Connect with us

ಅಪರಾಧ

Pro Pakistan Slogan at College : ಬೆಂಗಳೂರು : ಪಾಕ್ ಪರ ಘೋಷಣೆ ಕೂಗಿದ್ದ ಕಾಲೇಜಿನ ವಿದ್ಯಾರ್ಥಿಗಳು – ಸ್ಪೆಷಲ್ ಜಾಮೀನು ಮಂಜೂರು!

Published

on

Ad Widget

Ad Widget

Ad Widget

Ad Widget

Pro Pakistan Slogan at College: ಬೆಂಗಳೂರು (ನ.19): ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳು ಪಾಕ್ ಪ್ರೇಮ ಮೆರೆದಿದ್ದು, ಆ ವಿದ್ಯಾರ್ಥಿಗಳನ್ನು ಬಂಧಿಸಿದ ಪೊಲೀಸರು ಬಳಿಕ ಸ್ಟೇಷನ್ ಬೇಲ್ ಮಂಜೂರು ಮಾಡಿದ್ದಾರೆ . ಈ ವಿದ್ಯಾರ್ಥಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ್ದರು. ನಗರದ ನ್ಯೂ ಹೊರೈಜನ್ ಕಾಲೇಜಿನ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು (Engineering Students) ಪಾಕ್ ಪರ ಘೋಷಣೆ ಕೂಗಿದ್ದಾರೆ. ಇಂಜಿನಿಯರಿಂಗ್ (Engineering) ಮೊದಲ ವರ್ಷದ ಆರ್ಯನ್ (Aryan), ದಿನಕರ್, ರಿಯಾ ರವಿಚಂದ್ರ (Riya Ravichandran) ಕಾಮೇಡ್ಕರ್ ಪಾಕ್ ಪರ ಘೋಷಣೆ ಕೂಗಿದವರು

Ad Widget

Ad Widget

Ad Widget

Ad Widget

ಕಾಲೇಜಿನಲ್ಲಿ ಕಾರ್ಯಕ್ರಮ ಆಯೋಜನೆ ಮಾಡುತ್ತಿದ್ದ ಸಂದರ್ಭದಲ್ಲಿ ತಮಾಷೆಗಾಗಿ ಪಾಕಿಸ್ತಾನ ಪರ ವಿದ್ಯಾರ್ಥಿಗಳು ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ. ಪಾಕ್ ಪರ ಘೋಷಣೆ ಕೂಗಿರುವುದನ್ನು ಬೇರೆ ವಿದ್ಯಾರ್ಥಿಗಳು ವಿಡಿಯೋ ರೆಕಾರ್ಡ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅದಕ್ಕೂ ಮೊದಲು ಪಾಕ್ ಪರ ಘೋಷಣೆ ಕೂಗಿದ ಮೂವರನ್ನು ಇತರ ವಿದ್ಯಾರ್ಥಿಗಳು ಥಳಿಸಲು ಮುಂದಾಗಿದ್ದಾರೆ. ಕೂಡಲೇ ವಿದ್ಯಾರ್ಥಿಗಳು (Student) ಉಳಿದ ವಿದ್ಯಾರ್ಥಿಗಳ ಬಳಿ ಕ್ಷಮೆಯಾಚಿಸಿದ್ದಾರೆ.ವಿಡಿಯೋ ವೈರಲ್ ಆಗ್ತಿದ್ದ ಬೆನ್ನಲ್ಲೇ ಮೂವರನ್ನೂ ಕಾಲೇಜು ಮಂಡಳಿ ಸಸ್ಪೆಂಡ್ ಮಾಡಿತ್ತು. ನಂತರ ಮಾರತ್ತಹಳ್ಳಿ ಠಾಣೆಗೆ ದೂರು ನೀಡಲಾಗಿದೆ.

Ad Widget

Ad Widget alt="Ad Widget"/>

Ad Widget

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ವಿದ್ಯಾರ್ಥಿಗಳ ವಿರುದ್ಧ ಐಪಿಸಿ 153, 505(1)B ಅಡಿ ಪ್ರಕರಣ ದಾಖಲಿಸಿದ್ದರು. ದಾವಣೆಗೆರೆ ಮೂಲದ ರಿಯಾ (18), ಮುಂಬೈ ಮೂಲದ ಆರ್ಯನ್ (18) ಮತ್ತು ಆಂಧ್ರಪ್ರದೇಶದ ಮೂಲದ ದಿನಕರ್ (17) ವಿರುದ್ಧ ಎಫ್ಐಆರ್ ದಾಖಲಾಗಿತ್ತು.

Ad Widget

Ad Widget <> Ad Widget

Gold Price Today : ಆಭರಣ ಪ್ರಿಯರಿಗೆ ಶುಭ ಸುದ್ದಿ;  ಸ್ಥಿರತೆ ಕಾಯ್ದುಕೊಂಡ ಚಿನ್ನ-  ಬೆಳ್ಳಿ ದರ ಮತ್ತೆ ಇಳಿಕೆ – ಇಲ್ಲಿದೆ ಪ್ರಮುಖ ನಗರಗಳ ರೇಟ್‌

ಕೂಡಲೇ ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದ ಮಾರತ್ತಹಳ್ಳಿ ಪೊಲೀಸರು ಈ ಬಗ್ಗೆ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಉದ್ದೇಶ ಪೂರ್ವಕವಾಗಿ ಪಾಕ್ ಪರ ಘೋಷಣೆ ಕೂಗಿಲ್ಲ ಅನ್ನೋದು ತಿಳಿದುಬಂದಿದೆ. ಕಾಲೇಜು ಫಂಕ್ಷನ್ನಲ್ಲಿ ಕ್ರಿಕೆಟ್ ಟೀಂಗಳಿಗೆ ವಿದ್ಯಾರ್ಥಿಗಳು ಜೈಕಾರ ಹಾಕ್ತಿದ್ದರು. ಈ ಸಂದರ್ಭದಲ್ಲಿ ಆರ್ ಸಿಬಿಗೆ ಜೈ, ಮುಂಬೈ ಇಂಡಿಯನ್ಸ್ಗೆ ಜೈ, ಇಂಗ್ಲೆಂಡ್ಗೆ ಜೈ ಅಂತಾ ಕೂಗಿದ್ದಾರೆ. ಇದೇ ವೇಳೆ ಮೂವರು ವಿದ್ಯಾರ್ಥಿಗಳು ‘ಪಾಕಿಸ್ತಾನ್ ಜಿಂದಾಬಾದ್’ ಕೂಗಿದ್ದಾರೆ ಎಂದು ತಿಳಿದು ಬಂದಿದೆ.

Ad Widget

Ad Widget

Alto K10 S-CNG: ಮತ್ತೊಂದು ಅಗ್ಗದ ಕಾರು ಬಿಡುಗಡೆ ಮಾಡಿದ ಮಾರುತಿ – 34 ಕಿ.ಮೀ ಮೈಲೇಜ್ ; ದರ ಮತ್ತು ಇತರೆ ವಿವರ ಇಲ್ಲಿದೆ

ಸದ್ಯ ತಾವು ಮಾಡಿರುವ ತಪ್ಪಿಗೆ ಆ ವಿದ್ಯಾರ್ಥಿಗಳು ಕ್ಷಮೆ ಯಾಚಿಸಿದ್ದು, ಇನ್ಮುಂದೆ ಇಂತಹ ತಪ್ಪು ಮಾಡಲ್ಲ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ನಿನ್ನೆ ವಿಚಾರಣೆ ವೇಳೆ ರಿಯಾ ಪೋಷಕರು ಎಸಿಪಿ ಕಿಶೋರ್ ಭರಣಿ ಎದುರು ಕಣ್ಣೀರು ಹಾಕಿದ್ದಾರೆ. ‘ಇರೋದು ಒಬ್ಬಳೇ ಮಗಳು. ಹೀಗೆಲ್ಲಾ ಮಾಡುತ್ತಾಳೆ ಎಂದು ಅಂದುಕೊಂಡಿರ್ಲಿಲ್ಲ. ದಯವಿಟ್ಟು ನಮ್ಮನ್ನ ಕ್ಷಮಿಸಿ ಸರ್’ ಎಂದು ಗೋಳಾಡಿದ್ದಾರೆ.

Graduate primary school teacher Recruitment 2022 :ಪದವೀಧರ ಪ್ರಾಥಮಿಕ ಶಾಲಾ 15,000 ಶಿಕ್ಷಕರ ನೇಮಕಾತಿ – ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಆಯ್ಕೆಯಾದ ಅಭ್ಯರ್ಥಿಗಳೆಷ್ಟು?

ಇಂದು ಪೊಲೀಸರು ಮೊಬೈಲ್ ಫೋನ್ ಪರಿಶೀಲನೆ ನಡೆಸಲಿದ್ದಾರೆ. ಈ ವಿದ್ಯಾರ್ಥಿಗಳು ದೇಶ ವಿರೋಧಿ ಚಟುವಟಿಕೆಗಳಲ್ಲಿ ನಿರತರಾಗಿರುವವರ ಸಂಪರ್ಕದಲ್ಲಿದ್ದಾರಾ ಎಂದು ಪರಿಶೀಲನೆ ನಡೆಸಲಾಗುತ್ತಿದೆ.ಯಾವುದಾದರು ಸಂಘಟನೆಯ ನಂಟು ಈ ವಿದ್ಯಾರ್ಥಿಗಳಿಗೆ ಇದೆಯಾ ಎಂಬುದನ್ನೂ ಪರಿಶೀಲಿಸಲಾಗುತ್ತಿದೆ.

ಸದ್ಯಕ್ಕೆ ಪ್ರಾಥಮಿಕ ತನಿಖೆಯಲ್ಲಿ ಈ ವಿದ್ಯಾರ್ಥಿಗಳು ಯಾವುದೇ ಸಂಘಟನೆಗಳ ನಂಟು ಹೊಂದಿಲ್ಲ ಎಂದು ಕಂಡು ಬರುತ್ತಿದೆ. ಇಂದು 10 ಗಂಟೆಗೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಆರೋಪಿಗಳಿಗೆ ಪೊಲೀಸರು ಸೂಚನೆ ನೀಡಿದ್ದಾರೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಮೂವರನ್ನೂ ಕಾಲೇಜು ಆಡಳಿತ ಮಂಡಳಿ ನವಂಬರ್ 30ರ ವರೆಗೂ ಸಸ್ಪೆಂಡ್ ಮಾಡಿದೆ.

Winter care ಚಳಿಗಾಲದಲ್ಲಿ ಮಕ್ಕಳನ್ನು ಆರೋಗ್ಯ ಸಮಸ್ಯೆಯಿಂದ ಕಾಪಾಡಲು ಹೀಗೆ ಮಾಡಿ

Ad Widget
Click to comment

Leave a Reply

ಅಪರಾಧ

Mangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್‌ಐ ವಶಕ್ಕೆ

Published

on

Ad Widget

Ad Widget

Ad Widget

Ad Widget

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget alt="Ad Widget"/>

Ad Widget

ಬಂಧಿತ ಇಬ್ಬರು ಸಿಬ್ಬಂದಿಯಲ್ಲಿ ಒಬ್ಬರು ಮಂಗಳೂರು ಮೂಲದವರಾಗಿದ್ದು, ಮತ್ತೊಬ್ಬರು ಕಾಸರಗೋಡು ಮೂಲದವರು ಎಂದು ತಿಳಿದುಬಂದಿದೆ. ದುಬೈ ಹಾಗೂ ಕೇರಳ ಮೂಲದ ಚಿನ್ನ ಕಳ್ಳಸಾಗಣೆ ಜಾಲದೊಂದಿಗೆ ಸಂಪರ್ಕ ಹೊಂದಿ ಅಕ್ರಮ ಚಿನ್ನ ಸಾಗಾಟಕ್ಕೆ ನೆರವಾಗುತ್ತಿದ್ದ ಆರೋಪ ಇವರ ಮೇಲಿದೆ.

Ad Widget

Ad Widget <> Ad Widget

ವ್ಯವಸ್ಥಿತವಾಗಿ ನಡೆಯುತ್ತಿದ್ದ ಕಳ್ಳಸಾಗಣೆ
ದುಬೈ ಸೇರಿದಂತೆ ವಿದೇಶಗಳಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕರು, ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಲ್ಲಿ ಚಿನ್ನವನ್ನು ಅಡಗಿಸಿಟ್ಟು ತೆರಳುತ್ತಿದ್ದರು ಎನ್ನಲಾಗಿದೆ. ಬಳಿಕ ಈ ಮಾಹಿತಿಯನ್ನು ಜಾಲದ ಸಂಪರ್ಕದಲ್ಲಿದ್ದ ವಿಮಾನ ನಿಲ್ದಾಣದ ಸಿಬ್ಬಂದಿಗೆ ತಲುಪಿಸಲಾಗುತ್ತಿತ್ತು. ವಿಮಾನಗಳ ನಿರ್ವಹಣಾ ಕಾರ್ಯ ಮುಗಿದ ಬಳಿಕ ಸಿಬ್ಬಂದಿ ಶೌಚಾಲಯಕ್ಕೆ ತೆರಳಿ, ಅಲ್ಲಿ ಅಡಗಿಸಿಟ್ಟ ಚಿನ್ನವನ್ನು ಹೊರತೆಗೆದು ತಮ್ಮ ಸಂಪರ್ಕದಲ್ಲಿದ್ದ ಕಳ್ಳಸಾಗಣೆದಾರರಿಗೆ ಹಸ್ತಾಂತರಿಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಖಚಿತ ಮಾಹಿತಿಯ ಮೇರೆಗೆ ಡಿಆರ್‌ಐ ಅಧಿಕಾರಿಗಳು ಆರೋಪಿಗಳ ಮೇಲೆ ನಿಗಾ ಇರಿಸಿದ್ದರು. ಅದರಂತೆ ನ. 23ರಂದು ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಿಂದ ಚಿನ್ನದ ಪೇಸ್ಟ್ ರೂಪದ ಎರಡು ಪ್ಯಾಕ್‌ಗಳನ್ನು ಹೊರತೆಗೆಯುತ್ತಿದ್ದ ಮಂಗಳೂರು ಮೂಲದ ಸಿಬ್ಬಂದಿಯನ್ನು ಅಧಿಕಾರಿಗಳು ಹಿಡಿದಿದ್ದಾರೆ.

Ad Widget

Ad Widget

ಈ ಚಿನ್ನವನ್ನು ಆತ ಕಾಸರಗೋಡು ಮೂಲದ ಮತ್ತೊಬ್ಬ ಸಿಬ್ಬಂದಿಗೆ ಹಸ್ತಾಂತರಿಸಬೇಕಿತ್ತು. ಬಳಿಕ ಆ ಸಿಬ್ಬಂದಿ ವಿಮಾನ ನಿಲ್ದಾಣದಿಂದ ಸುಮಾರು ಎರಡು ಕಿ.ಮೀ. ದೂರದಲ್ಲಿರುವ ಸ್ಥಳಕ್ಕೆ ಚಿನ್ನವನ್ನು ಕೊಂಡೊಯ್ದು ಜಾಲದ ಮೂರನೇ ವ್ಯಕ್ತಿಗೆ ತಲುಪಿಸಲು ಯೋಜಿಸಿದ್ದ ಎನ್ನಲಾಗಿದೆ. ಅಧಿಕಾರಿಗಳು ತ್ವರಿತ ಕಾರ್ಯಾಚರಣೆ ನಡೆಸಿ ಉಳಿದ ಇಬ್ಬರನ್ನೂ ಬಂಧಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ, 73 ಲಕ್ಷ ರೂ. ನಗದು, ಒಂದು ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಡಿ. 7ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

ಇದಕ್ಕೂ ಮೊದಲು 1.77 ಕೋಟಿ ರೂ. ಮೌಲ್ಯದ ಚಿನ್ನ ವಶ
ಇದಕ್ಕೂ ಮುನ್ನ ನ. 14ರಂದು ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಕಾಸರಗೋಡು ಮೂಲದ ಇಬ್ಬರು ಪ್ರಯಾಣಿಕರು ದೇಹದೊಳಗೆ ಚಿನ್ನವನ್ನು ಅಡಗಿಸಿಕೊಂಡು ಸಾಗಿಸುತ್ತಿದ್ದ ವೇಳೆ ಡಿಆರ್‌ಐ ಅಧಿಕಾರಿಗಳ ವಶಕ್ಕೆ ಸಿಕ್ಕಿದ್ದರು. ಅವರಿಂದ ಸುಮಾರು 1.77 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತನಿಖೆಯ ಹಿತದೃಷ್ಟಿಯಿಂದ ಬಂಧಿತ ಆರೋಪಿಗಳ ಹೆಸರುಗಳನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.

Ad Widget
Continue Reading

ಅಪರಾಧ

Cyber scam-ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಗಿಫ್ಟ್..! ಮಂಗಳೂರಿನ ವೈದ್ಯನಿಗೆ 1.65 ಲಕ್ಷ ರೂ. ಸೈಬರ್ ವಂಚನೆ

Published

on

Ad Widget

Ad Widget

Ad Widget

Ad Widget

ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆ ಎಂಬ ಆನ್‌ಲೈನ್ ಆಫರ್‌ಗೆ ಮರುಳಾದ ಶ್ರೀನಿವಾಸ ಮೆಡಿಕಲ್ ಕಾಲೇಜಿನ ಪಿಜಿ ವೈದ್ಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದಿದ್ದಾರೆ. ಉಡುಗೊರೆ ಪಡೆಯುವ ನೆಪದಲ್ಲಿ ಇನ್ಶೂರೆನ್ಸ್ ಹಾಗೂ ಇತರ ಶುಲ್ಕಗಳನ್ನು ಪಾವತಿಸುವಂತೆ ನಂಬಿಸಿದ ಖದೀಮರು ವೈದ್ಯರಿಂದ ಒಟ್ಟು 1,65,402 ರೂ. ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆ ಎಂಬ ಆನ್‌ಲೈನ್ ಆಫರ್‌ಗೆ ಮರುಳಾದ ಶ್ರೀನಿವಾಸ ಮೆಡಿಕಲ್ ಕಾಲೇಜಿನ ಪಿಜಿ ವೈದ್ಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದಿದ್ದಾರೆ. ಉಡುಗೊರೆ ಪಡೆಯುವ ನೆಪದಲ್ಲಿ ಇನ್ಶೂರೆನ್ಸ್ ಹಾಗೂ ಇತರ ಶುಲ್ಕಗಳನ್ನು ಪಾವತಿಸುವಂತೆ ನಂಬಿಸಿದ ಖದೀಮರು ವೈದ್ಯರಿಂದ ಒಟ್ಟು 1,65,402 ರೂ. ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಮಂಗಳೂರು, ನ.25: ಅ.31ರಂದು ವೈದ್ಯರು ತಮ್ಮ ಮೊಬೈಲ್‌ನಲ್ಲಿ ‘INDIA STORES FOR YOU’ ಎಂಬ ಆನ್‌ಲೈನ್ ಜಾಹೀರಾತನ್ನು ಗಮನಿಸಿದ್ದರು. ಒಂದು ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆಯಾಗಿ ನೀಡುವುದಾಗಿ ಜಾಹೀರಾತಿನಲ್ಲಿ ತಿಳಿಸಲಾಗಿತ್ತು. ಇದನ್ನು ನಂಬಿದ ಅವರು 734 ರೂ. ಪಾವತಿಸಿ ಆನ್‌ಲೈನ್ ಮೂಲಕ ಟೀ ಶರ್ಟ್ ಬುಕ್ ಮಾಡಿದ್ದರು.

Ad Widget

Ad Widget <> Ad Widget

ಅದೇ ದಿನ ಮಧ್ಯಾಹ್ನ ಸುಮಾರು 2.30 ಗಂಟೆಗೆ ಅಪರಿಚಿತ ವ್ಯಕ್ತಿಯೊಬ್ಬರು ವೈದ್ಯರಿಗೆ ಕರೆ ಮಾಡಿ, ಟೀ ಶರ್ಟ್ ಜೊತೆಗೆ ಐ-ಫೋನ್ ಕೂಡ ರವಾನೆಯಾಗಲಿದೆ ಎಂದು ತಿಳಿಸಿದ್ದರು. ಐ-ಫೋನ್‌ಗೆ ಇನ್ಶೂರೆನ್ಸ್ ಹಣ ಪಾವತಿಸಬೇಕಿದ್ದು, ಬಳಿಕ ಆ ಹಣವನ್ನು ಅವರ ಖಾತೆಗೆ ಮರಳಿ ಜಮೆ ಮಾಡಲಾಗುತ್ತದೆ ಎಂದು ನಂಬಿಸಿದ್ದರು.

ವಂಚಕರ ಮಾತು ನಂಬಿದ ವೈದ್ಯರು, ‘Gurdit Singh Bhasin And Sons’ ಹಾಗೂ ‘Rinki Urf Gopal’ ಎಂಬ ಪೇಮೆಂಟ್ ಐಡಿಗಳಿಗೆ ಫೋನ್ ಪೇ ಮೂಲಕ ಹಂತ ಹಂತವಾಗಿ 72,640 ರೂ. ವರ್ಗಾಯಿಸಿದ್ದರು.

Ad Widget

Ad Widget

ಇಷ್ಟಕ್ಕೆ ನಿಲ್ಲದ ವಂಚಕರು ನ.22ರಂದು ಮತ್ತೆ ಕರೆ ಮಾಡಿ, ಇನ್ನೂ 71,906 ರೂ. ಪಾವತಿಸುವಂತೆ ಸೂಚಿಸಿದ್ದರು. ಈ ಹಣವನ್ನೂ ಬಳಿಕ ಮರಳಿ ಜಮೆ ಮಾಡುವುದಾಗಿ ಭರವಸೆ ನೀಡಿದ್ದರಿಂದ ವೈದ್ಯರು ಅದನ್ನು ವರ್ಗಾಯಿಸಿದ್ದರು. ಬಳಿಕ ಹಣವನ್ನು IMPS ಮೂಲಕ ಮರಳಿ ಕಳುಹಿಸಲು ಕಮಿಷನ್ ಶುಲ್ಕವೆಂದು ಹೇಳಿ ಮತ್ತೆ 20,856 ರೂ. ಪಾವತಿಸಿಕೊಂಡಿದ್ದಾರೆ.

ಆದರೆ, ಈವರೆಗೆ ಯಾವುದೇ ಹಣ ವೈದ್ಯರ ಖಾತೆಗೆ ಮರಳಿಲ್ಲ. ವಂಚಕರಿಗೆ ಕರೆ ಮಾಡಿದಾಗ ಅವರು ಸ್ಪಂದಿಸದ ಹಿನ್ನೆಲೆಯಲ್ಲಿ ತಾನು ಸೈಬರ್ ವಂಚನೆಗೆ ಒಳಗಾಗಿರುವುದನ್ನು ಅರಿತ ವೈದ್ಯರು 1930 ಸೈಬರ್ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಾರೆ.

Ad Widget
Continue Reading

ಅಪರಾಧ

Renukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ

Published

on

Ad Widget

Ad Widget

Ad Widget

Ad Widget

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಪಟ್ಟಣಗೆರೆ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ಮತ್ತಿಬ್ಬರು ಸಿಬ್ಬಂದಿ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ (ಎಸ್‌ಪಿಪಿ) ಮನವಿಯ ಮೇರೆಗೆ ಇಬ್ಬರನ್ನೂ ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿ 59ನೇ ಸಿಸಿಎಚ್ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಪಟ್ಟಣಗೆರೆ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ಮತ್ತಿಬ್ಬರು ಸಿಬ್ಬಂದಿ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ (ಎಸ್‌ಪಿಪಿ) ಮನವಿಯ ಮೇರೆಗೆ ಇಬ್ಬರನ್ನೂ ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿ 59ನೇ ಸಿಸಿಎಚ್ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget alt="Ad Widget"/>

Ad Widget

ಪಟ್ಟಣಗೆರೆಯ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ಮಲ್ಲಿಕಾರ್ಜನ್ ಮತ್ತು ವಿಜಯ್ ಕುಮಾರ್ ಅವರು ಈ ಹಿಂದೆ ಪೊಲೀಸರಿಗೆ ಹಾಗೂ ನ್ಯಾಯಾಲಯದಲ್ಲಿ ಘಟನೆಯ ಕುರಿತು ಮಾಹಿತಿ ನೀಡಿದ್ದರು. ಘಟನೆ ನಡೆದ ದಿನ ಇಬ್ಬರೂ ಶೆಡ್‌ನಲ್ಲಿ ಹಾಜರಿದ್ದರು ಎನ್ನಲಾಗಿದೆ.

Ad Widget

Ad Widget <> Ad Widget

ಆದರೆ, ಮಂಗಳವಾರ ನಡೆದ ವಿಚಾರಣೆಯ ವೇಳೆ ಇಬ್ಬರೂ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ಸಾಕ್ಷ್ಯ ನೀಡಿದ್ದಾರೆ.

‘ನಾವು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದೆವು. ಬಳಿಕ ಮನೆಗೆ ತೆರಳುತ್ತಿದ್ದೆವು. ಅಂದು ಶೆಡ್‌ನಲ್ಲಿ ಇದ್ದರೂ ಕಾರಿನಲ್ಲಿ ಯಾರೆಲ್ಲ ಬಂದಿದ್ದರು ಎಂಬುದು ನಮಗೆ ತಿಳಿದಿಲ್ಲ. ಶೆಡ್‌ನಲ್ಲಿ ನಡೆದ ಘಟನೆಗಳನ್ನು ನಾವು ಕಣ್ಣಾರೆ ನೋಡಿಲ್ಲ’ ಎಂದು ನ್ಯಾಯಾಲಯದಲ್ಲಿ ಹೇಳಿದ್ದಾರೆ.

Ad Widget

Ad Widget

ಈಗಾಗಲೇ ಪಟ್ಟಣಗೆರೆ ಶೆಡ್‌ನ ಕಾವಲುಗಾರ ನರೇಂದ್ರ ಸಿಂಗ್ ಹಾಗೂ ಸಿಬ್ಬಂದಿ ಕಿರಣ್ ಕೂಡ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ಸಾಕ್ಷ್ಯ ನುಡಿದಿದ್ದರು.

ಧನ್ವಿರ್‌ಗೆ ನ.30ರಂದು ಸಿಸಿಬಿ ಮುಂದೆ ಹಾಜರಾಗಲು ಹೈಕೋರ್ಟ್ ಸೂಚನೆ
ಇನ್ನೊಂದೆಡೆ, ಪರಪ್ಪನ ಅಗ್ರಹಾರ ಜೈಲಿನ ವಿಡಿಯೊ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧನ್ವಿರ್ ಅವರು ನವೆಂಬರ್ 30ರಂದು ಬೆಳಿಗ್ಗೆ 11 ಗಂಟೆಗೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.

ತಮ್ಮನ್ನು ಆರೋಪಿಯನ್ನಾಗಿ ಹೆಸರಿಸಿರುವ ಪ್ರಕರಣದಲ್ಲಿ ಬೆಂಗಳೂರಿನ ಒಂದನೇ ಹೆಚ್ಚುವರಿ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನವೆಂಬರ್ 18ರಂದು ಹೊರಡಿಸಿರುವ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಧನ್ವಿರ್ ಗೌಡ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ನಡೆಸಿತು.

ವಿಚಾರಣೆ ವೇಳೆ ರಾಜ್ಯದ ಹೆಚ್ಚುವರಿ ಪ್ರಾಸಿಕ್ಯೂಟರ್ ಅನೂಪ್ ಕುಮಾರ್ ಅವರು, ಅರ್ಜಿದಾರರ ವಿರುದ್ಧದ ವಾರಂಟ್‌ಗೆ ಹೈಕೋರ್ಟ್ ತಡೆ ನೀಡಿದ್ದರೂ ಅವರು ತನಿಖೆಗೆ ಸಹಕರಿಸುತ್ತಿಲ್ಲ. ಆದ್ದರಿಂದ ತನಿಖಾಧಿಕಾರಿಗಳ ಮುಂದೆ ಹಾಜರಾಗಿ ವಿಚಾರಣೆಗೆ ಸಹಕರಿಸುವಂತೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.

ಇದನ್ನು ಪರಿಗಣಿಸಿದ ನ್ಯಾಯಪೀಠ, ನವೆಂಬರ್ 30ರಂದು ಬೆಳಿಗ್ಗೆ 11 ಗಂಟೆಗೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗುವಂತೆ ಧನ್ವಿರ್‌ಗೆ ಸೂಚಿಸಿ, ಮುಂದಿನ ವಿಚಾರಣೆಯನ್ನು ಡಿಸೆಂಬರ್ 2ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಸುತ್ತಿದ್ದ ದೃಶ್ಯಗಳು ಬಹಿರಂಗಗೊಂಡ ಪ್ರಕರಣವನ್ನು ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ವಿಡಿಯೊ ಹರಿದಾಡಲು ನಟ ಧನ್ವಿರ್ ಅವರ ಮೊಬೈಲ್ ಬಳಕೆಯಾಗಿರುವ ಶಂಕೆಯ ಹಿನ್ನೆಲೆಯಲ್ಲಿ ಅವರನ್ನು ತನಿಖೆಗೆ ಒಳಪಡಿಸಲಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!