ಅಪರಾಧ
Newly Married women Sucide: ಖ್ಯಾತ ನರ್ಸಿಂಗ್ ಹೋಮ್ ಮಾಲಕಿಯ ಸೊಸೆ, ನವ ವಿವಾಹಿತೆ ಆತ್ಮಹತ್ಯೆ
ಶಿವಮೊಗ್ಗ Shivamogga : ನ 7: ಇಲ್ಲಿನ ಹೊಮ್ಮರಡಿ ನರ್ಸಿಂಗ್ ಹೋಂನ ಸಂಸ್ಥಾಪಕರಾದ ಡಾ.ಜಯಶ್ರೀ ಅವರ ಸೊಸೆ ನವ್ಯಶ್ರೀ (23) ಮನೆಯ ಕಾರು ಶೆಡ್ ನಲ್ಲಿ ಆತ್ಮಹತ್ಯೆ (Sucide) ಮಾಡಿಕೊಂಡಿದ್ದಾರೆ. ಅಶ್ವತ್ಥನಗರದ ನವ್ಯಶ್ರೀ (23) ಆತ್ಮಹತ್ಯೆ ಮಾಡಿಕೊಂಡವರು. ಆರು ತಿಂಗಳ ಹಿಂದಷ್ಟೇ ಡಾ. ಜಯಶ್ರೀ ಅವರ ಪುತ್ರ ಆಕಾಶ್ ಜತೆ ಚಿಕ್ಕಮಗಳೂರಿನ ದೇವನಹಳ್ಳಿಯ ನವ್ಯಶ್ರೀ ಅವರ ವಿವಾಹವಾಗಿತ್ತು.
ನವ್ಯಶ್ರೀಯವರು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ದೇವರಹಳ್ಳಿ ಗ್ರಾಮದವರು. ಶನಿವಾರ ಸಂಜೆ ಅಕ್ಕಪಕ್ಕದ ಮನೆಯಲ್ಲಿ ತುಳಸಿ ಪೂಜೆಯಲ್ಲಿ ಪಾಲ್ಗೊಂಡು ಅರಿಶಿಣ ಕುಂಕುಮ ಸೀಕರಿಸಿ ಮನೆಗೆ ಮರಳಿದ್ದರು. ಬಳಿಕ ರಾತ್ರಿ ಕಾರ್ ಶೆಡ್ನಲ್ಲಿ ನೇಣು ಬಿಗಿದುಕೊಂಡಿದ್ದು ಭಾನುವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಕೌಂಟುಬಿಕ ಹಿನ್ನಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರಿಸಿದರು.
ಮಗಳ ಆತ್ಮಹತ್ಯೆಗೆ ಪತಿಯ ನಿರ್ಲಕ್ಷ್ಯ, ಬೇಜವಾಬ್ದಾರಿ ಹಾಗೂ ಆತನ ದುರ್ನಡೆತೆಯೇ ಕಾರಣ’ ಎಂದು ಮೃತಳ ಪಾಲಕರು ಆರೋಪಿ ಸಿದ್ದಾರೆ. ‘ಆಕಾಶ್ ತಡರಾತ್ರಿ ಮನೆಗೆ ಬರುತ್ತಿದ್ದರು ಮತ್ತು ಅವರ ಮದ್ಯವ್ಯಸನದಿಂದ ಮಗಳು ಬೇಸತ್ತಿದ್ದಳು. ಈ ಬಗ್ಗೆ ಮಗಳು ದೂರವಾಣಿ ಕರೆಯಲ್ಲಿ ತಿಳಿಸಿದ್ದಳು’ ಎಂದು ತಾಯಿ ನಳಿನಿ ದೂರಿದ್ದಾರೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಗೂ ಮುನ್ನ ರೀಲ್ಸ್ ?
ನವ್ಯಶ್ರೀ ಆತ್ಮಹತ್ಯೆಗೂ ಮುನ್ನ ಹಿಂದಿ ಹಾಡಿಗೆ ರೀಲ್ಸ್ ಮಾಡಿ ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಎಂಇಎಸ್ ಕಾಲೇಜಿನಲ್ಲಿ ಎಂಕಾಂ ಪದವಿ ಪಡೆದಿದ್ದ ನವ್ಯಶ್ರೀ, ಆಕಾಶ್ನನ್ನು ವರಿಸಿದ್ದಳು. ಆಕಾಶ್ ಕೊಪ್ಪದಲ್ಲಿರುವ ಅಡಕೆ ತೋಟ ನೋಡಿಕೊಂಡಿದ್ದರು ಎನ್ನಲಾಗಿದೆ.
Gold Rate Today : ಸೋಮವಾರ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಏರಿಕೆ – ಇಲ್ಲಿದೆ ದರ ವಿವರ
ಅಂತರ ರಾಜ್ಯ
Viral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ
ಚಲಿಸುತ್ತಿರುವ ರೈಲಿನ ಎಸಿ ಬೋಗಿಯೊಳಗೆ ಪ್ರಯಾಣಿಕನೊಬ್ಬ ಎಣ್ಣೆ ದೀಪ ಹಚ್ಚಿ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಹಪ್ರಯಾಣಿಕರ ಸುರಕ್ಷತೆ ಹಾಗೂ ಅಗ್ನಿ ಅವಘಡದ ಅಪಾಯದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ನವದೆಹಲಿ: ಚಲಿಸುತ್ತಿರುವ ರೈಲಿನ ಎಸಿ ಬೋಗಿಯೊಳಗೆ ಪ್ರಯಾಣಿಕನೊಬ್ಬ ಎಣ್ಣೆ ದೀಪ ಹಚ್ಚಿ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಹಪ್ರಯಾಣಿಕರ ಸುರಕ್ಷತೆ ಹಾಗೂ ಅಗ್ನಿ ಅವಘಡದ ಅಪಾಯದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ವೈರಲ್ ವಿಡಿಯೋದಲ್ಲಿ ರೈಲಿನ ಹವಾನಿಯಂತ್ರಿತ ಬೋಗಿಯಲ್ಲಿ ಕುಳಿತಿರುವ ವ್ಯಕ್ತಿಯೊಬ್ಬರು ಶಂಖ ಊದುತ್ತಾ ಆರತಿ ಮಾಡುತ್ತಿರುವುದು ಕಂಡುಬಂದಿದೆ. ಅವರ ಪಕ್ಕದಲ್ಲಿರುವ ಸಣ್ಣ ಟೇಬಲ್ ಮೇಲೆ ದೀಪ, ದೇವರ ಫೋಟೋ, ಹೂವು ಹಾಗೂ ಇತರ ಪೂಜಾ ಸಾಮಗ್ರಿಗಳನ್ನು ಇರಿಸಲಾಗಿದೆ. ಪಂಚೆ ಧರಿಸಿ, ಹಣೆಗೆ ವಿಭೂತಿ ಹಚ್ಚಿಕೊಂಡಿರುವ ವ್ಯಕ್ತಿ ರೈಲು ಚಲಿಸುತ್ತಿರುವಾಗಲೇ ಪೂಜಾ ವಿಧಿವಿಧಾನಗಳನ್ನು ನಡೆಸುತ್ತಿರುವ ದೃಶ್ಯ ವಿಡಿಯೋದಲ್ಲಿದೆ.
ಮುಚ್ಚಿದ ಹಾಗೂ ಜನನಿಬಿಡ ರೈಲು ಬೋಗಿಯೊಳಗೆ ಬೆಂಕಿ ಹಚ್ಚಲು ಅವಕಾಶ ನೀಡಿರುವುದು ಹೇಗೆ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಧಾರ್ಮಿಕ ಆಚರಣೆ ವೈಯಕ್ತಿಕ ವಿಚಾರವಾದರೂ, ಹಲವು ಪ್ರಯಾಣಿಕರಿರುವ ಬೋಗಿಯೊಳಗೆ ತೆರೆದ ಜ್ವಾಲೆಯೊಂದಿಗೆ ದೀಪ ಹಚ್ಚುವುದು ಅಗ್ನಿ ಅವಘಡಕ್ಕೆ ಕಾರಣವಾಗುವ ಅಪಾಯವಿದೆ ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ.
ವೈರಲ್ ವಿಡಿಯೋಗೆ ಪ್ರತಿಕ್ರಿಯಿಸಿರುವ ಭಾರತೀಯ ರೈಲ್ವೆ, ಘಟನೆಯ ಬಗ್ಗೆ ಪರಿಶೀಲನೆ ನಡೆಸಲು ಹೆಚ್ಚಿನ ಮಾಹಿತಿಯನ್ನು ಕೇಳಿದೆ. ಪ್ರಯಾಣದ ದಿನಾಂಕ, ರೈಲು ಸಂಖ್ಯೆ ಹಾಗೂ ಪಿಎನ್ಆರ್ (PNR) ಸಂಖ್ಯೆಯಂತಹ ವಿವರಗಳನ್ನು ಹಂಚಿಕೊಳ್ಳುವಂತೆ ರೈಲ್ವೆಯ ಅಧಿಕೃತ ‘ರೈಲ್ವೆ ಸೇವಾ’ ಖಾತೆಯ ಮೂಲಕ ಮನವಿ ಮಾಡಲಾಗಿದೆ.
ಸ್ಥಳೀಯ
Arrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
ಗಣೇಶ ಚತುರ್ಥಿಯ ಸಂದರ್ಭದಲ್ಲಿ ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಜನಸಂದಣಿಯ ನಡುವೆ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಮೂವರು ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದು, ಕಳವಾಗಿದ್ದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.
ಕುಂದಾಪುರ: ಗಣೇಶ ಚತುರ್ಥಿಯ ಸಂದರ್ಭದಲ್ಲಿ ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಜನಸಂದಣಿಯ ನಡುವೆ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಮೂವರು ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದು, ಕಳವಾಗಿದ್ದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.
2026ರ ಸೆಪ್ಟೆಂಬರ್ 14ರಂದು ಬೈಂದೂರು ತಾಲೂಕಿನ ನಾಡ ಗುಡ್ಡೆಯಂಗಡಿ ನಿವಾಸಿ ಮುತ್ತು (75) ಅವರು ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದ ವೇಳೆ ಜನಸಂದಣಿಯ ನಡುವೆ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಲಾಗಿತ್ತು. ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಕೃತ್ಯದಲ್ಲಿ ಭಾಗಿಯಾಗಿದ್ದ ತಮಿಳುನಾಡು ಮೂಲದ ವಲ್ಲಿಯಮ್ಮ, ದೇವಿ ಯಾನೆ ತಿಲೋತ್ತಮ ಹಾಗೂ ಪೊನ್ನಿ ಎಂಬ ಮೂವರು ಮಹಿಳೆಯರನ್ನು ಕೇರಳದ ವಯನಾಡು ಜಿಲ್ಲೆಯ ಮಾನಂತವಾಡಿ ತಾಲೂಕಿನ ತಿರುನೆಲ್ಲಿ ಪೊಲೀಸರು ಬಂಧಿಸಿರುವ ಮಾಹಿತಿ ಕುಂದಾಪುರ ಪೊಲೀಸರಿಗೆ ಲಭ್ಯವಾಗಿತ್ತು.
ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ನಿರ್ದೇಶನದಂತೆ, ಕುಂದಾಪುರ ಪೊಲೀಸ್ ಠಾಣೆಯ ನಿರೀಕ್ಷಕರು ನ್ಯಾಯಾಲಯದ ಅನುಮತಿ ಪಡೆದು ಮಾನಂತವಾಡಿ ಜೈಲಿನಲ್ಲಿದ್ದ ಮೂವರು ಆರೋಪಿಗಳನ್ನು ಕುಂದಾಪುರಕ್ಕೆ ಕರೆತಂದು ವಿಚಾರಣೆ ನಡೆಸಿದ್ದಾರೆ.
ಅಪರಾಧ
Bantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು
ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ಬಂಟ್ವಾಳ: ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ನ.26ರಂದು ಬೆಳಿಗ್ಗೆ ಸುಮಾರು 11.40ರ ವೇಳೆಗೆ ಈ ಘಟನೆ ನಡೆದಿದ್ದು, ಗುಂಪುಗೂಡಿದವರು ಟೋಲ್ ಪ್ಲಾಜಾದ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಅಲ್ಲಿನ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ದೂರಿನ ಆಧಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 166/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 189(2), 191(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
ಬಿಗ್ ನ್ಯೂಸ್21 hours agoVitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
-
ಬಿಗ್ ನ್ಯೂಸ್21 hours agoVirupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ
-
ಅಪರಾಧ24 hours agoBantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು
-
ನಿಧನ ವಾರ್ತೆ2 hours agoBeltangadi-ಬೆಳ್ತಂಗಡಿ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಐಟಿಐ ವಿದ್ಯಾರ್ಥಿ ಸಾವು
-
ಸ್ಥಳೀಯ2 hours agoArrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
-
ನಿಧನ ವಾರ್ತೆ2 hours agoKolar-ಕೋಲಾರ: ಹೆದ್ದಾರಿ ಬದಿಯಲ್ಲಿ ಪಾರ್ಸೆಲ್ ರೂಪದಲ್ಲಿ ಮಹಿಳೆಯ ಮೃತದೇಹ ಪತ್ತೆ
-
ಅಂತರ ರಾಜ್ಯ2 hours agoWhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!
-
ಅಂತರ ರಾಜ್ಯ1 hour agoViral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ

















