ಅಪರಾಧ
ಪುತ್ತೂರು : ಪೋಕ್ಸೊ ಪ್ರಕರಣದ ಆರೋಪಿ ರಾಜು ಹೊಸ್ಮಠಗೆ ಅಡಗಲು ಹಾಗೂ ಪರಾರಿಯಾಗಲು ನೆರವು – ಇಬ್ಬರ ಬಂಧನ
ಪುತ್ತೂರು: ನ 15 : ಪೋಕ್ಸೊ ಪ್ರಕರಣದ ಆರೋಪಿಗೆ ಪರಾರಿಯಾಗಲು ಸಹಕಾರ ನೀಡಿದ ಆರೋಪದಡಿ ಇಬ್ಬರನ್ನು ಪುತ್ತೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಂಬೇಡ್ಕರ್ ತತ್ವ ರಕ್ಷಣೆ ಎಂಬ ದಲಿತ ಪರ ಸಂಘಟನೆಯ ಅಧ್ಯಕ್ಷ ರಾಜು ಹೊಸ್ಮಠ ವಿರುದ್ದ ದಲಿತ ಸಮುದಾಯಕ್ಕೆ ಸೇರಿದ ಅಪ್ರಾಪ್ತ ಬಾಲಕಿ ನೀಡಿದ ದೂರಿನಂತೆ ವಾರದ ಹಿಂದೆ ಪುತ್ತೂರಿನ ಮಹಿಳಾ ಠಾಣೆಯಲ್ಲಿ ಆತನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕ ರಣ ದಾಖಲಾಗಿತ್ತು.
ಆ ಬಳಿಕ ಆರೋಪಿ ರಾಜು ತಲೆಮರೆಸಿಕೊಂಡಿದ್ದು ಆತನಿಗೆ ತಪ್ಪಿಸಲು ನೆರವಾದ, ಅಡಗಲು ಸಹಕರಿಸೊದ ಹಾಗೂ ಆತನಿಗೆ ಮೊಬೈಲ್ ನೀಡಿ ಉಪಕರಿಸಿದ ಆರೋಪದ ಮೇರೆಗೆ ಇಬ್ಬರನ್ನು ಬಂಧಿಸಲಾಗಿದೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಶೇಕನಾಜೆ ಅಮ್ಮುರವರ ಪುತ್ರ ಗಣೇಶ(27ವ.) ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮನಗಲಿ ಹುಲಿಕಾನ ಎಸ್ಟೇಟ್ ಲಿಂಗಪ್ಪ(54ವ.) ಬಂಧಿತರು.
ರಾಜು ಹೊಸ್ಮಠ ಎಸ್ಕೇಪ್ ಆಗಲು ಬಳಸಿದ ಮಾರುತಿ ಸ್ವಿಪ್ಟ್ ಕಾರನ್ನು ಪೊಲೀಸರು ಬಂಧಿತರಿಂದ ವಶಕ್ಕೆ ಪಡೆದುಕೊಂಡಿದ್ದಾರೆ.

ರಾಜು ಅವರನ್ನು ಉಜಿರೆಯಿಂದ ಮೂಡಿಗೆರೆಗೆ ಕಾರಿನಲ್ಲಿ ಕರೆದುಕೊಂಡು ಹೋಗಿ ಬಿಡಲಾಗಿದೆ ಎಂದು ಆರೋಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಹಾಗೂ ಆರೋಪಿಗೆ ತಲೆಮರೆಸಿಕೊಳ್ಳಲು ಸಹಕರಿಸಿದ ಕಾರಣಕ್ಕಾಗಿ ಗಣೇಶ್ ಅವರನ್ನು ಬಂಧಿಸಲಾಗಿದೆ. ರಾಜು ಅವರಿಗೆ ಮೂರು ದಿನಗಳ ಕಾಲ ಆಶ್ರಯ ನೀಡಿದ ಹಾಗೂ ಮೊಬೈಲ್ ನೀಡಿದ ಆರೋಪದಲ್ಲಿ ಲಿಂಗಪ್ಪರವರನ್ನು ಬಂಧಿಸಲಾಗಿದೆ.
ರಾಜು ಹೊಸ್ಮಠ ಬಂಧನದ ಉದ್ದೇಶದಿಂದ ಆತನ ಅಡಗುತಾಣದ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ನಡೆಸುತಿದ್ದಾರೆ. ಏತನ್ಮಧ್ಯೆ ರಾಜುರವರು ತಮ್ಮ ವಕೀಲರ ಮೂಲಕ ನಿರೀಕ್ಷಣಾ ಜಾಮೀನಿಗೆ ಪ್ರಯತ್ನಿಸುತ್ತಿರುವುದಾಗಿ ತಿಳಿದು ಬಂದಿದೆ
ಅಪರಾಧ
Bantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
2009ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಹನೀಫ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಇದಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.
ಅಕ್ಟೋಬರ್ 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಗದೀಶ್ ಮತ್ತು ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಅಂತರ ರಾಜ್ಯ
Arrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಯನಾಡು ಜಿಲ್ಲೆಯ ಮಾನಂತವಾಡಿ, ವೆಳ್ಳರ, ಚೆನ್ನಿಕ್ಕರ ನಿವಾಸಿ ಬಿಜು ಆಂಟನಿ (45) ಬಂಧಿತ ಆರೋಪಿ.
ಕಾಸರಗೋಡು: ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಯನಾಡು ಜಿಲ್ಲೆಯ ಮಾನಂತವಾಡಿ, ವೆಳ್ಳರ, ಚೆನ್ನಿಕ್ಕರ ನಿವಾಸಿ ಬಿಜು ಆಂಟನಿ (45) ಬಂಧಿತ ಆರೋಪಿ.
ಚೇರ್ತಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಸುಲ್ತಾನ್ ಬತ್ತೇರಿ ಮೂಲದ ಪತ್ನಿ ಮತ್ತು ಮಕ್ಕಳೊಂದಿಗೆ ವಾಸಿಸುತ್ತಿದ್ದ ವೇಳೆ ಆತ ಸಿಕ್ಕಿಬಿದ್ದಿದ್ದಾನೆ ಎಂದು ತಿಳಿದುಬಂದಿದೆ.
ವೈದ್ಯನೆಂದು ನಂಬಿಸಿ ಅತ್ಯಾಚಾರ ಆರೋಪ
ವೈದ್ಯನೆಂದು ಪರಿಚಯಿಸಿಕೊಂಡು ತಳಿಪರಂಬ ಮೂಲದ ಯುವತಿಯೊಬ್ಬಳನ್ನು ಮಂಜೇಶ್ವರದ ಹೊಸಂಗಡಿಯ ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪ ಬಿಜು ಆಂಟನಿ ವಿರುದ್ಧವಿದೆ. ಈ ಸಂಬಂಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಯುವತಿಯಿಂದ ಮೂರೂವರೆ ಪವನ್ ಚಿನ್ನಾಭರಣವನ್ನೂ ಪಡೆದಿದ್ದಾನೆ ಎಂದು ಆರೋಪಿಸಲಾಗಿದೆ.
ಮದುವೆಯಾದ ಮೂರೇ ದಿನಕ್ಕೆ ಪರಾರಿ
ಆರೋಪಿ 2020ರಲ್ಲಿ ತನ್ನ ವಂಚನೆಯ ಜಾಲ ಆರಂಭಿಸಿದ್ದ ಎನ್ನಲಾಗಿದೆ. ಚೇರ್ತಲ ಸಮೀಪದ ನಿವಾಸಿ ರಮ್ಯಾ ಎಂಬ ಯುವತಿಯನ್ನು ರಾಜೇಶ್ ಎಂಬ ಹೆಸರಿನಲ್ಲಿ ಮದುವೆಯಾಗಿದ್ದ ಆತ, ಮದುವೆಯಾದ ಮೂರನೇ ದಿನವೇ ₹30 ಸಾವಿರ ನಗದು ಮತ್ತು ಏಳು ಪವನ್ ಚಿನ್ನಾಭರಣ ಪಡೆದುಕೊಂಡು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ರಮ್ಯಾ ನೀಡಿದ ದೂರಿನ ಮೇರೆಗೆ ಚೇರ್ತಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ, ಆರೋಪಿಯನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಇದೀಗ ಸುಮಾರು ಆರು ವರ್ಷಗಳ ಬಳಿಕ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜು ಆಂಟನಿಯನ್ನು ಬಂಧಿಸಲಾಗಿದೆ.
ಬೇರೆ ಬೇರೆ ಹೆಸರುಗಳಲ್ಲಿ ವಂಚನೆ
ವೈದ್ಯನೆಂದು ಹೇಳಿಕೊಂಡು ಮದುವೆ ಜಾಹೀರಾತುಗಳನ್ನು ನೀಡುವ ಮೂಲಕ ಮಹಿಳೆಯರನ್ನು ಪರಿಚಯಿಸಿಕೊಳ್ಳುತ್ತಿದ್ದ ಆರೋಪಿ, ಬಳಿಕ ಮದುವೆಯಾಗುವುದಾಗಿ ನಂಬಿಸಿ ಅವರಿಂದ ಚಿನ್ನಾಭರಣ ಹಾಗೂ ಹಣ ಪಡೆದು ಪರಾರಿಯಾಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವಿವಿಧ ಸ್ಥಳಗಳಲ್ಲಿ ಬೇರೆ ಬೇರೆ ಹೆಸರುಗಳನ್ನು ಬಳಸಿಕೊಂಡು ಮಹಿಳೆಯರಿಗೆ ವಂಚಿಸುತ್ತಿದ್ದ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಆರೋಪಿಯ ವಿರುದ್ಧದ ಪ್ರಕರಣಗಳ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಅಪರಾಧ
Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.
ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.
ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.
ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
-
ನಿಧನ ವಾರ್ತೆ8 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು6 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ7 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ7 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ರಾಜ್ಯ7 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ9 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?
-
Uncategorized9 hours agoCJP protest-ಇಂದು CJP ಪ್ರತಿಭಟನೆ : ದೆಹಲಿಗೆ ಬರಬೇಕಾಗಿದ್ದ 250 ರೈಲು ರದ್ದು, ಹಲವು ರೈಲಿನ ವೇಳಾಪಟ್ಟಿ ಬದಲಾವಣೆ : ಮೆಟ್ರೋ ಸಂಚಾರ ಸ್ಥಗಿತ – ಇಂಟರ್ ನೆಟ್ ಬಂದ್..! ‘ಹೆದರಿದ್ರಾ ಮೋದಿಜೀ..?’ ಎಂದ CJP
-
ಅಂತರ ರಾಜ್ಯ7 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ


















