ಸ್ಥಳೀಯ
Praveen Nettar ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ : ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಸಹಿತ ಮೂವರ ಬಂಧನ | ಶರತ್ ಮಡಿವಾಳ ಹತ್ಯೆ ಆರೋಪಿ ಮನೆ ಮೇಲೂ NIA ದಾಳಿ
Shafhi Bellare : ಮಂಗಳೂರು: ಶನಿವಾರ ನಸುಕಿನ ವೇಳೆ ರಾಜ್ಯದ ವಿವಿದೆಡೆ ನಿಷೇಧಿತ ಸಂಘಟನೆಯ ಪಿಎಫ್ಐ ಮುಖಂಡರ ಮನೆಗಳಲ್ಲಿ ಶೋಧ ಕಾರ್ಯಚರಣೆ ನಡೆಸಿದ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ. ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಬೆಳ್ಳಾರೆ ಶಾಫಿ ಕಾಂಪ್ಲೆಕ್ಸ್ ನಿವಾಸಿ ಶಾಫಿ ಬೆಳ್ಳಾರೆ, ಆತನ ಸಹೋದರ ಕುನ್ನಗುಡ್ಡೆ ನಿವಾಸಿ ಇಕ್ಬಾಲ್ ಬೆಳ್ಳಾರೆ ಹಾಗೂ ಸುಳ್ಯ ಗಾಂಧಿ ನಗರ ನಿವಾಸಿ ಇಬ್ರಾಹಿಂ ಶಾ ಬಂಧಿತರು. ಈ ಮೂವರನ್ನು ಮೂರು ತಿಂಗಳ ಹಿಂದೆ ನಡೆದ ದ.ಕ. ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿ ಪ್ರವೀಣ್ ನೆಟ್ಟಾರ್ ಹತ್ಯಾ ಪ್ರಕರಣ ಸಂಚು ರೂಪಿಸಿದ ಹಾಗೂ ಹತ್ಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ ಆರೋಪದಡಿ ಬಂದಿಸಲಾಗಿದೆ.
ರಾಜ್ಯದ ಹುಬ್ಬಳಿ, ದಕ್ಷಿಣ ಕನ್ನಡ, ಮೈಸೂರು ಜಿಲ್ಲೆಯ ಒಟ್ಟು ಐದು ಕಡೆ NIA ಅಧಿಕಾರಿಗಳು ಶೋಧ ಕಾರ್ಯಚರಣೆ ನಡೆಸಿದರು. ಇಂದು ನಡೆಸಿದ ಶೋಧದ ಸಮಯದಲ್ಲಿ, ಆರೋಪಿಗಳು ಮತ್ತು ಶಂಕಿತರ ಮನೆಗಳಿಂದ ಡಿಜಿಟಲ್ ಸಾಧನಗಳು ಮತ್ತು ದೋಷಾರೋಪಣೆಯ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜು 26 ರಂದು ತಡ ರಾತ್ರಿ ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿತ್ತು. ಹತ್ಯೆಯಲ್ಲಿ ನೇರ ಭಾಗಿಯಾದ ಮೂವರು ಆರೋಪಿಗಳ ಸಹಿತ ಒಟ್ಟು 10 ಮಂದಿಯನ್ನು ಕರ್ನಾಟಕ ಪೊಲೀಸರು ಬಂದಿಸಿದ್ದರು. ಏತನ್ಮಧ್ಯೆ ರಾಜ್ಯ ಸರಕಾರದ ಶಿಪಾರಸ್ಸಿನ ಮೇರೆಗೆ ಕೇಂದ್ರ ಗೃಹ ಇಲಾಖೆಯೂ ಪ್ರಕರಣವನ್ನು NIA ಗೆ ಹಸ್ತಾಂತರಿಸಿತ್ತು. ಇದಾದ ತನಿಖೆ ಕೈಗೆತ್ತಿಕೊಂಡ ತನಿಖಾ ದಳವು ಹಲವು ಪಿಎಫೈ ನಾಯಕರ ಮನೆ ಮೇಲೆ ದಾಳಿ ನಡೆಸಿ ಅಗತ್ಯ ದಾಖಲೆ ಕಲೆ ಹಾಕಿತ್ತು.
ಮೂರು ದಿನಗಳ ಹಿಂದೆ ಸಾರ್ವಜನಿಕ ಪ್ರಕಟನೆ ಹೊರಡಿಸಿದ NIA ಪ್ರವೀಣ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳು ತಲೆ ಮರೆಸಿಕೊಂಡಿದ್ದು ಅವರ ಸುಳಿವು ಕೊಟ್ಟವರಿಗೆ ಒಟ್ಟು 14 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದ್ದರು ಮೊಹಮ್ಮದ್ ಮುಸ್ತಫಾ ಮತ್ತು ತುಫೈಲ್ ಬಗ್ಗೆ ಮಾಹಿತಿ ನೀಡಿದರೆ 5 ಲಕ್ಷ ರೂ. ಬಹುಮಾನ, ಇನ್ನು ಇಬ್ಬರು ಆರೋಪಿಗಳಾದ ಉಮರ್ ಫಾರೂಕ್ ಹಾಗೂ ಅಬೂಬಕರ್ ಸಿದ್ದಿಕ್ ಬಗ್ಗೆ ಮಾಹಿತಿ ನೀಡಿದರೆ 2 ಲಕ್ಷ ಬಹುಮಾನ ರೂಪಾಯಿ ನಗದು ಬಹುಮಾನ ನೀಡುವಾಗಿ ಎನ್ಐಎ ಪ್ರಕಟಣೆಯಲ್ಲಿ ತಿಳಿಸಿತ್ತು . ಅದಾದ ಕೆಲವೇ ದಿನಗಳ ಬಳಿಕ ಇಂದು ತಲೆಮರೆಸಿಕೊಂಡಿರುವ ಆರೋಪಿಗಳನ್ನು ಹೊರತು ಪಡಿಸಿ ಮೂವರನ್ನು ಬಂಧಿಸಿದೆ
ಶರತ್ ಮಡಿವಾಳ ಹತ್ಯೆ ಆರೋಪಿಯ ಮನೆಗೂ ದಾಳಿ ?
ಇಷ್ಟು ಮಾತ್ರವಲ್ಲದೇ 5 ವರ್ಷಗಳ ಹಿಂದೆ ಬಂಟ್ವಾಳದಲ್ಲಿ ಹತ್ಯೆಯಾದ ಅರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಯ ಆರೋಪಿಯ ಮನೆಗೂ ಎನ್ ಐಎ ಅಧಿಕಾರಿಗಳು ದಾಲೀ ನಡೆಸಿರುವುದಾಗಿ ಹೇಳಲಾಗುತ್ತಿದೆ. ನೆಲ್ಯಾಡಿ ಸಮೀಪದ ಶಾಂತಿಬೆಟ್ಟು ನಿವಾಸಿ ಸಾದಿಕ್ ಎಂಬಾತ ಶರತ್ ಹತ್ಯೆ ಪ್ರಕರಣದ ಆರೋಪಿಯಾಗಿದ್ದು ಆತನ ಮನೆಗೆ ಇಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆಂದು ಮೂಲಗಳು ತಿಳಿಸಿವೆ.
ಎನ್.ಐ.ಎ ಅಧಿಕಾರಿಗಳ ತಂಡ ನ.4ರಂದು ರಾತ್ರಿ ನೆಲ್ಯಾಡಿಗೆ ಆಗಮಿಸಿದ್ದು ನ.5ರಂದು ಬೆಳಿಗ್ಗೆ ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ಎಂಬಲ್ಲಿರುವ ಸಾದಿಕ್ ರವರ ಮನೆಗೆ ದಾಳಿ ನಡೆಸಿ ಶೋಧ ಕೈಗೊಂಡಿದೆ. ಈ ವೇಳೆ ಸಾದಿಕ್ ರವರು ಮನೆಯಲ್ಲಿ ಇರಲಿಲ್ಲ ಎಂದು ಹೇಳಲಾಗಿದೆ.
ಶರತ್ ಮಡಿವಾಳ ಕೊಲೆ ಪ್ರಕರಣದ ಆರೋಪಿಗಳಿಗೆ ಸಹಕಾರ ನೀಡಿದ ಆರೋಪದಲ್ಲಿ ಈ ಹಿಂದೆ ಸಾದಿಕ್ ಅನ್ನು ಬಂಧಿಸಲಾಗಿತ್ತು. ಆ ಬಳಿಕ ಅವರು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಸಾದಿಕ್ ರವರು ನೆಲ್ಯಾಡಿಯಲ್ಲಿ ಕೆಲ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿದ್ದ.
ಅಪರಾಧ
Bantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
2009ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಹನೀಫ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಇದಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.
ಅಕ್ಟೋಬರ್ 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಗದೀಶ್ ಮತ್ತು ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.


















