Connect with us

Uncategorized

ಮಂಗಳೂರು : ಲೇಡಿಗೋಶನ್ ಆಸ್ಪತ್ರೆಯಲ್ಲಿ ಮಗು ಅದಲು – ಬದಲು ಪ್ರಕರಣ | DNA ವರದಿ ಬರುವ ಮೊದಲೇ ಮಗು ಸಾವು

Published

on



Ad Widget

Ad Widget

Ad Widget

Ad Widget

 ಮಂಗಳೂರು : ನ 15: ಗೊಂದಲ ಸೃಷ್ಟಿಯಾಗಿ, ಮಂಗಳೂರಿನಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ಮಗು ಅದಲು –ಬದಲು ಪ್ರಕರಣ ತಾರ್ಕಿಕ ಅಂತ್ಯ ಕಾಣುವ ಮೊದಲೇ ದುರಂತವೊಂದು ಸಂಭವಿಸಿದೆ. ಮಗುವಿನ  ಡಿಎನ್ಎ ವರದಿ ಬರುವ ಮುಂಚೆಯೇ ಆ ಮಗು ಅಸ್ವಸ್ಥೆಯಿಂದ ಸಾವನ್ನಪ್ಪಿದೆ.  ಜನಿಸಿದ ಕೇವಲ ಒಂದೂವರೆ ತಿಂಗಳಿನಲ್ಲಿಯೇ ಶಿಶುವಿನ ಬದುಕು ಕಮರಿ ಹೋಗಿದೆ.

Ad Widget

Ad Widget

Ad Widget

Ad Widget

ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ   ಬ್ರಹ್ಮಾವರದ ಮುಸ್ತಫಾ ಅವರ ಪತ್ನಿ ಅಮ್ರಿನಾ ಎಂಬುವರು  ಸೆಪ್ಟಂಬರ್‌  28ರಂದು  ಮಗುವಿಗೆ ಜನ್ಮ ನೀಡಿದ್ದರು. ಈ ಮಗು ಅದಲು ಬದಲಾಗಿದೆ ಎಂದು ಮಹಿಳೆ ಹಾಗೂ ಆಕೆಯ ಪತಿ ಆರೋಪಿಸಿದ್ದರು. ಮಾತ್ರವಲ್ಲದೇ ಜಿಲ್ಲಾಡಳಿತ ಹಾಗೂ ಠಾಣೆಗೆ ಈ ಬಗ್ಗೆ ಲಿಖಿತ ದೂರು ನೀಡಿದ್ದರು .

Ad Widget

Ad Widget

Ad Widget alt="Ad Widget"/>

Ad Widget

ಅದಾದ ಬಳಿಕ ಮಗುವಿನ ಡಿಎನ್ ಎ ಪರೀಕ್ಷೆ ನಡೆಸಲು ನ್ಯಾಯಾಲಯದ ಅನುಮತಿ ಪಡೆದು ಮಗುವಿನ ಡಿಎನ್‌ಎ ಮಾದರಿಯನ್ನು ಪರೀಕ್ಷೆಗಾಗಿ ಹೈದರಾಬಾದ್​ಗೆ ಕಳುಹಿಸಿಕೊಡಲಾಗಿತ್ತು. ಆದರೆ, ಡಿಎನ್ಎ ಪರೀಕ್ಷೆಯ ವರದಿ ಬರುವ ಮುನ್ನವೇ ಮಗು ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದೆ.     

Ad Widget

Ad Widget <> Ad Widget

ಏನಿದು ಪ್ರಕರಣ :

ದೂರುದಾರ ಮಹಿಳೆಯೂ ಸೆ. 28 ರಂದು ಲೇಡಿಗೋಶನ್ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದು, ಆ ಸಂದರ್ಭ ವೈದ್ಯರು ಹೆಣ್ಣು ಮಗು ಎಂದು ತಿಳಿಸಿದ್ದರು ಎನ್ನಲಾಗಿದೆ.  ಜನಿಸುವಾಗಲೇ ಮಗುವಿಗೆ ಉಸಿರಾಟ ತೊಂದರೆ ಕಾಣಿಸಿದ್ದು ,ಅದನ್ನು ಆಸ್ಪತ್ರೆಯಲ್ಲಿ ತೀವ್ರ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತಿತ್ತು.



Ad Widget

15 ದಿನಗಳ  ಬಳಿಕವೂ ಮಗುವಿಗೆ ಚಿಕಿತ್ಸೆ ಮುಂದುವರಿಸಿದ ಕಾರಣ  ಪೋಷಕರು ಒತ್ತಾಯ ಮಾಡಿ ಮಗುವನ್ನು ತೆಗೆದುಕೊಂಡು ಉಡುಪಿಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ದಾಖಲಾತಿಯ ಸಂದರ್ಭ  ಪರಿಶೀಲಿಸಿದಾಗ ಅದು  ಗಂಡು ಮಗು ಎಂದು ತಿಳಿದು ಬಂದಿದೆ  ನೀಡಲಾಗಿತ್ತು.

Ad Widget

Ad Widget

ಹೀಗಾಗಿ ಕುಂದಾಪುರದ ಮಹಿಳೆ ಮತ್ತು ಆಕೆಯ ಪತಿ ಈ ಬಗ್ಗೆ  ಲೇಡಿಗೋಶನ್ ಆಸ್ಪತ್ರೆಯ ವೈದ್ಯರ ಗಮನಕ್ಕೆ ತಂದಿದ್ದೂ ಮಗು ಅದಲು ಬದಲಾಗಿದೆ ಎಂದು ಆರೋಪಿಸಿದ್ದರು. ಆದರೆ ವೈದ್ಯರು ಈ ವಾದವನ್ನು ಒಪ್ಪದೆ ನಿಮಗೆ ಗಂಡು ಮಗುವೇ ಜನಿಸಿದೆ. ದಾಖಲೆಯಲ್ಲಿ ಹೆಣ್ಣು ಎಂದು ತಪ್ಪಾಗಿ ನಮೂದಿಸಲಾಗಿದೆ ಎಂದು ತಿಳಿಸಿದ್ದರು  

 ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಪೋಷಕರು  ಹೆಣ್ಣು ಮಗುವನ್ನೇ ನೀಡಲು ಆಗ್ರಹಿಸಿದ್ದರು. ಅಲ್ಲದೇ, ಈ ಬಗ್ಗೆ ಮಂಗಳೂರಿನ ಬಂದರ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮಗುವಿನ ಪೋಷಕರ ದೂರಿನ ಹಿನ್ನೆಲೆಯಲ್ಲಿ ನ್ಯಾಯಾಲಯದ ಅನುಮತಿ ಪಡೆದು ಮಗುವಿನ  ಡಿ ಎನ್‌ ಏ ಪರೀಕ್ಷೆ ನಡಸಲು ಸ್ಯಾಂಪಲ್‌ ಸಂಗ್ರಹಿಸಿ ಲ್ಯಾಬ್‌ ಗೆ ಕಳುಹಿಸಲಾಗಿತ್ತು.

ಮಗುವಿನ ಪೋಷಕರು  ಡಿ ಎನ್‌ ಏ ವರದಿಯ ನಿರೀಕ್ಷೆಯಲ್ಲಿರುವಾಗಲೇ ಗಂಡು ಮಗು ಉಸಿರಾಟದ ತೊಂದರೆಯಿಂದೆ ಅಸುನೀಗಿದೆ. ಇನ್ನು ಮಗುವಿನ ಡಿಎನ್‌ ಎ ವರದಿ ಬಂದ ಬಳಿಕ ಆ ವರದಿಯನ್ನಾಧರಿಸಿ ಠಾಣೆಯಲ್ಲಿ ದಾಖಲಾದ ಪ್ರಕರಣದ ತನಿಖೆ ಮುಂದುವರಿಯುವ ಸಾಧ್ಯತೆ ಇದೆ

Ad Widget
Click to comment

Leave a Reply

Uncategorized

Vivekananda-ವಿವೇಕಾನಂದ ಕಾಲೇಜಿನಲ್ಲಿ ಪ್ರೇರಣಾ 2026ನ ಸಮಾರೋಪ ಸಮಾರಂಭ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇದರ ಮಾತೃ ಸಂಸ್ಥೆಯಾದ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ಇದರ ನೇತೃತ್ವದಲ್ಲಿ ನಡೆದ ಭವಿಷ್ ಮತ್ತು ಯಶಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ‘ಪ್ರೇರಣಾ’ 2026 ಸಮಾರೋಪ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ಸಹಕಾರ್ಯವಾಹ ಪ್ರಕಾಶ್ ಪಿ. ಎಸ್. ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಅಧ್ಯಾಪಕ ವೃತ್ತಿ ಕೇವಲ ಒಂದು ವೃತ್ತಿಯಾಗದೆ, ಅದು ನಮ್ಮ ಪ್ರವೃತ್ತಿಯಾಗಬೇಕು. ಆಗ ಮಾತ್ರ ಆ ಕ್ಷೇತ್ರದಲ್ಲಿ ನಾವು ಬೆಳೆಯಲು ಸಾಧ್ಯ. ಶಿಕ್ಷಣ ಎನ್ನುವುದು ಪ್ರತಿಯೊಬ್ಬ ವ್ಯಕ್ತಿಯ ಆಂತರಿಕ ಶಕ್ತಿಯನ್ನು ಹೊರಗಿಡುವ ಒಂದು ಕೌಶಲ್ಯವಾಗಿದೆ. ಶಿಕ್ಷಣದ ಮೂಲಕ ಸಮಾಜವನ್ನು ಬದಲಾಯಿಸಲು ಸಾಧ್ಯ. ಇದರ ಮೂಲಕ ಭಾರತೀಯ ಸಮಾಜ ಶ್ರೇಷ್ಠವಾಗಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ಸಹಕಾರ್ಯವಾಹ ಪ್ರಕಾಶ್ ಪಿ. ಎಸ್. ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇದರ ಮಾತೃ ಸಂಸ್ಥೆಯಾದ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ಇದರ ನೇತೃತ್ವದಲ್ಲಿ ನಡೆದ ಭವಿಷ್ ಮತ್ತು ಯಶಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ‘ಪ್ರೇರಣಾ’ 2026 ಸಮಾರೋಪ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯ ನಾರಾಯಣ ಕೆ ಎಂ ಮಾತನಾಡಿ, ಶಿಕ್ಷಕ ವೃತ್ತಿ ಎಂಬುದು ತುಂಬಾ ಪಾವಿತ್ರ‍್ಯದ ವೃತ್ತಿಯಾಗಿದೆ. ಸಮಾಜದಲ್ಲಿ ಡಾಕ್ಟರ್, ಇಂಜಿನಿಯರ್‌ಗಳು ವೃತ್ತಿಯಲ್ಲಿ ಸಾಧನೆ ಗೈದವರೆಲ್ಲರ ಬದುಕನ್ನು ರೂಪಿಸಲು ಶಿಕ್ಷಕಪಾತ್ರ ಮಹತ್ತರ ಎಂದು ನುಡಿದರು.



Ad Widget

ವೇದಿಕೆಯಲ್ಲಿ ಭವಿಷ್ ಘಟಕದ ಮಾರ್ಗದರ್ಶಕ ಗಣಪತಿ ಹೆಗಡೆ, ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿ ಕೃಷ್ಣ ಕೆ.ಎನ್ ಹಾಗೂ ಪ್ರಾಂಶುಪಾಲ ಶ್ರೀಕೃಷ್ಣ ಗಣರಾಜ ಭಟ್. ಎಸ್ ಉಪಸ್ಥಿತರಿದ್ದರು.

Ad Widget

Ad Widget

ಕಾರ್ಯಕ್ರಮವನ್ನು ಭವಿಷ್ ಘಟಕದ ಸಂಯೋಜಕಿ ಲಕ್ಷ್ಮೀ ಎಸ್ ಭಟ್ ಸ್ವಾಗತಿಸಿ, ಭವಿಷ್ ಘಟಕದ ಸಂಯೋಜಕ ಡಾ.ಪ್ರಮೋದ್ ಎಂ. ಜಿ ವಂದಿಸಿ, ಶಿಬಿರಾರ್ಥಿ ಶಿವಾನಿ ನಿರೂಪಿಸಿದರು.

Ad Widget
Continue Reading

Uncategorized

ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ

Published

on



Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಉಳ್ಳಾಲ: ಸೋಮೇಶ್ವರದ ಪೆರಿಬೈಲ್ ಬೀಚ್‌ನಲ್ಲಿ ಸಮುದ್ರಪಾಲಾಗಿದ್ದ ಉಜಿರೆ ಎಸ್‌ಡಿಎಂ ಕಾಲೇಜಿನ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿ ಶೋಭಿತ್ ಎಂ. ಗೌಡ (18) ಅವರ ಮೃತದೇಹ ಭಾನುವಾರ ಮಧ್ಯಾಹ್ನ ಪತ್ತೆಯಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಮ್ಮರಡಿ ನಿವಾಸಿಯಾಗಿದ್ದ ಶೋಭಿತ್, ಶನಿವಾರ ಸಂಜೆ ಸ್ನೇಹಿತರೊಂದಿಗೆ ಬೀಚ್‌ಗೆ ತೆರಳಿದ್ದ ವೇಳೆ ಸಮುದ್ರದ ಅಲೆಗಳ ರಭಸಕ್ಕೆ ಸಿಲುಕಿ ನೀರುಪಾಲಾಗಿದ್ದರು.

Ad Widget

Ad Widget <> Ad Widget

ಉಜಿರೆ ಎಸ್‌ಡಿಎಂ ಕಾಲೇಜಿನ ಒಂಬತ್ತು ಮಂದಿ ವಿದ್ಯಾರ್ಥಿಗಳು ಶನಿವಾರ ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕ ಸೋಮೇಶ್ವರದ ಪೆರಿಬೈಲ್ ಬೀಚ್‌ಗೆ ತೆರಳಿದ್ದರು. ಈ ವೇಳೆ ಶೋಭಿತ್ ಮತ್ತು ಆಕಾಶ್ ಎಂಬವರು ಸಮುದ್ರಕ್ಕಿಳಿದಿದ್ದು, ಇಬ್ಬರೂ ಅಲೆಗಳ ಸೆಳೆತಕ್ಕೆ ಸಿಲುಕಿದ್ದರು. ಈಜು ತಿಳಿದಿದ್ದ ಆಕಾಶ್ ಈಜಿ ದಡ ಸೇರಿ ಪ್ರಾಣಾಪಾಯದಿಂದ ಪಾರಾಗಿದ್ದರು. ಆದರೆ, ಶೋಭಿತ್ ನಾಪತ್ತೆಯಾಗಿದ್ದರು.



Ad Widget

ವಿದ್ಯಾರ್ಥಿಗಾಗಿ ಶನಿವಾರ ತಡರಾತ್ರಿವರೆಗೂ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಎಸ್‌ಡಿಆರ್‌ಎಫ್, ಕರಾವಳಿ ಕಾವಲು ಪಡೆ, ಗೃಹರಕ್ಷಕ ದಳ ಹಾಗೂ ಉಳ್ಳಾಲ ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Ad Widget

Ad Widget

ಭಾನುವಾರ ಮಧ್ಯಾಹ್ನ ಉಳ್ಳಾಲ ವಲಯದ ನಾಡದೋಣಿ ಹಾಗೂ ಗಿಲ್ನೆಟ್ ಮೀನುಗಾರರ ಸಂಘದ ಪ್ರಮುಖರಾದ ಆಸಿಫ್ ಎಂ.ಬಿ., ನಿಝಾಮ್ ಕೋಟೆಪುರ, ನಝೀರ್ ಕೋಡಿ, ರಝಾಕ್ ಕೋಟೆಪುರ, ಮುಸ್ತಾಫ ಕೋಟೆಪುರ ಮತ್ತು ಇರ್ಫಾನ್ ಕೋಟೆಪುರ ಅವರು ನಾಡದೋಣಿಯಲ್ಲಿ ಶೋಧ ನಡೆಸಿದರು. ಈ ವೇಳೆ ಉಚ್ಚಿಲ ಪೆರಿಬೈಲ್ ಸಮೀಪ ಸಮುದ್ರದಲ್ಲಿ ತೇಲುತ್ತಿದ್ದ ಶೋಭಿತ್ ಅವರ ಮೃತದೇಹ ಪತ್ತೆಯಾಗಿದೆ.

ಮೃತದೇಹವನ್ನು ನಾಡದೋಣಿಯ ಮೂಲಕ ಕೋಟೆಪುರ ಸಮುದ್ರ ತೀರಕ್ಕೆ ತರಲಾಗಿದ್ದು, ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶೋಭಿತ್ ತನ್ನ ಪೋಷಕರ ಏಕೈಕ ಪುತ್ರನಾಗಿದ್ದ ಎಂದು ತಿಳಿದುಬಂದಿದೆ.

Ad Widget
Continue Reading

Uncategorized

ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್‌ಫುಲ್ |

Published

on



Ad Widget

Ad Widget

Ad Widget

Ad Widget

ಅ. 23ರಂದು ಚಿತ್ರ ಬಿಡುಗಡೆ

Ad Widget

Ad Widget

Ad Widget

Ad Widget

ಬಹು ನಿರೀಕ್ಷಿತ ತುಳು ಚಿತ್ರ ‘ಬನ’ ಮುಂಬೈನಲ್ಲಿ ನಡೆದ ಮೊದಲ ಎರಡು ಪ್ರೀಮಿಯರ್ ಪ್ರದರ್ಶನಗಳಲ್ಲೇ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಮುಂಬೈನ ಮುಲುಂದ್ ಮತ್ತು ಕಲ್ಯಾಣ್‌ನಲ್ಲಿ ಶನಿವಾರ ನಡೆದ ಪ್ರದರ್ಶನಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎರಡೂ ಕಡೆ ಚಿತ್ರ ಹೌಸ್‌ಫುಲ್ ಪ್ರದರ್ಶನ ಕಂಡಿದೆ ಎಂದು ಚಿತ್ರತಂಡ ತಿಳಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ನಾಗನ ಹಿನ್ನೆಲೆಯನ್ನು ಆಧರಿಸಿದ ಮೊದಲ ತುಳು ಚಿತ್ರ ಎಂಬ ವಿಶೇಷತೆಯೊಂದಿಗೆ ಗಮನ ಸೆಳೆದಿರುವ ‘ಬನ’, ತನ್ನ ಕಥೆ ಮತ್ತು ಕಲಾವಿದರ ಅಭಿನಯದ ಮೂಲಕ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಚಿತ್ರದ ಕಥಾಹಂದರ ಪ್ರೇಕ್ಷಕರನ್ನು ಆವರಿಸಿಕೊಂಡಿದ್ದು, ಯುವ ಕಲಾವಿದರ ಅಭಿನಯದ ಜತೆಗೆ ಹಿರಿಯ ಕಲಾವಿದರೂ ತಮ್ಮ ಪಾತ್ರಗಳಿಗೆ ಜೀವ ತುಂಬಿದ್ದಾರೆ ಎಂಬ ಮೆಚ್ಚುಗೆಯ ಮಾತುಗಳು ಪ್ರದರ್ಶನದ ಬಳಿಕ ಕೇಳಿಬಂದಿವೆ.

Ad Widget

Ad Widget <> Ad Widget

ಚಿತ್ರದಲ್ಲಿ ಯುವ ಕಲಾವಿದರು ಅದ್ಭುತವಾಗಿ ನಟಿಸಿದ್ದು, ಕಥೆಯ ನಿರೂಪಣೆ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ವಿಭಿನ್ನ ಕಥಾವಸ್ತು ಹಾಗೂ ಕಲಾವಿದರ ಸಹಜ ಅಭಿನಯ ಚಿತ್ರಕ್ಕೆ ಮೆರುಗು ನೀಡಿದೆ. ತುಳು ಚಿತ್ರರಂಗದಲ್ಲಿ ನಾಗನ ಹಿನ್ನೆಲೆಯನ್ನು ಆಧರಿಸಿದ ಕಥಾವಸ್ತುವಿನೊಂದಿಗೆ ಮೂಡಿಬಂದಿರುವ ‘ಬನ’, ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದ್ದು, ಮುಂಬೈ ತುಳು ಪ್ರೇಕ್ಷಕರಿಂದ ದೊರೆತ ಪ್ರತಿಕ್ರಿಯೆ ಚಿತ್ರತಂಡದ ಉತ್ಸಾಹವನ್ನು ಹೆಚ್ಚಿಸಿದೆ.



Ad Widget

ಮುಂಬೈನಲ್ಲಿ ಚಿತ್ರದ ಪ್ರೀಮಿಯರ್ ಪ್ರದರ್ಶನಗಳ ಆಯೋಜನೆಯನ್ನು ಬಾಬಪ್ರಸಾದ್ ಅರಸ ಮತ್ತು ನಾಗಕಿರಣ್ ಶೆಟ್ಟಿ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಶನಿವಾರ ನಡೆದ ಎರಡೂ ಪ್ರದರ್ಶನಗಳಿಗೆ ಪ್ರೇಕ್ಷಕರ ಉತ್ತಮ ಸ್ಪಂದನೆ ದೊರೆತಿದ್ದು, ಹೌಸ್‌ಫುಲ್ ಪ್ರದರ್ಶನ ಚಿತ್ರತಂಡಕ್ಕೆ ಸಂತಸ ತಂದಿದೆ.

Ad Widget

Ad Widget

ಮುಂಬೈ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ನೆಲೆಸಿರುವ ತುಳುವರು ತುಳು ಭಾಷೆ ಮತ್ತು ಚಿತ್ರರಂಗದ ಬೆಳವಣಿಗೆಗೆ ನಿರಂತರ ಬೆಂಬಲ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ‘ಬನ’ ಚಿತ್ರಕ್ಕೆ ಮುಂಬೈನಲ್ಲಿ ದೊರೆತಿರುವ ಪ್ರತಿಕ್ರಿಯೆ ಚಿತ್ರ ಬಿಡುಗಡೆಗೂ ಮುನ್ನ ನಿರೀಕ್ಷೆಯನ್ನು ಹೆಚ್ಚಿಸಿದೆ.

ಅ. 23ರಂದು ಚಿತ್ರ ಬಿಡುಗಡೆ

‘ಬನ’ ಚಿತ್ರವು ಇದೇ ತಿಂಗಳ 23ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಮುಂಬೈನ ಪ್ರೀಮಿಯರ್ ಪ್ರದರ್ಶನಗಳಲ್ಲಿ ದೊರೆತಿರುವ ಮೆಚ್ಚುಗೆ, ಚಿತ್ರದ ಅಧಿಕೃತ ಬಿಡುಗಡೆಗೆ ಮುನ್ನ ಸಕಾರಾತ್ಮಕ ವಾತಾವರಣ ನಿರ್ಮಿಸಿದೆ. ವಿಭಿನ್ನ ಕಥಾಹಂದರ ಮತ್ತು ಕಲಾವಿದರ ಅಭಿನಯದ ಮೂಲಕ ಪ್ರೇಕ್ಷಕರನ್ನು ತಲುಪಲು ಸಜ್ಜಾಗಿರುವ ‘ಬನ’ ಚಿತ್ರಕ್ಕೆ ಮುಂದಿನ ದಿನಗಳಲ್ಲಿ ಯಾವ ರೀತಿಯ ಪ್ರತಿಕ್ರಿಯೆ ದೊರೆಯಲಿದೆ ಎಂಬ ಕುತೂಹಲ ತುಳು ಚಿತ್ರಪ್ರೇಮಿಗಳಲ್ಲಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading