Connect with us

ಸುಳ್ಯ

ಸುಳ್ಯ: ಮದ್ಯದಂಗಡಿ ಪ್ರಾರಂಭದ ವಿರುದ್ಧ ಪ್ರತಿಭಟನೆ – ಒಂದು ಕಡೆ ಹೋರಾಟದಲ್ಲಿ ಭಾಗಿಯಾದ ನಾಯಕ ಹತ್ತಿರದಲ್ಲೇ ಮತ್ತೊಂದು ಬಾರ್ ಓಪನಿಂಗ್ ನಲ್ಲಿ ಅತಿಥಿ ..!

Published

on

Ad Widget

Ad Widget

Ad Widget

Ad Widget

ಸುಳ್ಯ: ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡದಲ್ಲಿ ತೆರೆದುಕೊಂಡಿರುವ ಬಾರ್ & ರೆಸ್ಟೋರೆಂಟ್ ವಿರುದ್ದ ಮದ್ಯ ವಿರೋಧಿ ಹೋರಾಟ ಸಮಿತಿಯವರು ಮದ್ಯದಂಗಡಿ ಬಳಿ ಧಾವಿಸಿ ಪ್ರತಿಭಟನೆ ನಡೆಸಿದರು, ಇದೇ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ನಾಯಕರೊಬ್ಬರು ತಿಂಗಳ ಹಿಂದೆ ಇದೇ ಬಾರ್ ನ ಹತ್ತಿರದಲ್ಲಿರುವ ಬಾರ್ ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

Ad Widget

Ad Widget

Ad Widget

Ad Widget

ಹರಿಹರ ಪಲ್ಲತ್ತಡ್ಕ ಪೇಟೆ ಬಳಿ ಶುಕ್ರವಾರ ಮಂಗಳಾ ಬಾರ್ & ರೆಸ್ಟೋರೆಂಟ್ ಹೆಸರಿನಲ್ಲಿ ಅಂಗಡಿ ತೆರದುಕೊಂಡಿದ್ದು, ಮದ್ಯ ಮಾರಾಟ ಮುಕ್ತ ಹೋರಾಟಗಾರು, ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಅಂಗಡಿಯ ಮೆಟ್ಟಿಲಿನಲ್ಲಿ ಕುಳಿತು ಪ್ರತಿಭಟನೆಯನ್ನೂ ನಡೆಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದು ಬಾರ್ ಬಂದ್ ಮಾಡಲು ಬಂದ ಪಿಡಿಓ ಗೆ ಬಾರ್ ಪರವಣಿಗೆದಾರರು ಅಬಕಾರಿ ನೀತಿಯ ಬಗ್ಗೆ ಪ್ರಶ್ನಿಸಿದಾಗ ಪಿಡಿಓ ಅಲ್ಲಿಂದ ತೆರಳಿದ ಘಟನೆಯೂ ನಡೆಯಿತು.

Ad Widget

Ad Widget <> Ad Widget

ಆಗ ಪ್ರತಿಭಟನಾಕಾರರು ಪಿಡಿಓ ಮತ್ತು ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪಿಡಿಓ ಮತ್ತು ಅಧ್ಯಕ್ಷರಿಗೆ ಆ ಸಂದರ್ಭ ನೆರೆದಿದ್ದವರು ದಿಕ್ಕಾರ ಕೂಗಿದ ಘಟನೆಯೂ ನಡೆಯಿತು.

ಕಳೆದ ಕೆಲವು ತಿಂಗಳಿನಿಂದ ಹರಿಹರ ಪಲ್ಲತ್ತಡ್ಕದಲ್ಲಿ ಮದ್ಯದಂಗಡಿ ಆರಂಭವಾಗುವುದನ್ನು ತಡೆಯಲು ಹೋರಾಟ ನಡೆಸಲಾಗುತಿತ್ತು. ಆದರೆ ಅದರ ನಡುವೆ ಪ್ರತಿಭಟನಾಕಾರರಲ್ಲಿ ಓರ್ವ ಪ್ರಮುಖ ಭಾಷಣಕಾರ ವ್ಯಕ್ತಿಯಾಗಿರುವ ಕೊಲ್ಲಮೊಗ್ರಿನ ವ್ಯಕ್ತಿಯ ಮನೆಯ ಸಮೀಪವೇ ಮತ್ತೊಂದು ಬಾರ್ ಆರಂಭವಾಗಿದೆ ಆದರೆ ಈಗ ಆ ವ್ಯಕ್ತಿಯ ಯಾವೂದೇ ಹೋರಾಟದ ಲಕ್ಷಣಗಳು ಕಾಣುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

Ad Widget

Ad Widget

ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಪಿಡಿಓ ತೆರಳಿದ ನಂತರ ವೆಂಕಟ್ ವಳಲಂಬೆ ಪ್ರವೇಶ ಪಡೆದಾಗ ಏಕಾಏಕಿ ಉಗ್ರ ರೂಪ ಪಡೆಯಿತು. ಮದ್ಯದಂಗಡಿ ಬಂದ್ ಮಾಡಲು ಇದೇ ಕೆಲ ವಳಲಂಬೆ ತಂಡ ಪ್ರಯತ್ನಿಸಿದ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿ ಪ್ರತಿಭಟನಾಕಾರರನ್ನು ಚದುರಿಸಿದರು.

ಪ್ರತಿಭಟನೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡರಾದ, ಜಿಲ್ಲಾ ಬಿಜೆಪಿ ನಾಯಕ ವೆಂಕಟ್ ವಳಲಂಬೆ ಪ್ರಮುಖ ಪಾತ್ರ ವಹಿಸಿದ್ದರು, ಆದರೇ ಅವರೇ ಕಳೆದ ತಿಂಗಳ ಹಿಂದೆ ಹತ್ತಿರದ ಬಾರ್ ಆರಂಭಕ್ಕೆ ಅತಿಥಿಯಾಗಿ ಹೋಗಿದ್ದರು ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಟೋ ವೈರಲ್ ಆಗುತ್ತಿದೆ.

ವೈರಲ್ ಆಗುತ್ತಿರುವ ಬಿಜೆಪಿ ಜಿಲ್ಲಾ ಪದಾಧಿಕಾರಿ ವೆಂಕಟ್ ವಳಲಂಬೆ ಬಾರ್ ಓಪನಿಂಗ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಹೋಗಿರುವ ಪೋಟೋ

ಮರುದಿನ ಪ್ರತಿಭಟನೆ ನಡೆಸಿದರಾದರು, ಬಾರ್ ಸರ್ಕಾರಿ ನಿಯಮದಂತೆ ಪ್ರಾರಂಭವಾಗಿರುವ ಕಾರಣ ಪೊಲೀಸರು ಹೆಚ್ಚಿನ ಭದ್ರತೆಯನ್ನು ಒದಗಿಸಿದರು.

ಸರ್ಕಾರಕ್ಕೆ ದೊಡ್ಡ ಪ್ರಮಾಣದ ಆದಾಯ ನೀಡುವ ಬಾರುಗಳು ಅಬಕಾರಿ ನಿಯಮದಂತೆ ಪ್ರಾರಂಭವಾಗುತ್ತದೆ, ಅದಕ್ಕೆ ಅಬಕಾರಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ಎಲ್ಲಾ ಪರಿಶೀಲನೆ ನಡೆಸಿದ ನಂತರ ಪರವಣಿಗೆ ನೀಡುತ್ತಾರೆ.

ಮಂಗಳಾ ಬಾರ್ ಪ್ರಾರಂಭವಾಗುವ ಮೊದಲು ಗ್ರಾಮ ಪಂಚಾಯತ್ ನಿಂದ ಕಟ್ಟಡದ ಹಳೆ ಕಟ್ಟಡ ದುರಸ್ತಿಗೆ ಅರ್ಜಿ ಹಾಕಿದಾಗ 9/11 ಗೆ ಬೇಕಾದ ಅರ್ಜಿ ಸಲ್ಲಿಸಿದರೂ ಪಂಚಾಯತ್ ನಿಂದ 9/11. ಕೊಡಲಿಲ್ಲ. ನಂತರ ಇಓ ಕೋರ್ಟ್ ಮೊರೆ ಹೋಗಿದ್ದಾರೆ. ಮಾಲೀಕರ ಪರವಾಗಿ ಇಓ ಕೋರ್ಟ್ ಆದೇಶ ನೀಡಿದೆ.

ನಂತರ ಇಓ ಕೋರ್ಟ್ ಆದೇಶದ ಆದರದ ಮೇಲೆ ಪಂಚಾಯತ್ ಗೆ ಮಾಲಕರು ಮನವಿ ಮಾಡಿದರು. ಆದರೆ 60 ದಿನ ಕಳೆದರು ಪಂಚಾಯತ್ ಉತ್ತರಿಸದಿದ್ದಾಗ ಪಂಚಾಯತ್ ರಾಜ್ ಆಕ್ಟ್ ಸೆಕ್ಷನ್ 70 ಸಬ್ ಸೆಕ್ಷನ್ 2C ಪ್ರಕಾರ ಡೀಮ್ಡ್ ಗ್ರಾಂಟ್ ಆಗಿ ಮಾಲಕರಿಗೆ ಮಂಜೂರಾಗಿದೆ.

ಈ ಎಲ್ಲಾ ಘಟನೆ ನಡೆದ ನಂತರ ಅಬಕಾರಿ ಜಿಲ್ಲಾಧಿಕಾರಿ ಎಲ್ಲಾ ದಾಖಲೆ ಪರಿಗಣಿಸಿ ಬಾರ್ ತೆರೆಯುವಂತೆ ಆದೇಶ ಹೊರಡಿಸಿದ್ದಾರೆ.

ಪ್ರತಿಭಟನೆ ನಡೆದ ಮರುದಿನದಿಂದ ಸುಬ್ರಹ್ಮಣ್ಯ ಪೊಲೀಸರು ಭದ್ರತೆ ಹೆಚ್ಚಿಸಿದ್ದು, ಪ್ರತಿಭಟನೆ ಆದಿತ್ಯವಾರದವರೆಗೆ ನಡೆದಿದೆ.

Ad Widget
Click to comment

Leave a Reply

ಸುಳ್ಯ

Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ

Published

on

Ad Widget

Ad Widget

Ad Widget

Ad Widget

ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget

Ad Widget

Ad Widget

ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.

Ad Widget

Ad Widget <> Ad Widget

ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.

ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಸುಳ್ಯ

Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ

Published

on

Ad Widget

Ad Widget

Ad Widget

Ad Widget

ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

Ad Widget

Ad Widget

Ad Widget

Ad Widget

ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.

Ad Widget

Ad Widget alt="Ad Widget"/>

Ad Widget

ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.

Ad Widget

Ad Widget <> Ad Widget

ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.

Continue Reading

ಸುಳ್ಯ

Areca nut-ಅಡಿಕೆ ರೇಟ್‌ ಜಂಪ್‌ : ಹೊಸ ಅಡಿಕೆಗೆ ₹360; ಒಂದೇ ದಿನದಲ್ಲಿ ₹10 ಏರಿಕೆ! ಡಬಲ್ ಚೋಲ್ ಧಾರಣೆಯಲ್ಲೂ ಹೆಚ್ಚಳ

Published

on

Ad Widget

Ad Widget

Ad Widget

Ad Widget

ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.

Ad Widget

Ad Widget

Ad Widget

Ad Widget

ಸುಳ್ಯ, ನ.12: ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.

Ad Widget

Ad Widget alt="Ad Widget"/>

Ad Widget

ನ.11 ಮತ್ತು ನ.12ರ ಮಾರುಕಟ್ಟೆ ದರಗಳನ್ನು ಹೋಲಿಸಿದಾಗ ಹೊಸ ಅಡಿಕೆಯ ಗರಿಷ್ಠ ಧಾರಣೆ ₹350ರಿಂದ ₹360ಕ್ಕೆ ಏರಿಕೆಯಾಗಿದೆ. ಆದರೆ ಕನಿಷ್ಠ ಧಾರಣೆ ₹280ರಲ್ಲೇ ಸ್ಥಿರವಾಗಿದೆ. ಕನಿಷ್ಠ ದರದಲ್ಲಿ ಬದಲಾವಣೆಯಾಗದಿದ್ದರೂ ಗರಿಷ್ಠ ದರದಲ್ಲಿ ಕಂಡುಬಂದಿರುವ ಏರಿಕೆ ಮಾರುಕಟ್ಟೆಯಲ್ಲಿ ಚೇತರಿಕೆಯ ಮುನ್ಸೂಚನೆ ನೀಡಿದೆ.

Ad Widget

Ad Widget <> Ad Widget

ಡಬಲ್ ಚೋಲ್ ಅಡಿಕೆಗೂ ಬೆಲೆ ಏರಿಕೆ
ಡಬಲ್ ಚೋಲ್ ಅಡಿಕೆಯ ಮಾರುಕಟ್ಟೆಯಲ್ಲೂ ಉತ್ತಮ ಬೆಳವಣಿಗೆ ಕಂಡುಬಂದಿದೆ. ಹಿಂದಿನ ದಿನ ₹525ರಷ್ಟಿದ್ದ ಕನಿಷ್ಠ ಧಾರಣೆ ₹530ಕ್ಕೆ ಏರಿಕೆಯಾಗಿದ್ದರೆ, ಗರಿಷ್ಠ ಧಾರಣೆ ₹550ರಿಂದ ₹560ಕ್ಕೆ ತಲುಪಿದೆ. ಈ ಮೂಲಕ ಕನಿಷ್ಠ ದರದಲ್ಲಿ ₹5 ಹಾಗೂ ಗರಿಷ್ಠ ದರದಲ್ಲಿ ₹10ರಷ್ಟು ಹೆಚ್ಚಳ ದಾಖಲಾಗಿದೆ.

ಸಿಂಗಲ್ ಚೋಲ್ ಸೇರಿದಂತೆ ಇತರ ಅಡಿಕೆ ದರ ಸ್ಥಿರ
ಹೊಸ ಅಡಿಕೆ ಮತ್ತು ಡಬಲ್ ಚೋಲ್ ಹೊರತುಪಡಿಸಿ ಮಾರುಕಟ್ಟೆಯ ಇತರ ಪ್ರಮುಖ ಅಡಿಕೆ ವರ್ಗಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸಿಂಗಲ್ ಚೋಲ್ ಅಡಿಕೆ ಕೆ.ಜಿ.ಗೆ ಕನಿಷ್ಠ ₹450 ಹಾಗೂ ಗರಿಷ್ಠ ₹480ರ ದರದಲ್ಲಿ ವಹಿವಾಟು ನಡೆಸಿದೆ.

Ad Widget

Ad Widget

ಬೆಳೆಗಾರರ ಕಣ್ಣು ಮುಂದಿನ ಮಾರುಕಟ್ಟೆ ದರದತ್ತ
ಇತ್ತೀಚಿನ ದಿನಗಳಲ್ಲಿ ಅಡಿಕೆ ಧಾರಣೆಯಲ್ಲಿ ಕಂಡುಬರುತ್ತಿರುವ ಏರಿಳಿತಗಳು ಬೆಳೆಗಾರರಲ್ಲಿ ಗೊಂದಲ ಮೂಡಿಸಿದ್ದವು. ಅದರಲ್ಲೂ ಉತ್ಪಾದನಾ ವೆಚ್ಚ, ಕೂಲಿ ವೆಚ್ಚ ಹಾಗೂ ನಿರ್ವಹಣಾ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಮಾರುಕಟ್ಟೆ ದರದ ನಿರೀಕ್ಷೆ ಬೆಳೆಗಾರರಲ್ಲಿದೆ.

ಇದೀಗ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯಲ್ಲಿ ದಾಖಲಾಗಿರುವ ಏರಿಕೆ ಮಾರುಕಟ್ಟೆಗೆ ಹೊಸ ಚೈತನ್ಯ ನೀಡಿದೆ. ಆದರೆ ಈ ಏರಿಕೆ ಮುಂದಿನ ದಿನಗಳಲ್ಲೂ ಮುಂದುವರಿಯಲಿದೆಯೇ ಅಥವಾ ಮತ್ತೆ ಧಾರಣೆ ಸ್ಥಿರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಸದ್ಯದ ಮಟ್ಟಿಗೆ ಅಡಿಕೆ ಬೆಳೆಗಾರರ ಚಿತ್ತ ಮುಂದಿನ ಮಾರುಕಟ್ಟೆ ವಹಿವಾಟಿನತ್ತ ನೆಟ್ಟಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!