ಅಪರಾಧ
ಶಾಂತಿ ಮೊಗರು ಸೇತುವೆ ಬಳಿ ಹಿಟ್ ಅಂಡ್ ರನ್ | ಬೈಕ್ ಗೆ ಡಿಕ್ಕಿ ಹೊಡೆದು ಕಾರು ಪರಾರಿ – ಬೈಕ್ ಸವಾರ ಗಂಭೀರ
ಕಾರೊಂದು ಬೈಕಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾದ ಹಾಗೂ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಡಬ ತಾಲೂಕಿನ ಶಾಂತಿ ಮೊಗರು ಸೇತುವೆ ಸಮೀಪ ನ 15 ರಂದು ರಾತ್ರಿ ನಡೆದಿದೆ.
ಕಡಬ ತಾಲೂಕಿನ ಕಾಣಿಯೂರು ಸಮೀಪದ ನೂಜಿ ನಿವಾಸಿ ಮಹೇಶ್ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ. ಇವರನ್ನು ಸ್ಥಳೀಯರ ಸಹಾಯದಿಂದ ಕೂಡಲೇ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ.
ಕುದ್ಮಾರ್ ಹಾಗೂ ಆಲಂಗಾರನ್ನು ಸಂಪರ್ಕಿಸುವ ರಸ್ತೆಯಲ್ಲಿ ಶಾಂತಿ ಮೊಗರು ಸೇತುವೆಯಿಂದ 300 ಮೀಟರ್ ದೂರದಲ್ಲಿ ಅಪಘಾತ ಸಂಭವಿಸಿದೆ. ನೂಜಿ ಮಹೇಶ್ ರವರು ತಮ್ಮ ಬಜಾಜ್ ಡಿಸ್ಕವರಿ ಬೈಕ್ ನಲ್ಲಿ ಅಲಂಗಾರಿನಿಂದ ತನ್ನ ಮನೆಗೆ ಬರುತ್ತಿರುವಾಗ ಅಪಘಾತ ನಡೆದ ಸ್ಥಳದಲ್ಲಿ ಯಾವುದೋ ಕಾರಣಕ್ಕೆ ಬೈಕ್ ನಿಲ್ಲಿಸಿದ್ದರು .

ಕೆಲ ಸಮಯದ ಬಳಿಕ ಅದೇ ಮಾರ್ಗದಲ್ಲಿ ಅಲಂಗಾರಿನಿಂದ ಕುದ್ಮಾರ್ ಕಡೆಗೆ ಬರುತ್ತಿದ್ದ ಬೈಕ್ ನ ಹಿಂಬದಿಗೆ ಡಿಕ್ಕಿ ಹೊಡೆದು, ನಿಲ್ಲಿಸದೆ ಪರಾರಿಯಾಗಿದೆ ಎಂದು ಹೇಳಲಾಗುತ್ತಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಕೆಳಕ್ಕೆ ಉರುಳಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಆದರೆ ಇದನ್ನು ಗಮನಿಸಿಯೂ, ಕಾರು ಚಾಲಕ ನಿಲ್ಲಿಸಿ ಉಪಚರಿಸದೇ ಪರಾರಿಯಾಗಿದ್ದಾನೆ ಎಂದು ಆರೋಪಿಸಿರುವ ಸ್ಥಳಿಯರು ಆತನ ನಡವಳಿಕೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೂಜಿ ಮಹೇಶ್ ರವರಿಗೆ 6 ವರ್ಷಗಳ ಹಿಂದೆ ಅಪಘಾತವಾಗಿತ್ತು. ಆಗ ಇವರ ಜತೆ ಪ್ರಯಾಣಿಸುತ್ತಿದ್ದ ಇಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದು , ಇವರು ಪವಾಡ ಸದೃಶ್ಯವಾಗಿ ಬದುಕಿಳಿದಿದ್ದರು
ಅಂತರ ರಾಜ್ಯ
Arrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಯನಾಡು ಜಿಲ್ಲೆಯ ಮಾನಂತವಾಡಿ, ವೆಳ್ಳರ, ಚೆನ್ನಿಕ್ಕರ ನಿವಾಸಿ ಬಿಜು ಆಂಟನಿ (45) ಬಂಧಿತ ಆರೋಪಿ.
ಕಾಸರಗೋಡು: ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಯನಾಡು ಜಿಲ್ಲೆಯ ಮಾನಂತವಾಡಿ, ವೆಳ್ಳರ, ಚೆನ್ನಿಕ್ಕರ ನಿವಾಸಿ ಬಿಜು ಆಂಟನಿ (45) ಬಂಧಿತ ಆರೋಪಿ.
ಚೇರ್ತಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಸುಲ್ತಾನ್ ಬತ್ತೇರಿ ಮೂಲದ ಪತ್ನಿ ಮತ್ತು ಮಕ್ಕಳೊಂದಿಗೆ ವಾಸಿಸುತ್ತಿದ್ದ ವೇಳೆ ಆತ ಸಿಕ್ಕಿಬಿದ್ದಿದ್ದಾನೆ ಎಂದು ತಿಳಿದುಬಂದಿದೆ.
ವೈದ್ಯನೆಂದು ನಂಬಿಸಿ ಅತ್ಯಾಚಾರ ಆರೋಪ
ವೈದ್ಯನೆಂದು ಪರಿಚಯಿಸಿಕೊಂಡು ತಳಿಪರಂಬ ಮೂಲದ ಯುವತಿಯೊಬ್ಬಳನ್ನು ಮಂಜೇಶ್ವರದ ಹೊಸಂಗಡಿಯ ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪ ಬಿಜು ಆಂಟನಿ ವಿರುದ್ಧವಿದೆ. ಈ ಸಂಬಂಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಯುವತಿಯಿಂದ ಮೂರೂವರೆ ಪವನ್ ಚಿನ್ನಾಭರಣವನ್ನೂ ಪಡೆದಿದ್ದಾನೆ ಎಂದು ಆರೋಪಿಸಲಾಗಿದೆ.
ಮದುವೆಯಾದ ಮೂರೇ ದಿನಕ್ಕೆ ಪರಾರಿ
ಆರೋಪಿ 2020ರಲ್ಲಿ ತನ್ನ ವಂಚನೆಯ ಜಾಲ ಆರಂಭಿಸಿದ್ದ ಎನ್ನಲಾಗಿದೆ. ಚೇರ್ತಲ ಸಮೀಪದ ನಿವಾಸಿ ರಮ್ಯಾ ಎಂಬ ಯುವತಿಯನ್ನು ರಾಜೇಶ್ ಎಂಬ ಹೆಸರಿನಲ್ಲಿ ಮದುವೆಯಾಗಿದ್ದ ಆತ, ಮದುವೆಯಾದ ಮೂರನೇ ದಿನವೇ ₹30 ಸಾವಿರ ನಗದು ಮತ್ತು ಏಳು ಪವನ್ ಚಿನ್ನಾಭರಣ ಪಡೆದುಕೊಂಡು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ರಮ್ಯಾ ನೀಡಿದ ದೂರಿನ ಮೇರೆಗೆ ಚೇರ್ತಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ, ಆರೋಪಿಯನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಇದೀಗ ಸುಮಾರು ಆರು ವರ್ಷಗಳ ಬಳಿಕ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜು ಆಂಟನಿಯನ್ನು ಬಂಧಿಸಲಾಗಿದೆ.
ಬೇರೆ ಬೇರೆ ಹೆಸರುಗಳಲ್ಲಿ ವಂಚನೆ
ವೈದ್ಯನೆಂದು ಹೇಳಿಕೊಂಡು ಮದುವೆ ಜಾಹೀರಾತುಗಳನ್ನು ನೀಡುವ ಮೂಲಕ ಮಹಿಳೆಯರನ್ನು ಪರಿಚಯಿಸಿಕೊಳ್ಳುತ್ತಿದ್ದ ಆರೋಪಿ, ಬಳಿಕ ಮದುವೆಯಾಗುವುದಾಗಿ ನಂಬಿಸಿ ಅವರಿಂದ ಚಿನ್ನಾಭರಣ ಹಾಗೂ ಹಣ ಪಡೆದು ಪರಾರಿಯಾಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವಿವಿಧ ಸ್ಥಳಗಳಲ್ಲಿ ಬೇರೆ ಬೇರೆ ಹೆಸರುಗಳನ್ನು ಬಳಸಿಕೊಂಡು ಮಹಿಳೆಯರಿಗೆ ವಂಚಿಸುತ್ತಿದ್ದ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಆರೋಪಿಯ ವಿರುದ್ಧದ ಪ್ರಕರಣಗಳ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಅಪರಾಧ
Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.
ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.
ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.
ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಸ್ಥಳೀಯ
Navoor clinic-ನಾವೂರು ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ಘಟನಾ ಸ್ಥಳಕ್ಕೆ ಎಎಸ್ಪಿ ಭೇಟಿ, ಪರಿಶೀಲನೆ
ಡೀಸೆಲ್ ಸುರಿದು ಬೆಂಕಿ ಹಚ್ಚಲಾಗಿದ್ದ ನಾವೂರು ಆರೋಗ್ಯ ಕ್ಲಿನಿಕ್‌ಗೆ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ ಅವರು ಅ. 8ರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಾವೂರು: ಡೀಸೆಲ್ ಸುರಿದು ಬೆಂಕಿ ಹಚ್ಚಲಾಗಿದ್ದ ನಾವೂರು ಆರೋಗ್ಯ ಕ್ಲಿನಿಕ್‌ಗೆ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ ಅವರು ಅ. 8ರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಘಟನಾ ಸ್ಥಳವನ್ನು ಪರಿಶೀಲಿಸಿದ ಅವರು, ಕ್ಲಿನಿಕ್‌ನ ವೈದ್ಯ ಡಾ. ಪ್ರದೀಪ್ ಅವರಿಂದ ಘಟನೆಯ ಕುರಿತು ಮಾಹಿತಿ ಪಡೆದುಕೊಂಡರು.
ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ, ಕೃತ್ಯದಲ್ಲಿ ಭಾಗಿಯಾದ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಿ ನ್ಯಾಯ ಒದಗಿಸುವ ಭರವಸೆಯನ್ನು ಅವರು ನೀಡಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.
-
ಬಿಗ್ ನ್ಯೂಸ್20 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಮಂಗಳೂರು22 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ21 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು21 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ23 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
-
ಸ್ಥಳೀಯ23 hours agoNavoor clinic-ನಾವೂರು ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ಘಟನಾ ಸ್ಥಳಕ್ಕೆ ಎಎಸ್ಪಿ ಭೇಟಿ, ಪರಿಶೀಲನೆ
-
ಶಿಕ್ಷಣ22 hours agoVivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
-
ನಿಧನ ವಾರ್ತೆ3 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ


















