ಸುಳ್ಯ
Bellare | ಬೆಳ್ಳಾರೆ ಉದ್ಯಮಿ ಕಾಮಧೇನು ನವೀನ್ ಅಪಹರಣ ಪ್ರಕರಣ: ಗಂಡನ ತಾಯಿ ಮೇಲೆ ಚಿನ್ನಾಭರಣ ಕಳ್ಳತನ ಪ್ರಕರಣ ದಾಖಲಿಸಿದ ದಿವ್ಯಪ್ರಭಾ ಚಿಲ್ತಡ್ಕ ಪುತ್ರಿ ಸ್ಪಂದನ
ಬೆಳ್ಳಾರೆ : ಬೆಳ್ಳಾರೆ (Bellare) ಚಿನ್ನಾಭರಣ ಉದ್ಯಮಿ ನವೀನ್ ಕಾಮಧೇನು ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ತಾಯಿ ಮೇಲೆ ಚಿನ್ನಾಭರಣ ಕಳ್ಳತನ ಪ್ರಕರಣ ದಾಖಲಾಗಿದೆ.
ಕಾಮಧೇನು ಮಾಧವ ಗೌಡ ಬೆಳ್ಳಾರೆ ಅವರ ಸೊಸೆ ಕಾಂಗ್ರೇಸ್ ನಾಯಕಿ ದಿವ್ಯಪ್ರಭಾ ಗೌಡ ಚಿಲ್ತಡ್ಕ ಅವರ ಪತ್ರಿ ಸ್ಪಂದನ ನವೀನ್ ಅವರು ಬೆಳ್ಳಾರೆ ಕಾವಿನ ಮೂಲೆಯಲ್ಲಿ ಮನೆಯಿಂದ ಚಿನ್ನಾಭರಣ ಕಳವು ಆಗಿರುವುದಾಗಿ ಪೊಲೀಸ್ ದೂರು ನೀಡಿದ್ದಾರೆ.
ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ ನವೀನ್ ಪತ್ನಿ ಸ್ಪಂದನ ತನ್ನ ಗಂಡ ಮದ್ಯವ್ಯಸನಿ ಎಂದು ಉಲ್ಲೇಖಿಸಿದ್ದಾರೆ.ಇದರಿಂದಾಗಿ ವೈವಾಹಿಕ ಜೀವನದಲ್ಲಿ ನೊಂದು ಬೇಸತ್ತಿದ್ದೇನೆ. ಕಳೆದ ಕೆಲವು ತಿಂಗಳುಗಳಿಂದ ಇವರ ಮದ್ಯವ್ಯಸನದಿಂದ ಸಹಿಸಲು ಅಸಾಧ್ಯವಾದ ಹಂತಕ್ಕೆ ತಲುಪಿದ್ದೇನೆ. ನವೀನ್ ತಂದೆ ಮಾಧವ ಗೌಡರವರು ಮದ್ಯವ್ಯಸನ ಮುಕ್ತ ಚಿಕಿತ್ಸೆಗಾಗಿ ಬೆಂಗಳೂರಿನ ಕಡಂಬಸ್ ಆಸ್ಪತ್ರೆಗೆ ದಾಖಲಿಸಲು ತೀರ್ಮಾನಿಸಿದ್ದರು. ಅದರಂತೆ ಇವರನ್ನು ಕಡಂಬಸ್ ಆಸ್ಪತ್ರೆಗೂ ದಾಖಲು ಮಾಡಲಾಗಿತ್ತು.
ಮೊನ್ನೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ , ನೀರಜಾಕ್ಷಿಯವರು ಮಾಧವ ಗೌಡ, ದಿವ್ಯಪ್ರಭಾ, ಪರಶುರಾಮ, ಸ್ಪಂದನ, ಸ್ಪರ್ಶಿತ್ ಹಾಗೂ ನವೀನ ರೈ ಎಂಬವರ ಮೇಲೆ ಪೊಲೀಸ್ ದೂರು ಕೊಟ್ಟಿದ್ದು ಅದರಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನಾನು ತವರು ಮನೆಯಿಂದ ಬಂದು ಮನೆಯೊಳಗೆ ಹೋಗಿ ನೋಡಿದಾಗ ಮನೆಯಿಂದ ಲಾಕರ್ ಬಾಗಿಲು ತೆರೆದಿದ್ದು ಲಾಕರ್ ನಲ್ಲಿಟ್ಟಿದ್ದ ಚಿನ್ನಾಭರಣಗಳು ಕಳವಾಗಿದ್ದವು. ವಜ್ರದ ಹಾರ,ನೆಕ್ಲಸ್,ಉಂಗುರ, ಕಿವಿಯ ಓಲೆಗಳು, ಕರಿಮಣಿ ತಾಳಿ ಚೈನು ಹಾಗೂ ಇತರ ಚಿನ್ನಾಭರಣಗಳು ಮತ್ತು ರಶೀದಿಗಳು ಕಳವಾಗಿದೆ.
ಈ ಚಿನ್ನಾಭರಣಗಳನ್ನು ತನ್ನ ಅತ್ತೆ ಅಂದರೆ ಮಾದವ ಗೌಡರ ಪತ್ನಿ ನೀರಾಜಾಕ್ಷಿ, ಚಿಕ್ಕ ಅತ್ತೆ ತಾರಾ ಕುಮಾರಿ, ಭಾವಾ ವಿನ್ಯಾಸ್, ಅವರ ಪತ್ನಿ ಪ್ರಜ್ಞಾ ಎಂಬವರು ಕಳ್ಳತನ ಮಾಡಿರುವುದಾಗಿ ಬಲವಾದ ಸಂಶಯವಿದ್ದು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಪಂದನಾ ದೂರಿನಲ್ಲಿ ತಿಳಿಸಿದ್ದಾರೆ.
ದೂರಿನಲ್ಲಿ ಹೆಸರು ಉಲ್ಲೇಖವಾದ ನವೀನ್ ರೈ ಮಾಧ್ಯಮಗಳಿಗೆ ಸ್ಪಷ್ಟೀಕರಣ ನೀಡಿ ನನಗೂ ಆ ಕುಟುಂಬದ ಗಲಾಟೆಗೂ ಸಂಬಂಧವಿಲ್ಲ ಎಂದಿದ್ದಾರೆ.
ತಾರಾಕುಮಾರಿ, ವಿನ್ಯಾಸ್ ಪ್ರಥ್ವಿರವರ ಮೇಲೆ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ.
ಬೆಳ್ಳಾರೆಯ ಕಾಮಧೇನು ಲಾಡ್ಜ್ ನಲ್ಲಿ ಪೊಲೀಸ್ ಅಧಿಕಾರಿ ಜೊತೆ ತನ್ನ ಪತ್ನಿ ಇದ್ದ ನಂತರ ಪತ್ನಿಯನ್ನು ಮನೆಗೆ ಸೇರಿಸಿರಲಿಲ್ಲ. ಪತ್ನಿ ಹಾಗೂ ಅವರ ತಾಯಿ ದಿವ್ಯಪ್ರಭಾ ಚಿಲ್ತಡ್ಕ ನನ್ನನ್ನು ಮತ್ತು ಬರುವ ಔಷಧಿ ಕೊಟ್ಟು ಆಂಬ್ಯುಲೆನ್ಸ್ ನಲ್ಲಿ ಅಪಹರಣ ಮಾಡಿದ್ದರು ಎಂದು ನವೀನ್ ದೂರು ದಾಖಲಿಸಿದ್ದರು.
ದೂರಿನಲ್ಲಿ ಹೆಸರು ಉಲ್ಲೇಖವಾದ ನವೀನ್ ರೈ ಮಾಧ್ಯಮಗಳಿಗೆ ಸ್ಪಷ್ಟೀಕರಣ ನೀಡಿ ನನಗೂ ಆ ಕುಟುಂಬದ ಗಲಾಟೆಗೂ ಸಂಬಂಧವಿಲ್ಲ ಎಂದಿದ್ದಾರೆ.
ಸುಳ್ಯ
Sevaratna-ಕಲ್ಪವೃಕ್ಷದ ಕಾಯಕಯೋಗಿಗೆ ‘ಸೇವಾರತ್ನ’ ಗೌರವ; 20 ವರ್ಷಗಳ ನಿರಂತರ ಕಾಯಕಕ್ಕೆ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ
ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಸುಳ್ಯ: ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಆಕ್ಸಿಸ್ ಬ್ಯಾಂಕ್ ಹಾಗೂ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ವತಿಯಿಂದ ಕೊಡಮಾಡುವ ಜಿಲ್ಲಾಮಟ್ಟದ ‘ಸೇವಾರತ್ನ ಪ್ರಶಸ್ತಿ’ಗೆ ಅಚ್ಚುತ ನಾಯಕ್ ಕಿಲಂಗೋಡಿಯವರನ್ನು ಆಯ್ಕೆ ಮಾಡಲಾಗಿದೆ.
ಒಕ್ಟೊಬರ್ 9ರಂದು ಸಂಜೆ 4.30ಕ್ಕೆ ಮoಗಳೂರಿನಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ತೆಂಗಿನ ಮರವೇರುವುದು ಸುಲಭದ ಕೆಲಸವಲ್ಲ. ಮರದ ಎತ್ತರ, ಗಾಳಿಯ ವೇಗ, ಹವಾಮಾನ ವೈಪರೀತ್ಯ ಸೇರಿದಂತೆ ಹಲವು ಸವಾಲುಗಳ ನಡುವೆಯೂ ಮರದ ತುದಿಗೆ ಏರಿ ತೆಂಗಿನಕಾಯಿಗಳನ್ನು ಕೊಯ್ದು ಕೆಳಗಿಳಿಸುವ ಈ ಕಾಯಕಕ್ಕೆ ಧೈರ್ಯ, ದೈಹಿಕ ಸಾಮರ್ಥ್ಯ, ಕೌಶಲ್ಯ ಹಾಗೂ ಅಪಾರ ಅನುಭವದ ಅಗತ್ಯವಿದೆ. ಇಂತಹ ಅಪಾಯಭರಿತ ಕಾಯಕವನ್ನು ಅಚ್ಚುತ ನಾಯಕ್ ಅವರು ಕಳೆದ 20 ವರ್ಷಗಳಿಂದ ಅತ್ಯಂತ ಪ್ರಾಮಾಣಿಕತೆ ಮತ್ತು ಕಾಯಕನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದಾರೆ.
ಕಳಂಜ ಗ್ರಾಮಕ್ಕೆ ಮಾತ್ರ ಸೀಮಿತವಾಗದೆ ಸುಳ್ಯ ತಾಲೂಕು ಹಾಗೂ ಹೊರ ತಾಲೂಕುಗಳ ವಿವಿಧ ಪ್ರದೇಶಗಳಿಗೆ ತೆರಳಿ, ರೈತರು ಮತ್ತು ಸಾರ್ವಜನಿಕರ ತೆಂಗಿನ ಮರಗಳಿಂದ ತೆಂಗಿನಕಾಯಿಗಳನ್ನು ಕೊಯ್ದು ತೆಗೆದು ಕೊಡುವ ಸೇವೆಯನ್ನು ಅವರು ನಿರಂತರವಾಗಿ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅತ್ಯಗತ್ಯವಾಗಿರುವ ಈ ಸೇವೆಯನ್ನು ಯಾವುದೇ ಪ್ರಚಾರದ ನಿರೀಕ್ಷೆಯಿಲ್ಲದೆ ಮಾಡುತ್ತಿರುವುದು ಅವರ ಕಾಯಕದ ವಿಶೇಷತೆಯಾಗಿದೆ.
ಮೌನ ಸಾಧಕರ ಸೇವೆಗೆ ಮತ್ತೊಂದು ಗೌರವ
ಅಚ್ಚುತ ನಾಯಕ್ ಅವರ ಸೇವೆಯನ್ನು ಈಗಾಗಲೇ ಹಲವು ಸಂಸ್ಥೆಗಳು ಗುರುತಿಸಿವೆ. ರೋಟರಿ ಕ್ಲಬ್ ಬೆಳ್ಳಾರೆ ಸಂಸ್ಥೆಯು 2018–19ನೇ ಸಾಲಿನಲ್ಲಿ ಅವರ ಸೇವೆಯನ್ನು ಗುರುತಿಸಿ ಗೌರವಿಸಿತ್ತು.
ಅದೇ ರೀತಿ ಜೆಸಿಐ ಬೆಳ್ಳಾರೆ ಸಂಸ್ಥೆಯು 2025ರಲ್ಲಿ ಅವರ ನಿರಂತರ ಹಾಗೂ ಶ್ರಮದಾಯಕ ಸೇವೆಯನ್ನು ಗುರುತಿಸಿ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿ ನೀಡಿ ಗೌರವಿಸಿತ್ತು.
ಯಾವುದೇ ಪ್ರಚಾರದ ಹಿಂದೆ ಹೋಗದೆ, ತನ್ನ ಶ್ರಮವನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಪ್ರತಿದಿನವೂ ದುಡಿಯುತ್ತಿರುವ ಅಚ್ಚುತ ನಾಯಕ್ ಅವರು ನಿಜವಾದ ಮೌನ ಕಾಯಕಯೋಗಿ. ತೆಂಗಿನ ಮರದ ತುದಿಯಲ್ಲಿ ನಿಂತು ಅವರು ಮಾಡುವ ಪ್ರತಿಯೊಂದು ಕೆಲಸದ ಹಿಂದೆಯೂ ಧೈರ್ಯ, ಪರಿಶ್ರಮ, ಕೌಶಲ್ಯ ಮತ್ತು ಕುಟುಂಬದ ಬದುಕಿಗಾಗಿ ನಡೆಸುವ ಪ್ರಾಮಾಣಿಕ ಹೋರಾಟವಿದೆ.
ಕಲ್ಪವೃಕ್ಷದೊಂದಿಗೆ ಎರಡು ದಶಕಗಳ ಕಾಲ ನಂಟು ಬೆಳೆಸಿಕೊಂಡಿರುವ ಅಚ್ಚುತ ನಾಯಕ್ ಅವರ ಕಾಯಕವು ಗ್ರಾಮೀಣ ಶ್ರಮಜೀವಿಗಳ ಬದುಕಿನ ಪ್ರತೀಕವಾಗಿದೆ. ರೈತರ ಅಗತ್ಯಕ್ಕೆ ಸ್ಪಂದಿಸುತ್ತಾ, ಅಪಾಯವನ್ನು ಲೆಕ್ಕಿಸದೆ ತಮ್ಮ ವೃತ್ತಿಯನ್ನು ಮುಂದುವರಿಸಿಕೊಂಡು ಬಂದಿರುವ ಅವರ ಸೇವೆಗೆ ‘ಸೇವಾರತ್ನ’ ಪ್ರಶಸ್ತಿ ಮತ್ತೊಂದು ಸಾರ್ಥಕ ಗೌರವವಾಗಿದೆ.
ಕಾಯಕಕ್ಕೆ ಸಂದ ಸಾರ್ಥಕ ಗೌರವ
ಕಳೆದ 20 ವರ್ಷಗಳಿಂದ ತೆಂಗಿನ ಮರದ ತುದಿಯಲ್ಲಿ ಬೆವರು ಸುರಿಸಿ, ರೈತರು ಮತ್ತು ಸಾರ್ವಜನಿಕರಿಗೆ ಅಗತ್ಯವಾದ ಸೇವೆಯನ್ನು ಸಲ್ಲಿಸುತ್ತಿರುವ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ದೊರೆಯುತ್ತಿರುವ ‘ಸೇವಾರತ್ನ’ ಪ್ರಶಸ್ತಿ, ಅವರ ಕಾಯಕನಿಷ್ಠೆಗೆ ಸಂದ ಗೌರವ ಮಾತ್ರವಲ್ಲದೆ, ಗ್ರಾಮೀಣ ಶ್ರಮಜೀವಿಗಳ ಪರಿಶ್ರಮಕ್ಕೂ ಸಂದ ಗೌರವವಾಗಿದೆ.
ಕಲ್ಪವೃಕ್ಷದ ಕಾಯಕಯೋಗಿಯ ಎರಡು ದಶಕಗಳ ನಿರಂತರ ಸೇವೆಗೆ ಇದೀಗ ‘ಸೇವಾರತ್ನ’ದ ಗೌರವದ ಕಿರೀಟ ದೊರೆತಿದೆ.
ಸುಳ್ಯ
ಸುಳ್ಯ :ಗ್ಯಾರೇಜ್‌ನಲ್ಲಿ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಎಂದು ಗುರುತಿಸಲಾಗಿದೆ.
ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕದಲ್ಲಿ ಆ.26ರ ರಾತ್ರಿ ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.120/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 326(g) ಅಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಸುಳ್ಯ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಸುಳ್ಯ
Dr. Deviprasad Kanattur-ಪಂಜ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮೇಲೆ ಅವ್ಯವಹಾರದ ಆರೋಪ; ಸತ್ಯ ಪ್ರಮಾಣಕ್ಕೆ ಡಾ. ದೇವಿಪ್ರಸಾದ್ ಕಾನತ್ತೂರ್ ನಿರ್ಧಾರ
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಆಗಸ್ಟ್ 31 ರಂದು ಸೋಮವಾರ ಪೂರ್ವಾಹ್ನ ಶ್ರೀ ದೇವರು ಜಳಕ ಮಾಡುವ ಪವಿತ್ರ ನಾಗತೀರ್ಥ ನದಿಯಲ್ಲಿ ಸ್ನಾನಮಾಡಿ ದೇಗುಲದ ನಡೆಯಲ್ಲಿ ಬೆಳಗ್ಗಿನ ಮಹಾಪೂಜೆಯ ನಂತರ ನಾನು ಯಾವ ಅವ್ಯವಹಾರ ಮಾಡಿಲ್ಲ ಎಂದು ಸತ್ಯ ಪ್ರಮಾಣ ಮಾಡುತ್ತೇನೆ. ನನ್ನ ಮೇಲೆ ಸುಳ್ಳು ಆರೋಪ ಮಾಡಿದವರಿಗೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರು ಹಾಗೂ ಪರಿವಾರ ದೈವಗಳು ಉತ್ತರ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಯಾರು ನನ್ನ ಮೇಲೆ ಆರೋಪ ಮಾಡಿದ್ದಾರೆ. ಅವರೂ ಪ್ರಮಾಣಕ್ಕೆ ಬರಲಿ ಎಂದು ಅವರು ತಿಳಿಸಿದ್ದಾರೆ.
-
Uncategorized15 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized18 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized17 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized17 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized19 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized17 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |
-
ಸ್ಥಳೀಯ2 hours agoSharavuru-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ
-
ಬಿಗ್ ನ್ಯೂಸ್1 hour agoPuttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ


















