Connect with us

ಸ್ಥಳೀಯ

ಮನಾಪ ಮಾಜಿ ಕಾರ್ಪೊರೇಟರ್, ಟೋಲ್ ಗೇಟ್ ವಿರೋಧಿ ಹೋರಾಟಗಾರ್ತಿ ಪ್ರತಿಭಾ ಕುಳಾಯಿ ವಿರುದ್ದ ನಿಂದನಾತ್ಮಕ ಪೋಸ್ಟ್ : ಶ್ಯಾಮಸುದರ್ಶನ್ ಭಟ್ ಗೆ ಜಾಮೀನು

Published

on



Ad Widget

Ad Widget

Ad Widget

Ad Widget

ಪುತ್ತೂರು ನ 10: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್, ಕೆಪಿಸಿಸಿ ಸಂಯೋಜಕಿ ಹಾಗೂ ಬಿಲ್ಲವ ಸಮುದಾಯದ ಮುಂಚೂಣಿ ನಾಯಕಿ  ಪ್ರತಿಭಾ ಕುಳಾಯಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ  ನಿಂದನಾತ್ಮಕ ಪೋಸ್ಟ್‌  ಹಾಕಿದ್ದ ಪ್ರಕರಣದಲ್ಲಿ ಪುತ್ತೂರಿನ ಮಾಧ್ಯಮ ಸಂಸ್ಥೆಯೊಂದರ ಮುಖ್ಯಸ್ಥ  ಶ್ಯಾಮಸುದರ್ಶನ್ ಭಟ್ ಹೊಸಮೂಲೆ ಅವರಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.  

Ad Widget

Ad Widget

Ad Widget

Ad Widget

ಸಾಮಾಜಿಕ ಜಾಲತಾಣದಲ್ಲಿ  ತನ್ನ ವಿರುದ್ದ ಹಾಕಲಾದ ಪೋಸ್ಟ್‌ ವಿರುದ್ದ ಪ್ರತಿಭಾ ಕುಳಾಯಿಯವರು ಇಬ್ಬರ ವಿರುದ್ದ   ಮಂಗಳೂರಿನ ಮಹಿಳಾ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ  ಪೊಲೀಸರು ನಾಲ್ಕು ತಂಡಗಳನ್ನು ರಚಿಸಿ ವಿವಿದೆಡೆ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದರು. ಏತನ್ಮಧ್ಯೆ  ಅ.25ರಂದು   ಶ್ಯಾಮಸುದರ್ಶನ ಭಟ್ ಹೊಸಮೂಲೆ ಅವರು ನಿರೀಕ್ಷಣಾ ಜಾಮೀನು ಕೋರಿ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ನ .9 ರಂದು ಈ ಬಗ್ಗೆ ತೀರ್ಪು ಪ್ರಕಟಿಸಿದ ನ್ಯಾಯಾಲಯವು  ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಶ್ಯಾಮ ಸುದರ್ಶನ್‌ ಸಲ್ಲಿಸಿದ   ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಸರಕಾರಿ ಅಭಿಯೋಜಕರು  ನ್ಯಾಯಾಲಯಕ್ಕೆ ಮನವಿ ಮಾಡಿದ್ದ  ಹಿನ್ನಲೆಯಲ್ಲಿ ಅ.31ರಂದು ಆಕ್ಷೇಪಣೆ ಸಲ್ಲಿಸಲು ಸರಕಾರಿ ಅಭಿಯೋಜಕರಿಗೆ ಸೂಚಿಸಿತ್ತಲ್ಲದೆ ಅಲ್ಲಿಯವರೆಗೆ ಆರೋಪಿಯನ್ನು ಬಂಧಿಸದಂತೆ ಸೂಚಿಸಿತ್ತು. ನ.9 ರಂದು ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿಗಳು ಶ್ಯಾಮಸುದರ್ಶನ್ ಭಟ್ ಹೊಸಮೂಲೆ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ. ಆರೋಪಿ   ಪರವಾಗಿ ವಕೀಲ ಶಂಭು ಶರ್ಮ ವಾದಿಸಿದ್ದರು.

Ad Widget

Ad Widget <> Ad Widget

Pratibha kulai :ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ನಾಯಕಿ ಪ್ರತಿಭಾ ಕುಳಾಯಿ ಅಶ್ಲೀಲ ನಿಂದನೆ – ಶ್ಯಾಮ್ ಸುದರ್ಶನ್ ಭಟ್ ಹೊಸಮೂಳೆ ವಿರುದ್ಧ ಪ್ರಕರಣ ದಾಖಲು



Ad Widget

ಸುರತ್ಕಲ್‌ನಲ್ಲಿರುವ ಟೋಲ್‌ಗೇಟ್ ತೆರವು ಮಾಡುವಂತೆ ಆಗ್ರಹಿಸಿ ಅ.18ರಂದು ನಡೆದಿದ್ದ ಪ್ರತಿಭಟನೆಯಲ್ಲಿ ಪ್ರತಿಭಾ ಕುಳಾಯಿಯವರು ಭಾಗವಹಿಸಿದ್ದರು. ಈ  ವೇಳೆ ಪೊಲೀಸರು ಅವರನ್ನು  ವಶಕ್ಕೆ ಪಡೆಯಲು ಮುಂದಾಗಿದ್ದು ಇದನ್ನು ವಿರೋಧಿಸಿ ಅವರು ರಸ್ತೆಯಲ್ಲಿ ಮಲಗಿ ಪ್ರತಿಭಟಿಸಿದ್ದರು. ಈ ವಿಡಿಯೋವನ್ನು ಫೇಸ್‌ ಬುಕ್‌ ನಲ್ಲಿ ಕೆ.ಆರ್.ಶೆಟ್ಟಿ ಅಡ್ಯಾರಪದವು ಎಂಬವರು ಹಂಚಿಕೊಂಡಿದ್ದು, ಇದಕ್ಕೊಂದು ಕ್ಯಾಪ್ಷನ್‌ ಕೊಡಿ ಎಂದು ಪೋಸ್ಟ್‌ ಮಾಡಿದ್ದರು.ಇದಕ್ಕೆ ಶ್ಯಾಮ ಸುದರ್ಶನ್ ಭಟ್ ಹೊಸಮೂಲೆ ಅವರು ನೀಡಿದ ಕ್ಯಾಪ್ಷನ್‌ ವಿವಾದಕ್ಕೆ ಕಾರಣವಾಗಿತ್ತು.‌

Ad Widget

Ad Widget

Pratibha kulai :ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ನಾಯಕಿ ಪ್ರತಿಭಾ ಕುಳಾಯಿ ಮಾನಹಾನಿ ಪ್ರಕರಣ ; ಶ್ಯಾಮ್ ಸುದರ್ಶನ್ ಭಟ್ ಗೆ ನ್ಯಾಯಾಲಯದಿಂದ ಕೊಂಚ ರಿಲೀಫ್

ಪೇಸ್‌ ಬುಕ್‌ ಪೋಸ್ಟ್‌ ಹಾಕಿದ ಕೆ.ಆರ್.ಶೆಟ್ಟಿ ಅಡ್ಯಾರಪದವು ಹಾಗೂ ಅವಹೇಳನಕಾರಿ ಕ್ಯಾಪ್ಷನ್‌ ನೀಡಿದ  ಶ್ಯಾಮ ಸುದರ್ಶನ್ ಭಟ್ ಹೊಸಮೂಲೆ ವಿರುದ್ದ ಪ್ರತಿಭಾ ಕುಳಾಯಿ ಪ್ರಕರಣ ದಾಖಲಿಸಿದ್ದರು. ಆ ಬಳಿಕ ಪೊಲೀಸರು ಈ ಇಬ್ಬರಿಗೆ ವಿವಿದೆಡೆ ಶೋಧ ನಡೆಸಿದ್ದರು. ಪ್ರಕರಣ ದಾಖಲಾದ ವಾರದ ಬಳಿಕ ಕೆ.ಆರ್.ಶೆಟ್ಟಿಯವರು ನ್ಯಾಯಾಲಯಕ್ಕೆ ಶರಣಾಗಿದ್ದರು.ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿ, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿತ್ತು.

Prathibha Kulai | ಪ್ರತಿಭಾ ಕುಳಾಯಿ ವಿರುದ್ದ ಮಾನಹಾನಿ ಪೋಸ್ಟ್ – ಬಂಧಿತ ಕೆ.ಆರ್.ಶೆಟ್ಟಿಗೆ ಮತ್ತೆ ಜಾಮೀನು ನಿರಾಕರಣೆ

Ad Widget
Click to comment

Leave a Reply

ಶಿಕ್ಷಣ

Vivekananda-ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಮುಕ್ರಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಮುಕ್ರಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget <> Ad Widget

ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಕೆ. ವಿ. ನಿಖಿಲ್ ಕುಮಾರ್, ನಿಹಾಲ್ ಸಿ. ರೈ. ದ್ವಿತೀಯ ಪಿಯುಸಿ ಅಭಿಲಾಷ್, ವಿಕ್ರಮ್ ಎ. ಜಿ ಹಾಗೂ ಬಾಲಕಿಯರ ತಂಡದಲ್ಲಿ ದ್ವಿತೀಯ ಪಿಯುಸಿ ಆತ್ಮಿಕಾ, ಎಚ್. ಮನ್ಮಿತಾ, ಶರಣ್ಯಾ ಎಚ್. ಎನ್ ಭಾಗವಹಿಸಿರುತ್ತಾರೆ.



Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗು ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

Continue Reading

ಸ್ಥಳೀಯ

Dharmasthala-ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Published

on



Ad Widget

Ad Widget

Ad Widget

Ad Widget

ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.

Ad Widget

Ad Widget

Ad Widget

Ad Widget

ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.

Ad Widget

Ad Widget

Ad Widget alt="Ad Widget"/>

Ad Widget

ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

Ad Widget

Ad Widget <> Ad Widget

ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.



Ad Widget
Ad Widget
Continue Reading

ಸ್ಥಳೀಯ

Beltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್‌ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು

Published

on



Ad Widget

Ad Widget

Ad Widget

Ad Widget

ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬಾಳೆಹೊನ್ನೂರು ಮೂಲದ 26 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದು, ಕರ್ತವ್ಯಕ್ಕೆ ತೆರಳುತ್ತಿದ್ದರು. ಪ್ರಯಾಣದ ವೇಳೆ ಏಕಾಏಕಿ ಅಸ್ವಸ್ಥಗೊಂಡ ಅವರು ಪ್ರಜ್ಞೆ ಕಳೆದುಕೊಂಡಿದ್ದು, ಮಾತನಾಡಲು ಹಾಗೂ ದೇಹವನ್ನು ಚಲಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು.

Ad Widget

Ad Widget <> Ad Widget

ಇದನ್ನು ಗಮನಿಸಿದ ಬಸ್ ಚಾಲಕ ಕಿರಣ್ ಅವರು ಯಾವುದೇ ಸಮಯ ವ್ಯರ್ಥ ಮಾಡದೆ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಂಡಿದ್ದಾರೆ.



Ad Widget

ಸದ್ಯ ಮಹಿಳೆ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Ad Widget

Ad Widget

ಈ ಸಂದರ್ಭದಲ್ಲಿ ಅಶ್ರಫ್ ಚಾರ್ಮಾಡಿ, ಫಾರೂಕ್ ಕಕ್ಕಿಂಜೆ ಗಾಂಧಿನಗರ, ನೌಫಲ್ ಕಕ್ಕಿಂಜೆ ಗಾಂಧಿನಗರ ಹಾಗೂ ಬಸ್ ನಿರ್ವಾಹಕ ಸಂತೋಷ್ ಸಂಗಪ್ಪ ಗೌಡ ಅವರು ಸಹಕರಿಸಿದರು. ಚಾಲಕ ಕಿರಣ್ ಅವರ ಸಮಯಪ್ರಜ್ಞೆ ಹಾಗೂ ಸಹಪ್ರಯಾಣಿಕರ ಮಾನವೀಯ ನೆರವಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading