ಚಿನ್ನ-ಬೆಳ್ಳಿ ದರ
Gold Price Today : ಆಭರಣ ಪ್ರಿಯರಿಗೆ ಶುಭ ಸುದ್ದಿ; ಸ್ಥಿರತೆ ಕಾಯ್ದುಕೊಂಡ ಚಿನ್ನ- ಬೆಳ್ಳಿ ದರ ಮತ್ತೆ ಇಳಿಕೆ – ಇಲ್ಲಿದೆ ಪ್ರಮುಖ ನಗರಗಳ ರೇಟ್
Gold Price and Silver Price Today : ನ 19 : ಚಿನ್ನ ಹೆಣ್ಮಕ್ಕಳ ನೆಚ್ಚಿನ ಆಭರಣ. ಚಿನ್ನ ಖರೀದಿಸುವವರು ಮಾತ್ರವಲ್ಲ ಎಲ್ಲರಿಗೂ ಕೂಡ ದಿನದ ಚಿನ್ನದ ಧಾರಣೆ(gold Price) ಎಷ್ಟಿದೆ ಎನ್ನುವ ತಿಳಿಯುವ ಕುತೂಹಲ ಇದ್ದೇ ಇರುತ್ತದೆ. ಇದೀಗ ಶನಿವಾರ ಚಿನ್ನದ ಬೆಲೆಯಲ್ಲಿ (Gold Rate )ತಟಸ್ಥತೆ ಕಂಡುಬಂದಿದೆ. ಬೆಳ್ಳಿ ದರ (Silver Price) ತುಸು ಇಳಿಕೆಯಾಗಿದೆ̤ ಜಾಗತಿಕ ಮಾರುಕಟ್ಟೆಯಲ್ಲಿ ಅಸ್ಥಿರ ವಹಿವಾಟು, ಡಾಲರ್ ವಿರುದ್ಧ ರೂಪಾಯಿ ಮೌಲ್ಯದಲ್ಲಿ ಮತ್ತೆ ಕುಸಿತ ಹಾಗೂ ಕಚ್ಚಾ ತೈಲೆ ಬೆಲೆ ತುಸು ಹೆಚ್ಚಳವಾಗಿರುವುದು ಚಿನ್ನದ ಹೂಡಿಕೆ ಮೇಲೂ ಪರಿಣಾಮ ಬೀರಿದೆ.
ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ.
Gold Rate Today : November 19 : ನವೆಂಬರ್ 19 : ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿನ ದರ ವಿವರ : 22 ಕ್ಯಾರೆಟ್ನ 10 ಗ್ರಾಂ ಚಿನ್ನದ ದರ 48,750 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 53,180 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 800 ರೂ. ಇಳಿಕೆಯಾಗಿ 61,200 ರೂಪಾಯಿ ಆಗಿದೆ.
ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.
ಚೆನ್ನೈ- 49,510 ರೂ.
ಮುಂಬೈ- 48,750 ರೂ,
ದೆಹಲಿ- 48,900 ರೂ,
ಕೊಲ್ಕತ್ತಾ- 48,750 ರೂ,
ಬೆಂಗಳೂರು- 48,800 ರೂ,
ಹೈದರಾಬಾದ್- 48,750 ರೂ,
ಕೇರಳ- 48,750 ರೂ,
ಪುಣೆ- 48,780 ರೂ,
ಮಂಗಳೂರು- 48,800 ರೂ,
ಮೈಸೂರು- 48,800 ರೂಪಾಯಿಗಳು
24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:
ಚೆನ್ನೈ- 54,010 ರೂ,
ಮುಂಬೈ- 53,180 ರೂ,
ದೆಹಲಿ- 53,350 ರೂ,
ಕೊಲ್ಕತ್ತಾ- 53,180 ರೂ,
ಬೆಂಗಳೂರು- 53,230 ರೂ,
ಹೈದರಾಬಾದ್- 53,180 ರೂ,
ಕೇರಳ- 53,180 ರೂ,
ಪುಣೆ- 53,210 ರೂ,
ಮಂಗಳೂರು- 53,230 ರೂ,
ಮೈಸೂರು- 53,230 ರೂ. ಆಗಿದೆ.
ಇಂದಿನ ಬೆಳ್ಳಿಯ ದರ( Silver Rate) : ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;
ಬೆಂಗಳೂರು- 67,000 ರೂ,
ಮೈಸೂರು- 67,000 ರೂ.,
ಮಂಗಳೂರು- 67,000 ರೂ.,
ಮುಂಬೈ- 61,200 ರೂ,
ಚೆನ್ನೈ- 67,000 ರೂ,
ದೆಹಲಿ- 61,200 ರೂ,
ಹೈದರಾಬಾದ್- 67,000 ರೂ,
ಕೊಲ್ಕತ್ತಾ- 61,200 ರೂ. ಆಗಿದೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ – ಬೆಳ್ಳಿಗಿರುವ ಬೇಡಿಕೆ, ಡಾಲರ್ ಎದುರು ರೂಪಾಯಿ ಮೌಲ್ಯ ಹಾಗೂ ಷೇರು ಪೇಟೆಯಲ್ಲಿನ ಏರಿಳಿತ ಬಾರತದ ಮಾರುಕಟ್ಟೆಯಲ್ಲಿ ಗೋಲ್ಡ್ ಹಾಗೂ ಸಿಲ್ವರ್ ರೇಟ್ ಅನ್ನು ನಿರ್ಧರಿಸುತ್ತದೆ. ಪ್ರತಿ ನಿತ್ಯ ಇವುಗಳ ಏರಿಳಿತ ಉಂಟಾಗುತ್ತಿದೆ. ಪ್ರತಿ ದಿನದ ದರ ವಿವರವನ್ನು ಇಲ್ಲಿ ನೀಡಲಾಗುತ್ತಿದೆ.
ಚಿನ್ನ-ಬೆಳ್ಳಿ ದರ
Gold Rate Today -ಅಮೆರಿಕ-ಇರಾನ್ ಸಂಘರ್ಷದ ಎಫೆಕ್ಟ್: 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ₹1.48 ಲಕ್ಷ; ಬೆಳ್ಳಿಯೂ ದುಬಾರಿ
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ. ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಂಗಳೂರು: ಜಾಗತಿಕ ರಾಜಕೀಯ ಬೆಳವಣಿಗೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಭಾರಿ ಪ್ರಭಾವ ಬೀರಿದ್ದು, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ಮುಖ ಮಾಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.
ಇಂದಿನ ಚಿನ್ನದ ದರ ವಿವರ (ಜೂನ್ 12, 2026):
24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):
ಆಭರಣ ಚಿನ್ನದ ಬೆಲೆಯೂ ಏರಿಕೆಯ ಹಾದಿಯಲ್ಲಿದ್ದು, 10 ಗ್ರಾಂಗೆ 2,700 ರೂ. ಹೆಚ್ಚಳವಾಗಿದೆ. ಇದರೊಂದಿಗೆ 22 ಕ್ಯಾರೆಟ್ ಚಿನ್ನದ ಬೆಲೆ 1,36,200 ರೂ. ಗೆ ತಲುಪಿದೆ.
ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಲೆ ಏರಿಕೆಗೆ ಕಾರಣವೇನು?
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಇರಾನ್ ಪಡೆಗಳು ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವುದು ಮತ್ತು ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದು ತೈಲ ಬೆಲೆ ಏರಿಕೆಗೆ ದಾರಿ ಮಾಡಿಕೊಟ್ಟಿದೆ. ಇದರ ಜೊತೆಗೆ ಒಮಾನ್ ಕರಾವಳಿಯಲ್ಲಿ ಭಾರತದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದಿರುವುದು ಮಾರುಕಟ್ಟೆಯ ಏರುಪೇರಿಗೆ ಕಾರಣವಾಗಿದೆ.
ಆದರೆ, ಅಂತಿಮವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಇರಾನ್ ಮೇಲಿನ ಯೋಜಿತ ದಾಳಿಯನ್ನು ರದ್ದುಗೊಳಿಸಿ, ಶಾಂತಿ ಸಂಧಾನಕ್ಕೆ ಮುಂದಾಗುವುದಾಗಿ ಹೇಳಿರುವುದು ಮಾರುಕಟ್ಟೆಯಲ್ಲಿ ಸಕಾರಾತ್ಮಕ ಸಂಚಲನ ಮೂಡಿಸಿದೆ. ಸುರಕ್ಷಿತ ಹೂಡಿಕೆಯ ದೃಷ್ಟಿಯಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಬೆಲೆ ಏರಿಕೆಗೆ ಪುಷ್ಟಿ ನೀಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಆಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್: ಒಂದೇ ದಿನ ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ..!
ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಂಗಳೂರು: ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಲೆ ಇಳಿಕೆಗೆ ಕಾರಣಗಳೇನು?
ಜಾಗತಿಕ ಮಾರುಕಟ್ಟೆಯಲ್ಲಿನ ಏರುಪೇರುಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿ, ಕಚ್ಚಾ ತೈಲ ಬೆಲೆಯಲ್ಲಿನ ಏರಿಕೆ ಹಾಗೂ ಹಣದುಬ್ಬರದ ಅಪಾಯಗಳ ನಡುವೆಯೂ ಹೂಡಿಕೆದಾರರು ಹೆಚ್ಚಿನ ಬಡ್ಡಿದರ ಸಿಗುವ ಸುರಕ್ಷಿತ ಕಡೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದಾಗಿ ಚಿನ್ನದ ಮೇಲಿನ ಬೇಡಿಕೆ ಕುಸಿದು ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿದೆ.
ಇಂದಿನ ಚಿನ್ನದ ಬೆಲೆ ವಿವರ (ಜೂನ್ 8):
24 ಕ್ಯಾರೆಟ್ ಚಿನ್ನ (ಅಪರಂಜಿ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 1,040 ರೂಪಾಯಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 15,169 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂಪಾಯಿ ಕುಸಿತ ಕಂಡಿದೆ. ಇದರೊಂದಿಗೆ ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 13,905 ರೂಪಾಯಿಯಾಗಿದೆ.
ಕಳೆದ 10 ದಿನಗಳ ಟ್ರೆಂಡ್:
ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಯುತ್ತಲೇ ಸಾಗಿದೆ. ಕಳೆದ 10 ದಿನಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 5,350 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನದ ಮೇಲೆ 4,900 ರೂಪಾಯಿ ಇಳಿಕೆಯಾಗಿರುವುದು ಮಧ್ಯಮ ವರ್ಗದ ಜನರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಕದನ ವಿರಾಮದ ಬೆನ್ನಲ್ಲೇ ಭಾರಿ ಏರಿಕೆ ಕಂಡ ಚಿನ್ನ ಮತ್ತು ಬೆಳ್ಳಿ ದರ..! ಒಂದೇ ದಿನ ಕೆ.ಜಿ ಬೆಳ್ಳಿಗೆ ₹11,000 ಹೆಚ್ಚಳ..!
ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.
ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.
ಬೆಳ್ಳಿಯ ದರದಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರವು ಪ್ರತಿ ಕೆ.ಜಿಗೆ ಬರೋಬ್ಬರಿ ₹11,000 ರಷ್ಟು ಏರಿಕೆಯಾಗಿದೆ. ಇದರಿಂದಾಗಿ ದೇಶದಲ್ಲಿ ಬೆಳ್ಳಿಯ ಬೆಲೆ ಈಗ ₹2.51 ಲಕ್ಷದ ಗಡಿ ತಲುಪಿದೆ.
ಚಿನ್ನದ ಬೆಲೆ ಎಷ್ಟು ಹೆಚ್ಚಳ?:
ಚಿನ್ನದ ದರದಲ್ಲೂ ದೊಡ್ಡ ಮಟ್ಟದ ಏರಿಕೆ ಕಂಡುಬಂದಿದ್ದು, 10 ಗ್ರಾಂ (ಶೇ 99.9ರಷ್ಟು ಪರಿಶುದ್ಧತೆ) ಚಿನ್ನದ ಬೆಲೆಯಲ್ಲಿ ₹3,200 ಹೆಚ್ಚಳವಾಗಿದೆ. ಇದರೊಂದಿಗೆ 10 ಗ್ರಾಂ ಚಿನ್ನದ ಮಾರುಕಟ್ಟೆ ದರವು ₹1,56,400ಕ್ಕೆ ತಲುಪಿದೆ.
ಜಾಗತಿಕ ಮಾರುಕಟ್ಟೆಯಲ್ಲಿನ ಹಠಾತ್ ಬೆಳವಣಿಗೆಗಳು ಮತ್ತು ಹೂಡಿಕೆದಾರರ ಒಲವು ದೇಶದ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರಿದ್ದು, ಆಭರಣ ಖರೀದಿದಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.
-
ನಿಧನ ವಾರ್ತೆ23 hours agoKadaba-ಕಡಬ : ಹೆದ್ದಾರಿಯಲ್ಲಿ ದಿಢೀರ್ ಪ್ರತ್ಯಕ್ಷವಾದ ಕಡವೆ; ಕಾರಿಗೆ ಡಿಕ್ಕಿ, ಸ್ಥಳದಲ್ಲೇ ಸಾವು
-
ಬಿಗ್ ನ್ಯೂಸ್18 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಪುತ್ತೂರು15 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಮಂಗಳೂರು18 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
Uncategorized23 hours agoಅ.6: ಮಂಗಳೂರಿನ ಪುರಭವನದಲ್ಲಿ ‘ಲವ್ ಜಿಹಾದ್ ಮತ್ತು ಮತಾಂತರ: ಪ್ರಚಾರ ಮತ್ತು ವಾಸ್ತವ’ ಪುಸ್ತಕ ಬಿಡುಗಡೆ
-
ಅಂತರ ರಾಜ್ಯ21 hours agoECI-ಮುಖ್ಯ ಚುನಾವಣ ಆಯುಕ್ತ ವಿರುದ್ಧ ದೇಶಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ‘ಬಿಟ್ಟು ಹೋದವರ ಹೆಸರು ಸೇರ್ಪಡೆಗೆ ಅಭಿಯಾನ’…! 20 ರಾಜ್ಯಗಳಲ್ಲಿ ಕೈಬಿಟ್ಟ 13 ಕೋಟಿ ಮತದಾರರ ಮರುಸೇರ್ಪಡೆಗೆ ಆಯೋಗ ಅವಕಾಶ
-
ಬಿಗ್ ನ್ಯೂಸ್17 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ರಾಜ್ಯ20 hours agoTemperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!


















