ಪುತ್ತೂರು
Kannada | ಕನ್ನಡ ಗೊತ್ತಿಲ್ಲದ ಬ್ಯಾಂಕ್ ಸಿಬ್ಬಂದಿ ಪರದಾಡುವ ಗ್ರಾಹಕರು..! – ಮುಂದಿನ 3 ತಿಂಗಳಲ್ಲಿ ಕನ್ನಡ ಕಲಿಯುವಂತೆ ಪುಸ್ತಕ ನೀಡಿದ ಪುತ್ತೂರು ಕಸಾಪ ಅಧ್ಯಕ್ಷರು – ಅಧ್ಯಕ್ಷರ ನಡೆಗೆ ವ್ಯಾಪಕ ಶ್ಲಾಘನೆ
ಪುತ್ತೂರು: ಕನ್ನಡ (Kannada) ಗೊತ್ತಿಲ್ಲದ ಬ್ಯಾಂಕ್ ಸಿಬ್ಬಂದಿ… ಕನ್ನಡ ತುಳು ಮಾತನಾಡುವುದು ಹೊರತು ಬೇರೆ ಭಾಷೆ ಗೊತ್ತಿಲ್ಲದ ಗ್ರಾಹಕರು… ಕಂಗಲಾಗುತ್ತಿರುವ ಗ್ರಾಹಕರನ್ನು ಕಂಡು ಪುತ್ತೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಮ್ಯಾನೇಜರ್ ಗೆ ಗ್ರಾಹಕರು ಅನುಭವಿಸುತ್ತಿರುವ ಕಷ್ಟದ ಬಗ್ಗೆ ವಿವರಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಸಾಹಿತ್ಯ ಪರಿಷತ್ ಅಧ್ಯಕ್ಷರ ಕಾರ್ಯಕ್ಕೆ ಜನತೆ ಬೇಷ್ ಅಂದಿದ್ದಾರೆ.
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಬೊಳುವಾರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಪೊರೇಷನ್ ಬ್ಯಾಂಕ್ ಮ್ಯಾನೇಜರ್, ಉತ್ತರ ಭಾರತ ಮೂಲದ ಭವೇಶ್ ಕುಮಾರ್ ಮಂದಾನಿರವರು ಹಿಂದಿ ಭಾಷೆ ಬಲ್ಲವರಾಗಿದ್ದು ಕನ್ನಡ ಗೊತ್ತಿಲ್ಲದಿರುವುದರಿಂದ ವ್ಯವಹಾರ ಕಷ್ಟವಾಗುತ್ತಿದೆ ಎಂಬ ಗ್ರಾಹಕರ ದೂರಿನಂತೆ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಘಟಕದ, ಅಧ್ಯಕ್ಷ ಉದ್ಯಮಿ ಉಮೇಶ್ ನಾಯಕ್ ಬ್ಯಾಂಕ್‌ಗೆ ಭೇಟಿ ನೀಡಿ ಕನ್ನಡ ಕಲಿಯುವಂತೆ ಮ್ಯಾನೇಜರ್ ಅವರಲ್ಲಿ ವಿನಂತಿಸಿದ ಘಟನೆ ನ.4ರಂದು ಬೊಳುವಾರಿನಲ್ಲಿ ನಡೆಯಿತು.
ಉಮೇಶ್ ನಾಯಕ್ ಈ ಭಾಗದ ಜನರು ಹೆಚ್ಚಾಗಿ ತುಳು ಮತ್ತು ಕನ್ನಡ ಬಲ್ಲವರು. ನೀವು ಬ್ಯಾಂಕ್ ಮುಖ್ಯಸ್ಥರಾಗಿದ್ದು ವ್ಯವಹಾರಕ್ಕೆ ಬೇಕಾದಷ್ಟು ಕನ್ನಡವನ್ನು ಕಲಿಯಬೇಕು, ಇದರಿಂದಾಗಿ ಸ್ಥಳೀಯರಿಗೆ ವ್ಯವಹಾರಕ್ಕೆ ಅನುಕೂಲವಾಗುತ್ತದೆ. ಭಾರತದಲ್ಲಿ ವಿವಿಧ ಭಾಷೆಗಳಿವೆ ಅವುಗಳನ್ನು ಪರಸ್ಪರ ಗೌರವಿಸಿ ಪ್ರೀತಿಸೋಣ.ಕನ್ನಡ ಭಾಷೆಯನ್ನು ಕಲಿಯಲು ತಮಗೆ ಕಸಾಪ ವತಿಯಿಂದ ಸಹಕಾರವನ್ನು ನೀಡಲಾಗುವುದು. ಮುಂದಿನ ಮೂರು ತಿಂಗಳಲ್ಲಿ ಮತ್ತೆ ನಾವು ಭೇಟಿ ನೀಡುವಾಗ ನಿಮ್ಮೊಂದಿಗೆ ಕನ್ನಡದಲ್ಲಿ ಮಾತನಾಡುವಂತಾಗಲಿ’ ಎಂದರು.
ಬಳಿಕ ಮ್ಯಾನೇಜರ್‌ರವರಿಗೆ ಕನ್ನಡದ ಶಾಲು ಮತ್ತು ಪುಸ್ತಕ ನೀಡಿ ಇಂದಿನಿಂದಲೇ ಕನ್ನಡ ಕಲಿಯಲು ಪ್ರಾರಂಭಿಸಿ ಎಂದು ವಿನಂತಿಸಿದರು.
ಮ್ಯಾನೇಜರ್ ಭವೇಶ್ ಕುಮಾರ್ ಮಾತನಾಡಿ ‘ಕನ್ನಡ ಕಲಿತು ಮಾತನಾಡುತ್ತೇನೆ’ ಎಂದು ಕನ್ನಡದಲ್ಲೇ ಹೇಳಿದರು.
ಪುತ್ತೂರು
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್‌ಮ್ಯಾನ್ ಮೃತ್ಯು

ಪುತ್ತೂರು: ಕೆದಿಲ ಶಾಲೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಪವರ್‌ಮ್ಯಾನ್‌ವೊಬ್ಬರು ಮೃತಪಟ್ಟ ಘಟನೆ ಅ.3ರಂದು ನಡೆದಿದೆ.
ಮೃತರನ್ನು ಕೆಮ್ಮಾಯಿ ನಿವಾಸಿ ದಿ. ಗುಡ್ಡಪ್ಪ ಗೌಡರವರ ಪುತ್ರ ರವಿ ಗೌಡ ಎಂದು ಗುರುತಿಸಲಾಗಿದೆ. ಇವರು ಮೆಸ್ಕಾಂ ಬಂಟ್ವಾಳ ತಾಲೂಕಿನ ಮಾಣಿ ಸೆಕ್ಷನ್ ನಲ್ಲಿ ಪವರ್ ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಮೂಲಗಳ ಪ್ರಕಾರ, ಎಚ್‌ಟಿ (ಹೈಟೆನ್ಶನ್) ವಿದ್ಯುತ್ ಲೈನ್‌ನ ಜಿಒಎಸ್ (ಗ್ಯಾಂಗ್ ಆಪರೇಟಿಂಗ್ ಸ್ವಿಚ್) ತೆರೆಯುವ ಸಂದರ್ಭದಲ್ಲಿ ಅರ್ಥ್ ಆಗಿ ವಿದ್ಯುತ್ ಪ್ರವಹಿಸಿ ರವಿ ಗೌಡ ಅವರಿಗೆ ವಿದ್ಯುತ್ ಸ್ಪರ್ಶಿಸಿದೆ ಎನ್ನಲಾಗಿದೆ.
ಕೆದಿಲ ಪಾಟ್ರಕೋಡಿ, ಮಿತ್ತೂರು ಹಾಗೂ ಗಡಿಯಾರ ಭಾಗಗಳಲ್ಲಿ ಪವರ್‌ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಗೌಡ ಅವರು, ತಮ್ಮ ಸೇವಾ ಮನೋಭಾವದಿಂದ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ಅಕಾಲಿಕ ನಿಧನ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
ಶಿಕ್ಷಣ
Narendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.
ಹೈದರಾಬಾದ್ ನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ಕ್ಷೇತ್ರಮಟ್ಟದ ಕ್ರೀಡಾಕೂಟದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಲಿಖಿತ್ ಎನ್. ಇವರು 1500ಮೀ., 3000ಮೀ ರೇಸ್ ನಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಇವರು ಪುಣಚ ನಿವಾಸಿಗಳಾದ ಮೋಹನ ನಾಯ್ಕ್ ಎನ್. ಮತ್ತು ಭವ್ಯ ದಂಪತಿಗಳ ಪುತ್ರ.
ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ, ಬಳ್ಳಾರಿಯಲ್ಲಿ ನಡೆದ ಪ್ರಾಂತೀಯ ಮಟ್ಟದ ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವದ ಸ್ಪರ್ಧೆಗಳಲ್ಲಿ ನರೇಂದ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಕುಶಿತ್ ಆರ್. ಗೌಡ ಇವರು ಫಿಸಿಕ್ಸ್ ಎಕ್ಸ್ ಪರಿಮೆಂಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನ ನಿವಾಸಿಗಳಾದ ರಾಜೇಶ್ ಮತ್ತು ನಳಿನಿ ದಂಪತಿಗಳ ಪುತ್ರ.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ
ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ಮಾತನಾಡಿದರು.
ಪುತ್ತೂರು,ಅ.1: ಸ್ಪರ್ಧಾತ್ಮಕ ಪರೀಕ್ಷೆಗಳಿಂದ ಸರ್ಟಿಫಿಕೇಟ್ ಮಾತ್ರವಲ್ಲ, ಉಜ್ವಲ ಭವಿಷ್ಯ, ಒಳ್ಳೆಯ ವೇತನ ಹಾಗೂ ಹೆಸರು ಇತ್ಯಾದಿಗಳೆಲ್ಲವೂ ಲಭಿಸಲಿದೆ. ಇಂದಿನ ಕಾಲದಲ್ಲಿ ಕಲಿಕೆಗೆ ಬೇಕಾದ ಅನೇಕ ಸಂಪನ್ಮೂಲಗಳು ಲಭ್ಯವಿರುವಾಗ ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಪೂರ್ವಸಿದ್ಧತೆ ಎಂಬುದು ನಾವು ಉತ್ತೀರ್ಣರಾಗಲು ಅತ್ಯಗತ್ಯ. ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಸಕ್ರಿಯರಾಗಿ ಅಧ್ಯಯನ ನಡೆಸಿ ಎಲ್ಲಾ ರೀತಿಯಿಂದಲೂ ಸಿದ್ಧರಾಗಿ ಪರೀಕ್ಷೆಯನ್ನು ಜಯಿಸಬೇಕು ಎಂದು ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ತಿಳಿಸಿದರು.
ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಮಾತನಾಡಿ ಅಧ್ಯಾಪಕ ವೃತ್ತಿಯನ್ನು ಬಯಸಿ ಹೋಗುವವರಿಗೆ, ಸಂಶೋಧನಾ ಕ್ಷೇತ್ರವನ್ನು ಆರಿಸುವವರಿಗೆ ನೆಟ್ ಹಾಗೂ ಕೆ-ಸೆಟ್ ಪರೀಕ್ಷೆಗಳನ್ನು ಪೂರ್ಣಗೊಳಿಸುವುದು ಅಗತ್ಯ. ಪರೀಕ್ಷೆಗೆ ಸಿದ್ಧರಾಗಲು ನಿರಂತರವಾಗಿ ಓದಿನಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ. ಇವುಗಳ ಪಠ್ಯಕ್ರಮಗಳನ್ನು ಅಭ್ಯಾಸಿಸಿ ಪರಿಣತರಿಂದ ಮಾರ್ಗದರ್ಶನವನ್ನು ಪಡೆದು ಯಶಸ್ಸು ಗಳಿಸಬೇಕಿದೆ ಎಂದರು.
ಕಾರ್ಯಕ್ರಮವನ್ನು ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯಸರಸ್ವತಿ.ಬಿ ಸ್ವಾಗತಿಸಿ ಪ್ರಥಮ ಎಂಕಾಂ ವಿದ್ಯಾರ್ಥಿ ಧನರಾಜ್ ವಂದಿಸಿದರು. ಪ್ರಥಮ ಎಂಕಾಂ ವಿದ್ಯಾರ್ಥಿನಿ ಪ್ರತೀಕ್ಷಾ ಯು.ಕೆ ನಿರೂಪಿಸಿದರು.
-
Uncategorized7 hours ago
ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಕೀಲ ಮೋಹಿತ್ ಕುಮಾರ್ ಗೆ ಮಾತೃ ವಿಯೋಗ
-
Uncategorized6 hours ago
ಮಂಗಳೂರು : ಸಹಪಾಠಿಯೊಂದಿಗೆ ಜಗಳ: ಬಿಸಿಎ ವಿದ್ಯಾರ್ಥಿಗೆ ಚೂರಿಯಿಂದ ಇರಿತ; ಇಬ್ಬರು ವಶಕ್ಕೆ
-
ದಕ್ಷಿಣ ಕನ್ನಡ9 minutes ago
Raod Accident : ಮಂತ್ರಾಲಯ ಯಾತ್ರೆ ವೇಳೆ ಬಣಕಲ್ ನಲ್ಲಿ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ಶಿಶಿಲದ ಯುವಕ ಸಾವು




















