ಸ್ಥಳೀಯ
Kantara : ಭೂತ ಕೋಲದ ಸಮಯ ದೈವ ಬರೋದು ಸತ್ಯವಲ್ಲ – ದೈವ ನರ್ತಕರಿಗೆ ಮಾಶಸನ ನೀಡಿದ್ದು ತಪ್ಪು : ಬಿಟಿ ಲಲಿತಾ ನಾಯಕ್ – ಮಾಜಿ ಸಚಿವೆಯ ಹೇಳಿಕೆ ಖಂಡಿಸಿದ ಖಾದರ್
ಹುಬ್ಬಳಿ ನ : 5 : ಸಾಮಾಜಿಕ ಕಾರ್ಯಕರ್ತೆ, ರಾಜಕಾರಣಿ, ಲೇಖಕಿ, ಚಲನಚಿತ್ರ ನಟಿ ಹಾಗೂ ಮಾಜಿ ಕನ್ನಡ, ಸಂಸ್ಕೃತಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಬಿಟಿ ಲಿಲಿತಾ ನಾಯಕ್, ಭೂತಾರಾಧನೆಯ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದು ದೈವಾರಾದಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇಂದು ಬೆಳಿಗ್ಗೆ ಹುಬ್ಬಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಬಿ.ಟಿ.ಲಲಿತಾ ನಾಯಕ್ (BT Lalitha Nayak) ಅವರು ದೈವ ನರ್ತಕರಿಗೆ ಸರ್ಕಾರ (Government) ಮಾಸಾಶನ ನೀಡಬಾರದಿತ್ತು ಎಂದು ಹೇಳಿದ್ದರು.
ರಿಷಭ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾ ಇತ್ತೀಚೆಗೆ ಬಿಡುಗಡೆಗೊಂಡಿದ್ದು ದೇಶಾದ್ಯಂತ ಚಿತ್ರ ರಸಿಕರ ಮೆಚ್ಚುಗೆ ಪಡೆದಿತ್ತು . ಈ ಸಿನಿಮಾದಲ್ಲಿ ಕರಾವಳಿ ಕರ್ನಾಟಕದಲ್ಲಿ ಆರಾಧಿಸಲ್ಪಡುವ ದೈವರಾಧನೆಯನ್ನು ವಿಶೇಷವಾಗಿ ತೋರಿಸಲಾಗಿತ್ತು. ಈ ಸಿನಿಮಾ ಬಿಡುಗಡೆಗೊಂಡ ಬಳಿಕ 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಪ್ರತಿ ತಿಂಗಳು ಮಾಶಾಸನ ನೀಡುವುದಾಗಿ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸುನೀಲ್ ಕುಮಾರ್ ಘೋಷಿಸಿದ್ದರು. ಆದರೇ ಇದೀಗ ಲಲಿತಾ ನಾಯಕ್ ಅವರು ಇದಕ್ಕೆ ಖ್ಯಾತೆ ತೆಗೆದಿದ್ದಾರೆ.
ಭೂತ ಕೋಲದ ಸಮಯದಲ್ಲಿ ದೈವ ಬರೋದು ಸತ್ಯ ಅಲ್ಲವೇ ಅಲ್ಲ. ದೈವ ನರ್ತಕ ಚೀರಾಡುವುದರ, ಕುಣಿಯುವುದರ ಹಿಂದೆ ಬೇರೆಯದೇ ಕಾರಣವಿದೆ. ಭೂತಾರಾಧನೆಯ ಸಮಯದಲ್ಲಿ ದೇವರು ಬರುತ್ತಾರೆ ಅನ್ನೋದೆಲ್ಲಾ ಸುಳ್ಳು. ದೈವ ನರ್ತಕರು ಓಹೋ ಎಂದು ಚೀರಾಟ ಮಾಡುವುದು ಹಿಂದೆ ಬೇರೆಯದೇ ಆದ ಕಾರಣವಿದೆ. ದಮನಿತ ಜನಾಂಗ ತಮ್ಮ ಅಸಹಾಯಕತೆಯನ್ನು ಚೀರಾಟ ಹಾಗೂ ಕುಣಿತದ ಮೂಲಕ ವ್ಯಕ್ತ ಪಡಿಸುತ್ತದೆ
ಈ ಚಿತ್ರದ ಸ್ಫೂರ್ತಿಯೊಂದಿಗೆ ಸರ್ಕಾರ ಕೂಡ ದೈವ ನರ್ತಕರಿಗೆ 2 ಸಾವಿರ ರೂಪಾಯಿ ಸಹಾಯಧನ ನೀಡುವ ತೀರ್ಮಾನ ಮಾಡಿರುವುದು ತಪ್ಪು . ಇದು ಸರಕಾರ ಮೂಢ ನಂಬಿಕೆಯನ್ನು ಬೆಳೆಸಿದಂತೆ. ಇದರ ಬದಲು ದೈವ ನರ್ತಕರನ್ನು ಆ ವೃತ್ತಿಯಿಂದ ಬಿಡಿಸಿ, ಅವರನ್ನು ಉದ್ಯೋಗ ಮಾಡಲು ಸರಕಾರ ಪ್ರೇರೆಪಿಸಬೇಕು ಎಂದಿದ್ದಾರೆ.
ಖಾದರ್ ಆಕ್ರೋಶ
ಆದರೇ ಲಲಿತಾ ನಾಯಕ್ ಹೇಳಿಕೆಗೆ ಕಾಂಗ್ರೆಸ್ ಮುಖಂಡ ಹಾಗೂ ವಿಧಾನಸಭೆಯ ವಿಪಕ್ಷ ನಾಯಕ ಯು ಟಿ ಖಾದರ್ (UT Khader) ಆಕ್ರೋಶ ವ್ಯಕ್ತಪಡಿಸಿದ್ದಾರೆ . ಈ ಕುರಿತು ಟ್ವೀಟ್ ಮಾಡಿರುವ ಅವರು , ಬಿ.ಟಿ.ಲಲಿತಾ ನಾಯಕ್ ಅವರೇ ನಿಮ್ಮ ಬಗ್ಗೆ ನಮಗೆ ಗೌರವವಿದೆ. ಆದರೆ ದೈವ ನರ್ತಕರಿಗೆ ನೀಡಿರುವ ಮಾಶಾಸನ ಸರಿ ಅಲ್ಲ ಎಂಬ ಮಾತನ್ನ ನಾನು ಒಪ್ಪಲು ಸಿದ್ದವಿಲ್ಲ. ನನ್ನ ಕ್ಷೇತ್ರ ಹಾಗೂ ಸಂಪೂರ್ಣ ಕರಾವಳಿ ಜನರ ಪರವಾಗಿ ನಾನು ನಿಮ್ಮ ಮಾತನ್ನು ಖಂಡಿಸುತ್ತೇನೆ. ಮೊದಲು ದೈವ ನರ್ತಕರ ಪವಿತ್ರ ಆಚರಣೆ ಗೌರವಿಸಿ ಹಾಗೂ ಕರಾವಳಿ (Karavali) ಸಂಸ್ಕೃತಿಯನ್ನ ಅರ್ಥೈಸಿಕೊಂಡು ನಿಮ್ಮ ನಿಲುವಿನ ಬಗ್ಗೆ ಮರು ಚಿಂತನೆ ಮಾಡುವುದು ಒಳಿತು ಎಂದು ತಿರುಗೇಟು ನೀಡಿದ್ದಾರೆ.
ಅಪರಾಧ
Bantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
2009ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಹನೀಫ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಇದಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.
ಅಕ್ಟೋಬರ್ 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಗದೀಶ್ ಮತ್ತು ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
-
Uncategorized6 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized5 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized8 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized4 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized6 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized5 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |




















