ಸುಳ್ಯ
ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆದ ಕಾರು ಮರಕ್ಕೆ ಢಿಕ್ಕಿ – ತಾಯಿ, ಮಗು ಮೃತ್ಯು | ನಾಲ್ವರು ಗಂಭೀರ
ಪುತ್ತೂರು : ಜಾಲ್ಸೂರು – ಕಾಸರಗೋಡು ಅಂತರಾಜ್ಯ ಹೆದ್ದಾರಿಯ ಪರಪ್ಪೆ ಎಂಬಲ್ಲಿ ಮದುವೆ ದಿಬ್ಬಣದಲ್ಲಿ ತೆರಳುತ್ತಿದ್ದ ಕಾರು ಅಪಘಾತಗೊಂಡು ತಾಯಿ ಮತ್ತು ಮಗು ಧಾರುಣವಾಗಿ ಮೃತಪಟ್ಟ ಘಟನೆ ಡಿ 12 ರಂದು ನಡೆದಿದೆ. ಮೃತಪಟ್ಟ ತಾಯಿ ಮತ್ತು ಮಗು ಸುಳ್ಯದ ನಾವೂರು ಬೋರುಗುಡ್ಡೆ ನಿವಾಸಿಗಳು ಎಂದು ತಿಳಿದು ಬಂದಿದೆ.
ತಾಯಿ ಮತ್ತು ಚಲಿಸುತ್ತಿದ್ದ ಇನೋವಾ ಕಾರು ಚಾಲಕನ ಹತೋಟಿ ಕಳೆದುಕೊಂಡು ಸ್ಕಿಡ್ ಆಗಿ ಪಲ್ಟಿ ಹೊಡೆದು ರಸ್ತೆ ಬದಿಯ ಮರಗಳಿಗೆ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರ ಪುತ್ರಿ, ಪರಪ್ಪೆಯ ಶಾನ್ ಎಂಬವರ ಪತ್ನಿ 28 ವರ್ಷದ ಶಾಹಿನಾ ಹಾಗೂ ಮಗು 3 ವರ್ಷ ಪ್ರಾಯದ ಶಜಾ ಮೃತಪಟ್ಟಿದ್ದಾರೆ. ಇವರ ಪತಿ ಮನೆ ಈಶ್ವರಮಂಗಲದ ಗಾಳಿಮುಖ.
ಅಪಘಾತಕ್ಕಿಡಾದ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇನ್ನು ನಾಲ್ವರು ತೀವ್ರ ಜಖಂಗೊಂಡಿದ್ದಾರೆ. , ಅವರನ್ನು ತತ್ ಕ್ಷಣ ಕಾಸರಗೋಡು ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ ಎಂದು ತಿಳಿದುಬಂದಿದೆ. ಮೃತಪಟ್ಟ ತಾಯಿ ಮತ್ತು ಮಗುವಿನ ಮೃತದೇಹಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ತರಲಾಗಿದೆ.



ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುಳ್ಯ
Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ
ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.
ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.
ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.
ಸುಳ್ಯ
Areca nut-ಅಡಿಕೆ ರೇಟ್ ಜಂಪ್ : ಹೊಸ ಅಡಿಕೆಗೆ ₹360; ಒಂದೇ ದಿನದಲ್ಲಿ ₹10 ಏರಿಕೆ! ಡಬಲ್ ಚೋಲ್ ಧಾರಣೆಯಲ್ಲೂ ಹೆಚ್ಚಳ
ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.
ಸುಳ್ಯ, ನ.12: ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.
ನ.11 ಮತ್ತು ನ.12ರ ಮಾರುಕಟ್ಟೆ ದರಗಳನ್ನು ಹೋಲಿಸಿದಾಗ ಹೊಸ ಅಡಿಕೆಯ ಗರಿಷ್ಠ ಧಾರಣೆ ₹350ರಿಂದ ₹360ಕ್ಕೆ ಏರಿಕೆಯಾಗಿದೆ. ಆದರೆ ಕನಿಷ್ಠ ಧಾರಣೆ ₹280ರಲ್ಲೇ ಸ್ಥಿರವಾಗಿದೆ. ಕನಿಷ್ಠ ದರದಲ್ಲಿ ಬದಲಾವಣೆಯಾಗದಿದ್ದರೂ ಗರಿಷ್ಠ ದರದಲ್ಲಿ ಕಂಡುಬಂದಿರುವ ಏರಿಕೆ ಮಾರುಕಟ್ಟೆಯಲ್ಲಿ ಚೇತರಿಕೆಯ ಮುನ್ಸೂಚನೆ ನೀಡಿದೆ.
ಡಬಲ್ ಚೋಲ್ ಅಡಿಕೆಗೂ ಬೆಲೆ ಏರಿಕೆ
ಡಬಲ್ ಚೋಲ್ ಅಡಿಕೆಯ ಮಾರುಕಟ್ಟೆಯಲ್ಲೂ ಉತ್ತಮ ಬೆಳವಣಿಗೆ ಕಂಡುಬಂದಿದೆ. ಹಿಂದಿನ ದಿನ ₹525ರಷ್ಟಿದ್ದ ಕನಿಷ್ಠ ಧಾರಣೆ ₹530ಕ್ಕೆ ಏರಿಕೆಯಾಗಿದ್ದರೆ, ಗರಿಷ್ಠ ಧಾರಣೆ ₹550ರಿಂದ ₹560ಕ್ಕೆ ತಲುಪಿದೆ. ಈ ಮೂಲಕ ಕನಿಷ್ಠ ದರದಲ್ಲಿ ₹5 ಹಾಗೂ ಗರಿಷ್ಠ ದರದಲ್ಲಿ ₹10ರಷ್ಟು ಹೆಚ್ಚಳ ದಾಖಲಾಗಿದೆ.
ಸಿಂಗಲ್ ಚೋಲ್ ಸೇರಿದಂತೆ ಇತರ ಅಡಿಕೆ ದರ ಸ್ಥಿರ
ಹೊಸ ಅಡಿಕೆ ಮತ್ತು ಡಬಲ್ ಚೋಲ್ ಹೊರತುಪಡಿಸಿ ಮಾರುಕಟ್ಟೆಯ ಇತರ ಪ್ರಮುಖ ಅಡಿಕೆ ವರ್ಗಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸಿಂಗಲ್ ಚೋಲ್ ಅಡಿಕೆ ಕೆ.ಜಿ.ಗೆ ಕನಿಷ್ಠ ₹450 ಹಾಗೂ ಗರಿಷ್ಠ ₹480ರ ದರದಲ್ಲಿ ವಹಿವಾಟು ನಡೆಸಿದೆ.
ಬೆಳೆಗಾರರ ಕಣ್ಣು ಮುಂದಿನ ಮಾರುಕಟ್ಟೆ ದರದತ್ತ
ಇತ್ತೀಚಿನ ದಿನಗಳಲ್ಲಿ ಅಡಿಕೆ ಧಾರಣೆಯಲ್ಲಿ ಕಂಡುಬರುತ್ತಿರುವ ಏರಿಳಿತಗಳು ಬೆಳೆಗಾರರಲ್ಲಿ ಗೊಂದಲ ಮೂಡಿಸಿದ್ದವು. ಅದರಲ್ಲೂ ಉತ್ಪಾದನಾ ವೆಚ್ಚ, ಕೂಲಿ ವೆಚ್ಚ ಹಾಗೂ ನಿರ್ವಹಣಾ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಮಾರುಕಟ್ಟೆ ದರದ ನಿರೀಕ್ಷೆ ಬೆಳೆಗಾರರಲ್ಲಿದೆ.
ಇದೀಗ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯಲ್ಲಿ ದಾಖಲಾಗಿರುವ ಏರಿಕೆ ಮಾರುಕಟ್ಟೆಗೆ ಹೊಸ ಚೈತನ್ಯ ನೀಡಿದೆ. ಆದರೆ ಈ ಏರಿಕೆ ಮುಂದಿನ ದಿನಗಳಲ್ಲೂ ಮುಂದುವರಿಯಲಿದೆಯೇ ಅಥವಾ ಮತ್ತೆ ಧಾರಣೆ ಸ್ಥಿರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಸದ್ಯದ ಮಟ್ಟಿಗೆ ಅಡಿಕೆ ಬೆಳೆಗಾರರ ಚಿತ್ತ ಮುಂದಿನ ಮಾರುಕಟ್ಟೆ ವಹಿವಾಟಿನತ್ತ ನೆಟ್ಟಿದೆ.
-
ಕ್ರೈಂ11 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ನಿಧನ ವಾರ್ತೆ11 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು10 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಬಿಗ್ ನ್ಯೂಸ್11 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಅಪರಾಧ9 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಅಪರಾಧ5 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಕ್ರೀಡೆ10 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ
-
ಸ್ಥಳೀಯ5 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!















