ಸುಳ್ಯ
ಕಡಬ: ಅನ್ಯಕೋಮಿನ ಯುವಕರ ಜತೆ ರೂಮಿನಲ್ಲಿ ಹಿಂದೂ ಯುವತಿ – ಸ್ಥಳೀಯರ ಕೈಗೆ ಸಿಕ್ಕಿಹಾಕಿಕೊಂಡ ಯುವತಿ, ಯುವಕರು ಪರಾರಿ
ಆಲಂಕಾರು: ಹಿಂದೂ ಯುವತಿಯೋರ್ವಳು ಅನ್ಯಕೋಮಿನ ಯುವಕನ ಜತೆಗಿದ್ದ ಹಾಗೂ ಈ ಮಾಹಿತಿ ಸ್ಥಳೀಯರಿಗೆ ದೊರಕುತ್ತಲೇ ಎಚ್ಚೆತ್ತ ಯುವಕ , ಯುವತಿಯನ್ನು ಬಿಟ್ಟು ಪರಾರಿಯಾದ ಘಟನೆ ಕಡಬ ತಾಲೂಕಿನ ಕೊಂತೂರು ಪೆರಾಬೆ ಗ್ರಾಮದ ಕೋಚಕಟ್ಟೆಯಲ್ಲಿ ರವಿವಾರ ಸಂಜೆ ನಡೆದಿದೆ.
ಹಿಂದೂ ಯುವತಿ ಕಾಸರಗೋಡು ಜಿಲ್ಲೆಯ ಮಂಜೇಶ್ವರದವಳೆಂದು ತಿಳಿದು ಬಂದಿದೆ. ಆಕೆಯ ಜತೆಗಿದ್ದ ಯುವಕ ಕೊಣಾಜೆ ಸಮೀಪದ ಮುಡಿಪುನವ ಎನ್ನಲಾಗಿದೆ. ಈತ ಅನ್ಯ ಕೋಮಿನವನಾಗಿದ್ದು, ಪ್ರಸ್ತುತ ಆತ ಕೆಲಸದ ನಿಮಿತ್ತ ಕೊಂತೂರು ಪೆರಾಬೆ ಕ್ರಾಮದ ಕೋಚಕಟ್ಟೆಯಲ್ಲಿ ಬಾಡಿಗೆ ರೂಮಿನಲ್ಲಿದ್ದ. ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಈ ಹಿಂದೂ ಯುವತಿ ಬಳಿಕ ಈ ಯುವಕನ ಜತೆ ನಿರಂತರ ಸಂಪರ್ಕದಲ್ಲಿದ್ದಳು ಎಂದು ಹೇಳಲಾಗುತ್ತಿದೆ.
ರವಿವಾರ ಆ ಯುವತಿಯನ್ನು ಕೋಚಕಟ್ಟೆಯ ತನ್ನ ರೂಮಿಗೆ ಆ ಯುವಕ ಬರಮಾಡಿಕೊಂಡಿದ್ದ. ಇದನ್ನು ಸ್ಥಳೀಯರು ಗಮನಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಿಗೆ ತಿಳಿಸಿದ್ದಾರೆ. ಹಿಂಜಾವೇ ಯುವಕರು ಜೋಡಿಯಿದ್ದ ರೂಮಿನ ಬಳಿ ಬರುತ್ತಿದ್ದಂತೆ, ಯುವಕನ ಸ್ತಳೀಯ ಸ್ನೇಹಿತನೊಬ್ಬ ಈ ಮಾಹಿತಿಯನ್ನು ಅವನಿಗೆ ರವಾನಿಸಿದ್ದಾನೆ. ಕೂಡಲೇ ಎಚ್ಚೆತ್ತ ಆತ ಯುವತಿಯನ್ನು ಹಿಂಬಾಗಿನ ಮೂಲಕ ಹೊರಗೆ ಕಳುಹಿಸಿ ಪರಾರಿಯಾಗಿದ್ದಾನೆ.
Gold Rate Today : ಮಂಗಳವಾರ ಚಿನ್ನದ ಬೆಲೆ ತಟಸ್ಥ – ಬೆಳ್ಳಿ ದರ ಇಳಿಕೆ
ಆದರೇ ಯುವತಿಗೆ ಊರಿನ ಪರಿಚಯ ಅಷ್ಟಾಗಿ ಇರದ ಹಿನ್ನಲೆಯಲ್ಲಿ ತಪ್ಪಿಸಿಕೊಂಡು ಹೋಗಲು ಸಾಧ್ಯವಾಗದೇ ಹಿಂಜಾವೇ ಕಾರ್ಯಕರ್ತರ ಕೈಗೆ ಸಿಕ್ಕಿ ಬಿದ್ದಿದ್ದಾಳೆ ಎನ್ನಲಾಗಿದೆ . ಜಾಗರಣ ವೇದಿಕೆಯ ಕಾರ್ಯಕರ್ತರು ಯುವತಿಯ ಬಗ್ಗೆ ವಿಚಾರಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಕಡಬ ಪೊಲೀಸರು ಯುವತಿಯನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿ ಮನೆಗೆ ಕಳುಹಿಸುವ ವ್ಯವಸ್ಥೆ ಮಾಡಿದರು.
ಸುಳ್ಯ
Suresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು. ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಸುಳ್ಯ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು.
ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಈ ಸಂದರ್ಭದಲ್ಲಿ ಹೋಟೆಲ್ ಮಾಲಕರಾದ ನಾರಾಯಣ ಕೇಕಡ್ಕ ಹಾಗೂ ಸಿಬ್ಬಂದಿ ಸುರೇಶ್ ರೈನಾ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಇತ್ತಿಚೆಗಷ್ಟೇ ರಸಪಾಕ ಗ್ರಾಂಡ್ ಗೆ ಇನ್ಫೋಸೀಸ್ ಪ್ರತಿಷ್ಠಾನದ ಸುಧಾಮೂರ್ತಿ ಸಹಿತ ಹಲವು ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುಳ್ಯ
Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ
ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.
ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.
ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.
-
ಬಿಗ್ ನ್ಯೂಸ್13 hours agoRain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
-
ಅಪರಾಧ12 hours agoMangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್ಐ ವಶಕ್ಕೆ
-
ನಿಧನ ವಾರ್ತೆ11 hours agoAccident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
-
ಅಂತರ ರಾಜ್ಯ10 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
-
ಸುಳ್ಯ7 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ಅಂತರ ರಾಜ್ಯ10 hours agoInsurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್ಗೆ 6 ವರ್ಷಗಳ ವಿಮೆ
-
ನಿಧನ ವಾರ್ತೆ12 hours agoಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು
-
ಸ್ಥಳೀಯ7 hours agoUppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!















