ಆರೋಗ್ಯ
Milk Price Hike : ನಾಳೆಯಿಂದ ನಂದಿನಿ ಹಾಲು, ಮೊಸರಿನ ಬೆಲೆ ಲೀಟರ್ ಗೆ 3 ರೂ. ಹೆಚ್ಚಳ
nandini Milk Price Hike ಬೆಂಗಳೂರು : Bangalore ನ 14 : ರಾಜ್ಯದಲ್ಲಿ ನಾಳೆಯಿಂದ (ಮಂಗಳವಾರ) ಹಾಲು ಹಾಗೂ ಮೊಸರಿನ ದರ ತುಟ್ಟಿಯಾಗಲಿದೆ. ಲೀಟರ್ ಗೆ ತಲಾ ಮೂರು ರೂಪಾಯಿಯಂತೆ ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ. ನಾಳೆಯಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ. ದರ ಹೆಚ್ಚಳದಿಂದ ಸಂಗ್ರಹವಾಗುವ ಮೂರು ರೂಪಾಯಿಯನ್ನು ರೈತರಿಗೆ ವರ್ಗಾವಣೆ ಮಾಡಲು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತವು ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ.ಈ ಬಗ್ಗೆ ಅಧಿಕೃತ ಪ್ರಕಟನೆ ಇನ್ನಷ್ಟೆ ಬರಬೇಕಿದೆ.
ಪರಿಷ್ಕೃತ ದರ ಪಟ್ಟಿ
ಟೋನ್ಡ್ ಹಾಲಿನ ದರ ಪ್ರಸ್ತುತ ಲೀಟರ್ಗೆ 37 ರುಪಾಯಿ ಇದ್ದು, 40 ರೂಗೆ ಹೆಚ್ಚಳ ಆಗಿದೆ.
ಹೋಮೋಜಿನೈಸ್ಡ್ ಟೋನ್ಡ್ ಹಾಲಿನ ದರ 38 ರೂಪಾಯಿಯಿಂದ 41 ಕ್ಕೆ ಹೆಚ್ಚಳ
ಹೋಮೋಜಿನೈಸ್ಡ್ ಹಸುವಿನ ಹಾಲಿನ ದರ 42 ರಿಂದ 45 ಕ್ಕೆ ಹೆಚ್ಚಳ
ಸ್ಪೆಷಲ್ ಹಾಲು 43 ರಿಂದ 46 ಕ್ಕೆ ಹೆಚ್ಚಳ
ಶುಭಂ ಹಾಲು 43 ರಿಂದ 46 ಕ್ಕೆ ಹೆಚ್ಚಳ
ಹೋಮೋಜಿನೈಸ್ಡ್ ಸ್ಟಾಂಡರ್ಡೈಸ್ಡರ್ ಹಾಲು 44ರಿಂದ 47ಕ್ಕೆ ಏರಿದೆ. ಸಮೃದ್ಧಿ ಹಾಲಿನ ದರ 48 ರಿಂದ 51 ರೂಪಾಯಿ ಆಗಿದ್ದು, ಸಂತೃಪ್ತಿ ಹೋಮೋಜಿನೈಸ್ಡ್ ಹಾಲು 50 ರಿಂದ 53 ರೂಪಾಯಿಗೆ ಏರಿಕೆ ಆಗಿದೆ. ಇನ್ನು ಡಬಲ್ ಟೋನ್ಡ್ ಹಾಲು 36 ರಿಂದ 39 ರೂಪಾಯಿ ಆದ್ರೆ, ಒಂದು ಕೆಜಿ ಮೊಸರಿನ ಬೆಲೆ 45 ರಿಂದ 48 ರೂಪಾಯಿಗೆ ಏರಿಕೆ ಆಗಿದೆ
ಆರೋಗ್ಯ
Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.
ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.
ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.
ಆರೋಗ್ಯ
HIV test-ಯುವಜನರಲ್ಲಿ ಹೆಚ್ಚುತ್ತಿದೆ HIV ಸೋಂಕು; ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ
ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ಬೆಂಗಳೂರು: ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ದೇಶದಲ್ಲೇ ಮೂರನೇ ಸ್ಥಾನ:
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ವರದಿ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಈ ಪೈಕಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗುಲಿರುವ ಅರಿವೇ ಇಲ್ಲದಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ 18 ರಿಂದ 35 ವರ್ಷದೊಳಗಿನವರಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ಕಳವಳ ವ್ಯಕ್ತಪಡಿಸಿದೆ.
ಕಾಲೇಜುಗಳಲ್ಲಿ ಆರೋಗ್ಯ ಶಿಬಿರ ಮತ್ತು ಜಾಗೃತಿ:
ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಆರೋಗ್ಯ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯು ಜಂಟಿಯಾಗಿ ‘ಸಂಯೋಜಿತ ಆರೋಗ್ಯ ಶಿಬಿರ’ಗಳನ್ನು (IHC) ಆಯೋಜಿಸುತ್ತಿವೆ.
ವಿಟಿಯು (VTU) ವ್ಯಾಪ್ತಿಯಲ್ಲೂ ತಪಾಸಣೆ: ರಾಜ್ಯದ ಎಲ್ಲ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ನಡೆಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚನೆ ನೀಡಿದೆ.
ವಿವಿಧ ಸ್ಪರ್ಧೆಗಳು: 2026ರ ಜುಲೈನಿಂದ 2027ರ ಫೆಬ್ರವರಿವರೆಗೆ ಕಾಲೇಜುಗಳಲ್ಲಿ ಬೀದಿ ನಾಟಕ, ರಸಪ್ರಶ್ನೆ ಮತ್ತು ತಜ್ಞರ ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಅಂಕಗಳ ಆಧಾರದ ಮೇಲೆ ಮಾರ್ಗಸೂಚಿಯನ್ನೂ ನೀಡಲಾಗಿದೆ.
ಮಾಹಿತಿಯ ಗೌಪ್ಯತೆಗೆ ಆದ್ಯತೆ (QR Code ಸೌಲಭ್ಯ):
ವಿದ್ಯಾರ್ಥಿಗಳು ತಮ್ಮ ಎಚ್‌ಐವಿ ಸ್ಥಿತಿಯನ್ನು ಅತ್ಯಂತ ಗೌಪ್ಯವಾಗಿ ತಿಳಿದುಕೊಳ್ಳಲು ಸರ್ಕಾರವು ವಿಶೇಷ ತಂತ್ರಜ್ಞಾನದ ಮೊರೆ ಹೋಗಿದೆ.
ಕ್ಯೂಆರ್ ಕೋಡ್ (QR Code): ಕಾಲೇಜುಗಳಲ್ಲಿ ಕಡ್ಡಾಯವಾಗಿ ಕ್ಯೂಆರ್ ಕೋಡ್ ಪ್ರದರ್ಶಿಸಲಾಗುತ್ತದೆ. ಇದನ್ನು ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ಸ್ವಯಂ-ಅಪಾಯ ಮೌಲ್ಯಮಾಪನ ಮಾಡಿಕೊಳ್ಳಬಹುದು.
ವೆಬ್‌ಸೈಟ್: ಗೌಪ್ಯ ಮಾರ್ಗದರ್ಶನಕ್ಕಾಗಿ www.breakfreeindia.org ಜಾಲತಾಣವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.
ಸರ್ಕಾರದ ಮುಂದಿರುವ ಸವಾಲು:
ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ಸರ್ಕಾರಕ್ಕೆ, ಈಗ ಎಚ್‌ಐವಿ ಹರಡದಂತೆ ತಡೆಯುವುದು ದೊಡ್ಡ ಸವಾಲಾಗಿದೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಕೆಎಸ್‌ಎಪಿಎಸ್ ತಿಳಿಸಿದೆ. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಈ ತಪಾಸಣಾ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ.
ಆರೋಗ್ಯ
Puttur-ಪುತ್ತೂರು: ಜು.9ರಂದು ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕ್ ನಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಪುತ್ತೂರು: ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರವು ಜು.9, ಗುರುವಾರದಂದು ಬೆಳಗ್ಗೆ 9-30ರಿಂದ ಮಧ್ಯಾಹ್ನ 12-30ರವರೆಗೆ ಪುತ್ತೂರಿನ ಕಲ್ಲಾರೆಯಲ್ಲಿರುವ ಡಾ. ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ನಡೆಯಲಿರುವುದು.
ಶಿಬಿರದಲ್ಲಿ ಸಿಗುವ ಸೌಲಭ್ಯಗಳು:
ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಈ ಕೆಳಗಿನ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡಲಾಗುವುದು.
ಉಚಿತ ಪರೀಕ್ಷೆಗಳು: ಥೈರಾಯಿಡ್ (TSH), ರಕ್ತದ ಸಕ್ಕರೆ ಅಂಶ (Sugar), HBA1C ಮತ್ತು ಮೂಳೆ ಸಾಂದ್ರತೆ ಪರೀಕ್ಷೆ (BMD Test).
-
ದಕ್ಷಿಣ ಕನ್ನಡ18 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
Uncategorized24 hours ago
ಬೆಳೆ ವಿಮೆ ಪರಿಹಾರ ಕಡಿತ: ಸರ್ಕಾರದ ಮುಂದೆ ಅರುಣ್ ಪುತ್ತಿಲ ಆಕ್ರೋಶ – ಪ್ರಶ್ನೆಗಳ ಸುರಿಮಳೆ
-
ಅಪರಾಧ17 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ಬಿಗ್ ನ್ಯೂಸ್23 hours agoPuttur-ಪುತ್ತೂರಿನಲ್ಲಿ ಆಸರೆ ಇಲ್ಲದೆ ಭಿಕ್ಷಾಟನೆ ಮಾಡುತ್ತಿದ್ದ 60ರ ವ್ಯಕ್ತಿಗೆ ನೆರವು; ಪಚ್ಚನಾಡಿ ಪುನರ್ವಸತಿ ಕೇಂದ್ರಕ್ಕೆ ದಾಖಲು
-
ನಿಧನ ವಾರ್ತೆ16 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಅಪರಾಧ23 hours agoArrested-ಸುಪ್ರೀಂ ಕೋರ್ಟ್ ಆದೇಶ ನಕಲು ಮಾಡಿ ಕೈದಿ ಬಿಡುಗಡೆ; ಜೈಲು ಡಿಐಜಿ ಸೋಮಶೇಖರ್ ಬಂಧನ
-
ಶಿಕ್ಷಣ15 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ನಿಧನ ವಾರ್ತೆ17 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ


















