ಉದ್ಯೋಗ
Central government jobs : 10th ಕ್ಲಾಸ್ ಪಾಸಾದವರಿಗೆ ಕೇಂದ್ರ ಸರಕಾರಿ ನೌಕರಿ – 24,369 ಹುದ್ದೆಗಳು – ವೇತನ : ₹18,000 ದಿಂದ ₹56,900
constable job For 10th pass: ಕೇಂದ್ರ ಸರ್ಕಾರದ ನೌಕರಿಗೆ (central government jobs) ಸೇರಬೇಕೆಂಬ ಕನಸು ಹೊತ್ತಿರುವ ಯುವಸಮೂಹಕ್ಕೆ ಕೇಂದ್ರ ಗೃಹ ಇಲಾಖೆಯು ಸಿಹಿ ಸುದ್ದಿ ನೀಡಿದೆ. ಪ್ರಸ್ತುತ ಹಣಕಾಸು ವರ್ಷದಲ್ಲಿ ನಡೆಸಲಿರುವ ಬೃಹತ್ ನೇಮಕಾತಿಗೆ (Recruitment) ಅದು ಅಧಿಸೂಚನೆ (Notification) ಹೊರಡಿಸಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು ವತಿಯಿಂದ (CAPF) ವಿವಿಧ ಸಶಸ್ತ್ರ ಮೀಸಲು ಪಡೆಗಳಿಗೆ ಹಾಗೂ ಘಟಕಗಳಿಗೆ 24,369 ‘ಪುರುಷ ಮತ್ತು ಮಹಿಳಾ ಕಾನ್‌ಸ್ಟೆಬಲ್ ಜನರಲ್ ಡ್ಯೂಟಿ’ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಸಿಬ್ಬಂದಿ ನೇಮಕಾತಿ ಆಯೋಗದಿಂದ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದೂ, ಈಗಾಗಲೇ ಆರಂಭಗೊಂಡಿದೆ. ಅ.27 ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ನವೆಂಬರ್ 30 ಕೊನೆ ದಿನವಾಗಿದೆ.ಎಸ್‌ಎಸ್‌ಎಲ್‌ಸಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆ ಪ್ರಕ್ರಿಯೆ, ವಿದ್ಯಾರ್ಹತೆ, ವೇತನ ಇತ್ಯಾದಿ ವಿವರ ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ :
ಸಶಸ್ತ್ರ ಮೀಸಲು ಪಡೆಗಳು : ಹುದ್ದೆಗಳು
ಬಿಎಸ್‌ಎಫ್ (ಗಡಿ ಭದ್ರತಾ ಪಡೆ) : 10497
ಸಿಐಎಸ್‌ಎಫ್(ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ) : 100
ಸಿಆರ್‌ಪಿಎಫ್(ಕೇಂದ್ರ ಸಶಸ್ತ್ರ ಪೊಲೀಸ್ ಪಡೆ) : 8911
ಎಸ್‌ಎಸ್‌ಬಿ(ಸಶಸ್ತ್ರ ಸೀಮಾ ಬಲ) : 1284
ಐಟಿಬಿಪಿ(ಇಂಡೋ ಟಿಬೆಟಿಯನ್ ಬಾರ್ಡ‌್ರ ಪೊಲೀಸ್) : 1613
ಎಆರ್ (ಅಸ್ಸಾಂ ರೈಫಲ್ಸ್) : 1697
ಎಸ್‌ಎಸ್‌ಎಫ್ (ಸೆಕ್ರೆಟರಿಯೇಟ್ ಸೆಕ್ಯೂರಿಟಿ ಫೋರ್ಸ್) : 103
ಎನ್‌ಸಿಬಿ(ಮಾದಕ ವಸ್ತು ನಿಯಂತ್ರಣಾ ದಳ-ನಾರ್‌ಕೋಟಿಕ್) : 164
ಒಟ್ಟು : 24369
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಇದಕ್ಕಾಗಿ ‘ಸ್ಟಾಫ್ ಸೆಲೆಕ್ಸನ್ ಕಮಿಷನ್‌ನ ಅಧಿಕೃತ ವೆಬ್‌ಸೈಟ್ https://ssc.nic.in ಗೆ ಭೇಟಿ ನೀಡಿ, ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ವಯೋಮಿತಿ
18 ರಿಂದ 23 ವಯೋಮಾನದವರು ಅರ್ಜಿ ಸಲ್ಲಿಸಬಹುದು. ಎಸ್‌ಸಿ, ಎಸ್‌ಟಿ, ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ವಯಸ್ಸಿನಲ್ಲಿ ಸಡಿಲಿಕೆ ಇದೆ.
ಶೈಕ್ಷಣಿಕ ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವವರು ಕನಿಷ್ಠ ವಿದ್ಯಾರ್ಹತೆ 10 ನೇ ತರಗತಿ ಅಥವಾ ಅದಕ್ಕೆ ತತ್ಸಮಾನ ಪರೀಕ್ಷೆ ಪಾಸಾಗಿರಬೇಕು. ಅ.27 ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ನವೆಂಬರ್ 30 ಕೊನೆ ದಿನವಾಗಿದೆ
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು
ಅಪ್ಲಿಕೇಶನ್ ಸಲ್ಲಿಸಲು ಆರಂಭಿಕ ದಿನಾಂಕ : 27-10-2022
ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನಾಂಕ : 30-11-2022 ರ ರಾತ್ರಿ 11 ಗಂಟೆವರೆಗೆ.
ಆನ್‌ಲೈನ್ ಮೂಲಕ ಅಪ್ಲಿಕೇಶನ್ ಶುಲ್ಕ ಪಾವತಿಸಲು ಕೊನೆ ದಿನಾಂಕ : 01-12-2022 ರ ರಾತ್ರಿ 11 ಗಂಟೆವರೆಗೆ.
ಚಲನ್ ಮೂಲಕ ಅಪ್ಲಿಕೇಶನ್ ಶುಲ್ಕ ಪಾವತಿಸಲು ಕೊನೆ ದಿನಾಂಕ : 30-11-2022
ಟೈಯರ್-1 ಸಿಬಿಟಿ ಪರೀಕ್ಷೆ ದಿನಾಂಕ: ಜನವರಿ 2023
ಶುಲ್ಕ ವಿವರ
ಸಾಮಾನ್ಯ / ಒಬಿಸಿ ಅಭ್ಯರ್ಥಿಗಳಿಗೆ ರೂ.100.
ST / SC / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅಪ್ಲಿಕೇಶನ್ ಶುಲ್ಕವನ್ನು ನೆಟ್‌ಬ್ಯಾಂಕಿಂಗ್, ಎಸ್‌ಬಿಐ ಚಲನ್, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಮೂಲಕ ಪಾವತಿಸಬಹುದು.
ಆಯ್ಕೆ ಪ್ರಕ್ರಿಯೆ ಹೇಗಿದೆ?
ಒಟ್ಟು 4 ಹಂತಗಳಲ್ಲಿ ಆಯ್ಕೆ ನಡೆಯಲಿದೆ.
ಕಂಪ್ಯೂಟರ್ ಆಧಾರಿತ ಪರೀಕ್ಷೆ (ಬಹು ಆಯ್ಕೆಯ ಪ್ರಶ್ನೆಗಳು). ಈ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಒಳಪಡಬೇಕು. ಅಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ವೈದ್ಯಕೀಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು. ಮುಂದಿನ ಹಂತ ದಾಖಲಾತಿ ಪರಿಶೀಲನೆ. ಬಳಿಕ ನೇಮಕಾತಿ ಆದೇಶದ ಪತ್ರ ಅಭ್ಯರ್ಥಿಗಳ ಕೈ ಸೇರಲಿದೆ.
ಪರೀಕ್ಷೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ ಆಗಿದ್ದು, ಎಸ್‌ಎಸ್‌ಸಿ ಈ ಪರೀಕ್ಷೆಯನ್ನು ಆಯೋಜಿಸುತ್ತದೆ. ಜನವರಿಯಲ್ಲಿ ಪರೀಕ್ಷೆ ನಡೆಯುವುದಾಗಿ ಪ್ರಕಟಿಸಲಾಗಿದೆ. ಅಧಿಕೃತ ದಿನಾಂಕವನ್ನು ವೆಬ್‌ಸೈಟ್‌ನಲ್ಲಿ ತಿಳಿಸಲಾಗುತ್ತದೆ. ಅಲ್ಲದೇ ಪರೀಕ್ಷೆಗೆ ಹಾಗೂ ದೈಹಿಕ ಪರೀಕ್ಷೆಗೆ ಕರೆಪತ್ರಗಳು ಅಭ್ಯರ್ಥಿಗಳ ಅಂಚೆ ವಿಳಾಸಕ್ಕೆ ಬರಲಿವೆ. ಪರೀಕ್ಷಾ ಪಠ್ಯಕ್ರಮ, ಹುದ್ದೆಗಳ ವಿವರ, ಇತರ ಸಂಪೂರ್ಣ ವಿವರಗಳಿಗಾಗಿ ಅಭ್ಯರ್ಥಿಗಳು https://ssc.nic.in ನೋಡಬಹುದು.
ವೇತನ ಶ್ರೇಣಿ ಏನಿದೆ?
ಸಿಎಪಿಎಫ್‌ನ ವಿವಿಧ ವಿಭಾಗಗಳಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳು ಕೇಂದ್ರ ಸರ್ಕಾರದ ಚಾಲ್ತಿ ನಿಯಮಾನುಸಾರ ₹18,000 ದಿಂದ ₹56,900 ವೇತನ ಪಡೆಯಲಿದ್ದಾರೆ.
ಹಿಂದಿ, ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ
ಸಿಎಪಿಎಫ್‌ನ ಈ ಹುದ್ದೆಗಳಿಗೆ ನಡೆಯುತ್ತಿರುವಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಂಗ್ಲ ಹಾಗೂ ಹಿಂದಿ ಭಾಷೆಯಲ್ಲಿ ಬರೆಯಲು ಮಾತ್ರ ಅವಕಾಶವಿದೆ. ಇದರಿಂದ ಕನ್ನಡ ಸೇರಿದಂತೆ ಇತರ ಪ್ರಾದೇಶಿಕ ಭಾಷೆಯ ಅಭ್ಯರ್ಥಿಗಳಿಗೆ ಅನ್ಯಾಯವಾಗಲಿದೆ ಎಂಬ ಕೂಗು ಕೇಳಿ ಬಂದಿದೆ.
ಉದ್ಯೋಗ
Puttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
ಪುತ್ತೂರು: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
TVS ಸಂಸ್ಥೆಯ ಪ್ರೀಮಿಯಂ, EV ಹಾಗೂ IC ವಿಭಾಗಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗಿದ್ದು, ‘ಪುತ್ತೂರಿನ ಅತಿದೊಡ್ಡ 2-ವೀಲರ್ ಜಾಬ್ ಓಪನಿಂಗ್’ ಎಂಬ ಘೋಷಣೆಯೊಂದಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.
ಸೇಲ್ಸ್ ವಿಭಾಗದಲ್ಲಿ ಹಲವು ಅವಕಾಶ
ಪುತ್ತೂರು ಸೇಲ್ಸ್ ವಿಭಾಗದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್, ಸೇಲ್ಸ್ ಮ್ಯಾನೇಜರ್, ಎಕ್ಸ್‌ಚೇಂಜ್ ಕೋಆರ್ಡಿನೇಟರ್, ಸೇಲ್ಸ್ ಟೆಲಿಕಾಲಿಂಗ್ (CRE), ಅಕೌಂಟ್ಸ್ ಮ್ಯಾನೇಜರ್, ಫೈನಾನ್ಸ್ ಮ್ಯಾನೇಜರ್, ರಿಸೆಪ್ಷನಿಸ್ಟ್, RTO ಎಕ್ಸಿಕ್ಯೂಟಿವ್, ಇನ್‌ವಾಯ್ಸ್ ಎಕ್ಸಿಕ್ಯೂಟಿವ್, ಅಕೌಂಟ್ಸ್ ಎಕ್ಸಿಕ್ಯೂಟಿವ್, ಫೈನಾನ್ಸ್ ಕೋಆರ್ಡಿನೇಟರ್ ಹಾಗೂ ಇನ್ಶೂರೆನ್ಸ್ ಎಕ್ಸಿಕ್ಯೂಟಿವ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸರ್ವೀಸ್ ವಿಭಾಗದಲ್ಲೂ ಭರ್ಜರಿ ನೇಮಕಾತಿ
ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಫ್ಲೋರ್ ಸೂಪರ್‌ವೈಸರ್, ಟೆಕ್ನಿಷಿಯನ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಪಾರ್ಟ್ಸ್ ಮ್ಯಾನೇಜರ್, ವಾಷಿಂಗ್ ಸಿಬ್ಬಂದಿ, PDI ಟೆಕ್ನಿಷಿಯನ್, ಸರ್ವೀಸ್ ಮ್ಯಾನೇಜರ್, ನೆಟ್‌ವರ್ಕ್ ಕೋಆರ್ಡಿನೇಟರ್, ವಾರಂಟಿ ಇನ್‌ಚಾರ್ಜ್, ಅಕ್ಸಿಡೆಂಟ್ ಸೂಪರ್‌ವೈಸರ್, CRE ಟೆಲಿಕಾಲಿಂಗ್, CRM, PDI ಸೂಪರ್‌ವೈಸರ್ ಹಾಗೂ ಪೇಂಟರ್ ಮತ್ತು ಡೆಂಟಿಂಗ್ ಹುದ್ದೆಗಳಿಗೆ ಅವಕಾಶವಿದೆ.

ಬೆಳ್ಳಾರೆಯಲ್ಲೂ ಉದ್ಯೋಗದ ಬಾಗಿಲು ತೆರೆದಿದೆ
ಬೆಳ್ಳಾರೆ ಭಾಗದಲ್ಲಿಯೂ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಫ್ಲೋರ್ ಸೂಪರ್‌ವೈಸರ್, ಟೆಕ್ನಿಷಿಯನ್ ಹಾಗೂ ವಾಷಿಂಗ್ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸೇಲ್ಸ್ ವಿಭಾಗದಲ್ಲಿ 6 ಸೇಲ್ಸ್ ಎಕ್ಸಿಕ್ಯೂಟಿವ್ ಹಾಗೂ 2 ರಿಸೆಪ್ಷನಿಸ್ಟ್ ಹುದ್ದೆಗಳಿಗೂ ಅವಕಾಶವಿದೆ.
PF, ESI ಜೊತೆಗೆ ₹25 ಸಾವಿರದವರೆಗೆ ಗಳಿಕೆ!
ಆಯ್ಕೆಯಾಗುವ ಅಭ್ಯರ್ಥಿಗಳಿಗೆ PF, ESI, ಸ್ಪಾಟ್ ಇನ್ಸೆಂಟಿವ್, ಮಾಸಿಕ ಹಾಗೂ ತ್ರೈಮಾಸಿಕ ಇನ್ಸೆಂಟಿವ್ ಸೌಲಭ್ಯಗಳು ದೊರೆಯಲಿವೆ. 25 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕೆ ಪೆಟ್ರೋಲ್ ವೋಚರ್ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,000 ವರೆಗೆ ಗಳಿಸುವ ಅವಕಾಶ ಇದೆ ಎಂದು ಸಂಸ್ಥೆ ತಿಳಿಸಿದೆ.
ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರು ಮಾತ್ರವಲ್ಲದೆ, ಸೇಲ್ಸ್, ಅಕೌಂಟ್ಸ್, ಫೈನಾನ್ಸ್, ಟೆಲಿಕಾಲಿಂಗ್, ಗ್ರಾಹಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಹುಡುಕುತ್ತಿರುವವರೂ ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.
ಉದ್ಯೋಗಾವಕಾಶ ಸೀಮಿತವಾಗಿರುವುದರಿಂದ ಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಬಹುದು.
📞 ಸಂಪರ್ಕ: +91 82965 79206
📍 ವಿಳಾಸ: ಶ್ರೀ ತಿರುಮಲಾ TVS, ಬೈಪಾಸ್ ಜಂಕ್ಷನ್, ಮಂಜಲ್ಪಡ್ಡು, ಮೇನ್ ರೋಡ್, ಬೋಳ್ವಾರ್ ವೆಸ್ಟ್, ಪುತ್ತೂರು–574201.
ಉದ್ಯೋಗ
Constable recruitment: ಕಾನ್‌ಸ್ಟೆಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ; 3,991 ಹುದ್ದೆಗಳಿಗೆ 19,396 ಅಭ್ಯರ್ಥಿಗಳು
ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಬೆಂಗಳೂರು, ಸೆ.25: ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 3,991 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಜ್ಯಾದ್ಯಂತ 19,396 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಉಳಿಕೆ ಮೂಲ ವೃಂದದ (ಆರ್‌ಪಿಸಿ) 3,395 ಹುದ್ದೆಗಳಿಗೆ 16,454 ಅಭ್ಯರ್ಥಿಗಳು ಹಾಗೂ ಕಲ್ಯಾಣ ಕರ್ನಾಟಕ (ಕೆಕೆ) ವೃಂದದ 596 ಹುದ್ದೆಗಳಿಗೆ 2,942 ಅಭ್ಯರ್ಥಿಗಳು ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.
ಮಂಗಳೂರಿನಲ್ಲಿ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕಾರವಾರ), ಚಿಕ್ಕಮಗಳೂರು ಹಾಗೂ ಮಂಗಳೂರು ನಗರ ಘಟಕಗಳ ವ್ಯಾಪ್ತಿಯ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಈ ಅಭ್ಯರ್ಥಿಗಳಿಗೆ ಸೆ.28ರಿಂದ ಅ.3ರವರೆಗೆ ಮಂಗಳೂರಿನ ಲಾಲ್‌ಬಾಗ್‌ನ ಮಂಗಳ ಕ್ರೀಡಾಂಗಣದಲ್ಲಿ ದೈಹಿಕ ಪರೀಕ್ಷೆ ನಡೆಯಲಿದೆ.
ಕರೆಪತ್ರ ಡೌನ್‌ಲೋಡ್‌ಗೆ ಸೂಚನೆ
ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ವೆಬ್‌ಸೈಟ್‌ನಿಂದ ತಮ್ಮ ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಕರೆಪತ್ರದಲ್ಲಿ ನಮೂದಿಸಿರುವ ದಿನಾಂಕದಂದು ನಿಗದಿತ ಪರೀಕ್ಷಾ ಕೇಂದ್ರಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಪೊಲೀಸ್ ನೇಮಕಾತಿ ವಿಭಾಗ ಸೂಚಿಸಿದೆ.
ಕಾನ್‌ಸ್ಟೆಬಲ್ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ
ಇದೇ ವೇಳೆ, ಕೆಎಸ್‌ಆರ್‌ಪಿ, ಕೆಎಸ್‌ಐಎಸ್‌ಎಫ್ ಹಾಗೂ ಐಆರ್‌ಬಿ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿಗಾಗಿ ಸೆ.20ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕೇವಲ ಐದು ದಿನಗಳಲ್ಲಿ ಕೆಇಎ ಪ್ರಕಟಿಸಿದೆ.
ಪರೀಕ್ಷೆಯ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಸೆ.27ರೊಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬಹುದು ಎಂದು ಕೆಇಎ ತಿಳಿಸಿದೆ.
ಉಳಿಕೆ ಮೂಲ ವೃಂದದ 1,13,390 ಹಾಗೂ ಕಲ್ಯಾಣ ಕರ್ನಾಟಕ ವೃಂದದ 33,061 ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಬರೆದಿದ್ದರು. ಪರೀಕ್ಷೆ ನಡೆದ ದಿನವೇ ಎಲ್ಲ ಅಭ್ಯರ್ಥಿಗಳ ಒಎಂಆರ್ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಅಂತರ ರಾಜ್ಯ
Oracle-‘ಇಂದು ನಿಮ್ಮ ಕೊನೆಯ ಕೆಲಸದ ದಿನ’; Oracle ಉದ್ಯೋಗಿಗಳಿಗೆ ಮುಂಜಾನೆ ʻಇ-ಮೇಲ್ ʼಶಾಕ್
ಜಾಗತಿಕ ಸಾಫ್ಟ್‌ವೇರ್ ದೈತ್ಯ ಒರಾಕಲ್ (Oracle) ಸಂಸ್ಥೆಯ ಉದ್ಯೋಗಿಗಳಿಗೆ ಮಂಗಳವಾರ ಮುಂಜಾನೆ ಕಳುಹಿಸಲಾದ ಇ-ಮೇಲ್‌ವೊಂದು ಆತಂಕ ಮೂಡಿಸಿದೆ. “ನಿಮ್ಮ ಹುದ್ದೆಗೆ ಸಂಬಂಧಿಸಿದಂತೆ ಕೆಲವು ಕಠಿಣ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇವೆ. ಇಂದು ನಿಮ್ಮ ಕೊನೆಯ ಕೆಲಸದ ದಿನ” ಎಂದು ಇ-ಮೇಲ್‌ನಲ್ಲಿ ತಿಳಿಸಲಾಗಿದೆ ಎಂದು ಬಿಸಿನೆಸ್ ಇನ್‌ಸೈಡರ್ ವರದಿ ಮಾಡಿದೆ.
ನವದೆಹಲಿ, ಸೆ.16: ಜಾಗತಿಕ ಸಾಫ್ಟ್‌ವೇರ್ ದೈತ್ಯ ಒರಾಕಲ್ (Oracle) ಸಂಸ್ಥೆಯ ಉದ್ಯೋಗಿಗಳಿಗೆ ಮಂಗಳವಾರ ಮುಂಜಾನೆ ಕಳುಹಿಸಲಾದ ಇ-ಮೇಲ್‌ವೊಂದು ಆತಂಕ ಮೂಡಿಸಿದೆ. “ನಿಮ್ಮ ಹುದ್ದೆಗೆ ಸಂಬಂಧಿಸಿದಂತೆ ಕೆಲವು ಕಠಿಣ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇವೆ. ಇಂದು ನಿಮ್ಮ ಕೊನೆಯ ಕೆಲಸದ ದಿನ” ಎಂದು ಇ-ಮೇಲ್‌ನಲ್ಲಿ ತಿಳಿಸಲಾಗಿದೆ ಎಂದು ಬಿಸಿನೆಸ್ ಇನ್‌ಸೈಡರ್ ವರದಿ ಮಾಡಿದೆ.
ಮಂಗಳವಾರ ಬೆಳಗ್ಗೆ ಸುಮಾರು 6 ಗಂಟೆಗೆ ಉದ್ಯೋಗಿಗಳಿಗೆ ಈ ಇ-ಮೇಲ್ ಕಳುಹಿಸಲಾಗಿದೆ ಎನ್ನಲಾಗಿದ್ದು, ಸಂಸ್ಥೆಯ ವ್ಯಾಪಕ ಸಾಂಸ್ಥಿಕ ಪುನರ್‌ರಚನೆಯ ಭಾಗವಾಗಿ ಕೆಲವು ಹುದ್ದೆಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಲಾಗಿದೆ. ಆದರೆ, ನಿರ್ದಿಷ್ಟ ಉದ್ಯೋಗಿಯನ್ನು ವೈಯಕ್ತಿಕವಾಗಿ ಕೆಲಸದಿಂದ ತೆಗೆದುಹಾಕಲು ಕಾರಣವೇನು ಎಂಬುದನ್ನು ಇ-ಮೇಲ್‌ನಲ್ಲಿ ವಿವರಿಸಲಾಗಿಲ್ಲ.
ಉದ್ಯೋಗಿಗಳ ಕಂಪ್ಯೂಟರ್, ಇ-ಮೇಲ್, ವಾಯ್ಸ್‌ಮೇಲ್ ಹಾಗೂ ಫೈಲ್‌ಗಳಿಗೆ ಇರುವ ಲಾಗಿನ್ ಪ್ರವೇಶವನ್ನು ಶೀಘ್ರದಲ್ಲೇ ಸ್ಥಗಿತಗೊಳಿಸಲಾಗುವುದು ಎಂದು ಕಂಪನಿ ತಿಳಿಸಿದೆ. ಅಲ್ಲದೆ, ಪರಿಹಾರಧನ ಹಾಗೂ ಇತರ ಅಗತ್ಯ ದಾಖಲೆಗಳನ್ನು ಪಡೆಯಲು ವೈಯಕ್ತಿಕ ಇ-ಮೇಲ್ ವಿಳಾಸವನ್ನು ನೀಡುವಂತೆ ಉದ್ಯೋಗಿಗಳಿಗೆ ಸೂಚಿಸಲಾಗಿದೆ.
AI, ಕ್ಲೌಡ್ ಮೂಲಸೌಕರ್ಯ ವೆಚ್ಚದ ನಡುವೆ ಲೇಆಫ್
ಕೃತಕ ಬುದ್ಧಿಮತ್ತೆ (AI) ಹಾಗೂ ಕ್ಲೌಡ್ ಮೂಲಸೌಕರ್ಯ ಕ್ಷೇತ್ರದಲ್ಲಿ ಒರಾಕಲ್ ಭಾರಿ ಪ್ರಮಾಣದಲ್ಲಿ ಹೂಡಿಕೆ ಮಾಡುತ್ತಿರುವ ಸಂದರ್ಭದಲ್ಲೇ ಈ ಹೊಸ ಸುತ್ತಿನ ಉದ್ಯೋಗ ಕಡಿತ ನಡೆದಿದೆ ಎಂದು ವರದಿ ತಿಳಿಸಿದೆ. ಆದರೆ, ಪ್ರಸ್ತುತ ಸುತ್ತಿನಲ್ಲಿ ಎಷ್ಟು ಉದ್ಯೋಗಿಗಳು ಕೆಲಸ ಕಳೆದುಕೊಂಡಿದ್ದಾರೆ ಎಂಬುದನ್ನು ಒರಾಕಲ್ ಅಧಿಕೃತವಾಗಿ ಬಹಿರಂಗಪಡಿಸಿಲ್ಲ.
ಈಗಾಗಲೇ 21 ಸಾವಿರ ಉದ್ಯೋಗಿಗಳ ಕಡಿತ
2026ರ ಆರ್ಥಿಕ ವರ್ಷದಲ್ಲಿ ಒರಾಕಲ್ ತನ್ನ ಜಾಗತಿಕ ಸಿಬ್ಬಂದಿ ಬಳಗದ ಸುಮಾರು ಶೇ.13ರಷ್ಟು, ಅಂದರೆ ಸುಮಾರು 21,000 ಉದ್ಯೋಗಿಗಳನ್ನು ವಜಾಗೊಳಿಸಿತ್ತು ಎಂದು ವರದಿಯಾಗಿದೆ.
ಈ ಪುನರ್‌ರಚನಾ ಪ್ರಕ್ರಿಯೆಗಾಗಿ ಕಂಪನಿಯ ವೆಚ್ಚವು 2.8 ಬಿಲಿಯನ್ ಡಾಲರ್‌ವರೆಗೆ ಹೆಚ್ಚಾಗಿದೆ ಎನ್ನಲಾಗಿದೆ. ಉದ್ಯೋಗ ಕಡಿತಗಳ ಬಳಿಕ ಒರಾಕಲ್‌ನ ಜಾಗತಿಕ ಸಿಬ್ಬಂದಿ ಸಂಖ್ಯೆ ಸುಮಾರು 1.41 ಲಕ್ಷಕ್ಕೆ ಇಳಿದಿದೆ ಎಂದು ವರದಿ ತಿಳಿಸಿದೆ.
-
ಬಿಗ್ ನ್ಯೂಸ್24 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಬಿಗ್ ನ್ಯೂಸ್23 hours agoSDPI-ಮಕ್ಕಳ ಆಟದ ಉಪಕರಣಗಳೇ ಹಾಳು: ಕಾರಂತರ ಬಾಲವನದ ದುಸ್ಥಿತಿಗೆ ಎಸ್ಡಿಪಿಐ ಅಸಮಾಧಾನ
-
ಬಿಗ್ ನ್ಯೂಸ್22 hours agoReservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು
-
ಅಪರಾಧ22 hours agoDigital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
-
ಅಂತರ ರಾಜ್ಯ21 hours agoNana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
-
ಅಂತರ ರಾಜ್ಯ21 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಅಂತರ ರಾಜ್ಯ22 hours agoCEC Jnanesh Kumar-ವಿಪಕ್ಷಗಳ ಪ್ರತಿಭಟನೆ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ನಿವಾಸಕ್ಕೆ ತೀವ್ರ ಭದ್ರತೆ
-
ಮಂಗಳೂರು20 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ


















