Connect with us

ಸ್ಥಳೀಯ

Shri kshetra dharmasthala : ನ.19ರಿಂದ ನ.23ರ ವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಹಾಗೂ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನ

Published

on



Ad Widget

Ad Widget

Ad Widget

Ad Widget

shri kshetra dharmasthala laksha deepotsava ಬೆಳ್ತಂಗಡಿ:  ದೇಶ ವಿದೇಶಗಳಲ್ಲಿ ನೆಲೆಸಿರುವ ಕೋಟ್ಯಾಂತರ ಭಕ್ತರ ಆರಾಧ್ಯ  ಮೂರ್ತಿ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ನ.19ರಿಂದ ನ.23ರ ವರೆಗೆ ನೆರವೇರಲಿದೆ.ಮಂಜುನಾಥ ಸ್ವಾಮಿಗೆ ಪಂಚ ಉತ್ಸವಗಳು ನಡೆಯಲಿದೆ. ಪ್ರತಿವರ್ಷ ಕಾರ್ತಿಕ ಮಾಸದಲ್ಲಿ ನಡೆಯುವ ಶ್ರೀ ಮಂಜುನಾಥ ಸ್ವಾಮಿಯ (Shri Manjunatha Swami) ಲಕ್ಷದೀಪೋತ್ಸವ ಹಾಗೂ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನದ 90ನೇ ಅಧಿವೇಶನವು ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ (dr Veerendra heggade) ಉಪಸ್ಥಿತಿಯಲ್ಲಿ  ಜರುಗಲಿದೆ.

Ad Widget

Ad Widget

Ad Widget

Ad Widget

ಕಾರ್ಯಕ್ರಮಗಳ ವಿವರ :

Ad Widget

Ad Widget

Ad Widget alt="Ad Widget"/>

Ad Widget

ನ.19ರಂದು ಹೊಸ ಕಟ್ಟೆ ಉತ್ಸವ ಹಾಗೂ ವಸ್ತು ಪ್ರದರ್ಶನ ಉದ್ಘಾಟನೆಗೊಳ್ಳಲಿದೆ. ನ. 20ರಂದು ಕರೆ ಕಟ್ಟೆ ಉತ್ಸವ, ನ. 21ರಂದು ಲಲಿತೋದ್ಯಾನ ಉತ್ಸವ ಹಾಗೂ ಲಲಿತಕಲಾ ಗೋಷ್ಠಿ, ನ.22ರಂದು ಕಂಚಿಮಾರು ಕಟ್ಟೆ ಉತ್ಸವ ಹಾಗೂ ಸರ್ವಧರ್ಮ ಸಮ್ಮೇಳನ ನಡೆಯಲಿದೆ. ನ.23ರಂದು ಗೌರಿಮಾರುಕಟ್ಟೆ ಉತ್ಸವ ಹಾಗೂ ಸಾಹಿತ್ಯ ಸಮ್ಮೇಳನ ಹಾಗೂ ನ.24ರಂದು ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನೆರವೇರಲಿದೆ.

Ad Widget

Ad Widget <> Ad Widget

ನ.22: ಸರ್ವಧರ್ಮ ಸಮ್ಮೇಳನ



Ad Widget

ನ. 22ರಂದು ಸಂಜೆ 5ಕ್ಕೆ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯುವ ಸರ್ವಧರ್ಮ ಸಮ್ಮೇಳನವನ್ನು ಕೇಂದ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯದ ಸಚಿವೆ ಸ್ಮತಿ ಇರಾನಿ ಉದ್ಘಾಟಿಸಲಿದ್ದಾರೆ. ಶಿವಮೊಗ್ಗದ ನ್ಯಾಯವಾದಿ ಎಂ.ಆರ್‌. ಸತ್ಯನಾರಾಯಣ ಅಧ್ಯಕ್ಷತೆ ವಹಿಸುವರು. ಬಸ್ರಿಕಟ್ಟೆ ಧರ್ಮಗುರು ಫಾ| ಮಾರ್ಸೆಲ್‌ ಪಿಂಟೋ, ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಹಾಸಿಂಪೀರ ಇ ವಾಲೀಕಾರ, ವಿಶ್ರಾಂತ ಮುಖ್ಯೋಪಾಧ್ಯಾಯ ಮತ್ತು ವಾಗ್ಮಿ ಮೂಡುಬಿದಿರೆಯ ಮುನಿರಾಜ ರೆಂಜಾಳ ಉಪನ್ಯಾಸ ನೀಡಲಿದ್ದಾರೆ.

Ad Widget

Ad Widget

ನ. 23: ಸಾಹಿತ್ಯ ಸಮ್ಮೇಳನ

ಸಾಹಿತ್ಯ ಸಮ್ಮೇಳನವನ್ನು ಸಂಜೆ 5ಕ್ಕೆ ರಾಷ್ಟ್ರಪ್ರಶಸ್ತಿ ವಿಜೇತ ಶ್ರೇಷ್ಠ ಚಲನಚಿತ್ರ ನಿರ್ದೇಶಕ ಬೆಂಗಳೂರಿನ ಪಿ.ಶೇಷಾದ್ರಿ ಉದ್ಘಾಟಿಸಲಿದ್ದು, ರಾಷ್ಟ್ರಪ್ರಶಸ್ತಿ ಪುರಸ್ಕೃತ ವಿದ್ವಾಂಸ ಡಾ| ಎಚ್‌.ವಿ. ನಾಗರಾಜ ರಾವ್‌ ಮೈಸೂರು ಅಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರಿನ ಸಾಹಿತ್ಯ ಪರಿಚಾರಕ ಮತ್ತು ಸುಶಿಕ್ಷಣ ಸೇವಾಪರ ಸಂಸ್ಥೆಯ ಸ್ಥಾಪಕ ಸತ್ಯೇಶ್‌ ಎನ್‌. ಬೆಳ್ಳೂರು, ಪತ್ರಕರ್ತ ರವೀಂದ್ರ ಭಟ್‌ ಐನಕೈ, ಲೇಖಕ ಡಾ| ಗೀತಾ ವಸಂತ ಮೊದಲಾದವರು ಉಪನ್ಯಾಸ ನೀಡಲಿದ್ದಾರೆ.

ನ.19 ವಸ್ತು ಪ್ರದರ್ಶನ ಉದ್ಘಾಟನೆ

ವಸ್ತು ಪ್ರದರ್ಶನವನ್ನು ನ.19ರಂದು ಬೆಳಗ್ಗೆ 10.30ಕ್ಕೆ ಶಾಸಕ ಹರೀಶ್‌ ಪೂಂಜ ಉದ್ಘಾಟಿಸಲಿದ್ದಾರೆ. ವಸ್ತುಪ್ರದರ್ಶನ ಮಂಟಪ ಮತ್ತು ಅಮೃತವರ್ಷಿಣಿ ಸಭಾಭವನದಲ್ಲಿ ಪ್ರತಿ ದಿನವೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ. ನ.21ರಂದು ಅಮೃತವರ್ಷಿಣಿ ಸಭಾಭವನದಲ್ಲಿ ಲಲಿತಕಲಾಗೋಷ್ಠಿ ನಡೆಯಲಿದೆ. ರಾತ್ರಿ 8.30ರಿಂದ ವಿದುಷಿ ಡಾ| ಜಯಂತಿ ಮತ್ತು ಕುಮರೇಶ್‌ ಮತ್ತು ತಂಡದವರಿಂದ ಜುಗಲ್‌ ಬಂದಿ ಕಾರ್ಯಕ್ರಮ ನಡೆಯಲಿದೆ.

ನ.24: ಸಮವಸರಣ ಪೂಜೆ

ನ. 24ರಂದು ಸಂಜೆ 6.30 ರಿಂದ ಶ್ರೀ ಚಂದ್ರನಾಥ ಸ್ವಾಮಿಯ ಬಸದಿಯಲ್ಲಿ ಬಾಹುಬಲಿ ಸೇವಾ ಸಮಿತಿ ಶ್ರಾವಕರಿಂದ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜಾ ಕಾರ್ಯಕ್ರಮ ನಡೆಯಲಿದೆ. ಶ್ರೀಮತ್‌ ಪುಷ್ಪದಂತ ಭೂತಬಲಿ ವಿರಚಿತ ಷಟ್ಖಂಡಾಗಮಾಧಾರಿತ ಸಿದ್ಧಾಂತ ಚಿಂತಾಮಣಿ-3 ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದ್ದು, ಜೈನಸಾಹಿತ್ಯವಿಶಾರದೆ ವೀಣಾ ರಘುಚಂದ್ರ ಶೆಟ್ಟಿ ಸಮ್ಮಾನ ಕಾರ್ಯಕ್ರಮ ನಡೆಯಲಿದೆ. ಬಳಿಕ ಶ್ರಾವಕ-ಶ್ರಾವಕಿಯರಿಂದ ಜಿನಭಜನ ಕಾರ್ಯಕ್ರಮವಿದೆ.

Ad Widget
Click to comment

Leave a Reply

ಅಪರಾಧ

Udupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು

Published

on



Ad Widget

Ad Widget

Ad Widget

Ad Widget

ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಿರುವ ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ಹಾಗೂ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget

Ad Widget

Ad Widget

Ad Widget

ಉಡುಪಿ, ಅ.8: ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಿರುವ ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ಹಾಗೂ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕೊಲೆಯಾದ ಉದ್ಯಮಿ ಡೇವಿಡ್ ಡಿಸೋಜಾ ಅವರ ಪುತ್ರನಿಗೆ ವಾಟ್ಸಾಪ್ ಕರೆ ಮಾಡಿರುವ ಅಪರಿಚಿತ ವ್ಯಕ್ತಿಯೊಬ್ಬ, ₹5 ಕೋಟಿ ನೀಡುವಂತೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

Ad Widget

Ad Widget <> Ad Widget

“ನಿನ್ನ ತಂದೆಯಿಂದ ನನ್ನ ಸಹೋದರನಿಗೆ ಸಾಕಷ್ಟು ನಷ್ಟವಾಗಿತ್ತು. ಆ ಕಾರಣಕ್ಕೆ ನಾನೇ ಕೊಲೆ ಮಾಡಿಸಿದ್ದೆ. ನಮಗಾಗಿರುವ ನಷ್ಟವನ್ನು ತುಂಬಿಕೊಡಲು ₹5 ಕೋಟಿ ನೀಡಬೇಕು” ಎಂದು ಕರೆ ಮಾಡಿದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Ad Widget

ಇನ್ನೊಬ್ಬ ಉದ್ಯಮಿ ಹಾಗೂ ಖಾಸಗಿ ಸಂಸ್ಥೆಯ ವ್ಯಕ್ತಿಗೂ ಹೇಮಂತ್ ಪೂಜಾರಿ ಹೆಸರಿನಲ್ಲಿ ವಾಟ್ಸಾಪ್ ಕರೆಗಳು ಬಂದಿದ್ದು, ಹಣಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ. ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲೂ ಪ್ರಕರಣಗಳು ದಾಖಲಾಗಿವೆ.

Ad Widget

Ad Widget

25 ವರ್ಷಗಳಿಂದ ಪೊಲೀಸರಿಗೆ ಬೇಕಾಗಿರುವ ಆರೋಪಿ
ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಹೇಮಂತ್ ಪೂಜಾರಿ ಪ್ರಮುಖ ಆರೋಪಿಯಾಗಿದ್ದಾನೆ. ಆತನ ಸಹೋದರ ಹಾಗೂ ಇತರ ಸಹಚರರ ನೆರವಿನಿಂದ ಹೊರರಾಜ್ಯದ ಶೂಟರ್‌ಗಳನ್ನು ಕರೆಸಿ ಕೊಲೆ ಮಾಡಿಸಲಾಗಿದೆ ಎಂಬ ಆರೋಪ ಪ್ರಕರಣದಲ್ಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಮಂತ್ ಪೂಜಾರಿಯನ್ನು ಹೊರತುಪಡಿಸಿ ಉಳಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

ಕಳೆದ 25 ವರ್ಷಗಳಿಂದ ಪೊಲೀಸರಿಗೆ ಬೇಕಾಗಿರುವ ಹೇಮಂತ್ ಪೂಜಾರಿ ಬಗ್ಗೆ ಇದುವರೆಗೂ ಸ್ಪಷ್ಟ ಸುಳಿವು ಲಭ್ಯವಾಗಿಲ್ಲ. ಈ ನಡುವೆ ಆತನ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬಂದಿರುವುದು ಪೊಲೀಸರ ಗಮನ ಸೆಳೆದಿದೆ.

ಕರೆ ಮಾಡುತ್ತಿರುವವರು ಯಾರು?
ಹೇಮಂತ್ ಪೂಜಾರಿಯೇ ಕರೆ ಮಾಡುತ್ತಿದ್ದಾನೆಯೇ ಅಥವಾ ಆತನ ಹೆಸರನ್ನು ದುರ್ಬಳಕೆ ಮಾಡಿಕೊಂಡು ಬೇರೆಯವರು ಬೆದರಿಕೆ ಹಾಕುತ್ತಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕರೆಗಳ ಮೂಲ, ಹಣದ ಬೇಡಿಕೆಯ ಹಿಂದಿನ ಉದ್ದೇಶ ಹಾಗೂ ಪ್ರಕರಣಗಳ ನಡುವಿನ ಸಂಬಂಧದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ad Widget
Continue Reading

ಸ್ಥಳೀಯ

Ganja-ಸಾಗರದ ಲಾಡ್ಜ್‌ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!

Published

on



Ad Widget

Ad Widget

Ad Widget

Ad Widget

ಸಾಗರದ ಜೋಗ ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ಗಾಂಜಾ ಸೇವಿಸುತ್ತಿದ್ದ ಆರೋಪದ ಮೇಲೆ ಯುವತಿ ಸೇರಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಾಗರ ಟೌನ್ ಪೊಲೀಸರು, ಮೂವರು ಯುವಕರು ಹಾಗೂ ಓರ್ವ ಯುವತಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಶಿವಮೊಗ್ಗ, ಅ. 8: ಸಾಗರದ ಜೋಗ ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ಗಾಂಜಾ ಸೇವಿಸುತ್ತಿದ್ದ ಆರೋಪದ ಮೇಲೆ ಯುವತಿ ಸೇರಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಾಗರ ಟೌನ್ ಪೊಲೀಸರು, ಮೂವರು ಯುವಕರು ಹಾಗೂ ಓರ್ವ ಯುವತಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬಂಧಿತ ಆರೋಪಿಗಳನ್ನು ಶಿವಮೊಗ್ಗದ ಕಾರ್ತಿಕ್ (19), ಬೆಂಗಳೂರಿನ ಶಶಾಂಕ್ (26), ಸಾಗರದ ನಿಶಾಂತ್ (25) ಹಾಗೂ ಯುವತಿ ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಲಾಡ್ಜ್ ಮೇಲೆ ದಿಢೀರ್ ದಾಳಿ
ಹೆಚ್ಚುವರಿ ಪೊಲೀಸ್ ಅಧೀಕ್ಷಕರ ನಿರ್ದೇಶನದಂತೆ ಪಿಎಸ್‌ಐ ಶಾಂತರಾಜ್ ಎಚ್.ಜಿ. ಹಾಗೂ ಸಿಬ್ಬಂದಿ ಲಾಡ್ಜ್ ಮೇಲೆ ದಾಳಿ ನಡೆಸಿದರು. ಕೊಠಡಿಯನ್ನು ಪರಿಶೀಲಿಸಿದಾಗ ಮೂವರು ಯುವಕರು ಹಾಗೂ ಯುವತಿಯು ಸಿಗರೇಟ್‌ನಲ್ಲಿ ಗಾಂಜಾ ತುಂಬಿಕೊಂಡು ಸೇವಿಸುತ್ತಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.



Ad Widget

ಬಳಿಕ ನಾಲ್ವರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಕಾರ್ತಿಕ್, ಶಶಾಂಕ್ ಹಾಗೂ ಯುವತಿ ಗಾಂಜಾ ಸೇವಿಸಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ವರದಿಯಾಗಿದೆ.

Ad Widget

Ad Widget

ವಿಚಾರಣೆ ವೇಳೆ ಸಾಗರದ ಮನು ಹೆಗಡೆ ಎಂಬಾತ ಗಾಂಜಾ ಪೂರೈಸಿದ್ದಾನೆ ಎಂದು ಯುವತಿ ಹೇಳಿಕೆ ನೀಡಿದ್ದಾಳೆ ಎನ್ನಲಾಗಿದೆ. ಈ ಸಂಬಂಧ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Ad Widget
Continue Reading

ಬಿಗ್ ನ್ಯೂಸ್

AYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ

Published

on



Ad Widget

Ad Widget

Ad Widget

Ad Widget

ವೈದ್ಯರು ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡಾ. ಪ್ರದೀಪ್ ಎ. ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆಗೆ ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಪುತ್ತೂರು ಬ್ರಾಂಚ್ ತೀವ್ರ ಖಂಡನೆ ವ್ಯಕ್ತಪಡಿಸಿದೆ.

Ad Widget

Ad Widget

Ad Widget

Ad Widget

ವೈದ್ಯರು ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡಾ. ಪ್ರದೀಪ್ ಎ. ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆಗೆ ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಪುತ್ತೂರು ಬ್ರಾಂಚ್ ತೀವ್ರ ಖಂಡನೆ ವ್ಯಕ್ತಪಡಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಡಾ. ಪ್ರದೀಪ್ ನಾವೂರು ಅವರು ವೈದ್ಯಕೀಯ ಸೇವೆಯ ಜೊತೆಗೆ ಸಮಾಜದ ಆರೋಗ್ಯ ಮತ್ತು ಜಾಗೃತಿಯ ದೃಷ್ಟಿಯಿಂದ ಹಲವಾರು ಉಪನ್ಯಾಸ ಹಾಗೂ ಆರೋಗ್ಯ ಸಂಬಂಧಿತ ಕಾರ್ಯ ಕ್ರಮಗಳನ್ನು ನಡೆಸಿಕೊಂಡು ಬಂದಿದ್ದಾರೆ. ದೇವಸ್ಥಾನ,ದೈವಸ್ಥಾನ, ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜದೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಮುಂಚೂಣಿ ವ್ಯಕ್ತಿಯಾಗಿದ್ದಾರೆ.

Ad Widget

Ad Widget <> Ad Widget

ಇಂತಹ ಸಮಾಜಮುಖಿ ಹಾಗೂ ಸೇವಾಮನೋಭಾವದ ವ್ಯಕ್ತಿಯ ಆರೋಗ್ಯ ಕ್ಲಿನಿಕ್ ಗೆ ಯಾರೋ ಕಿಡಿಗೇಡಿಗಳು ದುರುದ್ದೇಶದಿಂದ ಬೆಂಕಿ ಹಚ್ಚಿರುವುದು ಅತ್ಯಂತ ಕಳವಳಕಾರಿ ಹಾಗೂ ಖಂಡನೀಯ ಸಂಗತಿಯಾಗಿದೆ. ವೈದ್ಯರು ಸಮಾಜದ ಆರೋಗ್ಯ ಕಾಪಾಡುವ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿದ್ದು ಅವರ ಸೇವಾಕೇಂದ್ರದ ಮೇಲೆಯೇ ಇಂತಹ ಕೃತ್ಯಕ್ಕೆ ಮುಂದಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.



Ad Widget

ಡಾ. ಪ್ರದೀಪ್ ನಾವೂರು ಅವರು ಕೇವಲ ವೈದ್ಯರಲ್ಲ, ಸಮಾಜದ ಪ್ರತಿಯೊಬ್ಬರಿಗೂ ಅಗತ್ಯವಿರುವ ಒಬ್ಬ ಉತ್ತಮ ವ್ಯಕ್ತಿತ್ವದ ಸಮಾಜಮುಖಿ ವ್ಯಕ್ತಿ. ಅವರ ಆರೋಗ್ಯ ಸೇವೆ ಹಾಗೂ ಸಾಮಾಜಿಕ ಕಾಳಜಿ ಶ್ಲಾಘನೀಯವಾಗಿದೆ. ಇಂತಹ ವ್ಯಕ್ತಿಯ ಕ್ಲಿನಿಕ್ ಗೆ ಬೆಂಕಿ ಹಚ್ಚಿರುವುದು ಅತ್ಯಂತ ಖಂಡನೀಯ.

Ad Widget

Ad Widget

ಇದು ಸಮಾಜ ಘಾತುಕ ಕೆಲಸ .ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ, ಕೃತ್ಯದ ಹಿಂದಿರುವ ಆರೋಪಿಗಳನ್ನು ಶೀಘ್ರವಾಗಿ ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಪುತ್ತೂರು ಬ್ರಾಂಚ್ ಅಧ್ಯಕ್ಷ ಡಾ. ಹರಿಕೃಷ್ಣ ಪಾಣಾಜೆ ಒತ್ತಾಯಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading