ಸ್ಥಳೀಯ
ಕಟೀಲು ಮೇಳದಿಂದ ಕಾಲಮಿತಿ ಯಕ್ಷಗಾನ – ಭಕ್ತಾದಿಗಳ , ಸೇವಾಕರ್ತರ ಅಸಮಾಧನ : ನ.6ರಂದು ಕಟೀಲಮ್ಮನೆಡೆಗೆ ಭಕ್ತರ ನಡೆ ಪಾದಯಾತ್ರೆ
ಮಂಗಳೂರು: ಗಂಡು ಕಲೆ ಯಕ್ಷಗಾನದ ಅತೀ ಪ್ರಸಿದ್ದ ಮೇಳ ಎಂಬ ಖ್ಯಾತಿಗೆ ಪಾತ್ರವಾಗಿರುವ ಕಟೀಲು ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಬಯಲಾಟ ಪ್ರದರ್ಶನವು ಸರಕಾರದ ನಿಭಂದನೆಗಳಿಂದ ಈ ಬಾರಿ ಕಾಲಮಿತಿಗೆ ಒಳಪಡಿಸಲಾಗಿದೆ. ಕಟೀಲು ಮೇಳದ ಆಟ ಕೇವಲ ಮನರಂಜನೆ ಹಾಗೂ ಕಲೆಯ ಉದ್ದೇಶ ಮಾತ್ರ ಹೊಂದಿರದೆ ಅದಕ್ಕೊಂದು ಧಾರ್ಮಿಕ ಹಿನ್ನಲೆಯೂ ಇದೆ.
ಕಟೀಲು ದೇವಸ್ಥಾನದಲ್ಲಿ ವಿರಜಮಾನಳಾಗಿರುವ ಭ್ರಮಾರಂಬಿಕೆಯೂ ಯಕ್ಷಗಾನ ಪ್ರಿಯೆ. ಹೀಗಾಗಿ ಯಕ್ಷಗಾನ ಸೇವೆ ನೀಡಿದರೆ ಆಕೆ ಸಂತೃಪ್ತಳಾಗುತ್ತಳೆ ಆ ಮೂಲಕ ಭಕ್ತರ ಇಷ್ಟಾರ್ಥ ಈಡೇರಿಸುತ್ತಾಳೆ ಎಂಬ ನಂಬಿಕೆ ಭಕ್ತರಲ್ಲಿದೆ. ಹೀಗಾಗಿಯೆ ಇಲ್ಲಿನ ಮೇಳಕ್ಕೆ ಬಹು ಬೇಡಿಕೆ. ಕಟೀಲು ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯು ಒಟ್ಟು 6 ಮೇಳಗಳನ್ನು ಹೊಂದಿದ್ದು, ಆದರ ಹಲವು ವರ್ಷಗಳ ಪ್ರದರ್ಶನ ಈಗಾಗಲೇ ಬುಕ್ ಆಗಿದೆ.
ಉಭಯ ಜಿಲ್ಲೆಯ ಬಹುತೇಕ ಮೇಳಗಳು ಕಾಲ ಮಿತಿ ಆಟಕ್ಕೆ ಒಗ್ಗಿಕೊಂಡಿವೆಯಾದರೂ, ಕಟೀಲು ಮೇಳ ಮಾತ್ರ ಹಿಂದಿನ ಸಾಲಿನವರೆಗೂ ರಾತ್ರಿಯಿಂದ ಮುಂಜಾವಿನವರೆಗೆ ಪ್ರದರ್ಶನಗೊಳ್ಳುತಿತ್ತು. ಆದರೇ ಈ ಸಾಲಿನಿಂದ ರಾತ್ರಿ 10 ಗಂಟೆಗೆ ಪ್ರದರ್ಶನ ಮುಕ್ತಾಯಗೊಳ್ಳಲಿದೆ. ಇನ್ನು ಮುಂದೆ ಈ ಮೇಳ ಸಂಜೆ 4.30ರಿಂದ ರಾತ್ರಿ 10ರವರೆಗೆ ಮಾತ್ರ ಪ್ರದರ್ಶನ ನೀಡಲಿದೆ. ಆಡಳಿತ ಮಂಡಳಿಯ ನಿರ್ಧಾರಕ್ಕೆ ಭಕ್ತಾದಿಗಳ ವಲಯದಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ಹೀಗಾಗಿ ಕಾಲಮಿತಿ ಯಕ್ಷಗಾನವನ್ನು ವಿರೋಧಿಸಿ `ಕಟೀಲಮ್ಮನೆಡೆಗೆ ಭಕ್ತರ ನಡೆ’ ಪಾದಯಾತ್ರೆ ನಡೆಸಲು ಶ್ರೀ ಕಟೀಲು ಯಕ್ಷ ಸೇವಾ ಸಮನ್ವಯ ಸಮಿತಿಯ ಸದಸ್ಯರು ನಿರ್ಧರಿಸಿದ್ದಾರೆ. ನ.6ರಂದು ಬಜಪೆ ಶ್ರೀ ಶಾರದಾ ಶಕ್ತಿ ಮಂಟಪದಿಂದ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ವರೆಗೆ ಈ ಪ್ರತಿಭಟನಾ ಪಾದಯಾತ್ರೆ ನಡೆಯಲಿದೆ
ಯಕ್ಷಗಾನ ಪರಂಪರೆಯಂತೆ ಬೆಳಗ್ಗಿನವರೆಗೆ ನಡೆಯಬೇಕೆಂದು ಆಗ್ರಹಿಸಿ ಶ್ರೀ ಕಟೀಲು ಯಕ್ಷ ಸೇವಾ ಸಮನ್ವಯ ಸಮಿತಿಯ ಸದಸ್ಯರು ಯನ್ನು ನಡೆಸಲು ನಿರ್ಧರಿಸಿದ್ದಾರೆ.
ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಪದಾಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಶ್ರೀ ಕಟೀಲು ಕ್ಷೇತ್ರದಿಂದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯವರು (ಕಟೀಲು ಮೇಳ) ಆಡಿ ತೋರಿಸಲಿರುವ ಯಕ್ಷಗಾನವು ಶ್ರೀ ಕಟೀಲು ಅಮ್ಮನವರಿಗೆ ಅತ್ಯಂತ ಪ್ರಿಯವಾದ ಯಕ್ಷಗಾನ ಸೇವೆಯಾಗಿದೆ.
ದೇವಸ್ಥಾನದ ಮೇಳದವರು ಹಿಂದಿನಿಂದಲೂ ನಡೆಸಿಕೊಂಡು ಬಂದಿರುವ ರಾತ್ರಿ ಯಕ್ಷಗಾನ ಸೇವೆಯಾಟಗಳನ್ನು ಏಕಪಕ್ಷೀಯವಾಗಿ ದಿಢೀರಾಗಿ ಸಂಜೆ 4.30ರಿಂದ ರಾತ್ರಿ 10ರವರೆಗೆ ಕಾಲಮಿತಿಗೆ ಸೀಮಿತಗೊಳಿಸಿ ಮುಂದೆ ನಡೆಸುವುದಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿದ ದೇವಳದ ಆತುರದ ನಿರ್ಧಾರ ಭಕ್ತಾದಿಗಳ ಮನಸ್ಸಿಗೆ ಆಘಾತ ಮಾಡಿದೆ ಎಂದು ತಿಳಿಸಿದ್ದಾರೆ.
ಭಕ್ತಾದಿಗಳು ಕಷ್ಟ ಕಾರ್ಪಣ್ಯಗಳಿಗೆ ಒಳಗಾದಗ ತ್ವರಿತ ಪರಿಹಾರವಾದಲ್ಲಿ ತಮ್ಮ ಕ್ಷೇತ್ರದಲ್ಲಿ ಬಯಲಾಟ ಆಡಿಸುವುದಾಗಿ ಹರಕೆ ಹೊರುತ್ತಾರೆ. ಅದೇ ರೀತಿ ಊರಿನ ಹತ್ತು ಸಮಸ್ಥರು ಗ್ರಾಮದಲ್ಲಿ ದುಷ್ಟಾರಿಷ್ಟಗಳು ಕಳೆದು ಗ್ರಾಮ, ರಾಷ್ಟ್ರಕ್ಕೆ ಸುಭಿಕ್ಷೆಯಾಗಲಿ ಎಂದು ಪ್ರಾರ್ಥಿಸಿ ಯಕ್ಷಗಾನ ಸೇವೆ ಸಲ್ಲಿಸುತ್ತಾರೆ.
ಶ್ರದ್ಧಾ ಭಕ್ತಿ ನಂಬಿಕೆ ಭಾವಪರವಶತೆಯಿಂದ ಪರಂಪರಾಗತವಾಗಿ ತುಳುನಾಡಿನ ಮಣ್ಣಿನ ಪ್ರತೀತಿಯಂತೆ ಸಮರ್ಪಿಸುವ ಸೇವೆ ಯಕ್ಷಗಾನ. ಕಟೀಲು ತಾಯಿ ರಾತ್ರಿಯ ಪೂಜೆಯ ನಂತರ ಕಟೀಲು ಮೇಳದ ಯಕ್ಷಗಾನ ವೀಕ್ಷಿಸಲು ತೆರಳುತ್ತಾಳೆ ಎಂಬ ಸಾರ್ವತ್ರಿಕ ನಂಬಿಕೆ ಭಕ್ತರಲ್ಲಿ ಹಾಗೂ ಸೇವಾಕರ್ತರಲ್ಲಿದೆ.
ಅಷ್ಟಮಂಗಲ ಪ್ರಶ್ನೆಯಲ್ಲೂ ಇದು ಶ್ರುತಗೊಂಡು ಕಟೀಲಿನ ಅಸ್ರಣ್ಣರು ಈ ಸತ್ಯವನ್ನು ತಾವು ಮಾಡುವ ಪ್ರಾರ್ಥನೆಯಲ್ಲೂ ಉಲ್ಲೇಖಿಸುವುದು ದಿಟ. ಕಟೀಲು ಮೇಳಕ್ಕೆ ಹರಕೆಯ ಯಕ್ಷಗಾನ ಬಯಲಾಟಗಳು ಹರಿದು ಬರುವಷ್ಟು ಇತರ ಯಾವುದೇ ಮೇಳಗಳಿಗೂ ಬರುವುದಿಲ್ಲ. ಆದುದರಿಂದಲೇ 80ರ ದಶಕದಲ್ಲಿ ಒಂದಿಂದ್ದ ಕಟೀಲು ಮೇಳ ಭಕ್ತಾದಿಗಳ ಅವಶ್ಯಕತೆ ಪೂರೈಸಲು ಇಂದು 6 ಮೇಳಗಳಾಗಿ ನಾಡಿನ ಉದ್ದಗಲಕ್ಕೂ ಸಂಚರರಿಸುತ್ತಿದೆ.
ಕಾಲಮಿತಿ ಯಕ್ಷಗಾನ ನಿರ್ಧಾರದಿಂದ ಮೂಲ ಆಶಯ ಸೊರಗಿ ಜನರ ಧಾರ್ಮಿಕ ನಂಬಿಕೆಗೆ ಘಾಸಿಯಾಗಿದೆ. ಮಾತ್ರವಲ್ಲ ಪರಂಪರೆಗೆ ಧಕ್ಕೆ ತಂದಿದೆ. ಕಾಲಮಿತಿ ಆಟವಾದರೆ ಈ ಬಾರಿಯಿಂದಲೇ ಸೇವಾ ಬಯಲಾಟವನ್ನು ನಿಲ್ಲಿಸೋಣ ಎಂಬ ಪತ್ರಗಳನ್ನು ಈಗಾಗಲೇ ಸಂಬಂಧಿತರಿಗೆ ತಲುಪಿಸಿರುವ ಬಗ್ಗೆ ಮಾಹಿತಿ ಇದೆ. ಮತ್ತಷ್ಟು ಹತ್ತು ಸಮಸ್ತರು ವರ್ಷಂಪ್ರತಿ ನಡೆಸಲಿರುವ ಸೇವೆಯನ್ನು ಬೇರೆ ಮೇಳಗಳಿಂದ ಮಾಡಿಸುವ ಯಾ ಶ್ರೀದೇವಿಗೆ ಕಾಣಿಕೆ ಹಾಕಿ ಪ್ರಾರ್ಥಿಸುವ ಯಾ ಇನ್ನಿತರ ವಿಧಗಳಲ್ಲಿ ಹರಕೆ ತೀರಿಸಲು ನಿರ್ಧರಿಸಿರುವುದು ಗಮನಕ್ಕೆ ಬಂದಿದೆ.
ಅರ್ಧಂಬರ್ಧ ಸೇವೆ ಮಾಡುವುದಕ್ಕಿಂತ ಸೇವೆಯನ್ನು ನಿಲ್ಲಿಸೋಣ ಎಂದು ಹೇಳುತ್ತಿರುವುದು ನೊಂದ ಭಕ್ತರ ಮನದಾಳದ ನೋವನ್ನು ವ್ಯಕ್ತಪಡಿಸುತ್ತದೆ. ಯಾವುದೇ ಕಾರಣಕ್ಕೂ ಯಕ್ಷಗಾನ ಸೇವೆಯನ್ನು ಮೊಟಕುಗೊಳಿಸಿ ಶ್ರೀದೇವಿಗೆ ಅರ್ಪಿಸುವ ಸೇವೆಯಲ್ಲಿ ನ್ಯೂನತೆ ಅಪಚಾರ ಸಲ್ಲದು ಎಂದು ಸೇವಾದಾರರು ವಾದಿಸುತ್ತಿದ್ದಾರೆ.
ಕೆಲವೊಂದು ಕಡೆಗಳಲ್ಲಿ ಅರ್ಧ ಆಟಕ್ಕೆ ಅರ್ಧ ವೀಳ್ಯ ನಿಗದಿಪಡಿಸಲಿ, ಮಾಡದ ಕೆಲಸಕ್ಕೆ ಪಾವತಿ ಏಕೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಜಿಲ್ಲೆ, ರಾಜ್ಯ, ಹೊರರಾಜ್ಯಗಳಲ್ಲೂ ಭಕ್ತಾದಿಗಳು ತಮ್ಮ ಭಾವನೆಗಳನ್ನು ತುಂಬಾ ನೋವಿನಿಂದ ಪ್ರಕಟಪಡಿಸುತ್ತಿದ್ದಾರೆ ಎಂದರೆ ಈ ನಿರ್ಧಾರ ಅದೆಷ್ಟು ಜನರ ಶ್ರದ್ಧಾಭಕ್ತಿಯನ್ನು ಘಾಸಿಗೊಳಿಸಿದೆ ಎಂಬುವುದನ್ನು ಪರಾಂಬರಿಸಬಹುದು.
ಬಜಪೆಯಿಂದ ಕಟೀಲಿಗೆ ಪಾದಯಾತ್ರೆ
ಕಟೀಲು ಮೇಳದವರ ಈ ಆಘಾತಕಾರಿ ನಿರ್ಧಾರದಿಂದ ನೊಂದ ಸಹಸ್ರಾರು ಭಕ್ತಾದಿಗಳು ನಮ್ಮ ಸಮಿತಿಯ ನೇತೃತ್ವದಲ್ಲಿ, ಯಕ್ಷಗಾನ ಪರಂಪರೆಯಂತೆ ಬೆಳಗ್ಗಿನವರೆಗೆ ನಡೆಯಲೇಬೇಕು ಎಂದು ಆಗ್ರಹಿಸಿ ದಿನಾಂಕ 06.11.2022ರಂದು ಬೆಳಿಗ್ಗೆ 8.30 ರಿಂದ ಬಜಪೆ ಶ್ರೀ ಶಾರದಾ ಶಕ್ತಿ ಮಂಟಪದಿಂದ ಕಟೀಲಮ್ಮನೆಡೆ ಭಕ್ತರ ನಡೆ ಪಾದಯಾತ್ರೆಯನ್ನು ನಡೆಸಲಿದ್ದೇವೆ. ಹಾಗೂ ಶ್ರೀದೇವಿಯಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸುವವರಿದ್ದೇವೆ. ಕಾರ್ಯಕ್ರಮದಲ್ಲಿ 8000 ಕ್ಕೂ ಅಧಿಕ ಮಂದಿ ಭಕ್ತಾದಿಗಳು ಭಾಗವಹಿಸಲಿದ್ದಾರೆ ಅಂದರು.
ಸುದ್ದಿಗೋಷ್ಠಿಯಲ್ಲಿ ಅಶೋಕ ಕೃಷ್ಣಾಪುರ, ಲೋಕನಾಥ ಶೆಟ್ಟಿ, ಕೃಷ್ಣಪ್ಪ ಪೂಜಾರಿ, ಪಿ.ಸುಧಾಕರ ಕಾಮತ್, ಮೋಹನ್ ಶೆಟ್ಟಿ ಬಜಪೆ, ದುರ್ಗಾಪ್ರಸಾದ್ ಹೊಳ್ಳ ಹರೀಶ್ ಶೆಟ್ಟಿ, ಮರಕಡ ಗುರುಪ್ರಸಾದ್ ಹೊಳ್ಳ, ಪಾಂಡುರಂಗ ಕುಕ್ಯಾನ್ ಅಣ್ಣಪ್ಪ ದೇವಾಡಿಗಉಪಸ್ಥಿತರಿದ್ದರು.
ಶಿಕ್ಷಣ
Philomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
ಕಾಲ ಐದು ದಶಕಗಳತ್ತ ಸಾಗಿದರೂ, ಕಾಲೇಜಿನ ಆವರಣದಲ್ಲಿ ಕಳೆದ ಯೌವನದ ದಿನಗಳ ನೆನಪುಗಳು ಮಾತ್ರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತವೆ. ಅಂತಹ ಸುವರ್ಣ ನೆನಪುಗಳನ್ನು ಮತ್ತೊಮ್ಮೆ ಜೀವಂತಗೊಳಿಸಿದ ಅಪೂರ್ವ ಕ್ಷಣಕ್ಕೆ ಸಂತ ಫಿಲೋಮಿನಾ ಕಾಲೇಜು ಸಾಕ್ಷಿಯಾಯಿತು. 1991ರ ಬಿ.ಎಸ್ಸಿ. ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು 35 ವರ್ಷಗಳ ಬಳಿಕ ತಮ್ಮ ಎರಡನೇ ಪುನರ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮಕ್ಕಾಗಿ ರವಿವಾರ ಪಿಜಿ ಸೆಮಿನಾರ್ ಹಾಲ್‌ನಲ್ಲಿ ಸೇರಿ, ಹಳೆಯ ಸ್ನೇಹ, ಗೌರವ ಮತ್ತು ಆತ್ಮೀಯತೆಯನ್ನು ಮರುಕಳಿಸಿದರು.

ಪುತ್ತೂರು, ಅ.4: ಕಾಲ ಐದು ದಶಕಗಳತ್ತ ಸಾಗಿದರೂ, ಕಾಲೇಜಿನ ಆವರಣದಲ್ಲಿ ಕಳೆದ ಯೌವನದ ದಿನಗಳ ನೆನಪುಗಳು ಮಾತ್ರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತವೆ. ಅಂತಹ ಸುವರ್ಣ ನೆನಪುಗಳನ್ನು ಮತ್ತೊಮ್ಮೆ ಜೀವಂತಗೊಳಿಸಿದ ಅಪೂರ್ವ ಕ್ಷಣಕ್ಕೆ ಸಂತ ಫಿಲೋಮಿನಾ ಕಾಲೇಜು ಸಾಕ್ಷಿಯಾಯಿತು. 1991ರ ಬಿ.ಎಸ್ಸಿ. ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು 35 ವರ್ಷಗಳ ಬಳಿಕ ತಮ್ಮ ಎರಡನೇ ಪುನರ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮಕ್ಕಾಗಿ ರವಿವಾರ ಪಿಜಿ ಸೆಮಿನಾರ್ ಹಾಲ್‌ನಲ್ಲಿ ಸೇರಿ, ಹಳೆಯ ಸ್ನೇಹ, ಗೌರವ ಮತ್ತು ಆತ್ಮೀಯತೆಯನ್ನು ಮರುಕಳಿಸಿದರು.
ಅತ್ಯಂತ ಸುಂದರ ಹಾಗೂ ಮನೋಜ್ಞವಾಗಿ ನಡೆದ ಈ ಪುನರ್ಮಿಲನ ಕಾರ್ಯಕ್ರಮದಲ್ಲಿ 1991ರ ಬ್ಯಾಚ್‌ನ ಹಳೆ ವಿದ್ಯಾರ್ಥಿಗಳು ತಮ್ಮ ಕಾಲೇಜು ದಿನಗಳ ನೆನಪುಗಳನ್ನು ಮೆಲುಕು ಹಾಕುತ್ತಾ, ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ವೃತ್ತಿ ಹಾಗೂ ಸಾಮಾಜಿಕ ಬದುಕಿನಲ್ಲಿ ವಿವಿಧ ಉನ್ನತ ಸ್ಥಾನಗಳನ್ನು ಅಲಂಕರಿಸಿರುವ ಅವರು, ಕಾಲೇಜಿನ ಆವರಣದಲ್ಲಿ ಮತ್ತೆ ವಿದ್ಯಾರ್ಥಿಗಳಂತೆಯೇ ಬೆರೆತು, ತಮ್ಮ ಸುವರ್ಣ ದಿನಗಳನ್ನು ನೆನಪಿಸಿಕೊಂಡರು.

ಕಾಲೇಜಿನ ಪ್ರಾಂಶುಪಾಲರಾದ ರೆ.ಡಾ. ಆಂಟನಿ ಪ್ರಕಾಶ್ ಮೊಂತೆರೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಅವರು ಮಾತನಾಡಿ, “ಕಾಲೇಜು ಬದುಕಿತ್ತು; ಬದುಕುತ್ತಿದೆ; ಮುಂದೆಯೂ ಬದುಕಲಿದೆ. ಆದರೆ ಅದಕ್ಕಿಂತ ಮುಖ್ಯವಾದುದು ಪ್ರೀತಿ, ಗೌರವ ಮತ್ತು ಸದ್ಭಾವನೆ. ನಿಮ್ಮಂತಹ ಹಿರಿಯ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸದ್ಭಾವನೆಯಿಂದಲೇ ಕಾಲೇಜು ನಿರಂತರವಾಗಿ ಬೆಳೆಯುತ್ತಿದೆ,” ಎಂದು ಹೇಳಿ, ಹಿರಿಯ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಅತ್ಯಂತ ಶಿಸ್ತಿನಿಂದ ಹಾಗೂ ಸಮಯಪಾಲನೆಯೊಂದಿಗೆ ಸಂಘಟಿಸಿರುವುದನ್ನು ಶ್ಲಾಘಿಸಿದ ಅವರು, ಅವರ ಶಿಸ್ತು ಮತ್ತು ಸಮಯ ನಿರ್ವಹಣೆಯ ಸೂಕ್ಷ್ಮತೆಯು ಯಾರಿಗಾದರೂ ಮಾದರಿಯಾಗಬಲ್ಲದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾಲೇಜಿನ ಅಭಿವೃದ್ಧಿಗೆ ₹2 ಲಕ್ಷ ಕೊಡುಗೆ- ನೆನಪಿನಿಂದ ನಂಟಿಗೆ, ನಂಟಿನಿಂದ ಕೊಡುಗೆಗೆ
ಪುನರ್ಮಿಲನವು ಕೇವಲ ಹಳೆಯ ನೆನಪುಗಳನ್ನು ಮೆಲುಕು ಹಾಕುವ ಕಾರ್ಯಕ್ರಮವಾಗಿ ಉಳಿಯದೆ, ತಾವು ಕಲಿತ ಸಂಸ್ಥೆಯ ಮೇಲಿನ ಋಣ ತೀರಿಸುವ ಸಾರ್ಥಕ ಸಂದರ್ಭವಾಗಿಯೂ ಪರಿಣಮಿಸಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 1991ರ ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು ಒಟ್ಟಾಗಿ ₹2 ಲಕ್ಷವನ್ನು ಕಾಲೇಜಿನ ಅಭಿವೃದ್ಧಿ ಕಾರ್ಯಗಳಿಗಾಗಿ ದೇಣಿಗೆಯಾಗಿ ನೀಡಿದರು.ತಾವು ವಿದ್ಯಾಭ್ಯಾಸ ಪಡೆದ ಸಂಸ್ಥೆಯ ಅಭಿವೃದ್ಧಿಗೆ ದಶಕಗಳ ಬಳಿಕವೂ ಕೈಜೋಡಿಸಿದ ಹಿರಿಯ ವಿದ್ಯಾರ್ಥಿಗಳ ಈ ಕೊಡುಗೆ ಕಾಲೇಜಿನ ಮೇಲಿನ ಅವರ ಪ್ರೀತಿ, ಕೃತಜ್ಞತೆ ಹಾಗೂ ಸದ್ಭಾವನೆಯ ಪ್ರತೀಕವಾಗಿ ಮೂಡಿಬಂತು.
ವೃತ್ತಿ ಸಾಧನೆಗೆ ಗೌರವ
ಹಿರಿಯ ವಿದ್ಯಾರ್ಥಿಗಳ ವೃತ್ತಿಪರ ಸಾಧನೆಗಳನ್ನೂ ಕಾರ್ಯಕ್ರಮದಲ್ಲಿ ಗುರುತಿಸಲಾಯಿತು. ಡಾ. ಗಿರೀಶ್ ಭಟ್ ಅಜಕ್ಕಳ ಹಾಗೂ ಶ್ರೀ ನವೀನ್ ಕುಮಾರ್ ಅವರನ್ನು ಅವರ ವೃತ್ತಿಪರ ಸಾಧನೆಗಳಿಗಾಗಿ ಗೌರವಿಸಲಾಯಿತು. ವೃತ್ತಿಜೀವನದಲ್ಲಿನ ಸಾಧನೆಗಳು ಹಾಗೂ ಪ್ರಗತಿಯನ್ನು ಗುರುತಿಸಿ ವಿವಿಧ ಗೌರವಗಳನ್ನು ನೀಡಿ ಅಭಿನಂದಿಸಲಾಯಿತು. ರೈಲ್ವೆ ಉದ್ಯೋಗದಲ್ಲಿನ ಪದೋನ್ನತಿಯೂ ಸೇರಿದಂತೆ ವೃತ್ತಿಪರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯ ವಿದ್ಯಾರ್ಥಿಗಳ ಯಶಸ್ಸನ್ನು ಕಾರ್ಯಕ್ರಮದಲ್ಲಿ ಮೆಚ್ಚುಗೆಯಿಂದ ಸ್ಮರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ವಾಣಿ ಹಾಗೂ ಡಾ. ಚಂದ್ರಶೇಖರ್ ಕೆ ಜಿ ಪ್ರಾರ್ಥನೆ ನೆರವೇರಿಸಿದರು. ಡಾ. ಕೃಷ್ಣಪ್ರಭಾ ಕಾರ್ಯಕ್ರಮ ನಿರ್ವಹಿಸಿದರು. ಶಿವಕುಮಾರ್ ಸ್ವಾಗತಿಸಿದರು. ಶಿವನಾಥ ರೈ ಮೆಗಿನಗುತ್ತು ಪ್ರಾಸ್ತಾವಿಕ ನುಡಿಗಳ ಮೂಲಕ ಕಾರ್ಯಕ್ರಮದ ಆಶಯವನ್ನು ವಿವರಿಸಿದರು.
ಡಾ. ಗಿರೀಶ್ ಭಟ್ ಅಜಕ್ಕಳ ವಂದಿಸಿದರು.
ನೆನಪುಗಳೊಂದಿಗೆ ಮತ್ತೆ ವಿದ್ಯಾರ್ಥಿಗಳಾದ ಹಿರಿಯ ವಿದ್ಯಾರ್ಥಿಗಳು
ಇತ್ತೀಚಿನ ವರ್ಷಗಳಲ್ಲಿ ಕಾಲೇಜಿನ ವಿವಿಧ ಬ್ಯಾಚ್‌ಗಳ ಹಿರಿಯ ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳನ್ನು ಒಗ್ಗೂಡಿಸಿಕೊಂಡು ಕಾಲೇಜಿಗೆ ಭೇಟಿ ನೀಡುತ್ತಿರುವುದು ಗಮನಾರ್ಹವಾಗಿದೆ. ಇಂತಹ ಪುನರ್ಮಿಲನಗಳು ಕೇವಲ ಭೇಟಿಗೆ ಸೀಮಿತವಾಗದೆ, ಹಳೆಯ ಸುವರ್ಣ ನೆನಪುಗಳನ್ನು ಮರುಕಳಿಸುವ, ಸ್ನೇಹದ ನಂಟನ್ನು ಗಟ್ಟಿಗೊಳಿಸುವ ಹಾಗೂ ತಾವು ಬೆಳೆದ ಸಂಸ್ಥೆಯೊಂದಿಗೆ ಭಾವನಾತ್ಮಕ ಸಂಬಂಧವನ್ನು ಪುನಃ ಜೋಡಿಸುವ ವೇದಿಕೆಗಳಾಗಿವೆ.
ವೃತ್ತಿ ಮತ್ತು ಸಾಮಾಜಿಕ ಜೀವನದಲ್ಲಿ ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ, ಕಾಲೇಜಿನ ಆವರಣಕ್ಕೆ ಕಾಲಿಟ್ಟ ಕ್ಷಣ ಅವರು ತಮ್ಮ ಹುದ್ದೆ, ಸ್ಥಾನಮಾನಗಳನ್ನು ಮರೆತು ಮತ್ತೆ ತಮ್ಮ ಕಾಲೇಜು ದಿನಗಳ ವಿದ್ಯಾರ್ಥಿಗಳಾಗಿ, ಸ್ನೇಹಿತರಾಗಿ, ಸಹಪಾಠಿಗಳಾಗಿ ಬೆರೆತದ್ದು ಕಾರ್ಯಕ್ರಮದ ವಿಶೇಷತೆಯಾಗಿತ್ತು.
ಒಂದು ಋಣಸ್ಮರಣೆ; ಗುರುಗಳಿಗೆ ಭಾವಪೂರ್ಣ ಗುರುವಂದನೆ
ಪ್ರೊ. ಅಣ್ಣಾಜಿರಾವ್ | ಪ್ರೊ. ಹರಿನಾರಾಯಣ ಮಾಡಾವು | ಪ್ರೊ. ವಿಷ್ಣು ಭಟ್ | ಡಾ. ಎ.ಪಿ. ರಾಧಾಕೃಷ್ಣ | ಡಾ. ಕೃಷ್ಣಕುಮಾರ್ | ಪ್ರೊ. ಗಣೇಶ್ ಭಟ್ | ಪ್ರೊ. ಬಾಲಕೃಷ್ಣ | ಪ್ರೊ. ವಸಂತಿ | ಪ್ರೊ. ಇಟಾ ಡಿಸೋಜಾ
1991ರ ಬಿ.ಎಸ್ಸಿ. ಬ್ಯಾಚ್‌ನ ಹಳೆಯ ವಿದ್ಯಾರ್ಥಿಗಳು ತಮ್ಮ ಬದುಕಿಗೆ ಜ್ಞಾನ ಮತ್ತು ದಿಕ್ಕು ನೀಡಿದ ಈ ಗುರುಗಳನ್ನು ಏಲಕ್ಕಿ ಹಾರ, ಸರಸ್ವತಿ ವಿಗ್ರಹ, ಶಾಲು ಹಾಗೂ ಹಣ್ಣುಗಳನ್ನು ನೀಡಿ ಗುರುವಂದನೆಯೊಂದಿಗೆ ಸನ್ಮಾನಿಸಿದರು.
ಗುರುವಂದನೆ ಸ್ವೀಕರಿಸಲು ಅನಾರೋಗ್ಯ ಮತ್ತು ವಯೋಸಹಜ ಕಾರಣಗಳಿಗೆ ಸಮಾರಂಭಕ್ಕೆ ಬರಲಾಗದ ಪ್ರೊ. ಲಕ್ಷ್ಮಿನಾರಾಯಣ ಕಡಂಬಳಿತ್ತಾಯ, ಪ್ರೊ.ಕೇಶವ ಭಟ್,ಪ್ರೊ.ಕಾನ್ಸೆಪ್ಟ ಲೋಬೋ, ಪ್ರೊಸಿರಿಲ್ ಮಥಿಯಾಸ್ ಅವರ ನಿವಾಸಗಳಿಗೇ ಹುಡುಕಿಕೊಂಡು ಹೋದ ಹಿರಿಯ ವಿದ್ಯಾರ್ಥಿಗಳು ಅಲ್ಲಿಯೇ ಗುರುವಂದನೆ ಸಲ್ಲಿಸಿ ಕೃತಾರ್ಥರಾದದ್ದು ವಿಶೇಷವಾಗಿತ್ತು.
ಇದು ಕೇವಲ ಸನ್ಮಾನವಾಗಿರದೆ, ತಮ್ಮ ಬದುಕಿಗೆ ಜ್ಞಾನ, ಶಿಸ್ತು, ಮೌಲ್ಯ ಮತ್ತು ದಿಕ್ಕು ನೀಡಿದ ಗುರುಗಳೆಡೆಗೆ ಹಳೆಯ ವಿದ್ಯಾರ್ಥಿಗಳು ಸಲ್ಲಿಸಿದ ಕೃತಜ್ಞತೆಯ ಸಂಕೇತವಾಗಿತ್ತು. ಕಾಲೇಜು ದಿನಗಳಲ್ಲಿ ಶಿಕ್ಷಕರಿಂದ ಪಡೆದ ಮಾರ್ಗದರ್ಶನವನ್ನು ಹಲವು ದಶಕಗಳ ಬಳಿಕವೂ ಸ್ಮರಿಸಿ ಗೌರವ ಸಲ್ಲಿಸಿದ ಕ್ಷಣವು ಕಾರ್ಯಕ್ರಮಕ್ಕೆ ವಿಶೇಷ ಭಾವನಾತ್ಮಕ ಸ್ಪರ್ಶ ನೀಡಿತು.
ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಡಾ ಕೃಷ್ಣಪ್ರಭಾ, ರಾಜ್ಯ ಮಾಹಿತಿ ಆಯುಕ್ತ ಬದ್ರುದ್ದೀನ್ ಮಾಣಿ, ಶಿವನಾಥ ರೈ ಮೆಗಿನಗುತ್ತು, ಲಕ್ಷ್ಮೀನಾರಾಯಣ ಕಡಂಬಳಿತ್ತಾಯ ಹಾಗೂ ವಾಲೇರಿಯನ್ ಡಿಸೋಜಾ ಪ್ರಮುಖ ಪಾತ್ರ ವಹಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಪೊನ್ನಪ್ಪ ಅಡ್ಲ್ಯಾಬ್ಸ್, ಕಾಲೇಜಿನ ಪಿಆರ್‌ಒ ಡಾ. ಭಾರತಿ ಎಸ್. ರೈ, ಉಪಕುಲಸಚಿವ (ಶೈಕ್ಷಣಿಕ) ವಿಪಿನ್ ನಾಯಕ್, ಎನ್‌ಸಿಸಿ ನೌಕಾ ವಿಭಾಗದ ಸಬ್ ಲೆಫ್ಟಿನೆಂಟ್ ತೇಜಸ್ವಿ ಭಟ್, ಉಪಕುಲಸಚಿವ (ಮೌಲ್ಯಮಾಪನ) ಅಭಿಷೇಕ್ ಸುವರ್ಣ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕ ಹರ್ಷಿತ್ ಕುಮಾರ್ ಉಪಸ್ಥಿತರಿದ್ದರು.
ಸ್ಥಳೀಯ
UT Khader-ಚನ್ನಪಟ್ಟಣ: ನಡುರಾತ್ರಿ 2 ಗಂಟೆಗೆ ಸರ್ಕಾರಿ ಆಸ್ಪತ್ರೆಗೆ ಯು.ಟಿ. ಖಾದರ್ ದಿಢೀರ್ ಭೇಟಿ: ಹೊರಗಡೆ ಔಷಧಿ ಬರೆಯುತ್ತಿದ್ದಕ್ಕೆ ಗರಂ
ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ನಡುರಾತ್ರಿ 2 ಗಂಟೆ ಸುಮಾರಿಗೆ ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತಡರಾತ್ರಿ ಚನ್ನಪಟ್ಟಣಕ್ಕೆ ಆಗಮಿಸಿದ್ದ ಸಚಿವರು, ಯಾವುದೇ ಮುನ್ಸೂಚನೆ ನೀಡದೆ ನೇರವಾಗಿ ಸರ್ಕಾರಿ ಆಸ್ಪತ್ರೆಗೆ ತೆರಳಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಚನ್ನಪಟ್ಟಣ, ಅ.6: ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ನಡುರಾತ್ರಿ 2 ಗಂಟೆ ಸುಮಾರಿಗೆ ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತಡರಾತ್ರಿ ಚನ್ನಪಟ್ಟಣಕ್ಕೆ ಆಗಮಿಸಿದ್ದ ಸಚಿವರು, ಯಾವುದೇ ಮುನ್ಸೂಚನೆ ನೀಡದೆ ನೇರವಾಗಿ ಸರ್ಕಾರಿ ಆಸ್ಪತ್ರೆಗೆ ತೆರಳಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಈ ವೇಳೆ ಆಸ್ಪತ್ರೆಯ ಜನರಲ್ ವಾರ್ಡ್, ಐಸಿಯು ಹಾಗೂ ಶೌಚಾಲಯಗಳ ನೈರ್ಮಲ್ಯವನ್ನು ವೀಕ್ಷಿಸಿದ ಸಚಿವರು, ಸಿಬ್ಬಂದಿಯ ಹಾಜರಾತಿ ಪುಸ್ತಕವನ್ನೂ ಪರಿಶೀಲಿಸಿದರು. ಕರ್ತವ್ಯದಲ್ಲಿದ್ದ ವೈದ್ಯರಿಂದ ಆಸ್ಪತ್ರೆಯಲ್ಲಿನ ಚಿಕಿತ್ಸಾ ವ್ಯವಸ್ಥೆ ಹಾಗೂ ರೋಗಿಗಳ ಕುರಿತಂತೆ ಮಾಹಿತಿ ಪಡೆದುಕೊಂಡರು.
ಹೊರಗಡೆ ಔಷಧಿ ಬರೆಯುತ್ತಿದ್ದಕ್ಕೆ ಅಸಮಾಧಾನ
ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಹೊರಗಿನ ಖಾಸಗಿ ಮೆಡಿಕಲ್ ಸ್ಟೋರ್‌ಗಳಿಂದ ಔಷಧಿ ಖರೀದಿಸುವಂತೆ ಚೀಟಿ ಬರೆದುಕೊಡುತ್ತಿರುವ ವಿಚಾರ ಸಚಿವರ ಗಮನಕ್ಕೆ ಬಂದಿದೆ. ಇದರಿಂದ ಅಸಮಾಧಾನಗೊಂಡ ಖಾದರ್ ಅವರು ವೈದ್ಯರು ಹಾಗೂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.
“ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಗಳು ಹಾಗೂ ಔಷಧಿಗಳಿದ್ದರೂ ರೋಗಿಗಳಿಗೆ ಹೊರಗಡೆ ಔಷಧಿ ಬರೆದುಕೊಡುವುದು ಏಕೆ?” ಎಂದು ಪ್ರಶ್ನಿಸಿದ ಸಚಿವರು, ಈ ಬಗ್ಗೆ ವೈದ್ಯರು ಹಾಗೂ ಸಿಬ್ಬಂದಿಯಿಂದ ಸ್ಪಷ್ಟನೆ ಪಡೆದರು.
ಸರ್ಕಾರಿ ಆಸ್ಪತ್ರೆಗೆ ಆಗಮಿಸುವ ಬಡ ಹಾಗೂ ಸಾಮಾನ್ಯ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಹಾಗೂ ಸಮಯೋಚಿತ ಚಿಕಿತ್ಸೆ ಒದಗಿಸಬೇಕು. ರೋಗಿಗಳ ಸೇವೆಯಲ್ಲಿ ಯಾವುದೇ ಲೋಪವಾಗದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಸಂಬಂಧಪಟ್ಟ ಸಿಬ್ಬಂದಿಗೆ ಸಚಿವ ಯು.ಟಿ. ಖಾದರ್ ಖಡಕ್ ಸೂಚನೆ ನೀಡಿದರು.
ನಿಧನ ವಾರ್ತೆ
Puttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಯಾಪು ಗ್ರಾಮದ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕುರಿಯ ಮುಲಾರು ನಿವಾಸಿ, ಮರದ ಕೆಲಸ ನಿರ್ವಹಿಸುತ್ತಿದ್ದ ಸುಂದರ ಆಚಾರ್ಯ ಎಂದು ಗುರುತಿಸಲಾಗಿದೆ.
ಪುತ್ತೂರು: ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಯಾಪು ಗ್ರಾಮದ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಕುರಿಯ ಮುಲಾರು ನಿವಾಸಿ, ಮರದ ಕೆಲಸ ನಿರ್ವಹಿಸುತ್ತಿದ್ದ ಸುಂದರ ಆಚಾರ್ಯ ಎಂದು ಗುರುತಿಸಲಾಗಿದೆ.
ಮೂರು ದಿನಗಳ ಹಿಂದೆ ಸುಂದರ ಆಚಾರ್ಯ ಅವರು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ವಾಹನ ನಿಲ್ಲಿಸದೆ ಪರಾರಿಯಾಗಿತ್ತು.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುಂದರ ಆಚಾರ್ಯ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಅ.6ರಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
-
Uncategorized17 hours ago
ಬೆಳೆ ವಿಮೆ ಪರಿಹಾರ ಕಡಿತ: ಸರ್ಕಾರದ ಮುಂದೆ ಅರುಣ್ ಪುತ್ತಿಲ ಆಕ್ರೋಶ – ಪ್ರಶ್ನೆಗಳ ಸುರಿಮಳೆ
-
ದಕ್ಷಿಣ ಕನ್ನಡ11 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಸಿನೆಮಾ18 hours agoPrema Da Ooralli-ಅಮ್ಮನ ಮಂಗಳಸೂತ್ರವನ್ನೇ ಗಿರವಿಡಲು ಮುಂದಾಗಿದ್ದ ನಿರ್ದೇಶಕ; ಇಂದು ₹17 ಕೋಟಿಯತ್ತ ಸಿನಿಮಾ! ‘ಪ್ರೇಮದ ಊರಲ್ಲಿ’ ಸೃಷ್ಟಿಸಿದ ಬಾಕ್ಸ್ ಆಫೀಸ್ ಅಚ್ಚರಿ
-
ದಕ್ಷಿಣ ಕನ್ನಡ18 hours ago
ವಿಟ್ಲ :ಬ್ಯಾಂಕ್ ಉದ್ಯೋಗದ ಆಸೆ ತೋರಿಸಿ ಹಣ ವಂಚನೆ: 15 ವರ್ಷಗಳ ಬಳಿಕ ವಾರೆಂಟ್ ಆರೋಪಿ ಬಂಧನ
-
ಅಪರಾಧ18 hours agoMangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
-
ಅಪರಾಧ10 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ಬಿಗ್ ನ್ಯೂಸ್16 hours agoPuttur-ಪುತ್ತೂರಿನಲ್ಲಿ ಆಸರೆ ಇಲ್ಲದೆ ಭಿಕ್ಷಾಟನೆ ಮಾಡುತ್ತಿದ್ದ 60ರ ವ್ಯಕ್ತಿಗೆ ನೆರವು; ಪಚ್ಚನಾಡಿ ಪುನರ್ವಸತಿ ಕೇಂದ್ರಕ್ಕೆ ದಾಖಲು
-
ಮಂಗಳೂರು17 hours agoPandamburu-ಪಣಂಬೂರು ಬೀಚ್ನಲ್ಲಿ ಹುಲಿವೇಷ ತರಬೇತಿಗೆ ಬಂದಿದ್ದ ಬಾಲಕ ನೀರುಪಾಲು


















