Connect with us

ಬಿಗ್ ನ್ಯೂಸ್

ಸಹಕಾರಿ ದುರೀಣ ರಾಜೇಂದ್ರ ಕುಮಾರ್ ಸರ್ವಧರ್ಮಗಳ ಪಕ್ಷಾತೀತ ಅಭ್ಯರ್ಥಿ – ಚುನಾವಣಾ ಕಛೇರಿ ಉಧ್ಘಾಟನೆಯ ವೇಳೆ ಬೆಂಬಲದ ಮಹಾಪೂರ

Published

on



Ad Widget

Ad Widget

Ad Widget

Ad Widget

ಮಂಗಳೂರು: ಸ್ಥಳೀಯಾಡಳಿತ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ದಕ್ಷಿಣ ಕನ್ನಡ ದ್ವಿ ಸದಸ್ಯ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್ ರಾಜೇಂದ್ರ ಕುಮಾರ್ ಅವರ ಚುನಾವಣಾ ಕಛೇರಿ ಉದ್ಘಾಟನೆ ನ. 16 ರಂದು ಕೊಡಿಯಾಲ್ ಬೈಲ್ ನ ಇನ್ಲ್ಯಾಂಡ್ ಓರ್ನಟ್ ಸಂಕೀರ್ಣದಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ಕಛೇರಿ ಉಧ್ಘಾಟನೆ ಬಳಿಕ ಸಭಾ ಕಾರ್ಯಕ್ರಮವನ್ನು  ಧರ್ಮ ಗುರುಗಳಾದ ಫಾ. ಸಂತೋಷ್ ಕಾಮತ್, ಮಹಮ್ಮದ್ ಕಾಮಿಲ್ ಸಖಾಫಿ, ಪುರೋಹಿತ ರಮೇಶ್ ಭಟ್ ಉದ್ಘಾಟಿಸಿ ಆಶೀರ್ವಚನ ನೀಡಿದರು.

Ad Widget

Ad Widget

Ad Widget alt="Ad Widget"/>

Ad Widget

 ರಾಜೇಂದ್ರ ಕುಮಾರ್ ಸರ್ವಧರ್ಮಗಳ ಪಕ್ಷಾತೀತ ಅಭ್ಯರ್ಥಿ. ಸಮಾಜ ಸೇವಕರಿಗೆ ಯಾವುದೇ ಪಕ್ಷದ ಅಗತ್ಯವಿಲ್ಲ. ಜನ ಸಾಮನ್ಯರ ಸಹಕಾರವೇ ಶಕ್ತಿ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರು ಹೇಳಿದರು

Ad Widget

Ad Widget <> Ad Widget

ಸಮಾಜದಲ್ಲಿ ಅಶಕ್ತರು, ಬಡವರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಡಾ| ಎಂ.ಎನ್‌. ಆರ್‌. ಅವರು ಒಕ್ಕೂಟದ ಸಮಾಜ ಸೇವಾ ಕಾರ್ಯಗಳಿಗೆ ಸದಾ ನೆರವು ನೀಡುತ್ತ ಬಂದಿದ್ದಾರೆ  ಎಂದು ಅವರು ಹೇಳಿದರು.



Ad Widget

“ವಿಧಾನ ಪರಿಷತ್‌ನಲ್ಲಿ ಸಹಕಾರಿ ಕ್ಷೇತ್ರಕ್ಕೆ ಒಂದು ಅವಕಾಶವನ್ನು ನೀಡುವ ನಿಟ್ಟಿನಲ್ಲಿ ನನ್ನನ್ನು ಬೆಂಬಲಿಸಿ ಎಂದು ಮತದಾರರಲ್ಲಿ, ಎಲ್ಲ ರಾಜಕೀಯ ಪಕ್ಷಗಳಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ’ ಎಂದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸಹಕಾರಿ ನೇತಾರ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಹೇಳಿದ್ದಾರೆ.

Ad Widget

Ad Widget

ಸಹಕಾರಿ ಕ್ಷೇತ್ರದ ಮೂಲಕ ಗ್ರಾಮೀಣ ಜನರ ಅಭಿವೃದ್ಧಿಗಾಗಿ ಶ್ರಮಿಸಿದ್ದೇನೆ. ನವೋದಯ ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಸ್ವಾವಲಂಬಿ, ಸ್ವಾಭಿಮಾನಿ ಬದುಕು ಕಟ್ಟಿ ಕೊಡುವ ಕಾರ್ಯ ಆಗಿದೆ. ಮುಂದಿನ ವಿಧಾನ ಪರಿಷತ್‌ ಚುನಾವಣೆಯಲ್ಲೂ ಇದೇ ರೀತಿ ನನ್ನನ್ನು ಬೆಂಬಲಿಸಿ ಎಂದವರು ಹೇಳಿದರು.

  ಕಂಬಳ ಆಕಾಡೆಮಿಯ ಅಧ್ಯಕ್ಷ ಗುಣಪಾಲ ಕಡಂಬ ಅವರು ಮಾತನಾಡಿ, ಸಹಕಾರಿ ಕ್ಷೇತ್ರಕ್ಕೆ ವಿಧಾನ ಪರಿಷತ್‌ನಲ್ಲಿ ಪ್ರಾತಿನಿಧ್ಯ ಸಿಗುವ ನಿಟ್ಟಿನಲ್ಲಿ ಡಾ| ಎಂ.ಎನ್‌. ಆರ್‌. ಅವರನ್ನು ಬೆಂಬಲಿಸಿ ಎಂದರು. ಉಡುಪಿ ಜಿ. ಪಂ. ಮಾಜಿ ಅಧ್ಯಕ್ಷ ರಾಜು ಪೂಜಾರಿ ಅವರು ಮಾತನಾಡಿ, ಚುನಾವಣೆಯಲ್ಲಿ ಗೆಲ್ಲುವ ಮೂಲಕ ಡಾ| ಎಂ. ಎನ್‌. ಆರ್‌. ಅವರು ಪಂಚಾಯತ್‌ರಾಜ್‌ ವ್ಯವಸ್ಥೆ ಹಾಗೂ ನಗರಾಡಳಿತ ಸಂಸ್ಥೆಗಳಿಗೆ ಶಕ್ತಿ ತುಂಬಲಿದ್ದಾರೆ ಎಂಬ ವಿಶ್ವಾಸ ಹೊಂದಿದ್ದೇವೆ ಎಂದರು.

ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನ ಸಂಚಾಲಕ ಸುಂದರ ಮಾಸ್ತರ್‌ ಅವರು ಮಾತನಾಡಿ ಡಾ| ಎಂ.ಎನ್‌.ರಾಜೇಂದ್ರ ಕುಮಾರ್‌ ಅವರು ವಿಧಾನ ಪರಿಷತ್‌ಗೆ ಆಯ್ಕೆಯಾಗುವುದು, ಸಹಕಾರಿ, ಗ್ರಾಮೀಣಾಭಿವೃದ್ಧಿಗೆ ಮಾತ್ರವಲ್ಲದೆ ಈ ವರ್ಗಕ್ಕೂ ಅವಶ್ಯವಾಗಿದೆ ಎಂದರು.

ಉಡುಪಿ ಜಿಲ್ಲಾ ಚುನಾವಣ ಉಸ್ತುವಾರಿ ಜಯಕರ ಶೆಟ್ಟಿ ಇಂದ್ರಾಳಿ, ಈಶ್ವರ ಭಟ್‌ ಪುತ್ತೂರು, ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಪ್ರಸಾದ್‌ ಕೌಶಲ್‌ ಶೆಟ್ಟಿ, ಬಿಲ್ಲವ ಮುಖಂಡ ವೈ. ಸುಧೀರ್‌ ಕುಮಾರ್‌ ಮಾತನಾಡಿದರು. ಎಸ್‌ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್‌ ಸೂರಿಂಜೆ, ಜಿ. ಪಂ. ಮಾಜಿ ಸದಸ್ಯರಾದ ಪದ್ಮಶೇಖರ ಜೈನ್‌, ಬಿ. ನಿರಂಜನ್‌, ಉದ್ಯಮಿಗಳಾದ ರೋಹನ್‌ ಮೊಂತೋರೊ, ಲಕ್ಷ್ಮೀಶ ಭಂಡಾರಿ, ಇನ್‌ಲ್ಯಾಂಡ್ ಓರ್ನೆಟ್‌ನ ಮಾಲಕ, ಉದ್ಯಮಿ ಸಿರಾಜ್‌ ಅಹಮ್ಮದ್‌, ಕೆ.ಪಿ.ಥೋಮಸ್‌ ಮತ್ತಿತರರು ಉಪಸ್ಥಿತರಿದ್ದರು.

ಎಲ್ಲರ ಗೆಲುವು

ಎಲ್ಲರ ಬೆಂಬಲದೊಂದಿಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದೇನೆ. ಪಂಚಾಯತ್‌ರಾಜ್‌ ವ್ಯವಸ್ಥೆ, ನಗರಾಡಳಿತ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ ಎಂದು ಹೇಳಿದ ಡಾ| ರಾಜೇಂದ್ರ ಕುಮಾರ್‌ ಅವರು ನ. 22 ರಂದು ನಾಮಪತ್ರ ಸಲ್ಲಿಸಲಿದ್ದೇನೆ ಎಂದರು.

ಚುನಾವಣ ಉಸ್ತುವಾರಿ ಬೆಳಪು ದೇವಿಪ್ರಸಾದ್‌ ಶೆಟ್ಟಿ ಸ್ವಾಗತಿಸಿದರು. ದ.ಕ. ಜಿಲ್ಲಾ ಚುನಾವಣ ಉಸ್ತುವಾರಿ ಶಶಿಕುಮಾರ್‌ ರೈ ಬಾಲ್ಯೋಟು ವಂದಿಸಿದರು. ಆರ್‌ಜೆ ಪ್ರಸನ್ನ ಅವರು ನಿರೂಪಿಸಿದರು.

Ad Widget
Click to comment

Leave a Reply

ಅಂತರ ರಾಜ್ಯ

Jantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ

Published

on



Ad Widget

Ad Widget

Ad Widget

Ad Widget

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದೊಳಗೆ ಪ್ರವೇಶಿಸಿದ ಪೊಲೀಸರು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಂತರ್ ಮಂತರ್ ನಲ್ಲಿ ಕ್ಷಣ ಕ್ಷಣ ಪ್ರತಿಭಟಕಾರರ ಸಂಖ್ಯೆ ಭಾರಿ ಏರುತ್ತಿದೆ.

Ad Widget

Ad Widget <> Ad Widget

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್ ಗೆ ಆಗಮಿಸಿದ ನೂರಾರು ಸುಪ್ರೀಂ ಕೋರ್ಟಿನ ವಕೀಲರನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ.



Ad Widget

ನೋಯ್ಡಾ–ದೆಹಲಿ ಗಡಿ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರನ್ನು ಬಸ್‌ಗಳಲ್ಲಿ ಕರೆದೊಯ್ದು ವಶಕ್ಕೆ ಪಡೆಯಲಾಗಿದೆ. ಇನ್ನೂ ಟಯರ್ ಪಂಚರ್ ಆಗುವ ಕಬ್ಬಿಣದ ಬೇಲಿಯನ್ನು ಪೊಲೀಸರು ರಸ್ತೆಗಳಲ್ಲಿ ಇಟ್ಟಿರುವ ಪ್ರತಿಭಟನಕಾರರು ಆರೋಪಿಸಿದ್ದಾರೆ. ಮತ್ತೂ ನಿರ್ದಿಷ್ಟ ಸ್ಥಳಗಳಲ್ಲಿ ಮೊಬೈಲ್ ನೆಟ್‌ವರ್ಕ್ ಗಳನ್ನು ಪೊಲೀಸರ ನಿರ್ದೇಶನದ ಮೇರೆಗೆ ಟೆಲಿಕಾಂ ಕಂಪೆನಿಗಳು ನಿಷ್ಕ್ರಿಯಗೊಳಿಸಿರುವ ಬಗ್ಗೆಯೂ ಆರೋಪಗಳು ವ್ಯಕ್ತವಾಗಿದೆ.

Ad Widget

Ad Widget

ಭದ್ರತಾ ವ್ಯವಸ್ಥೆಯ ಭಾಗವಾಗಿ 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 200ಕ್ಕೂ ಹೆಚ್ಚು ಕಂಪನಿಗಳನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ಕೇಂದ್ರ ದೆಹಲಿ, ಕನ್ನಾಟ್ ಪ್ಲೇಸ್ ಹಾಗೂ ನಗರದ ಪ್ರವೇಶ ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ.

ಕನ್ನಾಟ್ ಪ್ಲೇಸ್ ಪ್ರದೇಶವನ್ನು 20 ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಲಯದ ಭದ್ರತಾ ಜವಾಬ್ದಾರಿಯನ್ನು ಡಿಸಿಪಿ ಅಥವಾ ಐಪಿಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ವಿವಿಧೆಡೆ ಪಥಸಂಚಲನ ನಡೆಸಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ.

ಸಂದೇಹಾಸ್ಪದ ವಾಹನಗಳನ್ನು ತಡೆದು ಪರಿಶೀಲಿಸಲು ತುರ್ತು ಬಳಕೆಯ ಸ್ಪೈಕ್ ಸ್ಟ್ರಿಪ್‌ಗಳನ್ನು ಸಿದ್ಧವಾಗಿಡಲಾಗಿದೆ. ಭದ್ರತಾ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಾನ್‌ಸ್ಟೆಬಲ್‌ಗಳು ಹಾಗೂ ಇನ್‌ಸ್ಪೆಕ್ಟರ್‌ಗಳಂತಹ ಕೆಳಹಂತದ ಪೊಲೀಸ್ ಸಿಬ್ಬಂದಿಗೂ ಬಾಡಿ ಕ್ಯಾಮೆರಾಗಳನ್ನು ಒದಗಿಸಲಾಗಿದೆ.

ಸಾರ್ವಜನಿಕರ ಸಾಮಾನ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ, ಅನುಮತಿಯಿಲ್ಲದ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗುವವರನ್ನು ತಕ್ಷಣ ವಶಕ್ಕೆ ಪಡೆಯಲಾಗುವುದು ಹಾಗೂ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Ad Widget
Continue Reading

ಸ್ಥಳೀಯ

Shweta Motors-ಸಿದ್ದಕಟ್ಟೆಯಲ್ಲಿ ಅ.11ರಂದು ಶ್ವೇತಾ ಮೋಟಾರ್ಸ್‌ನ ಎರಡನೇ ಶಾಖೆ ಶುಭಾರಂಭ; TVS, Bajaj, Suzuki ಸೇರಿದಂತೆ ಪ್ರಮುಖ ಬ್ರ್ಯಾಂಡ್‌ಗಳ ದ್ವಿಚಕ್ರ ವಾಹನಗಳ ಮಾರಾಟ, ಸೇವಾ ಸೌಲಭ್ಯ ಲಭ್ಯ

Published

on



Ad Widget

Ad Widget

Ad Widget

Ad Widget

ದ್ವಿಚಕ್ರ ವಾಹನಗಳ ಖರೀದಿ ಮತ್ತು ಸೇವೆಗಾಗಿ ಗ್ರಾಹಕರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಶ್ವೇತಾ ಮೋಟಾರ್ಸ್ ತನ್ನ ಎರಡನೇ ಶಾಖೆಯನ್ನು ಸಿದ್ದಕಟ್ಟೆಯಲ್ಲಿ ಆರಂಭಿಸುತ್ತಿದೆ. ನೂತನ ಶಾಖೆಯ ಉದ್ಘಾಟನಾ ಸಮಾರಂಭ ಅಕ್ಟೋಬರ್ 11ರ ಭಾನುವಾರ ಬೆಳಿಗ್ಗೆ 9.45ಕ್ಕೆ ಸಿದ್ದಕಟ್ಟೆಯ ಮುಖ್ಯ ರಸ್ತೆಯ ಮಡಾಯಿ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.

Ad Widget

Ad Widget

Ad Widget

Ad Widget

ಸಿದ್ದಕಟ್ಟೆ: ದ್ವಿಚಕ್ರ ವಾಹನಗಳ ಖರೀದಿ ಮತ್ತು ಸೇವೆಗಾಗಿ ಗ್ರಾಹಕರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಶ್ವೇತಾ ಮೋಟಾರ್ಸ್ ತನ್ನ ಎರಡನೇ ಶಾಖೆಯನ್ನು ಸಿದ್ದಕಟ್ಟೆಯಲ್ಲಿ ಆರಂಭಿಸುತ್ತಿದೆ. ನೂತನ ಶಾಖೆಯ ಉದ್ಘಾಟನಾ ಸಮಾರಂಭ ಅಕ್ಟೋಬರ್ 11ರ ಭಾನುವಾರ ಬೆಳಿಗ್ಗೆ 9.45ಕ್ಕೆ ಸಿದ್ದಕಟ್ಟೆಯ ಮುಖ್ಯ ರಸ್ತೆಯ ಮಡಾಯಿ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.

Ad Widget

Ad Widget

Ad Widget alt="Ad Widget"/>

Ad Widget

ಶ್ವೇತಾ ಮೋಟಾರ್ಸ್‌ನಲ್ಲಿ TVS, Bajaj, Suzuki ಸೇರಿದಂತೆ ಪ್ರಮುಖ ಕಂಪನಿಗಳ ವಿವಿಧ ಮಾದರಿಯ ದ್ವಿಚಕ್ರ ವಾಹನಗಳ ಮಾರಾಟ ಹಾಗೂ ಸೇವಾ ಸೌಲಭ್ಯ ಲಭ್ಯವಿರಲಿದೆ. ಒಂದೇ ಸೂರಿನಡಿ ವಿವಿಧ ಬ್ರ್ಯಾಂಡ್‌ಗಳ ವಾಹನಗಳ ಖರೀದಿ ಮತ್ತು ಸೇವೆ ಪಡೆಯಲು ಗ್ರಾಹಕರಿಗೆ ಇದರಿಂದ ಅನುಕೂಲವಾಗಲಿದೆ.

Ad Widget

Ad Widget <> Ad Widget

ಸಂಸ್ಥೆಯ ಎರಡನೇ ಶಾಖೆಯ ಆರಂಭದೊಂದಿಗೆ ಸಿದ್ದಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಗ್ರಾಹಕರಿಗೆ ದ್ವಿಚಕ್ರ ವಾಹನಗಳ ಖರೀದಿ ಮತ್ತು ನಿರ್ವಹಣಾ ಸೇವೆಗಳನ್ನು ಸುಲಭವಾಗಿ ಪಡೆಯಲು ಅವಕಾಶ ದೊರೆಯಲಿದೆ.



Ad Widget

ಶ್ವೇತಾ ಮೋಟಾರ್ಸ್‌ನ ಪ್ರೊಪ್ರೈಟರ್ ಹರೀಶ್ ಬಂಗೇರ ಅವರು ನೂತನ ಶಾಖೆಯ ಉದ್ಘಾಟನಾ ಸಮಾರಂಭಕ್ಕೆ ಸಾರ್ವಜನಿಕರು ಹಾಗೂ ಗ್ರಾಹಕರನ್ನು ಆತ್ಮೀಯವಾಗಿ ಆಹ್ವಾನಿಸಿದ್ದಾರೆ.

Ad Widget

Ad Widget

ಹೆಚ್ಚಿನ ಮಾಹಿತಿಗಾಗಿ: 9187920703, 9591531688

Ad Widget
Continue Reading

ರಾಜ್ಯ

Robotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್‌ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ

Published

on



Ad Widget

Ad Widget

Ad Widget

Ad Widget

ಸ್ಪೇನ್‌ನ ಬಾರ್ಸಿಲೋನಾದಲ್ಲಿ ಕುಳಿತು ವೈದ್ಯರೊಬ್ಬರು 12 ಸಾವಿರ ಕಿ.ಮೀ.ಗೂ ಹೆಚ್ಚು ದೂರದಲ್ಲಿರುವ ಕರ್ನಾಟಕದ ಮುದ್ದೇನಹಳ್ಳಿಯ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರಿಗೆ ರೋಬೋಟಿಕ್ ಹೃದಯ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಈ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ ಸಾಧ್ಯತೆಗಳನ್ನು ಮತ್ತೊಮ್ಮೆ ಸಾಬೀತುಪಡಿಸಲಾಗಿದೆ.

Ad Widget

Ad Widget

Ad Widget

Ad Widget

ಚಿಕ್ಕಬಳ್ಳಾಪುರ: ಸ್ಪೇನ್‌ನ ಬಾರ್ಸಿಲೋನಾದಲ್ಲಿ ಕುಳಿತು ವೈದ್ಯರೊಬ್ಬರು 12 ಸಾವಿರ ಕಿ.ಮೀ.ಗೂ ಹೆಚ್ಚು ದೂರದಲ್ಲಿರುವ ಕರ್ನಾಟಕದ ಮುದ್ದೇನಹಳ್ಳಿಯ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರಿಗೆ ರೋಬೋಟಿಕ್ ಹೃದಯ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಈ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ ಸಾಧ್ಯತೆಗಳನ್ನು ಮತ್ತೊಮ್ಮೆ ಸಾಬೀತುಪಡಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮುದ್ದೇನಹಳ್ಳಿಯ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ (SMSIMSR) ಈ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿದೆ.

Ad Widget

Ad Widget <> Ad Widget

ಭಾರತೀಯ ರೋಬೋಟಿಕ್ ಹೃದಯ ಶಸ್ತ್ರಚಿಕಿತ್ಸಾ ಕ್ಷೇತ್ರದ ಪ್ರಮುಖ ತಜ್ಞ ಡಾ. ಸುಧೀರ್ ಶ್ರೀವಾಸ್ತವ ಅವರು ಬಾರ್ಸಿಲೋನಾದಲ್ಲಿ ನಡೆದ ಯುರೋಪಿಯನ್ ಅಸೋಸಿಯೇಷನ್ ಫಾರ್ ಕಾರ್ಡಿಯೋ-ಥೊರಾಸಿಕ್ ಸರ್ಜರಿ (EACTS) ವಾರ್ಷಿಕ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದಾಗಲೇ ದೂರದಿಂದ ರೋಬೋಟ್ ನಿಯಂತ್ರಿಸಿ ಶಸ್ತ್ರಚಿಕಿತ್ಸೆ ನಡೆಸಿದರು.



Ad Widget

ಜನ್ಮಜಾತ ಹೃದಯ ಸಮಸ್ಯೆಗೆ ಚಿಕಿತ್ಸೆ
ಕೋಲಾರ ಜಿಲ್ಲೆಯ 26 ವರ್ಷದ ಮಹಿಳೆಯೊಬ್ಬರು ಹೃದಯದ ಮೇಲಿನ ಎರಡು ಕೋಣೆಗಳ ನಡುವಿನ ಗೋಡೆಯಲ್ಲಿ ಜನ್ಮಜಾತ ರಂಧ್ರವಿರುವ ಸಮಸ್ಯೆಯಿಂದ ಬಳಲುತ್ತಿದ್ದರು. ವೈದ್ಯಕೀಯ ಭಾಷೆಯಲ್ಲಿ ಇದನ್ನು ಆಟ್ರಿಯಲ್ ಸೆಪ್ಟಲ್ ಡಿಫೆಕ್ಟ್ (ASD) ಎಂದು ಕರೆಯಲಾಗುತ್ತದೆ.

Ad Widget

Ad Widget

ಬಾರ್ಸಿಲೋನಾದಲ್ಲಿ ಅಳವಡಿಸಲಾಗಿದ್ದ ರೋಬೋಟಿಕ್ ಶಸ್ತ್ರಚಿಕಿತ್ಸಾ ಕನ್ಸೋಲ್ ಮೂಲಕ ಡಾ. ಸುಧೀರ್ ಶ್ರೀವಾಸ್ತವ ಅವರು ಮುದ್ದೇನಹಳ್ಳಿಯ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿದ್ದ ‘ಎಸ್‌ಎಸ್‌ಐ ಮಂತ್ರ’ ರೋಬೋಟಿಕ್ ವ್ಯವಸ್ಥೆಯನ್ನು ನಿಯಂತ್ರಿಸಿದರು. ಸುಮಾರು ಮೂರರಿಂದ ನಾಲ್ಕು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಯಿತು.

ಮಣಿಪಾಲ್ ಆಸ್ಪತ್ರೆಯ ಜೈಪುರ ಘಟಕದ ಮುಖ್ಯ ಹೃದಯ ಶಸ್ತ್ರಚಿಕಿತ್ಸಕ ಹಾಗೂ ರೋಬೋಟಿಕ್ ಶಸ್ತ್ರಚಿಕಿತ್ಸಕ ಡಾ. ಲಲಿತ್ ಮಲಿಕ್ ಮತ್ತು ಮುದ್ದೇನಹಳ್ಳಿಯ ಸಂಸ್ಥೆಯ ಮುಖ್ಯ ಹೃದಯ ಶಸ್ತ್ರಚಿಕಿತ್ಸಕ ಡಾ. ಸಿ.ಎಸ್. ಹಿರೇಮಠ ಅವರು ಸ್ಥಳದಲ್ಲಿದ್ದು, ಶಸ್ತ್ರಚಿಕಿತ್ಸೆಗೆ ಅಗತ್ಯವಾದ ನೆರವು ನೀಡಿದರು. ರೋಗಿಯ ಆರೋಗ್ಯದ ಮೇಲೂ ನಿರಂತರ ನಿಗಾ ವಹಿಸಿದರು.

ಆರು ಗಂಟೆಗಳಲ್ಲಿ ಉಸಿರಾಟದ ಟ್ಯೂಬ್ ತೆರವು
ಶಸ್ತ್ರಚಿಕಿತ್ಸೆಯ ಬಳಿಕ ಮಹಿಳೆಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಸುಮಾರು ಆರು ಗಂಟೆಗಳ ನಂತರ ಉಸಿರಾಟಕ್ಕೆ ಅಳವಡಿಸಿದ್ದ ಟ್ಯೂಬ್ ಅನ್ನು ತೆಗೆದುಹಾಕಲಾಯಿತು ಎಂದು ಆಸ್ಪತ್ರೆ ತಿಳಿಸಿದೆ.

ಶಸ್ತ್ರಚಿಕಿತ್ಸೆ ವೇಳೆ ಮೂರು ಸಣ್ಣ ಛೇದನಗಳನ್ನು ಮಾಡಲಾಗಿದ್ದು, ಪ್ರತಿಯೊಂದೂ ಐದು ಮಿಲಿಮೀಟರ್‌ಗಿಂತ ಕಡಿಮೆ ಗಾತ್ರದ್ದಾಗಿತ್ತು. ಇದರಿಂದ ರಕ್ತಸ್ರಾವ ಮತ್ತು ಶಸ್ತ್ರಚಿಕಿತ್ಸೆಯ ನಂತರದ ನೋವು ಕಡಿಮೆಯಾಗಿತ್ತು ಎಂದು ಸಂಸ್ಥೆ ಹೇಳಿದೆ.

ದೂರದ ಅಂತರವನ್ನೂ ಮೀರಿದ ವೈದ್ಯಕೀಯ ತಂತ್ರಜ್ಞಾನ
ಇದೇ ಆಸ್ಪತ್ರೆಯಲ್ಲಿ ಈ ಹಿಂದೆ ಗುರುಗ್ರಾಮ್‌ನಿಂದ ರೋಬೋಟಿಕ್ ವ್ಯವಸ್ಥೆಯನ್ನು ನಿಯಂತ್ರಿಸಿ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಇದೀಗ ಸ್ಪೇನ್‌ನ ಬಾರ್ಸಿಲೋನಾದಿಂದಲೇ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ದೂರಸ್ಥ ರೋಬೋಟಿಕ್ ವೈದ್ಯಕೀಯ ತಂತ್ರಜ್ಞಾನದ ಅಂತರರಾಷ್ಟ್ರೀಯ ಬಳಕೆಯ ಸಾಧ್ಯತೆಗಳನ್ನು ಪ್ರದರ್ಶಿಸಲಾಗಿದೆ.

ಇಂತಹ ತಂತ್ರಜ್ಞಾನವು ಭವಿಷ್ಯದಲ್ಲಿ ಗ್ರಾಮೀಣ ಪ್ರದೇಶಗಳು ಹಾಗೂ ಪರಿಣತ ವೈದ್ಯರ ಕೊರತೆಯಿರುವ ಸ್ಥಳಗಳಿಗೂ ಉನ್ನತ ಮಟ್ಟದ ವೈದ್ಯಕೀಯ ಸೇವೆ ತಲುಪಿಸಲು ನೆರವಾಗಬಹುದು. ವೈದ್ಯಕೀಯ ಶಿಕ್ಷಣ, ಶಸ್ತ್ರಚಿಕಿತ್ಸಾ ತರಬೇತಿ ಮತ್ತು ವಿವಿಧ ದೇಶಗಳ ತಜ್ಞ ವೈದ್ಯರ ಸಹಯೋಗಕ್ಕೂ ಇದು ಹೊಸ ಅವಕಾಶಗಳನ್ನು ಕಲ್ಪಿಸಬಹುದು.

ಆದರೆ ಇಂತಹ ಶಸ್ತ್ರಚಿಕಿತ್ಸೆಗಳನ್ನು ಸುರಕ್ಷಿತವಾಗಿ ನಡೆಸಲು ವಿಶ್ವಾಸಾರ್ಹ ಸಂವಹನ ವ್ಯವಸ್ಥೆ, ಸ್ಥಳೀಯ ವೈದ್ಯಕೀಯ ತಂಡದ ಸಮನ್ವಯ ಮತ್ತು ಸೂಕ್ತ ಸುರಕ್ಷತಾ ಕ್ರಮಗಳು ಅತ್ಯಗತ್ಯ.

ಬಡ ಕುಟುಂಬದ ಮಹಿಳೆಗೆ ಸಂಪೂರ್ಣ ಉಚಿತ ಚಿಕಿತ್ಸೆ
ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಇಬ್ಬರು ಮಕ್ಕಳ ತಾಯಿಯಾಗಿದ್ದು, ಅವರ ಪತಿ ಆಟೋರಿಕ್ಷಾ ಚಾಲಕರಾಗಿದ್ದಾರೆ. ಆರ್ಥಿಕವಾಗಿ ಹಿಂದುಳಿದಿರುವ ಈ ಕುಟುಂಬಕ್ಕೆ ದುಬಾರಿ ಹೃದಯ ಶಸ್ತ್ರಚಿಕಿತ್ಸೆಯ ವೆಚ್ಚ ಭರಿಸುವುದು ಕಷ್ಟವಾಗಿತ್ತು.

ಇದನ್ನು ಗಮನದಲ್ಲಿಟ್ಟುಕೊಂಡು ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಶಸ್ತ್ರಚಿಕಿತ್ಸೆ ಸೇರಿದಂತೆ ಸಂಪೂರ್ಣ ಚಿಕಿತ್ಸೆಯನ್ನು ಉಚಿತವಾಗಿ ಒದಗಿಸಿದೆ.

ಆಧುನಿಕ ರೋಬೋಟಿಕ್ ತಂತ್ರಜ್ಞಾನದ ನೆರವಿನಿಂದ ನಡೆದ ಈ ಶಸ್ತ್ರಚಿಕಿತ್ಸೆ, ದೂರದ ಅಂತರವನ್ನು ಮೀರಿಯೂ ಪರಿಣತ ವೈದ್ಯಕೀಯ ಸೇವೆಯನ್ನು ರೋಗಿಗಳಿಗೆ ತಲುಪಿಸಬಹುದೆಂಬುದಕ್ಕೆ ಮಹತ್ವದ ಉದಾಹರಣೆಯಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading