ಬಿಗ್ ನ್ಯೂಸ್
Renukacharya | ಚಂದ್ರಶೇಖರ್ ಹೋಗುವಾಗ ಕೇಸರಿ ಶಾಲ್ ಹಾಕಿಕೊಂಡು ಹೋಗಿದ್ದ – ನನ್ನ ಮೇಲಿನ ದ್ವೇಷದಿಂದ ಪುತ್ರನನ್ನು ಕೊಲೆ ಮಾಡಿದ್ದಾರೆ : ರೇಣುಕಾಚಾರ್ಯ ಗಂಭೀರ ಆರೋಪ
ಬೆಂಗಳೂರು: ಮಾಜಿ ಮಂತ್ರಿ, ಹೊನ್ನಾಳಿ ಶಾಸಕ ರೇಣುಕಾಚಾರ್ಯ(Renukacharya) ಸಹೋದರ ಎಂ.ಪಿ.ರಮೇಶ್ ಪುತ್ರ ಚಂದ್ರಶೇಖರ್(Chandrashekar) ನಾಪತ್ತೆ ಪ್ರಕರಣ ವಿಷಾದದಲ್ಲಿ ಅಂತ್ಯವಾಗಿದೆ. ಐದು ದಿನದ ಹಿಂದೆ ನಾಪತ್ತೆಯಾಗಿದ್ದ ಚಂದ್ರಶೇಖರ್ ಶವ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುಟುಂಬ ವರ್ಗ ಇದೊಂದು ಕೊಲೆ ಎಂದು ಸ್ಪೋಟಕ ಹೇಳಿಕೆ ನೀಡಿದೆ.
ನನ್ನ ಮೇಲಿನ ದ್ವೇಷದಿಂದ ಪುತ್ರ ಚಂದ್ರಶೇಖರ್ನನ್ನು ಬಲಿ ಪಡೆದಿದ್ದಾರೆ. ಇದೊಂದು ವ್ಯವಸ್ಥಿತ ಕೊಲೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ (MP Renukacharya) ಗಂಭೀರ ಆರೋಪ ಮಾಡಿದ್ದಾರೆ.
ತಮ್ಮ ಮನೆ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ನನ್ನ ಮೇಲಿನ ದ್ವೇಷದಿಂದ ಮಗನ ಬಲಿ ಪಡೆದಿದ್ದಾರೆ. ಅವರಿಗೆ ದ್ವೇಷ ಇದ್ದಿದ್ದರೆ ನನ್ನ ಬಲಿ ಪಡೆಯಬೇಕಿತ್ತು. ಈಗ ನನ್ನ ಮಗನ ಕೊಲೆಮಾಡಿದ್ದಾರೆ, ನನಗೆ ತುಂಬಾ ನೋವಿದೆ. ಚಂದ್ರಶೇಖರ್ ಹೋಗುವಾಗ ಕೇಸರಿ ಶಾಲ್ ಹಾಕಿಕೊಂಡು ಹೋಗಿದ್ದ. ನಾನು ಆರಂಭದಿಂದಲೂ ಹೇಳುತ್ತಿದ್ದೆ ಇದೊಂದು ಕಿಡ್ನಾಪ್ ಪ್ರಕರಣ ಅಂತ. ಇದೊಂದು ವ್ಯವಸ್ಥಿತ ಕೊಲೆಯಾಗಿದೆ. ಅವನನ್ನ ಪೋನ್ ಮಾಡಿ ಕರೆಸಿಕೊಂಡಿದ್ದಾರೆ. ಗೌರಿಗದ್ದೆ ಹೋಗುತ್ತೇನೆಂದು ಅವರ ಕುಟುಂಬಸ್ಥರಿಗೆ ಹೇಳಿ ಹೋಗಿದ್ದ. ಆತ ತುಂಬಾ ಸಭ್ಯ. ಆತನಿಗೆ ಯಾವುದೇ ಶತ್ರುಗಳಿಲ್ಲ. ಯಾರಿಗೂ ಕೂಡ ದೊಡ್ಡ ದನಿಯಲ್ಲಿ ಮಾತನಾಡದ ಮೃದು ಸ್ವಭಾವ. ಮನೆಯ ದೀಪ ಆರಿದೆ. ಮುಖ್ಯಮಂತ್ರಿ, ಗೃಹ ಸಚಿವರು ಈ ಘಟನೆಯ ಬಗ್ಗೆ ತನಿಖೆ ನಡೆಸಲಿ ಎಂದು ಸಚಿವ ರೇಣುಕಾಚಾರ್ಯ ಹೇಳಿದರು.
ಗುರುವಾರ ಮಧ್ಯಾಹ್ನದವರೆಗೂ ಚಂದ್ರು ಅವರನ್ನು ಅಪಹರಣ ಮಾಡಿರಬಹುದು ಎಂದು ಶಂಕಿಸಲಾಗಿತ್ತು. ಆದರೆ ಹೊನ್ನಾಳಿ ಮತ್ತು ನ್ಯಾಮತಿ ಮಾರ್ಗಮಧ್ಯೆ ಬರುವ ಸೊರಟೂರಿನ ತುಂಗಭದ್ರಾ(Tungabhadra Canal) ನದಿಯ ಕಾಲುವೆಯಲ್ಲಿ ಕಾರೊಂದು ಇದೆ ಎಂಬ ಸುದ್ದಿ ಇಡೀ ಪ್ರಕರಣಕ್ಕೆ ಟ್ವಿಸ್ಟ್ ನೀಡಿತು.
ಮೃತ ಚಂದ್ರಶೇಖರ್ ದೊಡ್ಡಪ್ಪ ವಿಶ್ವರಾಧ್ಯ, ಇದೊಂದು ಕೊಲೆ, ನಮಗೆ ಆರಂಭದಿಂದಲೂ ಅನುಮಾನವಿತ್ತು. ರೇಣುಕಾಚಾರ್ಯರ ಮೇಲಿನ ರಾಜಕೀಯ ದ್ವೇಷದಿಂದ ಕೊಲೆ ಮಾಡಲಾಗಿದೆ. ಚಂದ್ರಶೇಖರ್ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಲಿ ಎಂದು ಒತ್ತಾಯಿಸಿದರು.
ಕಾಲುವೆ ಮೇಲ್ಭಾಗದಲ್ಲಿ ಕಾರೊಂದರ ಬಿಡಿಭಾಗಳು ಪತ್ತೆ ಆಗಿದ್ದವು. ನುರಿತ ಈಜುಪಟುಗಳು ಮತ್ತು ಅಗ್ನಿಶಾಮಕ ಪಡೆ ಸಿಬ್ಬಂದಿ ಕಾರ್ಯಾರಚಣೆ ನಡೆಸಿ, ಕಾರನ್ನು ಮೇಲಕ್ಕೆ ಎತ್ತಿದರು. ಕಾರಿನಲ್ಲಿ ಚಂದ್ರಶೇಖರ್ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಶಾಸಕ ರೇಣುಕಾಚಾರ್ಯ ಸೇರಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಚಂದ್ರು ನಿನ್ನ ಸಾವಿಗೆ ನಾನೇ ಕಾರಣ. ಚಂದ್ರು ನನ್ನನ್ನು ಕರ್ಕೋಳೋ ಎಂದು ರೇಣುಕಾಚಾರ್ಯ ಗೋಳಾಡಿದ್ದಾರೆ.
ಇದು ಕೊಲೆಯೋ? ಆತ್ಮಹತ್ಯೆಯೋ? ಅಪಘಾತದಿಂದ ಉಂಟಾದ ಸಾವೋ? ಎಂಬುದು ಖಚಿತವಾಗಿಲ್ಲ. ಚಂದ್ರು ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದು ನಿಂತಿದೆ. ಇದೀಗ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಚಂದ್ರಶೇಖರ್ ಸಾವಿನ ನೈಜ ಕಾರಣ ತಿಳಿದುಬರಲಿದೆ.
ಚಂದ್ರು ಸಾವಿನ ಸುತ್ತ ಅನುಮಾನದ ಹುತ್ತ:
ಅನುಮಾನ 1 – ಡ್ರೈವರ್ ಸೀಟ್ ಬೆಲ್ಟ್ ಲಾಕ್ ಆಗಿದ್ರೂ ಹಿಂಬದಿ ಸೀಟ್ನಲ್ಲಿ ಮೃತದೇಹ ಸಿಕ್ಕಿದೆ.
ಅನುಮಾನ 2 – ಕ್ರೇಟಾ ಕಾರಿನ ಮುಂಭಾಗದ ಗಾಜು ದೊಡ್ಡದಾಗಿ ಒಡೆದಿರುವುದು. ಯಾರೋ ಕಲ್ಲು ಎತ್ತಿ ಹಾಕಿ ಒಡೆದಂತೆ ಕಾಣುತ್ತಿದೆ.
ಅನುಮಾನ 3 – ಕಾರು ಹಿಂಬದಿ ನಜ್ಜು ಗುಜ್ಜಾಗಿರುವುದು.
ಅನುಮಾನ 4 – ನಾಲೆಯ ತಡೆಗೋಡೆಗೆ ಹೆಚ್ಚು ಹಾನಿ ಆಗದಿರುವುದು.
ಅನುಮಾನ 5 – ಮೃತ ಚಂದ್ರು ಮೊಬೈಲ್ ಟವರ್ ಲೊಕೇಶನ್ ಬೇರೆ ಕಡೆ ಕೊನೆಯಾಗಿರುವುದು.
ಮತ್ತೊಂದು ಕಡೆ ಪೊಲೀಸರ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಿದ್ದಾರೆ. ಇದು ಸಹಜ ಸಾವಲ್ಲ. ಕೊಲೆ ನಡೆದಿದೆ ಈ ಬಗ್ಗೆ ತನಿಖೆ ಆಗಬೇಕು ಎಂದು ಶಾಸಕ ರೇಣುಕಾಚಾರ್ಯ ಒತ್ತಾಯಿಸಿದ್ದಾರೆ. ರೇಣುಕಾಚಾರ್ಯ ಜೊತೆ ಚರ್ಚಿಸಿ ತನಿಖೆ ನಿರ್ಧಾರ ಮಾಡುವುದಾಗಿ ಸಿಎಂ ತಿಳಿಸಿದ್ದಾರೆ. ಶುಕ್ರವಾರ ಚಂದ್ರಶೇಖರ್ ಅಂತ್ಯಕ್ರಿಯೆ ಹೊನ್ನಾಳಿಯಲ್ಲಿ ನಡೆಯಲಿದೆ.
ಏನಿದು ಪ್ರಕರಣ?
ಅ.30ರ ಭಾನುವಾರ ಸಂಜೆ ಚಿಕ್ಕಮಗಳೂರು ಜಿಲ್ಲೆಯ ಗೌರಿಗದ್ದೆಗೆ ಹೋಗಿ ವಿನಯ್ ಗುರೂಜಿ ಆಶೀರ್ವಾದ ಪಡೆದಿದ್ದ ಚಂದ್ರು ರಾತ್ರಿ ಊರಿಗೆ ಮರಳಿದ್ದರು. ರಾತ್ರಿ 11 ಗಂಟೆ ಸುಮಾರಿಗೆ ದೆಹಲಿಯ ಸ್ನೇಹಿತರ ಜೊತೆ ಕೊನೆಯದಾಗಿ ಮಾತಾಡಿದ್ದಾನೆ. ರಾತ್ರಿ 11:30 ಕ್ಕೆ ಹೊನ್ನಾಳಿ ಪಟ್ಟಣದಲ್ಲಿ ಮೊಬೈಲ್ ಸ್ವಿಚ್ ಆಫ್ ಆಗಿದೆ. ಅಲ್ಲಿಂದ ಸಿಗ್ನಲ್ ಪತ್ತೆಯಾಗಿಲ್ಲ. ಶಿವಮೊಗ್ಗದಿಂದ ನ್ಯಾಮತಿ ತಾಲ್ಲೂಕಿನ ಸುರಹೊನ್ನೆಗೆ ಬಂದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಲಭ್ಯವಾಗಿದೆ.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಅಂತರ ರಾಜ್ಯ
Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.
ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.
ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.
ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್ಗೆ SMS ರವಾನೆಯಾಗಲಿದೆ.
SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:
- ವಾಹನದ ನೋಂದಣಿ ಸಂಖ್ಯೆ.
- ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
- ವಾಹನದ ವಿಮೆ ಅವಧಿ ಮುಗಿದ ದಿನಾಂಕ.
- ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ. - ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
- ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.
ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.
ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.
ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.
-
ಬಿಗ್ ನ್ಯೂಸ್14 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಅಂತರ ರಾಜ್ಯ11 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು14 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
ಬಿಗ್ ನ್ಯೂಸ್6 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
Uncategorized13 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್14 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ12 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್12 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















