Connect with us

ದಕ್ಷಿಣ ಕನ್ನಡ

ದುಡ್ಡಿದೆಯೆಂದು ಡಿಕೆಶಿ ಸಹಿತ ಎಲ್ಲರನ್ನೂ ಖರೀದಿ ಮಾಡಿ ಬಂದರೂ ನಾವು ಖರೀದಿಗೆ ಸಿಗೋದಿಲ್ಲ : ಡಿಕೆಶಿ ಕಾಂಗ್ರೆಸ್ ಟಿಕೆಟ್ ಮಾರುತ್ತಾರಾ? ವಿವಾದದ ಕಿಡಿ ಹೊತ್ತಿಸಿ ಕಾವು ಏರಿಸಿದ ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಹೇಳಿಕೆ

Published

on

Ad Widget

Ad Widget

Ad Widget

Ad Widget

DK Shivakumar ಮಂಗಳೂರು : ಡಿ 6 : ಪ್ರತಿಪಕ್ಷ ಕಾಂಗ್ರೆಸ್ ಈ ಬಾರಿಯ ಅಸೆಂಬ್ಲಿ ಚುನಾವಣೆಯಲ್ಲಿ ಟಿಕೆಟ್ ಗಳನ್ನು ಮಾರಾಟಕ್ಕಿಟ್ಟಿದೆಯೆ ? ಇಂತಹದೊಂದು ಅನುಮಾನ ಹುಟ್ಟಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕೆಪಿಸಿಸಿ ಸಂಯೋಜಕ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕಾವು ಹೇಮಾನಾಥ ಶೆಟ್ಟಿಯವರು ಸಭೆಯೊಂದರಲ್ಲಿ ಮಾತನಾಡಿದ ವಿಡಿಯೋ ಇದಾಗಿದ್ದು ಇದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮೇಲೆ ಅವರು ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲೂ ನಾನಾ ರೀತಿಯ ಚರ್ಚೆಗಳು ನಡೆಯುತ್ತಿದೆ.

Ad Widget

Ad Widget

Ad Widget

Ad Widget

ಅಶೋಕ್ ರೈ ಯವರು ”ದುಡ್ಡಿದೆಯೆಂದು ಡಿಕೆಶಿಯವರಿಂದ ಹಿಡಿದು ಎಲ್ಲರನ್ನೂ ಖರೀದಿ ಮಾಡಿಕೊಂಡು ಬಂದು ನಮ್ಮನ್ನೆಲ್ಲಾ ಖರೀದಿ ಮಾಡಲು ಸಾಧ್ಯವಿಲ್ಲ“ ಎಂದು ಹೇಮಾನಾಥ ಶೆಟ್ಟಿಯವರು ಸಭೆಯಲ್ಲಿ ಆಕ್ರೋಶಭರಿತರಾಗಿ ಮಾತನಾಡಿದ್ದಾರೆ. ಈ ಹೇಳಿಕೆ ಈಗ ವಿವಾದದ ಕಿಡಿ ಹತ್ತಿಸಿದೆ. ಈ ವಿಡಿಯೋ ಹೇಳಿಕೆಯನ್ನು ಅಧಾರವಾಗಿಟ್ಟುಕೊಂಡು ಪುತ್ತೂರು ಬ್ಲಾಕ್ ಕಾಂಗ್ರೆಸ್ಸಿನ ಸದಸ್ಯರೊಬ್ಬರು ಕೆಪಿಸಿಸಿಗೆ ದೂರು ನೀಡಿದ್ದಾರೆಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.

Ad Widget

Ad Widget alt="Ad Widget"/>

Ad Widget

ಕಾಂಗ್ರೆಸಿನ ಜವಬ್ದಾರಿಯುತ ಹುದ್ದೆಯಲ್ಲಿರುವ ಕಾವು ಹೇಮಾನಾಥ ಶೆಟ್ಟಿಯವರು ಈ ರೀತಿಯ ಬೇಜವಬ್ದಾರಿ ಹೇಳಿಕೆ ನೀಡುವ ಮೂಲಕ ಪಕ್ಷದ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ವರ್ಚಸ್ಸಿಗೆ ದಕ್ಕೆ ತಂದಿದ್ದಾರೆ. ಡಿಕೆಶಿಯವರು ಹಣ ಪಡೆದುಕೊಂಡು ಟಿಕೆಟ್ ಮಾರುತ್ತಿದ್ದಾರೆ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ಹುಟ್ಟಿಸುವ ರೀತಿಯಲ್ಲಿ ಕಾವು ಹೇಮಾನಾಥ ಶೆಟ್ಟಿಯವರು ಮಾಡಿದ್ದಾರೆ. ಇದು ಅಕ್ಷಮ್ಯ. ಇವರ ವಿರುದ್ದ ಪಕ್ಷ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಕೆಪಿಸಿಗೆ ರವಾನಿಸಿದ ದೂರಿನಲ್ಲಿ ಆರೋಪಿಸಲಾಗಿದೆ ಎಂದು ತಿಳಿದು ಬಂದಿದೆ. ಇದೆ ರೀತಿಯ ಅಭಿಪ್ರಾಯವನ್ನು ಪಕ್ಷದ ಹಾಗೂ ವಿರೋಧ ಪಕ್ಷದ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಕೂಡ ವ್ಯಕ್ತಪಡಿಸುತ್ತಿದ್ದಾರೆ.

Ad Widget

Ad Widget <> Ad Widget

ಅಶೋಕ್‌ ರೈ ಸೇರ್ಪಡೆಗೆ ಒತ್ತಾಯ :

ಪುತ್ತೂರಿನ ಸಾಮಾಜಿಕ ಹಾಗೂ ಧಾರ್ಮಿಕ ಮುಂದಾಳು, ಬಿಜೆಪಿ ಜಿಲ್ಲಾ ಕಾರ್ಯಕಾರಣಿಯ ಮಾಜಿ ಸದಸ್ಯ ಅಶೋಕ್ ರೈವರಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡಬೇಕು ಎಂಬ ಬಲವಾದ ಒತ್ತಾಯ ಕಾಂಗ್ರಸ್ ಕಾರ್ಯಕರ್ತರ ಒಂದು ಗುಂಪಿನಿಂದ ಇತ್ತೀಚೆಗೆ ಕೇಳಿ ಬಂದಿತ್ತು. ಒಂದೂವರೆ ತಿಂಗಳ ಹಿಂದೆ ಅಶೋಕ್ ರೈಯವರು ತನ್ನ ಟ್ರಸ್ಟ್ ನ ದಶ ವರ್ಷ ಪೂರೈಸಿದ ಪ್ರಯುಕ್ತ ಕಿಲ್ಲೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಿದ್ದರು. ಈ ವೇಳೆ ಅವರು ಶಾಸಕನಾಗಿ ಜನ ಸೇವೆ ಮಾಡುವ ಇಂಗಿತ ವ್ಯಕ್ತ ಪಡಿಸಿದರು . ಈ ಬಳಿಕ ಕಾಂಗ್ರೆಸ್ ಪಕ್ಷದಲ್ಲಿರುವ ಅವರ ಅಭಿಮಾನಿಗಳು ಹಾಗೂ ಅವರಿಂದ ಉಪಕೃತರಾದವರು ಅಶೋಕ್ ರೈಯವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂಬ ಬೇಡಿಕೆ ಇಟ್ಟಿದ್ದರು.

Ad Widget

Ad Widget

ಎರಡು ವಾರದ ಹಿಂದೆ ವಿಟ್ಲದಲ್ಲಿ ನಡೆದ ಉಪ್ಪಿನಂಗಡಿ – ವಿಟ್ಲ ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜರಾಮ್ ಕೆಬಿ ಅವರ ಬಳಿ ಅಶೋಕ್ ರೈ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು ಸೇರಿದಂತೆ ಹಲವರು ಒತ್ತಾಯಿಸಿದ್ದರು. ಈ ವೇಳೆ ಯಾವುದೇ ಸ್ಥಾನದ ಆಪೇಕ್ಷೆ ಇಲ್ಲದೆ ಅವರು ಪಕ್ಷಕ್ಕೆ ಸೇರುವುದಾದರೇ ಸ್ವಾಗತಿಸುವುದಾಗಿ ಅವರಿಬ್ಬರು ಕಾರ್ಯಕರ್ತರಿಗೆ ಭರವಸೆ ನೀಡಿದ್ದರು.

ಇದಾದ ಬಳಿಕ ಕಾವು ಹೇಮನಾಥ ಶೆಟ್ಟಿಯವರ ಮುಂದಾಳತ್ವದಲ್ಲಿ ಆಶ್ಮಿ ಕಂಫರ್ಟ್ಸ್ ನಲ್ಲಿ ಕಾಂಗ್ರೆಸಿನ ಕೆಲ ಮುಖಂಡರು ಹಾಗೂ ಕಾರ್ಯಕರ್ತರು ಸಭೆ ಸೇರಿ ಅಶೋಕ್ ರೈಯವರಿಗೆ ಟಿಕೆಟ್ ನೀಡುವುದಕ್ಕೆ ವಿರೋಧಿಸಿದರು. ಈ ವೇಳೆ ಸಭೆಯನ್ನುದ್ದೇಶಿಸಿ ಮಾಡಿದ ಹೇಮನಾಥ ಶೆಟ್ಟಿಯವರು ಮುಂಬರುವ ವಿಧಾನಸಭಾ ಚುನಾವಣಾ ವಿಚಾರಕ್ಕೆ ಸಂಬಂಧಿಸಿದಂತೆಕಾಂಗ್ರೆಸ್ ಪಕ್ಷದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ಕೋರಿ 13 ಮಂದಿ ಈಗಾಗಲೇ ಕೆಪಿಸಿಸಿಗೆ ಅರ್ಜಿ ಹಾಕಿದ್ದು, ಅರ್ಜಿ ಹಾಕಿದವರ ಪೈಕಿ ಪಕ್ಷಕ್ಕಾಗಿ ಕೆಲಸ ಮಾಡಿದವರಿಗೆ ಹೈಕಮಾಂಡ್ ಅವಕಾಶ ಕೊಡಬೇಕು ಎಂದು ಅಗ್ರಹಿಸಿದರು.

ಆರ್ಎಸ್ಎಸ್ನಲ್ಲಿ ಗುರುತಿಸಿಕೊಂಡಿರುವ ಮತ್ತು ಬಿಜೆಪಿ ಜಿಲ್ಲಾ ಕಾರ್ಯಕಾರಿಣಿಯಲ್ಲಿ ಸದಸ್ಯರಾಗಿರುವ ಕೋಡಿಂಬಾಡಿ ಅಶೋಕ್ ರೈ ಯವರಿಗೆ ಈ ಬಾರಿ ಅವಕಾಶ ಸಿಗುತ್ತದೆ ಎಂಬ ಸುದ್ದಿಗಳು ಹರಡಿದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಸಭೆಯನ್ನು ಆಯೋಜನೆ ಮಾಡಿದ್ದು ಅಶೋಕ್ ರೈಯವರು ಪಕ್ಷಕ್ಕೆ ಸೇರುವುದಾದರೆ ಸೇರಲಿ ನಮ್ಮ ಅಭ್ಯಂತರವಿಲ್ಲ ಆದರೆ ಯಾವುದೇ ಕಾರಣಕ್ಕೂ ಅವರಿಗೆ ಟಿಕೆಟ್ ಕೊಡಬಾರದು ಎಂದು ಒತ್ತಾಯಿಸಿದರು

Ad Widget
Click to comment

Leave a Reply

ಬಿಗ್ ನ್ಯೂಸ್

Vitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ

Published

on

Ad Widget

Ad Widget

Ad Widget

Ad Widget

ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Ad Widget

Ad Widget

Ad Widget

Ad Widget

ವಿಟ್ಲ: ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Ad Widget

Ad Widget alt="Ad Widget"/>

Ad Widget

ಚೆನ್ನಯ್ಯ ಪೂಜಾರಿ ಮದ್ಯಪಾನ ಮಾಡಿ ತನ್ನ ಅಣ್ಣನ ಮಗಳಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಸಂದರ್ಭ ಯುವತಿ ಕತ್ತಿಯಿಂದ ಬೀಸಿದಾಗ ಅದು ಚೆನ್ನಯ್ಯ ಪೂಜಾರಿ ಅವರ ಎದೆಗೆ ತಾಗಿ ಗಂಭೀರ ಗಾಯಗೊಂಡಿದ್ದರು.

Ad Widget

Ad Widget <> Ad Widget

ಗಾಯಗೊಂಡ ಅವರನ್ನು ತಕ್ಷಣ ಆಂಬ್ಯುಲೆನ್ಸ್ ಮೂಲಕ ಪುತ್ತೂರಿಗೆ ಕರೆದೊಯ್ಯಲಾಗಿತ್ತು. ಆದರೆ, ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಕುಟುಂಬದೊಳಗಿನ ಕಲಹ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಿಶಿಕಾಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Continue Reading

ಬಿಗ್ ನ್ಯೂಸ್

Virupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಪೂರ್ವಾನುಮತಿ ಪಡೆಯದೆ ಕೈಗೊಳ್ಳಲಾಗುತ್ತಿದೆ ಎನ್ನಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಟೆಂಡರ್ ಪ್ರಕ್ರಿಯೆಗಳಿಗೆ ಕರ್ನಾಟಕ ಉಚ್ಚ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ.23ರಂದು ನೀಡಿರುವ ಈ ಆದೇಶವು ಮುಂದಿನ ವಿಚಾರಣೆಯವರೆಗೆ ಜಾರಿಯಲ್ಲಿರಲಿದ್ದು, ಇಲಾಖಾ ನಿಯಮಗಳನ್ನು ಉಲ್ಲಂಘಿಸಿ ಯಾವುದೇ ಕಾಮಗಾರಿ ನಡೆಸದಂತೆ ದೇವಸ್ಥಾನದ ಆಡಳಿತ ಸಮಿತಿ ಹಾಗೂ ಸರಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ ಎಂದು ಮಚ್ಚಿಮಲೆ ವಿರೂಪಾಕ್ಷ ಭಟ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಪೂರ್ವಾನುಮತಿ ಪಡೆಯದೆ ಕೈಗೊಳ್ಳಲಾಗುತ್ತಿದೆ ಎನ್ನಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಟೆಂಡರ್ ಪ್ರಕ್ರಿಯೆಗಳಿಗೆ ಕರ್ನಾಟಕ ಉಚ್ಚ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ.23ರಂದು ನೀಡಿರುವ ಈ ಆದೇಶವು ಮುಂದಿನ ವಿಚಾರಣೆಯವರೆಗೆ ಜಾರಿಯಲ್ಲಿರಲಿದ್ದು, ಇಲಾಖಾ ನಿಯಮಗಳನ್ನು ಉಲ್ಲಂಘಿಸಿ ಯಾವುದೇ ಕಾಮಗಾರಿ ನಡೆಸದಂತೆ ದೇವಸ್ಥಾನದ ಆಡಳಿತ ಸಮಿತಿ ಹಾಗೂ ಸರಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ ಎಂದು ಮಚ್ಚಿಮಲೆ ವಿರೂಪಾಕ್ಷ ಭಟ್ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಪುತ್ತೂರು ವಾರ್ತಾಭವನದಲ್ಲಿ ನ.25ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಹೆಸರಿನಲ್ಲಿ ಧಾರ್ಮಿಕ ದತ್ತಿ ಇಲಾಖೆಯ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ. ಸಮರ್ಪಕ ಅನುಮೋದನೆ ಪಡೆಯದೆ ಕಾಮಗಾರಿಗಳನ್ನು ನಡೆಸಿರುವುದು, ಹಣಕಾಸಿನ ನಿರ್ವಹಣೆಯಲ್ಲಿ ಲೋಪದೋಷಗಳು ಹಾಗೂ ದೇವಸ್ಥಾನದ ದೈನಂದಿನ ಆಡಳಿತದಲ್ಲಿ ಪಾರದರ್ಶಕತೆಯ ಕೊರತೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಕಾನೂನು ಹೋರಾಟಕ್ಕೆ ಮುಂದಾಗಿದ್ದೇವೆ ಎಂದರು.

Ad Widget

Ad Widget <> Ad Widget

ಈ ಸಂಬಂಧ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದ್ದು, ಇಲಾಖಾ ಮಟ್ಟದಲ್ಲಿ ತನಿಖೆ ನಡೆಯುತ್ತಿದೆ. ಇದೇ ವಿಚಾರವಾಗಿ ಮಚ್ಚಿಮಲೆ ವಿರೂಪಾಕ್ಷ ಭಟ್ ಮತ್ತು ದಿನೇಶ್ ಜೈನ್ ಅವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ W.P. No. 32628/2026ರಡಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರು ಸಲ್ಲಿಸಿದ ದಾಖಲೆಗಳು ಮತ್ತು ಮನವಿಯನ್ನು ಪರಿಗಣಿಸಿರುವ ನ್ಯಾಯಾಲಯವು ನ.23ರಂದು ಮುಂದಿನ ವಿಚಾರಣೆಯವರೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ ಎಂದು ಅವರು ವಿವರಿಸಿದರು.

ಅಭಿವೃದ್ಧಿ ಸಮಿತಿ ರಚನೆ ಬಗ್ಗೆಯೂ ಆಕ್ಷೇಪ

Ad Widget

Ad Widget

ದೇವಸ್ಥಾನದಲ್ಲಿ ರಚಿಸಲಾಗಿರುವ ಅಭಿವೃದ್ಧಿ ಸಮಿತಿಯ ರಚನೆಯೇ ಧಾರ್ಮಿಕ ದತ್ತಿ ಇಲಾಖೆಯ ನಿಯಮಗಳಿಗೆ ಅನುಗುಣವಾಗಿಲ್ಲ ಎಂಬುದು ಅರ್ಜಿದಾರರ ಪ್ರಮುಖ ಆಕ್ಷೇಪವಾಗಿದೆ. ಇಲಾಖೆಯಿಂದ ಅನುಮೋದನೆ ಪಡೆಯದ ಜೀರ್ಣೋದ್ಧಾರ ಅಥವಾ ಅಭಿವೃದ್ಧಿ ಸಮಿತಿಯ ಹೆಸರಿನಲ್ಲಿ ಭಕ್ತರಿಂದ ಹಣ ಸಂಗ್ರಹಿಸುವುದು, ಕಾಮಗಾರಿಗಳನ್ನು ಕೈಗೊಳ್ಳುವುದು ಹಾಗೂ ಅನಧಿಕೃತ ಸಭೆಗಳನ್ನು ನಡೆಸುವುದು ನಿಯಮಬಾಹಿರವಾಗಿದೆ ಎಂದು ವಿರೂಪಾಕ್ಷ ಭಟ್ ಆರೋಪಿಸಿದರು.

ಅನುಮೋದನೆ ಪಡೆಯದ ಸಮಿತಿಯ ಹೆಸರಿನಲ್ಲಿ ಟೆಂಡರ್ ಪ್ರಕ್ರಿಯೆ ನಡೆಸಿರುವುದು ಮತ್ತು ಪತ್ರಿಕೆಗಳಲ್ಲಿ ಟೆಂಡರ್ ಪ್ರಕಟಣೆಗಳನ್ನು ನೀಡಿರುವುದಕ್ಕೂ ಅವರು ಆಕ್ಷೇಪ ವ್ಯಕ್ತಪಡಿಸಿದರು. ಇಲಾಖೆಯ ಅಧಿಕೃತ ಅನುಮೋದನೆ ಹಾಗೂ ನಿಗದಿತ ಪ್ರಕ್ರಿಯೆಗಳನ್ನು ಪಾಲಿಸದೆ ಇಂತಹ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದೂರಿದರು.

ಉತ್ತರ ಭಾಗದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಆಕ್ಷೇಪ

ದೇವಸ್ಥಾನದ ಉತ್ತರ ಭಾಗದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಮುಂದಾಗಿರುವುದರ ಬಗ್ಗೆಯೂ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ. ಈ ಕಾಮಗಾರಿಗೆ ಧಾರ್ಮಿಕ ದತ್ತಿ ಇಲಾಖೆಯ ಪೂರ್ವಾನುಮತಿ ಪಡೆದಿಲ್ಲ. ಅಲ್ಲದೆ, ಇದೇ ಜಮೀನಿಗೆ ಸಂಬಂಧಿಸಿದಂತೆ ಬೇರೆ ಬೇರೆ ನ್ಯಾಯಾಲಯಗಳಲ್ಲಿ ಪ್ರಕರಣಗಳು ಬಾಕಿಯಿದ್ದು, ತಡೆಯಾಜ್ಞೆಗಳಿದ್ದರೂ ಕಾಮಗಾರಿ ಮುಂದುವರಿಸಲಾಗಿದೆ ಎಂಬುದು ಅರ್ಜಿದಾರರ ಆರೋಪವಾಗಿದೆ.

ಐದು ಕಟ್ಟೆಗಳ ತೆರವು, ನೂತನ ಶಿಲಾಮಯ ಕಟ್ಟಡ ನಿರ್ಮಾಣ

ದೇವಸ್ಥಾನದ ಹೊರಾಂಗಣದಲ್ಲಿದ್ದ ಐದು ಹಳೆಯ ಕಟ್ಟೆಗಳನ್ನು ತೆರವುಗೊಳಿಸಿ, ಧಾರ್ಮಿಕ ದತ್ತಿ ಇಲಾಖೆಯ ಅನುಮತಿ ಪಡೆಯದೆ ನೂತನ ಶಿಲಾಮಯ ಕಟ್ಟಡ ನಿರ್ಮಿಸಲಾಗಿದೆ ಎಂದು ವಿರೂಪಾಕ್ಷ ಭಟ್ ಆರೋಪಿಸಿದರು. ಈ ಕಾಮಗಾರಿಗೆ ಸಂಬಂಧಿಸಿದಂತೆ ಅನಧಿಕೃತವಾಗಿ ಹಣ ಸಂಗ್ರಹಿಸಲಾಗಿದ್ದು, ಯಾವುದೇ ಟೆಂಡರ್ ಪ್ರಕ್ರಿಯೆ ನಡೆಸದೆ ಸರಕಾರದ ನಿಯಮಾವಳಿಗಳನ್ನು ಪಾಲಿಸದೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ ಎಂದು ದೂರಿದರು.

ಇದಲ್ಲದೆ, ದೇವಸ್ಥಾನಕ್ಕೆ ಸಂಬಂಧಿಸಿದ ನವಗ್ರಹ ಗುಡಿ, ಅಯ್ಯಪ್ಪ ಸನ್ನಿಧಿ ಹಾಗೂ ನಟರಾಜ ವೇದಿಕೆ ಸಭಾಂಗಣವನ್ನು ತೆರವುಗೊಳಿಸುವ ಸಂದರ್ಭದಲ್ಲಿಯೂ ಸರಕಾರದ ನಿಯಮದಂತೆ ಟೆಂಡರ್ ಪ್ರಕ್ರಿಯೆ ಮತ್ತು ಮೌಲ್ಯಮಾಪನ ನಡೆಸಿಲ್ಲ. ಅಗತ್ಯ ಇಲಾಖಾ ಅನುಮೋದನೆಯನ್ನೂ ಪಡೆದಿಲ್ಲ ಎಂದು ಅವರು ಆರೋಪಿಸಿದರು.

ಚಿನ್ನದ ಮುಖವಾಡಕ್ಕೆ ಚಿನ್ನ ಸಂಗ್ರಹ: ಸಮರ್ಪಕ ಮಾಹಿತಿ ಇಲ್ಲವೆಂಬ ಆರೋಪ

ಶ್ರೀ ದೇವರಿಗೆ ಚಿನ್ನದ ಮುಖವಾಡ ನಿರ್ಮಿಸುವ ಉದ್ದೇಶದಿಂದ ಭಕ್ತರಿಂದ ಕಾಣಿಕೆ ರೂಪದಲ್ಲಿ ಚಿನ್ನ ಸಂಗ್ರಹಿಸಲಾಗುತ್ತಿದೆ. ಆದರೆ ಈ ಸಂಬಂಧ ಧಾರ್ಮಿಕ ದತ್ತಿ ಇಲಾಖೆಯ ಸಮರ್ಪಕ ಅನುಮತಿ ಪಡೆಯಲಾಗಿದೆಯೇ, ಆಗಮ ಪಂಡಿತರ ಅಭಿಪ್ರಾಯ ಹಾಗೂ ವರದಿ ಪಡೆಯಲಾಗಿದೆಯೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಸಂಗ್ರಹಿಸಲಾದ ಚಿನ್ನದ ನಿರ್ವಹಣೆ ಮತ್ತು ಅದರ ಲೆಕ್ಕಪತ್ರಗಳ ಕುರಿತು ದೇವಸ್ಥಾನದಲ್ಲಿ ಸಮರ್ಪಕ ಮಾಹಿತಿ ಲಭ್ಯವಿಲ್ಲ ಎಂಬ ವಿಚಾರವನ್ನೂ ನ್ಯಾಯಾಲಯದ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು.

ದೇವಸ್ಥಾನದ ಆಡಳಿತ ಸಮಿತಿ ನೇಮಕಗೊಂಡ ಬಳಿಕ ನಿರ್ವಹಿಸಲಾದ ವಾರ್ಷಿಕ ಲೆಕ್ಕಪತ್ರಗಳಲ್ಲಿನ ಲೋಪದೋಷಗಳ ಬಗ್ಗೆಯೂ ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ. ದೇವಸ್ಥಾನದ ಆಡಳಿತದಲ್ಲಿ ಇಲಾಖಾ ನಿಯಮಗಳ ಉಲ್ಲಂಘನೆ ಹಾಗೂ ಕಾರ್ಯನಿರ್ವಹಣಾಧಿಕಾರಿಗಳ ಅಧಿಕಾರ ಬಳಕೆಯಲ್ಲಿನ ಲೋಪಗಳ ಬಗ್ಗೆಯೂ ಕಾನೂನು ಹೋರಾಟ ನಡೆಸಲಾಗುತ್ತಿದೆ ಎಂದು ಹೇಳಿದರು.

ನ್ಯಾಯಾಲಯದ ಆದೇಶ ಪಾಲನೆಗೆ ಆಗ್ರಹ

ನ್ಯಾಯಾಲಯ ನೀಡಿರುವ ಮಧ್ಯಂತರ ತಡೆಯಾಜ್ಞೆಯ ಪ್ರಕಾರ, ಮುಂದಿನ ವಿಚಾರಣೆಯವರೆಗೆ ಇಲಾಖೆಯ ಅನುಮತಿ ಇಲ್ಲದ ಕಾಮಗಾರಿಗಳನ್ನು ನಡೆಸುವಂತಿಲ್ಲ. ಈಗಾಗಲೇ ಕರೆಯಲಾಗಿರುವ ನಿಯಮಬಾಹಿರ ಟೆಂಡರ್ ಪ್ರಕ್ರಿಯೆಗಳನ್ನು ಮುಂದುವರಿಸುವಂತಿಲ್ಲ. ಅನುಮೋದನೆ ಪಡೆಯದ ಜೀರ್ಣೋದ್ಧಾರ ಸಮಿತಿಯ ಹೆಸರಿನಲ್ಲಿ ಕಾಮಗಾರಿಗಳನ್ನು ನಡೆಸಲು ಅಥವಾ ಸಭೆಗಳನ್ನು ಆಯೋಜಿಸಿ ಕಾಮಗಾರಿಗಳನ್ನು ಮುಂದುವರಿಸಲು ಅವಕಾಶವಿಲ್ಲ. ಕಾಮಗಾರಿಗಳ ಹೆಸರನ್ನು ಬದಲಾಯಿಸಿ ಆದೇಶದ ವ್ಯಾಪ್ತಿಯಿಂದ ಹೊರಬಂದು ಮುಂದುವರಿಸುವ ಪ್ರಯತ್ನವೂ ಮಾಡಬಾರದು ಎಂಬುದು ನ್ಯಾಯಾಲಯದ ಆದೇಶದ ಆಶಯವಾಗಿದೆ ಎಂದು ವಿರೂಪಾಕ್ಷ ಭಟ್ ತಿಳಿಸಿದರು.

ನ್ಯಾಯಾಲಯದ ಆದೇಶವನ್ನು ಪ್ರತಿವಾದಿಗಳು ಗೌರವಿಸಬೇಕು. ಆದೇಶದ ವ್ಯಾಪ್ತಿಗೆ ಒಳಪಡುವ ಕಾಮಗಾರಿಗಳನ್ನು ತಕ್ಷಣ ಸ್ಥಗಿತಗೊಳಿಸಿ, ಮುಂದಿನ ದಿನಗಳಲ್ಲಿ ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಧಾರ್ಮಿಕ ದತ್ತಿ ಇಲಾಖೆಯ ಕಾನೂನುಬದ್ಧ ಅನುಮೋದನೆ ಮತ್ತು ಪಾರದರ್ಶಕ ಟೆಂಡರ್ ಪ್ರಕ್ರಿಯೆಯ ಮೂಲಕವೇ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ದೇವಸ್ಥಾನದ ಅಭಿವೃದ್ಧಿಗೆ ವಿರೋಧವಿಲ್ಲ

ದೇವಸ್ಥಾನದ ಅಭಿವೃದ್ಧಿಗೆ ನಮ್ಮ ಯಾವುದೇ ವಿರೋಧವಿಲ್ಲ. ದೇವಸ್ಥಾನ ಇನ್ನಷ್ಟು ಅಭಿವೃದ್ಧಿಯಾಗಬೇಕು, ಭಕ್ತರಿಗೆ ಉತ್ತಮ ಸೌಲಭ್ಯಗಳು ದೊರೆಯಬೇಕು ಎಂಬುದೇ ನಮ್ಮ ಆಶಯ. ಆದರೆ ಅಭಿವೃದ್ಧಿಯ ಹೆಸರಿನಲ್ಲಿ ಇಲಾಖಾ ನಿಯಮಗಳನ್ನು ಮೀರಿ, ಕಾನೂನುಬಾಹಿರವಾಗಿ ಕಾಮಗಾರಿಗಳನ್ನು ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ದೇವಸ್ಥಾನದ ಆಡಳಿತದಲ್ಲಿ ಗೊಂದಲ ಸೃಷ್ಟಿಯಾಗದೆ ಪಾರದರ್ಶಕ ವ್ಯವಸ್ಥೆ ಇರಬೇಕು. ಭಕ್ತರ ಧಾರ್ಮಿಕ ಶ್ರದ್ಧೆ ಮತ್ತು ನಂಬಿಕೆಗೆ ಧಕ್ಕೆಯಾಗದಂತೆ ದೇವಸ್ಥಾನದ ಆಡಳಿತ ನಡೆಯಬೇಕು. ಕಾನೂನುಬದ್ಧ ಅನುಮೋದನೆ, ನಿಯಮಾನುಸಾರ ಹಣಕಾಸಿನ ನಿರ್ವಹಣೆ ಹಾಗೂ ಪಾರದರ್ಶಕತೆಯೊಂದಿಗೆ ಅಭಿವೃದ್ಧಿ ಕಾರ್ಯಗಳು ನಡೆಯಬೇಕು ಎಂದು ಮಚ್ಚಿಮಲೆ ವಿರೂಪಾಕ್ಷ ಭಟ್ ಒತ್ತಾಯಿಸಿದರು.

Ad Widget
Continue Reading

ಶಿಕ್ಷಣ

Narendra-ನ.28 : ನರೇಂದ್ರ ಪ.ಪೂ.ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ “ಪ್ರತಿಭಾ ಪರ್ವ”

Published

on

Ad Widget

Ad Widget

Ad Widget

Ad Widget

2026-27 ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಸಂಭ್ರಮ “ ಪ್ರತಿಭಾ ಪರ್ವ” ಕಾರ‍್ಯಕ್ರಮವು ನವೆಂಬರ್ 28 , ಶನಿವಾರದಂದು ತೆಂಕಿಲದ ನರೇಂದ್ರ ಪ.ಪೂ. ಕಾಲೇಜಿನ ಹಂಸಧ್ವನಿ ಸಭಾಂಗಣದಲ್ಲಿ ಅಪರಾಹ್ನ 2 ಗಂಟೆಯಿಂದ ಪ್ರಾರಂಭಗೊಳ್ಳಲಿದೆ. ಅಪರಾಹ್ನ 3 ಗಂಟೆಯಿಂದ ಸಭಾ ಕಾರ‍್ಯಕ್ರಮ ನಡೆಯಲಿದ್ದು ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಶ ನಾಯಕ್ ಬಿ.ಸಿ. ಇವರು ವಹಿಸಿಕೊಳ್ಳಲಿದ್ದಾರೆ.

Ad Widget

Ad Widget

Ad Widget

Ad Widget

ಶಿಕ್ಷಣದ ಮೂಲಕ ಸಾಮಾಜಿಕ ಬದಲಾವಣೆಯ ಮಹತ್ತರ ಉದ್ದೇಶವನ್ನಿಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿರುವ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಘಟಕವಾದ ನರೇಂದ್ರ ಪದವಿ ಪೂರ್ವ ಕಾಲೇಜು ಶಿಕ್ಷಣದ ಮೂಲಕ ವಿದ್ಯಾರ್ಥಿಯ ಬೌಧ್ಧಿಕ, ಸಾಮಾಜಿಕ, ಭೌತಿಕ, ಆರ್ಥಿಕ, ಧಾರ್ಮಿಕ, ಸಾಂಸ್ಕೃತಿಕ, ನೈತಿಕ,ಆಧ್ಯಾತ್ಮಿಕ ಮೌಲ್ಯಗಳಿಂದ ಪ್ರಬಲವಾಗಿರುವ ಬುದ್ಧಿಶಕ್ತಿಯನ್ನು ಉತ್ತೇಜಿಸಿ ಸದೃಢರನ್ನಾಗಿ ಬೆಳೆಸುವ ಉದ್ದೇಶವನ್ನು ಹೊಂದಿದೆ.

Ad Widget

Ad Widget alt="Ad Widget"/>

Ad Widget

2017ರಲ್ಲಿ ತೆಂಕಿಲದ ವಿವೇಕನಗರದಲ್ಲಿ ಸ್ಥಾಪನೆಗೊಂಡ ಸಂಸ್ಥೆ ನರೇಂದ್ರ ಪದವಿ ಪೂರ್ವ ಕಾಲೇಜು ಇದೀಗ ಒಂಬತ್ತು ವರ್ಷಗಳ ಯಶಸ್ವಿ ಪಯಣವನ್ನು ಪೂರೈಸಿ, ಹತ್ತನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಶುಭ ಸಂಭ್ರಮದಲ್ಲಿದೆ.

Ad Widget

Ad Widget <> Ad Widget

2026-27 ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಸಂಭ್ರಮ “ ಪ್ರತಿಭಾ ಪರ್ವ” ಕಾರ‍್ಯಕ್ರಮವು ನವೆಂಬರ್ 28 , ಶನಿವಾರದಂದು ತೆಂಕಿಲದ ನರೇಂದ್ರ ಪ.ಪೂ. ಕಾಲೇಜಿನ ಹಂಸಧ್ವನಿ ಸಭಾಂಗಣದಲ್ಲಿ ಅಪರಾಹ್ನ 2 ಗಂಟೆಯಿಂದ ಪ್ರಾರಂಭಗೊಳ್ಳಲಿದೆ. ಅಪರಾಹ್ನ 3 ಗಂಟೆಯಿಂದ ಸಭಾ ಕಾರ‍್ಯಕ್ರಮ ನಡೆಯಲಿದ್ದು ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಶ ನಾಯಕ್ ಬಿ.ಸಿ. ಇವರು ವಹಿಸಿಕೊಳ್ಳಲಿದ್ದಾರೆ.

ಮುಖ್ಯಅತಿಥಿಯಾಗಿ ಕರ್ನಾಟಕ ಹೈಕೋರ್ಟ್ನ ಹಿರಿಯ ವಕೀಲರು, ಕರ್ನಾಟಕದ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಮತ್ತು ಕರ್ನಾಟಕ ಬ್ಯಾಂಕ್ ಲಿಮಿಟೆಡ್ ನ ಸ್ವತಂತ್ರ ನಿರ್ದೇಶಕರು ಮತ್ತು ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ನೂತನ ಆಡಳಿತ ಮಂಡಳಿಯ ಸದಸ್ಯರಾದ ಡಾ. ಎಮ್. ಅರುಣ್ ಶ್ಯಾಮ್ ರವರು ಭಾಗವಹಿಸಲಿದ್ದಾರೆ. ಇನ್ನೋರ್ವ ಅತಿಥಿಯಾಗಿ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ರವೀಂದ್ರ ಪಿ. ಇವರು ಭಾಗವಹಿಸಲಿದ್ದಾರೆ.

Ad Widget

Ad Widget

ನವೆಂಬರ್ 28 ರಂದು ಅಪರಾಹ್ನ 2 ಗಂಟೆಯಿಂದ ವಿದ್ಯಾರ್ಥಿ ಸಾಧಕರಿಗೆ ಅಭಿನಂದನಾ ಸಮಾರಂಭ ಮತ್ತು ಪ್ರಸಕ್ತ ಸಾಲಿನಲ್ಲಿ ಶೈಕ್ಷಣಿಕವಾಗಿ, ಸಾಂಸ್ಕೃತಿಕ ,ಕ್ರೀಡೆ ಮತ್ತು ಇನ್ನಿತರ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ‍್ಯಕ್ರಮ“ ಪ್ರತಿಭಾ ಪುರಸ್ಕಾರ” ನಡೆಯಲಿದೆ. ಈ ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಮಹಾಲಕ್ಷ್ಮೀ ಕೆ. ಇವರು ವಹಿಸಿಕೊಳ್ಳಲಿದ್ದಾರೆ.

ಮುಖ್ಯಅತಿಥಿಗಳಾಗಿ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳು ನರಿಮೊಗರು ಪುತ್ತೂರು ಇಲ್ಲಿನ ಮುಖ್ಯಗುರುಗಳಾದ ಪ್ರಸನ್ನ ಕೆ. ಅವರು ಭಾಗವಹಿಸಲಿದ್ದಾರೆ. ನರೇಂದ್ರ ಪ.ಪೂ. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಶ ನಾಯಕ್ ಬಿ.ಸಿ. , ಸದಸ್ಯರಾದ ಸತ್ಯನಾರಾಯಣ ಬಿ., ರಮೇಶ ನಾಯಕ್ ಕೆ., ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಗುಣಪಾಲ, ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ತೀರ್ಥರಾಜ್ ಕೆ. ಉಪಸ್ಥಿತಿ ಇರಲಿದ್ದಾರೆ. ಮತ್ತು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ದ್ವಿತೀಯ ವಿಜ್ಞಾನ ವಿಭಾಗದ ಶ್ರೀಶಾನ್ ಡಿ.ಕೆ., ಕನ್ನಿಕಾ ಕೆ.ಆರ್., ಪ್ರಥಮ ವಿಜ್ಞಾನ ವಿಭಾಗದ ಜೆ.ಶೃಜಾ ಭಾಗವಹಿಸಲಿದ್ದಾರೆ.ಸಭಾಕರ‍್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕರ‍್ಯಕ್ರಮಗಳು ನಡೆಯಲಿದೆ. ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!