Connect with us

ರಾಜಕೀಯ

Isudan Gadhvi | 150 ಕೋಟಿಯ ಅರಣ್ಯ ಹಗರಣ ಹೊರಗೆಳೆದಿದ್ದ ಪತ್ರಕರ್ತ ಆಮ್ ಆದ್ಮಿ ಪಕ್ಷದ ಗುಜರಾತಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ

Published

on

Ad Widget

Ad Widget

Ad Widget

Ad Widget

ಅಹಮದಾಬಾದ್: ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಇಸುದಾನ್ ಗಡ್ವಿ (Isudan Gadhvi) ಅವರ ಹೆಸರನ್ನು ದಿಲ್ಲಿ ಮುಖ್ಯಮಂತ್ರಿ ಹಾಗೂ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಪ್ರಕಟಿಸಿದ್ದಾರೆ. ಆಂತರಿಕ ಸಮೀಕ್ಷೆ ಹಾಗೂ ಜನರಿಂದ ಸಂಗ್ರಹಿಸಿದ ಮತಗಳ ಆಧಾರದಲ್ಲಿ ಗಡ್ವಿ ಅವರಿಗೆ ಶೇ 73ರಷ್ಟು ಮತಗಳು ಬಂದಿವೆ ಎಂದು ಎಎಪಿ ಮುಖ್ಯಸ್ಥ ಹೇಳಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಸಂದರ್ಭದಲ್ಲಿ ಕೂಡ ಎಎಪಿ ಇದೇ ರೀತಿ ಜನಮತಾಭಿಪ್ರಾಯ ಸಂಗ್ರಹಣೆ ನೀತಿ ಅನುಸರಿಸಿತ್ತು. ಇಸುದಾನ್ ಗಡ್ವಿ ಅವರು ಎಎಪಿಯ ಮುಖ್ಯಮಂತ್ರಿ ಅಭ್ಯರ್ಥಿಯಲ್ಲ, ಅವರು ಗುಜರಾತ್‌ನ ಮುಂದಿನ ಮುಖ್ಯಮಂತ್ರಿ ಎಂದು ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Ad Widget

Ad Widget

Ad Widget

Ad Widget

ಕೇವಲ 40 ವರ್ಷದ ಇಸುದಾನ್ ಗಡ್ವಿ, ಗುಜರಾತ್‌ ರಾಜಕಾರಣಕ್ಕೆ ಕೊಂಚ ಹೊಸಬರಾದರೂ, ಗುಜರಾತ್‌ಗೆ ಅಪರಿಚಿತರಲ್ಲ. ಒಂದು ಸಮಯದಲ್ಲಿ ಅವರು ಮನೆ ಮನೆಗಳಲ್ಲಿಯೂ ಕಾಣಿಸಿಕೊಳ್ಳುತ್ತಿದ್ದವರು..! ನಿಜ. ಇಸುದಾನ್ ಗಡ್ವಿ ಅವರು ಮೂಲತಃ ವೃತ್ತಿಯಲ್ಲಿ ಟೆಲಿವಿಷನ್ ಪತ್ರಕರ್ತ ಹಾಗೂ ನಿರೂಪಕರಾಗಿದ್ದವರು. ಹೀಗಾಗಿ ಅವರು ಗುಜರಾತ್‌ನಲ್ಲಿ ಜನಪ್ರಿಯರು.

Ad Widget

Ad Widget alt="Ad Widget"/>

Ad Widget


ಗಡ್ವಿ ಅವರು ಪ್ರಸ್ತುತ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿ ಹಾಗೂ ಅದರ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರೂ ಹೌದು. ವಿಟಿವಿ ಗುಜರಾತಿ (VTV Gujarati)ಯಲ್ಲಿ ಅವರು ಸಂಪಾದಕರಾಗಿ, ನಿರೂಪಕರಾಗಿ ಕಾಣಿಸಿಕೊಂಡಿದ್ದರು. ಅವರ ‘ಮಹಾಮಂಥನ್’ ಶೋ ಬಹಳ ಜನಪ್ರಿಯವಾಗಿತ್ತು.

Ad Widget

Ad Widget <> Ad Widget

ಇಸದಾನ್ ಗಡ್ವಿ ಜನಿಸಿದ್ದು ಗುಜರಾತ್‌ನ ದೇವಭೂಮಿ ದ್ವಾರಕಾ ಜಿಲ್ಲೆಯ ಜಮ್ಖಂಭಲಿಯಾ ಪಟ್ಟಣ ಸಮೀಪದ ಪಿಪಲಿಯಾ ಪಟ್ಟಣದಲ್ಲಿನ 1982ರ ಜನವರಿ 10ರಂದು. 2005ರಲ್ಲಿ ಗುಜರಾತ್ ವಿದ್ಯಾಪೀಠದಿಂದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಪದವಿ ಪಡೆದಿದ್ದಾರೆ.

150 ಕೋಟಿಯ ಹಗರಣ ಬಯಲು:
ಪತ್ರಿಕೋದ್ಯಮದ ತಮ್ಮ ಆರಂಭಿಕ ವೃತ್ತಿ ಬದುಕಿನಲ್ಲಿ ಅವರು, ದೂರದರ್ಶನದ ಜನಪ್ರಿಯ ಕಾರ್ಯಕ್ರಮ ‘ಯೋಜನಾ’ದಲ್ಲಿ ಕೆಲಸ ಮಾಡಿದ್ದರು. 2007 ರಿಂದ 2011ರವರೆಗೆ ಅವರು ಈಟಿವಿ ಗುಜರಾತಿ ಚಾನೆಲ್‌ನಲ್ಲಿ ಪೋರ್ಬಂದರ್ ವರದಿಗಾರರಾಗಿ ದುಡಿದಿದ್ದರು. ತನ್ನ ನ್ಯೂಸ್ ಶೋದಲ್ಲಿ ಅವರು ದಾಂಗ್ ಮತ್ತು ಕಪರದ ತಾಲೂಕುಗಳಲ್ಲಿನ ಅಕ್ರಮ ಅರಣ್ಯನಾಶದ 150 ಕೋಟಿ ರೂ ಹಗರಣವನ್ನು ಬಯಲಿಗೆಳೆದಿದ್ದರು. ಇದರಿಂದಾಗಿ ಗುಜರಾತ್ ಸರ್ಕಾರ ಅದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಡಿತ್ತು. ಈ ಘಟನೆಯು ಗಡ್ವಿ ಅವರಿಗೆ ಜನಪ್ರಿಯತೆ ತಂದುಕೊಟ್ಟಿತ್ತು. ಅವರು ನಿರ್ಭೀತ ಪತ್ರಕರ್ತ ಎಂಬ ಮನ್ನಣೆ ಗಳಿಸಿದರು.

Ad Widget

Ad Widget

2015ರಲ್ಲಿ ಅವರು ವಿಟಿವಿ ಗುಜರಾತಿಯನ್ನು ಸೇರಿಕೊಂಡರು. ಗುಜರಾತ್ ಮಾಧ್ಯಮದ ಅತ್ಯಂತ ಕಿರಿಯ ಚಾನೆಲ್ ಮುಖ್ಯಸ್ಥರೆನಿಸಿಕೊಂಡರು. ಮುಂದಿನ ಐದು ವರ್ಷ, 2021ರವರೆಗೂ ಅವರು ಪ್ರೈಮ್ ಟೈಮ್ ಟಿವಿ ಶೋ ‘ಮಹಾಮಂಥನ್’ ಅನ್ನು ವಿಟಿವಿ ಗುಜರಾತಿಯಲ್ಲಿ ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಅವರು, ಸ್ಟುಡಿಯೋದಲ್ಲಿ ಪ್ಯಾನೆಲಿಸ್ಟ್‌ಗಳ ಜತೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸುವುದರ ಜತೆಗೆ, ಸಾರ್ವಜನಿಕರೊಂದಿಗೆ ಆ ಸಮಸ್ಯೆಗಳ ಕುರಿತು ಫೋನ್- ಇನ್ ಚರ್ಚೆಯನ್ನೂ ಮಾಡಿ, ಅವರ ಅಭಿಪ್ರಾಯ ಪಡೆಯುತ್ತಿದ್ದರು. ರಾತ್ರಿ 8-9ರವರೆಗೆ ಪ್ರಸಾರವಾಗುತ್ತಿದ್ದ ಕಾರ್ಯಕ್ರಮ, ಜನರ ಬೇಡಿಕೆಯೊಂಗೆ 9.30ರವರೆಗೂ ವಿಸ್ತರಣೆಯಾಗಿತ್ತು. ಈ ಕಾರ್ಯಕ್ರಮ ಗುಜರಾತ್‌ನಲ್ಲಿ, ಮುಖ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಜನಮನ್ನಣೆ ಗಳಿಸಿತ್ತು. ರೈತರು ಪ್ರಮುಖ ಹಾಗೂ ಸಣ್ಣಪುಟ್ಟ ಸಮಸ್ಯೆಗಳನ್ನು ಅವರೊಂದಿಗೆ ಹಂಚಿಕೊಳ್ಳುತ್ತಿದ್ದರು. ಈ ಸಮಸ್ಯೆಗಳ ಬಗ್ಗೆ ಇಸದಾನ್ ತಮ್ಮ ಕಾರ್ಯಕ್ರಮದಲ್ಲಿ ವಿಸ್ತೃತವಾಗಿ ಮಾತನಾಡುತ್ತಿದ್ದರು.

ರಾಜಕಾರಣ ಪ್ರವೇಶ
2021ರ ಜೂನ್‌ನಲ್ಲಿ ಇಸದಾನ್ ಗಡ್ವಿ ಅವರು ಮಾಧ್ಯಮ ಜಗತ್ತಿಗೆ ಗುಡ್‌ಬೈ ಹೇಳಿ ಆಮ್ ಆದ್ಮಿ ಪಕ್ಷ ಸೇರ್ಪಡೆಯಾದರು. ಎಎಪಿ ರಾಜ್ಯ ಕೇಂದ್ರ ಕಚೇರಿಯನ್ನು ಉದ್ಘಾಟಿಸಲು ಅರವಿಂದ್ ಕೇಜ್ರಿವಾಲ್ ಅಹಮದಾಬಾದ್‌ಗೆ ಬಂದಿದ್ದಾಗ, ಅವರ ಸಮ್ಮುಖದಲ್ಲಿ ಪಕ್ಷ ಸೇರಿಕೊಂಡರು.

ಆಡಳಿತಾರೂಢ ಪಕ್ಷವು (ಬಿಜೆಪಿ), ಕಾಂಗ್ರೆಸ್ ಜತೆಗೂಡಿ ಗುಜರಾತ್‌ನಲ್ಲಿ ಉಂಟುಮಾಡಿರುವ ಕೊಳಕನ್ನು ಸ್ವಚ್ಛಗೊಳಿಸುವ ಸಲುವಾಗಿ ಗಡ್ವಿ ಅವರು ತಮ್ಮ ಭರವಸೆಯ ವೃತ್ತಿಯನ್ನು ತೊರೆದು ದೊಡ್ಡ ತ್ಯಾಗ ಮಾಡಿದ್ದಾರೆ ಎಂದು ಕೇಜ್ರಿವಾಲ್ ಶ್ಲಾಘಿಸಿದ್ದರು. “ಎಎಪಿಗಾಗಿ ಅವರು ತಮ್ಮ ಉಜ್ವಲ ವೃತ್ತಿಯನ್ನು ತ್ಯಜಿಸಿದ್ದಾರೆ. ನೀವು ವ್ಯವಸ್ಥೆಯ ಹೊರಗಿನಿಂದ ಬದಲಾವಣೆ ತರಬಹುದು. ಆದರೆ ಇದಕ್ಕೆ ಮಿತಿ ಇದೆ. ಹೀಗಾಗಿ ಗಡ್ವಿ ಅವರು ವ್ಯವಸ್ಥೆಯನ್ನು ಸೇರಲು ಮತ್ತು ಕೊಳಕನ್ನು ಸ್ವಚ್ಛಗೊಳಿಸಲು ನಿರ್ಧರಿಸಿದ್ದಾರೆ” ಎಂದಿದ್ದರು.
“ನಾನು ಜನರ ಸೇವೆಗಾಗಿ ಮಾಧ್ಯಮ ಸೇರಿಕೊಂಡಿದ್ದೆ. ಗುಜರಾತ್ ಜನರು ನನ್ನನ್ನು ಪ್ರೀತಿಸಿದ್ದರು. ಮಾಧ್ಯಮ ಉದ್ಯಮದಲ್ಲಿ ಇದ್ದಾಗ, ನಾನು ಕೆಲವೇ ಜನರ ಸೇವೆ ಮಾಡಬಹುದು ಎನ್ನುವುದು ಅರಿವಾಯಿತು. ಅದಕ್ಕಾಗಿ ಉದ್ಯಮವನ್ನು ಬಿಟ್ಟು ರಾಜಕಾರಣ ಸೇರಿಕೊಂಡಿದ್ದೇನೆ. ಇದರಿಂದ ದೊಡ್ಡ ಸಂಖ್ಯೆಯ ಜನರ ಸೇವೆ ಮಾಡಬಹುದು” ಎಂದು ಗಡ್ವಿ ತಿಳಿಸಿದ್ದರು.

ಗುಜರಾತ್ ರಾಜಕಾರಣದಲ್ಲಿ ಬದಲಾವಣೆ ತರುವ ಉದ್ದೇಶದೊಂದಿಗೆ 2022ರ ಮೇ ತಿಂಗಳಲ್ಲಿ ಎಎಪಿ ನಾಯಕರು ಮತದಾರರು ಮತ್ತು ನಾಗರಿಕರ ಜತೆ ಸಂವಾದಿಸುವ ಯೋಜನೆ ನಡೆಸಿತ್ತು. ಗುಜರಾತ್‌ನ ಐದು ಭಾಗಗಳಲ್ಲಿ ಪರಿವರ್ತನ ಯಾತ್ರೆಯನ್ನು ನಡೆಸಲಾಗಿತ್ತು. ದ್ವಾರಕಾದಲ್ಲಿ ಇಸುದಾನ್ ಗಡ್ವಿ ಅವರು ಯಾತ್ರೆಯನ್ನು ಮುನ್ನಡೆಸಿದ್ದರು.

Ad Widget
Click to comment

Leave a Reply

ರಾಜಕೀಯ

Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್‌ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ

Published

on

Ad Widget

Ad Widget

Ad Widget

Ad Widget

ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.

Ad Widget

Ad Widget <> Ad Widget

ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್‌ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.

1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

Ad Widget

Ad Widget

2018ರಲ್ಲಿ ರೈತರ ಸಾಲಮನ್ನಾ ಮಾಡುವ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನವನ್ನೂ 1,000 ರೂ. ಹೆಚ್ಚಳ ಮಾಡಿದ್ದೆ ಎಂದು ಸ್ಮರಿಸಿದ ಅವರು, ‘ಸಾಕ್ಷಿಗುಡ್ಡೆ ಬಿಟ್ಟು ಹೋಗಬೇಕು ಎಂದು ಮುಖ್ಯಮಂತ್ರಿಗಳು ಕೇಳುತ್ತಾರೆ. ನನ್ನ ಸಾಕ್ಷಿಗುಡ್ಡೆ ಇರಲಿ, ನಿಮ್ಮ ಸಾಕ್ಷಿಗುಡ್ಡೆ ಎಲ್ಲಿ?’ ಎಂದು ಪ್ರಶ್ನಿಸಿದರು.

Ad Widget
Continue Reading

ಮಂಗಳೂರು

Priyanka Kharge-ಮಂಗಳೂರಿನಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪನೆ : ತಣ್ಣೀರುಬಾವಿಯಲ್ಲಿ ಸ್ಥಳ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ; ತಣ್ಣೀರು ಭಾವಿಯಲ್ಲಿ 49 ಎಕರೆ ಪ್ರದೇಶ ಗುರುತು; ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗೆ ಕ್ರಮ – ಬಿಯಾಂಡ್ ಬೆಂಗಳೂರು ಆಶಯದಡಿ ಜಾಗತಿಕ ಮಟ್ಟದ ತಂತ್ರಜ್ಞಾನ ಪರಿಸರ ವ್ಯವಸ್ಥೆ ನಿರ್ಮಾಣಕ್ಕೆ ಮತ್ತೊಂದು ಹೆಜ್ಜೆ

Published

on

Ad Widget

Ad Widget

Ad Widget

Ad Widget

ಮಂಗಳೂರಿನ ತಣ್ಣೀರ್‌ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು, ನ.26: ಮಂಗಳೂರಿನ ತಣ್ಣೀರ್‌ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

Ad Widget

Ad Widget alt="Ad Widget"/>

Ad Widget

ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮಂಗಳೂರಿನ ತಣ್ಣೀರ್‌ಭವಿಯಲ್ಲಿರುವ ಪ್ರಸ್ತಾವಿತ ಸ್ಥಳವನ್ನು ಪರಿಶೀಲಿಸಿದರು. ಇಲ್ಲಿ ಸುಮಾರು 49 ಎಕರೆ ಭೂಮಿಯನ್ನು ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗಾಗಿ ಗುರುತಿಸಲಾಗಿದೆ.

Ad Widget

Ad Widget <> Ad Widget

ಈ ಉಪಕ್ರಮದ ಕುರಿತು ಮಾತನಾಡಿದ ಸಚಿವ ಶ್ರೀ ಪ್ರಿಯಾಂಕ್ ಖರ್ಗೆ ಅವರು, “ನಾವು ಒಪ್ಪಿಕೊಂಡರೂ, ಒಪ್ಪಿಕೊಳ್ಳದಿದ್ದರೂ ಎಐ (AI) ಈಗ ನಮ್ಮ ಬದುಕಿನ ಭಾಗವಾಗಿದೆ. ಎಐ ಯುಗದಲ್ಲಿ ಡೇಟಾ ಸೆಂಟರ್‌ಗಳು ಅತ್ಯಗತ್ಯ ಮೂಲಸೌಕರ್ಯಗಳಾಗಿವೆ. ಆದರೆ, ನೀರು ಮತ್ತು ವಿದ್ಯುತ್‌ನ್ನು ಸಮರ್ಥವಾಗಿ ಬಳಸಿಕೊಂಡು, ಪರಿಸರದ ಮೇಲಿನ ನಮ್ಮ ಜವಾಬ್ದಾರಿಗಳಿಗೆ ಯಾವುದೇ ಧಕ್ಕೆಯಾಗದಂತೆ ಈ ಮಹತ್ವದ ಮೂಲಸೌಕರ್ಯವನ್ನು ಸುಸ್ಥಿರ ರೀತಿಯಲ್ಲಿ ಅಭಿವೃದ್ಧಿಪಡಿಸುವುದು ನಮ್ಮ ಹೊಣೆಗಾರಿಕೆಯಾಗಿದೆ. ತಂತ್ರಜ್ಞಾನ ಆಧಾರಿತ ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಎರಡೂ ಪರಸ್ಪರ ಪೂರಕವಾಗಿ ಸಾಗಬಲ್ಲವು ಎಂಬುದನ್ನು ತೋರಿಸುವುದು ನಮ್ಮ ಉದ್ದೇಶವಾಗಿದೆ” ಎಂದರು.

ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ ಈ ಉಪಕ್ರಮವನ್ನು ಪರಿಶೀಲಿಸಲಾಗುತ್ತಿದ್ದು, ನವೀಕರಿಸಬಹುದಾದ ಇಂಧನ ಬಳಕೆ, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಪರಿಸರ ಸ್ನೇಹಿ ಡಿಜಿಟಲ್ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ.

Ad Widget

Ad Widget

ಒಟ್ಟು 49 ಎಕರೆ ಭೂಮಿಯಲ್ಲಿ, ಅನ್ವಯವಾಗುವ ಕರಾವಳಿ ನಿಯಂತ್ರಣ ವಲಯದ (CRZ) ನಿಯಮಗಳ ಪ್ರಕಾರ ಸುಮಾರು 20 ಎಕರೆ ಪ್ರದೇಶದಲ್ಲಿ ಶಾಶ್ವತ ನಿರ್ಮಾಣ ಕೈಗೊಳ್ಳಲು ಅವಕಾಶವಿದೆ ಎಂದು ಅಂದಾಜಿಸಲಾಗಿದೆ. ಮುಂದಿನ ನಿರ್ಧಾರಗಳನ್ನು ಕೈಗೊಳ್ಳುವ ಮೊದಲು ಸ್ಥಳದ ಕಾರ್ಯಸಾಧ್ಯತೆ, ಮೂಲಸೌಕರ್ಯದ ಅಗತ್ಯತೆಗಳು ಹಾಗೂ ಪರಿಸರ ಸಂಬಂಧಿತ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಲಾಗುವುದು.

ಸ್ಥಳದ ಸೂಕ್ತತೆ, ಅಗತ್ಯ ಮೂಲಸೌಕರ್ಯಗಳ ಗುರುತಿಸುವಿಕೆ ಮತ್ತು ಸಮಗ್ರ ಶ್ವೇತಪತ್ರ ಸಿದ್ಧಪಡಿಸುವ ಉದ್ದೇಶದಿಂದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಇತರ ಸಂಬಂಧಪಟ್ಟ ಪಾಲುದಾರರೊಂದಿಗೆ ಸರ್ಕಾರ ಸಮಾಲೋಚನೆ ನಡೆಸಲಿದೆ. ಈ ಶ್ವೇತಪತ್ರದಲ್ಲಿ ಸ್ಥಳದ ಅವಕಾಶಗಳು, ಮಿತಿಗಳು ಮತ್ತು ಅಭಿವೃದ್ಧಿಯ ಸಾಧ್ಯತೆಗಳನ್ನು ವಿವರಿಸಲಾಗುವುದು. ಖಾಸಗಿ ವಲಯದ ಕಂಪನಿಗಳು ಹಾಗೂ ಸಂಭಾವ್ಯ ಹೂಡಿಕೆದಾರರೊಂದಿಗೆ ಚರ್ಚೆ ನಡೆಸಲು ಇದು ಆಧಾರವಾಗಲಿದೆ.

ಎಐ ಯುಗಕ್ಕೆ ಸುಸ್ಥಿರ ಡಿಜಿಟಲ್ ಮೂಲಸೌಕರ್ಯ

ಕೃತಕ ಬುದ್ಧಿಮತ್ತೆ ಮತ್ತು ಇತರ ಉದಯೋನ್ಮುಖ ತಂತ್ರಜ್ಞಾನಗಳ ತ್ವರಿತ ಬೆಳವಣಿಗೆಯೊಂದಿಗೆ ಡೇಟಾ ಸೆಂಟರ್‌ಗಳು ಡಿಜಿಟಲ್ ಆರ್ಥಿಕತೆಯ ಅತ್ಯಗತ್ಯ ಮೂಲಸೌಕರ್ಯಗಳಾಗಿ ಹೊರಹೊಮ್ಮುತ್ತಿವೆ. ಈ ಬೆಳವಣಿಗೆಯ ಜೊತೆಗೆ ಸಂಪನ್ಮೂಲಗಳ ಜವಾಬ್ದಾರಿಯುತ ಬಳಕೆ ಮತ್ತು ಪರಿಸರ ಸಂರಕ್ಷಣಾ ಕ್ರಮಗಳಿಗೂ ಆದ್ಯತೆ ನೀಡುವುದು ಕರ್ನಾಟಕದ ಉದ್ದೇಶವಾಗಿದೆ.

ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ, ಪರಿಸರದ ಜವಾಬ್ದಾರಿಗಳನ್ನು ಮೂಲಸೌಕರ್ಯ ಅಭಿವೃದ್ಧಿಯ ಕೇಂದ್ರವಾಗಿಟ್ಟುಕೊಂಡು ರಾಜ್ಯದಲ್ಲಿ 1 GW ಸಾಮರ್ಥ್ಯದ ಡೇಟಾ ಸೆಂಟರ್ ಮೂಲಸೌಕರ್ಯವನ್ನು ನಿರ್ಮಿಸುವ ಗುರಿಯನ್ನು ಹೊಂದಲಾಗಿದೆ.

ತಣ್ಣೀರ್‌ಭವಿಯಲ್ಲಿ ಪ್ರಸ್ತಾವಿತವಾಗಿರುವ ಡೇಟಾ ಸೆಂಟರ್‌ನಲ್ಲಿ ನವೀಕರಿಸಬಹುದಾದ ಇಂಧನ, ಇಂಧನ ದಕ್ಷತೆಯ ಕಾರ್ಯಾಚರಣೆಗಳು, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಜವಾಬ್ದಾರಿಯುತ ನೀರಿನ ನಿರ್ವಹಣೆಗೆ ಒತ್ತು ನೀಡುವ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ. ಈ ಮೂಲಕ ಕರಾವಳಿ ಪರಿಸರಕ್ಕೆ ಪೂರಕವಾಗಿ ಬೃಹತ್ ಡಿಜಿಟಲ್ ಮೂಲಸೌಕರ್ಯವನ್ನು ಹೇಗೆ ಅಭಿವೃದ್ಧಿಪಡಿಸಬಹುದು ಎಂಬುದನ್ನು ತೋರಿಸುವುದು ಉದ್ದೇಶವಾಗಿದೆ.

ಮಂಗಳೂರು, ಮಣಿಪಾಲ ಮತ್ತು ಉಡುಪಿ: ಉದಯೋನ್ಮುಖ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರಗಳು

ಪ್ರಸ್ತಾವಿತ ಡೇಟಾ ಸೆಂಟರ್ ಕರ್ನಾಟಕದ ಕರಾವಳಿ ಭಾಗವನ್ನು ಸಮೃದ್ಧ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರವಾಗಿ ರೂಪಿಸುವ ರಾಜ್ಯದ ವಿಶಾಲ ದೂರದೃಷ್ಟಿಯ ಭಾಗವಾಗಿದೆ. ಜಾಗತಿಕ ಸಾಮರ್ಥ್ಯ ಕೇಂದ್ರಗಳು (GCCs), ಸ್ಟಾರ್ಟ್‌ಅಪ್‌ಗಳು, ಡೀಪ್‌ಟೆಕ್, ಸಾಗರ ಜೈವಿಕ ತಂತ್ರಜ್ಞಾನ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಿಗೆ ಆದ್ಯತೆ ನೀಡುವ ಮೂಲಕ ಮಂಗಳೂರು, ಮಣಿಪಾಲ ಮತ್ತು ಉಡುಪಿಯನ್ನು ಪರಸ್ಪರ ಪೂರಕವಾದ ತಂತ್ರಜ್ಞಾನ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಇದಕ್ಕೆ ಪೂರಕವಾಗಿ ಉದ್ಯಮಗಳ ಸಹಭಾಗಿತ್ವದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಪ್ರತಿಭಾ ವಿಕಸನಕ್ಕೂ ಒತ್ತು ನೀಡಲಾಗುತ್ತಿದೆ.

ಈ ಪ್ರದೇಶವು ಈಗಾಗಲೇ ಸುಮಾರು ₹5,000 ಕೋಟಿ ಮೌಲ್ಯದ ಐಟಿ ರಫ್ತುಗಳನ್ನು ದಾಖಲಿಸಿದ್ದು, ಕರ್ನಾಟಕದ ತಂತ್ರಜ್ಞಾನ ಆರ್ಥಿಕತೆಗೆ ತನ್ನ ಕೊಡುಗೆಯನ್ನು ಹೆಚ್ಚಿಸುತ್ತಿದೆ. ಹೊಸ ಹೂಡಿಕೆಗಳನ್ನು ಆಕರ್ಷಿಸುವುದು, ನ್ಯಾನೋ ಜಾಗತಿಕ ಸಾಮರ್ಥ್ಯ ಕೇಂದ್ರಗಳ ಸ್ಥಾಪನೆಗೆ ಉತ್ತೇಜನ ನೀಡುವುದು ಮತ್ತು ಸ್ಥಳೀಯ ಪ್ರತಿಭೆಗಳಿಗೆ ಉನ್ನತ ಮೌಲ್ಯದ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ಈ ಬೆಳವಣಿಗೆಯನ್ನು ಮತ್ತಷ್ಟು ವಿಸ್ತರಿಸಲು ಸರ್ಕಾರ ಹೆಚ್ಚಿನ ಅವಕಾಶಗಳನ್ನು ಕಾಣುತ್ತಿದೆ.

ಬಿಯಾಂಡ್ ಬೆಂಗಳೂರು ಎಂಬ ದೂರದೃಷ್ಟಿಯ ಮೂಲಕ ರಾಜ್ಯದಾದ್ಯಂತ ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕ ತಂತ್ರಜ್ಞಾನ ಕ್ಲಸ್ಟರ್‌ಗಳನ್ನು ನಿರ್ಮಿಸಲು ಕರ್ನಾಟಕ ಬದ್ಧವಾಗಿದೆ. ಈ ಮೂಲಕ ನಾವೀನ್ಯತೆ, ಹೂಡಿಕೆ ಮತ್ತು ಉದ್ಯೋಗಾವಕಾಶಗಳು ಬೆಂಗಳೂರು ಮಹಾನಗರ ಪ್ರದೇಶಕ್ಕೆ ಮಾತ್ರ ಸೀಮಿತವಾಗದೆ ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ.

ಪ್ರಸ್ತಾವಿತ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಮುಂದಿನ ತಲೆಮಾರಿನ ಡಿಜಿಟಲ್ ಮೂಲಸೌಕರ್ಯ, ಖಾಸಗಿ ವಲಯದ ಸಹಭಾಗಿತ್ವ ಮತ್ತು ಪರಿಸರ ಜವಾಬ್ದಾರಿಯನ್ನು ಒಂದೆಡೆ ತರುವ ಮಹತ್ವದ ಅವಕಾಶವಾಗಿದೆ. ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಒಟ್ಟೊಟ್ಟಿಗೆ ಸಾಗಬಲ್ಲವು ಎಂಬುದನ್ನು ತೋರಿಸುವ ಮೂಲಕ ಸದೃಢ ಹಾಗೂ ಭವಿಷ್ಯದ ಅಗತ್ಯಗಳಿಗೆ ಸನ್ನದ್ಧವಾಗಿರುವ ತಂತ್ರಜ್ಞಾನ ಆರ್ಥಿಕತೆಯನ್ನು ನಿರ್ಮಿಸುವುದು ಕರ್ನಾಟಕದ ವಿಶಾಲ ಉದ್ದೇಶವಾಗಿದೆ.

Ad Widget
Continue Reading

ಅಂತರ ರಾಜ್ಯ

CM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?

Published

on

Ad Widget

Ad Widget

Ad Widget

Ad Widget

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನವೇ ಆಡಳಿತಾರೂಢ ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ವಿಚಾರವಾಗಿ ರಾಜಕೀಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಗಳು ಪಕ್ಷದೊಳಗಿನ ನಾಯಕತ್ವದ ವಿಚಾರವನ್ನು ಮುನ್ನೆಲೆಗೆ ತಂದಿವೆ.

Ad Widget

Ad Widget

Ad Widget

Ad Widget

ಲಕ್ನೋ: ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನವೇ ಆಡಳಿತಾರೂಢ ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ವಿಚಾರವಾಗಿ ರಾಜಕೀಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಗಳು ಪಕ್ಷದೊಳಗಿನ ನಾಯಕತ್ವದ ವಿಚಾರವನ್ನು ಮುನ್ನೆಲೆಗೆ ತಂದಿವೆ.

Ad Widget

Ad Widget alt="Ad Widget"/>

Ad Widget

ಪತ್ರಕರ್ತರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಮುಂದಿನ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆಯೇ ಅಥವಾ ಬೇರೊಬ್ಬರು ಆ ಸ್ಥಾನಕ್ಕೇರುತ್ತಾರೆಯೇ ಎಂಬುದನ್ನು ತಾನು ನಿರ್ಧರಿಸುವುದಿಲ್ಲ ಎಂದು ಹೇಳಿದ್ದಾರೆ.

Ad Widget

Ad Widget <> Ad Widget

“ಬಿಜೆಪಿ ಅಭ್ಯರ್ಥಿಗಳು ಕಮಲದ ಚಿಹ್ನೆಯಡಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಚುನಾವಣೆ ಮುಗಿದ ಬಳಿಕ ಶಾಸಕರ ಸಭೆ ನಡೆಯಲಿದ್ದು, ಈ ಸಂದರ್ಭದಲ್ಲಿ ಕೇಂದ್ರದ ವೀಕ್ಷಕರು ಆಗಮಿಸಿ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ನಿರ್ಧರಿಸಲಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಮೌರ್ಯ ಅವರ ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬುದು ಈಗಾಗಲೇ ಎಲ್ಲರಿಗೂ ತಿಳಿದಿದೆ ಎಂದು ಹೇಳಿದ್ದಾರೆ.

Ad Widget

Ad Widget

“ಪ್ರತಿಯೊಬ್ಬರೂ ಕಮಲದ ಚಿಹ್ನೆಯಡಿ ಚುನಾವಣೆಯಲ್ಲಿ ಸ್ಪರ್ಧಿಸಬೇಕಾಗುತ್ತದೆ. ನಾನೂ ಕಮಲದ ಚಿಹ್ನೆಯ ಮೇಲೆಯೇ ಸ್ಪರ್ಧಿಸುತ್ತೇನೆ. ಕಮಲದ ಹೂವೇ ನಮಗೆ ಎಲ್ಲವೂ” ಎಂದು ಯೋಗಿ ಹೇಳಿದ್ದಾರೆ. ಈ ಮೂಲಕ ಮುಂದಿನ ಚುನಾವಣೆಯಲ್ಲೂ ತಮ್ಮ ನಾಯಕತ್ವ ಮುಂದುವರಿಯುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್–ಎಸ್‌ಪಿ ಮೈತ್ರಿಯಲ್ಲೂ ಬಿಕ್ಕಟ್ಟು
ಇನ್ನೊಂದೆಡೆ, 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ವಿಚಾರವೂ ಬಿಕ್ಕಟ್ಟಿಗೆ ಕಾರಣವಾಗಿದೆ. ಕಾಂಗ್ರೆಸ್‌ಗೆ ಕೇವಲ 26 ಕ್ಷೇತ್ರಗಳನ್ನು ಬಿಟ್ಟುಕೊಡುವ ಎಸ್‌ಪಿ ಪ್ರಸ್ತಾವನೆಗೆ ಕಾಂಗ್ರೆಸ್ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಸಂಸದ ಹಾಗೂ ಕಾರ್ಯಾಧ್ಯಕ್ಷ ಇಮ್ರಾನ್ ಮಸೂದ್, “ನಾವೇನು ಭಿಕ್ಷುಕರೇ? ನಮಗೂ ಸ್ವಾಭಿಮಾನವಿದೆ. ಮಾತುಕತೆ ಇದೇ ರೀತಿ ಮುಂದುವರಿದರೆ ಮೈತ್ರಿ ಎಲ್ಲಿದೆ?” ಎಂದು ಎಸ್‌ಪಿ ವಿರುದ್ಧ ಕಿಡಿಕಾರಿದ್ದಾರೆ.

ಒಟ್ಟಿನಲ್ಲಿ, ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನವೇ ಬಿಜೆಪಿ ನಾಯಕತ್ವದ ವಿಚಾರ ಹಾಗೂ ಕಾಂಗ್ರೆಸ್–ಎಸ್‌ಪಿ ಸೀಟು ಹಂಚಿಕೆ ವಿವಾದಗಳು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿವೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!