ಆರೋಗ್ಯ
Arrecanut : ಅಡಿಕೆ ಹೊಸ ಬಳಕೆ ವಿಚಾರಗೋಷ್ಠಿ | ವಿದೇಶಗಳಲ್ಲಿ ಔಷಧವಾಗಿ ಬಳಕೆಯಾಗುವ ಅಡಿಕೆ ಇಲ್ಲಿ ಮಾತ್ರಾ ಕ್ಯಾನ್ಸರ್‌ಕಾರಕ ಏಕೆ ? – ಶ್ರೀಪಡ್ರೆ
ಪುತ್ತೂರು: ಅಡಿಕೆಯನ್ನು ವಿವಿಧ ದೇಶಗಳಲ್ಲಿ ಬಳಕೆ ಮಾಡಲಾಗುತ್ತದೆ. ತಿಂದು ಉಗುಳುವುದಕ್ಕೆ ಮಾತ್ರಾ ಅಡಿಕೆಯನ್ನು ಬಳಕೆ ಮಾಡುವುದಲ್ಲ, ಅಡಿಕೆಯನ್ನು ಔಷಧ ಸೇರಿದಂತೆ ವಿವಿಧ ರೂಪದಲ್ಲಿ ವಿದೇಶದಲ್ಲೂ ಬಳಕೆ ಮಾಡಲಾಗುತ್ತಿದೆ. ನಮ್ಮಲ್ಲಿ ಮಾತ್ರಾ ಅಡಿಕೆ ಹಾನಿಕಾರಕ ಎಂದು ಏಕೆ ಪರಿಗಣನೆಯಾಗಬೇಕು ?. ಅಡಿಕೆಯಿಂದಲೂ ಹಲವು ಉತ್ಪನ್ನಗಳ ತಯಾರಿ ಸಾಧ್ಯವಿದೆ. ಅಡಿಕೆ ಬಣ್ಣದದ ವ್ಯಾಪಕತೆಯೂ ದೊಡ್ಡದಿದೆ ಎಂದು ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ ಹೇಳಿದರು.
ಅವರು ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ಹಾಗೂ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಮತ್ತು ಅಡಿಕೆ ಪತ್ರಿಕೆ ಸಹಯೋಗದಲ್ಲಿ ಪುತ್ತೂರಿನ ಚುಂಚಶ್ರೀ ಸಭಾಭವನದಲ್ಲಿ ನಡೆದ ಅಡಿಕೆಯ ಹೊಸಬಳಕೆ ವಿಚಾರಗೋಷ್ಟಿಯಲ್ಲಿ ಮಾತನಾಡಿದರು.
ಅಡಿಕೆಯಲ್ಲಿ ಅನೇಕ ಉತ್ತಮ ಅಂಶಗಳು ಇವೆ. ತಿಂದು ಉಗುಳುವುದು ಮಾತ್ರಾ ಎಂಬ ಭಾವನೆ ಹಲವು ಕಡೆಗಳಲ್ಲಿ ಇದೆ. ಆದರೆ ಅಡಿಕೆಯ ಚೊಗರು, ಅಡಿಕೆಯ ಬಣ್ಣ, ಅಡಿಕೆಯ ಔಷಧಿಗಳು ಇಂದು ವ್ಯಾಪಕವಾಗಿ ಬೆಳೆಯಲು ಅವಕಾಶಗಳು ಇವೆ. ಈ ಹಿನ್ನೆಲೆಯಲ್ಲಿ ಪ್ರಯತ್ನಗಳು ಸಾಗಬೇಕಿದೆ ಎಂದರು.
ಅಡಿಕೆಯ ಬಣ್ಣದ ಬಗ್ಗೆ ಮಾತನಾಡಿದ ದೇಸೀ ಸಂಸ್ಥೆಯ ರುದ್ರಪ್ಪ, ಅಡಿಕೆಯ ಚೊಗರು ಇಂದು ಬೇಡಿಕೆಯ ವಸ್ತುವಾಗಿದೆ. ಅಡಿಕೆ ಬಣ್ಣದಿಂದ ತಯಾರಿಸಿದ ಬಟ್ಟೆಗಳಲ್ಲಿ ರಾಸಾಯನಿಕ ಬಳಕೆ ಬೇಕಿಲ್ಲ. ಅನೇಕರು ಈಗ ಇಂತಹ ಬಟ್ಟೆಗಳ ಮೇಲೆ ಆಸಕ್ತರಾಗಿದ್ದಾರೆ, ದೇಶದ ಹಲವು ಕಡೆಗಳಿಗೆ ಬೇಡಿಕೆ ಇದೆ ಎಂದರು.
ಏಳು ವರ್ಷಗಳಿಂದ ಮಧುಮೇಹಕ್ಕೆ ಅಡಿಕೆಯ ಔಷಧಿ ನೀಡುತ್ತಿರುವ ವಿಟ್ಲದ ಜೆಡ್ಡು ಗಣಪತಿ ಭಟ್ ಮಾತನಾಡಿ, ಅಡಿಕೆಯನ್ನು ಆಯುರ್ವೇದದ ಹಲವು ಕಡೆಗಳಲ್ಲಿ ಬಳಕೆ ಮಾಡಲಾಗುತ್ತದೆ. ಮಧುಮೇಹಕ್ಕೆ ಉತ್ತಮ ಹಾಗೂ ಪರಿಣಾಮಕಾರಿಯಾದ ಔಷಧಿಯಾಗಿದೆ ಎಂದರು.
ಕಳೆದ 6 ವರ್ಷಗಳಿಂದ ನೋವುಗಳಿಗೆ ಅಡಿಕೆಯಿಂದ ಔಷಧಿ ತಯಾರಿಸಿರುವ ಶಿವಮೊಗ್ಗದ ಅರುಣ್ ದೀಕ್ಷಿತ್ ಮಾತನಾಡಿ, ಬೇರೆ ಉದ್ಯೋಗದಲ್ಲಿದ್ದು ಕೃಷಿ ಸಂಬಂಧಿತ ಉದ್ಯಮ ಮಾಡುವ ವೇಳೆ ಅಡಿಕೆಯ ಉತ್ತಮ ಗುಣಗಳನ್ನು ಗಮನಿಸಿ ಔಷಧಿ ತಯಾರಿಸಿದ್ದೇನೆ. ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದರು.
ಉಡುಪಿಯ ಎಸ್‌ಡಿಎಂ ಆಯುರ್ವೇದ ಸಂಸ್ಥೆಯ ಡಾ.ಮುರಳೀಧರ್ ಬಲ್ಲಾಳ್ ಮಾತನಾಡಿ, ಅಡಿಕೆಯಿಂದ ತಯಾರಿಸಿರುವ ಎರಡು ಉತ್ಪನ್ನಗಳಿಂದ ಉತ್ತಮ ಫಲಿತಾಂಶ ದೊರೆತದಿದೆ. ಅಡಿಕೆಯನ್ನು ಆಯುರ್ವೇದದಲ್ಲಿ ಔಷಧಿಯಾಗಿ ಬಳಕೆ ಮಾಡಲಾಗುತ್ತಿದೆ. ಎಲೆ ಹಾಗೂ ಅಡಿಕೆ ಸೇವನೆ ಹಲವು ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ ಎಂದರು.
ಅಡಿಕೆ ಸಿಪ್ಪೆಯಿಂದ ಪ್ರಾಯೋಗಿಕವಾಗಿ ವೈನ್ ತಯಾರು ಮಾಡಿರುವ ಗಗನ ಮಾತನಾಡಿ ಅಡಿಕೆಯ ಎಲ್ಲಾ ವಸ್ತುಗಳೂ ಬಳಕೆ ಮಾಡುವಂತಹವು ಆಗಿದೆ. ಅಡಿಕೆ ಬೆಳೆಗಾರರ ಕುಟುಂಬದ ಸದಸ್ಯರಾಗಿ ವ್ಯರ್ಥವಾಗುವ ಅಡಿಕೆ ಸಿಪ್ಪೆ ಬಳಕೆ ಮಾಡಿ ಬದನಾಜೆ ಶಂಕರ ಭಟ್ ಅವರ ಮಾರ್ಗದರ್ಶನದಂತೆ ವೈನ್ ತಯಾರು ಮಾಡಿದ್ದೇನೆ ಇದರಲ್ಲಿ ಹೊಸ ಅವಕಾಶಗಳು ಇವೆ ಎಂದರು.
ಸಿಎಫ್‌ಟಿಆರ್ ನಿವೃತ್ತ ವಿಜ್ಞಾನಿ ಡಾ.ಅಪ್ಪಯ್ಯ ಮಾತನಾಡಿ ಅಡಿಕೆಯಿಂದ ವೈನ್ ತಯಾರು ಮಾಡಬಹುದು ಹಾಗೂ ಈ ವೈನ್ ಹಾಳಾಗದಂತೆ ದೀರ್ಘಕಾಲ ಉಳಿಯಬಲ್ಲುದು. ಅಡಿಕೆಯ ಟ್ಯಾನಿನ್ ವೈನ್ ಗುಣಮಟ್ಟವನ್ನು ಹೆಚ್ಚಿಸುತ್ತದೆ ಎಂದರು.

ಅಡಿಕೆಯಿಂದ ಹಲ್ಲುಜ್ಜುವ ಪುಡಿ ತಯಾರು ಮಾಡಿರುವ ವಿವೇಕ್ ಆಳ್ವ ಮಾತನಾಡಿ ಅಡಿಕೆಯನ್ನು ಬಳಸಿಕೊಂಡು ಹಲ್ಲಿನ ಪುಡಿ ತಯಾರು ಮಾಡಲು ಸಾಧ್ಯವಿದ್ದು, ಆರೋಗ್ಯದ ದೃಷ್ಟಿಯಿಂದ ಈ ಪುಡಿ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಿದೆ ಎಂದರು.
ಅಡಿಕೆ ಬಳಸಿ ಸೋಪು ಹಾಗೂ ಹಲ್ಲುಜ್ಜುವ ಪುಡಿ ತಯಾರು ಮಾಡಿರುವ ಬೆಳ್ತಂಗಡಿ ಗೇರುಕಟ್ಟೆಯ ರವಿರಾಜ್ ಮಾತನಾಡಿ ಅಡಿಕೆಯಿಂದ ಸಾಕಷ್ಟು ವಸ್ತುಗಳನ್ನು ತಯಾರು ಮಾಡಬಹುದು. ಆದರೆ ಮಾರುಕಟ್ಟೆ ನೆರವು ಹಾಗೂ ಅಡಿಕೆ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ ಎನ್ನುವುದರ ಕಡೆಗೂ ಅಡಿಕೆ ಬೆಳೆಗಾರರು ಗಮನಿಸಬೇಕು ಎಂದರು.
ಹಣ್ಣಡಿಕೆ ಸಿಪ್ಪೆ ಬಳಕೆ ಮಾಡಿ ಸೋಪು ತಯಾರು ಮಾಡುತ್ತಿರುವ ಮುರಳೀಧರ್ ಮಾತನಾಡಿ ಅಡಿಕೆಯನ್ನು ಬಳಸಿಕೊಂಡು ಅದರಿಂದ ರಸ ತೆಗೆದು ಅರ್ಕ ತಯಾರಿಸಿ ಸೋಪು ಬಳಕೆ ಮಾಡಲಾಗುತ್ತದೆ. ಉತ್ತಮ ಫಲಿತಾಂಶ, ಪ್ರತಿಕ್ರಿಯೆ ಇದೆ ಎಂದರು.
ಸಂಪನ್ಮೂಲ ವ್ಯಕ್ತಿಗಳ ಮಾಹಿತಿ ಬಳಿಕ ಸಹಕಾರಿ ಸಂಘಗಳು ಮತ್ತು ರೈತ ಉತ್ಪಾದಕ ಸಂಸ್ಥೆಗಳು ಅಡಿಕೆಯ ಉತ್ಪನ್ನಗಳ ತಯಾರಿ ಹಾಗೂ ಮಾರುಕಟ್ಟೆಯ ಅವಕಾಶಗಳ ಬಗ್ಗೆ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿ ದೇವಿಪ್ರಸಾದ್ ಪುಣಚ ಮಾತನಾಡಿದರು. ಬಳಿಕ ಸಂವಾದ ಕಾರ್ಯಕ್ರಮ ನಡೆಯಿತು.
ಕೃಷಿಕ, ಸಂಶೋಧಕ ಬದನಾಜೆ ಶಂಕರ ಭಟ್, ಫಾರ್ಮರ್ ಫಸ್ಟ್ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಶಾಸ್ತ್ರಿ ಪಡಾರು, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್ ಕಿನಿಲ, ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿ ದೇವಿಪ್ರಸಾದ್ ಪುಣಚ, ಸರಸ್ವತಿ ಸೌಹಾರ್ದ ಸಹಕಾರಿ ಸಂಘದ ಜನರಲ್ ಮೆನೇಜರ್ ವಸಂತ ಉಪಸ್ಥಿತರಿದ್ದರು.
ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಗೋಷ್ಟಿಯನ್ನು ನಿರ್ವಹಿಸಿದರು. ಇದೇ ಸಂದರ್ಭ ಅಡಿಕೆಯ ಬಣ್ಣದಿಂದ ತಯಾರಿಸಿದ ಬಟ್ಟೆಗಳು, ಅಡಿಕೆಯಿಂದ ತಯಾರಾದ ವಿವಿಧ ಉತ್ಪನ್ನಗಳು, ಅಡಿಕೆಯಿಂದ ತಯಾರಿಸಿದ ಹೋಳಿಗೆ, ಐಸ್‌ಕ್ರೀಂ ಪ್ರದರ್ಶನ ಹಾಗೂ ಮಾರಾಟ ನಡೆದವು.
ಆರೋಗ್ಯ
Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.
ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.
ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.
ಆರೋಗ್ಯ
HIV test-ಯುವಜನರಲ್ಲಿ ಹೆಚ್ಚುತ್ತಿದೆ HIV ಸೋಂಕು; ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ
ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ಬೆಂಗಳೂರು: ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ದೇಶದಲ್ಲೇ ಮೂರನೇ ಸ್ಥಾನ:
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ವರದಿ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಈ ಪೈಕಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗುಲಿರುವ ಅರಿವೇ ಇಲ್ಲದಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ 18 ರಿಂದ 35 ವರ್ಷದೊಳಗಿನವರಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ಕಳವಳ ವ್ಯಕ್ತಪಡಿಸಿದೆ.
ಕಾಲೇಜುಗಳಲ್ಲಿ ಆರೋಗ್ಯ ಶಿಬಿರ ಮತ್ತು ಜಾಗೃತಿ:
ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಆರೋಗ್ಯ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯು ಜಂಟಿಯಾಗಿ ‘ಸಂಯೋಜಿತ ಆರೋಗ್ಯ ಶಿಬಿರ’ಗಳನ್ನು (IHC) ಆಯೋಜಿಸುತ್ತಿವೆ.
ವಿಟಿಯು (VTU) ವ್ಯಾಪ್ತಿಯಲ್ಲೂ ತಪಾಸಣೆ: ರಾಜ್ಯದ ಎಲ್ಲ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ನಡೆಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚನೆ ನೀಡಿದೆ.
ವಿವಿಧ ಸ್ಪರ್ಧೆಗಳು: 2026ರ ಜುಲೈನಿಂದ 2027ರ ಫೆಬ್ರವರಿವರೆಗೆ ಕಾಲೇಜುಗಳಲ್ಲಿ ಬೀದಿ ನಾಟಕ, ರಸಪ್ರಶ್ನೆ ಮತ್ತು ತಜ್ಞರ ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಅಂಕಗಳ ಆಧಾರದ ಮೇಲೆ ಮಾರ್ಗಸೂಚಿಯನ್ನೂ ನೀಡಲಾಗಿದೆ.
ಮಾಹಿತಿಯ ಗೌಪ್ಯತೆಗೆ ಆದ್ಯತೆ (QR Code ಸೌಲಭ್ಯ):
ವಿದ್ಯಾರ್ಥಿಗಳು ತಮ್ಮ ಎಚ್‌ಐವಿ ಸ್ಥಿತಿಯನ್ನು ಅತ್ಯಂತ ಗೌಪ್ಯವಾಗಿ ತಿಳಿದುಕೊಳ್ಳಲು ಸರ್ಕಾರವು ವಿಶೇಷ ತಂತ್ರಜ್ಞಾನದ ಮೊರೆ ಹೋಗಿದೆ.
ಕ್ಯೂಆರ್ ಕೋಡ್ (QR Code): ಕಾಲೇಜುಗಳಲ್ಲಿ ಕಡ್ಡಾಯವಾಗಿ ಕ್ಯೂಆರ್ ಕೋಡ್ ಪ್ರದರ್ಶಿಸಲಾಗುತ್ತದೆ. ಇದನ್ನು ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ಸ್ವಯಂ-ಅಪಾಯ ಮೌಲ್ಯಮಾಪನ ಮಾಡಿಕೊಳ್ಳಬಹುದು.
ವೆಬ್‌ಸೈಟ್: ಗೌಪ್ಯ ಮಾರ್ಗದರ್ಶನಕ್ಕಾಗಿ www.breakfreeindia.org ಜಾಲತಾಣವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.
ಸರ್ಕಾರದ ಮುಂದಿರುವ ಸವಾಲು:
ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ಸರ್ಕಾರಕ್ಕೆ, ಈಗ ಎಚ್‌ಐವಿ ಹರಡದಂತೆ ತಡೆಯುವುದು ದೊಡ್ಡ ಸವಾಲಾಗಿದೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಕೆಎಸ್‌ಎಪಿಎಸ್ ತಿಳಿಸಿದೆ. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಈ ತಪಾಸಣಾ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ.
ಆರೋಗ್ಯ
Puttur-ಪುತ್ತೂರು: ಜು.9ರಂದು ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕ್ ನಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಪುತ್ತೂರು: ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರವು ಜು.9, ಗುರುವಾರದಂದು ಬೆಳಗ್ಗೆ 9-30ರಿಂದ ಮಧ್ಯಾಹ್ನ 12-30ರವರೆಗೆ ಪುತ್ತೂರಿನ ಕಲ್ಲಾರೆಯಲ್ಲಿರುವ ಡಾ. ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ನಡೆಯಲಿರುವುದು.
ಶಿಬಿರದಲ್ಲಿ ಸಿಗುವ ಸೌಲಭ್ಯಗಳು:
ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಈ ಕೆಳಗಿನ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡಲಾಗುವುದು.
ಉಚಿತ ಪರೀಕ್ಷೆಗಳು: ಥೈರಾಯಿಡ್ (TSH), ರಕ್ತದ ಸಕ್ಕರೆ ಅಂಶ (Sugar), HBA1C ಮತ್ತು ಮೂಳೆ ಸಾಂದ್ರತೆ ಪರೀಕ್ಷೆ (BMD Test).
-
ಬಿಗ್ ನ್ಯೂಸ್22 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಅಪರಾಧ22 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು23 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಶಿಕ್ಷಣ23 hours agoVivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
-
ನಿಧನ ವಾರ್ತೆ5 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಅಂತರ ರಾಜ್ಯ4 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ5 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ6 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















