ಶಿಕ್ಷಣ
Graduate primary school teacher Recruitment 2022 :ಪದವೀಧರ ಪ್ರಾಥಮಿಕ ಶಾಲಾ 15,000 ಶಿಕ್ಷಕರ ನೇಮಕಾತಿ – ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಆಯ್ಕೆಯಾದ ಅಭ್ಯರ್ಥಿಗಳೆಷ್ಟು?
Graduate primary school teacher Recruitment 2022 : ಬೆಂಗಳೂರು: 15 ಸಾವಿರ ಶಿಕ್ಷಕರ ಹುದ್ದೆಗಳಿಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಯ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಸಚಿವರಾದ ಬಿ.ಸಿ. ನಾಗೇಶ್ ಪ್ರಕಟಿಸಿದ್ದಾರೆ. ಒಟ್ಟು 13,363 ಅಭ್ಯರ್ಥಿಗಳು ಆಯ್ಕೆಯಾಗಿರುವುದಾಗಿ ಅವರು ತಿಳಿಸಿದ್ದಾರೆ.
ಸ್ಪರ್ಧಾತ್ಮಕ ಪರೀಕ್ಷೆಯ ನಂತರ, ನೇಮಕಾತಿಯಲ್ಲಿ ಅರ್ಹತೆಯನ್ನು ಪಡೆದಂತಹ ಅಭ್ಯರ್ಥಿಗಳ ಪಟ್ಟಿಯನ್ನು ಶಿಕ್ಷಣ ಇಲಾಖೆಯಿಂದ ಇತ್ತಿಚೆಗೆ ಪ್ರಕಟಿಸಲಾಗಿತ್ತು. ಅದರಂತೆ 1:5 ಅನುಪಾತದಲ್ಲಿ ದಾಖಲಾತಿ ಪರಿಶೀಲನೆ ಕೂಡ ನಡೆಸಲಾಗಿತ್ತು. ಇದರ ಮುಂದಿನ ಭಾಗವಾಗಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸರ್ಕಾರ ಪ್ರಕಟಿಸಿದೆ.
ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಶುಕ್ರವಾರ (ನ.18) ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವರು, ನೇಮಕ ಪ್ರಕ್ರಿಯೆ ಕುರಿತು ಮಾಹಿತಿ ನೀಡಿದರು.” ರಾಜ್ಯ ಬಿಜೆಪಿ ಸರ್ಕಾರ ದೂರದೃಷ್ಟಿಯೊಂದಿಗೆ ಕಾರ್ಯ ನಿರ್ವಹಿಸುತ್ತಿದೆ. 9 ತಿಂಗಳ ಕನಿಷ್ಟ 15,000 ಶಿಕ್ಷಕರ ನೇಮಕ ಪ್ರಕ್ರಿಯೆಯನ್ನು ಅಂತಿಮಗೊಳಿಸಲಾಗಿದೆ ಎಂದು ಅವರು ತಿಳಿಸಿದರು.
15 ಸಾವಿರ ಶಿಕ್ಷಕರ ಹುದ್ದೆಗಳಿಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆ ಬರೆದು, 1:1 ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ 13,363 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಹಿಂದಿನ ನೇಮಕಾತಿಗಳಿಗೆ ಹೋಲಿಸಿದರೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಆಯ್ಕೆಯಾಗಿದ್ದಾರೆ. ಇದರಿಂದ ಖಾಯಂ ಶಿಕ್ಷಕರ ಕೊರತೆ ನೀಗಲಿದೆ ಎಂದು ಸಚಿವರು ತಿಳಿಸಿದರು.
Horoscope Today 19 November 2022: ಇಂದು ಗಜಕೇಸರಿ ಯೋಗ – ದ್ವಾದಶ ರಾಶಿಗಳ ಫಲಾಫಲ ಹೀಗಿರಲಿದೆ
ಹಿಂದಿನ ಎರಡು ಅವಧಿಯಲ್ಲಿ ನಡೆದ ನೇಮಕ ಪರೀಕ್ಷೆಯಲ್ಲಿ ಕ್ರಮವಾಗಿ 3,389 ಹಾಗೂ 1,994 ಶಿಕ್ಷಕರ ಹುದ್ದೆಗಳು ಭರ್ತಿಯಾಗಿದ್ದವು. ಈ ಬಾರಿ ಬಿ.ಎಸ್ಸಿಯಲ್ಲಿ ಹೊಸ ಕಾಂಬಿನೇಷನ್, ಎಂಜಿನಿಯರಿಂಗ್ ಪದವೀಧರರಿಗೆ ಅವಕಾಶ ನೀಡಲಾಗಿತ್ತು. ವಯೋಮಿತಿ ಸಡಿಲಿಕೆ ಸೇರಿದಂತೆ ನೇಮಕ ನಿಯಮಗಳಲ್ಲಿ ಸಾಕಷ್ಚು ಸುಧಾರಣೆ ಕ್ರಮಗಳನ್ನು ಅನುಸರಿಸಿದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರ ನೇಮಕ ಸಾಧ್ಯವಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ 5,000 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿತ್ತು. ಅದರಲ್ಲಿ 4,187 ಅಭ್ಯರ್ಥಿಗಳು ಮಾತ್ರ ಆಯ್ಕೆಯಾಗಿದ್ದಾರೆ. ಮುಂದಿನ ಬಾರಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಈ ಖಾಲಿ ಹುದ್ದೆಗಳು ಭರ್ತಿಯಾಗುವ ವಿಶ್ವಾಸವಿದೆ ಎಂದು ಸಚಿವ ನಾಗೇಶ್ ತಿಳಿಸಿದರು.
ಪ್ರಥಮ ಬಾರಿಗೆ ಮೂವರು ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು ಹಾಗೂ 19 ಎಂಜಿನಿಯರಿಂಗ್ ಪದವೀಧರರು ಆಯ್ಕೆಯಾಗಿದ್ದಾರೆ. ಜೀವವಿಜ್ಞಾನ, ಗಣಿತ ಮತ್ತು ಇಂಗ್ಲೀಷ್ ಶಿಕ್ಷಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿದ್ದಾರೆ ಎಂದು ಸಚಿವರು ತಿಳಿಸಿದರು.
ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಸುವ ಗುರಿ ಹೊಂದಲಾಗಿದೆ. ಪ್ರತಿ ವರ್ಷ ನಿವೃತ್ತರಾಗುವ ಸಂಖ್ಯೆಯಷ್ಟು ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಹಣಕಾಸು ಇಲಾಖೆಯ ಅನುಮತಿ ಕೋರಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರಾದ ಆರ್.ವಿಶಾಲ್, ಸಮಗ್ರ ಶಿಕ್ಷಣ ಕರ್ನಾಟಕ ಯೋಜನಾ ನಿರ್ದೇಶಕರಾದ ಕಾವೇರಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಯೋಜಿತ ಕಾರ್ಯಸೂಚಿಯಂತೆ 22/12/2022 ಕ್ಕೆ ಮುಖ್ಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಬೇಕಿರುತ್ತದೆ. ಆದರೆ ಎಲ್ಲ ಹಂತಗಳಲ್ಲಿ ನಿಗಧಿತ ಕಾಲಕ್ಕಿಂತ ಮೊದಲೇ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಶಿಕ್ಷಕರ ಹುದ್ದೆ ಸಿಇಟಿ ಪರಿಕ್ಷೆಗೆ ಹಾಜರಾದವರ ಸಂಖ್ಯೆ
• ಪತ್ರಿಕೆ -1 : 68,873.
• ಪತ್ರಿಕೆ-2 ಇಂಗ್ಲಿಷ್ : 10,571.
• ಪತ್ರಿಕೆ -2 ಜೀವ ವಿಜ್ಞಾನ : 3,158.
• ಪತ್ರಿಕೆ -2 ಗಣಿತ ಮತ್ತು ವಿಜ್ಞಾನ : 14,237.
• ಪತ್ರಿಕೆ-2 ಸಮಾಜ ಪಾಠಗಳು : 47,296.
• ಪತ್ರಿಕೆ -3 ಭಾಷಾ ಸಾಮರ್ಥ್ಯ : 64,551.
ಶಿಕ್ಷಣ
Vivekananda-ಪುತ್ತೂರು: ನಾಳೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ 7ನೇ ವಾರ್ಷಿಕೋತ್ಸವ
ಶಿಕ್ಷಣದ ಜೊತೆಗೆ ಸಂಸ್ಕೃತಿ, ಸಂಸ್ಕಾರ ಹಾಗೂ ಮೌಲ್ಯಗಳಿಗೆ ಆದ್ಯತೆ ನೀಡುತ್ತಾ ಬಂದಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಘಟಕವಾದ ವಿವೇಕಾನಂದ ಸೆಂಟ್ರಲ್ ಸ್ಕೂಲ್, ತನ್ನ 7ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮಕ್ಕೆ ಸಜ್ಜಾಗಿದೆ.
ಪುತ್ತೂರು: ಶಿಕ್ಷಣದ ಜೊತೆಗೆ ಸಂಸ್ಕೃತಿ, ಸಂಸ್ಕಾರ ಹಾಗೂ ಮೌಲ್ಯಗಳಿಗೆ ಆದ್ಯತೆ ನೀಡುತ್ತಾ ಬಂದಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಘಟಕವಾದ ವಿವೇಕಾನಂದ ಸೆಂಟ್ರಲ್ ಸ್ಕೂಲ್, ತನ್ನ 7ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮಕ್ಕೆ ಸಜ್ಜಾಗಿದೆ.

2026-27ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಸಮಾರಂಭವು ನ.26ರಂದು ಗುರುವಾರ ಮಧ್ಯಾಹ್ನ 2.30ರಿಂದ ಶಾಲಾ ಆವರಣದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಪುಟಾಣಿಗಳ ಮುಗ್ಧ ನೃತ್ಯ ಪ್ರದರ್ಶನದಿಂದ ಹಿಡಿದು ಹಿರಿಯ ವಿದ್ಯಾರ್ಥಿಗಳ ಅರ್ಥಪೂರ್ಣ ಸಾಂಸ್ಕೃತಿಕ ಪ್ರಸ್ತುತಿಗಳವರೆಗೆ ಕಾರ್ಯಕ್ರಮದಲ್ಲಿ ವಿವಿಧ ಮನರಂಜನಾ ಚಟುವಟಿಕೆಗಳು ನಡೆಯಲಿದ್ದು, ಶಾಲಾ ಆವರಣದಲ್ಲಿ ಸಂಭ್ರಮದ ವಾತಾವರಣ ಮೂಡಲಿದೆ.

ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ರವೀಂದ್ರ ಪಿ. ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ತೆಂಕಿಲದ ನರೇಂದ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಸಾದ ಶಾನುಭೋಗ್ ಹಾಗೂ ವಿವೇಕಾನಂದ ಪದವಿಪೂರ್ವ ಕಾಲೇಜಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಹರೀಶ್ ಶಾಸ್ತಿ ಬಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಲಿದ್ದಾರೆ.

ಗೌರವ ಅತಿಥಿಯಾಗಿ FirstByteFast ಸಂಸ್ಥೆಯ ಸಹ-ಸಂಸ್ಥಾಪಕ ಹಾಗೂ ಸಿಇಒ ಸ್ವಸ್ತಿಕ್ ಪದ್ಮ ಉಪಸ್ಥಿತರಿದ್ದು, ತಮ್ಮ ಅನುಭವ ಹಾಗೂ ಸಂದೇಶದ ಮೂಲಕ ವಿದ್ಯಾರ್ಥಿಗಳಲ್ಲಿ ಹೊಸ ಕನಸು ಮತ್ತು ಹುಮ್ಮಸ್ಸು ತುಂಬಲಿದ್ದಾರೆ.
ದಿನವಿಡೀ ಸಾಂಸ್ಕೃತಿಕ ವೈಭವ
ಕಾರ್ಯಕ್ರಮವು ಮಧ್ಯಾಹ್ನ 2.30ಕ್ಕೆ ಧಾರ್ಮಿಕ ಶಿಕ್ಷಣದ ಪ್ರದರ್ಶನದೊಂದಿಗೆ ಆರಂಭವಾಗಲಿದೆ. ಮಕ್ಕಳಲ್ಲಿ ಚಿಕ್ಕ ವಯಸ್ಸಿನಿಂದಲೇ ಭಕ್ತಿ, ಶಿಸ್ತು ಮತ್ತು ಸಂಸ್ಕಾರ ಬೆಳೆಸುವ ಉದ್ದೇಶದಿಂದ ಶಾಲೆಯಲ್ಲಿ ನೀಡಲಾಗುತ್ತಿರುವ ಧಾರ್ಮಿಕ ಶಿಕ್ಷಣದ ಪರಿಚಯ ಈ ಪ್ರದರ್ಶನದ ಮೂಲಕ ದೊರೆಯಲಿದೆ.
ಮಧ್ಯಾಹ್ನ 3ರಿಂದ 4ರವರೆಗೆ ಪೂರ್ವ ಪ್ರಾಥಮಿಕದಿಂದ 2ನೇ ತರಗತಿವರೆಗಿನ ಪುಟಾಣಿಗಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಮುದ್ದಾದ ವೇಷಭೂಷಣ, ಮುಗ್ಧ ಅಭಿನಯ ಹಾಗೂ ಲಯಬದ್ಧ ನೃತ್ಯಗಳ ಮೂಲಕ ಪುಟಾಣಿಗಳು ಸಭಿಕರನ್ನು ರಂಜಿಸಲಿದ್ದಾರೆ.

ಸಂಜೆ 4ರಿಂದ 5.30ರವರೆಗೆ ಸಭಾ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ನಡೆಯಲಿದೆ. ಬಳಿಕ ಸಂಜೆ 5.30ರಿಂದ 3ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭವಾಗಲಿದ್ದು, ನೃತ್ಯ, ನಾಟಕ, ಸಂಗೀತ ಹಾಗೂ ರೂಪಕಗಳ ಮೂಲಕ ಹಿರಿಯ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲಿದ್ದಾರೆ ಎಂದು ಶಾಲಾ ಸಂಚಾಲಕ ರವಿನಾರಾಯಣ ಎಂ. ತಿಳಿಸಿದ್ದಾರೆ.
ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಈಗಾಗಲೇ ವಾರ್ಷಿಕೋತ್ಸವದ ಸಿದ್ಧತೆಯಲ್ಲಿ ತೊಡಗಿದ್ದಾರೆ. ವಾರ್ಷಿಕೋತ್ಸವವು ಕೇವಲ ಸಂಭ್ರಮದ ಕಾರ್ಯಕ್ರಮವಲ್ಲ; ಮಕ್ಕಳ ವರ್ಷವಿಡೀ ನಡೆದ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಹಾಗೂ ಪೋಷಕರ ಸಹಕಾರದ ಪ್ರತಿಫಲವಾಗಿದೆ. ಪ್ರತಿಯೊಂದು ಮಗುವಿನಲ್ಲಿರುವ ಪ್ರತಿಭೆಯನ್ನು ವೇದಿಕೆಯ ಮೇಲೆ ಅನಾವರಣಗೊಳಿಸುವ ಪ್ರಯತ್ನವೇ ಈ ವಾರ್ಷಿಕೋತ್ಸವದ ವಿಶೇಷವಾಗಿದೆ.
ಶಿಕ್ಷಣ
Narendra-ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಇಚ್ಚಿಕ ಜೈನ್ ಇವರು ಕರಾಟೆ ಸ್ಪರ್ಧೆಯಲ್ಲಿ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI)ಗೆ ಆಯ್ಕೆ
ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.
ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.
ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.
ಇವರು ಜಪಾನ್ ಶೊಟೊಕಾನ್ ಕರಾಟೆ ಮತ್ತು ಮಾರ್ಷಲ್ ಆರ್ಟ್ ತರಬೇತಿ ಸಂಸ್ಥೆಯ ತರಬೇತುದಾರರಾದ ಶಿವಪ್ರಸಾದ್ ಡಿ. ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ.
ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ರಕ್ಷಕ-ಶಿಕ್ಷಕ ಸಂಘ, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರು ಈ ವಿದ್ಯಾರ್ಥಿಯ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದ್ದಾರೆ.
ಶಿಕ್ಷಣ
Vivekananda-ದ.ಕ ಜಿಲ್ಲಾಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಚಿಂತನ ಎಂ. ಚಿತ್ರಕಲೆಯಲ್ಲಿ ಪ್ರಥಮ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.
ಪೌಢ ಶಾಲಾ ವಿಭಾಗದಲ್ಲಿ ಚಿಂತನ. ಎಂ (ದಿ.ಸೀತಾರಾಮ ಮೇಲ್ಪಾಡಿ ಹಾಗೂ ಸರೋಜ ಮೇಲ್ಪಾಡಿಯವರ ಪುತ್ರಿ)ಚಿತ್ರಕಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯಮಟ್ಟದ ಸ್ಪರ್ಧೆಗಳು ಮುಂಬರುವ ಜನವರಿ ತಿಂಗಳಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದೆ.
-
Uncategorized14 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ಬಿಗ್ ನ್ಯೂಸ್23 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ23 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ನಿಧನ ವಾರ್ತೆ20 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ20 hours agoPunjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
-
ಅಂತರ ರಾಜ್ಯ24 hours agoTrisha-ವಿಜಯ್ ಸಿಎಂ ಬೆನ್ನಲ್ಲೇ ತ್ರಿಷಾ ರಾಜಕೀಯ ಎಂಟ್ರಿಗೆ ಸಿದ್ಧತೆ? ‘ಜಯಲಲಿತಾ ಉತ್ತರಾಧಿಕಾರಿ’ ಎಂದ ಅಭಿಮಾನಿಗಳು..!
-
ರಾಜಕೀಯ20 hours agoRural election-ಗ್ರಾಮೀಣ ಚುನಾವಣೆ ಅಖಾಡ ಸಜ್ಜು: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ; ಜನವರಿಯಲ್ಲಿ ಮತದಾನ ಸಾಧ್ಯತೆ..!
-
ಅಂತರ ರಾಜ್ಯ20 hours agoSreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು















