ಬಿಗ್ ನ್ಯೂಸ್
ಅಭಿಮಾನಿ ದೇವರುಗಳಿಗೆ ಪುನೀತ್ ಪತ್ನಿಯ ಭಾವುಕ ಪತ್ರ – 20 ದಿನಗಳ ಬಳಿಕ ಮೌನ ಮುರಿದ ಅಶ್ವಿನಿ ಪುನೀತ್
ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿ 20 ದಿನ ಕಳೆದರೂ, ಅಪ್ಪು ಕುಟುಂಬಸ್ಥರು ಮಾತ್ರವಲ್ಲದೇ, ಇಡೀ ಕರ್ನಾಟಕ ಆ ಆಘಾತದಿಂದ ಚೇತರಿಸಿಕೊಂಡಿಲ್ಲ. ಪುನೀತ್ ಸಾವಿನ ಬಳಿಕ ಸಾರ್ವಜನಿಕವಾಗಿ ಮೌನಕ್ಕೆ ಶರಣಾಗಿದ್ದ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಇದೇ ಮೊದಲ ಬಾರಿಗೆ ತನ್ನ ಕಾಷ್ಠ ಮೌನವನ್ನು ಮುರಿದಿದ್ದಾರೆ. ಭಾವನಾತ್ಮಕ ಪತ್ರವೊಂದನ್ನು ಬರೆದು ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿ ಕೊಂಡಿದ್ದಾರೆ. ಈ ಮೂಲಕ ಅವರು ತಮ್ಮ ನೋವನ್ನು ತೋಡಿಕೊಂಡಿದ್ದು ಮಾತ್ರವಲ್ಲದೇ ಈ ವಿಷಮ ಗಳಿಗೆಯಲ್ಲಿ ಪುನೀತ್ ಅಭಿಮಾನಿಗಳು ತೋರಿದ ಸಂಯಮಕ್ಕೂ ಹೃದಯಾಂತರಾಳದಿಂದ ಧನ್ಯವಾದ ಅರ್ಪಿಸಿದ್ದಾರೆ
ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪುನೀತ್ ರಾಜಕುಮಾರ್ ಅವರಿಗೆ ಶ್ರದ್ದಾಂಜಲಿ ಆರ್ಪಿಸುವ ಪ್ರಯುಕ್ತ ಪುನೀತ್ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದಕ್ಕೆ ದೊಡ್ಮನೆಯಿಂದ ಶಿವರಾಜ್ಕುಮಾರ್, ರಾಘವೇಂದ್ರ ರಾಜ್‌ಕುಮಾರ್ , ಆಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಅವರ ಕುಟುಂಬದವರು ಆಗಮಿಸಿದ್ದರು ಆಶ್ವಿನಿಯವರು ಕಣ್ಣೀರು ಹಾಕಿದರು. ಅಲ್ಲದೆ, ಅರ್ಧದಲ್ಲೆ ಕಾರ್ಯಕ್ರಮದಿಂದ ಹೊರ ಹೋಗಿದ್ದಾರೆ
ಅದಾದ ಬಳಿಕ ಸ್ವಲ್ಪ ಹೊತ್ತಿನಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದು ಶೇರ್ ಮಾಡಿಕೊಂಡಿದ್ದಾರೆ. ಅದರಲ್ಲಿ ಪುನೀತ್ ಅದರ್ಶಗಳನ್ನು ಮಾದರಿಯಾಗಿರಿಸಿಕೊಂಡು ಮಾಡುತ್ತಿರುವ ಸತ್ಕಾರ್ಯಗಳಿಗೆ ಮೆಚ್ಚುಗೆ ಸೂಚಿಸಿದ್ದೂ, ಶೋಕವನ್ನು ಹಂಚಿಕೊಂಡ ಅಭಿಮಾನಿ ದೇವರುಗಳಿಗೆ ಹೃತ್ಪೂರ್ವಕ ಧನ್ಯವಾದ ಆರ್ಪಿಸಿದ್ದಾರೆ.

‘ಪುನೀತ್ ರಾಜ್‌ಕುಮಾರ್ ಅವರ ಅಕಾಲಿಕ ಅಗಲಿಕೆ ನಮಗಷ್ಟೇ ಅಲ್ಲದೇ ಇಡೀ ರಾಜ್ಯಕ್ಕೆ ಆಘಾತಕಾರಿ ವಿಷಯ. ನಿಷ್ಕಲ್ಮಶ ಪ್ರೀತಿಯಿಂದ, ಅಕ್ಕರೆಯ ಅಭಿಮಾನದಿಂದ ಅವರನ್ನು ಪವರ್ ಸ್ಟಾರ್ ಆಗಿ ರೂಪಿಸಿದ್ದ ನಿಮ್ಮೆಲ್ಲರಿಗೆ ಅವರ ವಿದಾಯ ತಂದಿತ್ತ ದುಃಖ ಎಷ್ಟಿರಬಹುದೆಂದು ಊಹಿಸಲು ಸಾಧ್ಯವಿಲ್ಲ. ಆದರೂ ಇಂತಹ ಸಂದರ್ಭದಲ್ಲಿ ನೀವುಗಳು ಎಲ್ಲಿಯೂ ಸಂಯಮ ಕಳೆದುಕೊಳ್ಳದೇ ಅಹಿತಕರ ಘಟನೆಗಳು ನಡೆಯಲು ಬಿಡದೇ ಅವರಿಗೊಂದು ಅತ್ಯಂತ ಗೌರವಯುತ ಬೀಳ್ಕೊಡುಗೆ ನೀಡುವಲ್ಲಿ ಸಹಕರಿಸಿದ್ದಿರಿ’ ಎಂದು ಪತ್ರ ಆರಂಭಿಸಿದ್ದಾರೆ
‘ಸಿನಿಮಾ ಪ್ರೇಮಿಗಳಷ್ಟೇ ಅಲ್ಲದೇ, ವಯೋಮಾನದ ಮಿತಿಯಿಲ್ಲದೇ, ದೇಶವಿದೇಶಗಳಿಂದ ಕೋಟ್ಯಂತರ ಜನರು ಸಂತಾಪ ಸೂಚಿಸುವುದನ್ನು ಕಂಡಾಗ ಮನಸ್ಸು ಭಾರವಾಗುತ್ತದೆ. ನಿಮ್ಮ ಪ್ರೀತಿಯ ಅಪ್ಪು ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯುತ್ತಾ ಸಾವಿರಾರು ಸಂಖ್ಯೆಯಲ್ಲಿ ನೇತ್ರದಾನಕ್ಕೆ ನೋಂದಣಿ ಮಾಡಿಸುವುದನ್ನು ನೋಡಿದಾಗ ಕಣ್ಣುಂಬಿ ಬರುತ್ತದೆ. ಅವರನ್ನು ಆದರ್ಶವಾಗಿಟ್ಟುಕೊಂಡು ನೀವುಗಳು ಮಾಡುವ ಸತ್ಕಾರ್ಯಗಳಲ್ಲಿ, ಅವರ ನೆನಪುಗಳು ನಿಮ್ಮಲ್ಲಿ ಮೂಡಿಸುವ ಉತ್ಸಾಹದಲ್ಲಿ ಅವರೆಂದಿಗೂ ಜೀವಂತವಾಗಿರುತ್ತಾರೆ. ವಿಶ್ವದಾದ್ಯಂತ ನಮ್ಮ ಶೋಕವನ್ನು ಹಂಚಿಕೊಂಡು ಬೆಂಬಲಕ್ಕೆ ನಿಂತ ಎಲ್ಲಾ ಸಹೃದಯಿ ಅಭಿಮಾನಿ ದೇವರುಗಳು ಮತ್ತು ಸಾರ್ವಜನಿಕರಿಗೆ ನಮ್ಮ ಇಡೀ ಕುಟುಂಬದ ಪರವಾಗಿ ಹತ್ತೂರ್ವಕ ಧನ್ಯವಾದಗಳು’ ಎಂದು ಪತ್ರ ಪೂರ್ಣಗೊಳಿಸಿದ್ದಾರೆ ಅಶ್ವಿನಿ ಅವರು.

ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಅಂತರ ರಾಜ್ಯ
Jantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದೊಳಗೆ ಪ್ರವೇಶಿಸಿದ ಪೊಲೀಸರು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಂತರ್ ಮಂತರ್ ನಲ್ಲಿ ಕ್ಷಣ ಕ್ಷಣ ಪ್ರತಿಭಟಕಾರರ ಸಂಖ್ಯೆ ಭಾರಿ ಏರುತ್ತಿದೆ.
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್ ಗೆ ಆಗಮಿಸಿದ ನೂರಾರು ಸುಪ್ರೀಂ ಕೋರ್ಟಿನ ವಕೀಲರನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ.
ನೋಯ್ಡಾ–ದೆಹಲಿ ಗಡಿ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರನ್ನು ಬಸ್‌ಗಳಲ್ಲಿ ಕರೆದೊಯ್ದು ವಶಕ್ಕೆ ಪಡೆಯಲಾಗಿದೆ. ಇನ್ನೂ ಟಯರ್ ಪಂಚರ್ ಆಗುವ ಕಬ್ಬಿಣದ ಬೇಲಿಯನ್ನು ಪೊಲೀಸರು ರಸ್ತೆಗಳಲ್ಲಿ ಇಟ್ಟಿರುವ ಪ್ರತಿಭಟನಕಾರರು ಆರೋಪಿಸಿದ್ದಾರೆ. ಮತ್ತೂ ನಿರ್ದಿಷ್ಟ ಸ್ಥಳಗಳಲ್ಲಿ ಮೊಬೈಲ್ ನೆಟ್‌ವರ್ಕ್ ಗಳನ್ನು ಪೊಲೀಸರ ನಿರ್ದೇಶನದ ಮೇರೆಗೆ ಟೆಲಿಕಾಂ ಕಂಪೆನಿಗಳು ನಿಷ್ಕ್ರಿಯಗೊಳಿಸಿರುವ ಬಗ್ಗೆಯೂ ಆರೋಪಗಳು ವ್ಯಕ್ತವಾಗಿದೆ.
ಭದ್ರತಾ ವ್ಯವಸ್ಥೆಯ ಭಾಗವಾಗಿ 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 200ಕ್ಕೂ ಹೆಚ್ಚು ಕಂಪನಿಗಳನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ಕೇಂದ್ರ ದೆಹಲಿ, ಕನ್ನಾಟ್ ಪ್ಲೇಸ್ ಹಾಗೂ ನಗರದ ಪ್ರವೇಶ ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ.
ಕನ್ನಾಟ್ ಪ್ಲೇಸ್ ಪ್ರದೇಶವನ್ನು 20 ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಲಯದ ಭದ್ರತಾ ಜವಾಬ್ದಾರಿಯನ್ನು ಡಿಸಿಪಿ ಅಥವಾ ಐಪಿಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ವಿವಿಧೆಡೆ ಪಥಸಂಚಲನ ನಡೆಸಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ.
ಸಂದೇಹಾಸ್ಪದ ವಾಹನಗಳನ್ನು ತಡೆದು ಪರಿಶೀಲಿಸಲು ತುರ್ತು ಬಳಕೆಯ ಸ್ಪೈಕ್ ಸ್ಟ್ರಿಪ್‌ಗಳನ್ನು ಸಿದ್ಧವಾಗಿಡಲಾಗಿದೆ. ಭದ್ರತಾ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಾನ್‌ಸ್ಟೆಬಲ್‌ಗಳು ಹಾಗೂ ಇನ್‌ಸ್ಪೆಕ್ಟರ್‌ಗಳಂತಹ ಕೆಳಹಂತದ ಪೊಲೀಸ್ ಸಿಬ್ಬಂದಿಗೂ ಬಾಡಿ ಕ್ಯಾಮೆರಾಗಳನ್ನು ಒದಗಿಸಲಾಗಿದೆ.
ಸಾರ್ವಜನಿಕರ ಸಾಮಾನ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ, ಅನುಮತಿಯಿಲ್ಲದ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗುವವರನ್ನು ತಕ್ಷಣ ವಶಕ್ಕೆ ಪಡೆಯಲಾಗುವುದು ಹಾಗೂ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
-
ನಿಧನ ವಾರ್ತೆ7 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು5 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ7 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ6 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ರಾಜ್ಯ7 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
Uncategorized8 hours agoCJP protest-ಇಂದು CJP ಪ್ರತಿಭಟನೆ : ದೆಹಲಿಗೆ ಬರಬೇಕಾಗಿದ್ದ 250 ರೈಲು ರದ್ದು, ಹಲವು ರೈಲಿನ ವೇಳಾಪಟ್ಟಿ ಬದಲಾವಣೆ : ಮೆಟ್ರೋ ಸಂಚಾರ ಸ್ಥಗಿತ – ಇಂಟರ್ ನೆಟ್ ಬಂದ್..! ‘ಹೆದರಿದ್ರಾ ಮೋದಿಜೀ..?’ ಎಂದ CJP
-
ಅಂತರ ರಾಜ್ಯ8 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?
-
ಅಂತರ ರಾಜ್ಯ6 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ


















