Connect with us

ಪುತ್ತೂರು

ಜೀವನವೇ ಸಹಕಾರ – ಕೂಡು ಕುಟುಂಬದಲ್ಲಿ ಸಹಕಾರದ ಜೀವನವಿತ್ತು – ಪ್ರಶಸ್ತಿಯ ಗೌರವವನ್ನು ರಾಜಕೀಯ ಭೀಷ್ಮ ದಿ.ರಾಮಭಟ್ ಗೆ ಅರ್ಪಿಸುತ್ತೇನೆ : ‘ಸಹಕಾರ ರತ್ನ ಪ್ರಶಸ್ತಿ’ ಪುರಸ್ಕೃತ ದಂಬೆಕಾನ ಸದಾಶಿವ ರೈ

Published

on

Ad Widget

Ad Widget

Ad Widget

Ad Widget

ಪುತ್ತೂರು: ನಮ್ಮ ಜೀವನವೇ ಸಹಕಾರ. ಇದುವೇ ಸಹಕಾರಕ್ಕೆ ಮೂಲ ನಿದರ್ಶನ. ನಮ್ಮ ಹಿರಿಯರು ಕಾಪಾಡಿಕೊಂಡು ಬಂದಿದ್ದ ಕೂಡು ಕುಟುಂಬದಲ್ಲಿ ಸಹಕಾರದ ಜೀವನವಿತ್ತು. ಸೊಸೈಟಿಗಳು ಎಂಬುದು ಮಾತ್ರ ಸಹಕಾರ ಕ್ಷೇತ್ರವಲ್ಲ, ಬದಲಾಗಿ ಈ ಹಾದಿಯಲ್ಲಿ ಬೆಳೆದುಬಂದಿವೆ. ಇಂತಹ ಅದ್ಭುತ ಪರಿಕಲ್ಪನೆಯ ಸಹಕಾರ ಕ್ಷೇತ್ರದ ಸಹಕಾರ ರತ್ನ ಪ್ರಶಸ್ತಿ ಲಭಿಸಿರುವುದು ಖುಷಿ ನೀಡಿದೆ. ಇದಕ್ಕಾಗಿ ಸಹಕಾರ ನೀಡಿದ ಎಲ್ಲರಿಗೂ ಅಭಿನಂದನೆ.

Ad Widget

Ad Widget

Ad Widget

Ad Widget


ಹೀಗೆಂದು ಅಭಿಪ್ರಾಯ ವ್ಯಕ್ತಪಡಿಸಿದವರು 75ರ ಇಳಿ ವಯಸ್ಸಿನಲ್ಲೂ ಸಮಾಜಮುಖಿ ಚಟುವಟಿಕೆಗಳಲ್ಲಿ ನಿಸ್ವಾರ್ಥ ಮನೋಭಾವ, ಅತ್ಯಂತ ಹುಮ್ಮಸ್ಸಿನಿಂದ ತೊಡಗಿಸಿಕೊಂಡಿರುವ ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದ ನಿವಾಸಿ ದಂಬೆಕಾನ ಸದಾಶಿವ ರೈ.

Ad Widget

Ad Widget alt="Ad Widget"/>

Ad Widget

ಸುಮಾರು 6 ದಶಕಗಳ ಹಿಂದೆ ತಮ್ಮ ಪಿಯುಸಿ ವಿದ್ಯಾಭ್ಯಾಸದ ಸಂದರ್ಭದಲ್ಲೇ ಸಮಾಜದ ಚಟುವಟಿಕೆಗಳಿಗೆ ಧುಮುಕಿದ ಸದಾಶಿವ ರೈ ಅವರು, ಸಂಘಟನೆ, ರಾಜಕೀಯ, ಸಹಕಾರ, ಸಾಂಸ್ಕೃತಿಕ, ಸಾಹಿತ್ಯಿಕ, ಸಾಮಾಜಿಕ ಜಾಗೃತಿ, ಸಂಪ್ರದಾಯಗಳ ಆಚರಣೆ ವಿಚಾರ ಸೇರಿದಂತೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ನಿರಂತರ ತೊಡಗಿಸಿಕೊಂಡವರು. ಈ ಎಲ್ಲಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಯುವ ಮುಖಗಳಿಗೆ ಮಾರ್ಗದರ್ಶಕರೂ ಹೌದು.

Ad Widget

Ad Widget <> Ad Widget

ಪ್ರಶಸ್ತಿಯ ಗೌರವ ದಿ.ರಾಮಭಟ್ ಗೆ ಸಲ್ಲಿಕೆ:

ಪುತ್ತೂರಿನ ರಾಜಕೀಯ ಭೀಷ್ಮ ದಿ. ಉರಿಮಜಲು ರಾಮ ಭಟ್ ಅವರ ಮಾರ್ಗದರ್ಶನದಲ್ಲಿ ನಾನು ಬೆಳೆದೆ. ಈ ಕಾರಣದಿಂದ ಸಹಕಾರ ರತ್ನ ಪ್ರಶಸ್ತಿಯ ಗೌರವವನ್ನು ಅವರಿಗೆ ಅರ್ಪಿಸುತ್ತೇನೆ. ಈ ನಿಟ್ಟಿನಲ್ಲಿ ರಾಮ ಭಟ್ ಅವರ ಶ್ರೀಮತಿಯವರನ್ನೂ ಭೇಟಿ ಮಾಡಿ ಕೃತಜ್ನತೆ ಸಲ್ಲಿಸಿದ್ದೇನೆ ಎಂದು ಹೇಳಿದ ದಂಬೆಕಾನ ಸದಾಶಿವ ರೈ, ತಂದೆ-ತಾಯಿ ಹೇಳಿಕೊಟ್ಟಂತೆ ನಾನು ಬದುಕಿದವನು ಎಂದು ನೆನಪಿಸಿಕೊಂಡರು.

Ad Widget

Ad Widget

ಮಾರ್ಗದರ್ಶಕರು
ರಾಜಕೀಯ, ಧಾರ್ಮಿಕ ಸೇರಿದಂತೆ ವಿವಿಧ ಕ್ಷೇತ್ರಗಳ ಹಲವು ಮಂದಿ ನಾಯಕರಿಗೆ ದಂಬೆಕಾನ ಸದಾಶಿವ ರೈ ಅವರು ಮಾರ್ಗದರ್ಶಕರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಸೇರಿದಂತೆ ಹಲವು ಮಂದಿ ರಾಜಕೀಯ ಗಣ್ಯರು ನಿರಂತರವಾಗಿ ದಂಬೆಕಾನ ಅವರನ್ನು ಭೇಟಿ ಮಾಡಿ ಮಾರ್ಗದರ್ಶನ ಪಡೆಯುತ್ತಾರೆ. ತಮ್ಮನ್ನು ಭೇಟಿ ಮಾಡಲು ಬರುವ ಎಲ್ಲರಿಗೂ ಸತ್ಯ, ನ್ಯಾಯ, ಧರ್ಮದಲ್ಲಿ ನಡೆಯಿರಿ. ಫಲ ಸಿಗುತ್ತದೆ ಎಂಬ ಆಶೀರ್ವಾದ ಮಾಡುತ್ತೇನೆ. ಎಲ್ಲರ ಸಾಧನೆಗೂ ಗುರು ಬೇಕು. ಪ್ರತಿಯೊಬ್ಬನೂ ನಾನು ಯಾರು ? ಎಂದು ಪ್ರಶ್ನಿಸಿಕೊಳ್ಳಬೇಕು. ಆಗ ನಾನು ಎಂಬ ಶಕ್ತಿಯ ಚಾಲಕ ನಾನೇ ಅಗಿರುತ್ತೇನೆ ಎಂಬ ಅರಿವಾಗುತ್ತದೆ ಎನ್ನುತ್ತಾರೆ ಸದಾಶಿವ ರೈ.

ರಾಜ್ಯ, ಕೇಂದ್ರದಲ್ಲಿ ಬಿಜೆಪಿ ಸರಕಾರ ಉತ್ತಮ ಆಡಳಿತ ನೀಡುತ್ತಿದೆ. ದ.ಕ. ಜಿಲ್ಲೆಯ ಕ್ರಿಯಾಶೀಲ ಸಂಸದ ನಳಿನ್ ಕುಮಾರ್ ಕಟೀಲ್, ಪುತ್ತೂರಿನ ಶಾಸಕ ಸಂಜೀವ ಮಠಂದೂರು ಕೆಲಸದ ಮೂಲಕವೇ ಉತ್ತರ ಕೊಡುತ್ತೇವೆ ಎನ್ನುವಷ್ಟು ವಿಶ್ವಾಸ ಹೊಂದಿರುವವರು. ಯಾವುದೇ ಅರ್ಜಿ ಸಲ್ಲಿಸದಿದ್ದರೂ ತನ್ನಂತೆ ಹಲವು ಎಲೆಮರೆಯ ಕಾಯಿಗಳನ್ನು ಗುರುತಿಸಿ ಗೌರವಿಸುವ ಸರಕಾರ ಇನ್ನಷ್ಟು ಇಂತಹ ಕೆಲಸಗಳನ್ನು ಮಾಡಬೇಕು ಎಂದು ಆಶಯ ವ್ಯಕ್ತಪಡಿಸಿದರು.

ನಾಳೆ ಪ್ರಶಸ್ತಿ ಸ್ವೀಕಾರ:
ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನ.18 ರಂದು ನಡೆಯುವ ಸಹಕಾರ ಸಮಾವೇಶದಲ್ಲಿ ದಂಬೆಕಾನ ಸದಾಶಿವ ರೈ ಅವರು ಮುಖ್ಯಮಂತ್ರಿಗಳ ಸಹಿತ ಗಣ್ಯರ ಸಮ್ಮುಖದಲ್ಲಿ ಸಹಕಾರ ರತ್ನ ಪುರಸ್ಕಾರ ಸ್ವೀಕರಿಸಲಿದ್ದಾರೆ.

Ad Widget
Click to comment

Leave a Reply

ಮಂಗಳೂರು

Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

Published

on

Ad Widget

Ad Widget

Ad Widget

Ad Widget

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget

Ad Widget

Ad Widget

Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget alt="Ad Widget"/>

Ad Widget

ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

Ad Widget

Ad Widget <> Ad Widget

ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.

Continue Reading

ಶಿಕ್ಷಣ

Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ

Published

on

Ad Widget

Ad Widget

Ad Widget

Ad Widget

ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.

Ad Widget

Ad Widget <> Ad Widget

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು

Published

on

Ad Widget

Ad Widget

Ad Widget

Ad Widget

ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget <> Ad Widget

ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!