ದಕ್ಷಿಣ ಕನ್ನಡ
Actor Kiccha Sudeep | ಕಟೀಲು ಕ್ಷೇತ್ರಕ್ಕೆ ಭೇಟಿ ನೀಡಿದ ನಟ ಕಿಚ್ಚ ಸುದೀಪ್ ದಂಪತಿ – ಭ್ರಮರಾಂಬಿಕೆಯ ಎಳನೀರು ಅಭಿಷೇಕದ ಮಹಾತ್ಮೆಯನ್ನು ಕಿಚ್ಚನಿಗೆ ಹೇಳಿದ ಅರ್ಚಕರು
ಮಂಗಳೂರು ಡಿ.4: ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಖ್ಯಾತ ನಟ ಕಿಚ್ಚ ಸುದೀಪ್ (Actor Kiccha Sudeep) ಡಿ.4 ರಂದು ಬೆಳಗ್ಗೆ ಭೇಟಿ ನೀಡಿ ಪ್ರಾರ್ಥಿಸಿದರು.
ಪತ್ನಿ ಪ್ರಿಯಾ ಜೊತೆ ಆಗಮಿಸಿದ ಸುದೀಪ್ ವಿಶೇಷ ಪೂಜೆ ನೆರವೇರಿಸಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಆ ಸಂದರ್ಭ ದೇವಳದ ಅರ್ಚಕರು ಕಟೀಲು ದೇವಿಯ ಕಥೆಯನ್ನು ಸುದೀಪ್ ದಂಪತಿಗೆ ಹೇಳಿದರು. ಕಟೀಲು ದೇವಿಗೆ ಎಳನೀರು ಪ್ರಿಯಾಳಾಗಿದ್ದು, ದೇವಿಯ ಭ್ರಮಾರ ಸ್ವರೂಪ ಶಾಂತಕ್ಕೆ ಬರಲು ಎಳನೀರು ಅಭಿಷೇಕ ನಡೆಸಲಾಗುತ್ತದೆ ಎಂದು ಅರ್ಚಕರು ಹೇಳಿದರು. ಪ್ರತಿದಿನ 600 ಎಳನೀರು ಬರುತ್ತದೆ ಶುಕ್ರವಾರ 4000 ಎಳನೀರು, ಆದಿತ್ಯವಾರ 2000 ನಷ್ಟು ಎಳನೀರು ಬರುತ್ತದೆ ಎಂದರು. ಅಭಿಷೇಕ ಆಗುವವರೆಗೆ ಯಾರೂ ಎಳನೀರು ಕುಡಿಯಬಾರದು ಆದ ನಂತರ ಅದೇ ಎಳನೀರನ್ನು ಕುಡಿಯಲು ಕೊಡುತ್ತೇವೆ ಎಂದರು.
ಕಟೀಲು ಮತ್ತು ಮುಲ್ಕಿಯಲ್ಲಿ ನಡೆಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿರುವ ಸುದೀಪ್ ದೇವಳಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಈ ವೇಳೆ ಅವರನ್ನು ದೇವಸ್ಥಾನದ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಉಪಸಿತರಿದ್ದರು. ಖ್ಯಾತ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು.
ಶಿಕ್ಷಣ
Vivekananda-ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಮುಕ್ರಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಮುಕ್ರಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು.
ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಕೆ. ವಿ. ನಿಖಿಲ್ ಕುಮಾರ್, ನಿಹಾಲ್ ಸಿ. ರೈ. ದ್ವಿತೀಯ ಪಿಯುಸಿ ಅಭಿಲಾಷ್, ವಿಕ್ರಮ್ ಎ. ಜಿ ಹಾಗೂ ಬಾಲಕಿಯರ ತಂಡದಲ್ಲಿ ದ್ವಿತೀಯ ಪಿಯುಸಿ ಆತ್ಮಿಕಾ, ಎಚ್. ಮನ್ಮಿತಾ, ಶರಣ್ಯಾ ಎಚ್. ಎನ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗು ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ರಾಜಕೀಯ
Ashok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಬೊಲೆರೋ
ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಹೊಸ ಬೊಲೆರೋ ವಾಹನವನ್ನು ಒದಗಿಸಲಾಗಿದೆ. ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ಬ್ಲಾಕ್ ಅಧ್ಯಕ್ಷರಿಗೆ ಮೊದಲ ಬಾರಿಗೆ ವಾಹನ ನೀಡಲಾಗಿದ್ದು, ಪಕ್ಷದ ಸಂಘಟನೆ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಇದನ್ನು ಬಳಸಿಕೊಳ್ಳಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಪುತ್ತೂರು: ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಹೊಸ ಬೊಲೆರೋ ವಾಹನವನ್ನು ಒದಗಿಸಲಾಗಿದೆ. ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ಬ್ಲಾಕ್ ಅಧ್ಯಕ್ಷರಿಗೆ ಮೊದಲ ಬಾರಿಗೆ ವಾಹನ ನೀಡಲಾಗಿದ್ದು, ಪಕ್ಷದ ಸಂಘಟನೆ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಇದನ್ನು ಬಳಸಿಕೊಳ್ಳಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಪುತ್ತೂರಿಗೆ ಆಗಮಿಸಿದ ಬೊಲೆರೋ ವಾಹನವನ್ನು ‘ಬ್ಲಾಕ್ ಕಾಂಗ್ರೆಸ್ ವಾಹನ’ ಎಂದು ನಾಮಕರಣ ಮಾಡಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಹಾಗೂ ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ಅವರಿಗೆ ಶಾಸಕ ಅಶೋಕ್ ಕುಮಾರ್ ರೈ ಹಸ್ತಾಂತರಿಸಿದರು.
ಮೂರು ಬ್ಲಾಕ್‌ಗಳಿಗೆ ಒಂದೇ ವಾಹನ
ಪುತ್ತೂರು, ವಿಟ್ಲ ಹಾಗೂ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ಗಳ ಸಂಘಟನಾ ಚಟುವಟಿಕೆಗಳಿಗೆ ಈ ವಾಹನವನ್ನು ಬಳಸಲಾಗುತ್ತದೆ. ಶಾಸಕರು ಯಾವ ಕ್ಷೇತ್ರ ವ್ಯಾಪ್ತಿಗೆ ಭೇಟಿ ನೀಡುತ್ತಾರೋ, ಆ ಸಂದರ್ಭ ಆಯಾ ಬ್ಲಾಕ್‌ನ ಅಧ್ಯಕ್ಷರು ವಾಹನವನ್ನು ಬಳಸಿಕೊಂಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ರಾಜ್ಯದಲ್ಲೇ ಮಾದರಿಯಾಗುವ ರೀತಿಯಲ್ಲಿ ಈ ಬ್ಲಾಕ್ ಕಾಂಗ್ರೆಸ್ ವಾಹನವನ್ನು ತರಿಸಲಾಗಿದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದರು.
ಕಾರ್ಯಕ್ರಮದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಹಾಗೂ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಮಾತನಾಡಿದರು.
ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುರಳೀಧರ್ ರೈ ಮಠಂತಬೆಟ್ಟು, ಪುಡಾ ಸದಸ್ಯ ನಿಹಾಲ್ ಪಿ. ಶೆಟ್ಟಿ, ಪುತ್ತೂರು ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಾ. ರಾಜಾರಾಂ ಕೆ.ಬಿ., ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರ್, ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಾಯಬ್ಬೆ, ಉದ್ಯಮಿ ಸಿಯಾನ್ ದರ್ಬೆ, ವಿಕ್ರಂ ರೈ ಸಾಂತ್ಯ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು
Chouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್‌ಗೆ ದಾಖಲೆ ತೋರಿಸಿ: ಕಾಂಗ್ರೆಸ್‌ಗೆ ಚೌಟ ಸವಾಲು
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ.
ಮಂಗಳೂರು, ಅ.6: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ. ಫಾರಂ 7 ಸಲ್ಲಿಸಿದ ಮಾತ್ರಕ್ಕೆ ಮತದಾರರ ಹೆಸರನ್ನು ಅಳಿಸಲು ಸಾಧ್ಯವಿಲ್ಲ. ಅಕ್ರಮವಾಗಿ ಮತಗಳನ್ನು ಡಿಲೀಟ್ ಮಾಡಲಾಗಿದೆ ಎಂಬ ಆರೋಪಕ್ಕೆ ಕಾಂಗ್ರೆಸ್ ಬಳಿ ದಾಖಲೆಗಳಿದ್ದರೆ ಬಹಿರಂಗಪಡಿಸಲಿ ಎಂದು ಅವರು ಸವಾಲು ಹಾಕಿದ್ದಾರೆ.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಅಗತ್ಯವಾದ ಪ್ರಕ್ರಿಯೆ. ಇದಕ್ಕೆ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರು (ಬಿಎಲ್‌ಎ–2) ಸಹಕರಿಸಬೇಕು. ಆದರೆ, ಕಾಂಗ್ರೆಸ್ ಈ ಪ್ರಕ್ರಿಯೆಯಲ್ಲಿ ತೊಡಗಿರುವ ಏಜೆಂಟರನ್ನು ಬೆದರಿಸುವ ಹಾಗೂ ಅಧಿಕಾರಿಗಳ ಕಾರ್ಯಕ್ಕೆ ಅಡ್ಡಿಪಡಿಸುವ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.
ಫಾರಂ 7 ಸಲ್ಲಿಸಿದ ತಕ್ಷಣ ಹೆಸರು ಡಿಲೀಟ್ ಆಗಲ್ಲ
ಮತದಾರರು ಸ್ಥಳಾಂತರಗೊಂಡಿರುವುದು, ಮೃತಪಟ್ಟಿರುವುದು ಅಥವಾ ಭಾರತೀಯ ಪ್ರಜೆಯಲ್ಲ ಎಂಬ ಆಕ್ಷೇಪಣೆಗಳಿದ್ದಲ್ಲಿ ಫಾರಂ 7 ಮೂಲಕ ಅರ್ಜಿ ಸಲ್ಲಿಸಬಹುದು. ಆದರೆ, ಅರ್ಜಿ ಸಲ್ಲಿಕೆಯಾದ ಮಾತ್ರಕ್ಕೆ ಮತದಾರರ ಹೆಸರನ್ನು ಏಕಪಕ್ಷೀಯವಾಗಿ ಅಳಿಸಲು ಸಾಧ್ಯವಿಲ್ಲ. ಚುನಾವಣಾಧಿಕಾರಿಗಳು ಆಕ್ಷೇಪಣೆಯನ್ನು ಪರಿಶೀಲಿಸಿ, ಸೂಕ್ತ ದೃಢೀಕರಣದ ಬಳಿಕವೇ ನಿಯಮಾನುಸಾರ ಕ್ರಮ ಕೈಗೊಳ್ಳಲು ಸಾಧ್ಯ ಎಂದು ಚೌಟ ವಿವರಿಸಿದರು.
ಫಾರಂ 7 ಮೂಲಕ ಅಲ್ಪಸಂಖ್ಯಾತ ಮತದಾರರನ್ನು ಗುರಿಯಾಗಿಸಲಾಗುತ್ತಿದೆ ಎಂಬ ಕಾಂಗ್ರೆಸ್ ಆರೋಪವನ್ನು ಅವರು ತಳ್ಳಿಹಾಕಿದರು. ಅಕ್ರಮವಾಗಿ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂಬುದಕ್ಕೆ ನಿರ್ದಿಷ್ಟ ದಾಖಲೆಗಳಿದ್ದರೆ ಚುನಾವಣಾ ಆಯೋಗದ ಮುಂದೆ ಸಲ್ಲಿಸಲಿ. ಅಂತಹ ಮತದಾರರನ್ನೇ ಕರೆತಂದು ತೋರಿಸಲಿ ಎಂದು ಸವಾಲು ಹಾಕಿದರು.
5.54 ಕೋಟಿ ಮತದಾರರ ಲೆಕ್ಕ ಮುಂದಿಟ್ಟು ಗೊಂದಲ ಎಂದ ಚೌಟ
ಕರ್ನಾಟಕದಲ್ಲಿ 5.54 ಕೋಟಿಗೂ ಅಧಿಕ ಮತದಾರರಿದ್ದರೂ ಕರಡು ಮತದಾರರ ಪಟ್ಟಿಯಲ್ಲಿ ಸುಮಾರು 4.46 ಕೋಟಿ ಮತದಾರರಿದ್ದಾರೆ ಎಂದು ಕಾಂಗ್ರೆಸ್ ಹೇಳುವ ಮೂಲಕ ಜನರಲ್ಲಿ ಗೊಂದಲ ಮೂಡಿಸುತ್ತಿದೆ ಎಂದು ಅವರು ಆರೋಪಿಸಿದರು.
ಕರಡು ಮತದಾರರ ಪಟ್ಟಿ ಅಂತಿಮವಲ್ಲ. ಕರಡು ಪಟ್ಟಿ ಪ್ರಕಟವಾದ ಬಳಿಕವೂ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಇಂತಹ ಪ್ರಕ್ರಿಯೆಯ ವಿರುದ್ಧವೇ ಜನರನ್ನು ಎತ್ತಿಕಟ್ಟುವುದು ಸರಿಯಲ್ಲ ಎಂದು ಹೇಳಿದರು.
ಮುಖ್ಯಮಂತ್ರಿಯ ವಿರುದ್ಧ ಎಫ್‌ಐಆರ್‌ಗೆ ಆಗ್ರಹ
ಕಾಂಗ್ರೆಸ್‌ಗೆ ಸಂವಿಧಾನ ಮತ್ತು ಕಾನೂನಿನ ಬಗ್ಗೆ ಗೌರವವಿಲ್ಲ ಎಂದು ಆರೋಪಿಸಿದ ಚೌಟ, ಮುಖ್ಯಮಂತ್ರಿಯೊಬ್ಬರು ಚುನಾವಣಾ ಆಯೋಗದ ಕಚೇರಿ ಎದುರು ಪ್ರತಿಭಟನೆ ನಡೆಸುವುದು ಸರಿಯೇ ಎಂದು ಪ್ರಶ್ನಿಸಿದರು. ಸಾಂವಿಧಾನಿಕ ಸಂಸ್ಥೆಗಳ ಕಾರ್ಯವಿಧಾನ ಹಾಗೂ ಪ್ರತಿಭಟನೆಗೆ ಸಂಬಂಧಿಸಿದ ನಿಯಮಗಳ ಬಗ್ಗೆ ಅರಿವು ಇರಬೇಕು. ಚುನಾವಣಾ ಆಯೋಗದ ಕಾರ್ಯದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಬಾರದು. ಈ ವಿಚಾರದಲ್ಲಿ ಮುಖ್ಯಮಂತ್ರಿಯ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕಿದರೆ ಸುಮ್ಮನಿರಲ್ಲ
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾನೂನುಬದ್ಧವಾಗಿ ಪಾಲ್ಗೊಳ್ಳುತ್ತಿದ್ದಾರೆ. ಅವರನ್ನು ಬೆದರಿಸುವ ಅಥವಾ ಒತ್ತಡಕ್ಕೆ ಒಳಪಡಿಸುವ ಪ್ರಯತ್ನಗಳನ್ನು ಸಹಿಸುವುದಿಲ್ಲ ಎಂದು ಚೌಟ ಎಚ್ಚರಿಸಿದರು. ಆಕ್ಷೇಪಣೆಗಳಿಗೆ ಬೆದರಿಕೆ ಮೂಲಕ ಉತ್ತರಿಸುವ ಬದಲು ನಿಗದಿತ ಕಾನೂನು ಪ್ರಕ್ರಿಯೆಯ ಮೂಲಕವೇ ಮತದಾರರ ಪಟ್ಟಿಯನ್ನು ಪರಿಷ್ಕರಿಸಬೇಕು ಎಂದರು.
ಮತದಾರರ ಪಟ್ಟಿಯಲ್ಲಿ ಅನರ್ಹರ ಹೆಸರುಗಳು ಉಳಿದರೆ ಅರ್ಹ ಮತದಾರರ ಹಕ್ಕಿಗೆ ಧಕ್ಕೆಯಾಗಬಹುದು. ಹೀಗಾಗಿ ಶುದ್ಧ ಮತದಾರರ ಪಟ್ಟಿ ಪ್ರತಿಯೊಬ್ಬ ಮತದಾರನ ಹಕ್ಕು ಎಂದು ಪ್ರತಿಪಾದಿಸಿದ ಅವರು, ಎಸ್‌ಐಆರ್‌ಗೆ ಕೋಮು ಬಣ್ಣ ನೀಡುವ ಬದಲು ವಾಸ್ತವಾಂಶಗಳ ಆಧಾರದಲ್ಲಿ ಚರ್ಚೆ ನಡೆಯಬೇಕು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪೂಜಾ ಪೈ, ಪೂರ್ಣಿಮಾ, ಸುಜಿತ್ ಪ್ರತಾಪ್, ರಾಜಗೋಪಾಲ ರೈ, ವಸಂತ ಜೆ. ಪೂಜಾರಿ, ಜೀವನ್ ಕುಮಾರ್ ತೊಕ್ಕೊಟ್ಟು ಹಾಗೂ ಸಂಜಯ ಪ್ರಭು ಉಪಸ್ಥಿತರಿದ್ದರು.
-
ದಕ್ಷಿಣ ಕನ್ನಡ22 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಅಪರಾಧ22 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ನಿಧನ ವಾರ್ತೆ21 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಬಿಗ್ ನ್ಯೂಸ್16 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ಶಿಕ್ಷಣ20 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ನಿಧನ ವಾರ್ತೆ21 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
-
ನಿಧನ ವಾರ್ತೆ20 hours agoKerala-ಕೇರಳ: ಸಿಡಿಲು ಬಡಿದು ಖ್ಯಾತ ‘ಪಲ್ಲಟ್ಟು ಬ್ರಹ್ಮದತ್ತನ್’ ಆನೆ ದಾರುಣ ಸಾವು
-
ರಾಜಕೀಯ21 hours agoDK Shivakumar-ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭರ್ಜರಿ ಬಹುಮಾನ: 8 ಕ್ರೀಡಾಪಟುಗಳಿಗೆ ₹8 ಕೋಟಿ ಘೋಷಿಸಿದ ಡಿಕೆಶಿ – ಭಾಗವಹಿಸಿದವರಿಗೆ 5 ಲಕ್ಷ


















