Uncategorized
Praveen Nettar ಪ್ರವೀಣ್ ನೆಟ್ಟಾರ್ ಕುಟುಂಬಕ್ಕೆ ಮನೆ ನಿರ್ಮಿಸಲು ಗುತ್ತಿಗೆದಾರರಿಗೆ ಮುಂಗಡ ಹಣ ನೀಡಿದ್ದ ಬಿಲ್ಲವ ಸಮಾಜ – ಮನೆ ನಿರ್ಮಾಣಕ್ಕೆ ಅವಕಾಶ ಸಿಗದ ಹಿನ್ನಲೆಯಲ್ಲಿ ಮೀಸಲಿಟ್ಟ ಹಣದಿಂದ ಬಡವರಿಗೆ ಸೂರು ನಿರ್ಮಿಸಲು ನಿರ್ಧಾರ
Home For Praveen nettar Family ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ದಿ. ಪ್ರವೀಣ್ ನೆಟ್ಟಾರು ( Praveen Nettar) ಅವರ ಕುಟುಂಬದವರಿಗೆ ದಕ್ಷಿಣ ಕನ್ನಡ, ಉಡುಪಿ ಬಿಲ್ಲವ ಪ್ರಮುಖರು ( Billava Leaders) 45 ಲಕ್ಷ ರೂ.ವೆಚ್ಚದಲ್ಲಿ ಮನೆ ನಿರ್ಮಿಸಿಕೊಡಲು ನಿರ್ಧರಿಸಿದ್ದರು. ಗುತ್ತಿಗೆದಾರರಿಗೆ ಮುಂಗಡ ಹಣವನ್ನು ನೀಡಲಾಗಿತ್ತು. ಆದರೆ ಇಧಿಗ ಇದಕ್ಕೆ ಅವಕಾಶ ಇಲ್ಲದ ನಿಟ್ಟಿನಲ್ಲಿಇದೇ ಹಣದಿಂದ ಬಡವರಿಗೆ ಮನೆ ನಿರ್ಮಿಸಿಕೊಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಬಿಲ್ಲವ ಸಮಾಜದ ಮುಖಂಡ ಜಯಂತ ನಡುಬೈಲು ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಪ್ರವೀಣ್ ನೆಟ್ಟಾರ್ ಕುಟುಂಬಕ್ಕೆ ಮನೆ ನಿರ್ಮಿಸಲು ಮೀಸಲಿಟ್ಟ ಹಣದಿಂದ ಪ್ರವೀಣ್ ನೆಟ್ಟಾರು ಸ್ಮರಣಾರ್ಥ ದಕ್ಷಿಣ ಕನ್ನಡ, ಉಡುಪಿ ವಿಧಾನಸಭೆ ಕ್ಷೇತ್ರದ 14 ಮಂದಿ ಹಿಂದುಳಿದ ವರ್ಗಗಳ ಕುಟುಂಬಗಳಿಗೆ ಮನೆ ನೀರ್ಮಿಸುವ ಯೋಜನೆ ಹಾಕಿ ಕೊಂಡಿದ್ದೇವೆ ಎಂದರು.
ನೆಟ್ಟಾರು ಕುಟುಂಬಕ್ಕೆ ಮನೆ ನಿರ್ಮಿಸಲು ಬಳಸುವ 45 ಲಕ್ಷ ರೂ.ನಲ್ಲಿ ತಲಾ ಐದು ಲಕ್ಷ ರೂ. ವೆಚ್ಚದಲ್ಲಿ14 ಮನೆ ನಿರ್ಮಿಸಿ ಕೊಡುವ ಯೋಜನೆಯಿದೆ. ಇದೀಗ ಕ್ಯಾನ್ಸರ್ನಿಂದ ಬಳಲುತ್ತಿರುವ ಪುಣಚ ಗ್ರಾಮದ ನಿವಾಸಿ ಚಂದ್ರಾವತಿ ಹಾಗೂ ಬಂಟ್ವಾಳ ಸಜಿಪಮೂಡ ನಿವಾಸಿ ಸುಂದರಿ ಅವ ಕುಟುಂಬಕ್ಕೆ ಮೊದಲ ಹಂತದಲ್ಲಿ ಮನೆ ನಿರ್ಮಾಣವಾಗಲಿದ್ದು, ಕಾಮಗಾರಿಯನ್ನು ಮುಂದಿನ ವಾರದಲ್ಲಿ ಹಮ್ಮಿಕೊಳ್ಳಲಾಗುವುದು.ಉಳಿದ 12 ಮನೆಗಳನ್ನು ಬಂದ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಡಲಾಗುವುದು ಎಂದು ಅವರು ತಿಳಿಸಿದರು.
ಪ್ರವೀಣ್ ನೆಟ್ಟಾರ್ ಬದುಕಿದ್ದಾಗ ಹೊಸ ಮನೆ ನಿರ್ಮಿಸುವ ಕನಸ್ಸು ಕಂಡಿದ್ದರು. ಈ ಹಿನ್ನಲೆಯಲ್ಲಿ ಅವರ ಕುಟುಂಬಕ್ಕೆ ಮನೆ ನಿರ್ಮಿಸಲು ಕುಟುಂಬದವರಿಗೆ ದಕ್ಷಿಣ ಕನ್ನಡ, ಉಡುಪಿ ಬಿಲ್ಲವ ಪ್ರಮುಖರು ನಿರ್ಧರಿಸಿದ್ದರು. ಸುಮಾರು 45 ಲ. ರೂ ವೆಚ್ಚದಲ್ಲಿ ಮನೆ ನಿರ್ಮಿಸಿ ಕೊಡುವ ಬಗ್ಗೆ ಶ್ರದ್ಧಾಂಜಲಿ ಸಭೆಯಲ್ಲಿ ಅ ಕುಟುಂಬದವರಿಗೆ ತಿಳಿಸಲಾಗಿತ್ತು. ಅಲ್ಲದೆ ಮನೆಯ 3ಡಿ ವಿನ್ಯಾಸದ ಜತೆ ಮನೆ ನಿರ್ಮಾಣಕ್ಕೆ ಏಳು ಲಕ್ಷ ರೂ. ಮುಂಗಡ ಹಣವನ್ನು ಪ್ರವೀಣ್ ನೆಟ್ಟಾರು ಅವರ ಕುಟುಂಬದವರ ಮೂಲಕ ಗುತ್ತಿಗೆದಾರರಿಗೆ ನೀಡಲಾಗಿತ್ತು.
ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮನೆ ನಿರ್ಮಿಸಿ ಕೊಡುವ ಭರವಸೆ ನೀಡಿದ್ದರು. ಇದಕ್ಕೆ ಭೂಮಿಪೂಜೆಯೂ ನಡೆದಿದೆ. ಈ ವಿಚಾರ ಸ್ವಾಗತಾರ್ಹವಾಗಿದ್ದು, ಈ ವಿಚಾರವನ್ನು ಸಂಸದರು ಬಿಲ್ಲವ ಮುಖಂಡರ ಜತೆ ಚರ್ಚಿಸಿ ಈ ವಿಚಾರಕ್ಕೆ ಇಳಿಯಬೇಕಿತ್ತು ಎಂಬುದು ಬಿಲ್ಲವ ಮುಖಂಡರಿಂದ ಅಭಿಪ್ರಾಯ ವ್ಯಕ್ತವಾಗಿದೆ.ಈ ಕುರಿತು ನಮ್ಮ ಯಾವುದೇ ವಿರೋಧವಿಲ್ಲ. ಅದಾದ ಬಳಿಕ ಗುತ್ತಿಗೆದಾರರಿಗೆ ನೀಡಿದ ಏಳು ಲಕ್ಷವನ್ನು ನಾವು ಹಿಂಪಡೆದಿದ್ದೇವೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಲ್ಲವ ಮುಖಂಡರಾದ ಉಲ್ಲಾಸ್ ಕೋಟ್ಯಾನ್, ಅವಿನಾಶ್ ಸುವರ್ಣ ಮಂಗಳೂರು, ಮೋಹನ್ದಾಸ್ ಬಂಗೇರ, ಕಿಶನ್ ಅಮಿನ್ ಉಪಸ್ಥಿತರಿದ್ದರು.
ಪ್ರಕರಣದ ವಿವರ :
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜುಲೈ 26ರಂದು ರಾತ್ರಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೈಗೈದಿದ್ದರು ಪ್ರವೀಣ್ ನೆಟ್ಟಾರು ಅವರ ಅಂತಿಮ ದರ್ಶನ ಮಾಡಲು ಬಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಕಾರನ್ನು ಅಲುಗಾಡಿಸುವ ಮೂಲಕ ಬಿಜೆಪಿ ಸರಕಾರ ಕಾರ್ಯಕರ್ತನ ಜೀವ ರಕ್ಷಿಸಲು ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಂತರದ ಬೆಳವಣಿಗೆಯಲ್ಲಿ ನೆಟ್ಟಾರು ಕುಟುಂಬಕ್ಕೆ ಮನೆ ಕಟ್ಟಿಕೊಡುವುದಾಗಿ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದರು.ಅದರ ಭೂಮಿ ಪೂಜೆಯೂ ಇತ್ತೀಚೆಗೆ ನಡೆದಿತ್ತು
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
-
ದಕ್ಷಿಣ ಕನ್ನಡ20 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಮಂಗಳೂರು20 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















