ರಾಷ್ಟ್ರೀಯ
BIg Breaking : Gujarat Election Result : ಗುಜರಾತ್ ನಲ್ಲಿ ಐತಿಹಾಸಿಕ ಗೆಲುವಿನತ್ತ ಬಿಜೆಪಿ | ಮೋದಿ, ಶಾ ರಾಜಕೀಯ ತಂತ್ರಗಾರಿಕೆ -ಮೊತ್ತ ಮೊದಲ ಬಾರಿ ರಾಜ್ಯದಲ್ಲಿ ಪಕ್ಷವೊಂದು 150 ಸೀಟ್ ಗೆಲ್ಲುವತ್ತ
Gujarat Election Result ನವದೆಹಲಿ: ಗುಜರಾತ್ ನ ವಿಧಾನಸಭಾ ಚುನಾವಣಾ ಇತಿಹಾಸದಲ್ಲೆ ಹೊಸ ದಾಖಲೆ ಬರೆಯುವತ್ತ ಭಾರತದ ನಂಬರ್ 1 ರಾಜಕೀಯ ಪಕ್ಷ ಬಿಜೆಪಿ ಮುಂದಾಗಿದೆ. 1985ರಲ್ಲಿ ಮಾಧವ ಸಿಂಗ್ ಸೋಲಂಕಿ ನೇತ್ರತ್ವದ ಕಾಂಗ್ರೆಸ್ ದಾಖಲಿಸಿದ ಐತಿಹಾಸಿಕ ವಿಜಯದ ದಾಖಲೆಯನ್ನು ಈ ಬಾರಿ ಬಿಜೆಪಿ ಮುರಿಯುವ ಎಲ್ಲ ಲಕ್ಷಣಗಳು ಕಾಣಿಸುತ್ತಿವೆ. ಕಳೆದ ವಾರ ಗುಜರಾತ್ ವಿಧಾನಸಭೆಗೆ ಎರಡು ಹಂತದಲ್ಲಿ ಚುನಾವಣೆ ನಡೆದಿದ್ದು, ಇಂದು ಅದರ ಮತ ಎಣಿಕೆ ಪ್ರಗತಿಯಲ್ಲಿದೆ.
182 ವಿಧಾನ ಸಭಾ ಕ್ಷೇತ್ರಗಳ ಗುಜರಾತ್ ವಿಧಾನಸಭೆಯಲ್ಲಿ ಸದ್ಯ 178 ಸ್ಥಾನಗಳ ಮತ ಎಣಿಕೆಯ ಟ್ರೆಂಡ್ ಲಭಿಸಿದ್ದು, ಇದರಲ್ಲಿ ಬಿಜೆಪಿ 150ಸ್ಥಾನಗಳಲ್ಲಿ ಮುನ್ನಡೆ ಪಡೆದಿದೆ. ಕಾಂಗ್ರೆಸ್ 18 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದರೆ, ಆಮ್ ಆದ್ಮಿ ಪಕ್ಷ 6 ಸ್ಥಾನಗಳಲ್ಲಿ ಮುನ್ನಡೆ ಪಡೆದಿದೆ. 1985ರಲ್ಲಿ ಮಾಧವ ಸಿಂಗ್ ಸೋಲಂಕಿ ನೇತ್ರತ್ವದ ಕಾಂಗ್ರೆಸ್ 149 ಸ್ಥಾನಗಳಲ್ಲಿ ಗೆಲುವು ಸಂಪಾದಿಸಿದ್ದು, ಇದು ಈವರಗೆ ಪಕ್ಷವೊಂದು ಪಡೆದ ಅತೀ ದೊಡ್ಡ ಗೆಲುವು ಆಗಿದೆ. ಬಿಜೆಪಿ ಈವರೆಗೆ ಗಳಿಸಿದ ಎಲ್ಲ ಮುನ್ನಡೆಗಳಲ್ಲಿ ಗೆಲುವು ಸಂಪಾದಿಸಿದರೇ ಈ ಕಾಂಗ್ರೆಸ್ ನ ಹಳೆಯ ದಾಖಲೆ ಮುರಿದು ಬೀಳಲಿದೆ.
1995ರಲ್ಲಿ ಮೊದಲ ಬಾರಿಗೆ ಗುಜರಾತ್ ನಲ್ಲಿ ಬಹುಮತ ಪಡೆದ ಬಿಜೆಪಿ ಆ ಬಳಿಕ ನಡೆದ ಎಲ್ಲ 7 ವಿಧಾನ ಸಭಾ ಚುನಾವಣೆಯಲ್ಲೂ ಬಹುಮತ ಪಡೆದು ಅಜೇಯ ಎನಿಸಿದೆ. ಆದರೇ ಇದರ ನಡುವಿನಲ್ಲಿ ಒಂದೂವರೆ ವರ್ಷಗಳ ಕಾಲ ಬಿಜೆಪಿಯಿಂದ ಸಿಡಿದು ಹೋದ ಶಂಕರ ಸಿಂಘ್ ವಘೇಲಾರವರು ಕಾಂಗ್ರೆಸ್ ಪಕ್ಷದ ಬೆಂಬಲದೊಂದಿಗೆ ಆಡಳಿತ ನಡೆಸಿದ್ದರು.
ಪಶ್ಚಿಮ ಬಂಗಾಲದಲ್ಲಿ 1977 ರಿಂದ ನಿರಂತರವಾಗಿ 7 ಬಾರಿ ಸಿಪಿಎಂ ಪಕ್ಷವು ವಿಧಾನಸಭೆ ಚುನಾವಣೆ ಗೆದ್ದಿತ್ತು. ಇದು ಭಾರತದ ಚುನಾವಣಾ ರಾಜಕೀಯ ಇತಿಹಾಸದಲ್ಲೆ ವಿಶಿಷ್ಟ ದಾಖಲೆ ಎನಿಸಿಕೊಂಡಿತ್ತು. ಇದೀಗ ಗುಜರಾತ್ ರಾಜ್ಯದಲ್ಲಿ ಬಿಜೆಪಿ ಈ ದಾಖಲೆಯನ್ನು ಸರಿದೂಗಿಸಿದೆ.
ಪ್ರಧಾನಿ ಮೋದಿ ರಾಜ್ಯದಲ್ಲಿ ಅಂದಾಜು 30 ಚುನಾವಣಾ ರಾಲಿಗಳನ್ನು ನಡೆಸಿದ್ದರು. ನಾಯಕತ್ವದ ಕೊರತೆಯಿಂದ ಬಳಲಿದ ಕಾಂಗ್ರೆಸ್, ಈ ಬಾರಿ ಹಲವು ಸೀಟುಗಳನ್ನು ಕಳೆದುಕೊಳ್ಳಬಹುದು ಎಂದು ಹೇಳಲಾಗಿತ್ತು. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಈ ಚುನಾವಣೆ ಸಂದರ್ಭ ಭಾರತ್ ಜೋಡೊ ಯಾತ್ರೆಯಲ್ಲಿ ವ್ಯಸ್ತರಾಗಿದ್ದ ಕಾರಣ ಕೇವಲ ಒಂದು ದಿನ ಮಾತ್ರ ಚುನಾವಣ ಪ್ರಚಾರದಲ್ಲಿ ಭಾಗವಹಿಸಿದ್ದರು.
ರಾಷ್ಟ್ರೀಯ
Cancer-ಕ್ಯಾನ್ಸರ್ ಔಷಧಿಗಳ ಬೆಲೆಯಲ್ಲಿ ಶೇ.70ರಷ್ಟು ಇಳಿಕೆ ಸಾಧ್ಯತೆ..! MRP ಮೇಲಿನ ಲಾಭಾಂಶ ಮಿತಿಗೆ ಕೇಂದ್ರ ಚಿಂತನೆ
ಕ್ಯಾನ್ಸರ್ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಔಷಧಿಗಳನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ ಕ್ಯಾನ್ಸರ್ ನಿರೋಧಕ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮೇಲಿನ ಲಾಭಾಂಶವನ್ನು ಶೇ.30ಕ್ಕೆ ಮಿತಿಗೊಳಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಈ ಕ್ರಮ ಜಾರಿಯಾದರೆ ಕೆಲವು ಔಷಧಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಹೊಸದಿಲ್ಲಿ: ಕ್ಯಾನ್ಸರ್ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಔಷಧಿಗಳನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ ಕ್ಯಾನ್ಸರ್ ನಿರೋಧಕ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮೇಲಿನ ಲಾಭಾಂಶವನ್ನು ಶೇ.30ಕ್ಕೆ ಮಿತಿಗೊಳಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಈ ಕ್ರಮ ಜಾರಿಯಾದರೆ ಕೆಲವು ಔಷಧಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಬ್ರಾಂಡೆಡ್, ಜೆನೆರಿಕ್ ಔಷಧಿಗಳಿಗೂ ಅನ್ವಯ
ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ (ನಾನ್-ಶೆಡ್ಯೂಲ್ಡ್) ಕ್ಯಾನ್ಸರ್ ಔಷಧಿಗಳಿಗೆ ಈ ಮಿತಿಯನ್ನು ಅನ್ವಯಿಸುವ ಪ್ರಸ್ತಾವನೆ ಸರಕಾರದ ಮುಂದಿದೆ. ಬ್ರಾಂಡೆಡ್, ಜೆನೆರಿಕ್, ದೇಶೀಯವಾಗಿ ತಯಾರಿಸಿದ ಹಾಗೂ ಆಮದು ಮಾಡಿಕೊಳ್ಳುವ ಕ್ಯಾನ್ಸರ್ ಔಷಧಿಗಳೂ ಇದರ ವ್ಯಾಪ್ತಿಗೆ ಬರಲಿವೆ ಎಂದು ಮೂಲಗಳು ತಿಳಿಸಿವೆ.
ಜೀವರಕ್ಷಕ ಔಷಧಿಗಳ ಬೆಲೆಯನ್ನು ಕಡಿಮೆ ಮಾಡಿ, ಸಾಮಾನ್ಯ ಜನರಿಗೂ ಸುಲಭವಾಗಿ ಲಭ್ಯವಾಗುವಂತೆ ಮಾಡುವುದು ಈ ಕ್ರಮದ ಪ್ರಮುಖ ಉದ್ದೇಶವಾಗಿದೆ. ಪ್ರಸ್ತಾವಿತ ಬೆಲೆ ನಿಯಂತ್ರಣ ಜಾರಿಯಾದರೆ ಕ್ಯಾನ್ಸರ್ ಔಷಧಿಗಳ ಗರಿಷ್ಠ ಮಾರಾಟ ದರದಲ್ಲಿ ಶೇ.70ರಷ್ಟು ಇಳಿಕೆಯಾಗಬಹುದು ಎಂಬ ಅಂದಾಜು ವ್ಯಕ್ತವಾಗಿದೆ. ಇದರಿಂದ ಗ್ರಾಹಕರಿಗೆ ಒಟ್ಟಾರೆ ಸುಮಾರು ₹2,500 ಕೋಟಿ ಉಳಿತಾಯವಾಗುವ ನಿರೀಕ್ಷೆಯಿದೆ.
ಅಂತಿಮ ನಿರ್ಧಾರದ ನಿರೀಕ್ಷೆ
ಕ್ಯಾನ್ಸರ್ ಔಷಧಿಗಳ ಮಾರಾಟದ ಮೇಲಿನ ಲಾಭಾಂಶಕ್ಕೆ ಮಿತಿ ವಿಧಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ಕುರಿತು ಪರಿಶೀಲನೆ ನಡೆಸಲು ಕ್ಯಾನ್ಸರ್ ತಜ್ಞರನ್ನು ಒಳಗೊಂಡ ಸಮಿತಿಯೊಂದನ್ನು ರಚಿಸಲಾಗಿದ್ದು, ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.
ಮುಂದಿನ ದಿನಗಳಲ್ಲಿ ಈ ಬೆಲೆ ನಿಯಂತ್ರಣ ಕ್ರಮವನ್ನು ಇನ್ನಷ್ಟು ಕ್ಯಾನ್ಸರ್ ಔಷಧಿಗಳು ಹಾಗೂ ಇತರ ಔಷಧಿಗಳಿಗೂ ವಿಸ್ತರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಈ ಪ್ರಸ್ತಾವನೆ ಜಾರಿಯಾದರೆ ಕ್ಯಾನ್ಸರ್ ಚಿಕಿತ್ಸೆಯ ವೆಚ್ಚವನ್ನು ಕಡಿಮೆ ಮಾಡಲು ಮತ್ತು ರೋಗಿಗಳ ಆರ್ಥಿಕ ಹೊರೆಯನ್ನು ತಗ್ಗಿಸಲು ನೆರವಾಗಬಹುದು. ಆದರೆ ಬೆಲೆ ಇಳಿಕೆಯ ಪ್ರಮಾಣ ಹಾಗೂ ಕ್ರಮ ಜಾರಿಯಾಗುವ ದಿನಾಂಕದ ಕುರಿತು ಅಧಿಕೃತ ಘೋಷಣೆ ಹೊರಬಿದ್ದ ಬಳಿಕವೇ ಸ್ಪಷ್ಟ ಚಿತ್ರಣ ದೊರೆಯಲಿದೆ.
ಕ್ರೀಡೆ
India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ
ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.
ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.
ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.
ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.
ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.
ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.
ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.
ರಾಷ್ಟ್ರೀಯ
ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ಆಹ್ವಾನಿಸಿದ್ದರು..! ನಿವೃತ್ತ ಐಎಎಸ್ ಅಧಿಕಾರಿ ಬಹಿರಂಗ
ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಜಿಜಿ ಥಾಮ್ರನ್ ಬಹಿರಂಗಪಡಿಸಿದ್ದಾರೆ.
ಬಿಜೆಪಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಡುವಿನ ಮೈತ್ರಿಯ ಕುರಿತು ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಥಾಮ್ಸ್‌ನ್ ಅವರ ಹೇಳಿಕೆ ಹೊರಬಿದ್ದಿದೆ.
‘ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯು ಆರಂಭದಲ್ಲಿ ಪಕ್ಷದ ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಂಡಿತ್ತು. ನಂತರ ಅವರನ್ನು ‘ಅಂಪೈರ್’ ರೀತಿ ಮಾಡಿ, ಭಾರತದ ಚುನಾವಣೆಗಳನ್ನು `ಫಿಕ್ಸಿಂಗ್’ ಮಾಡುವ ಉಸ್ತುವಾರಿ ವಹಿಸಲಾಯಿತು’ ಎಂದು ಲೋಕಸಭೆಯ ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
2016ರಲ್ಲಿ ವಿಮಾನ ಪ್ರಯಾಣವೊಂದರ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ಭೇಟಿಯಾದೆ. ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಅವರು ನನಗೆ ಸೂಚಿಸಿದರು. ನಾನು ಅದೇ ವರ್ಷ ನಿವೃತ್ತಿಯಾಗಲಿದ್ದೆ. ಕೇಂದ್ರ ಸಚಿವ ಕೂಡ ಆಗಲು ಅವಕಾಶವಿದೆ ಎಂದು ಅವರು ಹೇಳಿದರು. ಆದರೆ, ನನಗೆ ಆಸಕ್ತಿ ಇಲ್ಲದ ಕಾರಣ, ಆ ಆಹ್ವಾನವನ್ನು ನಿರಾಕರಿಸಿದೆ.
ಬಿಜೆಪಿ ಮುಖಂಡರ ಬದಲು ಮುಖ್ಯ ಚುನಾವಣಾ ಆಯುಕ್ತರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು ಆಶ್ಚರ್ಯ ತಂದಿತ್ತು’ ಎಂದು ಥಾಮ್ರನ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
-
ನಿಧನ ವಾರ್ತೆ9 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
Uncategorized22 hours ago
Digitel Arrest ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ
-
ಸ್ಥಳೀಯ8 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!
-
ಸ್ಥಳೀಯ8 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
-
ಮಂಗಳೂರು6 hours agoSoujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
-
ನಿಧನ ವಾರ್ತೆ3 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
ರಾಜಕೀಯ7 hours agoSudha Yadav-ಆರು ರಾಜ್ಯಗಳಿಗೆ ರಾಜ್ಯಪಾಲರ ಬದಲಾವಣೆ: ಕರ್ನಾಟಕಕ್ಕೆ ನೂತನ ರಾಜ್ಯಪಾಲರಾಗಿ ಸುಧಾ ಯಾದವ್
-
ಬಿಗ್ ನ್ಯೂಸ್3 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ


















