ಬಿಗ್ ನ್ಯೂಸ್
Electric Shock: ಬೆಳ್ತಂಗಡಿ : ಬ್ಯಾನರ್ ಅಳವಡಿಸುವ ವೇಳೆ ವಿದ್ಯುತ್ ಶಾಕ್ – ಓರ್ವ ಮೃತ್ಯು, ಇನ್ನೊರ್ವನಿಗೆ ಗಂಭೀರ ಗಾಯ | ಮಾಜಿ ಶಾಸಕ ಬಂಗೇರ ಆಸ್ಪತ್ರೆಗೆ ಭೇಟಿ
ಬೆಳ್ತಂಗಡಿ : ನ 8 : ಸಂಘಟನೆಯೊಂದರ ಪ್ರಚಾರರ್ಥ ಪ್ಲೆಕ್ಸ್ ಆಳವಡಿಸುತ್ತಿದ್ದ ವಿದ್ಯುತ್ ಶಾಕ್ ತಗಲಿ ಓರ್ವ ಮೃತಪಟ್ಟು ಇನ್ನೊರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ನ 8 ರಂದು ನಡೆದಿದೆ.
ಕಾರ್ಮಿಕ ಸಂಘವೊಂದರ ಸಮಾವೇಶ ಮಂಗಳೂರಿನಲ್ಲಿ ಆಯೋಜಿಸಲಾಗಿದ್ದು ಈ ಪ್ರಯುಕ್ತ ರಾಷ್ಟ್ರೀಯ ಹೆದ್ದಾರಿ ಬಳಿ ಶ್ರೀ ಗೋಕರ್ಣನಾಥ ಕೋ ಓಪರೇಟೀವ್ ಬ್ಯಾಂಕ್ ಮುಂಬಾಗ ಪ್ಲೆಕ್ಸ್ ಆಳವಡಿಸುವ ಕಾರ್ಯವನ್ನು ನಡೆಸಲಾಗುತಿತ್ತು. ಭಾರತೀಯ ಮಜ್ದೂರು ಸಂಘದವರಿಗೆ ಸೇರಿದ ಕುಟುಂಬ ಮಿಲನ -2022 ಕಾರ್ಯಕ್ರಮದ ಬ್ಯಾನರ್ ಆಳವಡಿಸುವ ವೇಳೆ ದುರ್ಘಟನೆ ಸಂಭವಿಸಿದೆ.
ಅದರಂತೆ ಆ ಪ್ರಿಂಟರ್ಸ್ ನವರು ಗೂಡ್ಸ್ ಆಟೋದಲ್ಲಿ ಬ್ಯಾನರ್ ತಂದು ರಾಷ್ಟ್ರೀಯ ಹೆದ್ದಾರಿ ಬಳಿ ಅಳವಡಿಸುತ್ತಿದ್ದರು. ಈ ವೇಳೆ ಟ್ರಾನ್ಸ್ ಫಾರ್ಮರ್ ಗೆ ಆಳವಡಿಸಿದ ಕಂಬಕ್ಕೆ ಪ್ಲೆಕ್ಸ್ ಆಳವಡಿಸುವಾಗ ಬ್ಯಾನರ್ ಗೆ ಜೋಡಿಸಲಾಗಿದ್ದ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಶಾಕ್ ಹೊಡೆದಿದೆ ಎನ್ನಲಾಗಿದೆ. ವಿದ್ಯುತ್ ಶಾಕ್ ಆಗಿ ಓವ೯ ಕಂಬದಿಂದ ಗಂಭೀರವಾಗಿ ಗಾಯಗೊಂಡಿದ್ದಾನೆ. ಇನ್ನೊಬ್ಬ ಕಾರ್ಮಿಕನಿಗೂ ಶಾಕ್ ತಗುಲಿದ್ದು, ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಓರ್ವ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಗಾಯಾಳುಗಳನ್ನು ದಾಖಲಿಸಿರುವ ಆಸ್ಪತ್ರೆಗೆ ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ, ಕಾಂಗ್ರೇಸ್ ಮುಖಂಡ ರಕ್ಷಿತ್ ಶಿವರಾಮ್ ಸಹಿತ ಹಲವು ಕಾಂಗ್ರೆಸ್ ಮುಖಂಡರು ಭೇಟಿ ನೀಡಿದ್ದಾರೆ. ಆಸ್ಪತ್ರೆ ಮುಂಭಾಗ ನೂರಾರು ಜನರು ನೆರೆದಿದ್ದಾರೆ
ಅಂತರ ರಾಜ್ಯ
L.K. Advani-ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು
ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (98) ಅವರು ಶ್ವಾಸಕೋಶದ ಸಮಸ್ಯೆಯಿಂದಾಗಿ ಶುಕ್ರವಾರ ಸಂಜೆ ದಿಲ್ಲಿಯ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಹೊಸದಿಲ್ಲಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (98) ಅವರು ಶ್ವಾಸಕೋಶದ ಸಮಸ್ಯೆಯಿಂದಾಗಿ ಶುಕ್ರವಾರ ಸಂಜೆ ದಿಲ್ಲಿಯ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ದಿಲ್ಲಿಯ ಜಸೋಲಾ ವಿಹಾರ್ನಲ್ಲಿರುವ ಆಸ್ಪತ್ರೆಗೆ ಅಡ್ವಾಣಿ ಅವರನ್ನು ಸಂಜೆ ಸುಮಾರು 7.30ರ ವೇಳೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿತಿಯ ಕುರಿತು ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಡಿಸಲಾಗುವುದು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಬಿಜೆಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಎಲ್.ಕೆ. ಅಡ್ವಾಣಿ ಅವರು 2002ರಿಂದ 2004ರವರೆಗೆ ದೇಶದ ಉಪ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಬಿಜೆಪಿಯನ್ನು ರಾಷ್ಟ್ರಮಟ್ಟದಲ್ಲಿ ಪ್ರಮುಖ ರಾಜಕೀಯ ಶಕ್ತಿಯಾಗಿ ಬೆಳೆಸುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದರು.
ಮಂಗಳೂರು
MRPL explosion-Big Breaking: MRPL ಸ್ಫೋಟ : ತೀವ್ರ ಗಾಯಗೊಂಡಿದ್ದ ರಾಜೇಶ್ ನಿಧನ : ಮನೀಶ್ ಕರ್ಕಡ ಕುಟುಂಬಕ್ಕೆ ನೀಡಿದ ಪರಿಹಾರದಷ್ಟೇ ನೀಡುವಂತೆ ಒತ್ತಾಯ
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಾರ್ಖಾನೆಯಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಭೀಕರ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವ ಶನಿವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಂಗಳೂರು: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಾರ್ಖಾನೆಯಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಭೀಕರ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವ ಶನಿವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ರಾಜೇಶ್ ಡಿಸಿಲ್ವ ಅವರು ಸುರತ್ಕಲ್ ಇಡ್ಯಾ ಗ್ರಾಮದ ಕಾನ ನಿವಾಸಿಯಾಗಿದ್ದು, ಬ್ಯಾಪಿಸ್ಟ್ ಡಿಸಿಲ್ವ ಎಂಬುವವರ ಐವರು ಮಕ್ಕಳ ಪೈಕಿ ಒಬ್ಬರಾಗಿದ್ದಾರೆ. ಇವರು ಹಲವು ವರ್ಷಗಳಿಂದ ಎಂಆರ್ಪಿಎಲ್ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದರು. ಅ ಅವಿವಾಹಿತರಾಗಿದ್ದರು ಎಂದು ತಿಳಿದುಬಂದಿದೆ. ಎಂಆರ್ಪಿಎಲ್ನ ಫೇಸ್-3ರ ಸಿಎಚ್ಟಿಯು (Coker Hydro Treating Unit) ಪ್ಲಾಂಟ್ನಲ್ಲಿ ಕಳೆದ ಸೆಪ್ಟೆಂಬರ್ 30ರಂದು ಭಾರೀ ಸ್ಫೋಟ ಸಂಭವಿಸಿತ್ತು. ಅಂದು ಸಂಭವಿಸಿದ ದುರಂತದಲ್ಲಿ ಹಳೆಯಂಗಡಿ ನಿವಾಸಿ ಮನೀಶ್ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದರು.
ಅದೇ ಘಟನೆಯಲ್ಲಿ ತೀವ್ರ ಸುಟ್ಟಗಾಯಗಳಿಗೆ ಒಳಗಾಗಿದ್ದ ರಾಜೇಶ್ ಡಿಸಿಲ್ವ ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಐಸಿಯು (ICU) ಘಟಕದಲ್ಲಿ ತೀವ್ರ ನಿಗಾದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಕಳೆದ ಕೆಲವು ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಮೃತರ ದೇಹವನ್ನು ಇಂದು ಸಂಜೆಯ ವೇಳೆ ನಗರದ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ (Post-mortem) ನಡೆಸಲಾಗುವುದು. ಬಳಿಕ ಕಾನೂನು ಪ್ರಕ್ರಿಯೆಗಳನ್ನು ಪೂರೈಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸ್ಥಳೀಯ
Kumara Parvata-ಅ.18ರಿಂದ ಕುಮಾರ ಪರ್ವತ ಚಾರಣಕ್ಕೆ ಅನುಮತಿ
ಚಾರಣಿಗರ ನೆಚ್ಚಿನ ತಾಣವಾದ ಕುಮಾರ ಪರ್ವತ ಚಾರಣಕ್ಕೆ ಅಕ್ಟೋಬರ್ 18ರಿಂದ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಎರಡು ಚಾರಣ ಮಾರ್ಗಗಳ ಪೈಕಿ ಬಿದಹಳ್ಳಿ–ಕುಮಾರ ಪರ್ವತ–ಬಿದಹಳ್ಳಿ ಮಾರ್ಗದಲ್ಲಿ ಮಾತ್ರ ಸದ್ಯಕ್ಕೆ ಚಾರಣಕ್ಕೆ ಅನುಮತಿ ನೀಡಲಾಗಿದೆ.
ಸುಬ್ರಹ್ಮಣ್ಯ: ಚಾರಣಿಗರ ನೆಚ್ಚಿನ ತಾಣವಾದ ಕುಮಾರ ಪರ್ವತ ಚಾರಣಕ್ಕೆ ಅಕ್ಟೋಬರ್ 18ರಿಂದ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಎರಡು ಚಾರಣ ಮಾರ್ಗಗಳ ಪೈಕಿ ಬಿದಹಳ್ಳಿ–ಕುಮಾರ ಪರ್ವತ–ಬಿದಹಳ್ಳಿ ಮಾರ್ಗದಲ್ಲಿ ಮಾತ್ರ ಸದ್ಯಕ್ಕೆ ಚಾರಣಕ್ಕೆ ಅನುಮತಿ ನೀಡಲಾಗಿದೆ.
ಚಾರಣಕ್ಕೆ ಆಗಮಿಸುವವರು ನಿಗದಿಪಡಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಚಾರಣದ ವೇಳೆ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಪರಿಸರದ ಸ್ವಚ್ಛತೆಯನ್ನು ಕಾಪಾಡುವುದು ಕಡ್ಡಾಯವಾಗಿದೆ.
ಚಾರಣಿಗರು ನಿಗದಿತ ಸಮಯಕ್ಕೆ ಹಾಜರಾಗಬೇಕು. ಅಲ್ಲದೆ, ಕರ್ತವ್ಯದಲ್ಲಿರುವ ಸಿಬ್ಬಂದಿಯೊಂದಿಗೆ ಸಹಕರಿಸುವಂತೆ ಸೂಚಿಸಲಾಗಿದೆ. ಪ್ರಕೃತಿಯ ಸಂರಕ್ಷಣೆಗೆ ಆದ್ಯತೆ ನೀಡುವ ಮೂಲಕ ಚಾರಣದ ಸಂದರ್ಭದಲ್ಲಿ ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಲಾಗಿದೆ.
ಇನ್ನೊಂದೆಡೆ, ಕುಕ್ಕೆ ಸುಬ್ರಹ್ಮಣ್ಯ ಮಾರ್ಗದ ಮೂಲಕ ಕುಮಾರ ಪರ್ವತ ಚಾರಣ ಆರಂಭಿಸಲು ಈವರೆಗೆ ದಿನಾಂಕ ನಿಗದಿಯಾಗಿಲ್ಲ.
-
ನಿಧನ ವಾರ್ತೆ12 hours agoPuttur-ಮುಕ್ರಂಪಾಡಿಯಲ್ಲಿ ಸ್ಕೂಟರ್–ರಿಕ್ಷಾ ಡಿಕ್ಕಿ: ಪುತ್ತೂರು ಅಂಚೆ ಇಲಾಖೆ ಮಹಿಳಾ ಸಿಬ್ಬಂದಿ ಮೃತ್ಯು
-
ಅಪರಾಧ11 hours agoHigh Court-ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲ್ ಸೇರಿ 8 ಆರೋಪಿಗಳ ಜಾಮೀನಿಗೆ ಹೈಕೋರ್ಟ್ ತಡೆ
-
ಸ್ಥಳೀಯ11 hours agoKumara Parvata-ಅ.18ರಿಂದ ಕುಮಾರ ಪರ್ವತ ಚಾರಣಕ್ಕೆ ಅನುಮತಿ
-
ಮೈಸೂರು5 hours agoMysuru-ಮೈಸೂರು ದಸರಾ ವೇಳೆ 10 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ
-
ಮಂಗಳೂರು6 hours agoMRPL explosion-Big Breaking: MRPL ಸ್ಫೋಟ : ತೀವ್ರ ಗಾಯಗೊಂಡಿದ್ದ ರಾಜೇಶ್ ನಿಧನ : ಮನೀಶ್ ಕರ್ಕಡ ಕುಟುಂಬಕ್ಕೆ ನೀಡಿದ ಪರಿಹಾರದಷ್ಟೇ ನೀಡುವಂತೆ ಒತ್ತಾಯ
-
ಅಪರಾಧ4 hours agoPuttur-ಪುತ್ತೂರು: ಮಹಿಳೆಯ ಮೇಲೆ ಹಲ್ಲೆ, ಮಾನಭಂಗ ಪ್ರಕರಣ; ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ
-
ಅಪರಾಧ5 hours agoMangalore:-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಚರ್ಚ್ನ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ
-
ಅಂತರ ರಾಜ್ಯ5 hours agoL.K. Advani-ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು





















