ಬಿಗ್ ನ್ಯೂಸ್
Kidnap : ವಿಟ್ಲ : ಅಪ್ರಾಪ್ತ ಹಿಂದೂ ಬಾಲಕಿಯ ಆಪಹರಿಸಿ ಗುಡ್ಡಕ್ಕೆ ಕರೆದೊಯ್ದ ಇಬ್ಬರು ಮುಸ್ಲಿಂ ಯುವಕರು : ಠಾಣೆಗೆ ದೂರು | ಪ್ರಕರಣ ದಾಖಲು
ವಿಟ್ಲ / ಪುತ್ತೂರು : ನ 21 : ಅಪ್ರಾಪ್ತ ಹಿಂದೂ ಬಾಲಕಿಯನ್ನು ಅನ್ಯ ಕೋಮಿನ ಇಬ್ಬರು ಯುವಕರು ಅಪಹರಿಸಿ ಪುತ್ತೂರು – ವಿಟ್ಲ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ಅಳಕಮಜಲು ಸಮೀಪದ ನಿನ್ನಿಕಲ್ಲು ಗುಡ್ಡಕ್ಕೆ ಕರೆದುಕೊಂಡು ಹೋಗಿರುವುದಾಗಿ ಬಾಲಕಿಯ ಪೋಷಕರು ಅ 20 ರಂದು ರಾತ್ರಿ ವಿಟ್ಲ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸರಕಾರದ ವತಿಯಿಂದ ಕಬಕ ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ಕಂಪ್ಯೂಟರ್ ಶಿಕ್ಷಣ ಆಯೋಜಿಸಲ್ಲಾಗಿದ್ದು ಅಲ್ಲಿಗೆ ಸಂತ್ರಸ್ತ ಯುವತಿ ಎಂದಿನಂತೆ ನ 20 ರಂದು ತೆರಳಿದ್ದಳು. ಒಬ್ಬ ಅಪ್ರಾಪ್ತ ಬಾಲಕನ ಸಹಿತ ಇಬ್ಬರು ಯುವಕರು ಆ ಬಾಲಕಿಯನ್ನು ಪುಸಲಾಯಿಸಿ ಅಲ್ಲಿಂದ ಹೊರಗೆ ಕರೆದುಕೊಂಡು ಬಂದಿದ್ದಾರೆ. ಬಳಿಕ ಅಲ್ಲಿಂದ ಆಕೆಯನ್ನು ಅಪಹರಿಸಿಕೊಂಡು ಇಡ್ಕಿದು ಗ್ರಾಮದ ನಿನ್ನಿಕಲ್ಲು ಎಂಬಲ್ಲಿಗೆ ಕರೆದುಕೊಂಡು ಹೋಗಿದ್ದಾರೆ ಎಂದು ದೂರಲಾಗಿದೆ.
ಈ ವಿಚಾರವನ್ನು ಮಗಳು ಸಂಜೆ 5.30 ಗಂಟೆಗೆ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾಳೆ. ಪೋಷಕರು ನಿನ್ನಿಕಲ್ಲು ಎಂಬಲ್ಲಿನ ಎತ್ತರದ ಗುಡ್ಡ ಪ್ರದೇಶದ ಕಡೆಗೆ ಹೋಗಿ ನೋಡಿದಾಗ ಅಲ್ಲಿ ಇಬ್ಬರು ಹುಡುಗರು ಇರುವುದು ಪತ್ತೆಯಾಗಿದೆ. ಅಲ್ಲಿ ತನ್ನ ಮಗಳನ ಹೆಸರನ್ನು ಕೂಗಿ ಕರೆದಾಗ ಯುವಕರಿಬ್ಬರು ಅಲ್ಲಿಂದ ಓಡಿ ಹೋಗಿದ್ದಾರೆ. ನಂತರ ಮಗಳನ್ನು ಮನೆಗೆ ಕರೆದುಕೊಂಡು ಹೋಗಿದ್ದೇವೆ. ಯಾವುದೋ ದುರುದ್ಧೇಶದಿಂದ ಬಾಲಕಿಯನ್ನು ಅಲ್ಲಿಗೆ ಕರೆದುಕೊಂಡು ಹೋಗಿರುವುದಾಗಿ ಬಾಲಕಿಯ ಪೋಷಕರು ದೂರಿನಲ್ಲಿ ಆರೋಪಿಸಿದ್ದಾರೆ.
ನಿನ್ನೆ ಸಂಜೆ ನಿನ್ನಿಕಲ್ಲು ಗುಡ್ಡದಲ್ಲಿ ಇಬ್ಬರು ಮುಸ್ಲಿಂ ಯುವಕರು , ಓರ್ವ ಮುಸ್ಲಿಂ ಯುವತಿ ಹಾಗು ಓರ್ವ ಅಪ್ರಾಪ್ತ ಯುವತಿ ಜತೆಯಾಗಿ ಸಮಯ ಕಳೆಯುತ್ತಿದ್ದ ವೇಳೆ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದಿದ್ದರು . ಬಳಿಕ ಬಾಲಕಿಯ ಪೋಷಕರಿಗೆ ಮಾಹಿತಿ ನೀಡಿ ಹಾಗೂ ಸಾರ್ವಜನಿಕರು ಆ ನಾಲ್ವರನ್ನು ವಿಟ್ಲ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು. ಇದೀಗ ಇದೇ ಪ್ರಕರಣ ತಿರುವು ಪಡೆದು ಬಾಲಕಿಯ ಪೋಷಕರು ಠಾಣೆಗೆ ದೂರು ನೀಡಿರುವುದಾಗಿ ಹೇಳಲಾಗುತ್ತಿದೆ.
ಇನ್ನು ಗುಡ್ಡದಲ್ಲಿ ನಿನ್ನೆ ಸಂಜೆ ಪತ್ತೆಯಾದ ಮುಸ್ಲಿಂ ಯುವತಿ ಕಬಕ ದ ಮೀನು ವ್ಯಾಪಾರಿಯೊಬ್ಬರ ಪುತ್ರಿ. ಆಕೆ ಮುಸ್ಲಿಂ ಯುವಕರಿಗೆ ಹಿಂದೂ ಬಾಲಕಿಯನ್ನು ಪರಿಚಯಿಸಿ ಸ್ನೇಹ ಸಲುಗೆ ಬೆಳೆಸಲು ಸಂಪರ್ಕ ಸೇತುವೆಯಂತೆ ಕಾರ್ಯ ನಿರ್ವಹಿಸಿದ್ದಾಳೆ ಎಂದು ಹಿಂದೂತ್ವವಾದಿ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ.
ಸ್ಥಳೀಯ
Subrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು
ಎರಡು ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಮನೆಗೆ ರಾತ್ರಿ ವೇಳೆ ಭೇಟಿ ನೀಡಿ ಊಟ ಮಾಡಿ, ದಿನಸಿ ಸಾಮಗ್ರಿಗಳನ್ನು ಪಡೆದು ತೆರಳಿದ್ದ ನಾಲ್ವರು ನಕ್ಸಲರ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಶೂರ್ ಜೈಲಿನಿಂದ ಕರೆತರಲಾದ ಮೂವರು ಮಾಜಿ ನಕ್ಸಲರಿಂದ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.
ಸುಬ್ರಹ್ಮಣ್ಯ, ನ.23: ಎರಡು ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಮನೆಗೆ ರಾತ್ರಿ ವೇಳೆ ಭೇಟಿ ನೀಡಿ ಊಟ ಮಾಡಿ, ದಿನಸಿ ಸಾಮಗ್ರಿಗಳನ್ನು ಪಡೆದು ತೆರಳಿದ್ದ ನಾಲ್ವರು ನಕ್ಸಲರ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಶೂರ್ ಜೈಲಿನಿಂದ ಕರೆತರಲಾದ ಮೂವರು ಮಾಜಿ ನಕ್ಸಲರಿಂದ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.
2024ರ ಮಾರ್ಚ್ 23ರಂದು ರಾತ್ರಿ ನಾಲ್ವರು ನಕ್ಸಲರು ಐನೆಕಿದು ಗ್ರಾಮದ ಮನೆಯೊಂದಕ್ಕೆ ಭೇಟಿ ನೀಡಿ ಊಟ ಮಾಡಿದ್ದಲ್ಲದೆ, ದಿನಸಿ ಸಾಮಗ್ರಿಗಳನ್ನು ಪಡೆದುಕೊಂಡು ತೆರಳಿದ್ದರು. ಇದಕ್ಕೂ ಎರಡು ದಿನಗಳ ಮೊದಲು ಕಲ್ಮಕಾರು ಭಾಗದ ಕಡಮಕಲ್ ಎಸ್ಟೇಟ್‌ಗೂ ನಕ್ಸಲರು ಭೇಟಿ ನೀಡಿದ್ದರು ಎನ್ನಲಾಗಿತ್ತು.
ಈ ಘಟನೆ ಆ ಸಂದರ್ಭದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ನಕ್ಸಲ್ ನಿಗ್ರಹ ಪಡೆಗಳು ಈ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದವು. ಈ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಫ್‌ಐಆರ್‌ನಲ್ಲಿ ನಕ್ಸಲರ ಭೇಟಿಯ ಬಗ್ಗೆ ಉಲ್ಲೇಖಿಸಲಾಗಿದ್ದರೂ, ಯಾರ ಹೆಸರನ್ನೂ ದಾಖಲಿಸಿರಲಿಲ್ಲ.
ಬಳಿಕ ಕರ್ನಾಟಕ ಸರಕಾರದ ಪ್ರಸ್ತಾವನೆಯಂತೆ ಶರಣಾಗಿದ್ದ ಈ ನಕ್ಸಲರು ತ್ರಿಶೂರ್ ಜೈಲಿನಲ್ಲಿದ್ದರು. ಪ್ರಕರಣದ ತನಿಖೆ ಹಾಗೂ ನ್ಯಾಯಾಲಯದ ವಿಚಾರಣೆಯ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಪೊಲೀಸರು ತ್ರಿಶೂರ್‌ಗೆ ತೆರಳಿ ನ.17ರಂದು ಮಾಜಿ ನಕ್ಸಲರಾದ ರವೀಂದ್ರ, ಸುಂದರಿ ಮತ್ತು ದಿಶಾ ಅವರನ್ನು ವಶಕ್ಕೆ ಪಡೆದಿದ್ದರು.
ನಂತರ ಕರ್ನಾಟಕ ಹೈಕೋರ್ಟ್‌ಗೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆದ ಪೊಲೀಸರು, ಮೂವರನ್ನು ಐನೆಕಿದು ಗ್ರಾಮದ ತೋಟದಮಜಲು ಪ್ರದೇಶಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ನಕ್ಸಲರು ತಾವು ಭೇಟಿ ನೀಡಿದ್ದ ಮನೆ ಹಾಗೂ ದಿನಸಿ ಸಾಮಗ್ರಿಗಳನ್ನು ಪಡೆದುಕೊಂಡಿದ್ದ ಸ್ಥಳವನ್ನು ಪೊಲೀಸರಿಗೆ ತೋರಿಸಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳ ಮಹಜರು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮೂವರನ್ನು ಮತ್ತೆ ಹೈಕೋರ್ಟ್‌ಗೆ ಹಾಜರುಪಡಿಸಿ, ಅಲ್ಲಿಂದ ತ್ರಿಶೂರ್ ಜೈಲಿಗೆ ಕರೆದೊಯ್ದು ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.
ಅಂತರ ರಾಜ್ಯ
WhatsApp Web: WhatsApp Web ಬಳಕೆದಾರರೇ ಎಚ್ಚರ..! ಟ್ಯಾಬ್ ಮುಚ್ಚಿದರೆ ಸಾಲದು, ಲಾಗೌಟ್ ಆಗದಿದ್ದರೆ ನಿಮ್ಮ ಖಾಸಗಿ ಚಾಟ್ ಬೇರೆಯವರ ಪಾಲು; ಕೇಂದ್ರ ಸರಕಾರದಿಂದ ಮಹತ್ವದ ಎಚ್ಚರಿಕೆ
ಕಚೇರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿರುವ ಕಂಪ್ಯೂಟರ್‌ಗಳಲ್ಲಿ WhatsApp Web ಬಳಸುವಾಗ ಎಚ್ಚರಿಕೆ ವಹಿಸುವಂತೆ ಕೇಂದ್ರ ಸರಕಾರದ ಸೈಬರ್ ಅಪರಾಧ ನಿಗ್ರಹ ಘಟಕವಾದ ಇಂಡಿಯನ್ ಸೈಬರ್ ಕ್ರೈಂ ಕೋಆರ್ಡಿನೇಷನ್ ಸೆಂಟರ್ (I4C) ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.
ಹೊಸದಿಲ್ಲಿ: ಕಚೇರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿರುವ ಕಂಪ್ಯೂಟರ್‌ಗಳಲ್ಲಿ WhatsApp Web ಬಳಸುವಾಗ ಎಚ್ಚರಿಕೆ ವಹಿಸುವಂತೆ ಕೇಂದ್ರ ಸರಕಾರದ ಸೈಬರ್ ಅಪರಾಧ ನಿಗ್ರಹ ಘಟಕವಾದ ಇಂಡಿಯನ್ ಸೈಬರ್ ಕ್ರೈಂ ಕೋಆರ್ಡಿನೇಷನ್ ಸೆಂಟರ್ (I4C) ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.
ಈ ಕುರಿತು ಹೊಸ ಸಲಹಾಸೂಚಿ ಬಿಡುಗಡೆ ಮಾಡಿರುವ ನ್ಯಾಷನಲ್ ಸೈಬರ್ ಕ್ರೈಂ ಕೋಆರ್ಡಿನೇಷನ್ ಸೆಂಟರ್‌ನ ನ್ಯಾಷನಲ್ ಸೈಬರ್ ಕ್ರೈಂ ಥ್ರೆಟ್ ಅನಾಲಿಟಿಕ್ಸ್ ಯೂನಿಟ್, ಕಂಪ್ಯೂಟರ್‌ನಲ್ಲಿ WhatsApp Web ಲಾಗಿನ್ ಆಗಿಯೇ ಉಳಿದಿದ್ದರೆ ಅನಧಿಕೃತ ವ್ಯಕ್ತಿಗಳು ಬಳಕೆದಾರರ ಖಾಸಗಿ ಸಂದೇಶಗಳು, ಸಂಪರ್ಕ ಸಂಖ್ಯೆಗಳು ಹಾಗೂ ಗ್ರೂಪ್ ಚಾಟ್‌ಗಳನ್ನು ವೀಕ್ಷಿಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಅಷ್ಟೇ ಅಲ್ಲದೆ, ಬಳಕೆದಾರರ ಖಾತೆಯನ್ನು ದುರುಪಯೋಗಪಡಿಸಿಕೊಂಡು ಅವರ ಹೆಸರಿನಲ್ಲಿ ಇತರರಿಗೆ ಸಂದೇಶಗಳನ್ನು ಕಳುಹಿಸುವ ಮೂಲಕ ವಂಚನೆ ಹಾಗೂ ವಿವಿಧ ಸೈಬರ್ ಹಗರಣಗಳನ್ನು ನಡೆಸುವ ಅಪಾಯವೂ ಇದೆ ಎಂದು ಎಚ್ಚರಿಸಿದೆ.
ಟ್ಯಾಬ್ ಮುಚ್ಚಿದರೆ ಸಾಲದು, ಲಾಗೌಟ್ ಆಗಲೇಬೇಕು!
ಬಹುತೇಕ ಬಳಕೆದಾರರು WhatsApp Web ಬಳಸಿದ ಬಳಿಕ ಬ್ರೌಸರ್ ವಿಂಡೋ ಅಥವಾ ಟ್ಯಾಬ್ ಮುಚ್ಚುವುದರಿಂದ ಖಾತೆ ಲಾಗೌಟ್ ಆಗುತ್ತದೆ ಎಂದು ಭಾವಿಸುತ್ತಾರೆ. ಆದರೆ, ಕೇವಲ ಟ್ಯಾಬ್ ಮುಚ್ಚುವುದರಿಂದ ಲಾಗಿನ್ ಅವಧಿ ಅಂತ್ಯಗೊಳ್ಳುವುದಿಲ್ಲ. ಹೀಗಾಗಿ ಪ್ರತಿ ಬಾರಿ ಬಳಕೆ ಮುಗಿದ ತಕ್ಷಣ ಖಾತೆಯಿಂದ ಲಾಗೌಟ್ ಆಗುವುದು ಕಡ್ಡಾಯ ಎಂದು ಸಲಹೆ ನೀಡಿದೆ.
ಇತರರೂ ಬಳಸಬಹುದಾದ ಕಚೇರಿ ಕಂಪ್ಯೂಟರ್‌ಗಳು, ಹಂಚಿಕೆಯ ಕಂಪ್ಯೂಟರ್‌ಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿನ ಸಾಧನಗಳಲ್ಲಿ WhatsApp Web ಬಳಸುವಾಗ ಹೆಚ್ಚಿನ ಎಚ್ಚರಿಕೆ ವಹಿಸಬೇಕು. ಅಲ್ಲದೆ, ಇಂತಹ ಕಂಪ್ಯೂಟರ್‌ಗಳಲ್ಲಿ ಸರಕಾರಿ, ಸಾಂಸ್ಥಿಕ, ಹಣಕಾಸು, ಗೌಪ್ಯ ಅಥವಾ ಇತರ ಸೂಕ್ಷ್ಮ ಮಾಹಿತಿಗಳನ್ನು ಹಂಚಿಕೊಳ್ಳಬಾರದು ಎಂದು ಸೂಚಿಸಿದೆ.
ಸೈಬರ್ ಕೆಫೆಗಳು, ಹೋಟೆಲ್‌ಗಳ ವ್ಯವಹಾರ ಕೇಂದ್ರಗಳು, ಸಾರ್ವಜನಿಕ ಸ್ಥಳಗಳು ಹಾಗೂ ಬಾಡಿಗೆಗೆ ಪಡೆದ ಕಂಪ್ಯೂಟರ್‌ಗಳಂತಹ ವಿಶ್ವಾಸಾರ್ಹವಲ್ಲದ ಸಾಧನಗಳಲ್ಲಿ WhatsApp Webಗೆ ಲಾಗಿನ್ ಆಗುವುದನ್ನು ಸಾಧ್ಯವಾದಷ್ಟು ತಪ್ಪಿಸಬೇಕು. ಅನಿವಾರ್ಯವಾಗಿ ಬಳಸಬೇಕಾದರೆ ಇನ್‌ಕಾಗ್ನಿಟೊ ಅಥವಾ ಪ್ರೈವೇಟ್ ಬ್ರೌಸಿಂಗ್ ಮೋಡ್ ಬಳಸುವಂತೆ ಶಿಫಾರಸು ಮಾಡಿದೆ.
ಈ ಲಕ್ಷಣಗಳು ಕಂಡುಬಂದರೆ ಎಚ್ಚರ!
ತಮ್ಮ ಖಾತೆಯಿಂದ ತಮಗೆ ತಿಳಿಯದೆಯೇ ಸಂದೇಶಗಳು ರವಾನೆಯಾಗುವುದು, ಸಂಪರ್ಕದಲ್ಲಿರುವವರಿಂದ ಅಸಹಜ ಪ್ರತಿಕ್ರಿಯೆಗಳು ಬರುವುದು ಅಥವಾ ಖಾತೆಯಲ್ಲಿ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದರೆ ತಕ್ಷಣ ಎಚ್ಚರಿಕೆ ವಹಿಸಬೇಕು. ಇವು ಖಾತೆಗೆ ಅನಧಿಕೃತ ಪ್ರವೇಶವಾಗಿರುವ ಸೂಚನೆಗಳಾಗಿರಬಹುದು ಎಂದು ತಿಳಿಸಿದೆ.
ಇದರೊಂದಿಗೆ ಡಿಜಿಟಲ್ ಸಾಧನಗಳು, ಕಂಪ್ಯೂಟರ್‌ಗಳು, ಬ್ರೌಸರ್‌ಗಳು ಹಾಗೂ ಭದ್ರತಾ ಸಾಫ್ಟ್‌ವೇರ್‌ಗಳನ್ನು ಕಾಲಕಾಲಕ್ಕೆ ಅಪ್‌ಡೇಟ್ ಮಾಡಬೇಕು. ಅನುಮಾನಾಸ್ಪದ ಡೌನ್‌ಲೋಡ್‌ಗಳು, ಅಪರಿಚಿತ ಫೈಲ್‌ಗಳು ಹಾಗೂ ಕ್ರ್ಯಾಕ್ ಮಾಡಿದ ಸಾಫ್ಟ್‌ವೇರ್‌ಗಳನ್ನು ಬಳಸಬಾರದು ಎಂದು ಸಲಹೆ ನೀಡಿದೆ.
ಒಟ್ಟಿನಲ್ಲಿ, WhatsApp Web ಬಳಕೆ ಮುಗಿದ ಬಳಿಕ ಕಡ್ಡಾಯವಾಗಿ ಲಾಗೌಟ್ ಆಗುವುದು, ಅಪರಿಚಿತ ಹಾಗೂ ವಿಶ್ವಾಸಾರ್ಹವಲ್ಲದ ಕಂಪ್ಯೂಟರ್‌ಗಳಲ್ಲಿ ಲಾಗಿನ್ ಆಗುವುದನ್ನು ತಪ್ಪಿಸುವುದು ಮತ್ತು ಖಾತೆಯಲ್ಲಿನ ಅಸಹಜ ಚಟುವಟಿಕೆಗಳ ಮೇಲೆ ನಿಗಾ ಇಡುವ ಮೂಲಕ ಖಾತೆ ದುರುಪಯೋಗ ಹಾಗೂ ಹಣಕಾಸು ವಂಚನೆಗಳ ಅಪಾಯವನ್ನು ಕಡಿಮೆ ಮಾಡಬಹುದು ಎಂದು I4C ತಿಳಿಸಿದೆ.
ಬಿಗ್ ನ್ಯೂಸ್
High Court notice-ಜಾರಿಯಾಗದ ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್
ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡುವಂತೆ ಪುತ್ತೂರು ಉಪವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಇದುವರೆಗೂ ಜಾರಿಯಾಗದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡುವಂತೆ ಪುತ್ತೂರು ಉಪವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಇದುವರೆಗೂ ಜಾರಿಯಾಗದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಧನಕೀರ್ತಿ ಅರಿಗ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎನ್. ವಿನಯ್ ವಾದ ಮಂಡಿಸಿ, ಪ್ರಕರಣದ 10ನೇ ಪ್ರತಿವಾದಿಯಾಗಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಈಗಾಗಲೇ ಗಡೀಪಾರು ಆದೇಶ ಹೊರಡಿಸಲಾಗಿದೆ. ಆದರೆ, ಈ ಆದೇಶವನ್ನು ಪ್ರಶ್ನಿಸಿ ಅರ್ಜಿಗಳು ಸಲ್ಲಿಕೆಯಾಗಿದ್ದರೂ ಅದನ್ನು ಇನ್ನೂ ಜಾರಿಗೊಳಿಸಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು.
ವಾದವನ್ನು ಆಲಿಸಿದ ನ್ಯಾಯಮೂರ್ತಿಗಳು, ಪ್ರಕರಣದ 1ರಿಂದ 9ನೇ ಪ್ರತಿವಾದಿಗಳಾಗಿರುವ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ), ಎಡಿಜಿಪಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಬಂಟ್ವಾಳ ಡಿವೈಎಸ್ಪಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪುತ್ತೂರು ಉಪವಿಭಾಗಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣಾಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದರು.
-
ಶಿಕ್ಷಣ18 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಮಂಗಳೂರು18 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಬಿಗ್ ನ್ಯೂಸ್20 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಕಾರ್ಯಕ್ರಮಗಳು19 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ18 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಅಪರಾಧ2 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಶಿಕ್ಷಣ17 hours agoVivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
-
ಶಿಕ್ಷಣ17 hours agoAmbika-ಅಂಬಿಕಾ ವಿದ್ಯಾಲಯದಲ್ಲಿ ಆರ್ಟ್ ಆಫ್ ಲಿವಿಂಗ್ನ ಸಹಜ ಸಮಾಧಿ ಧ್ಯಾನ ಶಿಬಿರ















