ದಕ್ಷಿಣ ಕನ್ನಡ
GL Glow Fest: ಪುತ್ತೂರು : ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಗ್ಲೊ ಫೆಸ್ಟ್-ವಜ್ರಾಭರಣಗಳ ವಾರ್ಷಿಕ ಹಬ್ಬಕ್ಕೆ ಚಾಲನೆ
ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಒಂದು ತಿಂಗಳ ಕಾಲ ನಡೆಯಲಿರುವ ವಾರ್ಷಿಕ ಹಬ್ಬ ಗ್ಲೊ ಫೆಸ್ಟ್‌ಗೆ ಡಿ.19ರಂದು ನಾಲ್ವರು ಮಹಿಳಾ ಸಾಧಕಿಯರು ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು. ಪುತ್ತೂರು, ಸುಳ್ಯ, ಹಾಸನ ಹಾಗೂ ಕುಶಾಲನಗರಗಳಲ್ಲಿ ಮಳಿಗೆಗಳನ್ನು ಹೊಂದಿರುವ ಜಿ.ಎಲ್ ಆಚಾರ್ಯ ಜ್ಯುವೆಲ್ಸರ್ಸ್‌ನ ಪುತ್ತೂರು ಮಳಿಗೆಯಲ್ಲಿ ಗ್ಲೊ ಫೆಸ್ಟ್ ಆಯೋಜಿಸಿಕೊಳ್ಳಲಾಗಿದೆ.
ವಿಶ್ವಕಲಾನಿಕೇತನ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್ ಆ್ಯಂಡ್ ಕಲ್ಚರಲ್‌ನ ವಿದುಷಿ ನಯನಾ ವಿ ರೈ ಅವರು ಗ್ಲೊ ಫೆಸ್ಟ್ ಉದ್ಘಾಟಿಸಿ ಮಾತನಾಡಿ, ನಾನು 1973ರಲ್ಲಿ ಮದುವೆಯಾಗಿ ಬಂದಾಗ ಪುತ್ತೂರಿನಲ್ಲಿ ಪ್ರಪ್ರಥಮ ಬಾರಿಗೆ ಚಿನ್ನಾಭರಣ ಮಳಿಗೆ ಆರಂಭಿಸಿದ ಜಿ.ಎಲ್.ಆಚಾರ್ಯರವರ ಮಳಿಗೆಯಿಂದಲೇ ಸಣ್ಣ ಆಭರಣ ಖರೀದಿಸಿದ್ದೆ. ಆ ಸಣ್ಣ ಆಭರಣವೇ ಅದೃಷ್ಟವೇನೋ ಎಂಬಂತೆ ಮುಂದೆ ಇದೇ ಮಳಿಗೆಯಿಂದ ಅನೇಕ ಆಭರಣ ಖರೀಸುವಂತಾಯಿತು ಎಂದರು.
ಕರ್ನಾಟಕ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆಯ ಮಾಜಿ ನೋಡೆಲ್ ಅಧಿಕಾರಿ ಡಾ. ಅನಿಲ ದೀಪಕ್ ಶೆಟ್ಟಿ ಮಾತನಾಡಿ ಜಿ.ಎಲ್. ಕುಟುಂಬಕ್ಕೂ ನಮಗೂ ಅಪಾರ ಗೌರವ ಇದೆ. ನಾನೊಬ್ಬಳು ಯಕ್ಷಗಾನ ಕಲಾವಿದರ ಪುತ್ರಿಯಾಗಿದ್ದು, ನಮಗೆ ಅನ್ನ ಕೊಟ್ಟದ್ದು ಯಕ್ಷಗಾನವಾದರೆ. ಯಕ್ಷಗಾನಕ್ಕೆ ಕಲಾ ಪೋಷಕಕರಾಗಿ ಅನ್ನದಾತರಾಗಿದ್ದವರು ಜಿ.ಎಲ್. ಆಚಾರ್ಯ ಜ್ಯುವೆಲ್ಸ್ ಸಂಸ್ಥೆ. ನಮ್ಮ ಕುಟುಂಬದಲ್ಲಿ ಆಭರಣ ಖರೀದಿಗೆ ಜಿ.ಎಲ್ ಮೊದಲ ಆಯ್ಕೆಯಾಗಿದೆ. ಮದುವೆ ಸಂದರ್ಭ ಖರೀದಿಸುವ ಆಭರಣಗಳು ಸಂಸ್ಥೆಯೊಂದಿಗೆ ಭಾವನಾತ್ಮಕ ಸಂಬಂಧ ಬೆಳೆಸುತ್ತದೆ. ಅದೇ ರೀತಿ ಸಂಸ್ಥೆಯಲ್ಲಿ ಸಿಗುವ ನಗುಮೊಗದ ಸೇವೆ ಧನಾತ್ಮಕವನ್ನು ಬೆಳೆಸುತ್ತದೆ. ಈ ಎಲ್ಲಾ ಗುಣಗಳನ್ನು ಹೊಂದಿರುವ ಸಂಸ್ಥೆಯಿಂದ ಗ್ರಾಹಕರು ಇನ್ನಷ್ಟು ಆರಭರಣ ಖರೀದಿಸುವಂತಾಗಲಿ ಎಂದರು.
ಮೇಘ ಫ್ರುಟ್ಸ್ ಆ್ಯಂಡ್ ಪ್ರೊಸೆಸಿಂಗ್ ಪ್ರೈವೆಟ್ ಲಿ.ನ ಕಾರ್ಯನಿರ್ವಾಹಕ ಅಧಿಕಾರಿ ರಂಜಿತಾ ಶಂಕರ್ ಅವರು ಮಾತನಾಡಿ ನಾನು ಬಹಳ ವರ್ಷದ ಹಿಂದೆಯೇ ಸಂಸ್ಥೆಯ ಗ್ರಾಹಕಿಯಾಗಿದ್ದೆ. ಈಗಲೂ ಗ್ರಾಹಕಿಯಾಗಿಯೂ, ಜೊತೆಗೆ ಸಂಬಂಧಿಕಳೂ ಆಗಿದ್ದೇನೆ.ಸಣ್ಣ ಪ್ರಾಯದಿಂದಲೇ ಚಿನ್ನಾಭರಣ ಖರೀದಿಗೆ ಜಿ.ಎಲ್.ಸಂಸ್ಥೆ ಬಿಟ್ಟರೆ ಬೇರೇನೂ ಗೊತ್ತೇ ಇರಲಿಲ್ಲ.ಅತ್ಯಂತ ಶುದ್ಧವಾದ ಗುಣಮಟ್ಟದ ಆರಭರಣ ಜಿ.ಎಲ್. ಮಳಿಗೆಯಲ್ಲಿ ಲಭ್ಯವಿತ್ತು.ಹಿಂದಿನಿಂದಲೇ ಗುಣಮಟ್ಟಕ್ಕೆ ಹೆಸರು ಪಡೆದ ಜಿ.ಎಲ್ ಆಚಾರ್ಯ ಜ್ಯುವೆಲ್ಸ್ ಸಂಸ್ಥೆ ಇವತ್ತಿಗೂ ತನ್ನ ಗುಣಮಟ್ಟವನ್ನು ಉಳಿಸಿಕೊಂಡು ಬಂದಿದ್ದರಿಂದ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿದೆ” ಎಂದರು.
ಎಸ್‌ಡಿಪಿ ರೆಡಿಮೀಸ್ ಮತ್ತು ರಿಸರ್ಚ್ ಸೆಂಟರ್‌ನ ಮ್ಯಾನೇಜಿಂಗ್ ಪಾಲುದಾರೆ ರೂಪಲೇಖ, ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಮಾಲಕ ಬಲರಾಮ ಆಚಾರ್ಯ, ಬಲರಾಮ ಆಚಾರ್ಯರವರ ಪತ್ನಿ ರಾಜಿ ಬಲರಾಮ ಆಚಾರ್ಯ ಹಾಗೂ ಪುತ್ರರಾದ ಸುದನ್ವ ಆಚಾರ್ಯ, ಲಕ್ಷ್ಮೀಕಾಂತ್ ಆಚಾರ್ಯ, ಸೊಸೆ ಮೇಘ ಸುದನ್ವ ಆಚಾರ್ಯ ಸಹಿತ ಗ್ರಾಹಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ಪ್ರಸಾದ್ ಎನ್.ಕೆ ವಂದಿಸಿದರು.

ಗ್ಲೋ ಫೆಸ್ಟ್‌ನಲ್ಲಿ ವಿಶೇಷ ರಿಯಾಯಿತಿಗಳು : ಪ್ರದರ್ಶನ ಮತ್ತು ಮಾರಾಟದ ಅವಧಿಯಲ್ಲಿ ಗ್ರಾಹಕರು ತಾವು ಖರೀದಿಸುವ ವಜ್ರಾಭರಣಗಳಲ್ಲಿ ಪ್ರತೀ ಡೈಮಂಡ್ ಕ್ಯಾರೆಟ್‌ನ ಮೇಲೆ ರೂ.5000 ಮತ್ತು ಆಯ್ದೆ ವಜ್ರಾಭರಣ ಖರೀದಿಯಲ್ಲಿ ರೂ.7000 ವರೇಗೆ ರಿಯಾಯಿತಿ ಪಡೆಯಬಹುದು. ಜೊತೆಗೆ ಡಿಜಿಟಲ್ ಪಾವತಿಗೆ ಪ್ರತಿ ಕ್ಯಾರಟ್‌ಗೆ ರೂ. 500 ಹೆಚ್ಚುವರಿ ರಿಯಾಯಿತಿ ಪಡೆಯಬಹುದು. ಬಣ್ಣಗಳು, ಆಕಾರ ಮತ್ತು ಸ್ಪಷ್ಟತೆಯುಳ್ಳ ವಿಭಿನ್ನ ಶೈಲಿಯ ವಜ್ರಾಭರಣಗಳು ಲಭ್ಯವಿದೆ.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
ಅಪರಾಧ
Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.
ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.
ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.
ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
-
ಮಂಗಳೂರು20 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಬಿಗ್ ನ್ಯೂಸ್18 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಅಪರಾಧ18 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು19 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ23 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಅಪರಾಧ20 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
-
ಸಿನೆಮಾ24 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಬಿಗ್ ನ್ಯೂಸ್24 hours agoGreen card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ


















