Connect with us

ಅಪರಾಧ

ಕಡಬ : ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಫಾರ್ಚ್ಯೂನರ್ ಕಾರು – ಐವರಿಗೆ ಗಾಯ

Published

on



Ad Widget

Ad Widget

Ad Widget

Ad Widget

ಕಡಬ: ಫಾರ್ಚ್ಯೂನರ್ ಕಾರು  ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಐವರು ಪ್ರಯಾಣಿಕರು ಗಾಯಗೊಂಡ ಘಟನೆ ಕಡಬ ತಾಲೂಕಿನ ಕಲ್ಲಾಜೆಯಲ್ಲಿ ನ.8ರಂದು ನಡೆದಿದೆ . ದುರ್ಘಟನೆಯೂ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ. ಅಪಘಾತಕ್ಕಿಡಾದ ಕಾರು ಬೆಂಗಳೂರಿನದು ಎಂದು ತಿಳಿದು ಬಂದಿದೆ.

Ad Widget

Ad Widget

Ad Widget

Ad Widget

 ತೀರ್ಥ ಕ್ಷೇತ್ರ ಯಾತ್ರೆಗೆಂದು ಬೆಂಗಳೂರಿನಿಂದ ಬಂದಿದ್ದ ಕಾರು ಇದಾಗಿತ್ತು ಎಂದು ಮೂಲಗಳಿಂದ ತಿಳಿದು ಬಂದಿದೆ. ಕಾರಿನಲ್ಲಿದ್ದವರು ಧರ್ಮಸ್ಥಳ ಪ್ರವಾಸ ಮುಗಿಸಿ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ವೇಳೆ ಕಡಬ ತಾಲೂಕಿನ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ  ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಅಪಘಾತದಲ್ಲಿ ಕಾರಿನಲ್ಲಿದ್ದ ಬೆಂಗಳೂರು ಮೂಲದ ಐವರಿಗೆ ಗಾಯಗಳಾಗಿವೆ. ಅವರಿಗೆ  ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿದೆ. ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Ad Widget

Ad Widget <> Ad Widget

ಸಾನ್ಯಾ ಅಯ್ಯರ್ ಬಿಗ್‌ ಬಾಸ್‌ ನಿಂದ ಎಲಿಮಿನೇಟ್  – ಕಣ್ಣೀರ ಧಾರೆ ಹರಿಸಿದ ರೂಪೇಶ್ ಶೆಟ್ಟಿ | ‘’Miss you Sanya’’ ಎಂದು ಹಣೆಗೆ ಪಟ್ಟಿ ಕಟ್ಟಿಕೊಂಡ ತುಳು ನಟ ಊಟದ ಸಮಯ ಮಾಡಿದ್ದು ಹೀಗೆ



Ad Widget
Ad Widget
Click to comment

Leave a Reply

ಸ್ಥಳೀಯ

Kadaba-ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಕಡಬ ನಿವಾಸಿ ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹50 ಸಾವಿರ ದಂಡ..!

Published

on



Ad Widget

Ad Widget

Ad Widget

Ad Widget

ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಘಟನೆಯ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿ ಕಡಬ ತಾಲೂಕಿನ ರಾಮಕುಂಜ ನಿವಾಸಿ ಶೇಖರ್ ಅಲಿಯಾಸ್ ಸೇಸಪ್ಪಗೆ ಮಂಗಳೂರಿನ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50,000 ದಂಡ ವಿಧಿಸಿ ತೀರ್ಪು ನೀಡಿದೆ.

Ad Widget

Ad Widget

Ad Widget

Ad Widget

ಕಡಬ: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಘಟನೆಯ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಿನ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50,000 ದಂಡ ವಿಧಿಸಿ ತೀರ್ಪು ನೀಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಶಿಕ್ಷೆಗೊಳಗಾದ ಆರೋಪಿ ಕಡಬ ತಾಲೂಕಿನ ರಾಮಕುಂಜ ನಿವಾಸಿ ಶೇಖರ್ ಅಲಿಯಾಸ್ ಸೇಸಪ್ಪ (30) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

2021ರ ಮೇ 8ರಂದು ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಈ ಘಟನೆಯ ಕುರಿತು ಯಾರಿಗಾದರೂ ಮಾಹಿತಿ ನೀಡಿದರೆ ಕೊಲೆ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದನೆಂದು ದೂರಲಾಗಿತ್ತು. ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 40/2021ರ ಅಡಿಯಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 376(2)(f)(n), 376(3), 506 ಹಾಗೂ ಪೋಕ್ಸೊ ಕಾಯ್ದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಲಾಗಿತ್ತು.



Ad Widget

ವೈಜ್ಞಾನಿಕ ಸಾಕ್ಷ್ಯ ಸಂಗ್ರಹಿಸಿ ದೋಷಾರೋಪ ಪಟ್ಟಿ ಸಲ್ಲಿಕೆ
ಅಂದಿನ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಯು. ಅವರು ಪ್ರಕರಣದ ತನಿಖೆ ನಡೆಸಿ, ಅಗತ್ಯ ವೈಜ್ಞಾನಿಕ ಮತ್ತು ಇತರ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದರು. ಬಳಿಕ ಆರೋಪಿ ಶೇಖರ್ ಅಲಿಯಾಸ್ ಸೇಸಪ್ಪ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

Ad Widget

Ad Widget

ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, ನ್ಯಾಯಾಧೀಶರಾದ ಸುಮಂಗಲಾ ಚಕಲಬ್ಬಿ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದ್ದಾರೆ.

20 ವರ್ಷ ಕಠಿಣ ಜೈಲು, ₹50 ಸಾವಿರ ದಂಡ
ಪೋಕ್ಸೊ ಕಾಯ್ದೆ 2012ರ ಕಲಂ 5(ಎಲ್) ಜೊತೆಗೆ ಕಲಂ 6ರ ಅಡಿಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25,000 ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ ಒಂದು ವರ್ಷ ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸಬೇಕಾಗುತ್ತದೆ.

ಅಲ್ಲದೇ, ಭಾರತೀಯ ದಂಡ ಸಂಹಿತೆಯ ಕಲಂ 506ರ ಅಡಿಯಲ್ಲಿ ಜೀವ ಬೆದರಿಕೆ ಹಾಕಿದ ಅಪರಾಧಕ್ಕೆ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25,000 ದಂಡ ವಿಧಿಸಲಾಗಿದೆ. ದಂಡ ಪಾವತಿಸದಿದ್ದರೆ ಹೆಚ್ಚುವರಿಯಾಗಿ ಒಂದು ವರ್ಷ ಸಾಧಾರಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.

ಒಟ್ಟಾರೆಯಾಗಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50,000 ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಪುಷ್ಪರಾಜ್ ಆಡ್ಯಂತಾಯ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

Ad Widget
Continue Reading

ಅಪರಾಧ

Udupi-ಉಡುಪಿ: ಭೂಗತ ಪಾತಕಿ ಹೇಮಂತ್ ಪೂಜಾರಿ ಸಹಚರನ ಬಂಧನ

Published

on



Ad Widget

Ad Widget

Ad Widget

Ad Widget

ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಆರೋಪಿ, ಭೂಗತ ಪಾತಕಿ ಹೇಮಂತ್ ಪೂಜಾರಿಯ ಸಹಚರನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೂಲತಃ ಕಾರ್ಕಳದವನಾಗಿದ್ದು, ಪ್ರಸ್ತುತ ಸುರತ್ಕಲ್‌ನಲ್ಲಿ ವಾಸಿಸುತ್ತಿರುವ ಅಬ್ದುಲ್ ರಾಹೀಸ್ (29) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಉಡುಪಿ, ಅ.15: ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಆರೋಪಿ, ಭೂಗತ ಪಾತಕಿ ಹೇಮಂತ್ ಪೂಜಾರಿಯ ಸಹಚರನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬಂಧಿತನನ್ನು ಮೂಲತಃ ಕಾರ್ಕಳದವನಾಗಿದ್ದು, ಪ್ರಸ್ತುತ ಸುರತ್ಕಲ್‌ನಲ್ಲಿ ವಾಸಿಸುತ್ತಿರುವ ಅಬ್ದುಲ್ ರಾಹೀಸ್ (29) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಈಗಾಗಲೇ ಮಂಗಳೂರು ಪೊಲೀಸರಿಂದ ಬಂಧಿತನಾಗಿರುವ ಬಾಂಬೆ ಫೈಸಲ್‌ನ ಸೂಚನೆಯಂತೆ ಅಬ್ದುಲ್ ರಾಹೀಸ್ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ. ಭೂಗತ ಪಾತಕಿ ಹೇಮಂತ್ ಪೂಜಾರಿಯ ಹಣಕಾಸಿನ ವ್ಯವಹಾರಗಳನ್ನು ಈತ ನಿರ್ವಹಿಸುತ್ತಿದ್ದ ಎಂದು ಪೊಲೀಸರು ಶಂಕಿಸಿದ್ದಾರೆ. ಉದ್ಯಮಿಗಳಿಗೆ ಜೀವ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಪ್ರಕರಣಗಳಲ್ಲಿ ಸಂಗ್ರಹವಾಗುವ ಹಣವನ್ನು ಈತ ವಸೂಲಿ ಮಾಡುತ್ತಿದ್ದ ಎನ್ನಲಾಗಿದೆ.



Ad Widget

ಬಂಧಿತನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Ad Widget

Ad Widget

ಹೇಮಂತ್ ಪೂಜಾರಿ ಹೆಸರಿನಲ್ಲಿ ಮತ್ತೊಬ್ಬ ಉದ್ಯಮಿಗೆ ಬೆದರಿಕೆ
ಇನ್ನೊಂದೆಡೆ, ಭೂಗತ ಪಾತಕಿ ಹೇಮಂತ್ ಪೂಜಾರಿಯ ಹೆಸರಿನಲ್ಲಿ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಮತ್ತೊಬ್ಬ ಉದ್ಯಮಿಗೆ ಬೆದರಿಕೆ ಕರೆ ಬಂದಿರುವುದಾಗಿ ವರದಿಯಾಗಿದೆ. ಕರೆ ಮಾಡಿದವರು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಘಟನೆಗಳ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Ad Widget
Continue Reading

ಅಂತರ ರಾಜ್ಯ

BJP minister-ಪತಿ ಎರಡು ಮದುವೆಯಾಗಿದ್ದರೆಂದು ದೂರು ದಾಖಲಿಸಿದ ಬಿಜೆಪಿ ಸಚಿವೆ..!

Published

on



Ad Widget

Ad Widget

Ad Widget

Ad Widget

ಉತ್ತರಾಖಂಡದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಬಿಜೆಪಿ ನಾಯಕಿ ರೇಖಾ ಆರ್ಯ ಅವರು ತಮ್ಮ ಪತಿ ಗಿರ್ಧಾರಿ ಲಾಲ್ ಸಾಹು ವಿರುದ್ಧ ಹಲ್ಲೆ, ಜಾತಿ ನಿಂದನೆ, ಕೊಲೆ ಸಂಚು, ಜೀವ ಬೆದರಿಕೆ ಹಾಗೂ ಹಿಂದಿನ ಮದುವೆಯನ್ನು ಮುಚ್ಚಿಟ್ಟು ವಿವಾಹವಾಗಿರುವ ಆರೋಪಗಳನ್ನು ಮಾಡಿ ಡೆಹ್ರಾಡೂನ್‌ನ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Ad Widget

Ad Widget

Ad Widget

Ad Widget

ಡೆಹ್ರಾಡೂನ್: ಉತ್ತರಾಖಂಡದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಬಿಜೆಪಿ ನಾಯಕಿ ರೇಖಾ ಆರ್ಯ ಅವರು ತಮ್ಮ ಪತಿ ಗಿರ್ಧಾರಿ ಲಾಲ್ ಸಾಹು ವಿರುದ್ಧ ಹಲ್ಲೆ, ಜಾತಿ ನಿಂದನೆ, ಕೊಲೆ ಸಂಚು, ಜೀವ ಬೆದರಿಕೆ ಹಾಗೂ ಹಿಂದಿನ ಮದುವೆಯನ್ನು ಮುಚ್ಚಿಟ್ಟು ವಿವಾಹವಾಗಿರುವ ಆರೋಪಗಳನ್ನು ಮಾಡಿ ಡೆಹ್ರಾಡೂನ್‌ನ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಗುರುವಾರ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಭಾವುಕ ವಿಡಿಯೋ ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ ಸಚಿವೆ ಅಸ್ವಸ್ಥರಾಗಿದ್ದು, ಡೆಹ್ರಾಡೂನ್‌ನ ಕೃಷ್ಣ ಮೆಡಿಕಲ್ ಸೆಂಟರ್‌ನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಈ ಪ್ರಕರಣ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದ್ದು, ಕಾಂಗ್ರೆಸ್ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದೆ.

Ad Widget

Ad Widget <> Ad Widget

ಮೊದಲ ಮದುವೆ ಮುಚ್ಚಿಟ್ಟ ಆರೋಪ
ಅಲ್ಮೋರಾ ಜಿಲ್ಲೆಯ ಸೋಮೇಶ್ವರ ಕ್ಷೇತ್ರದ ಬಿಜೆಪಿ ಶಾಸಕಿ ಹಾಗೂ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಂಪುಟದ ಸಚಿವೆಯಾಗಿರುವ ರೇಖಾ ಆರ್ಯ, ತಾವು ಉತ್ತರಾಖಂಡದಲ್ಲಿ ಅಧಿಸೂಚಿತ ಪರಿಶಿಷ್ಟ ಜಾತಿಗೆ ಸೇರಿದವರಾಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.



Ad Widget

ಉತ್ತರ ಪ್ರದೇಶದ ಬರೇಲಿಯ ಜೋಗಿ ನವಾಡ ನಿವಾಸಿ ಗಿರ್ಧಾರಿ ಲಾಲ್ ಸಾಹು (ಪಪ್ಪು ಗಿರ್ಧಾರಿ) ಅವರನ್ನು 2004ರ ಜುಲೈ 6ರಂದು ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದಾಗಿ ಅವರು ಹೇಳಿದ್ದಾರೆ. ಮದುವೆಯ ಸಂದರ್ಭದಲ್ಲಿ ಪತಿ ತಾನು ಅವಿವಾಹಿತನೆಂದು ತಿಳಿಸಿದ್ದರು. ಆದರೆ, ನಂತರ ಅವರಿಗೆ ಮೊದಲೇ ಮದುವೆಯಾಗಿದ್ದು, ಮಕ್ಕಳೂ ಇದ್ದ ವಿಚಾರ ತಿಳಿದುಬಂದಿತ್ತು ಎಂದು ಆರೋಪಿಸಿದ್ದಾರೆ.

Ad Widget

Ad Widget

ಆ ಸಮಯದಲ್ಲಿ ತಮಗೂ ಮಕ್ಕಳಾಗಿದ್ದರಿಂದ, ಕುಟುಂಬದವರ ಸಲಹೆ ಹಾಗೂ ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮೌನವಾಗಿದ್ದೆ ಎಂದು ರೇಖಾ ಆರ್ಯ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಹಲ್ಲೆ, ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಆರೋಪ
ಇತ್ತೀಚಿನ ದಿನಗಳಲ್ಲಿ ಪತಿಯ ವರ್ತನೆಯಲ್ಲಿ ಬದಲಾವಣೆಯಾಗಿದ್ದು, ಇತರ ಮಹಿಳೆಯರೊಂದಿಗೆ ಅಕ್ರಮ ಸಂಬಂಧ ಹೊಂದಿರುವ ವಿಚಾರ ತಿಳಿದುಬಂದಿದೆ ಎಂದು ಸಚಿವೆ ಆರೋಪಿಸಿದ್ದಾರೆ. ಈ ಬಗ್ಗೆ ಪ್ರಶ್ನಿಸಿದಾಗ ಆರಂಭದಲ್ಲಿ ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ್ದರೂ, ಬಳಿಕವೂ ಅದೇ ವರ್ತನೆ ಮುಂದುವರಿದಿತ್ತು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂಬಂಧಗಳನ್ನು ವಿರೋಧಿಸಿದಾಗ ಪತಿ ತಮ್ಮ ಮೇಲೆ ಹಲ್ಲೆ ನಡೆಸಿ, ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಸರ್ಕಾರಿ ನಿವಾಸದ ಸಿಬ್ಬಂದಿಯ ಎದುರಲ್ಲಿಯೇ ಜಾತಿ ನಿಂದನೆ ಮಾಡಿರುವುದಾಗಿಯೂ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದಲ್ಲದೆ, ತಾವು ಸಹಿ ಮಾಡದ ದಾಖಲೆಗಳಲ್ಲಿ ತಮ್ಮ ಸಹಿಯನ್ನು ನಕಲು ಮಾಡಿ, ಸಂಬಂಧಿತ ಕಂಪನಿಗಳ ನಿರ್ದೇಶಕ ಹುದ್ದೆಯಿಂದ ತಮ್ಮನ್ನು ತೆಗೆದುಹಾಕಲಾಗಿದೆ ಎಂದು ತೋರಿಸಲು ನಕಲಿ ದಾಖಲೆಗಳನ್ನು ಬಳಸಲಾಗಿದೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ.

ಕೊಲೆ ಸಂಚಿನ ಆಡಿಯೋ ಇದೆ ಎಂದ ಸಚಿವೆ
ತಮ್ಮ ಬಳಿ ಇರುವ ಆಡಿಯೋ ಕ್ಲಿಪ್‌ನಲ್ಲಿ ಪತಿ ಮತ್ತೊಬ್ಬ ಮಹಿಳೆಯೊಂದಿಗೆ ಮಾತನಾಡುತ್ತಾ ತಮ್ಮನ್ನು ಕೊಲೆ ಮಾಡಲು ಸಂಚು ರೂಪಿಸುತ್ತಿರುವುದು ಕೇಳಿಬರುತ್ತದೆ ಎಂದು ರೇಖಾ ಆರ್ಯ ಆರೋಪಿಸಿದ್ದಾರೆ. ತಮಗೆ ಹಾಗೂ ತಮ್ಮ ಅಪ್ರಾಪ್ತ ಮಕ್ಕಳಿಗೆ ಜೀವ ಬೆದರಿಕೆ ಇದೆ ಎಂದು ದೂರಿನಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಗುರುವಾರ ಫೇಸ್‌ಬುಕ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದ ಅವರು, ಆಡಿಯೋ ಕೇಳಿ ತೀವ್ರ ಆಘಾತವಾಗಿದೆ ಎಂದು ಕಣ್ಣೀರಿಟ್ಟಿದ್ದರು. ಸತ್ಯ ಮತ್ತು ಪ್ರಾಮಾಣಿಕತೆಯಿಂದ ಬದುಕಿದ್ದಕ್ಕೆ ಇಂತಹ ಪರಿಸ್ಥಿತಿ ಎದುರಿಸಬೇಕಾಗಿದೆಯೇ ಎಂದು ಪ್ರಶ್ನಿಸಿದ್ದ ಅವರು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಪೊಲೀಸ್ ದೂರು ದಾಖಲಿಸುವ ಅನಿವಾರ್ಯತೆ ಎದುರಾಯಿತು ಎಂದು ಹೇಳಿದ್ದರು.

ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲು
ಸಚಿವೆಯ ದೂರಿನ ಆಧಾರದ ಮೇಲೆ ಕ್ರಿಮಿನಲ್ ಪಿತೂರಿ, ವಂಚನೆ, ನಕಲಿ ದಾಖಲೆ ಸೃಷ್ಟಿ, ದ್ವಿವಿವಾಹ, ಗೃಹಹಿಂಸೆ, ಹಲ್ಲೆ, ಜೀವ ಬೆದರಿಕೆ ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಈ ಘಟನೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ರಾಜ್ಯದ ಸಚಿವೆಯೊಬ್ಬರೇ ಪತಿಯಿಂದ ಜೀವ ಬೆದರಿಕೆ ಇದೆ ಎಂದು ದೂರು ನೀಡಿರುವುದು ಬಿಜೆಪಿ ಸರ್ಕಾರಕ್ಕೆ ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದೆ.
ಕಾಂಗ್ರೆಸ್ ವಕ್ತಾರೆ ಗರಿಮಾ ಮೆಹ್ರಾ ದಾಸೌನಿ ಅವರು, ಸಚಿವೆಯೇ ಇಂತಹ ಆರೋಪಗಳನ್ನು ಮಾಡಿರುವುದು ಸರ್ಕಾರದ ಕಾರ್ಯವೈಖರಿಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಹೇಳಿದ್ದಾರೆ. ಪ್ರಕರಣದ ನ್ಯಾಯಸಮ್ಮತ ತನಿಖೆ ನಡೆಸಿ, ಆರೋಪಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading