Connect with us

ಉದ್ಯೋಗ

job Fraud: ಉದ್ಯೋಗ ಕೊಡಿಸುವ ಆಮೀಷವೊಡ್ಡಿ ಲಕ್ಷಾಂತರ ರೂ ಮೋಸ  – ಮಡಿಕೇರಿಯಲ್ಲಿ ಆರೋಪಿ ಬಂಧನ | ಸುಳ್ಯ, ಕಡಬ, ಬೆಳ್ತಂಗಡಿ, ಪುತ್ತೂರಿನ 40ಕ್ಕೂ ಹೆಚ್ಚು ಮಂದಿಗೆ ವಂಚನೆ ಆರೋಪ- ಠಾಣೆ ಮುಂದೆ ಜಮಾವಣೆ

Published

on



Ad Widget

Ad Widget

Ad Widget

Ad Widget

ಸುಳ್ಯ (ದಕ್ಷಿಣ ಕನ್ನಡ): ವಿದೇಶದಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ಲಕ್ಷಗಟ್ಟಲೇ ಹಣ ವಸೂಲಿ ಮಾಡಿ ವಂಚಿಸಿದ ಆರೋಪಿಯನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ.  ಕೇರಳದ ಕಾಸರಗೋಡಿನ ಮುಟ್ಟತೋಡಿ ನಿವಾಸಿ ಶ್ರೀನಾಥ್ ಬಂಧಿತ ಆರೋಪಿ. ಈತ ಸುಳ್ಯ, ಕಡಬ, ಬೆಳ್ತಂಗಡಿ, ಪುತ್ತೂರು ತಾಲೂಕಿನ 40ಕ್ಕೂ ಹೆಚ್ಚು ಮಂದಿಗೂ  ಲಕ್ಷಾಂತರ ರೂಪಾಯಿ ವಂಚಿಸಿರುವ ಆರೋಪ ಇದೆ ವೇಳೆ ಕೇಳಿ ಬಂದಿದೆ. ಈತನನ್ನು ಬಂಧಿಸಿರುವ ಮಾಹಿತಿ ತಿಳಿಯುತ್ತಲೇ 40ಕ್ಕೂ ಹೆಚ್ಚು ಮಂದಿ ಮಡಿಕೇರಿ ಪೊಲೀಸ್ ಠಾಣೆ ಮುಂಭಾಗ  ಜಮಾಯಿಸಿದ್ದಾರೆ

Ad Widget

Ad Widget

Ad Widget

Ad Widget

ಶ್ರೀನಾಥ್ ಮತ್ತು ವಿನೋದ್ ಎಂಬುವರು ಚೆಕ್ ರಿಪಬ್ಲಿಕ್ ಮತ್ತು ವಿದೇಶಗಳಲ್ಲಿ ಉದ್ಯೋಗ, ಕೊಡಿಸುವುದಾಗಿ ಜನರಿಗೆ ಹೇಳಿ ಲಕ್ಷಗಟ್ಟಲೆ ಹಣ ಪಡೆದು ವಂಚನೆ ಮಾಡುತ್ತಿದ್ದರು ಎನ್ನಲಾಗಿದೆ. ವಂಚನೆಗೊಳಗಾದ ಬಹುತೇಕರು ಕೊಡಗು ಹಾಗು ದಕ್ಷಿಣ ಕನ್ನಡ ಜಿಲ್ಲೆಯವರು ಎನ್ನಲಾಗುತ್ತಿದೆ. ಈ ರೀತಿ ಹಣ ಕಳಕೊಂಡು ಮೋಸ ಹೋದವರು ಈ ವಿಚಾರವನ್ನು  ನೀತಿ ಎಂಬ ಸಾಮಾಜಿಕ ಸಂಘಟನೆಯ  ಗಮನಕ್ಕೆ ತಂದಿದ್ದರು

Ad Widget

Ad Widget

Ad Widget alt="Ad Widget"/>

Ad Widget

 ನಿರುದ್ಯೋಗಿ ಯುವಕರು , ಅಥಾವ ದೊಡ್ಡ ಸಂಬಳದ ವಿದೇಶಿ ಕೆಲಸದ ಬಗ್ಗೆ ಆಸಕ್ತಿ ಉಳ್ಳವರನ್ನು ಸಂಪರ್ಕಿಸುತ್ತಿದ್ದ ಆರೋಪಿಯು ಅವರಲ್ಲಿ 4 ಲ. ರೂಪಾಯಿ ಹಣಕ್ಕೆ ಬೇಡಿಕೆಯಿಡುತ್ತಿದ್ದ.  . ಇದರ ಪ್ರೊಸೆಸಿಂಗ್ ಚಾರ್ಜ್ ಆಗಿ 1.5 ಲಕ್ಷ ಮೊದಲು ಕಟ್ಟಬೇಕು. ಉಳಿದ 2.5 ಲಕ್ಷ ರೂ. ಗಳನ್ನು ಆರೋಪಿ ಹಂತ ಹಂತವಾಗಿ ಪಡೆಯುತ್ತಿದ್ದ ಎಂದು ಆರೋಪಿಸಲಾಗಿದೆ. ಬಳಿಕ ಅಷ್ಟು ಹಣ ಪಡೆದು ಯುವಕರನ್ನು ವಂಚಿಸುತ್ತಿದ್ದ ಎನ್ನಲಾಗಿದೆ

Ad Widget

Ad Widget <> Ad Widget

ಇದೆ ರೀತಿ ಆರೋಪಿಯು  ಒಂದು ವರ್ಷದ ಹಿಂದೆ  2021ರ ನ 5 ರಂದು ಕೊಡಗು ಜಿಲ್ಲೆಯ ಚೆಂಬೂ ನಿವಾಸಿ ಜೇಮ್ಸ್ ಜೋಸೆಫ್ ಎಂಬವರಿಂದ ಒಂದೂವರೆ ಲಕ್ಷ ರೂಪಾಯಿ ಹಣ ಪಡೆದಿದ್ದ, ಶ್ರೀನಾಥ್‌ ಗೆ ಸೇರಿದ ಕೇರಳದ ಕಾಸರಗೋಡಿನ ಐಡಿಬಿಐ ಖಾತೆ ಸಂಖ್ಯೆ : 0450102000006705 ಇದಕ್ಕೆ ಸಂಪಾಜೆ ಕೆನರಾ ಬ್ಯಾಂಕ್ ಖಾತೆಯಿಂದ ರೂಪಾಯಿ 1.5 ಲಕ್ಷ ಹಣವನ್ನುಜೇಮ್ಸ್‌ ವರ್ಗಾವಣೆ ಮಾಡಿದ್ದರು.



Ad Widget

   ಆದರೆ ನಂತರದಲ್ಲಿ ವಿಸಾವನ್ನು ಕಳುಹಿಸದೇ ಉಳಿದ ಹಣಕ್ಕೆ ಬೇಡಿಕೆ ಇಟ್ಟಿದ್ದರಂತೆ. ಈ ಬಗ್ಗೆ ಜೇಮ್ಸ್‌  ಮಡಿಕೇರಿ ರೂರಲ್ ಪೊಲೀಸ್ ಠಾಣೆಯಲ್ಲಿ IPC 1860(U/S-417,420) ರಂತೆ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ , ಆರೋಪಿಯನ್ನು ಬಂಧಿಸಲಾಗಿದೆ.

Ad Widget

Ad Widget

 ಸುಳ್ಯ, ಕಡಬ, ಬೆಳ್ತಂಗಡಿ, ಪುತ್ತೂರು ತಾಲೂಕುಗಳಲ್ಲೂ ಈತ ಕೋಟಿಗಟ್ಟಲೆ ಹಣ ಪಡೆದು ವಂಚಿಸಿರುವ ಬಗ್ಗೆ ಸಾಮಾಜಿಕ ಸಂಘಟನೆ ನೀತಿ ತಂಡಕ್ಕೆ ದೂರುಗಳು ಲಭ್ಯವಾಗಿರುವ ಮಾಹಿತಿ ಲಭಿಸಿದೆ. ಪೊಲೀಸರಿಗೆ ದೂರು ನೀಡಲು ಸಿದ್ಧತೆಗಳು ನಡೆಯುತ್ತಿವೆ ಎಂದು ವರದಿಯಾಗಿದೆ. ಆರೋಪಿಯ ಬಂಧನವಾಗುತ್ತಿದ್ದಂತೆ ವಿವಿಧ ತಾಲೂಕುಗಳಲ್ಲಿ ವಂಚನೆಗೊಳಗಾದ ಸುಮಾರು 40ಕ್ಕೂ ಹೆಚ್ಚು ಜನರು ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಜಮಾಯಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇವರಲ್ಲಿ ಹಲವರು ಆರೋಪಿಗೆಗೆ ತಮ್ಮ ವಾಹನ, ಜಾಗ, ಆಭರಣಗಳನ್ನು ಮಾರಿ ಲಕ್ಷಗಟ್ಟಲೆ ಹಣವನ್ನು ನೀಡಿದ್ದಾರೆ. ಆದರೆ ಪ್ರಸ್ತುತ ಲಭ್ಯವಾಗಿರುವ ಮಾಹಿತಿ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರೂ ಈ ಬಗ್ಗೆ ಸದ್ಯ ದೂರು ನೀಡದ ಹಿನ್ನೆಲೆ ಆರೋಪಿಯೂ ಪ್ರಸ್ತುತ ಮಡಿಕೇರಿಯಲ್ಲಿ ದಾಖಲಾಗಿರುವ ದೂರಿನ ಮೇರೆಗೆ ಸಂತ್ರಸ್ತನಿಗೆ ಹಣ ಸಂದಾಯ ಮಾಡಿ ಪರಾರಿಯಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಮಡಿಕೇರಿಗೆ ಹೋದ ಸುಮಾರು 40ಕ್ಕೂ ಹೆಚ್ಚು ಜನರು ಅತಂತ್ರ ಸ್ಥಿತಿಯಲ್ಲಿ ಇದ್ದಾರೆ.

Ad Widget
Click to comment

Leave a Reply

ಉದ್ಯೋಗ

Puttur-Sales‌ನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening

Published

on



Ad Widget

Ad Widget

Ad Widget

Ad Widget

ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.

Ad Widget

Ad Widget

Ad Widget alt="Ad Widget"/>

Ad Widget

TVS ಸಂಸ್ಥೆಯ ಪ್ರೀಮಿಯಂ, EV ಹಾಗೂ IC ವಿಭಾಗಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗಿದ್ದು, ‘ಪುತ್ತೂರಿನ ಅತಿದೊಡ್ಡ 2-ವೀಲರ್ ಜಾಬ್ ಓಪನಿಂಗ್’ ಎಂಬ ಘೋಷಣೆಯೊಂದಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.

Ad Widget

Ad Widget <> Ad Widget

ಸೇಲ್ಸ್ ವಿಭಾಗದಲ್ಲಿ ಹಲವು ಅವಕಾಶ



Ad Widget

ಪುತ್ತೂರು ಸೇಲ್ಸ್ ವಿಭಾಗದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್, ಸೇಲ್ಸ್ ಮ್ಯಾನೇಜರ್, ಎಕ್ಸ್‌ಚೇಂಜ್ ಕೋಆರ್ಡಿನೇಟರ್, ಸೇಲ್ಸ್ ಟೆಲಿಕಾಲಿಂಗ್ (CRE), ಅಕೌಂಟ್ಸ್ ಮ್ಯಾನೇಜರ್, ಫೈನಾನ್ಸ್ ಮ್ಯಾನೇಜರ್, ರಿಸೆಪ್ಷನಿಸ್ಟ್, RTO ಎಕ್ಸಿಕ್ಯೂಟಿವ್, ಇನ್‌ವಾಯ್ಸ್ ಎಕ್ಸಿಕ್ಯೂಟಿವ್, ಅಕೌಂಟ್ಸ್ ಎಕ್ಸಿಕ್ಯೂಟಿವ್, ಫೈನಾನ್ಸ್ ಕೋಆರ್ಡಿನೇಟರ್ ಹಾಗೂ ಇನ್ಶೂರೆನ್ಸ್ ಎಕ್ಸಿಕ್ಯೂಟಿವ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

Ad Widget

Ad Widget

ಸರ್ವೀಸ್ ವಿಭಾಗದಲ್ಲೂ ಭರ್ಜರಿ ನೇಮಕಾತಿ

ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಫ್ಲೋರ್ ಸೂಪರ್‌ವೈಸರ್, ಟೆಕ್ನಿಷಿಯನ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಪಾರ್ಟ್ಸ್ ಮ್ಯಾನೇಜರ್, ವಾಷಿಂಗ್ ಸಿಬ್ಬಂದಿ, PDI ಟೆಕ್ನಿಷಿಯನ್, ಸರ್ವೀಸ್ ಮ್ಯಾನೇಜರ್, ನೆಟ್‌ವರ್ಕ್ ಕೋಆರ್ಡಿನೇಟರ್, ವಾರಂಟಿ ಇನ್‌ಚಾರ್ಜ್, ಅಕ್ಸಿಡೆಂಟ್ ಸೂಪರ್‌ವೈಸರ್, CRE ಟೆಲಿಕಾಲಿಂಗ್, CRM, PDI ಸೂಪರ್‌ವೈಸರ್ ಹಾಗೂ ಪೇಂಟರ್ ಮತ್ತು ಡೆಂಟಿಂಗ್ ಹುದ್ದೆಗಳಿಗೆ ಅವಕಾಶವಿದೆ.

ಬೆಳ್ಳಾರೆಯಲ್ಲೂ ಉದ್ಯೋಗದ ಬಾಗಿಲು ತೆರೆದಿದೆ

ಬೆಳ್ಳಾರೆ ಭಾಗದಲ್ಲಿಯೂ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಫ್ಲೋರ್ ಸೂಪರ್‌ವೈಸರ್, ಟೆಕ್ನಿಷಿಯನ್ ಹಾಗೂ ವಾಷಿಂಗ್ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸೇಲ್ಸ್ ವಿಭಾಗದಲ್ಲಿ 6 ಸೇಲ್ಸ್ ಎಕ್ಸಿಕ್ಯೂಟಿವ್ ಹಾಗೂ 2 ರಿಸೆಪ್ಷನಿಸ್ಟ್ ಹುದ್ದೆಗಳಿಗೂ ಅವಕಾಶವಿದೆ.

PF, ESI ಜೊತೆಗೆ ₹25 ಸಾವಿರದವರೆಗೆ ಗಳಿಕೆ!

ಆಯ್ಕೆಯಾಗುವ ಅಭ್ಯರ್ಥಿಗಳಿಗೆ PF, ESI, ಸ್ಪಾಟ್ ಇನ್ಸೆಂಟಿವ್, ಮಾಸಿಕ ಹಾಗೂ ತ್ರೈಮಾಸಿಕ ಇನ್ಸೆಂಟಿವ್ ಸೌಲಭ್ಯಗಳು ದೊರೆಯಲಿವೆ. 25 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕೆ ಪೆಟ್ರೋಲ್ ವೋಚರ್ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,000 ವರೆಗೆ ಗಳಿಸುವ ಅವಕಾಶ ಇದೆ ಎಂದು ಸಂಸ್ಥೆ ತಿಳಿಸಿದೆ.

ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರು ಮಾತ್ರವಲ್ಲದೆ, ಸೇಲ್ಸ್, ಅಕೌಂಟ್ಸ್, ಫೈನಾನ್ಸ್, ಟೆಲಿಕಾಲಿಂಗ್, ಗ್ರಾಹಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಹುಡುಕುತ್ತಿರುವವರೂ ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

ಉದ್ಯೋಗಾವಕಾಶ ಸೀಮಿತವಾಗಿರುವುದರಿಂದ ಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಬಹುದು.

📞 ಸಂಪರ್ಕ: +91 82965 79206

📍 ವಿಳಾಸ: ಶ್ರೀ ತಿರುಮಲಾ TVS, ಬೈಪಾಸ್ ಜಂಕ್ಷನ್, ಮಂಜಲ್ಪಡ್ಡು, ಮೇನ್ ರೋಡ್, ಬೋಳ್ವಾರ್ ವೆಸ್ಟ್, ಪುತ್ತೂರು–574201.

Ad Widget
Continue Reading

ಉದ್ಯೋಗ

Constable recruitment: ಕಾನ್‌ಸ್ಟೆಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ; 3,991 ಹುದ್ದೆಗಳಿಗೆ 19,396 ಅಭ್ಯರ್ಥಿಗಳು

Published

on



Ad Widget

Ad Widget

Ad Widget

Ad Widget

ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು, ಸೆ.25: ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 3,991 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಜ್ಯಾದ್ಯಂತ 19,396 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಉಳಿಕೆ ಮೂಲ ವೃಂದದ (ಆರ್‌ಪಿಸಿ) 3,395 ಹುದ್ದೆಗಳಿಗೆ 16,454 ಅಭ್ಯರ್ಥಿಗಳು ಹಾಗೂ ಕಲ್ಯಾಣ ಕರ್ನಾಟಕ (ಕೆಕೆ) ವೃಂದದ 596 ಹುದ್ದೆಗಳಿಗೆ 2,942 ಅಭ್ಯರ್ಥಿಗಳು ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget <> Ad Widget

ಮಂಗಳೂರಿನಲ್ಲಿ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕಾರವಾರ), ಚಿಕ್ಕಮಗಳೂರು ಹಾಗೂ ಮಂಗಳೂರು ನಗರ ಘಟಕಗಳ ವ್ಯಾಪ್ತಿಯ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಈ ಅಭ್ಯರ್ಥಿಗಳಿಗೆ ಸೆ.28ರಿಂದ ಅ.3ರವರೆಗೆ ಮಂಗಳೂರಿನ ಲಾಲ್‌ಬಾಗ್‌ನ ಮಂಗಳ ಕ್ರೀಡಾಂಗಣದಲ್ಲಿ ದೈಹಿಕ ಪರೀಕ್ಷೆ ನಡೆಯಲಿದೆ.



Ad Widget

ಕರೆಪತ್ರ ಡೌನ್‌ಲೋಡ್‌ಗೆ ಸೂಚನೆ
ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ವೆಬ್‌ಸೈಟ್‌ನಿಂದ ತಮ್ಮ ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಕರೆಪತ್ರದಲ್ಲಿ ನಮೂದಿಸಿರುವ ದಿನಾಂಕದಂದು ನಿಗದಿತ ಪರೀಕ್ಷಾ ಕೇಂದ್ರಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಪೊಲೀಸ್ ನೇಮಕಾತಿ ವಿಭಾಗ ಸೂಚಿಸಿದೆ.

Ad Widget

Ad Widget

ಕಾನ್‌ಸ್ಟೆಬಲ್ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ
ಇದೇ ವೇಳೆ, ಕೆಎಸ್‌ಆರ್‌ಪಿ, ಕೆಎಸ್‌ಐಎಸ್‌ಎಫ್ ಹಾಗೂ ಐಆರ್‌ಬಿ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿಗಾಗಿ ಸೆ.20ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕೇವಲ ಐದು ದಿನಗಳಲ್ಲಿ ಕೆಇಎ ಪ್ರಕಟಿಸಿದೆ.

ಪರೀಕ್ಷೆಯ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಸೆ.27ರೊಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬಹುದು ಎಂದು ಕೆಇಎ ತಿಳಿಸಿದೆ.

ಉಳಿಕೆ ಮೂಲ ವೃಂದದ 1,13,390 ಹಾಗೂ ಕಲ್ಯಾಣ ಕರ್ನಾಟಕ ವೃಂದದ 33,061 ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಬರೆದಿದ್ದರು. ಪರೀಕ್ಷೆ ನಡೆದ ದಿನವೇ ಎಲ್ಲ ಅಭ್ಯರ್ಥಿಗಳ ಒಎಂಆರ್ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

Ad Widget
Continue Reading

ಅಂತರ ರಾಜ್ಯ

Oracle-‘ಇಂದು ನಿಮ್ಮ ಕೊನೆಯ ಕೆಲಸದ ದಿನ’; Oracle ಉದ್ಯೋಗಿಗಳಿಗೆ ಮುಂಜಾನೆ ʻಇ-ಮೇಲ್ ʼಶಾಕ್

Published

on



Ad Widget

Ad Widget

Ad Widget

Ad Widget

ಜಾಗತಿಕ ಸಾಫ್ಟ್‌ವೇರ್ ದೈತ್ಯ ಒರಾಕಲ್ (Oracle) ಸಂಸ್ಥೆಯ ಉದ್ಯೋಗಿಗಳಿಗೆ ಮಂಗಳವಾರ ಮುಂಜಾನೆ ಕಳುಹಿಸಲಾದ ಇ-ಮೇಲ್‌ವೊಂದು ಆತಂಕ ಮೂಡಿಸಿದೆ. “ನಿಮ್ಮ ಹುದ್ದೆಗೆ ಸಂಬಂಧಿಸಿದಂತೆ ಕೆಲವು ಕಠಿಣ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇವೆ. ಇಂದು ನಿಮ್ಮ ಕೊನೆಯ ಕೆಲಸದ ದಿನ” ಎಂದು ಇ-ಮೇಲ್‌ನಲ್ಲಿ ತಿಳಿಸಲಾಗಿದೆ ಎಂದು ಬಿಸಿನೆಸ್ ಇನ್‌ಸೈಡರ್ ವರದಿ ಮಾಡಿದೆ.

Ad Widget

Ad Widget

Ad Widget

Ad Widget

ನವದೆಹಲಿ, ಸೆ.16: ಜಾಗತಿಕ ಸಾಫ್ಟ್‌ವೇರ್ ದೈತ್ಯ ಒರಾಕಲ್ (Oracle) ಸಂಸ್ಥೆಯ ಉದ್ಯೋಗಿಗಳಿಗೆ ಮಂಗಳವಾರ ಮುಂಜಾನೆ ಕಳುಹಿಸಲಾದ ಇ-ಮೇಲ್‌ವೊಂದು ಆತಂಕ ಮೂಡಿಸಿದೆ. “ನಿಮ್ಮ ಹುದ್ದೆಗೆ ಸಂಬಂಧಿಸಿದಂತೆ ಕೆಲವು ಕಠಿಣ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇವೆ. ಇಂದು ನಿಮ್ಮ ಕೊನೆಯ ಕೆಲಸದ ದಿನ” ಎಂದು ಇ-ಮೇಲ್‌ನಲ್ಲಿ ತಿಳಿಸಲಾಗಿದೆ ಎಂದು ಬಿಸಿನೆಸ್ ಇನ್‌ಸೈಡರ್ ವರದಿ ಮಾಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳವಾರ ಬೆಳಗ್ಗೆ ಸುಮಾರು 6 ಗಂಟೆಗೆ ಉದ್ಯೋಗಿಗಳಿಗೆ ಈ ಇ-ಮೇಲ್ ಕಳುಹಿಸಲಾಗಿದೆ ಎನ್ನಲಾಗಿದ್ದು, ಸಂಸ್ಥೆಯ ವ್ಯಾಪಕ ಸಾಂಸ್ಥಿಕ ಪುನರ್‌ರಚನೆಯ ಭಾಗವಾಗಿ ಕೆಲವು ಹುದ್ದೆಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಲಾಗಿದೆ. ಆದರೆ, ನಿರ್ದಿಷ್ಟ ಉದ್ಯೋಗಿಯನ್ನು ವೈಯಕ್ತಿಕವಾಗಿ ಕೆಲಸದಿಂದ ತೆಗೆದುಹಾಕಲು ಕಾರಣವೇನು ಎಂಬುದನ್ನು ಇ-ಮೇಲ್‌ನಲ್ಲಿ ವಿವರಿಸಲಾಗಿಲ್ಲ.

Ad Widget

Ad Widget <> Ad Widget

ಉದ್ಯೋಗಿಗಳ ಕಂಪ್ಯೂಟರ್, ಇ-ಮೇಲ್, ವಾಯ್ಸ್‌ಮೇಲ್ ಹಾಗೂ ಫೈಲ್‌ಗಳಿಗೆ ಇರುವ ಲಾಗಿನ್ ಪ್ರವೇಶವನ್ನು ಶೀಘ್ರದಲ್ಲೇ ಸ್ಥಗಿತಗೊಳಿಸಲಾಗುವುದು ಎಂದು ಕಂಪನಿ ತಿಳಿಸಿದೆ. ಅಲ್ಲದೆ, ಪರಿಹಾರಧನ ಹಾಗೂ ಇತರ ಅಗತ್ಯ ದಾಖಲೆಗಳನ್ನು ಪಡೆಯಲು ವೈಯಕ್ತಿಕ ಇ-ಮೇಲ್ ವಿಳಾಸವನ್ನು ನೀಡುವಂತೆ ಉದ್ಯೋಗಿಗಳಿಗೆ ಸೂಚಿಸಲಾಗಿದೆ.



Ad Widget

AI, ಕ್ಲೌಡ್ ಮೂಲಸೌಕರ್ಯ ವೆಚ್ಚದ ನಡುವೆ ಲೇಆಫ್
ಕೃತಕ ಬುದ್ಧಿಮತ್ತೆ (AI) ಹಾಗೂ ಕ್ಲೌಡ್ ಮೂಲಸೌಕರ್ಯ ಕ್ಷೇತ್ರದಲ್ಲಿ ಒರಾಕಲ್ ಭಾರಿ ಪ್ರಮಾಣದಲ್ಲಿ ಹೂಡಿಕೆ ಮಾಡುತ್ತಿರುವ ಸಂದರ್ಭದಲ್ಲೇ ಈ ಹೊಸ ಸುತ್ತಿನ ಉದ್ಯೋಗ ಕಡಿತ ನಡೆದಿದೆ ಎಂದು ವರದಿ ತಿಳಿಸಿದೆ. ಆದರೆ, ಪ್ರಸ್ತುತ ಸುತ್ತಿನಲ್ಲಿ ಎಷ್ಟು ಉದ್ಯೋಗಿಗಳು ಕೆಲಸ ಕಳೆದುಕೊಂಡಿದ್ದಾರೆ ಎಂಬುದನ್ನು ಒರಾಕಲ್ ಅಧಿಕೃತವಾಗಿ ಬಹಿರಂಗಪಡಿಸಿಲ್ಲ.

Ad Widget

Ad Widget

ಈಗಾಗಲೇ 21 ಸಾವಿರ ಉದ್ಯೋಗಿಗಳ ಕಡಿತ
2026ರ ಆರ್ಥಿಕ ವರ್ಷದಲ್ಲಿ ಒರಾಕಲ್ ತನ್ನ ಜಾಗತಿಕ ಸಿಬ್ಬಂದಿ ಬಳಗದ ಸುಮಾರು ಶೇ.13ರಷ್ಟು, ಅಂದರೆ ಸುಮಾರು 21,000 ಉದ್ಯೋಗಿಗಳನ್ನು ವಜಾಗೊಳಿಸಿತ್ತು ಎಂದು ವರದಿಯಾಗಿದೆ.

ಈ ಪುನರ್‌ರಚನಾ ಪ್ರಕ್ರಿಯೆಗಾಗಿ ಕಂಪನಿಯ ವೆಚ್ಚವು 2.8 ಬಿಲಿಯನ್ ಡಾಲರ್‌ವರೆಗೆ ಹೆಚ್ಚಾಗಿದೆ ಎನ್ನಲಾಗಿದೆ. ಉದ್ಯೋಗ ಕಡಿತಗಳ ಬಳಿಕ ಒರಾಕಲ್‌ನ ಜಾಗತಿಕ ಸಿಬ್ಬಂದಿ ಸಂಖ್ಯೆ ಸುಮಾರು 1.41 ಲಕ್ಷಕ್ಕೆ ಇಳಿದಿದೆ ಎಂದು ವರದಿ ತಿಳಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading