Connect with us

ದಕ್ಷಿಣ ಕನ್ನಡ

ವಿಟ್ಲ : ಹಿಂದೂ ವಿದ್ಯಾರ್ಥಿನಿ – ಮುಸ್ಲಿಂ ವಿದ್ಯಾರ್ಥಿ ಪ್ರೇಮ ಪ್ರಕರಣ : ಕಾಲೇಜಿನಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸಿದ 18 ಹಿಂದೂ ಹಾಗೂ ಮುಸ್ಲಿಂ ವಿದ್ಯಾರ್ಥಿಗಳ ಸಸ್ಪೆಂಡ್‌

Published

on



Ad Widget

Ad Widget

Ad Widget

Ad Widget

ವಿಟ್ಲ: ಡಿ 13 : ಖಾಸಗಿ ಪದವಿಪೂರ್ವ ಕಾಲೇಜಿನ ಹಿಂದು ಯುವತಿ ಹಾಗೂ ಮುಸ್ಲಿಮ್ ಯುವಕನ ನಡುವಿನ ಪ್ರೇಮ ಪ್ರಕರಣದಲ್ಲಿ ಸಹಕರಿಸಿದ ಹಾಗೂ ವಿವಾದ ಎಬ್ಬಿಸಲು ಪ್ರಯತ್ನಿಸಿದ ಸುಮಾರು 18 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಮಾತ್ರ ಹಾಜರಾಗುವಂತೆ ಸೂಚಿಸಿ ಮನೆಗೆ ಕಳುಹಿಸಿರುವ ಬಗ್ಗೆ ವರದಿಯಾಗಿದೆ. ಆಡಳಿತ ಮಂಡಳಿ ಮತ್ತು ಉಪನ್ಯಾಸಕರು ಪೋಷಕರ ಸಮ್ಮುಖದಲ್ಲಿ ಮಾತುಕತೆ ನಡೆಸಿ ಮುಂಜಾಗರೂಕತ ಕ್ರಮವಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ತಿಳಿದು ಬಂದಿದೆ.

Ad Widget

Ad Widget

Ad Widget

Ad Widget

ಹಿಂದು ಯುವತಿ ಹಾಗೂ ಮುಸ್ಲಿಮ್ ಯುವಕನ ನಡುವೆ ಪ್ರೇಮ ಪ್ರಕರಣವಿರುವ ಬಗ್ಗೆ ಸುದ್ದಿಗಳು ಹಬ್ಬಿ ಅದು ಕಾಲೇಜು ಆಡಳಿತ ವರ್ಗದ ಗಮನಕ್ಕೂ ಬಂದಿತ್ತು ಎನ್ನಲಾಗಿದೆ. ಈ ವಿಚಾರವನ್ನು ಕಾಲೇಜ್‌ ವತಿಯಿಂದ ಇಬ್ಬರು ವಿದ್ಯಾರ್ಥಿಗಳ ಪೋಷಕರುಗಳ ಗಮನಕ್ಕೂ ತರಲಾಗಿತ್ತು ಎಂದು ತಿಳಿದು ಬಂದಿದೆ. ಪೋಷಕರನ್ನು ಕಾಲೇಜಿಗೆ ಕರೆಸಿಯೂ ವಿಚಾರವನ್ನು ತಿಳಿಸಲಾಗಿತ್ತು. ಇದಾದ ಬಳಿಕ ಕೆಲ ಸಮಯಗಳ ಕಾಲ ಈ ಪ್ರೇಮ ಪ್ರಕರಣದ ವಿಚಾರವಾಗಿ ಯಾವುದೇ ಗೊಂದಲಗಳು ಉಂಟಾಗಿರಲಿಲ್ಲ.

Ad Widget

Ad Widget

Ad Widget alt="Ad Widget"/>

Ad Widget

ಆದರೇ ಕಾಲೇಜು, ವಾರ್ಷಿಕೋತ್ಸವದ ಸಮಯ ಮತ್ತೆ ಈ ಪ್ರೇಮ ಪ್ರಕರಣ ಮುನ್ನಲೆಗೆ ಬಂದು, ಈ ವಿಚಾರದ ಕುರಿತಾಗಿ ಕಾಲೇಜ್‌ ಕ್ಯಾಂಪಸಿನಲ್ಲಿ ಚರ್ಚೆಗಳು ಆರಂಭವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಉಪನ್ಯಾಸಕರ ತಂಡ ತರಗತಿಯಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಸುವ ಬಗ್ಗೆ ತಪಾಸಣೆಗೆ ಮುಂದಾಗಿದ್ದಾರೆ. ಈ ಸಂದರ್ಭ ಹಿಂದು ಯುವತಿಯ ಕೈಯಲ್ಲಿ ಪ್ರೇಮ ಪತ್ರ ಪತ್ತೆಯಾಗಿತ್ತು. ಆ ದಿನ ಮುಸ್ಲಿಂ ಯುವಕ ಕಾಲೇಜಿಗೆ ಬಂದಿರಲಿಲ್ಲ. ಯುವತಿಯ ಪೊಷಕರಲ್ಲಿ ಮಾತುಕತೆ ನಡೆಸಿ ಮುನ್ನೆಚ್ಚರಿಕೆಯ ದೃಷ್ಟಿಯಿಂದ ಯುವತಿಯನ್ನು ಪರೀಕ್ಷೆಗೆ ಮಾತ್ರ ಆಗಮಿಸುವಂತೆ ಸೂಚನೆ ನೀಡಿದರು.

Ad Widget

Ad Widget <> Ad Widget

ಮುಸ್ಲಿಂ ಯುವಕ ತರಗತಿಗೆ ಹಾಜರಾಗುತ್ತಿದ್ದಂತೆ ಉಪನ್ಯಾಸಕರುಗಳಿಗೆ ಮಾಹಿತಿ ನೀಡದೆ ಕೆಲವು ಹಿಂದು ಯುವಕರು ಗುಂಪು ಕಟ್ಟಿಕೊಂಡು ಹೋಗಿ ಪ್ರಶ್ನಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಮುಸ್ಲಿಂ ಯುವಕ ಹಾಗೂ ಆತನಿಗೆ ಸಹಕಾರ ಮಾಡಿದ 6 ಮಂದಿ ಮುಸ್ಲಿಂ ಯುವಕ ಯುವತಿಯರನ್ನು ಹಾಗೂ ಗುಂಪು ಕಟ್ಟಿಕೊಂಡು ಪ್ರಶ್ನಿಸಲು ಹೋದ ಹಿಂದು ಯುವಕರನ್ನು ಪೋಷಕರ ಸಮ್ಮುಖದಲ್ಲಿ ವಿಚಾರಣೆ ನಡೆಸಿ ಪರೀಕ್ಷೆಗೆ ಮಾತ್ರ ಹಾಜರಾಗುವಂತೆ ಸೂಚಿಸಿ ಮನೆಗೆ ಕಳುಹಿಸಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ದಿಟ್ಟ ನಿರ್ಧಾರಕ್ಕೆ ಪ್ರಶಂಸೆಗಳು ಕೇಳಿ ಬರುತ್ತಿದೆ.



Ad Widget

Suspicious Death ಮಂಗಳೂರು : ಲಾಡ್ಜ್‌ ನಲ್ಲಿ ಪತ್ತೆಯಾಯಿತು ಗಂಡಸಿನ ನಗ್ನ ಶವ – ಪಕ್ಕದಲ್ಲಿ ಮಾತ್ರೆ…! ರೂಂ ಗೆ ಭೇಟಿ ನೀಡಿದ್ರಾ ಮಹಿಳೆ ?

Ad Widget

Ad Widget

ಅಮಾನತು ವಾಪಸ್ಸಿಗೆ ಹಿಂಜಾವೇ ಆಗ್ರಹ

ಏತನ್ಮಧ್ಯೆ ಈ ವಿಚಾರವಾಗಿ 10 ಹಿಂದೂ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಡಿಬಾರ್ ಮಾಡಲಾಗಿದೆ ಇದು ಅತ್ಯಂತ ಖಂಡನೀಯ ಎಂದು ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಆಕ್ರೋಶ ವ್ಯಕ್ತಪಡಿಸಿದೆ. ಪ್ರಾಂಶುಪಾಲರು ತಕ್ಷಣ ಅಮಾನತು ವಾಪಸು ತೆಗೆದುಗೊಳ್ಳಬೇಕು ಹಾಗೂ ಇದಕ್ಕೆ ಕಾರಣೀಕರ್ತರಾದ ಇಬ್ಬರು ವಿದ್ಯಾರ್ಥಿ ವಿದ್ಯಾರ್ಥಿನಿಯರ ಮೇಲೆ ಕ್ರಮ ಜರಗಿಸಬೇಕೆಂದು ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ.

Fever : ಬೆಳ್ತಂಗಡಿ : ಜ್ವರಕ್ಕೆ ತುತ್ತಾದ ಯುವತಿ ಮೃತ್ಯು

Ad Widget
Click to comment

Leave a Reply

ಮಂಗಳೂರು

Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್‌ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ

Published

on



Ad Widget

Ad Widget

Ad Widget

Ad Widget

ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.

Ad Widget

Ad Widget <> Ad Widget

ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್‌ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.



Ad Widget

ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

Continue Reading

ಶಿಕ್ಷಣ

Vivekananda-ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆ ವತಿಯಿಂದ ಕ್ಯಾಂಪಸ್ ಸಂದರ್ಶನ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು. ಕಂಪನಿಯ ಹೆಚ್.ಆರ್. ಅಧಿಕಾರಿ ಸುನಿಲ್ ಹಾಗೂ ನೇಮಕಾತಿ ಅಧಿಕಾರಿ ಸಂತೋಷ್.ವಿ.ಜೋಸ್ ಸಂದರ್ಶನ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

Ad Widget

Ad Widget <> Ad Widget

ಕಾಲೇಜಿನ ಹಿರಿಯ ವಿದ್ಯಾರ್ಥಿಯೂ ಆಗಿರುವ ಸಂತೋಷ್.ವಿ.ಜೋಸ್ ಅವರು ವಿದ್ಯಾರ್ಥಿಗಳಿಗೆ ಉತ್ತಮ ವೃತ್ತಿ ಜೀವನ ರೂಪಿಸಿಕೊಳ್ಳುವ ಕುರಿತು ಮತ್ತು ಭವಿಷ್ಯದ ಅವಕಾಶಗಳ ಬಗ್ಗೆ ವಿವರಿಸಿದರು.



Ad Widget

ಈ ಸಂದರ್ಭದಲ್ಲಿ ಸಂಸ್ಥೆಯ ಪ್ಲೇಸ್‌ಮೆಂಟ್ ವಿಭಾಗದ ಅಧಿಕಾರಿ ಉಷಾಕಿರಣ್ ಹಾಗೂ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Continue Reading

ಅಪರಾಧ

Mangalore-ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Published

on



Ad Widget

Ad Widget

Ad Widget

Ad Widget

ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

2010ರ ಜೂನ್ 22ರಂದು ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜಪೆ ಪೊಲೀಸರಿಗೆ ಒಪ್ಪಿಸಿದ್ದರು.



Ad Widget

ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 419, 420, 468 ಹಾಗೂ 34 ಮತ್ತು ಪಾಸ್‌ಪೋರ್ಟ್ ಕಾಯ್ದೆ-1967ರ ಕಲಂ 12(1)(b), (d), (e) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Ad Widget

Ad Widget

ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ಆರೋಪಿಗೆ ಒಂದು ವರ್ಷ ಆರು ತಿಂಗಳ ಶಿಕ್ಷೆ ವಿಧಿಸಿತ್ತು.

ಇದನ್ನು ಪ್ರಶ್ನಿಸಿ ವೇಲಾಯುಧನ್ ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಂಖ್ಯೆ 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಆತನ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗದೆ ವೇಲಾಯುಧನ್ ತಲೆಮರೆಸಿಕೊಂಡಿದ್ದ.

ಸುಮಾರು ಆರು ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆತನನ್ನು ಅಕ್ಟೋಬರ್ 8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಬಳಿಕ ಮುಂದಿನ ಕಾನೂನು ಕ್ರಮಕ್ಕಾಗಿ ಆತನನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading