ಸುಳ್ಯ
ಸುಳ್ಯದಲ್ಲೂಂದು ದೆಹಲಿಯ ಶ್ರದ್ದಾ ಮಾದರಿ ಕೃತ್ಯ ಬೆಳಕಿಗೆ : ಗೋಣಿ ಚೀಲದಲ್ಲಿ ಯುವತಿಯ ಮೃತ ದೇಹ – ಪತಿ ಇಮ್ರಾನ್ ಪರಾರಿ
ಸುಳ್ಯ : ನ 22 : ಯುವತಿಯ ಮೃತದೇಹವನ್ನು ಕತ್ತರಿಸಿ ಪ್ರಿಡ್ಜ್ ನಲ್ಲಿಟ್ಟ ಹೇಯ ಕೃತ್ಯ ಇತ್ತೀಚೆಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಂಡು ಬಂದಿತ್ತು. ಆ ಘಟನೆಯ ನೆನಪು ಮಾಸುವ ಮೊದಲೇ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಅದೇ ಮಾದರಿಯ ಘಟನೆಯೊಂದು ಬೆಳಕಿಗೆ ಬಂದಿದೆ.
ದಂಪತಿಗಳು ಬಾಡಿಗೆಗಿದ್ದ ಸುಳ್ಯ ಬೀರಮಂಗಲದ ಮನೆಯೊಂದರಲ್ಲಿ ಯುವತಿಯ ಮೃತದೇಹ ಗೋಣಿ ಚೀಲದೊಳಗೆ ಪತ್ತೆಯಾಗಿದೆ.ಅಲ್ಲದೇ ಆಕೆಯ ಪತಿ ನಾಪಾತ್ತೆಯಾಗಿದ್ದಾನೆ. ಪತಿಯೂ ಪತ್ನಿಯನ್ನು ಕೊಂದು ಗೋಣಿಚೀಲದಲ್ಲಿ ತುಂಬಿಸಿ ಪರಾರಿಯಾಗಿರುವುದಾಗಿ ಸಂಶಯ ವ್ಯಕ್ತವಾಗಿದೆ.
ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಪರಾರಿಯಾದತ. ಈತ ಮೃತ ಮಹಿಳೆಯ ಪತಿ. ಇಮ್ರಾನ್ ಕಳೆದ ಆರು ತಿಂಗಳಿನಿಂದ ಬೀರಮಂಗಲ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಎರಡು ದಿನಗಳ ಹಿಂದೆ ಇಮ್ರಾನ್ ಊರಿಗೆ ತೆರಳುವುದಾಗಿ ತಾನು ಕೆಲಸ ಮಾಡಿಕೊಂಡಿದ್ದ ಹೊಟೇಲ್ ನವರಿಗೆ ತಿಳಿಸಿದ್ದ ಎನ್ನಲಾಗಿದೆ.

ಇವತ್ತು ಪಕ್ಕದ ರೂಂ ನವರಿಗೆ ಸಂಶಯ ಬಂದಿದೆ. ಇಮ್ರಾನ್ ಹೋಗುವಾಗ ಪತ್ನಿಯನ್ನು ಜತೆಗೆ ಕರೆದುಕೊಂಡು ಹೋಗಿರಲಿಲ್ಲ. ಆದರೆ ಆತ ತೆರಳಿ ಎರಡು ದಿನವಾದರೂ ಮನೆಯಿಂದ ಯಾರೂ ಹೊರ ಬರದ ಹಿನ್ನಲೆಯಲ್ಲಿ ಸಂಶಯಗೊಂಡ ಮನೆಯವರು ಇಮ್ರಾನ್ ಕೆಲಸ ಮಾಡುತ್ತಿದ್ದ ಹೊಟೇಲ್ ಮಾಲೀಕರಿಗೆ ವಿಷಯ ತಿಳಿಸಿದ್ದಾರೆ. ಅಲ್ಲದೇ ಎರಡು ದಿನಗಳ ಹಿಂದೆ ಅವರ ಮನೆಯಿಂದ ಜೋರಾಗಿ ಕಿರುಚಿದ ಶಬ್ಧ ಕೇಳಿಸಿರುವುದಾಗಿಯೂ ಅವರು ತಿಳಿಸಿದ್ದಾರೆ ಎನ್ನಲಾಗಿದೆ.
ಹೀಗಾಗಿ ಹೊಟೇಲ್ ಮಾಲಕರ ಮಾಹಿತಿಯ ಮೇರೆಗೆ ಇಂದು ಸಂಜೆ ಬಾಡಿಗೆ ಮನೆಗೆ ಬಂದು ಬಾಗಿಲು ಒಡೆದು ಪೊಲೀಸರು ಪರಿಶೀಲಿಸಿದಾಗ ಮನೆಯೊಳಗೆ ಗೋಣಿ ಚೀಲದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ. ಸಂಶಯಿತ ಅರೋಪಿ ಪರಾರಿಯಾಗಿದ್ದಾನೆ. ಸುಳ್ಯ ಪೋಲಿಸರು ಸ್ಥಳ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ. ಫಿಂಗರ್ ಪ್ರಿಂಟ್ ತಜ್ಞರು ಮತ್ತು ಫೋರೆನ್ಸಿಕ್ ತಜ್ಞರು ಸ್ಥಳಕ್ಕೆ ಬರಲಿದ್ದಾರೆಂದು ತಿಳಿದುಬಂದಿದೆ.
ಸುಳ್ಯ
Suresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು. ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಸುಳ್ಯ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು.
ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಈ ಸಂದರ್ಭದಲ್ಲಿ ಹೋಟೆಲ್ ಮಾಲಕರಾದ ನಾರಾಯಣ ಕೇಕಡ್ಕ ಹಾಗೂ ಸಿಬ್ಬಂದಿ ಸುರೇಶ್ ರೈನಾ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಇತ್ತಿಚೆಗಷ್ಟೇ ರಸಪಾಕ ಗ್ರಾಂಡ್ ಗೆ ಇನ್ಫೋಸೀಸ್ ಪ್ರತಿಷ್ಠಾನದ ಸುಧಾಮೂರ್ತಿ ಸಹಿತ ಹಲವು ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುಳ್ಯ
Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ
ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.
ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.
ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.
-
ಬಿಗ್ ನ್ಯೂಸ್18 hours agoVitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
-
ನಿಧನ ವಾರ್ತೆ23 hours agoMangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
-
ಅಪರಾಧ23 hours agoPunacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
-
ಅಂತರ ರಾಜ್ಯ23 hours agoChennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
-
ಅಪರಾಧ23 hours agoPunacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
-
ಬಿಗ್ ನ್ಯೂಸ್18 hours agoVirupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ
-
ರಾಜಕೀಯ23 hours agoKumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
-
ಅಪರಾಧ21 hours agoBantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು















