ಬೆಂಗಳೂರು
Daivaradane | ಆರ್.ಎಸ್.ಎಸ್ ಪ್ರೇರಿತ ರಾಷ್ಟ್ರೋತ್ಥನ ವಿದ್ಯಾಕೇಂದ್ರದಲ್ಲೇ ದೈವರಾಧನೆಗೆ ಅವಮಾನ – ಶೂ ಧರಿಸಿಕೊಂಡೇ ದೈವ ಪಾತ್ರಿಯ ಕೈಯಲ್ಲಿದ್ದ ಜೀಟಿಗೆ ಹಿಡಿದ ಸಂಸದ ತೇಜಸ್ವಿ ಸೂರ್ಯ – ಹಿಂದೂ ಮಹಾಸಭಾ ಆರೋಪ : ಮೌನವಾಗಿರುವ ತುಳುನಾಡಿನ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ
ಬೆಂಗಳೂರು: ಕಾಂತಾರ ಸಿನಿಮಾ ಹಿಟ್ ಆದ ನಂತರ ಆರಾಧನೆಯಲ್ಲಿದ್ದ ತುಳುನಾಡಿನ ದೈವರಾಧನೆ(Daivaradane) ಎಲ್ಲೆಂದರಲ್ಲಿ ಪ್ರದರ್ಶನವಾಗುತ್ತಾ ಅವಮಾನಗೀಡಾಗುತ್ತಿದೆ.
ತುಳುನಾಡಿನ ದೈವರಾಧನೆ ಅಲ್ಲಲ್ಲಿ ಪ್ರದರ್ಶನಗೊಳ್ಳುತ್ತಾ, ಹಣ ಮಾಡುವ ಸಲುವಾಗಿ ಅಲ್ಲಲ್ಲಿ ಆರಾಧನೆಗೊಳ್ಳುತ್ತಾ ಅವಮಾನಾದ ವಿರುದ್ದ ದೈವರಾಧಕರು ಮತ್ತು ದೈವ ನರ್ತಕರು ಸಿಡಿದೆದ್ದ ಬೆನ್ನಲ್ಲೇ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಬೆಂಗಳೂರಿನ ಸಂಸದ ತೇಜಸ್ವಿ ಸೂರ್ಯರಿಂದಲೂ ದೈವರಾಧನೆಗೆ ಅವಮಾನವಾಗಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘ ಪ್ರೇರಿತ ರಾಷ್ಟ್ರೋತ್ಥನ ಪರಿಷತ್ ನ ಬೆಂಗಳೂರಿನ ತಣ್ಣಿಸಂದ್ರದ ರಾಷ್ಟ್ರೋತ್ಥನ ವಿದ್ಯಾಕೇಂದ್ರದ ವಾರ್ಷಿಕೋತ್ಸವದ ವೇದಿಕೆಯಲ್ಲಿ ದೈವರಾಧನೆಗೆ ಅವಮಾನವಾಗಿದೆ.
ದೈವದ ಚಿತ್ರ, ವೇಷ ಭೂಷಣ , ವೇದಿಕೆಯಲ್ಲಿ ದೈವದ ವೇಷ ಹಾಕುವುದನ್ನು ನಿಲ್ಲಿಸಬೇಕೆಂದು ದೈವ ನರ್ತಕರು ಸಚಿವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ನಂತರವೂ ಈ ವೇದಿಕೆಯಲ್ಲಿ ಮತ್ತೆ ಅವಮಾನವಾಗಿದೆ.
ದೈವದ ಪಾತ್ರ ಹಾಕಿರುವವರ ಕೈಯಲ್ಲಿರುವ ಜೀಟಿಗೆಯನ್ನು ಕಾಲಿಗೆ ಶೂ ಹಾಕಿರುವ ಸಂಸದ ತೇಜಸ್ವಿ ಸೂರ್ಯ ಹಿಡಿದುಕೊಂಡಿರುವುದರ ವಿರುದ್ದ ತುಳುನಾಡಿನಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಸಂಸದರ ನಡೆಗೆ ಹಿಂದೂ ಮಹಾಸಭಾ ಕೂಡ ಆಕ್ರೋಶ ವ್ಯಕ್ತಪಡಿಸಿದೆ.
ಭೇಷ್ ಬಿಜೆಪಿಗರೆ…?
ಜೈ ಹಿಂದೂ ರಾಷ್ಟ್ರ…
ಇದೇನಾ ಸಂಸ್ಕೃತಿ ???
ಇದೇನ ಪದ್ಧತಿ ???
ಭಾರತೀಯ ಜನತಾ ಪಕ್ಷಕ್ಕೆ ಹಿಂದೂ ಸಂಸ್ಕೃತಿಯ ಬಗ್ಗೆ /ದೈವರಾದನೆಯ ಬಗ್ಗೆ /ಹಿಂದೂ ಸಮುದಾಯದ ಬಗ್ಗೆ, ಇರುವಂತಹ ಗೌರವವನ್ನು ನೋಡಿ ….
ಆಡಳಿತದಲ್ಲಿರುವಂತಹ ಡಬಲ್ ಇಂಜಿನ್ ಸರಕಾರದ ಮಾನ್ಯ ಸಂಸದರಾದ ಶ್ರೀ ತೇಜಸ್ವಿ ಸೂರ್ಯ ರವರು ಚಪ್ಪಲಿಯನ್ನ ಧರಿಸಿ ನಿಂತಿರುವುದನ್ನ ಕಣ್ಣಾರೆ ನೋಡಿ…
ಇಂಥವರಿಂದ ಹಿಂದೂ ಸಮಾಜ ಏನನ್ನು ಅಪೇಕ್ಷಿಸಲು ಸಾಧ್ಯ??? ಎಂದು ಪೋಸ್ಟ್ ಹಾಕಿದೆ.

ದೈವರಾಧನೆಗೆ ಆಗುತ್ತಿರುವ ಅವಮಾನಗಳ ವಿರುದ್ದ ತುಳುನಾಡಿನ ಸಂಸದ ಸಚಿವರು ಶಾಸಕರು ಮೌನವಾಗಿರುವುದರ ವಿರುದ್ದವೂ ಆಕ್ರೋಶ ವ್ಯಕ್ತವಾಗಿದೆ.
ರಾತ್ರಿ ತನ್ನ ಪೇಸ್ಬುಕಲ್ಲಿ ದೈವದೊಂದಿಗೆ ಶೂ ಹಾಕಿಕೊಂಡ ಪೋಟೋ ಹಂಚಿಕೊಂಡಿದ್ದ ಸಂಸದ ಸೂರ್ಯ ಬೆಳ್ಳಗೆಯಾಗುತಿದ್ದಂತೆ ಪೋಟೋ ಡಿಲೀಟ್ ಮಾಡಿದ್ದಾರೆ. ಆದರೆ ಆ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಅಪರಾಧ
Raid-ರಾಜ್ಯದ 45 ಐಸ್‌ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
ರಾಜ್ಯಾದ್ಯಂತ ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು, ಬೆಂಗಳೂರು, ಮೈಸೂರು ಮತ್ತು ರಾಯಚೂರಿನ ನಾಲ್ಕು ಘಟಕಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಉಲ್ಲಂಘನೆಗಳು ಪತ್ತೆಯಾಗಿವೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು, ಅ. 9: ರಾಜ್ಯಾದ್ಯಂತ ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು, ಬೆಂಗಳೂರು, ಮೈಸೂರು ಮತ್ತು ರಾಯಚೂರಿನ ನಾಲ್ಕು ಘಟಕಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಉಲ್ಲಂಘನೆಗಳು ಪತ್ತೆಯಾಗಿವೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ನಾಲ್ಕು ಘಟಕಗಳಲ್ಲಿ ನಿಯಮ ಉಲ್ಲಂಘನೆ
ಪರಿಶೀಲನೆ ವೇಳೆ ಬೆಂಗಳೂರಿನ ಜಯನಗರ 3ನೇ ಬ್ಲಾಕ್‌ನ ಸಾವರ ಐಸ್‌ಕ್ರೀಂ ಕೆಫೆ, ಬನ್ನೇರುಘಟ್ಟ ರಸ್ತೆಯ ಬಿಳೇಕಹಳ್ಳಿಯ ಎಂ.ಎನ್. ಎಂಟರ್‌ಪ್ರೈಸಸ್, ಮೈಸೂರಿನ ಜಾನ್ ಕ್ಯಾಂಡಿ ಐಸ್‌ಕ್ರೀಂ ತಯಾರಿಕಾ ಘಟಕ ಹಾಗೂ ರಾಯಚೂರಿನ ಜೆಮಿನಿ ಐಸ್‌ಕ್ರೀಂ ತಯಾರಿಕಾ ಘಟಕಗಳಲ್ಲಿ ನಿಯಮ ಉಲ್ಲಂಘನೆ ಕಂಡುಬಂದಿದೆ.
ಈ ಘಟಕಗಳ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಹಾಗೂ ಸಂಬಂಧಿತ ನಿಯಮಗಳ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.
70 ಆಹಾರ ಮಾದರಿಗಳ ಸಂಗ್ರಹ
ವಿಶೇಷ ತಪಾಸಣೆಯ ಸಂದರ್ಭದಲ್ಲಿ ವಿವಿಧ ಘಟಕಗಳಿಂದ ಐಸ್‌ಕ್ರೀಂ, ಹಾಲು, ಹಾಲಿನ ಪುಡಿ, ಫ್ಲೇವರಿಂಗ್ ಪದಾರ್ಥಗಳು, ಸಕ್ಕರೆ, ಆಹಾರ ಸೇರ್ಪಡೆ ಪದಾರ್ಥಗಳು ಸೇರಿದಂತೆ ವಿವಿಧ ಕಚ್ಚಾವಸ್ತುಗಳ ಒಟ್ಟು 70 ಮಾದರಿಗಳನ್ನು ಸಂಗ್ರಹಿಸಲಾಗಿದೆ.
ಈ ಮಾದರಿಗಳನ್ನು ಗುಣಮಟ್ಟ ಮತ್ತು ಆಹಾರ ಸುರಕ್ಷತಾ ಮಾನದಂಡಗಳ ಪರಿಶೀಲನೆಗಾಗಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. ಪ್ರಯೋಗಾಲಯದ ವರದಿಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ
ಪರಿಶೀಲನೆಯ ವೇಳೆ ಅವಧಿ ಮೀರಿದ ಐಸ್‌ಕ್ರೀಂ, ಹಾಲು, ಬಿಸ್ಕತ್ ಹಾಗೂ ಕೊಬ್ಬರಿ ಪುಡಿ ಪತ್ತೆಯಾಗಿವೆ. ಅಲ್ಲದೆ, ಕೆಲವು ಆಹಾರ ಉತ್ಪನ್ನಗಳ ಮೇಲೆ ಲೇಬಲಿಂಗ್ ನಿಯಮಗಳನ್ನು ಸರಿಯಾಗಿ ಪಾಲಿಸದಿರುವುದೂ ಅಧಿಕಾರಿಗಳ ಗಮನಕ್ಕೆ ಬಂದಿದೆ ಎಂದು ಪ್ರಕಟಣೆ ತಿಳಿಸಿದೆ.
ಆಹಾರ ಪದಾರ್ಥಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಇಂತಹ ತಪಾಸಣೆಗಳನ್ನು ಮುಂದುವರಿಸಲಾಗುವುದು. ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.
ಬಿಗ್ ನ್ಯೂಸ್
Half helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ
ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ಬೆಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಥವಾ ಐಎಸ್‌ಐ ಗುಣಮಟ್ಟದ ಮಾನದಂಡ ಹೊಂದಿರುವ ಸುರಕ್ಷಿತ ಹೆಲ್ಮೆಟ್‌ಗಳನ್ನೇ ಧರಿಸಬೇಕು. ತಪಾಸಣೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಕಳಪೆ ಗುಣಮಟ್ಟದ ಅಥವಾ ಹಾಫ್ ಹೆಲ್ಮೆಟ್‌ಗಳನ್ನು ಬಳಸುವುದರಿಂದ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಗಂಭೀರ ತಲೆಪೆಟ್ಟಾಗುವ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಹಾಫ್ ಹೆಲ್ಮೆಟ್‌ಗಳನ್ನು ಬಳಸುವ ಸವಾರರ ವಿರುದ್ಧ ಮಾತ್ರವಲ್ಲದೆ, ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನು ತಯಾರಿಸುವ ಘಟಕಗಳು ಹಾಗೂ ಅವುಗಳನ್ನು ಮಾರಾಟ ಮಾಡುವ ಅಂಗಡಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅನಧಿಕೃತವಾಗಿ ಇಂತಹ ಹೆಲ್ಮೆಟ್‌ಗಳನ್ನು ಮಾರಾಟ ಮಾಡುವವರ ವಿರುದ್ಧ ವ್ಯಾಪಕ ಕಾರ್ಯಾಚರಣೆ ನಡೆಸಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.
ಸರ್ಕಾರದ ನಿಯಮ ಉಲ್ಲಂಘಿಸಿ ಹಾಫ್ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವ ಸವಾರರ ವಿರುದ್ಧ ಪೊಲೀಸರು ಹಾಗೂ ಸಾರಿಗೆ ಅಧಿಕಾರಿಗಳು ದಂಡ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.
ಅಪರಾಧ
FIR-ಮತದಾರರ ಹೆಸರು ಅಳಿಸಲು ಫಾರಂ-7 ಅರ್ಜಿ ದುರ್ಬಳಕೆ; ಬೆಂಗಳೂರಿನಲ್ಲಿ ಐವರ ವಿರುದ್ಧ FIR
ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಂಡು 5,698 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಯತ್ನಿಸಲಾಗಿದೆ ಎಂಬ ಆರೋಪದಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಂಡು 5,698 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಯತ್ನಿಸಲಾಗಿದೆ ಎಂಬ ಆರೋಪದಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಹಾಗೂ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಯನಗರ ಕ್ಷೇತ್ರದ ವಿವಿಧ ಭಾಗಗಳಲ್ಲಿನ 5,698 ಮತದಾರರ ಹೆಸರುಗಳನ್ನು ಅಳಿಸುವಂತೆ ಫಾರಂ-7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.
ಪ್ರಕರಣದಲ್ಲಿ ಬಿಜೆಪಿ ಸಂಪರ್ಕ ಹೊಂದಿರುವ ಬೂತ್ ಮಟ್ಟದ ಏಜೆಂಟ್‌ಗಳಾದ ರಾಮಕೃಷ್ಣ ಹಾಗೂ ಯೋಗೇಶ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಅರ್ಜಿಗಳಲ್ಲಿ ಕೆಲವರ ವೈಯಕ್ತಿಕ ವಿವರಗಳನ್ನು ಅವರ ಅನುಮತಿಯಿಲ್ಲದೆ ಬಳಸಲಾಗಿದೆ ಹಾಗೂ ಕೆಲವು ಅರ್ಜಿಗಳಲ್ಲಿನ ಸಹಿಗಳ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಫಾರಂ-7 ಅರ್ಜಿಗಳನ್ನು ಯಾರು ಸಲ್ಲಿಸಿದ್ದಾರೆ, ಅರ್ಜಿಗಳಲ್ಲಿನ ಸಹಿಗಳು ನಕಲಿಯಾಗಿವೆಯೇ ಹಾಗೂ ಮತದಾರರ ವೈಯಕ್ತಿಕ ಮಾಹಿತಿಯನ್ನು ದುರ್ಬಳಕೆ ಮಾಡಲಾಗಿದೆಯೇ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಗಳು ತನಿಖೆಯ ಹಂತದಲ್ಲಿದ್ದು, ಪ್ರಕರಣದ ಸತ್ಯಾಸತ್ಯತೆ ತನಿಖೆಯ ಬಳಿಕ ಸ್ಪಷ್ಟವಾಗಬೇಕಿದೆ.
-
Uncategorized18 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized21 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized20 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized20 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized22 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
ಅಂತರ ರಾಜ್ಯ4 hours agoKasaragod-ಕಾಸರಗೋಡು: ಮದುವೆ ರದ್ದು, ₹7.57 ಲಕ್ಷದ ಉಡುಗೊರೆ ವಾಪಸ್ ನೀಡದೆ ವಂಚನೆ ಆರೋಪ; ಯುವತಿ ಸಹಿತ ಮೂವರ ವಿರುದ್ಧ ಪ್ರಕರಣ
-
Uncategorized19 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |
-
ಬಿಗ್ ನ್ಯೂಸ್4 hours agoPuttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ


















