Connect with us

ರಾಜಕೀಯ

Hindu vulgar word : ಹಿಂದೂ ಅಶ್ಲೀಲ ಪದ ಎಂಬ ಜಾರಕಿಹೋಳಿ ಚಿಂತನೆಯೇ ಹೊಲಸು: ಬೊಮ್ಮಾಯಿ; ಸಚಿವರಾದ ಸುನೀಲ್‌ , ಜೊಲ್ಲೆ ಆಕ್ರೋಶ – ಕಾಂಗ್ರೆಸ್ ಮುಖಂಡ ನೀಡಿದ ಸ್ಪಷ್ಟನೆಯೇನು ?

Published

on

Ad Widget

Ad Widget

Ad Widget

Ad Widget

Hindu vulgar word ಉಡುಪಿ:  ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಿಂದೂ ಶಬ್ಧದ ಬಗ್ಗೆ  ನೀಡಿದ ವಿವಾದಾತ್ಮಕ ಹೇಳಿಕೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲು ರಾಜ್ಯ ಬಿಜೆಪಿ  ಸರ್ವ ಸಿದ್ದತೆಯಲ್ಲಿ ತೊಡಗಿದೆ. ಚುನಾವಣಾ ಸಮಯದಲ್ಲಿ ರಾಜ್ಯದಲ್ಲಿ ಹಿಂದೂ ಮತಗಳ ದ್ರುವಿಕರಣಕ್ಕೆ ಯತ್ನ ನಡೆಸುತ್ತಿದ್ದ ಬಿಜೆಪಿಗೆ ಇದೊಂದು ಅನಾಯಸವಾಗಿ ದೊರಕಿದ ಅಸ್ತ್ರದಂತಾಗಿದೆ. ಸತೀಶ್ ಜಾರಕಿಹೊಳಿಯವರ ಈ ಹೇಳಿಕೆಗೆ ಈಗಾಗಲೇ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೆವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ  ಡಿ.ಕೆ. ಶಿವಕುಮಾರ್‌ ಖಂಡನೆ ವ್ಯಕ್ತಪಡಿಸಿ ಇದು ಅವರ ಹೇಳಿಕೆ ಎಂದು ಹೇಳಿದ್ದಾರೆ. ಆದರೇ ಇದನ್ನು ಒಪ್ಪಲು ರಾಜ್ಯ ಬಿಜೆಪಿ ತಯಾರಿಲ್ಲ . ಸ್ವತ: ರಾಜ್ಯದ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ  ಕಾಂಗ್ರೆಸಿನ ತುಷ್ಠೀಕರಣ ರಾಜಕಾರಣ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Ad Widget

Ad Widget

Ad Widget

Ad Widget

ದೇಶದ ಜನರ ಧಾರ್ಮಿಕ‌ ಭಾವನೆಗೆ ನಿರಂತರವಾಗಿ ಧಕ್ಕೆ ತರುವ, ಅಪಮಾನ ಮಾಡುವ ತುಷ್ಠೀಕರಣ ರಾಜಕಾರಣ ನಿರತ ಕಾಂಗ್ರೆಸ್ ನಾಯಕರ ನಡೆ ನುಡಿ ಅಕ್ಷಮ್ಯ ಎಂದು ಮುಖ್ಯಮಂತ್ರಿ‌ ಬಸವರಾಜ ಬೊಮ್ಮಾಯಿ ಆಕ್ರೋಶ‌ ವ್ಯಕ್ತಪಡಿಸಿದ್ದಾರೆ. ಅವರು ಮಂಗಳವಾರ ಆದಿ ಉಡುಪಿ ಹೆಲಿಪ್ಯಾಡಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಿಂದೂಗಳು, ಹಿಂದುತ್ವಕ್ಕೆ‌ ಬಗೆದ ಅಪಚಾರಕ್ಕೆ ಕೂಡಲೇ ಈ ದೇಶ, ರಾಜ್ಯದ ಜನರ ಕ್ಷಮೆ ಯಾಚಿಸಬೇಕು’’ ಎಂದು ಆಗ್ರಹಿಸಿದರು.

Ad Widget

Ad Widget alt="Ad Widget"/>

Ad Widget

“ಆಳ ಅಧ್ಯಯನವಿಲ್ಲದೆ ಅರೆಬರೆ ಓದಿನಿಂದ ಅಲ್ಪಸಂಖ್ಯಾತರ ಮತಗಳಿಗಾಗಿ ಏನು ಮಾತನಾಡಿದರೂ ನಡೆಯುತ್ತದೆನ್ನುವ ಮನೋಭಾವ ಸಲ್ಲದು. ಭಾರತದ ನಂಬಿಕೆಯ ಬುನಾದಿಗೆ ಧಕ್ಕೆ, ಆಂತರಿಕ ಕ್ಷೋಭೆ ಉಂಟು ಮಾಡೋದು ದೇಶದ್ರೋಹ, ಖಂಡನೀಯ. ಇದಕ್ಕೆ ಕಾಂಗ್ರೆಸ್ ನ ಪರೋಕ್ಷ ಸಹಮತವಿದೆ’’ ಎಂದು ಆರೋಪಿಸಿದರು.

Ad Widget

Ad Widget <> Ad Widget

“ಸಣ್ಣ ವಿಚಾರಕ್ಕೂ ಕೂಗಾಡುವ ಕಾಂಗ್ರೆಸ್ ನಾಯಕ ರಾಹುಲ್, ಸಿದ್ದರಾಮಯ್ಯ ಮೌನದ ಹಿಂದೆ ಜಾರಕಿಹೊಳಿ ಹೇಳಿಕೆಗೆ ಸಮ್ಮತಿಯಾ? ಬಹುಸಂಖ್ಯಾತರ ಭಾವನೆಗೆ ಧಕ್ಕೆ ತರುವ ಮಾತಿನ ಹಿಂದಿರುವ ತಂತ್ರ, ಅರ್ಥವೇನು? ಸತೀಶ್ ಜಾರಕಿಹೊಳಿ ತಮ್ಮ ಮೊಂಡು ವಾದ ಸಮರ್ಥನೆಗೆ ಮುಂದಾಗಿದ್ದು ಸಮಾಜದಲ್ಲಿ ಹುಳಿ ಹಿಂಡದೆ, ಕೂಡಲೇ ಕ್ಷಮೆ ಕೇಳಬೇಕು, ಪಶ್ಚಾತ್ತಾಪ ವ್ಯಕ್ತಪಡಿಸಬೇಕು  ಎಂದು ಅವರು ಆಗ್ರಹಿಸಿದರು.

“ನೆಪ ಮಾತ್ರಕ್ಕಿರುವ ಕಾಂಗ್ರೆಸ್ ಮುಂದೆ ಸಂಪೂರ್ಣ ಅಸ್ತಿತ್ವ‌ ಕಳೆದುಕೊಳ್ಳಲಿದೆ. ಜನತೆ‌ ಈಗಾಗಲೇ ಕಾಂಗ್ರೆಸಿಗೆ ಮೂಲೆ‌ ಸ್ಥಾನ ತೋರಿಸಿದ್ದಾರೆ. ಕಾಂಗ್ರೆಸಿನಿಂದ ಚುನಾವಣಾ ರಾಜಕಾರಣದಂಗವಾಗಿ ಪೂರ್ವಗ್ರಹ, ಯೋಜನಾಬದ್ಧ ಹೇಳಿಕೆಗಳು ಬರುತ್ತಿದ್ದು ಜನತೆ ತಕ್ಕ ಪಾಠ ಕಲಿಸಲಿದ್ದಾರೆ.  ಎಂದು ತಿಳಿಸಿದರು.

Ad Widget

Ad Widget

ಇನ್ನು ಜಾರಕಿಹೋಳಿ ಹೇಳಿಕೆಯನ್ನು ಸಚಿವ ಸುನೀಲ್‌ ಕುಮಾರ್‌ ಖಂಡಿಸಿದ್ದು ಇದರ ವಿರುದ್ದ  ಸ್ವಾಭಿಮಾನಿ ಹಿಂದೂ ಎಂಬ ಅಭಿಯಾನವನ್ನೆ ಆರಂಭಿಸಿದ್ದಾರೆ. ಇನ್ನು ಮುಜುರಾಯಿ ಖಾತೆ ಸಚಿವೆ ಶಶಿಕಲಾ ಜೊಲ್ಲೆಯವರು ಕೂಡ ಕಟು ಶಬ್ಧಗಳಿಂದ ಹೇಳಿಕೆಯನ್ನು ಟೀಕಿಸಿದ್ದಾರೆ.

Satish jarakiholi ಹಿಂದೂ ಪದದ ಅರ್ಥ ಅತ್ಯಂತ ಕೊಳಕಾಗಿದೆ, ಅದು ಭಾರತದ ಪದವಲ್ಲ – ಅದನ್ಯಾಕೆ ತಲೆ ಮೇಲೆ ಹೊತ್ತುಕೊಂಡು ತಿರುಗುತ್ತಿರಿ? : ಸತೀಶ್ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ

ಮತ್ತೆ ಹೇಳಿಕೆ ಸಮರ್ಥಿಸಿದ ಜಾರಕಿಹೋಳಿ

ನಿಪ್ಪಾಣಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದು ಶಬ್ಧದ ಮೇಲೆ ಮಾತನಾಡಿದ್ದೇನೆ. ಈ ಬಗ್ಗೆ ರಾಜ್ಯ, ರಾಷ್ಟ್ರೀಯ ಮಾಧ್ಯಮಗಳಲ್ಲಿ ಚರ್ಚೆ ಆಗುತ್ತಿದೆ. ನಾನು ಭಾಷಣದಲ್ಲಿ ಹೇಳಿದ್ದು ಹಿಂದು ಶಬ್ಧ ಪರ್ಷಿಯನ್ ನಿಂದ ಬಂದಿದೆ ಎಂದು ಹೇಳಿದ್ದು ನಿಜ. ಈ ಬಗ್ಗೆ ಚರ್ಚೆ ಆಗಬೇಕು ಎಂದು ನಾನು ಹೇಳಿದ್ದೇನೆ. ಹಿಂದೂ ಶಬ್ಧದ ಬಗ್ಗೆ ನಿಂದನೆ ಕೆಲವು  ಪದಗಳು ದಾಖಲೆಯಲ್ಲಿ ಸಿಗುತ್ತೆ ಈ ಬಗ್ಗೆ ಕೋಟ್ ಮಾಡಿ‌ ಹೇಳಿದ್ದೇನೆ. ಇದು ಸತೀಶ್ ಜಾರಕಿಹೊಳಿ ವೈಯಕ್ತಿಕ ಹೇಳಿಕೆ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮದಲ್ಲಿ ಚರ್ಚೆ ಹಿನ್ನೆಲೆ ಸ್ಪಷ್ಟನೆ ನೀಡುವುದು ನನ್ನ ಕರ್ತವ್ಯ. ಜಾತಿ, ಧರ್ಮ ಮೀರಿ ಕೆಲಸ ಮಾಡುವ ಉದ್ದೇಶ ನನ್ನದು. ಪರ್ಷಿಯನ್​​ನಿಂದ ಹಿಂದೂ ಪದ ಬಂದಿದ್ದ ಬಗ್ಗೆ ನೂರಾರು ದಾಖಲೆ ಇವೆ. ಅನೇಕ ಪುಸ್ತಕಗಳಲ್ಲಿ ಈ ಬಗ್ಗೆ ಉಲ್ಲೇಖಗಳು ಇವೆ. ಮಾಧ್ಯಮಗಳು ಉಕ್ರೇನ್, ರಷ್ಯಾ ಯುದ್ಧ ಮಾದರಿಯಲ್ಲಿ ವಿಶ್ಲೇಷಣೆ ಮಾಡುತ್ತಿವೆ. ಈ ಸಮಯ ಬೇರೆ ವಿಷಯಕ್ಕೆ ಕೊಟ್ಟಿದರೇ ಒಳ್ಳೆಯದಾಗುತ್ತಿದೆ ಎಂದು ಹೇಳಿದ್ದಾರೆ.

ಮಾಧ್ಯಮಗಳು ಅನೇಕ ಸುಳ್ಳುಗಳನ್ನ ವಿಜೃಂಭಣೆ ಮಾಡಿವೆ. ಹಿಂದೂ ಧರ್ಮದ ವಿಚಾರ ಬಂದಾಗ ವಿಶೇಷ ಸ್ಥಾನಮಾನ. ದಯವಿಟ್ಟು ನೈಜ್ಯವಾದ ಸುದ್ದಿ ತೋರಿಸುವ ಪ್ರಯತ್ನ ಮಾಡಿ. ಹಿಂದೂ ಕಾರ್ಯಕರ್ತರ ಹತ್ಯೆಯಾದಾಗ ವಿಶೇಷ ಸ್ಥಾನಮಾನ. ದಲಿತ ಮೃತಪಟ್ಟರೇ ಯಾವುದೇ ಸುದ್ದಿ ಇಲ್ಲ. ಹಿಂದೂ ಧರ್ಮದ ಅಟಲ್ ಬಿಹಾರಿ ವಾಜಪೇಯಿ ಭಾಷಣ ಕೇಳಬೇಕು. ಹಿಂದೂ ಎಂಬುದು ಜೀವನ ಪದ್ಧತಿ ಎಷ್ಟೇ ಎಂದು ಹೇಳಿದ್ದಾರೆ.

ಈ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಹೇಳಲಾಗಿದೆ. ನಾನೇನು ಯಾರನ್ನು ಅಪಮಾನ ಮಾಡುವ ಉದ್ದೇಶ ಇಲ್ಲ. ಜಾತಿ, ಧರ್ಮದಿಂದ ನಾನು ದೂರ ಇರೋ ವ್ಯಕ್ತಿ. ಈ ರೀತಿ ನಮ್ಮ ಮೇಲೆ ಅಪರಾಧ ಮಾಡಿರೋ ಬಿಂಬಿಸಬೇಡಿ. ವಿದ್ವಾಂಸರನ್ನು ಯಾರಿಗೋ ಲಾಭ ಮಾಡಲು ನೀವು ಚರ್ಚೆ ಮಾಡಬೇಡಿ. ನನ್ನ ಭಾಷಣ ಇನ್ನೂ ಹತ್ತು ಸಲ ನೋಡಿ. ತಪ್ಪಿದ್ರೆ ಚರ್ಚೆ ಮುಂದುವರಿಸಿ ಎಂದು ತಿಳಿಸಿದ್ದಾರೆ.

ಇದೇ ರೀತಿ ಚರ್ಚೆ ಮುಂದುವರಿದರೆ ಮಾನಹಾನಿ ಕ್ರಮ ಕೈಗೊಳ್ಳಬೇಕಾಗುತ್ತದೆ. ನಾನು ಯಾವುದೇ ಧರ್ಮ, ಭಾಷೆ ಮಾಡುವ ಪ್ರಶ್ನೆಯೆ ಇಲ್ಲ. ಮೂವತ್ತು ವರ್ಷಗಳಿಂದ ಇದೇ ಕೆಲಸ ಮಾಡುತ್ತೇನೆ. ವಿಕಿಪೀಡಿಯಾದಲ್ಲಿ ಇರೋದು ಹೇಳಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

Gold Rate Today : ಅಭರಣ ಖರೀದಿಸುವವರಿಗೆ ಗುಡ್ ನ್ಯೂಸ್ – ಮಂಗಳವಾರದ ಚಿನ್ನ ಹಾಗೂ ಬೆಳ್ಳಿ ದರ ಹೀಗಿದೆ

Ad Widget
Click to comment

Leave a Reply

ರಾಜಕೀಯ

BJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ

Published

on

Ad Widget

Ad Widget

Ad Widget

Ad Widget

ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

Ad Widget

Ad Widget alt="Ad Widget"/>

Ad Widget

ನರಸಿಂಹ ಮಾಣಿ ಅವರು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಅವರ ತಾಯಿಯ ಯೋಗಕ್ಷೇಮ ವಿಚಾರಿಸಿದ ಮುಖಂಡರು, ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದ ಇರುವಂತೆ ಪ್ರೇರಣೆ ನೀಡಿದರು.

Ad Widget

Ad Widget <> Ad Widget

ಸಾಮಾಜಿಕ ಹಾಗೂ ಸಂಘಟನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಕುಟುಂಬದೊಂದಿಗೆ ಸಮಾಜ ನಿಲ್ಲಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.

ಭೇಟಿಯ ವೇಳೆ ಬಿಜೆಪಿ ಪುತ್ತೂರು ಮಂಡಲ ಉಪಾಧ್ಯಕ್ಷ ರತನ್ ರೈ ಕುಂಬ್ರ, ಪುತ್ತೂರು ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ನೆಲಪ್ಪಾಲು, ಯುವಮೋರ್ಚಾದ ಪವನ್ ಶೆಟ್ಟಿ ಕಂಬಳತ್ತಡ್ಡ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ವಿಶ್ವನಾಥ ಕುಲಾಲ್ ಹಾಗೂ ಹಿಂದೂ ಜಾಗರಣ ವೇದಿಕೆಯ ರಾಜೇಶ್ ಉಪಸ್ಥಿತರಿದ್ದರು.

Continue Reading

ಮಂಗಳೂರು

Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್‌ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ

Published

on

Ad Widget

Ad Widget

Ad Widget

Ad Widget

ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.

Ad Widget

Ad Widget

Ad Widget

Ad Widget

ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.

Ad Widget

Ad Widget alt="Ad Widget"/>

Ad Widget

​ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

Ad Widget

Ad Widget <> Ad Widget

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.

ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.

Ad Widget

Ad Widget

“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.

​ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:

ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.

ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.

ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರ‌ಮತ್ತು ಪ್ರವಾಸೋದ್ಯಮ‌ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Ad Widget
Continue Reading

ರಾಜಕೀಯ

Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ

Published

on

Ad Widget

Ad Widget

Ad Widget

Ad Widget

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್‌ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.

Ad Widget

Ad Widget alt="Ad Widget"/>

Ad Widget

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

Ad Widget

Ad Widget <> Ad Widget

ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.

Ad Widget

Ad Widget

ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ

ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.

ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್‌ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.

ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.

ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!