Connect with us

ದಕ್ಷಿಣ ಕನ್ನಡ

ಹೊಸ ʼದಿಗಂತʼ ದೆಡೆಗೆ ಪುತ್ತೂರು ತಾಲೂಕು ಪತ್ರಕರ್ತರ ಸಂಘ – ನೂತನ ಅಡಳಿತ ಮಂಡಳಿಯ ರಚನೆ | ಅಧ್ಯಕ್ಷರಾಗಿ ಐ.ಬಿ. ಸಂದೀಪ್ ಕುಮಾರ್ ಆಯ್ಕೆ

Published

on

Ad Widget

Ad Widget

Ad Widget

Ad Widget

ಪುತ್ತೂರು : ನ 19 :  ಸರಿ ಸುಮಾರು 2 ವರ್ಷಗಳ ಬಳಿಕ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ನೂತನ  ಆಡಳಿತ ಮಂಡಳಿಯ ರಚನೆ ಪುತ್ತೂರು ಪತ್ರಿಕಾಭವನದಲ್ಲಿ ನ 19 ರಂದು ನಡೆಯಿತು. ಈ ಮೂಲಕ ಹಲವು ಸಮಯಗಳಿಂದ ಅತಂತ್ರವಾಗಿದ್ದ ಪುತ್ತೂರು ಪತ್ರಕರ್ತರ ಹೊಸ ದಿಂಗತದೆಡೆಗೆ ಚಲಿಸಲು ಆರಂಭಿಸಿದೆ. ಸಂಘದ ನೂತನ ಅಧ್ಯಕ್ಷರಾಗಿ ಹೊಸದಿಗಂತ ಪತ್ರಿಕೆಯ ಹಿರಿಯ ವರದಿಗಾರ  ಐ.ಬಿ.ಸಂದೀಪ್ ಕುಮಾರ್ ನೇಮಕಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಶನಿವಾರ ಬೆಳಿಗ್ಗೆ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಸರ್ವ ಸದಸ್ಯರ ಸಭೆ ಪುತ್ತೂರು ಪತ್ರಿಕಾಭವನದಲ್ಲಿ ನಡೆಯಿತು. ಸಭೆಯಲ್ಲಿ ಹಾಜರಿದ್ದ ಸರ್ವ ಸದಸ್ಯರ ಆಗ್ರಹದ ಮೇರೆಗೆ ಹಿರಿಯ ಸದಸ್ಯ ಐ.ಬಿ. ಸಂದೀಪ್ ಕುಮಾರ್ ನೇತೃತ್ವದಲ್ಲಿ  ಈ ಸಭೆ ಆಯೋಜಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

 ಹಲವು ಸಮಯಗಳಿಂದ ಅತಂತ್ರವಾಗಿದ್ದ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡುವಂತೆ ಸದಸ್ಯರ ಸಭೆಯಲ್ಲಿ ನಡೆಸುವಂತೆ ಸದಸ್ಯರು ಆಗ್ರಹಿಸಿದರು. ಈ ಹಿನ್ನಲೆಯಲ್ಲಿ  ಪುತ್ತೂರು ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

Ad Widget

Ad Widget <> Ad Widget

ಸಂಘದ ಅಧ್ಯಕ್ಷರಾಗಿ ಹೊಸದಿಗಂತ ಪತ್ರಿಕೆಯ ಐ.ಬಿ.ಸಂದೀಪ್ ಕುಮಾರ್, ಉಪಾಧ್ಯಕ್ಷರಾಗಿ ವಿಜಯ ಕರ್ನಾಟಕದ ಕುಮಾರ್ ಕಲ್ಲಾರೆ,  ಕಾರ್ಯದರ್ಶಿಯಾಗಿ ನ್ಯೂಸ್ 18 ಕನ್ನಡ ವರದಿಗಾರ ಅಜಿತ್ ಕುಮಾರ್, ಜತೆ ಕಾರ್ಯದರ್ಶಿಯಾಗಿ ಹೊಸದಿಗಂತ ಪತ್ರಿಕೆಯ ರಾಜೇಶ್ ಪಟ್ಟೆ, ಖಜಾಂಚಿಯಾಗಿ ದೈಜಿ ವರ್ಲ್ಡ್ ಚಾನಲ್ ವರದಿಗಾರ ಕೃಷ್ಣಪ್ರಸಾದ್ ಬಲ್ನಾಡು ಅವರನ್ನು ಆಯ್ಕೆ ಮಾಡಲಾಯಿತು.

ಕಾನೂನು ಸಲಹೆಗಾರರಾಗಿ ನರಸಿಂಹ ಪ್ರಸಾದ್

Ad Widget

Ad Widget

 

ಸಂಘದ ಕಾನೂನು ಸಲಹೆಗಾರರಾಗಿ ಖ್ಯಾತ ನ್ಯಾಯವಾದಿಗಳಾದ ನರಸಿಂಹ ಪ್ರಸಾದ್ ಅವರನ್ನು ಆಯ್ಕೆ ಮಾಡಲಾಯಿತು. ಪತ್ರಿಕಾ ಕಛೇರಿಯ ಮೆನೇಜರ್ ಆಗಿ ವಿ ಫೋರ್ ವರದಿಗಾರ ಪ್ರವೀಣ್ ಕುಮಾರ್ ಬೊಳುವಾರು ಅವರನ್ನು ಮುಂದುವರಿಸಲು ತೀರ್ಮಾನಿಸಲಾಯಿತು.

Alto K10 S-CNG: ಮತ್ತೊಂದು ಅಗ್ಗದ ಕಾರು ಬಿಡುಗಡೆ ಮಾಡಿದ ಮಾರುತಿ – 34 ಕಿ.ಮೀ ಮೈಲೇಜ್ ; ದರ ಮತ್ತು ಇತರೆ ವಿವರ ಇಲ್ಲಿದೆ

Ad Widget
Click to comment

Leave a Reply

ಶಿಕ್ಷಣ

Narendra-ನ.28 : ನರೇಂದ್ರ ಪ.ಪೂ.ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ “ಪ್ರತಿಭಾ ಪರ್ವ”

Published

on

Ad Widget

Ad Widget

Ad Widget

Ad Widget

2026-27 ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಸಂಭ್ರಮ “ ಪ್ರತಿಭಾ ಪರ್ವ” ಕಾರ‍್ಯಕ್ರಮವು ನವೆಂಬರ್ 28 , ಶನಿವಾರದಂದು ತೆಂಕಿಲದ ನರೇಂದ್ರ ಪ.ಪೂ. ಕಾಲೇಜಿನ ಹಂಸಧ್ವನಿ ಸಭಾಂಗಣದಲ್ಲಿ ಅಪರಾಹ್ನ 2 ಗಂಟೆಯಿಂದ ಪ್ರಾರಂಭಗೊಳ್ಳಲಿದೆ. ಅಪರಾಹ್ನ 3 ಗಂಟೆಯಿಂದ ಸಭಾ ಕಾರ‍್ಯಕ್ರಮ ನಡೆಯಲಿದ್ದು ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಶ ನಾಯಕ್ ಬಿ.ಸಿ. ಇವರು ವಹಿಸಿಕೊಳ್ಳಲಿದ್ದಾರೆ.

Ad Widget

Ad Widget

Ad Widget

Ad Widget

ಶಿಕ್ಷಣದ ಮೂಲಕ ಸಾಮಾಜಿಕ ಬದಲಾವಣೆಯ ಮಹತ್ತರ ಉದ್ದೇಶವನ್ನಿಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿರುವ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಘಟಕವಾದ ನರೇಂದ್ರ ಪದವಿ ಪೂರ್ವ ಕಾಲೇಜು ಶಿಕ್ಷಣದ ಮೂಲಕ ವಿದ್ಯಾರ್ಥಿಯ ಬೌಧ್ಧಿಕ, ಸಾಮಾಜಿಕ, ಭೌತಿಕ, ಆರ್ಥಿಕ, ಧಾರ್ಮಿಕ, ಸಾಂಸ್ಕೃತಿಕ, ನೈತಿಕ,ಆಧ್ಯಾತ್ಮಿಕ ಮೌಲ್ಯಗಳಿಂದ ಪ್ರಬಲವಾಗಿರುವ ಬುದ್ಧಿಶಕ್ತಿಯನ್ನು ಉತ್ತೇಜಿಸಿ ಸದೃಢರನ್ನಾಗಿ ಬೆಳೆಸುವ ಉದ್ದೇಶವನ್ನು ಹೊಂದಿದೆ.

Ad Widget

Ad Widget alt="Ad Widget"/>

Ad Widget

2017ರಲ್ಲಿ ತೆಂಕಿಲದ ವಿವೇಕನಗರದಲ್ಲಿ ಸ್ಥಾಪನೆಗೊಂಡ ಸಂಸ್ಥೆ ನರೇಂದ್ರ ಪದವಿ ಪೂರ್ವ ಕಾಲೇಜು ಇದೀಗ ಒಂಬತ್ತು ವರ್ಷಗಳ ಯಶಸ್ವಿ ಪಯಣವನ್ನು ಪೂರೈಸಿ, ಹತ್ತನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಶುಭ ಸಂಭ್ರಮದಲ್ಲಿದೆ.

Ad Widget

Ad Widget <> Ad Widget

2026-27 ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಸಂಭ್ರಮ “ ಪ್ರತಿಭಾ ಪರ್ವ” ಕಾರ‍್ಯಕ್ರಮವು ನವೆಂಬರ್ 28 , ಶನಿವಾರದಂದು ತೆಂಕಿಲದ ನರೇಂದ್ರ ಪ.ಪೂ. ಕಾಲೇಜಿನ ಹಂಸಧ್ವನಿ ಸಭಾಂಗಣದಲ್ಲಿ ಅಪರಾಹ್ನ 2 ಗಂಟೆಯಿಂದ ಪ್ರಾರಂಭಗೊಳ್ಳಲಿದೆ. ಅಪರಾಹ್ನ 3 ಗಂಟೆಯಿಂದ ಸಭಾ ಕಾರ‍್ಯಕ್ರಮ ನಡೆಯಲಿದ್ದು ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಶ ನಾಯಕ್ ಬಿ.ಸಿ. ಇವರು ವಹಿಸಿಕೊಳ್ಳಲಿದ್ದಾರೆ.

ಮುಖ್ಯಅತಿಥಿಯಾಗಿ ಕರ್ನಾಟಕ ಹೈಕೋರ್ಟ್ನ ಹಿರಿಯ ವಕೀಲರು, ಕರ್ನಾಟಕದ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಮತ್ತು ಕರ್ನಾಟಕ ಬ್ಯಾಂಕ್ ಲಿಮಿಟೆಡ್ ನ ಸ್ವತಂತ್ರ ನಿರ್ದೇಶಕರು ಮತ್ತು ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ನೂತನ ಆಡಳಿತ ಮಂಡಳಿಯ ಸದಸ್ಯರಾದ ಡಾ. ಎಮ್. ಅರುಣ್ ಶ್ಯಾಮ್ ರವರು ಭಾಗವಹಿಸಲಿದ್ದಾರೆ. ಇನ್ನೋರ್ವ ಅತಿಥಿಯಾಗಿ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ರವೀಂದ್ರ ಪಿ. ಇವರು ಭಾಗವಹಿಸಲಿದ್ದಾರೆ.

Ad Widget

Ad Widget

ನವೆಂಬರ್ 28 ರಂದು ಅಪರಾಹ್ನ 2 ಗಂಟೆಯಿಂದ ವಿದ್ಯಾರ್ಥಿ ಸಾಧಕರಿಗೆ ಅಭಿನಂದನಾ ಸಮಾರಂಭ ಮತ್ತು ಪ್ರಸಕ್ತ ಸಾಲಿನಲ್ಲಿ ಶೈಕ್ಷಣಿಕವಾಗಿ, ಸಾಂಸ್ಕೃತಿಕ ,ಕ್ರೀಡೆ ಮತ್ತು ಇನ್ನಿತರ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ‍್ಯಕ್ರಮ“ ಪ್ರತಿಭಾ ಪುರಸ್ಕಾರ” ನಡೆಯಲಿದೆ. ಈ ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಮಹಾಲಕ್ಷ್ಮೀ ಕೆ. ಇವರು ವಹಿಸಿಕೊಳ್ಳಲಿದ್ದಾರೆ.

ಮುಖ್ಯಅತಿಥಿಗಳಾಗಿ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳು ನರಿಮೊಗರು ಪುತ್ತೂರು ಇಲ್ಲಿನ ಮುಖ್ಯಗುರುಗಳಾದ ಪ್ರಸನ್ನ ಕೆ. ಅವರು ಭಾಗವಹಿಸಲಿದ್ದಾರೆ. ನರೇಂದ್ರ ಪ.ಪೂ. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಶ ನಾಯಕ್ ಬಿ.ಸಿ. , ಸದಸ್ಯರಾದ ಸತ್ಯನಾರಾಯಣ ಬಿ., ರಮೇಶ ನಾಯಕ್ ಕೆ., ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಗುಣಪಾಲ, ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ತೀರ್ಥರಾಜ್ ಕೆ. ಉಪಸ್ಥಿತಿ ಇರಲಿದ್ದಾರೆ. ಮತ್ತು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ದ್ವಿತೀಯ ವಿಜ್ಞಾನ ವಿಭಾಗದ ಶ್ರೀಶಾನ್ ಡಿ.ಕೆ., ಕನ್ನಿಕಾ ಕೆ.ಆರ್., ಪ್ರಥಮ ವಿಜ್ಞಾನ ವಿಭಾಗದ ಜೆ.ಶೃಜಾ ಭಾಗವಹಿಸಲಿದ್ದಾರೆ.ಸಭಾಕರ‍್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕರ‍್ಯಕ್ರಮಗಳು ನಡೆಯಲಿದೆ. ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Ad Widget
Continue Reading

ಅಪರಾಧ

Punacha-ಪುಣಚದಲ್ಲಿ ಬೈಕ್‌ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?

Published

on

Ad Widget

Ad Widget

Ad Widget

Ad Widget

ಪುಣಚದಲ್ಲಿ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ. ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪುಣಚದಲ್ಲಿ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಬೈಕ್ ಸವಾರ ನಿಧಾನವಾಗಿ ರಸ್ತೆ ಏರುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಾಯಗೊಂಡಿದ್ದು, ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಅಪಘಾತದ ದೃಶ್ಯಗಳು ಸಮೀಪದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಪಘಾತಕ್ಕೆ ಕಾರಣವಾದ ಕಾರು ಹಾಗೂ ಅದರ ಚಾಲಕನ ಪತ್ತೆಗೆ ಈ ದೃಶ್ಯಗಳು ಸಹಕಾರಿಯಾಗುವ ಸಾಧ್ಯತೆಯಿದೆ.

ಇನ್ನು ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕನ ಬಗ್ಗೆ ಸ್ಥಳೀಯವಾಗಿ ವಿವಿಧ ಚರ್ಚೆಗಳು ನಡೆಯುತ್ತಿದ್ದು, ಅಪಘಾತದ ವೇಳೆ ಚಾಲಕ ಮದ್ಯದ ಅಮಲಿನಲ್ಲಿದ್ದನೇ ಎಂಬ ಬಗ್ಗೆಯೂ ಆರೋಪಗಳು ಕೇಳಿಬಂದಿವೆ. ಆದರೆ ಈ ಆರೋಪಗಳಿಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.

Ad Widget

Ad Widget

ಅಪಘಾತದ ಕುರಿತು ಸಂಬಂಧಪಟ್ಟ ಪೊಲೀಸ್ ಇಲಾಖೆ ಪರಿಶೀಲನೆ ನಡೆಸಿ, ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಆಧರಿಸಿ ವಾಹನ ಹಾಗೂ ಚಾಲಕನನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಗಾಯಾಳುವಿನ ಆರೋಗ್ಯ ಸ್ಥಿತಿ, ಅಪಘಾತಕ್ಕೆ ನಿಖರ ಕಾರಣ ಹಾಗೂ ಕಾರು ಚಾಲಕನ ಕುರಿತು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

Ad Widget
Continue Reading

ಅಪರಾಧ

Punacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!

Published

on

Ad Widget

Ad Widget

Ad Widget

Ad Widget

ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

Ad Widget

Ad Widget

Ad Widget

Ad Widget

ವಿಟ್ಲ: ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

Ad Widget

Ad Widget alt="Ad Widget"/>

Ad Widget

2024ರ ಡಿಸೆಂಬರ್ 11ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚದಲ್ಲಿ ಈ ಘಟನೆ ನಡೆದಿತ್ತು. ಆರೋಪಿ ಸಂಜೀವ ನಾಯ್ಕ ತನ್ನ ಪತ್ನಿಗೆ ಹೃದಯಾಘಾತವಾಗಿದೆ ಎಂದು ನೆರೆಮನೆಯವರನ್ನು ನಂಬಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಮಹಿಳೆ ಮೃತಪಟ್ಟಿರುವುದಾಗಿ ಘೋಷಿಸಿದ್ದರು.

Ad Widget

Ad Widget <> Ad Widget

ಮೃತದೇಹದ ಮೇಲೆ ಅನುಮಾನಾಸ್ಪದ ಗಾಯದ ಗುರುತುಗಳು ಕಂಡುಬಂದ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಸಂಶಯಾಸ್ಪದ ಸಾವು ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ವಿಟ್ಲ ಪೊಲೀಸ್ ಠಾಣೆಯ ನಿರೀಕ್ಷಕ ಹೆಚ್.ಇ. ನಾಗರಾಜ್ ಅವರು ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿ ಸಂಜೀವ ನಾಯ್ಕ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

Ad Widget

Ad Widget

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಿಎನ್‌ಎಸ್ ಕಲಂ 105 ಭಾಗ-2ರ ಅಡಿಯಲ್ಲಿ ಆರೋಪಿಗೆ 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ 6 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ.

ಅಲ್ಲದೆ, ಬಿಎನ್‌ಎಸ್ ಕಲಂ 240ರ ಅಡಿಯಲ್ಲಿ ಸಾಕ್ಷ್ಯನಾಶ ಹಾಗೂ ಸುಳ್ಳು ಮಾಹಿತಿ ನೀಡಿದ ಅಪರಾಧಕ್ಕೆ 6 ತಿಂಗಳ ಸಾದಾ ಜೈಲು ಶಿಕ್ಷೆಯನ್ನೂ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯ್ಕ ವಾದ ಮಂಡಿಸಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!