ಅಪರಾಧ
ಮಂಗಳೂರು : ಬೇರೆಡೆ ಹೋಗಿ ಬಾಂಬ್ ಬ್ಲಾಸ್ಟ್ ಮಾಡುವ ಉದ್ದೇಶ ಹೊಂದಿದ್ದ, ಆದರೇ ಅದು ಆಟೋದಲ್ಲಿಯೇ ಸ್ಪೋಟಗೊಂಡಿತ್ತು : ಎಡಿಜಿಪಿ ಸ್ಪಷ್ಟನೆ
Mangalore Bomb Blast : ನ 20 : ಮಂಗಳೂರಿನ ಕಂಕನಾಡಿ ಸಮೀಪ ಆಟೋ ರಿಕ್ಷಾದಲ್ಲಿ ಸಂಭವಿಸಿದ ನಿಗೂಢ ಸ್ಪೋಟಕ್ಕೆ (Mangaluru Auto Blast Case) ಸಂಬಂಧಿಸಿದಂತೆ, ಆಟೋ ಪ್ರಯಾಣಿಕ ಬೇರೆಡೆ ಹೋಗಿ ಬಾಂಬ್ ಬ್ಲಾಸ್ಟ್ ಮಾಡುವ ಉದ್ದೇಶ ಹೊಂದಿದ್ದರು. ಆದರೆ ಆಕಸ್ಮಿಕವಾಗಿ ಆಟೋದಲ್ಲಿ ಬಾಂಬ್ ಬ್ಲಾಸ್ಟ್ ಆಗಿದೆ ಎಂದು ಎಡಿಜಿಪಿ ಅಲೋಕ್ಕುಮಾರ್ (ADGP Alok Kumar) ಹೇಳಿದ್ದಾರೆ.ರಾಜ್ಯಾದ್ಯಂತ ಆತಂಕಕ್ಕೆ ಕಾರಣವಾಗಿರುವ ಮಂಗಳೂರು ಸ್ಫೋಟ ಪ್ರಕರಣದ ತನಿಖೆ ಚುರುಕುಗೊಂಡಿದೆ.
ಶಂಕಿತ ಉಗ್ರನ ಜಾಡು ಹಿಡಿದು ಹೊರಟಿರುವ ಪೊಲೀಸರು ಅನೇಕ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಮಂಗಳೂರಿನಲ್ಲಿ ಬಾಂಬ್ ಸ್ಪೋಟ ಮಾಡಿರುವ ಶಂಕಿತ ಉಗ್ರ ಮೈಸೂರಿನ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದ ಎಂಬ ವಿಷಯ ತನಿಖೆಯಲ್ಲಿ ತಿಳಿದು ಬಂದಿದೆ. ತುಮಕೂರಿನಲ್ಲಿ ರೈಲ್ವೆ ಉದ್ಯೋಗಿಯಾಗಿರುವ ಪ್ರೇಮ್ರಾಜ್ ಎಂಬುವವರ ಆಧಾರ್ ಕಾರ್ಡ್ ನೀಡಿ ಶಂಕಿತ ಅಲ್ಲಿ ರೂಮ್ ಬಾಡಿಗೆ ಪಡೆದಿದ್ದ. ಶಂಕಿತ ಮೂಲತ: ಶಿವಮೊಗ್ಗದವನಾಗಿದ್ದು ಆತನ ಮೂಲ ಹೆಸರು ಇರ್ಫಾನ್ ಎಂದು ಹೇಳಲಾಗಿದೆ.
ಮೈಸೂರಿನ ಲೋಕನಾಯಕನಗರದ 10 ನೇ ಕ್ರಾಸ್ನಲ್ಲಿರುವ ಮೋಹನ್ ಕುಮಾರ್ ಎಂಬುವವರ ಮನೆ ಬಾಡಿಗೆ ಪಡೆದಿರುವ ಶಂಕಿತ ಉಗ್ರ ಮಂಗಳೂರಿನಲ್ಲಿ ಈ ಕೃತ್ಯ ಎಸಗಿದ್ದಾನೆ. ಬಾಡಿಗೆ ಮನೆ ಅಗ್ರಿಮೆಂಟ್ಗೆ ತುಮಕೂರಿನಲ್ಲಿ ರೈಲ್ವೆ ಉದ್ಯೋಗಿಯಾಗಿರುವ ಪ್ರೇಮ್ರಾಜ್ ಎಂಬುವವರ ಆಧಾರ್ ಕಾರ್ಡ್ ನೀಡಿದ್ದಾನೆ. ಶಂಕಿತ ಉಗ್ರ ಹಲವು ದಿನ ಇಲ್ಲಿಯೇ ವಾಸವಿದ್ದನು ಎಂಬ ಮಾಹಿತಿ ಸಿಕ್ಕಿದೆ.
Mangalore Blast | ಮಂಗಳೂರು: ಅಟೋ ರಿಕ್ಷಾದಲ್ಲಿ ಸ್ಪೋಟ – ಇಬ್ಬರಿಗೆ ಗಾಯ : ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಪ್ರೇಮರಾಜ್ ರೈಲ್ವೆ ಇಲಾಖೆಯಲ್ಲಿ ಡಿ ಗ್ರೂಪ್ ನೌಕರನಾಗಿದ್ದು, ತುಮಕೂರಿನಲ್ಲಿ ಟ್ರ್ಯಾಕ್ ಮೆಂಟೇನರ್ ಆಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೂ ಈ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಐಜಿಪಿ ಪ್ರವೀಣ್ ಸೂದ್ ಸ್ಪಷ್ಟನೆ ನೀಡಿದರು. ಪ್ರೇಮರಾಜ್ ಇತ್ತೀಚೆಗೆ ಶಿಕ್ಷಕರ ಹುದ್ದೆ ಪರೀಕ್ಷೆ ಬರೆದು ಅದರಲ್ಲಿ ತೇರ್ಗಡೆಯಾಗಿದ್ದು, ಅದಕ್ಕಾಗಿ ದಾಖಲಾತಿಗಳ ಪರಿಶೀಲನೆ ನಡೆದಿದೆ. ಅದರಲ್ಲಿ ಆತ ಮಗ್ನನಾಗಿದ್ದಾನೆ. ಆರು ತಿಂಗಳ ಹಿಂದಷ್ಟೇ ಹಾವೇರಿಗೆ ಪರೀಕ್ಷೆ ಬರೆಯಲು ಹೋಗಿದ್ದಾಗ ಆಧಾರ ಕಾರ್ಡ್ ಕಳೆದುಕೊಂಡಿದ್ದ ಎಂದು ತಿಳಿದುಬಂದಿದೆ.
ಸ್ಪೋಟದಲ್ಲಿ ಶಂಕಿತ ಉಗ್ರನಿಗೆ ಶೇ 60 ರಷ್ಟು ಸುಟ್ಟ ಗಾಯಗಳಾಗಿವೆ. ರೂಮ್ ಬಾಡಿಗೆ ಪಡೆಯುವ ವೇಳೆ ತಾನು ಹುಬ್ಬಳ್ಳಿಯವನು ಅಂತ ಸುಳ್ಳು ಹೇಳಿ ಮಾಲೀಕ ಮೋಹನ್ ಕುಮಾರ್ ಎಂಬುವವರಿಂದ ಶಂಕಿತ ಉಗ್ರ ರೂಮ್ ಬಾಡಿಗೆ ಪಡೆದಿದ್ದಾನೆ. ಇದ್ದಷ್ಟು ದಿನ ಯಾರಿಗೂ ಅನುಮಾನ ಬಾರದಂತೆ ಶಂಕಿತ ಚಾಣಾಕ್ಷನ ರೀತಿ ವರ್ತಿಸಿದ್ದಾನೆ.
ಒಬ್ಬ ವಶಕ್ಕೆ
ಮಂಗಳೂರು ಸ್ಫೋಟಕ್ಕೆ ಸಂಬಂಧಿಸಿದಂತೆ ಮೈಸೂರಲ್ಲಿ ಒಬ್ಬನನ್ನ ವಶಕ್ಕೆ ಪಡೆಯಲಾಗಿದೆ. ಶಂಕಿತ ಭಯೋತ್ಪಾದಕನಿಗೆ ಮೊಬೈಲ್ ನೀಡಿದ ವ್ಯಕ್ತಿಯನ್ನು ಮೇಟಗಳ್ಳಿ ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಮೈಸೂರಿಗೆ ಬಂದ ಮಂಗಳೂರು ಪೊಲೀಸರ ತಂಡ ಹಲವರನ್ನ ವಿಚಾರಣೆಗೊಳಪಡಿಸಿದೆ. ಮಂಗಳೂರು ಮತ್ತು ಮೈಸೂರು ಪೊಲೀಸರು ಜಂಟಿಯಾಗಿ ವಿಚಾರಣೆ ಕೈಗೊಂಡಿದ್ದು, ಮಹತ್ವದ ಸುಳಿವು ಸಿಕ್ಕಿದೆ. ಶಂಕಿತ ಆರೋಪಿಗೆ 10ಕ್ಕೂ ಹೆಚ್ಚು ಮೊಬೈಲ್ಗಳನ್ನು ನೀಡಿರುವುದಾಗಿ ಪೊಲೀಸ್ ವಶದಲ್ಲಿರುವ ವ್ಯಕ್ತಿ ಮಾಹಿತಿ ನೀಡಿದ್ದಾನೆ.
ಪೊಲೀಸರು ರೂಮ್ ಪರಿಶೀಲನೆ ವೇಳೆ ಎರಡು ನಕಲಿ ಆಧಾರ್ ಕಾರ್ಡ್ ಹಾಗೂ 1 ಪ್ಯಾನ್ ಕಾರ್ಡ್ ಕೂಡ ಸಿಕ್ಕಿದೆ. ಸ್ಮಾಲ್ ಬೋಲ್ಟ್, ಸರ್ಕ್ಯೂಟ್ ಬೋರ್ಡ್, ಬ್ಯಾಟರಿ , ಮೊಬೈಲ್ , ವೈರ್ , ಮಿಕ್ಸರ್ ಜಾರ್ ಸೇರಿದಂತೆ ಇನ್ನೂ ಅನೇಕ ವಸ್ತುಗಳು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.
ಏನಿದು ಘಟನೆ :
ಮಂಗಳೂರು ಕಂಕನಾಡಿ ರೈಲು ನಿಲ್ದಾಣದ ಕಡೆಯಿಂದ ಸಂಜೆ 4.30ರ ಸುಮಾರಿಗೆ ಬರುತ್ತಿದ್ದ ಆಟೋ ರಿಕ್ಷಾಕ್ಕೆ ನಾಗುರಿಯಲ್ಲಿ ಓರ್ವ ಹತ್ತಿದ್ದು ಆತ ಪಂಪ್ವೆಲ್ ಕಡೆಗೆ ಹೋಗುವಂತೆ ಚಾಲಕನಿಗೆ ಸೂಚಿಸಿದ್ದ. ಅದರಂತೆ ರಿಕ್ಷಾ ಸಂಚರಿಸುತ್ತಿದ್ದಾಗ ಘಟನೆ ಸಂಭವಿಸಿದೆ. ರಿಕ್ಷಾದಲ್ಲಿ ಸ್ಫೋಟಗೊಂಡ ಸ್ಥಿತಿಯಲ್ಲಿ ಕುಕ್ಕರ್ ಪತ್ತೆಯಾಗಿದೆ. ಆಟೋರಿಕ್ಷಾದ ಒಳಗಿನ ಕೆಲವು ಭಾಗ ಗಳು ಸುಟ್ಟು ಹೋಗಿವೆ.
ಅಂತರ ರಾಜ್ಯ
Honeytrap-ಪಾಕ್ ಮಹಿಳೆಯಿಂದ ಹನಿಟ್ರ್ಯಾಪ್: ರಹಸ್ಯ ಮಾಹಿತಿ ಸೋರಿಕೆ ಮಾಡಿದ ನೌಕಾಪಡೆ ಸಿಬ್ಬಂದಿ ಬಂಧನ
ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ನೌಕಾಪಡೆಯ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಪಾಕಿಸ್ತಾನದ ಮಹಿಳೆಯೊಬ್ಬರು ನಡೆಸಿದ ‘ಹನಿಟ್ರ್ಯಾಪ್’ಗೆ ಸಿಲುಕಿ ಆರೋಪಿ ರಹಸ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ಬಂಧಿತನನ್ನು ಪಶ್ಚಿಮ ಬಂಗಾಳ ಮೂಲದ ಪ್ರದೀಪ್ ಮುಖರ್ಜಿ ಎಂದು ಗುರುತಿಸಲಾಗಿದೆ.
ಕೊಯಮತ್ತೂರು: ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ನೌಕಾಪಡೆಯ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಪಾಕಿಸ್ತಾನದ ಮಹಿಳೆಯೊಬ್ಬರು ನಡೆಸಿದ ‘ಹನಿಟ್ರ್ಯಾಪ್’ಗೆ ಸಿಲುಕಿ ಆರೋಪಿ ರಹಸ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಬಂಧಿತನನ್ನು ಪಶ್ಚಿಮ ಬಂಗಾಳ ಮೂಲದ ಪ್ರದೀಪ್ ಮುಖರ್ಜಿ (31) ಎಂದು ಗುರುತಿಸಲಾಗಿದೆ. 2014ರಲ್ಲಿ ನೌಕಾಪಡೆಗೆ ಸೇರ್ಪಡೆಯಾಗಿದ್ದ ಮುಖರ್ಜಿ, ವಿಶಾಖಪಟ್ಟಣದಲ್ಲಿರುವ ಈಸ್ಟರ್ನ್ ನೇವಲ್ ಕಮಾಂಡ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಎನ್ನಲಾಗಿದೆ.
ಕೆಲವು ತಿಂಗಳ ಹಿಂದೆ ಪಾಕಿಸ್ತಾನದ ಗುಪ್ತಚರ ಏಜೆಂಟ್ ಎಂದು ಶಂಕಿಸಲಾಗಿರುವ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದ ಮೂಲಕ ಮುಖರ್ಜಿಯನ್ನು ಸಂಪರ್ಕಿಸಿದ್ದಳು. ಬಳಿಕ ಆಕೆಯೊಂದಿಗೆ ಸಂಪರ್ಕ ಬೆಳೆಸಿಕೊಂಡಿದ್ದ ಆತ, ನೌಕಾಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಆಕೆಗೆ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಈ ಪ್ರಕರಣದ ಕುರಿತು ತನಿಖೆ ಮುಂದುವರಿದಿದ್ದು, ಹನಿಟ್ರ್ಯಾಪ್ ಮೂಲಕ ಭಾರತದ ಭದ್ರತೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಳ್ಳಲಾಗಿತ್ತೇ ಎಂಬ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಪಾಕಿಸ್ತಾನಕ್ಕೆ ಮಾಹಿತಿ ಸೋರಿಕೆ ಆರೋಪ: ಅಸ್ಸಾಂನಲ್ಲಿ ಇಬ್ಬರ ಬಂಧನ
ಗುವಾಹಟಿ: ಪಾಕಿಸ್ತಾನಕ್ಕೆ ಭಾರತೀಯ ಸೇನೆಗೆ ಸಂಬಂಧಿಸಿದ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದ ಆರೋಪದ ಮೇಲೆ ಅಸ್ಸಾಂನಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರ ಪೈಕಿ ಒಬ್ಬರು ನಿವೃತ್ತ ಯೋಧ ಎಂದು ತಿಳಿದುಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವ ಶರ್ಮಾ, ಬಂಧಿತರನ್ನು ಶೀಘ್ರದಲ್ಲೇ ಕೇಂದ್ರ ತನಿಖಾ ಸಂಸ್ಥೆಗಳ ವಶಕ್ಕೆ ಒಪ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ಅಪರಾಧ
Puttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
ಅಕ್ರಮವಾಗಿ ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಸಾಗಿಸುತ್ತಿದ್ದ ವಾಹನವನ್ನು ಸಂಪ್ಯ ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿದ್ದು, 11 ಗೋವುಗಳನ್ನು ರಕ್ಷಿಸಿದ್ದಾರೆ ಹಾಗೂ ಒರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ವೇಳೆ ಇಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಪುತ್ತೂರು: ಅಕ್ರಮವಾಗಿ ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಸಾಗಿಸುತ್ತಿದ್ದ ವಾಹನವನ್ನು ಸಂಪ್ಯ ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿದ್ದು, 11 ಗೋವುಗಳನ್ನು ರಕ್ಷಿಸಿದ್ದಾರೆ ಹಾಗೂ ಒರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ವೇಳೆ ಇಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರಿಂದ ಪೊಲೀಸರಿಗೆ ದೊರೆತ ಮಾಹಿತಿಯ ಆಧಾರದ ಮೇಲೆ ಸಂಪ್ಯ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ.
ಪುತ್ತೂರು ತಾಲೂಕಿನ ಕುಂಜೂರುಪಂಜ ದೇವಶ್ಯದ ಮಯ್ಯ ಫಾರ್ಮ್ಸ್ನಿಂದ ಮುಂಜಾನೆ ಸುಮಾರು 3 ಗಂಟೆಗೆ ಬುಳೇರಿಕಟ್ಟೆ ಮಾರ್ಗವಾಗಿ ಗೋವುಗಳನ್ನು ಕೇರಳದತ್ತ ಸಾಗಿಸಲಾಗುತ್ತಿತ್ತು. ಗೋವುಗಳ ಕೈಕಾಲುಗಳನ್ನು ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ವಾಹನದಲ್ಲಿ ತುಂಬಿಸಿಕೊಂಡು ಸಾಗಿಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.
ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಪತ್ತೆಹಚ್ಚಿ 11 ಗೋವುಗಳನ್ನು ರಕ್ಷಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ವಾಹನದಲ್ಲಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಅವರ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ.
ಅಪರಾಧ
Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.
ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.
ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.
ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.
-
Uncategorized18 hours ago
ಚಿನ್ನಾಭರಣ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ
-
ದಕ್ಷಿಣ ಕನ್ನಡ20 hours ago
Raod Accident : ಮಂತ್ರಾಲಯ ಯಾತ್ರೆ ವೇಳೆ ಬಣಕಲ್ ನಲ್ಲಿ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ಶಿಶಿಲದ ಯುವಕ ಸಾವು
-
ಬಿಗ್ ನ್ಯೂಸ್6 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಅಪರಾಧ6 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ5 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ6 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ6 hours agoLalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ
-
ನಿಧನ ವಾರ್ತೆ4 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು


















