರ, ಶಾಸಕ ಸಂಜೀವ ಮಠಂದೂರು ಸಹಿತ ಹಲವು ನಾಯಕರು ಉಪಸ್ಥಿತರಿದ್ದರು.
ಪ್ರವೀಣ್ ನೆಟ್ಟಾರ್ ಕೊಲೆಯಾದ ಮರುದಿನ ಬೆಳ್ಳಾರೆ ಪೇಟೆಯಲ್ಲಿ ರಾಜ್ಯಾಧ್ಯಕ್ಷ ಕಟೀಲ್ ಅವರ ಕಾರನ್ನು ಕಾರ್ಯಕರ್ತರು ಜಗ್ಗಾಡಿದ ವಿಡಿಯೋ ದೇಶಾದ್ಯಂತ ವೈರಲ್ ಆಗಿತ್ತು. ಆ ನಂತರ ಸಿಎಂ ಬೊಮ್ಮಾಯಿ ಜೊತೆ ಮನೆಗೆ ಬಂದಾಗಲೂ ಕಟೀಲ್ ಗೆ ದಿಕ್ಕಾರ ಕೂಗಿದಿದ್ದರು.
ಇನ್ನು ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಈಗಾಗಲೇ ಎಲ್ಲರ ಬಂಧನ ಆಗಿದೆ. ಆರ್ಥಿಕ ಸಹಕಾರ ಕೊಟ್ಟವರಿಗೆ ಲುಕ್ ಔಟ್ ನೋಟೀಸ್ ರಾಜ್ಯ ಮತ್ತು ಕೇಂದ್ರ ಸರ್ಕಾರ ಸರಿಯಾದ ತನಿಖೆ ಮಾಡ್ತಿದೆ. ಇದರ ಹಿಂದೆ ಇರೋ ಎಲ್ಲಾ ಶಕ್ತಿಗಳನ್ನು ಬಂಧಿಸೋ ಕೆಲಸ ಆಗ್ತಿದೆ. ಪ್ರಮುಖ ಆರೋಪಿಗಳು ಜೈಲಿನ ಒಳಗೆ ಇದ್ದಾರೆ. ಆರ್ಥಿಕ, ವಾಹನ ಕೊಟ್ಟವರು, ಮಾನಸಿಕವಾಗಿ ಆರೋಪಿಗಳ ಜೊತೆ ನಿಂತವರನ್ನೂ ಬಿಡಲ್ಲ. ಇದಕ್ಕಾಗಿ ಎನ್ಐಎ ತಪ್ಪಿಸಿಕೊಂಡವರ ಪತ್ತೆಗೆ ಬಹುಮಾನ ಘೋಷಿಸಿದೆ. ಈಗಾಗಲೇ ಪ್ರವೀಣ್ ಹತ್ಯೆ ಬಳಿಕ ಪಿಎಫ್ಐ ನಿಷೇಧ ಆಗಿದೆ. ಸದ್ಯ ಹತ್ಯೆ ಕೇಸ್ ಆರೋಪಿಗಳು ಯಾವ ಕೋರ್ಟ್ ನಲ್ಲೂ ಹೊರ ಬರದ ಹಾಗೆ ಪ್ರಕರಣ ದಾಖಲಿಸಲಾಗಿದೆ. ಎನ್ ಐಎ ಇದಕ್ಕೆ ಸಂಬಂಧಿಸಿ ಎಲ್ಲಾ ರೀತಿಯ ಕೆಲಸ ಮಾಡುತ್ತಿದೆ ಎಂದರು.
2022 ರ ಜುಲೈ 26 ರಂದು ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಕೊಲೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹತ್ತು ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಪ್ರಸ್ತುತ ಎನ್‌ಐಎ ಪ್ರಕರಣದ ತನಿಖೆ ಮಾಡುತ್ತಿದೆ. ನಾಲ್ವರು ಆರೋಪಿಗಳ ಸುಳಿವು ನೀಡಿದರೆ ಎನ್‌ಐಎ ಕಚೇರಿಯ ಬೆಂಗಳೂರು ಘಟಕದ ಪೊಲೀಸ್ ಅಧೀಕ್ಷಕರ ಕಚೇರಿಗೆ 080 – 29510900 ಮಾಹಿತಿ ನೀಡಬಹುದು ಎಂದು ಎನ್‌ಐಎ ಹೇಳಿದೆ.
ಪುತ್ತೂರು
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್‌ಮ್ಯಾನ್ ಮೃತ್ಯು

ಪುತ್ತೂರು: ಕೆದಿಲ ಶಾಲೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಪವರ್‌ಮ್ಯಾನ್‌ವೊಬ್ಬರು ಮೃತಪಟ್ಟ ಘಟನೆ ಅ.3ರಂದು ನಡೆದಿದೆ.
ಮೃತರನ್ನು ಕೆಮ್ಮಾಯಿ ನಿವಾಸಿ ದಿ. ಗುಡ್ಡಪ್ಪ ಗೌಡರವರ ಪುತ್ರ ರವಿ ಗೌಡ ಎಂದು ಗುರುತಿಸಲಾಗಿದೆ. ಇವರು ಮೆಸ್ಕಾಂ ಬಂಟ್ವಾಳ ತಾಲೂಕಿನ ಮಾಣಿ ಸೆಕ್ಷನ್ ನಲ್ಲಿ ಪವರ್ ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಮೂಲಗಳ ಪ್ರಕಾರ, ಎಚ್‌ಟಿ (ಹೈಟೆನ್ಶನ್) ವಿದ್ಯುತ್ ಲೈನ್‌ನ ಜಿಒಎಸ್ (ಗ್ಯಾಂಗ್ ಆಪರೇಟಿಂಗ್ ಸ್ವಿಚ್) ತೆರೆಯುವ ಸಂದರ್ಭದಲ್ಲಿ ಅರ್ಥ್ ಆಗಿ ವಿದ್ಯುತ್ ಪ್ರವಹಿಸಿ ರವಿ ಗೌಡ ಅವರಿಗೆ ವಿದ್ಯುತ್ ಸ್ಪರ್ಶಿಸಿದೆ ಎನ್ನಲಾಗಿದೆ.
ಕೆದಿಲ ಪಾಟ್ರಕೋಡಿ, ಮಿತ್ತೂರು ಹಾಗೂ ಗಡಿಯಾರ ಭಾಗಗಳಲ್ಲಿ ಪವರ್‌ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಗೌಡ ಅವರು, ತಮ್ಮ ಸೇವಾ ಮನೋಭಾವದಿಂದ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ಅಕಾಲಿಕ ನಿಧನ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
ಶಿಕ್ಷಣ
Narendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.
ಹೈದರಾಬಾದ್ ನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ಕ್ಷೇತ್ರಮಟ್ಟದ ಕ್ರೀಡಾಕೂಟದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಲಿಖಿತ್ ಎನ್. ಇವರು 1500ಮೀ., 3000ಮೀ ರೇಸ್ ನಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಇವರು ಪುಣಚ ನಿವಾಸಿಗಳಾದ ಮೋಹನ ನಾಯ್ಕ್ ಎನ್. ಮತ್ತು ಭವ್ಯ ದಂಪತಿಗಳ ಪುತ್ರ.
ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ, ಬಳ್ಳಾರಿಯಲ್ಲಿ ನಡೆದ ಪ್ರಾಂತೀಯ ಮಟ್ಟದ ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವದ ಸ್ಪರ್ಧೆಗಳಲ್ಲಿ ನರೇಂದ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಕುಶಿತ್ ಆರ್. ಗೌಡ ಇವರು ಫಿಸಿಕ್ಸ್ ಎಕ್ಸ್ ಪರಿಮೆಂಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನ ನಿವಾಸಿಗಳಾದ ರಾಜೇಶ್ ಮತ್ತು ನಳಿನಿ ದಂಪತಿಗಳ ಪುತ್ರ.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ
ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ಮಾತನಾಡಿದರು.
ಪುತ್ತೂರು,ಅ.1: ಸ್ಪರ್ಧಾತ್ಮಕ ಪರೀಕ್ಷೆಗಳಿಂದ ಸರ್ಟಿಫಿಕೇಟ್ ಮಾತ್ರವಲ್ಲ, ಉಜ್ವಲ ಭವಿಷ್ಯ, ಒಳ್ಳೆಯ ವೇತನ ಹಾಗೂ ಹೆಸರು ಇತ್ಯಾದಿಗಳೆಲ್ಲವೂ ಲಭಿಸಲಿದೆ. ಇಂದಿನ ಕಾಲದಲ್ಲಿ ಕಲಿಕೆಗೆ ಬೇಕಾದ ಅನೇಕ ಸಂಪನ್ಮೂಲಗಳು ಲಭ್ಯವಿರುವಾಗ ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಪೂರ್ವಸಿದ್ಧತೆ ಎಂಬುದು ನಾವು ಉತ್ತೀರ್ಣರಾಗಲು ಅತ್ಯಗತ್ಯ. ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಸಕ್ರಿಯರಾಗಿ ಅಧ್ಯಯನ ನಡೆಸಿ ಎಲ್ಲಾ ರೀತಿಯಿಂದಲೂ ಸಿದ್ಧರಾಗಿ ಪರೀಕ್ಷೆಯನ್ನು ಜಯಿಸಬೇಕು ಎಂದು ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ತಿಳಿಸಿದರು.
ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಮಾತನಾಡಿ ಅಧ್ಯಾಪಕ ವೃತ್ತಿಯನ್ನು ಬಯಸಿ ಹೋಗುವವರಿಗೆ, ಸಂಶೋಧನಾ ಕ್ಷೇತ್ರವನ್ನು ಆರಿಸುವವರಿಗೆ ನೆಟ್ ಹಾಗೂ ಕೆ-ಸೆಟ್ ಪರೀಕ್ಷೆಗಳನ್ನು ಪೂರ್ಣಗೊಳಿಸುವುದು ಅಗತ್ಯ. ಪರೀಕ್ಷೆಗೆ ಸಿದ್ಧರಾಗಲು ನಿರಂತರವಾಗಿ ಓದಿನಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ. ಇವುಗಳ ಪಠ್ಯಕ್ರಮಗಳನ್ನು ಅಭ್ಯಾಸಿಸಿ ಪರಿಣತರಿಂದ ಮಾರ್ಗದರ್ಶನವನ್ನು ಪಡೆದು ಯಶಸ್ಸು ಗಳಿಸಬೇಕಿದೆ ಎಂದರು.
ಕಾರ್ಯಕ್ರಮವನ್ನು ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯಸರಸ್ವತಿ.ಬಿ ಸ್ವಾಗತಿಸಿ ಪ್ರಥಮ ಎಂಕಾಂ ವಿದ್ಯಾರ್ಥಿ ಧನರಾಜ್ ವಂದಿಸಿದರು. ಪ್ರಥಮ ಎಂಕಾಂ ವಿದ್ಯಾರ್ಥಿನಿ ಪ್ರತೀಕ್ಷಾ ಯು.ಕೆ ನಿರೂಪಿಸಿದರು.
-
ಪುತ್ತೂರು20 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್‌ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್24 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು23 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಬಿಗ್ ನ್ಯೂಸ್22 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಶಿಕ್ಷಣ23 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ಅಪರಾಧ22 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
ಶಿಕ್ಷಣ23 hours agoNarendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
-
ಶಿಕ್ಷಣ23 hours agoVivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ


















