Connect with us

ಸ್ಥಳೀಯ

ಉಜಿರೆ : ನಿಂತಿದ್ದ ಬೊಲೋರೊಗೆ ಕೆಎಸ್‌ ಅರ್‌ ಟಿಸಿ ಬಸ್ಸು ಢಿಕ್ಕಿ – ಒರ್ವ ಮೃತ್ಯು – 7 ಮಂದಿ ಗಂಭೀರ

Published

on

Ad Widget

Ad Widget

Ad Widget

Ad Widget

ಬೆಳ್ತಂಗಡಿ; ಬಸ್ ಮತ್ತು  ಬೊಲೋರೊ ಮಧ್ಯೆ ಸಂಭವಿಸಿದ  ಭೀಕರ ಅಪಘಾತದಲ್ಲಿ  ಓರ್ವ ಮೃತಪಟ್ಟು  ಏಳು ಮಂದಿ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳದ ಕುದ್ರಾಯ ಎಂಬಲ್ಲಿ ನ 24 ರಂದು ನಡೆದಿದೆ. ಮಂಡ್ಯ ಜಿಲ್ಲೆಯ ಚೆನ್ನಸಾಂದ್ರ ನಿವಾಸಿ ಮಾಹದೇವ(63) ಅಪಘಾತದಲ್ಲಿ ಮೃತಪಟ್ಟವರು.

Ad Widget

Ad Widget

Ad Widget

Ad Widget

ಅಪಘಾತದಲ್ಲಿ ಐವರು ಮಹಿಳೆಯರು ಮಗು ಸೇರಿ ಏಳು ಮಂದಿಗೆ ಗಂಭೀರ ಗಾಯವಾಗಿದ್ದು,ಇವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರು ಹಾಗೂ ಮೃತಪಟ್ಟವರು ಒಂದೇ ಕುಟುಂಬದ ಸದಸ್ಯರು. ಧರ್ಮಸ್ಥಳದಲ್ಲಿ ದೀಪೋತ್ಸವದ ಹಿನ್ನೆಲೆ ಮಂಡ್ಯ ಜಿಲ್ಲೆಯಿಂದ  ಒಂದೇ ಕುಟುಂಬದ ಹತ್ತು ಮಂದಿ ಬೊಲೋರೊ ವಾಹನದಲ್ಲಿ  ಆಗಮಿಸಿದ್ದರು

Ad Widget

Ad Widget alt="Ad Widget"/>

Ad Widget

ಕುದ್ರಾಯ ಎಂಬಲ್ಲಿ ಬೊಲೋರೊ ವಾಹನವನ್ನು  ರಸ್ತೆಯ ಬಲಕ್ಕೆ ನಿಲ್ಲಿಸಿ ಇಳಿದು ಅಂಗಡಿಗೆ ಹೋಗುತ್ತಿದ್ದ ವೇಳೆ ಧರ್ಮಸ್ಥಳ ಡಿಪೋದಿಂದ ಮೈಸೂರಿಗೆ ತೆರಳುತ್ತಿದ್ದ ksrtc ಬಸ್ ನಿಂತಿದ್ದವರಿಗೆ ಹಾಗೂ ಬೊಲೋರೊ ವಾಹನಕ್ಕೆ ಢಿಕ್ಕಿ ಹೊಡೆದಿದೆ.ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

Ad Widget

Ad Widget <> Ad Widget

Ad Widget
Click to comment

Leave a Reply

ಅಪರಾಧ

Gym protein powder-ಸ್ಟೆರಾಯ್ಡ್, ಹಾನಿಕಾರಕ ರಾಸಾಯನಿಕ ಬೆರೆಸಿರುವ ಶಂಕೆ; ಜಿಮ್ ಪ್ರೊಟೀನ್ ಪೌಡರ್ ಗುಣಮಟ್ಟ ಪರೀಕ್ಷೆಗೆ ಸರ್ಕಾರ ಸಿದ್ಧತೆ

Published

on

Ad Widget

Ad Widget

Ad Widget

Ad Widget

ಜಿಮ್‌ಗಳಲ್ಲಿ ತರಬೇತುದಾರರು ಶಿಫಾರಸು ಮಾಡುವ ಹಾಗೂ ಮೆಡಿಕಲ್ ಸ್ಟೋರ್‌ಗಳಲ್ಲಿ ಮಾರಾಟವಾಗುವ ಪ್ರೊಟೀನ್ ಪೌಡರ್ ಮತ್ತು ಇತರ ಆಹಾರ ಪೂರಕಗಳ (ಸಪ್ಲಿಮೆಂಟ್) ಗುಣಮಟ್ಟವನ್ನು ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು, ನ.25: ಜಿಮ್‌ಗಳಲ್ಲಿ ತರಬೇತುದಾರರು ಶಿಫಾರಸು ಮಾಡುವ ಹಾಗೂ ಮೆಡಿಕಲ್ ಸ್ಟೋರ್‌ಗಳಲ್ಲಿ ಮಾರಾಟವಾಗುವ ಪ್ರೊಟೀನ್ ಪೌಡರ್ ಮತ್ತು ಇತರ ಆಹಾರ ಪೂರಕಗಳ (ಸಪ್ಲಿಮೆಂಟ್) ಗುಣಮಟ್ಟವನ್ನು ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಈ ಕುರಿತು ಮಾತನಾಡಿದ ಅವರು, ಜಿಮ್‌ಗೆ ಹೋಗುವವರು ಸೇವಿಸುವ ಪ್ರೊಟೀನ್ ಉತ್ಪನ್ನಗಳ ಮೇಲೆ ಆರೋಗ್ಯ ಇಲಾಖೆ ನಿಗಾ ಇರಿಸಲಿದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಕೆಲವು ಪ್ರೊಟೀನ್ ಉತ್ಪನ್ನಗಳು ಗುಣಮಟ್ಟದಿಂದ ಕೂಡಿದ್ದರೆ, ಇನ್ನು ಕೆಲವು ಉತ್ಪನ್ನಗಳು ಎಲ್ಲಿಂದ ಪೂರೈಕೆಯಾಗುತ್ತವೆ ಎಂಬುದೇ ಸ್ಪಷ್ಟವಾಗಿಲ್ಲ. ಹೀಗಾಗಿ ರಾಜ್ಯಾದ್ಯಂತ ಮಾರಾಟವಾಗುತ್ತಿರುವ ಪ್ರೊಟೀನ್ ಪೌಡರ್ ಮತ್ತು ಸಪ್ಲಿಮೆಂಟ್‌ಗಳನ್ನು ಪರೀಕ್ಷಿಸಲು ನಿರ್ಧರಿಸಲಾಗಿದೆ. ಮೆಡಿಕಲ್ ಸ್ಟೋರ್‌ಗಳು, ಜಿಮ್ ಕೇಂದ್ರಗಳು ಸೇರಿದಂತೆ ವಿವಿಧೆಡೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

Ad Widget

Ad Widget <> Ad Widget

ಯಾಕೆ ಈ ಪರೀಕ್ಷೆ?
ಮಾರುಕಟ್ಟೆಯಲ್ಲಿ ಅನಧಿಕೃತವಾಗಿ ಮಾರಾಟವಾಗುವ ಕೆಲವು ಪ್ರೊಟೀನ್ ಪೌಡರ್‌ಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಪ್ರೊಟೀನ್ ಅಂಶವಿರುವುದು ಹಾಗೂ ಅವುಗಳಿಗೆ ಸ್ಟೆರಾಯ್ಡ್‌ಗಳು ಮತ್ತು ಹಾನಿಕಾರಕ ರಾಸಾಯನಿಕಗಳನ್ನು ಬೆರೆಸುವ ಸಾಧ್ಯತೆಗಳ ಬಗ್ಗೆ ಆಹಾರ ಸುರಕ್ಷತಾ ಇಲಾಖೆ ಈ ಹಿಂದೆಯೇ ಕಳವಳ ವ್ಯಕ್ತಪಡಿಸಿತ್ತು.

ಅಲ್ಲದೆ, ಅಗತ್ಯ ಪರವಾನಗಿ ಇಲ್ಲದೆ ಜಿಮ್‌ಗಳಲ್ಲಿ ನೇರವಾಗಿ ಸಪ್ಲಿಮೆಂಟ್‌ಗಳನ್ನು ಮಾರಾಟ ಮಾಡುವುದು ಕಾನೂನುಬಾಹಿರವಾಗಿದೆ. ಹಲವು ಪ್ರೊಟೀನ್ ಸಪ್ಲಿಮೆಂಟ್‌ಗಳ ಪ್ಯಾಕೆಟ್‌ಗಳ ಮೇಲೆ ನಮೂದಿಸಿರುವ ಪ್ರೊಟೀನ್ ಪ್ರಮಾಣಕ್ಕೂ, ಉತ್ಪನ್ನದಲ್ಲಿರುವ ನೈಜ ಪ್ರಮಾಣಕ್ಕೂ ವ್ಯತ್ಯಾಸವಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಉತ್ಪನ್ನಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಪರಿಶೀಲಿಸಲು ಸರ್ಕಾರ ಮುಂದಾಗಿದೆ.

Continue Reading

ಬಿಗ್ ನ್ಯೂಸ್

Tulu language-ತುಳು ಭಾಷೆ ಅನುಷ್ಠಾನಕ್ಕೆ ಸರ್ಕಾರದಿಂದ ಅಧಿಕೃತ ಆದೇಶ; ಸರ್ಕಾರಿ ಕಚೇರಿಗಳಲ್ಲೂ ತುಳುವಿಗೆ ಮನ್ನಣೆ..!

Published

on

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ತುಳು ಭಾಷೆಯನ್ನು ರಾಜ್ಯದ ಎರಡನೇ ಭಾಷೆಯಾಗಿ ಪರಿಗಣಿಸುವ ನಿರ್ಧಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಷ್ಠಾನಕ್ಕೆ ಅಧಿಕೃತ ಆದೇಶ ಹೊರಡಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ತುಳು ಭಾಷೆಯನ್ನು ರಾಜ್ಯದ ಎರಡನೇ ಭಾಷೆಯಾಗಿ ಪರಿಗಣಿಸುವ ನಿರ್ಧಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಷ್ಠಾನಕ್ಕೆ ಅಧಿಕೃತ ಆದೇಶ ಹೊರಡಿಸಿದೆ.

Ad Widget

Ad Widget alt="Ad Widget"/>

Ad Widget

ಕಳೆದ ತಿಂಗಳು ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ರಾಜ್ಯದ ಎರಡನೇ ಭಾಷೆಯ ಸ್ಥಾನಮಾನ ನೀಡಲು ಅನುಮೋದನೆ ನೀಡಲಾಗಿತ್ತು. ಇದರ ಮುಂದುವರಿದ ಭಾಗವಾಗಿ ಬುಧವಾರ ಸರ್ಕಾರ ಅನುಷ್ಠಾನಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

Ad Widget

Ad Widget <> Ad Widget

ಹೊಸ ಆದೇಶದ ಪ್ರಕಾರ, ತುಳು ಭಾಷೆಯನ್ನು ಕನ್ನಡ ಲಿಪಿಯಲ್ಲಿ ಬಳಸಬೇಕಾಗಿದೆ. ಜಿಲ್ಲಾಡಳಿತ ಕಚೇರಿಗಳಲ್ಲಿ ತುಳು ಭಾಷೆ ಅನುಷ್ಠಾನಕ್ಕಾಗಿ ಪ್ರತ್ಯೇಕ ಘಟಕ ಸ್ಥಾಪಿಸುವುದರ ಜೊತೆಗೆ ತುಳು ಭಾಷಾಂತರಕಾರರನ್ನು ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ.

ಇದಲ್ಲದೆ, ಸಾರ್ವಜನಿಕರು ಸಲ್ಲಿಸುವ ಮನವಿ ಹಾಗೂ ಅರ್ಜಿಗಳನ್ನು ತುಳು ಭಾಷೆಯಲ್ಲಿಯೂ ಸ್ವೀಕರಿಸಬೇಕು. ಅವುಗಳಿಗೆ ನೀಡುವ ಉತ್ತರಗಳನ್ನು ಕನ್ನಡದ ಜೊತೆಗೆ ತುಳು ಭಾಷೆಯಲ್ಲಿಯೂ ಒದಗಿಸಬೇಕು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.

Ad Widget

Ad Widget

ಈ ಮೂಲಕ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಆಡಳಿತ ವ್ಯವಸ್ಥೆಯಲ್ಲೂ ತುಳು ಭಾಷೆಯ ಬಳಕೆಗೆ ಅಧಿಕೃತವಾಗಿ ಅವಕಾಶ ಕಲ್ಪಿಸಿದಂತಾಗಿದೆ.

Ad Widget
Continue Reading

ರಾಜಕೀಯ

Priyanka Kharge-ಕರ್ನಾಟಕದ ರಾಜ್ಯ ಜಿಡಿಪಿಗೆ ಎರಡನೇ ಅತಿ ದೊಡ್ಡ ಕೊಡುಗೆ ನೀಡುವ ಜಿಲ್ಲೆ ದಕ್ಷಿಣ ಕನ್ನಡ: ಪ್ರಿಯಾಂಕ್ ಖರ್ಗೆ; ಬೆಂಗಳೂರಿನ ಬೆಳವಣಿಗೆಯ ಅಂತರವನ್ನು ಕಡಿಮೆ ಮಾಡುವ ಸಾಮರ್ಥ್ಯ ಮಂಗಳೂರಿಗಿದೆ; ಹೂಡಿಕೆ, ಕೌಶಲ್ಯಾಭಿವೃದ್ಧಿ ಮತ್ತು ನವೋದ್ಯಮಗಳ ಮೂಲಕ ಬಿಯಾಂಡ್ ಬೆಂಗಳೂರು ಅಭಿಯಾನವನ್ನು ವೇಗಗೊಳಿಸಲು ಉದ್ಯಮ ವಲಯಕ್ಕೆ ಸಚಿವರ ಕರೆ

Published

on

Ad Widget

Ad Widget

Ad Widget

Ad Widget

ಕರ್ನಾಟಕದ ಪ್ರಾದೇಶಿಕ ಅಭಿವೃದ್ಧಿಯ ಅಂತರವನ್ನು ಕಡಿಮೆ ಮಾಡುವಲ್ಲಿ ಮಂಗಳೂರು ಮಹತ್ವದ ಪಾತ್ರ ವಹಿಸುವ ಸಾಮರ್ಥ್ಯ ಹೊಂದಿದೆ. ಮಂಗಳೂರನ್ನು ಪ್ರಮುಖ ತಂತ್ರಜ್ಞಾನ ಮತ್ತು ಆರ್ಥಿಕ ಬೆಳವಣಿಗೆಯ ಕೇಂದ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸುವಂತೆ ಕರ್ನಾಟಕದ ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಂದು ಉದ್ಯಮ ವಲಯದ ನಾಯಕರಿಗೆ ಕರೆ ನೀಡಿದರು.

Ad Widget

Ad Widget

Ad Widget

Ad Widget

ಬೆಂಗಳೂರು, ನ. 25,: ಕರ್ನಾಟಕದ ಪ್ರಾದೇಶಿಕ ಅಭಿವೃದ್ಧಿಯ ಅಂತರವನ್ನು ಕಡಿಮೆ ಮಾಡುವಲ್ಲಿ ಮಂಗಳೂರು ಮಹತ್ವದ ಪಾತ್ರ ವಹಿಸುವ ಸಾಮರ್ಥ್ಯ ಹೊಂದಿದೆ. ಮಂಗಳೂರನ್ನು ಪ್ರಮುಖ ತಂತ್ರಜ್ಞಾನ ಮತ್ತು ಆರ್ಥಿಕ ಬೆಳವಣಿಗೆಯ ಕೇಂದ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸುವಂತೆ ಕರ್ನಾಟಕದ ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಂದು ಉದ್ಯಮ ವಲಯದ ನಾಯಕರಿಗೆ ಕರೆ ನೀಡಿದರು.

Ad Widget

Ad Widget alt="Ad Widget"/>

Ad Widget

ಮಂಗಳೂರಿನಲ್ಲಿ ಡೆಲಾಯ್ಟ್ ಸಂಸ್ಥೆಯ ಭಾರತದ 27ನೇ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಬೆಂಗಳೂರು ನಂತರ ಕರ್ನಾಟಕದ ರಾಜ್ಯದ ಒಟ್ಟು ಆಂತರಿಕ ಉತ್ಪನ್ನಕ್ಕೆ ಎರಡನೇ ಅತಿ ಹೆಚ್ಚು ಕೊಡುಗೆ ನೀಡುವ ಜಿಲ್ಲೆಯಾಗಿ ದಕ್ಷಿಣ ಕನ್ನಡ ಗುರುತಿಸಿಕೊಂಡಿದೆ. ರಾಜ್ಯದ ಒಟ್ಟು ಆಂತರಿಕ ಉತ್ಪನ್ನಕ್ಕೆ ಜಿಲ್ಲೆಯ ಕೊಡುಗೆ ಶೇ. 5.3ರಷ್ಟಿದೆ ಎಂದು ತಿಳಿಸಿದರು. ಈ ಆರ್ಥಿಕ ಶಕ್ತಿ, ಈ ಭಾಗದ ಪ್ರತಿಭಾನ್ವಿತ ಮಾನವ ಸಂಪನ್ಮೂಲ, ಶೈಕ್ಷಣಿಕ ಸಂಸ್ಥೆಗಳು ಹಾಗೂ ಉತ್ತಮ ಜೀವನಮಟ್ಟದೊಂದಿಗೆ ಮಂಗಳೂರು, ಕರ್ನಾಟಕದ ಮುಂದಿನ ಹಂತದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುವ ಸಾಮರ್ಥ್ಯ ಹೊಂದಿದೆ ಎಂದು ಹೇಳಿದರು.

Ad Widget

Ad Widget <> Ad Widget

“ಕರ್ನಾಟಕದ ಪ್ರಮುಖ ಆರ್ಥಿಕ ಬೆಳವಣಿಗೆಯ ಕೇಂದ್ರವಾಗಿ ಹೊರಹೊಮ್ಮುವ ಅಪಾರ ಸಾಮರ್ಥ್ಯ ಮಂಗಳೂರಿಗಿದೆ. ಬಿಯಾಂಡ್ ಬೆಂಗಳೂರು ಮೂಲಕ ಪ್ರತಿಭೆಗಳು ಈಗಾಗಲೇ ಇರುವ ಪ್ರದೇಶಗಳಿಗೆ ಅವಕಾಶಗಳನ್ನು ಕೊಂಡೊಯ್ಯುವುದು ನಮ್ಮ ಉದ್ದೇಶವೇ ಹೊರತು, ಪ್ರತಿಭೆಗಳು ಬೆಂಗಳೂರಿಗೆ ಬರಬೇಕೆಂದು ನಿರೀಕ್ಷಿಸುವುದಲ್ಲ. ನಮ್ಮ ಪ್ರಾದೇಶಿಕ ನಗರಗಳಲ್ಲಿರುವ ಸಾಮರ್ಥ್ಯವನ್ನು ಉದ್ಯಮಗಳು ಗುರುತಿಸಿ, ಸದೃಢ ಆರ್ಥಿಕ ವ್ಯವಸ್ಥೆಗಳನ್ನು ನಿರ್ಮಿಸುವಲ್ಲಿ ನಮ್ಮೊಂದಿಗೆ ಕೈಜೋಡಿಸಬೇಕು,” ಎಂದು ಸಚಿವರು ಹೇಳಿದರು.

ಮಂಗಳೂರಿನಲ್ಲಿ ತನ್ನ ಕಚೇರಿಯನ್ನು ಸ್ಥಾಪಿಸುವ ಡೆಲಾಯ್ಟ್ ಸಂಸ್ಥೆಯ ನಿರ್ಧಾರವನ್ನು ಶ್ಲಾಘಿಸಿದ ಖರ್ಗೆ, ಈ ಹೂಡಿಕೆಯು ಸರ್ಕಾರದ ಬಿಯಾಂಡ್ ಬೆಂಗಳೂರು ದೃಷ್ಟಿಕೋನದಡಿ ಉತ್ತೇಜಿಸಲು ಬಯಸುತ್ತಿರುವ ಉದ್ಯಮ ವಲಯದ ಪಾಲ್ಗೊಳ್ಳುವಿಕೆಗೆ ಉತ್ತಮ ಉದಾಹರಣೆಯಾಗಿದೆ ಎಂದು ಹೇಳಿದರು.

Ad Widget

Ad Widget

“ಈ ಕಾರ್ಯ ಸಾಕಾರಗೊಳ್ಳಲು ವಿಶೇಷವಾಗಿ ಶ್ರಮಿಸಿದ ರೋಮಲ್ ಶೆಟ್ಟಿ ಮತ್ತು ಡೆಲಾಯ್ಟ್‌ನ ಇಡೀ ತಂಡವನ್ನು ನಾನು ಅಭಿನಂದಿಸಲು ಬಯಸುತ್ತೇನೆ. ಸರ್ಕಾರದ ಬಿಯಾಂಡ್ ಬೆಂಗಳೂರು ನೀತಿ ಉತ್ತೇಜಿಸಲು ಬಯಸುತ್ತಿರುವ ಉದ್ಯಮ ಸಹಭಾಗಿತ್ವ ಮತ್ತು ಬದ್ಧತೆ ಇದೇ ರೀತಿಯದ್ದಾಗಿದೆ. ಮಂಗಳೂರಿನಲ್ಲಿ ಅಪಾರ ಸಾಮರ್ಥ್ಯವಿದೆ ಎಂದು ನಾನು ಭಾವಿಸುತ್ತೇನೆ. ಇಂತಹ ಉಪಕ್ರಮಗಳು ಈ ಭಾಗದ ಅವಕಾಶಗಳನ್ನು ಅನಾವರಣಗೊಳಿಸಲು ನೆರವಾಗಲಿವೆ. ರೋಮಲ್ ಮತ್ತು ಡೆಲಾಯ್ಟ್‌ನ ಇಡೀ ತಂಡಕ್ಕೆ ನಾನು ಧನ್ಯವಾದ ಸಲ್ಲಿಸುತ್ತೇನೆ,” ಎಂದು ಅವರು ಹೇಳಿದರು.

ಬಿಯಾಂಡ್ ಬೆಂಗಳೂರು: ಪ್ರಾದೇಶಿಕ ನಗರಗಳಿಗೆ ಬೆಳವಣಿಗೆಯ ಅವಕಾಶ

ಸರ್ಕಾರದ ಬಿಯಾಂಡ್ ಬೆಂಗಳೂರು ಕಾರ್ಯತಂತ್ರವನ್ನು ವಿವರಿಸಿದ ಖರ್ಗೆ, ವಿವಿಧ ಪ್ರದೇಶಗಳ ಸಾಮರ್ಥ್ಯ ಮತ್ತು ಶಕ್ತಿಯನ್ನು ಬಳಸಿಕೊಂಡು ರಾಜ್ಯದಲ್ಲಿ ಬಹು ಆರ್ಥಿಕ ಬೆಳವಣಿಗೆಯ ಕೇಂದ್ರಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದರು.

ಮಂಗಳೂರಿನ ಇತಿಹಾಸದಲ್ಲೇ ಮೊದಲ ಬಾರಿಗೆ ನಗರದಲ್ಲಿ ಇತ್ತೀಚೆಗೆ ನಡೆದ ಕರ್ನಾಟಕ ಸಚಿವ ಸಂಪುಟ ಸಭೆಯನ್ನು ಉಲ್ಲೇಖಿಸಿದ ಅವರು, ಈ ಭಾಗದ ಪ್ರಮುಖ ಬೆಳವಣಿಗೆಯ ಅವಕಾಶಗಳನ್ನು ಗುರುತಿಸಲಾಗಿದ್ದು, ಪ್ರದೇಶದ ಅಭಿವೃದ್ಧಿಗಾಗಿ ಸುಮಾರು ₹6,000 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು.

ಸ್ಥಳೀಯ ಆರ್ಥಿಕತೆಯ ವೇಗವರ್ಧನೆ ಕಾರ್ಯಕ್ರಮ (ಲೀಪ್) ಮೂಲಕ ಸ್ಥಳೀಯ ಸಾಮರ್ಥ್ಯಗಳನ್ನು ಗುರುತಿಸುವುದು, ಹೂಡಿಕೆಗಳಿಗೆ ಅವಕಾಶ ಕಲ್ಪಿಸುವುದು ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ಪ್ರಾದೇಶಿಕ ಆರ್ಥಿಕ ಅಭಿವೃದ್ಧಿಗೆ ವೇಗ ನೀಡುವ ಉದ್ದೇಶ ಹೊಂದಿರುವುದಾಗಿ ಸಚಿವರು ತಿಳಿಸಿದರು.

“ಮಂಗಳೂರಿನಲ್ಲಿ ಅತ್ಯಂತ ಚುರುಕಾದ ಪ್ರತಿಭಾನ್ವಿತ ಮಾನವ ಸಂಪನ್ಮೂಲವಿದ್ದು, ದೇಶದ ಅತ್ಯುತ್ತಮ ಶೈಕ್ಷಣಿಕ ಸಂಸ್ಥೆಗಳು ಈ ಭಾಗಕ್ಕೆ ಬೆಂಬಲವಾಗಿವೆ. ಬೇರೆಡೆಗಳಲ್ಲಿ ಮರುಸೃಷ್ಟಿಸಲು ಕಷ್ಟವಾಗುವಂತಹ ಉತ್ತಮ ಜೀವನಮಟ್ಟವೂ ಇಲ್ಲಿದೆ. ಸಾಫ್ಟ್‌ವೇರ್ ಸಂಸ್ಥೆ ಇಜಿಯ ಡೆನ್ಮಾರ್ಕ್ ತಂಡವೊಂದು ಬೆಳಿಗ್ಗೆ ಸಸಿಹಿತ್ಲು ಕಡಲತೀರದಲ್ಲಿ ಅಲೆಗಳ ಮೇಲೆ ಸವಾರಿ ಮಾಡಿ, ನಂತರ ಕಚೇರಿಗೆ ಬಂದು ಕೆಲಸ ಮಾಡುವುದನ್ನು ನಾನು ಗಮನಿಸಿದ್ದೇನೆ. ಇಂತಹ ಅನುಕೂಲ ಬೇರೆ ಯಾವ ನಗರದಲ್ಲಿದೆ? ಇಂತಹ ಶಕ್ತಿಗಳನ್ನು ನಾವು ಬಳಸಿಕೊಳ್ಳಬೇಕು,” ಎಂದು ಅವರು ಹೇಳಿದರು.

ಕರ್ನಾಟಕವು ದೇಶದಲ್ಲೇ ಅತಿ ಹೆಚ್ಚು ವಲಸಿಗರನ್ನು ಆಕರ್ಷಿಸುತ್ತಿರುವುದರಿಂದ ಬೆಂಗಳೂರಿನ ಮೇಲೆ ಹೆಚ್ಚುತ್ತಿರುವ ಒತ್ತಡವನ್ನೂ ಅವರು ಪ್ರಸ್ತಾಪಿಸಿದರು. ಉತ್ತಮ ಉದ್ಯೋಗಾವಕಾಶಗಳಿರುವ ಇತರ ನಗರ ಕೇಂದ್ರಗಳನ್ನು ಅಭಿವೃದ್ಧಿಪಡಿಸುವುದರಿಂದ ರಾಜ್ಯದಾದ್ಯಂತ ಆರ್ಥಿಕ ಚಟುವಟಿಕೆಗಳನ್ನು ಹೆಚ್ಚು ಸಮಾನವಾಗಿ ಹಂಚಿಕೆ ಮಾಡಲು ಸಾಧ್ಯವಾಗಲಿದೆ ಎಂದು ಹೇಳಿದರು.

ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗೆ ಉದ್ಯಮ ಸಹಭಾಗಿತ್ವ

ಭವಿಷ್ಯದ ಅಗತ್ಯಗಳಿಗೆ ಸಿದ್ಧವಾಗಿರುವ ಮಾನವ ಸಂಪನ್ಮೂಲವನ್ನು ರೂಪಿಸುವಲ್ಲಿ ಉದ್ಯಮ ವಲಯದ ಪಾಲ್ಗೊಳ್ಳುವಿಕೆಯ ಮಹತ್ವವನ್ನು ಒತ್ತಿಹೇಳಿದ ಸಚಿವರು, ಉದ್ಯಮ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕರ್ನಾಟಕ ಸರ್ಕಾರ ಹಲವು ಕೌಶಲ್ಯಾಭಿವೃದ್ಧಿ ಉಪಕ್ರಮಗಳನ್ನು ಜಾರಿಗೊಳಿಸುತ್ತಿದೆ. ಪಠ್ಯಕ್ರಮ ರೂಪಿಸುವಲ್ಲಿ ಕಂಪನಿಗಳು ಪಾಲ್ಗೊಳ್ಳುವುದರ ಜೊತೆಗೆ, ತರಬೇತಿಯು ಬದಲಾಗುತ್ತಿರುವ ಉದ್ಯಮದ ಅಗತ್ಯಗಳಿಗೆ ಅನುಗುಣವಾಗಿರುವುದನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ ಎಂದರು.

ಮಂಗಳೂರಿನಲ್ಲಿಯೇ ಉದ್ಯಮಕ್ಕೆ ಸಿದ್ಧವಾಗಿರುವ ಪ್ರತಿಭೆಗಳನ್ನು ರೂಪಿಸಲು ಡೆಲಾಯ್ಟ್‌ನಂತಹ ಕಂಪನಿಗಳು ಶೈಕ್ಷಣಿಕ ಸಂಸ್ಥೆಗಳು ಮತ್ತು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.

“ಮಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಡೆಲಾಯ್ಟ್‌ನಂತಹ ಕಂಪನಿಯಲ್ಲಿ ಕೆಲಸ ಮಾಡಲು ಅಗತ್ಯವಾದ ಕೌಶಲ್ಯಗಳನ್ನು ಹೊಂದಿರಬಾರದೇ? ಉದ್ಯಮ ಮತ್ತು ಸರ್ಕಾರ ಒಟ್ಟಾಗಿ ಸಾಧಿಸಬಹುದಾದ ಅತ್ಯಂತ ಸುಲಭವಾದ ಅವಕಾಶವಿದು. ನಮ್ಮ ಶಿಕ್ಷಣ ಸಂಸ್ಥೆಗಳಿಂದ ಹೊರಬರುವ ಪ್ರತಿಭೆಗಳು ಇಲ್ಲಿಯೇ ಸೃಷ್ಟಿಯಾಗುತ್ತಿರುವ ಉದ್ಯೋಗಾವಕಾಶಗಳಿಗೆ ಸಿದ್ಧರಾಗಿರುವುದನ್ನು ನಾವು ಖಚಿತಪಡಿಸಿಕೊಳ್ಳಬೇಕು,” ಎಂದು ಅವರು ಹೇಳಿದರು.

ಆರೋಗ್ಯ ಸೇವೆ ಮತ್ತು ಆರೋಗ್ಯ ವಿಜ್ಞಾನ ಕ್ಷೇತ್ರದಲ್ಲಿ ಈ ಪ್ರದೇಶ ಹೊಂದಿರುವ ಬಲವನ್ನು ಗಮನದಲ್ಲಿಟ್ಟುಕೊಂಡು, ಮಂಗಳೂರಿನಲ್ಲಿ ಆರೋಗ್ಯ ವಿಜ್ಞಾನಕ್ಕೆ ಆದ್ಯತೆ ನೀಡುವ ಉತ್ಕೃಷ್ಟತಾ ಕೇಂದ್ರ ಸ್ಥಾಪಿಸುವ ಸಾಧ್ಯತೆಯನ್ನು ಪರಿಶೀಲಿಸುವಂತೆಯೂ ಖರ್ಗೆ ಪ್ರಸ್ತಾಪಿಸಿದರು.

ನವೋದ್ಯಮ ಪರಿಸರ ವ್ಯವಸ್ಥೆಯನ್ನು ಬಲಪಡಿಸುವುದು

ಕರ್ನಾಟಕದ ಪ್ರಮುಖ ಎಲಿವೇಟ್ ಕಾರ್ಯಕ್ರಮವನ್ನು ಪ್ರಸ್ತಾಪಿಸಿದ ಸಚಿವರು, ಅರ್ಹ ನವೋದ್ಯಮಗಳಿಗೆ ಯಾವುದೇ ಪಾಲುದಾರಿಕೆ ಹಕ್ಕನ್ನು ನೀಡುವ ಅಗತ್ಯವಿಲ್ಲದೆ ₹1 ಕೋಟಿವರೆಗೆ ಅನುದಾನ ಒದಗಿಸಲಾಗುತ್ತಿದೆ. ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡು ತಮ್ಮ ಉದ್ಯಮಗಳನ್ನು ನಿರ್ಮಿಸಲು ಮತ್ತು ವಿಸ್ತರಿಸಲು ಈ ಭಾಗದ ಉದ್ಯಮಿಗಳಿಗೆ ಅವರು ಪ್ರೋತ್ಸಾಹ ನೀಡಿದರು.

ನಗರ ಸಂಚಾರ ಸೇರಿದಂತೆ ಸಾರ್ವಜನಿಕ ವಲಯದ ಸವಾಲುಗಳಿಗೆ ಪರಿಹಾರಗಳನ್ನು ಅಭಿವೃದ್ಧಿಪಡಿಸುವ ನವೋದ್ಯಮಗಳು ಸರ್ಕಾರದ ಸಹಭಾಗಿತ್ವದಲ್ಲಿ ತಮ್ಮ ನವೀನ ಪರಿಹಾರಗಳನ್ನು ಪ್ರಾಯೋಗಿಕವಾಗಿ ಪರೀಕ್ಷಿಸಲು ಅವಕಾಶ ಕಲ್ಪಿಸುವ ಸರ್ಕಾರದ ನಿಯಂತ್ರಣಾತ್ಮಕ ಪ್ರಯೋಗ ವ್ಯವಸ್ಥೆಯ ಬಗ್ಗೆಯೂ ಅವರು ವಿವರಿಸಿದರು.

ಈ ಉಪಕ್ರಮದಡಿ ಯಶಸ್ವಿಯಾಗುವ ಪ್ರಾಯೋಗಿಕ ಯೋಜನೆಗಳನ್ನು ಕರ್ನಾಟಕದಾದ್ಯಂತ ವಿಸ್ತರಿಸುವುದರ ಜೊತೆಗೆ ಇತರ ರಾಜ್ಯಗಳಿಗೂ ಕೊಂಡೊಯ್ಯುವ ಅವಕಾಶವಿದೆ. ಈಗಾಗಲೇ 16 ನವೋದ್ಯಮಗಳು ಈ ಕಾರ್ಯಕ್ರಮದಲ್ಲಿ ನೋಂದಾಯಿಸಿಕೊಂಡಿದ್ದು, ಈ ಸಂಖ್ಯೆಯನ್ನು 100ಕ್ಕೆ ಹೆಚ್ಚಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಪ್ರಾದೇಶಿಕ ಅಭಿವೃದ್ಧಿಗೆ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ ಖರ್ಗೆ, ಹೂಡಿಕೆಗಳಿಗೆ ಅನುಕೂಲ ಕಲ್ಪಿಸುವುದು, ಪ್ರತಿಭಾನ್ವಿತ ಮಾನವ ಸಂಪನ್ಮೂಲ ವ್ಯವಸ್ಥೆಯನ್ನು ಬಲಪಡಿಸುವುದು ಹಾಗೂ ಕರಾವಳಿ ಕರ್ನಾಟಕದಲ್ಲಿ ಉದ್ಯಮಗಳಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಉದ್ಯಮ ವಲಯದ ನಾಯಕರಿಗೆ ಭರವಸೆ ನೀಡಿದರು.

“ಕರ್ನಾಟಕದ ಮುಂದಿನ ಹಂತದ ಬೆಳವಣಿಗೆ ನಮ್ಮ ಪ್ರಾದೇಶಿಕ ನಗರಗಳಿಂದ ಬರಬೇಕು. ಬೆಂಗಳೂರಿನ ಆಚೆಗೂ ಇರುವ ಅವಕಾಶಗಳನ್ನು ಉದ್ಯಮಗಳು ಗುರುತಿಸಿ, ರಾಜ್ಯದಾದ್ಯಂತ ಸದೃಢ ಮತ್ತು ಸುಸ್ಥಿರ ಆರ್ಥಿಕ ವ್ಯವಸ್ಥೆಗಳನ್ನು ನಿರ್ಮಿಸುವಲ್ಲಿ ನಮ್ಮೊಂದಿಗೆ ಕೈಜೋಡಿಸಬೇಕು ಎಂಬುದು ನಮ್ಮ ಆಶಯ,” ಎಂದು ಅವರು ಹೇಳಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!